Author: kannadanewsnow09

ಬೆಂಗಳೂರು: ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಶ್ನಿಸಿದರು. ಹುಕ್ಕೇರಿಯಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಮೋದಿಜೀಗೆ 10 ವರ್ಷ ಬೆಂಬಲ ನೀಡಿದ್ದೀರಿ ಎಂದರಲ್ಲದೆ, ಅಯೋಧ್ಯೆಯಲ್ಲಿ ರಾಮಮಂದಿರ ಮಾಡಬೇಕಿತ್ತೇ ಎಂದು ಪ್ರಶ್ನಿಸಿ ‘ಹೌದು’ ಎಂದು ಜನರಿಂದ ಉತ್ತರ ಪಡೆದರು. ಕಾಂಗ್ರೆಸ್ ಪಕ್ಷವು ರಾಮಮಂದಿರ ನಿರ್ಮಾಣ ವಿಚಾರವನ್ನು ವಿಳಂಬ ಮಾಡಿತು. ಮೋದಿಜೀ ಅವರು ಕೇಸು ಗೆದ್ದು, ಭೂಮಿಪೂಜೆ ಮಾಡಿ ಪ್ರಾಣ ಪ್ರತಿಷ್ಠಾಪನೆಯನ್ನೂ ಮಾಡಿದರು. ರಾಹುಲ್ ಬಾಬಾ, ಸೋನಿಯಾ ಗಾಂಧಿ, ಖರ್ಗೆಯವರಿಗೆ ಆಮಂತ್ರಣಪತ್ರ ಇದ್ದರೂ ಅವರು ಗೈರುಹಾಜರಾದರು. ಮತಬ್ಯಾಂಕ್‍ಗಾಗಿ ಈ ನಿರ್ಧಾರ ಮಾಡಿದ್ದಾರೆ. ಇವರಿಗೆ ಮತ ಕೊಡಲು ಸಾಧ್ಯವೇ ಎಂದು ಕೇಳಿದರು. ಕಾಶಿ ವಿಶ್ವನಾಥ ಮಂದಿರವನ್ನು ಔರಂಗಬೇಬನು ಹಾಳು ಮಾಡಿದ್ದ. ಕಾಶಿ ಕಾರಿಡಾರ್, ಸೋಮನಾಥ ಮಂದಿರ ಮೊದಲಾದ ಕೆಲಸಗಳನ್ನು ಮೋದಿಜೀ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ತುಷ್ಟೀಕರಣಕ್ಕಾಗಿ ಈ ಎಲ್ಲ ವಿಚಾರಗಳನ್ನು ಕಡೆಗಣಿಸಿತ್ತು ಎಂದು ಆಕ್ಷೇಪಿಸಿದರು. ಕಾಶ್ಮೀರ ನಮ್ಮದಲ್ಲವೇ…

Read More

ಬೆಂಗಳೂರು: ಮೇ.7ರಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ 2ನೇ ಹಂತದಲ್ಲಿ 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಈ ಮತದಾನ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಈ ಕುರಿತಂತೆ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದು ರಾಜ್ಯದಲ್ಲಿ ದಿನಾಂಕ 26-04-2024ರಂದು ಮೊದಲ ಹಂತದ ಮತದಾನದ ಬಳಿಕ, ದಿನಾಂಕ 07-05-2024ರಂದು ಎರಡನೇ ಹಂತದಲ್ಲಿ 14 ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂದಿದ್ದಾರೆ. ಲೋಕಸಭಾ ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಹಾಗೂ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಮತದಾನ ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಮತ್ತು ಮತ ಏಣಿಕೆ ದಿನದಂದು ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ, ಒಣದಿನಗಳೆಂದು ಘೋಷಿಸಲು ನಿರ್ದೇಶಿಸಲಾಗಿದೆ. ಹೀಗಾಗಿ ದಿನಾಂಕ 05-05-2024ರ ಸಂಜೆ 5 ಗಂಟೆಯಿಂದ ದಿನಾಂಕ 07-05-2024ರ ಮದ್ಯರಾತ್ರಿ 12 ಗಂಟೆಯವರೆಗೆ ಮತ್ತು ಮತ ಏಣಿಕೆ ಪ್ರಯುಕ್ತ ದಿನಾಂಕ 04-06-2024ರಂದು ಬೆಳಿಗ್ಗೆ 6 ಗಂಟೆಯಿಂದ ಮದ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು…

Read More

ಉತ್ತರ ಕನ್ನಡ: ಜಿಲ್ಲೆಯಲ್ಲಿ ಪ್ರವಾಸಕ್ಕೆ ತೆರಳಿದ್ದಂತ ಖಾಸಗಿ ಬಸ್ ಒಂದು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಹಲವರು ಗಾಯಗೊಂಡಿರುವಂತ ಘಟನೆ ನಡೆದಿದೆ. ಗೌರಿಬಿನೂರಿನಿಂದ ಧರ್ಮಸ್ಥಳಕ್ಕೆ 53 ಜನರು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಧರ್ಮಸ್ಥಳದ ಜೊತೆಗೆ ವಿವಿಧ ಪ್ರವಾಸಿ ತಾಣಗಳಿಗೂ ಭೇಟಿ ನೀಡಿದ್ದರು. ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆಮುರ್ಕಿಯಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ತುಮಕೂರಿನ ಲೋಕೇಶ್ ಹಾಗೂ ಚಿಕ್ಕಬಳ್ಳಾಪುರದ ರುದ್ರೇಶ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಅಪಘಾತದಲ್ಲಿ ಗೌರಿಬಿದನೂರಿನ ರಜನಿ ಎಂಬುವರ ಕೈ ಕಟ್ ಆಗಿರೋದಾಗಿ ತಿಳಿದು ಬಂದಿದೆ. ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಹಾಗೂ ಹೊನ್ನಾವರ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/no-circular-has-been-issued-on-covishield-health-ministry/ https://kannadanewsnow.com/kannada/those-who-have-rahul-lalus-name-cannot-be-stopped-from-contesting-elections-supreme-court/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದಂತ ಬೆಳೆಹಾನಿಗೆ ಅರ್ಹ ರೈತರಿಗೆ ರೂ.2000ವರೆಗೆ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ರಾಜ್ಯ ಸರ್ಕಾರ ಆದೇಶ ಮಾಡಿದ್ದು, 2023ನೇ ಸಾಲಿನ ನೈರುತ್ಯ ಮುಂಗಾರು ಹಂಗಾಮಿನ ವೈಫಲ್ಯ / ಮಳೆಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ ಬರ ಕೈಪಿಡಿ-2020 ರಲ್ಲಿ ಬರ  ಪರಿಸ್ಥಿತಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳಂತೆ ನಿಯಮಾನುಸಾರ ಪರಿಶೀಲಿಸಿ, ರಾಜ್ಯದ 223 ತಾಲ್ಲೂಕುಗಳನ್ನು (196 ತೀವ್ರ ಬರ & 27 ಸಾಧರಣ ಬರ) ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿರುತ್ತದೆ. ಭಾರತ ಸರ್ಕಾರದಿಂದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (NDRF) ಅನುದಾನವನ್ನು ನಿರೀಕ್ಷಿಸಿ, ಭಾರತ ಸರ್ಕಾರದ ಗ್ರಹ ಮಂತ್ರಾಲಯವು SDRF/NDRF ರಡಿ ನೀಡಬಹುದಾದ ಪರಿಹಾರ ಮೊತ್ತದ ಬಗ್ಗೆ ಮೇಲೆ (2)ರಲ್ಲಿ ಓದಲಾದ ದಿನಾಂಕ:11/07/2023ರ Items of Expenditure ಮಾರ್ಗಸೂಚಿಗಳ ಅನುಸಾರ ಬೆಳೆಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ…

Read More

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನಕಲಿ ವಿಡಿಯೋ ಪ್ರಕರಣದಲ್ಲಿ ‘ಸ್ಪಿರಿಟ್ ಆಫ್ ಕಾಂಗ್ರೆಸ್’ ಎಕ್ಸ್ ಖಾತೆಯನ್ನು ನಿರ್ವಹಿಸುವ ಅರುಣ್ ರೆಡ್ಡಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅಮಿತ್ ಶಾ ಹೇಳಿಕೆಯನ್ನು ತಿರುಚಿ ವೀಡಿಯೋ ಶೇರ್ ಮಾಡಿದ ಸಂಬಂಧ ಈಗಾಗಲೇ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ಎಕ್ಸ್ ಖಾತೆಯನ್ನು ನಿರ್ಬಂಧಗೊಳಿಸಲಾಗಿತ್ತು. ಇಂದು ಅಮಿತ್ ಶಾ ನಕಲಿ ವೀಡಿಯೋ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯಾಗಿರುವಂತ ಸ್ಪಿರಿಟ್ ಆಫ್ ಕಾಂಗ್ರೆಸ್ ನ ಎಕ್ಸ್ ಖಾತೆಯನ್ನು ನಿರ್ವಹಿಸುತ್ತಿದ್ದಂತ ಅರುಣ್ ರೆಡ್ಡಿ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/no-circular-has-been-issued-on-covishield-health-ministry/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಮತದಾನವು ಮೇ 07 ರಂದು ನಡೆಯಲಿದ್ದು ಮತದಾನದ ದಿನ ಮತ್ತು ಮತದಾನದ ಹಿಂದಿನ ದಿನ ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ಮುದ್ರಣ ಮಾಧ್ಯಮದಲ್ಲಿ ಯಾವುದೇ ರೀತಿಯ ರಾಜಕೀಯ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ(ಎಂಸಿಎಂಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಚುನಾವಣೆಯ ಕಡೆಯ ಹಂತದಲ್ಲಿ ಆಕ್ಷೇಪಾರ್ಹ ಮತ್ತು ತಪ್ಪುದಾರಿಗೆಳೆಯುವ ಜಾಹಿರಾತುಗಳನ್ನು ಪ್ರಕಟಿಸಿದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಹದಗೆಡಿಸುವ ಸಂಭವ ಇರುವ ಕಾರಣ ಮುದ್ರಣ ಮಾಧ್ಯಮಗಳಲ್ಲಿ ಚುನಾವಣಾ ಜಾಹೀರಾತು ಪ್ರಕಟಿಸಲು ಬಯಸುವ ಅಭ್ಯರ್ಥಿಗಳು ಜಾಹಿರಾತು ಪ್ರಕಟಿಸುವ ಎರಡು ದಿನಗಳ ಮುಂಚಿತವಾಗಿ ಎಂಸಿಎಂಸಿ ಗೆ ಅರ್ಜಿ ಸಲ್ಲಿಸಬೇಕು. ಮೇ 06 ಮತ್ತು 07 ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಜಾಹಿರಾತು ಪ್ರಕಟಿಸುವ 2 ದಿನ ಮುಂಚಿತವಾಗಿ ಪೂರ್ವಾನುಮತಿ ಪಡೆಯಲು ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ)ಗೆ ಅರ್ಜಿ…

Read More

ಬಾಗಲಕೋಟೆ : “ಕಲ್ಯಾಣ ಕರ್ನಾಟಕದ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದೇ ಗೆಲ್ಲಲಿದ್ದು, ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಜನರಿಗೆ ಗ್ಯಾರಂಟಿ ಬಗ್ಗೆ ಭರವಸೆ ಮೂಡಿದೆ. ಮಹಾಲಕ್ಷ್ಮಿ ಯೋಜನೆ ಮೂಲಕ ಬಡ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ, ನಿರುದ್ಯೋಗಿ ಯುವಕರಿಗೆ ವಾರ್ಷಿಕ 1 ಲಕ್ಷ ಶಿಷ್ಯ ವೇತನ ಹಾಗೂ ತರಬೇತಿ, 25 ಲಕ್ಷವರೆಗಿನ ಆರೋಗ್ಯ ವಿಮೆ, ರೈತರ ಸಾಲಮನ್ನಾ ಹಾಗೂ ಸ್ವಾಮಿನಾಥನ್ ಆಯೋಗದಂತೆ ಬೆಂಬಲ ಬೆಲೆ, ನರೇಗಾ ಯೋಜನೆಯಲ್ಲಿ ಕೇಂದ್ರದ ಕೂಲಿಯ ಪಾಲು 400ಕ್ಕೆ ಹೆಚ್ಚಳ, ನಗರದಲ್ಲಿ ಉದ್ಯೋಗ ಖಾತ್ರಿ ಯೋಜನೆಗಳು ಜನರನ್ನು ಆಕರ್ಷಿಸಿವೆ. ಇಂತಹ ಒಂದೇ ಒಂದು ಗ್ಯಾರಂಟಿ ಬಿಜೆಪಿ ನೀಡಿಲ್ಲ ಎಂದರು. ಮೋದಿ ಗ್ಯಾರಂಟಿಯಲ್ಲಿ ಜನರಿಗೆ ಹೊಟ್ಟೆ ತುಂಬಿಸುವ, ಜನರ ಬದುಕಿನಲ್ಲಿ ಬದಲಾವಣೆ ತರುವ ಯೋಜನೆಗಳಲ್ಲಿ. ನಾವು ಜನರ ಬದುಕಿನ ಬಗ್ಗೆ ಆಲೋಚಿಸುತ್ತಿದ್ದೇವೆ ಎಂದು ದೇಶದೆಲ್ಲೆಡೆ ಇಂಡಿಯಾ ಮೈತ್ರಿ ಕೂಟದ ಬಗ್ಗೆ ಒಲವು…

Read More

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಶೋಷಣೆಗೆ ಒಳಗಾದ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ಇದೆ, ಸರ್ಕಾರ ಈ ಬಗ್ಗೆ ಮಾಹಿತಿ ಕೊಡಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಗ್ರಹಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಮೋಹನ್ ದಾಸರಿ, ಇಡೀ ದೇಶ ಕಂಡರಿಯದ ದೊಡ್ಡ ಲೈಂಗಿಕ ಹಗರಣವಾಗಿದೆ. ಪೆನ್‌ಡ್ರೈವ್‌ನಲ್ಲಿ 300ಕ್ಕಿಂತ ಹೆಚ್ಚಿನ ಮಹಿಳೆಯರ ವಿಡಿಯೋ ಇದೆ ಎಂದು ಹೇಳಲಾಗಿದೆ. ಈ ಮಹಿಳೆಯರ ಪರಿಸ್ಥಿತಿ ಏನಾಗಿದೆ? ಈ ಎಲ್ಲಾ ಮಹಿಳೆಯರು ಸುರಕ್ಷಿತವಾಗಿದ್ದಾರಾ? ಅವರಿಗೆ ಬೆದರಿಕೆ ಇದೆಯಾ ಎನ್ನುವುದು ಗೊತ್ತಿಲ್ಲ, ಎಸ್‌ಐಟಿ ಒಂದು ಕಡೆ ತನಿಖೆ ಮಾಡುತ್ತಿದ್ದು, ಗೃಹ ಸಚಿವರು ಎಲ್ಲಾ ಮಹಿಳೆಯರ ಸುರಕ್ಷತೆ ಬಗ್ಗೆ ಮಾಹಿತಿ ಕೊಡಬೇಕು ಎಂದು ಒತ್ತಾಯಿಸಿದರು. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್‌ಡ್ರೈವ್ ಬಹಿರಂಗವಾಗುತ್ತಿದ್ದಂತೆ, ಶೋಷಿತ ಮಹಿಳೆಯರು ಭಯಭೀತರಾಗಿದ್ದಾರೆ. ಅವರು ಆಚೆ ಬಂದು ಧೈರ್ಯವಾಗಿ ಮಾತನಾಡಲು ಆಗದಂತಾಗಿದೆ. ರಾಜ್ಯದ ಮಹಿಳಾ ಆಯೋಗ ಹಾಸದಲ್ಲೇ ಇದ್ದು, ಶೋಷಣೆಗೆ ಒಳಗಾದ ಮಹಿಳೆಯರಿಗೆ ಧೈರ್ಯ…

Read More

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ತಾಪ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ನಿನ್ನೆಯಂತೂ ದಾಖಲೆಯ 46.70 ಡಿಗ್ರಿ ಸೆಲ್ಸಿಯಸ್ ಯಾದಗಿರಿ ಜಿಲ್ಲೆಯಲ್ಲಿ ದಾಖಲಾಗಿತ್ತು. ಬಿಸಿಲ ತಾಪದ ನಡುವೆಯೂ ಮೇ.7ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಹೀಗಾಗಿ ಮತದಾನದ ಅವಧಿಯನ್ನು ಮೇ.7ರಂದು ಒಂದು ಗಂಟೆ ವಿಸ್ತರಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿದೆ. ಮೇ.7ರಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ 2ನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಮೊದಲ ಹಂತದ ಮತದಾನದ ವೇಳೆಯಲ್ಲಿ ಕಡಿಮೆಯಿದ್ದಂತ ಬಿಸಿಲು, ಈಗ ತೀವ್ರ ಹೆಚ್ಚಾಗಿದೆ. ಬಹುತೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಮೀರಿದೆ. ಇದರ ನಡುವೆಯೂ ಮೇ.7ರಂದು ಎರಡನೇ ಹಂತದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಚುನಾವಣಾ ಆಯೋಗವು ಅವಕಾಶ ನೀಡಿದೆ. ಆದ್ರೇ ತೀವ್ರ ಬಿಸಿಲ ಕಾರಣ ಮಧ್ಯಾಹ್ನದ ವೇಳೆಯಲ್ಲಿ ಮತದಾರರು ಮತ ಚಲಾಯಿಸೋದಕ್ಕೆ ಬರೋದು ಕಡಿಮೆ ಇದೆ. ಮತದಾನವು ಬಿಸಿಲ ಬೇಗೆಯ ತಾಪಮಾನದ ಕಾರಣಕ್ಕೆ ಕುಂಠಿತಗೊಳ್ಳಬಹುದು. ಹೀಗಾಗಿ 1 ಗಂಟೆ…

Read More

ಬೀದರ್: ಗವಂತ ಖೂಬಾ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿರುವ ವಂಚಕ. ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಲೂಟಿ ಮಾಡಿರುವ ಕಳ್ಳ. ಒಬ್ಬ ಕೇಂದ್ರ ಸಚಿವರಾಗಿ ಸರ್ಕಾರಕ್ಕೆ ಸುಮಾರು 25 ಕೋಟಿ ರೂಪಾಯಿ ದ್ರೋಹ ಮಾಡಿದ್ದಾರೆ. ವಂಚನೆ ಮಾಡಿದ್ದಾರೆ. ಇದನ್ನು ತಮ್ಮ ಅಫಿಡವಿಟ್ ನಲ್ಲಿ ಕೂಡ ತಪ್ಪು ಮಾಹಿತಿ ನೀಡಿದ್ದಾರೆ. ಇವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಗ್ರಹಿಸಿದರು. ಇಂದು ಬೀದರ್ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದಂತ ಅವರು, ನಿಮಗೆಲ್ಲಾ ತಿಳಿದಿರುವಂತೆ ಬೀದರ್ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ರಾಜ್ಯದಲ್ಲಿ 2ನೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ನನ್ನ ಪುತ್ರ ಸಾಗರ್ ಈಶ್ವರ್ ಖಂಡ್ರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾನೆ. ನಾವು ಈ ಬಾರಿ ಕ್ಷೇತ್ರದ ಬಹುತೇಕ ಕಡೆಗಳಲ್ಲಿ ಪ್ರಚಾರ ಮಾಡಿದ್ದು, ಹೋದ ಕಡೆಯಲ್ಲೆಲ್ಲಾ ಅಭೂತಪೂರ್ವವಾದ ಜನ ಬೆಂಬಲ ವ್ಯಕ್ತವಾಗುತ್ತಿದೆ. ಎಲ್ಲೆಡೆ ಕಾಂಗ್ರೆಸ್ ಪರವಾದ ಅಲೆ ಕಾಣಿಸುತ್ತಿದೆ. ಈ ಎಲ್ಲ ಸುದ್ದಿಗಳನ್ನೂ ನಿಮ್ಮ ಪತ್ರಿಕೆಗಳಲ್ಲಿ ಪ್ರಕಟಿಸಿದ, ಮಾಧ್ಯಮಗಳಲ್ಲಿ…

Read More