Author: kannadanewsnow09

ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಯದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ, ಜೈಲ್ ಸರ್ಕಲ್ ಶಿವಮೊಗ್ಗ, ದೂ.ಸಂ: 08182-276776 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. https://kannadanewsnow.com/kannada/kpsc-recruitment-for-364-posts-of-land-surveyors/ https://kannadanewsnow.com/kannada/important-information-for-state-government-employees-applications-invited-for-first-session-departmental-examination/

Read More

ಬೆಂಗಳೂರು: ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ವರದಿ ಪಡೆದಿರುವುದು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ. ಸರ್ಕಾರ ಬೆಂಕಿಯ ಜೊತೆ ಆಟವಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ ಪಕ್ಷ ಜಾತ್ಯತೀತ ಅಂತ ಕರೆಯುವ ಪಕ್ಷಕ್ಕೆ ಜಾತಿಗಳ ಮೇಲೆ ಪ್ರತಿ ಬರುತ್ತದೆ. ಚುನಾವಣೆ ಹತ್ತಿರ ಬಂದಾಗ ಜಾತಿ ಸಮಾವೇಶ, ಸುಳ್ಳು ಆಶ್ವಾಸನೆ ಕೊಡುವುದು ಮಾಡುತ್ತಾರೆ. 2017 ರಲ್ಲಿ ಸಿದ್ದರಾಮಯ್ಯ ಅವರು ಎಲ್ಲ ಜಾತಿಗಳ ಶಿಕ್ಷಣ ಮತ್ತು ಸಾಮಾಜಿಕ ಅಧ್ಯಯನ ಮಾಡಲು ಸೂಚಿಸಿದ್ದರು. ಅವರ ಉದ್ದೇಶ ಬೇರೆ ಇತ್ತು. ಜಾತಿ ಗಣತಿ ಮಾಡುವ ಅಧಿಕಾರದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿದೆ ಅದನ್ನು ತಪ್ಪಿಸಲು ಇವರು ಶೈಕ್ಷಣಿಕ, ಸಾಮಾಜಿಕ ಅಧ್ಯಯನ ಅಂತ ಹೇಳಿ ಉದ್ದೇಶ ಒಂದು ಆದೇಶ ಒಂದು ಆಗಿರುವುದರಿಂದ ಈ ಗೊಂದಲ ಸೃಷ್ಟಿಯಾಯಿತು. ಕಾಂತರಾಜ ವರದಿ ಸಿದ್ದವಾದಾಗ ಸಿದ್ದರಾಮಯ್ಯ ಸಿಎಂ ಆಗಿದ್ದರು ಆಗ ಚುನಾವಣೆ ಇದ್ದ ಕಾರಣ ವರದಿ ಸ್ವೀಕಾರ…

Read More

ಬೆಂಗಳೂರು: ನಗರದ ಕಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ಬಾಂಬ್ ಸ್ಪೋಟಗೊಂಡಿತ್ತು. ಈ ಘಟನೆಯಲ್ಲಿ 9 ಮಂದಿಗ ಗಾಯಗೊಂಡಿದ್ದಾರೆ. ಈ ಘಟನಾ ಸ್ಥಳದಲ್ಲಿ ಟೈಮರ್ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಮಧ್ಯಾಹ್ನ ಊಟದ ಸಮಯದಲ್ಲಿ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಉಂಟಾಗಿತ್ತು. ಆ ಬಳಿಕ ಅಂದು ಬಾಂಬ್ ಸ್ಪೋಟ ಎಂಬುದಾಗಿ ತಿಳಿದು ಬಂದಿತ್ತು. ಈ ಘಟನಾ ಸ್ಥಳದಲ್ಲಿ ಪೊಲೀಸರು, ಶ್ವಾನದಳ, ಎಫ್ಎಸ್ಎಲ್ ತಂಡದಿಂತ ಪರಿಶೀಲನೆ, ತನಿಖೆ ನಡೆಸಲಾಗುತ್ತಿದೆ. ಇದೀಗ ತನಿಖೆಯ ವೇಳೆಯಲ್ಲಿ ಘಟನಾ ಸ್ಥಳದಲ್ಲಿ ಟೈಮರ್ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಅದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ‘IED ಬಾಂಬ್ ಸ್ಫೋಟ’: ಘಟನೆ ದೃಢಪಡಿಸಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದೃಢಪಡಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಜನಪ್ರಿಯ ಉಪಾಹಾರ ಗೃಹದಲ್ಲಿ…

Read More

ತುಮಕೂರು : “ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟದ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಬೆಂಗಳೂರಿನ ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಅವರು ಶಿವಕುಮಾರ್ ತಿಳಿಸಿದರು. ಕುಣಿಗಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಈ ಸ್ಫೋಟವನ್ನು ಯಾರು, ಯಾವ ಕಾರಣಕ್ಕೆ ಮಾಡಿದ್ದಾರೆ. ಇದು ವ್ಯಾಪಾರದ ವೈರಿಗಳೇ ಮಾಡಿದ್ದೇ ಅಥವಾ ಬೇರೆ ಉದ್ದೇಶದಿಂದ ಮಾಡಿದ್ದಾರೆಯೇ ಎಂದು ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ರಾಮೇಶ್ವರಂ ಕೆಫೆ ಸುತ್ತಮುತ್ತಲ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳ ವಿಡಿಯೋ ಇದೆ. ಸುಮಾರು 2 ಕಿ.ಮೀ. ವ್ಯಾಪ್ತಿಯಲ್ಲಿ ಯಾರು ಬಂದು ಹೋಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆದಿದೆ. ಸದ್ಯಕ್ಕೆ ಯಾರಿಗೂ ತೊಂದರೆ ಆಗಿಲ್ಲ. ಬೆಂಗಳೂರಿನಲ್ಲಿ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೆಲವರು ಶಾಂತಿ ಕದಡಲು ಪ್ರಯತ್ನ ಮಾಡುತ್ತಿದ್ದಾರೆ. ನಾವು ರಕ್ಷಣೆ ನೀಡುತ್ತೇವೆ” ಎಂದು ತಿಳಿಸಿದರು. ಈ ಸ್ಫೋಟದಲ್ಲಿ ಐಇಡಿ ಬಳಸಲಾಗಿದೆ ಎಂಬುದರ ಬಗ್ಗೆ ಕೇಳಿದಾಗ, “ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು. https://kannadanewsnow.com/kannada/bbmp-sets-deadline-for-self-registration-of-water-tanker-in-bengaluru/ https://kannadanewsnow.com/kannada/important-information-for-state-government-employees-applications-invited-for-first-session-departmental-examination/

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳ ಮಾಹಿತಿಗಳನ್ನು ಕಡ್ಡಾಯವಾಗಿ ಸ್ವಯಂ ನೋಂದಣಿ ಮಾಡಿಕೊಳ್ಳಬೇಕಾಗಿದೆ ಎಂಬುದಾಗಿ ಬಿಬಿಎಂಪಿ ಡೆಡ್ ಲೈನ್ ಫಿಕ್ಸ್ ಮಾಡಿದೆ. ಈ ನಿಟ್ಟಿನಲ್ಲಿ ಪಾಲಿಕೆಯು ಹೊಸದಾಗಿ ಅಭಿವೃದ್ಧಿಪಡಿಸಲಾಗಿರುವ ಪೋರ್ಟಲ್‌ನಲ್ಲಿ https://bbmp.oasisweb.in/TankerManagement/SelfRegistration.aspx ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ದಿನಾಂಕ: 01-03-2024 ರಿಂದ 07-03-2024 ರವರೆಗೆ ತಮ್ಮ ಹೆಸರು, ವಿಳಾಸ, ವಲಯ, ಪಿನ್ ಕೋಡ್, ಮೊಬೈಲ್ ಸಂಖ್ಯೆ, ಟ್ಯಾಂಕರ್ ವಾಹನದ ಸಂಖ್ಯೆ, ಬ್ಯಾಂಕರ್ ಸಾಮರ್ಥ್ಯ, ಚಾಲಕನ ಹೆಸರು, ಚಾಲಕನ ಡ್ರೈವಿಂಗ್ ಲೈಸನ್ಸ್ ಮಾಹಿತಿಗಳನ್ನು ದಾಖಲಿಸಿ ಮೇಲ್ಕಂಡ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಿದೆ. ಸದರಿ ಪೋರ್ಟಲ್ ಮೂಲಕ ಪಡೆಯಲಾಗಿರುವ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ವಾಹನ ಚಾಲಕರೊಂದಿಗೆ ಇರತಕ್ಕದ್ದು ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಲ್ಕರ್ ವಿಕಾಸ್ ಕಿಶೋರ್ ರವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/pro-pakistan-slogans-raised-yesterday-bomb-blasts-today-yatnal-demands-home-ministers-resignation/ https://kannadanewsnow.com/kannada/kpsc-recruitment-for-364-posts-of-land-surveyors/

Read More

ಬೆಂಗಳೂರು: ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸಿಎಂ ಸಿದ್ದರಾಮಯ್ಯನವರು ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿದರು. ಸಾಂತ್ವನದ ಜೊತೆಗೆ ಸಾವಿನಲ್ಲೂ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ತೋರಿದ ಕುಟುಂಬಗಳ ಕಾರ್ಯವನ್ನ ಶ್ಲಾಘಿಸಿದರು. ಅಪಘಾತಕ್ಕೀಡಾದ ಶರವಣ ಅವರ ಪತ್ನಿ, ಪ್ರಶಂಸಾ ಪತ್ರ ಸ್ವೀಕರಿಸುವಾಗ ಅಗಲಿದ ತಮ್ಮ ಪತಿಯನ್ನು ನೆನೆದು ಕಣ್ಣೀರಿಟ್ಟರು. ಕೊಲೆಗೀಡಾದ ಚಿಕ್ಕಮಗಳೂರು ಕೆ.ಜಿ. ನವೀನ್ ಕುಟುಂಬದವರಿಗೆ ಅವರ ಸಾವಿಗೆ ನ್ಯಾಯ ಒದಗಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನೀವು ಕೈಗೊಂಡ ನಿರ್ಧಾರ ಸುಲಭವಲ್ಲ. ಆದರೆ ಇತರರ ಜೀವ ಉಳಿಸುವ ಕೆಲಸ ನೀವು ಮಾಡಿದ್ದೀರಿ. ನಿಮಗೆ ಯಾವುದೇ ಸಂಕಷ್ಟ ಎದುರಾದರೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸ್ಥೈರ್ಯ ತುಂಬಿದರು. ತಮ್ಮ ಹಿಂದಿನ ಅವಧಿಯಲ್ಲಿ ಅಂಗಾಂಗ ದಾನಕ್ಕೆ ಸೊಸೈಟಿ ಸ್ಥಾಪಿಸಿದ್ದನ್ನು ಸ್ಮರಿಸಿದ ಸಿಎಂ, ಇನ್ನಷ್ಟು ಜನರು ಅಂಗಾಂಗ ದಾನಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.…

Read More

ಬೆಂಗಳೂರು: ಮೊನ್ನೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿತ್ತು. ಇಂದು ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಬಾಂಬ್ ಸ್ಟೋಗೊಂಡಿದೆ. ಇದರ ಹೊಣೆಯನ್ನು ಹೊತ್ತು ಗೃಹ ಸಚಿವ ಡಾ.ಜಿ ಪರಮೇಶ್ವರ್ ರಾಜೀನಾಮೆ ನೀಡುವಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸಬೇಕು. ಗ್ರಾಹಕರು ಬಿಟ್ಟುಹೋದ ಚೀಲದಿಂದಾಗಿ ಸ್ಫೋಟ ಸಂಭವಿಸಿದೆಯೇ ಹೊರತು ಯಾವುದೇ ಸಿಲಿಂಡರ್ ಸ್ಫೋಟದಿಂದಲ್ಲ ಎಂದಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕ ಕಾಂಗ್ರೆಸ್ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಸಮರ್ಥಿಸಿಕೊಂಡಿತ್ತು. ಇಂದು ರಾಮೇಶ್ವರಂ ಕಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಗೃಹ ಸಚಿವ ಪರಮೇಶ್ವರ್ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. https://twitter.com/BasanagoudaBJP/status/1763509307382071792 https://kannadanewsnow.com/kannada/kpsc-recruitment-for-364-posts-of-land-surveyors/ https://kannadanewsnow.com/kannada/important-information-for-state-government-employees-applications-invited-for-first-session-departmental-examination/

Read More

ಪುರಾಣ ಕಾಲದಿಂದ ಕೂಡ ನಾವು ಶಕ್ತಿಗೆ ದೇವಿಯನ್ನೇ ಹೋಲಿಸುತ್ತೇವೆ. ಆದಿಶಕ್ತಿ ಪಾರ್ವತಿ ಈ ಜಗತ್ತಿನ ಸೃಷ್ಟಿಗೆ ಕಾರಣ ಎಂದು ನಂಬಿದ್ದೇವೆ ಹಾಗೆಯೇ ಬದುಕು ನಡೆಯಬೇಕು ಎಂದರು ವಿದ್ಯೆಗೆ ಸರಸ್ವತಿ, ಹಣಕ್ಕೆ ಲಕ್ಷ್ಮಿ, ಧೈರ್ಯಕ್ಕೆ ದುರ್ಗೆ ಹೇಗೆ ಈ ದೇವಿಯರ ಆಶೀರ್ವಾದ ಇರಲೇಬೇಕು. ಹಾಗಾಗಿ ಕರ್ನಾಟಕದ ಪ್ರತಿ ಮನೆಗಳಲ್ಲೂ ಕೂಡ ಮನೆಯ ಹೆಣ್ಣು ದೇವತೆಯನ್ನು ಬಹಳ ಭಕ್ತಿ ಭಾವದಿಂದ ಪೂಜಿಸುತ್ತಾರೆ ಹೀಗಾಗಿ ಊರಿನಲ್ಲೂ ಈ ರೀತಿ ಒಂದಾದರೂ ಶಕ್ತಿ ದೇವತೆ ದೇವಸ್ಥಾನ ಇರುತ್ತದೆ. ಇನ್ನು ಕೆಲವು ದೇವಸ್ಥಾನಗಳಲ್ಲೂ ಬಹಳ ವಿಶೇಷವಾಗಿತ್ತು ಆ ಕ್ಷೇತ್ರದ ಪ್ರಭಾವ ನೋಡಿ ನಾಡಿನ ಮೂಲೆ ಮೂಲೆಗಳಿಂದಲೂ ಕೂಡ ಭಕ್ತರು ಆಗಮಿಸುತ್ತಾರೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ,…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ 2024ರ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಿದ್ದು, 2024ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ 15-03-2024ರಿಂದ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ದಿನಾಂಕ 14-04-2024 ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ ಎಂದಿದೆ. ಇಲಾಖಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವೆಬ್ ಸೈಟ್ https://www.kpsc.kar.nic.in ಗೆ ಭೇಟಿ ನೀಡಿ ಸಲ್ಲಿಸಬೇಕು. ಅರ್ಹತೆ – ಈ ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸು ಸರ್ಕಾರಿ ನೌಕರರು ಆಗಿರಬೇಕು. ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಪ್ರಾಧಿಕಾರಗಳ ಖಾಯಂ ನೌಕರರು ಆಗಿರಬೇಕು. ಗ್ರೂಪ್-ಡಿ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ…

Read More

ಬೆಂಗಳೂರು: ನಿನ್ನೆ ನಿಧನರಾಗಿದ್ದಂತ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ನಿನ್ನೆ ನಿಧನರಾದಂತ ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ. ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ಮಾಡುವುದಾಗಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಶಿವರಾಂ ಅವರ ಅಂತ್ಯಕ್ರಿಯೆಯನ್ನು ಛಲವಾದಿ ಮಹಾಸಭಾದ ಜಾಗದಲ್ಲಿ ಮಾಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸಿದ್ದರು. ಸರಕಾರ ಅದಕ್ಕೆ ಸಮ್ಮತಿ ನೀಡದೇ ಇರುವ ಕಾರಣದಿಂದಾಗಿ ಹುಟ್ಟೂರಿಗೆ ಪಾರ್ಥೀವ ಶರೀರವನ್ನು ತಗೆದುಕೊಂಡು ಹೋಗಲಾಗುತ್ತಿದೆ. ಇಂದು ಸಂಜೆ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಅವರ ಬಿಡದಿಯ ಹುಟ್ಟೂರು ಉರುಗಹಳ್ಳಿಯಲ್ಲಿ ನೆರವೇರಿಸಲಾಗುತ್ತಿದೆ. https://kannadanewsnow.com/kannada/bomb-blast-at-rameswaram-cafe-in-bengaluru-cm-siddaramaiah/ https://kannadanewsnow.com/kannada/kpsc-recruitment-for-364-posts-of-land-surveyors/

Read More