Author: kannadanewsnow09

ಹುಬ್ಬಳ್ಳಿ: ಕೇರಳ ಮಾದರಿಯಲ್ಲೇ ಕರ್ನಾಟಕದಲ್ಲೂ ಲವ್ ಜಿಹಾದ್ ಶುರವಾಗಿ. ರಾಜ್ಯದಲ್ಲಿ ನಿರಾತಂಕವಾಗಿ ಲವ್ ಜಿಹಾದ್ ಪ್ರಕರಣಗಳು ನಡೆಯುತ್ತಿವೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಹಿಂದೂ ಹೆಣ್ಣುಮಕ್ಕಳ ಕುಟುಂಬದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಆರೋಪಿ ಸದ್ದಾಂ ಹುಸೇನ್ ಕಬ್ಬಿಣದ ರಾಡ್ ತೆಗೆದುಕೊಂಡು ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ. ಇದು ರಾಜ್ಯ ಸರ್ಕಾರ ತಲೆ ತಗ್ಗಿಸುವಂತ ಕೆಲಸವಾಗಿದೆ ಎಂದು ಹೇಳಿದರು. ಇದೇ ವೇಳೆ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದಂತ ಅವರು, ನಾವು ಯಾರೂ ಪ್ರಜ್ವಲ್ ರೇವಣ್ಣ ಪ್ರಕರಣ ಬೆಂಬಲಿಸುತ್ತಿಲ್ಲ. ತಪ್ಪು ಮಾಡಿರೋರಿಗೆ ಶಿಕ್ಷೆ ಆಗಬೇಕು. ನನಗೆ ಪೆನ್ ಡ್ರೈವ್ ಬಗ್ಗೆ ಮೊದಲೇ ಪತ್ರ ಬರೆದಿದ್ದರು ಅಂತಿದ್ದಾರೆ. ಆದ್ರೇ ನನಗಂತೂ ಯಾವುದೇ ಪತ್ರ ಬಂದಿಲ್ಲ. ರಾಜ್ಯ ಸರ್ಕಾರ ಮಾತ್ರ ಈಗ ಪೆನ್ ಡ್ರೈವ್ ಹಿಂದೆ ಬಿದ್ದಿದೆ ಎಂದರು. https://kannadanewsnow.com/kannada/prajwal-revanna-pornography-video-case-cm-siddaramaiah-holds-crucial-meeting-with-sit-officials-2/ https://kannadanewsnow.com/kannada/rise-in-communicable-diseases-due-to-heat-wave-in-the-state-instructions-to-take-necessary-action/

Read More

ಗದಗ : ಸಿಂಗಟಾಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸದಿದ್ದರೆ ಹೋರಾಟ ಮಾಡಲಾಗುವುದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ಮುಂಡಗರಿಯಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.ಮುಂಡರಗಿ ತಾಲೂಕಿನ ಮಣ್ಣು ಫಲವತ್ತಾದ ಮಣ್ಣು, ಮುಂಡರಗಿ ತಾಲೂಕಿನ ಮಣ್ಣಿಗೆ ತುಂಗಭದ್ರಾ ನೀರು ಹರಿಸಿದರೆ ಭೂಮಿತಾಯಿ ಬಂಗಾರದ ಬೆಳೆ ಕೊಡುತ್ತಾಳೆ. ಸಿಂಗಟಾಲೂರು ಏತ ನೀರಾವರಿ ಯೋಜನೆಯನ್ನು ಜಾರಿ ಮಾಡಿದ್ದು ನಾನು. ಒಂದು ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿ, ನಾಲ್ಕು ಹಳ್ಳಿಗಳನ್ನು ಸ್ಥಳಾಂತರ ಮಾಡಿ ಕೆನಾಲ್ ಗಳನ್ನು ಮಾಡಿದ್ದೇವೆ. ಹನಿ ನೀರಾವರಿ ಮಾಡುವ ಗುರಿ‌ ಇದೆ. ಆದರೆ, ಈ ಸರ್ಕಾರ ಯೋಜನೆಯನ್ನು ಸಂಪೂರ್ಣ ಸ್ಥಗಿತಗೊಳಿಸಿದೆ. ರಾಜ್ಯ ಸರ್ಕಾರ ಈ ಭಾಗಕ್ಕೆ ನೀರು ಕೊಡದಿದ್ದರೆ ದೊಡ್ಡ ಹೋರಾಟ ಮಾಡಲಾಗುವುದು. ಕೇವಲ ಮುಂಡರಗಿ ಅಷ್ಟೇ ಅಲ್ಲ, ಗದಗ, ರೋಣ, ಕೊಪ್ಪಳ ಭಾಗದವರೆಗೂ ಭೂಮಿ ತಾಯಿ ಹಸಿರು ಸೀರೆ ಉಟ್ಟು ಕಂಗೊಳಿಸಬೇಕು ಎಂದು ಹೇಳಿದರು. ಜಾಲವಾಡಗಿ ಏತ ನೀರಾವರಿ ಈ…

Read More

ವಿಜಯಪುರ: ರಾಜ್ಯದಲ್ಲೇ ಪ್ರಥಮ ಎನ್ನುವಂತೆ ಮರ್ಯಾಧಾ ಹತ್ಯೆ ಮಾಡಿದಂತ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ್ರೇ, 6 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿದೆ. ಇಂದು ಈ ಕುರಿತಂತೆ ವಿಜಯಪುರ ಜಿಲ್ಲೆಯ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ತನ್ನ ತೀರ್ಪು ಪ್ರಕಟಿಸಿದೆ. ಮರ್ಯಾಧಾ ಹತ್ಯೆ ಮಾಡಿದಂತ ಇಬ್ರಾಹಿಂಸಾಬ್ ಅತ್ತಾರ್ ಹಾಗೂ ಅಕ್ಬರ್ ಸಾಭ್ ಅತ್ತಾರ್ ಎಂಬುವರಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿ ಆದೇಶಿಸಿದೆ. ಇನ್ನೂ ಇದೇ ಪ್ರಕರಣದಲ್ಲಿ ರಂಜಾನ್ ಬಾಬಿ, ದಾವಲಭಿ ಜಮಾದಾ, ಅಜಮಾ ಸೇರಿದಂತೆ 6 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಅಲ್ಲದೇ 4.19 ಲಕ್ಷಕ್ಕೂ ಹೆಚ್ಚು ದಂಡವನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ಅಂದಹಾಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಾಳಗುಂಡಕನಾಳ ಗ್ರಾಮದ ಬಾನು ಬೇಗಂ ಅತ್ತಾರ್ ಹಾಗೂ ಸಾಯಬಣ್ಣ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯ ನಂತ್ರ ಬೇರೆ ಊರಿಗೆ ಹೋಗಿ ಬಾನು ಬೇಗಂ ಹಾಗೂ ಸಾಯಬಣ್ಣ ವಾಸಿಸುತ್ತಿದ್ದರು. ಹೆರಿಗೆಗಾಗಿ 2017ರಲ್ಲಿ ಮನೆಗೆ ಬಂದಿದ್ದಂತ ಸಂದರ್ಭದಲ್ಲಿ ದಂಪತಿಗಳ ಮೇಲೆ ಬಾನು ಬೇಗಂ…

Read More

ಉತ್ತರ ಕನ್ನಡ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಗೆ ಮೇ.7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗುವಂತ ನೌಕರರಿಗೆ ತರಬೇತಿಯನ್ನು ಇಂದು ನೀಡಲಾಗಿತ್ತು. ಆದ್ರೇ ಚುನಾವಣಾ ಕರ್ತವ್ಯದ ತರಬೇತಿಗೆ ಹಾಜರಾಗದ ಮೂವರು ಸರ್ಕಾರಿ ನೌಕರರನ್ನು ಅಮಾನತುಗೊಳಿಸಲಾಗಿದೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಚುನಾವಣಾ ಕರ್ತವ್ಯಕ್ಕೆ ತೆಗೆದುಕೊಂಡಿದ್ದಂತ ನೌಕರರಿಗೆ ಇಂದು ತರಬೇತಿ ನೀಡಲಾಗುತ್ತಿತ್ತು. ಈ ತರಬೇತಿಗೆ ಹಾಜರಾಗದೇ ಗೈರಾಗಿದ್ದಂತ ಮೂವರು ಸರ್ಕಾರಿ ನೌಕರರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಂದಹಾಗೇ ಅಮಾನತುಗೊಂಡವರೆಂದರೇ ಮಾವನಕುರ್ವಿ ಗ್ರಾಮ ಪಂಚಾಯ್ತಿಯ ಬಿಲ್ ಕಲೆಕ್ಟರ್ ಲಕ್ಷ್ಮಣ್, ಮಂಡಳ್ಳಿ ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಆನಂದ್ ಹಾಗೂ ಮುಟ್ಟಳ್ಳಿ ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಶ್ರೀಧರ್ ಎಂಬುವರಾಗಿದ್ದಾರೆ. ಈ ಮೂವರನ್ನು ಮೇ.7ರಂದು ನಡೆಯಲಿರುವಂತ ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನದ ಕಾರ್ಯದಲ್ಲಿ ಮತಗಟ್ಟೆ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿತ್ತು. ಇವರು ಇಂದಿನ ತರಬೇತಿಗೆ ಗೈರು ಹಿನ್ನಲೆಯಲ್ಲಿ ಮೂವರನ್ನು ಡಿಸಿ…

Read More

ಹುಬ್ಬಳ್ಳಿ: ಜಿಲ್ಲೆಯಲ್ಲಿ ಅಪ್ರಾಪ್ತೆಯನ್ನು ಪುಸಲಾಯಿಸಿ, ಲೈಂಗಿಕ ದೌರ್ಜನ್ಯವೆಸಗಿ, ಗರ್ಭಿಣಿಯಾದ ನಂತ್ರ ಪರಾರಿಯಾಗಿದ್ದಂತ ಮುಸ್ಲಿಂ ಯುವಕನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಂತ ಹುಬ್ಬಳ್ಳಿ-ಧಾರವಾಡ ನಗರ ಆಯುಕ್ತೆ ರೇಣುಕಾ ಸುಕುಮಾರ್ ಅವರು, ಹುಬ್ಬಳ್ಳಿಯ ನವನಗರದಲ್ಲಿ ನಡೆದಿದ್ದಂತ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದಂತ ಮುಸ್ಲೀಂ ಯುವಕನ ಮೇಲೆ ಕೇಸ್ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದರು ಎಂದಿದ್ದಾರೆ. ಮುಸ್ಲೀಂ ಯುವಕನ ವಿರುದ್ಧ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಎಫ್ಐಆರ್ ದಾಖಲಾಗಿತ್ತು. ಇದೀಗ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದಂತ ಮುಸ್ಲೀಂ ಯುವಕನನ್ನು ಬಂಧಿಸಿರೋದಾಗಿ ತಿಳಿಸಿದ್ದಾರೆ. https://kannadanewsnow.com/kannada/video-rahul-gandhi-will-contest-elections-in-pakistan-and-win-assam-cm-himanta-biswas-statement-goes-viral/ https://kannadanewsnow.com/kannada/breaking-after-son-prajwal-sit-issues-lookout-notice-to-father-revanna/

Read More

ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲಾಗುತ್ತದೆ. ರಕ್ಷಣೆ ನೀಡುವಂತೆಯೂ ಪೊಲೀಸರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಮಹಿಳೆಯರಿಗೆ ರಕ್ಷಣೆ ಕೊಡುತ್ತದೆ ಎಂದು ಹೇಳುವ ಮೋದಿಯವರ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಏನು ಮಾಡಿದ್ದಾರೆ ಎಂದು ಜಗಜ್ಜಾಹೀರಾಗಿದೆ. ಇದು ತಿಳಿದಿದ್ದರೂ ಕೂಡ ಹೊಂದಾಣಿಕೆ ಮಾಡಿಕೊಂಡು ಅತ್ಯಾಚಾರ ಮಾಡಿರುವ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಟ್ಟಿದ್ದೀರಲ್ಲಾ? ಇದೇನಾ ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡುವ ರೀತಿ ? ಅತ್ಯಾಚಾರಿಗಳಿಗೆ ರಕ್ಷಣೆ ಕೊಟ್ಟು, ಹೆಣ್ಣು ಮಕ್ಕಳಿಗೆ ಏನು ಸಂದೇಶ ನೀಡಿದ್ದೀರಿ ಎಂದು ಇಡೀ ರಾಜ್ಯದ ಜನ ಕೇಳುತ್ತಿದ್ದಾರೆ ಎಂದರು. ಮೋದಿ ಬರೀ ಸುಳ್ಳು ಹೇಳುತ್ತಾರೆ. ಯಾವ ಭರವಸೆಗಳನ್ನು ಈಡೇರಿಸುವ ಪ್ರಯತ್ನ ಮಾಡಿಲ್ಲ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲದ ಮೇಲೆ ಅವರು ಪ್ರಧಾನಿ ಕುರ್ಚಿಯಲ್ಲಿ ಉಳಿಯಲು ಯೋಗ್ಯತೆ ಇಲ್ಲ ಎನ್ನಬೇಕಾಗುತ್ತದೆ ಎಂದರು. https://kannadanewsnow.com/kannada/cm-siddaramaiah-vows-to-catch-prajwal-revanna-no-matter-which-country-he-goes-to/ https://kannadanewsnow.com/kannada/breaking-after-son-prajwal-sit-issues-lookout-notice-to-father-revanna/

Read More

ಬಾಗಲಕೋಟೆ: ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಯಾವುದೇ ದೇಶಕ್ಕೆ ಹೋಗಿರಲಿ, ಹಿಡಿದು ತರ್ತೀವಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಶಪಥ ಮಾಡಿದ್ದಾರೆ. ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು. ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ. ಪ್ರಜ್ವಲ್‌ ರೇವಣ್ಣ ಯಾವುದೇ ದೇಶಕ್ಕೆ ಹೋಗಿರಲಿ, ಹಿಡಿದು ತರ್ತೀವಿ ಎಂದರು. ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮಾಡಿರುವ ಆರೋಪವಿದೆ ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮತ್ತು ಲೈಂಗಿಕ ಶೋಷಣೆ ಮಾಡಿರುವ ಆರೋಪವಿದೆ. ಪ್ರಜ್ವಲ್ ರೇವಣ್ಣ ಅವರ ಬಗ್ಗೆ ತಿಳಿದೂ ಬಿಜೆಪಿ ಜೆಡಿಎಸ್…

Read More

ಶಿವಮೊಗ್ಗ : ಮೇ.6ರವರೆಗೆ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅರ್ಹ ಮತದಾರರು ತಮ್ಮ ಹೆಸರು ಸೇರ್ಪಡೆ ಮಾಡೋದಕ್ಕೆ ಅವಕಾಶ ನೀಡಲಾಗಿದೆ. ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂದಿಸಿದಂತೆ ದಿನಾಂಕ 06.05.2024 ರ ಸಂಜೆ 5-30 ಗಂಟೆಯವರೆಗೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರ್ಪಡೆ ಮಾಡಲು ಅಗತ್ಯ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಂಬಂಧಪಟ್ಟ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಸಿದ್ದಲಿಂಗರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/hd-kumaraswamy-demands-immediate-sit-notice-to-rahul-gandhi/ https://kannadanewsnow.com/kannada/video-rahul-gandhi-will-contest-elections-in-pakistan-and-win-assam-cm-himanta-biswas-statement-goes-viral/

Read More

ರಾಯಚೂರು: ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಕ್ಷಣವೇ ವಿಶೇಷ ತನಿಖಾ ದಳ (SIT) ನೊಟೀಸ್ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಆಗ್ರಹಪಡಿಸಿದರು. ಇಷ್ಟು ಕರಾರುವಕ್ಕಾಗಿ, ಅಂಕಿ ಅಂಶಗಳ ಸಮೇತ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ. ಈ ಸರಕಾರಕ್ಕೆ ಗಂಡಸ್ತನ, ತಾಕತ್ತು ಎನ್ನುವುದು ಇದ್ದರೆ ಈ ಕೂಡಲೇ ಆತನಿಗೆ ತನಿಖಾ ದಳದಿಂದ ಕೂಡಲೇ ನೋಟಿಸ್ ಕೊಡಿಸಬೇಕು ಎಂದು ಅವರು ಒತ್ತಾಯಿಸಿದರು. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಎನ್‌ ಡಿಎ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಹುಲ್ ಗಾಂಧಿ ವಿರುದ್ಧ ತೀವ್ರ ಅಕ್ರೋಶ ವ್ಯಕ್ತಪಡಿಸಿದರು. “ದೇಶದ ಮಾಜಿ ಪ್ರಧಾನಮಂತ್ರಿಯ ಮಗನಾ ಇವನು? ಹಾಗಾದರೆ ಇವನ ಬಳಿ ಎಲ್ಲಾ ಮಾಹಿತಿಯೂ ಇದೆ ಎಂದಾಯಿತು. ಈತನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಕೊಟ್ಟಿರಬೇಕು ಅಥವಾ ಉಪ ಮುಖ್ಯಮಂತ್ರಿ…

Read More

ರಾಯಚೂರು: ಹಿಂದೆ ನೀನು ಏನೆಲ್ಲಾ ಮಾಡಿದ್ದೆ ಎನ್ನುವುದು ಲೋಕಕ್ಕೆ ಗೊತ್ತು. ಟೆಂಟ್ʼನಲ್ಲಿ ನೀಲಿಚಿತ್ರ ತೋರಿಸಿಕೊಂಡು ಹಣ ಮಾಡಿದವನು ಆ ವ್ಯಕ್ತಿ. ಆತನಿಗೆ ಅಂಥ ಅನುಭವ ಮೊದಲಿನಿಂದಲೂ ಇದೆ. ಹಿಂದೊಮ್ಮೆ ಒಬ್ಬ ಶಾಸಕನ ಜೀವನದಲ್ಲಿ ಏನೆಲ್ಲಾ ಆಟ ಆಡಿದ, ಹೆಣ್ಮಗಳನ್ನು ಹೇಗೆಲ್ಲಾ ಬಳಸಿಕೊಂಡ ಎನ್ನುವುದು ಗೊತ್ತಿದೆ. ಪೆನ್ ಡ್ರೈವ್ ಅನ್ನು ಕುಮಾರಸ್ವಾಮಿಯೇ ಬಿಟ್ಟಿರಬೇಕು ಎಂದು ಹೇಳಿಕೊಂಡು ಓಡಾಡುತ್ತಿದ್ದಾನೆ. ಅಂಥ ಕೆಟ್ಟ ಅನುಭವ ಇರುವವನೇ ಪೇನ್ ಡ್ರೈವ್ ಬೀದಿಗೆ ಬಿಟ್ಟಿದ್ದಾರೆ ಎಂದು ಡಿಕೆಶಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಕ್ರೋಶ ವ್ಯಕ್ತಪಡಿಸಿದರು. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಎನ್‌ ಡಿಎ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ಈ ಸರಕಾರಕ್ಕೆ ಮಾನ ಮರ್ಯಾದೆ ಎನ್ನುವುದು ಇದ್ದರೆ ಪ್ರಕರಣದ ಬಗ್ಗೆಯೂ ನಿಸ್ಪಕ್ಷವಾಗಿ ತನಿಖೆ ನಡೆಸಲಿ. ಅದೇ ರೀತಿ ಆ ದೃಶ್ಯಗಳಲ್ಲಿರುವ ಹೆಣ್ಮಕ್ಕಳ ಚಿತ್ರಗಳನ್ನು ಬೀದಿ ಬೀದಿಯಲ್ಲಿ ಬಿಕರಿ ಮಾಡಿದ ನೀಚರಿಗೂ ಶಿಕ್ಷೆ ಕೊಡಿಸಲಿ. ನಿಮಗೆ, ನಿಮ್ಮ ಪಕ್ಷಕ್ಕೆ ಹೆಣ್ಮಕ್ಕಳ ಬಗ್ಗೆ…

Read More