Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ಹಾವೇರಿ, ಗದಗ ಮತ್ತು ವಿಜಯನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಗದಗ, ಬೆಟಗೇರಿ, ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ, ಕೂಡ್ಲಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ ನೀರು ಯೋಜನೆಯಡಿ ಕುಡಿಯುವ ನೀರು ಒದಗಿಸಲು ಮತ್ತು ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ದಿನಾಂಕ: 05-02-2024 ರ ರಾತ್ರಿ 10.00 ರಿಂದ 10-02-2024 ರ ರಾತ್ರಿ 10 ಗಂಟೆಯವರೆಗೆ ಪ್ರತಿ ದಿನ 2000 ಕ್ಯೂಸೆಕ್ಸ್ನಂತೆ ಒಟ್ಟು 12000 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು. ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ…
ವಾಷಿಂಗ್ಟನ್: ಅಮೇರಿಕಾದಿಂದ ಇರಾಕ್ ಮತ್ತು ಸಿರಿಯಾದಲ್ಲಿ ಇರಾನ್ ಬೆಂಬಲಿತ ಮಿಲಿಟಿಯಾಗಳು ಮತ್ತು ಇರಾನಿನ ರೆವಲ್ಯೂಷನರಿ ಗಾರ್ಡ್ ಬಳಸುತ್ತಿದ್ದ ಡಜನ್ಗಟ್ಟಲೆ ಸ್ಥಳಗಳ ಮೇಲೆ ವೈಮಾನಿಕ ದಾಳಿ ನಡೆಸುವ ಮೂಲಕ ಜೋರ್ಡಾನ್ನಲ್ಲಿ ತನ್ನ ಸೈನಿಕರ ಹತ್ಯೆಗೆ ಪ್ರತೀಕಾರ ತೀರಿಸಿಕೊಂಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಪ್ರಕಟಿಸಿದ ವರದಿ ತಿಳಿಸಿದೆ. ಈ ವೈಮಾನಿಕ ದಾಳಿಯಲ್ಲಿ ಆರು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಅಧ್ಯಕ್ಷ ಜೋ ಬೈಡನ್ ಮತ್ತು ಇತರ ಉನ್ನತ ಯುಎಸ್ ನಾಯಕರು ಅಮೆರಿಕವು ಮಿಲಿಟಿಯಾಗಳಿಗೆ ಪ್ರತಿದಾಳಿ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದರು. ಇದು ಕೇವಲ ಒಂದು ಹೊಡೆತವಲ್ಲ. ಆದರೆ ಕಾಲಾನಂತರದಲ್ಲಿ ಸರಣಿ ದಾಳಿ ಮುಂದುವರೆಯಲಿದೆ ಎಂದಿದ್ದಾರೆ. ಶುಕ್ರವಾರದ ದಾಳಿಯ ನಂತರ ಅಧಿಕೃತ ಹೇಳಿಕೆಯಲ್ಲಿ ಬೈಡನ್, “ಯುನೈಟೆಡ್ ಸ್ಟೇಟ್ಸ್ ಮಧ್ಯಪ್ರಾಚ್ಯದಲ್ಲಿ ಅಥವಾ ವಿಶ್ವದ ಬೇರೆಡೆ ಸಂಘರ್ಷವನ್ನು ಬಯಸುವುದಿಲ್ಲ. ಆದರೆ ನಮಗೆ ಹಾನಿ ಮಾಡಲು ಪ್ರಯತ್ನಿಸುವ ಎಲ್ಲರಿಗೂ ಇದು ತಿಳಿದಿರಲಿ. ನೀವು ಅಮೆರಿಕನ್ನರಿಗೆ ಹಾನಿ ಮಾಡಿದರೆ, ನಾವು ಪ್ರತಿಕ್ರಿಯಿಸುತ್ತೇವೆ ಎಂದು ಹೇಳಿದ್ದಾರೆ. ಕಳೆದ ಭಾನುವಾರ,…
ನವದೆಹಲಿ: ಕೇಂದ್ರ ಸರ್ಕಾರದಿಂದ ಅಕ್ರಮ ಅಕ್ಕಿ ದಾಸ್ತಾನು ತಡೆಗೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಅದೇ ಅಕ್ಕಿ ದಾಸ್ತಾನು ಪ್ರಮಾಣವನ್ನು ಘೋಷಣೆ ಮಾಡೋದು ಕಡ್ಡಾಯಗೊಳಿಸಲಾಗಿದೆ. ಈ ಕುರಿತಂತೆ ಆಹಾರ ಸಚಿವಾಲಯದ ಕಾರ್ಯದರ್ಶಿ ಸಂಜೀವ್ ಚೋಪ್ರಾ ಮಾಹಿತಿ ನೀಡಿದ್ದು, ಇನ್ಮುಂದೆ ಚಿಲ್ಲರೆ ಮತ್ತು ಸಗಟು ಮಾರಾಟಗಾರರು ಕಡ್ಡಾಯವಾಗಿ ತಮ್ಮ ಬಳಿಯಿರುವ ಅಕ್ಕಿ ದಾಸ್ತಾನು ಪ್ರಮಾಣವನ್ನು ಸರ್ಕಾರಿ ಜಾಲತಾಣಗಳಲ್ಲಿ ಘೋಷಿಸುವಂತೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಅಮೇಜಾನ್, ಪ್ಲಿಪ್ ಕಾರ್ಟ್ ಮುಂತಾದ ಇ-ಕಾಮರ್ಸ್ ತಾಣಗಳಲ್ಲಿ ಅಕ್ಕಿ ಮಾರಾಟಕ್ಕೆ ಮುಂದಾಗುತ್ತಿರುವ ಬೆನ್ನಲ್ಲೇ, ಈ ನಿರ್ಧಾರ ಕೈಗೊಂಡಿದೆ. ಭಾರತ್ ಅಕ್ಕಿ 5 ಕೆಜಿ, 10 ಕೆಜಿ ಪ್ಯಾಕೇಟ್ ಗಳಲ್ಲಿ ಮಾರಾಟಗೊಳ್ಳಲಿದ್ದು, ಪ್ರತಿ ಕೆಜಿಗೆ ರೂ.29 ನಿಗದಿ ಪಡಿಸಲಾಗಿದೆ ಎಂದು ಆಹಾರ ಸಚಿವಾಲಯದ ಕಾರ್ಯದರ್ಶಿ ಸಂಜೀವ್ ಚೋಪ್ರಾ ತಿಳಿಸಿದ್ದಾರೆ. ಆನ್ ಲೈನ್ ವೇದಿಕೆಗಳಲ್ಲದೇ ಎನ್ ಎ ಎಫ್ ಇ ಡಿ, ಎನ್ ಸಿಸಿಎಫ್, ಕೇಂದ್ರೀಯ ಭಂಡಾರಗಳಲ್ಲಿ ಮಾರಾಟಕ್ಕೆ ಲಭ್ಯವಿದೆ. ಇದೇ ವೇಳೆ ಅಕ್ಕಿ ನಿಯಂತ್ರಣಕ್ಕೆ ಬರುವವರೆಗೂ ಅಕ್ಕಿ…
ಬೆಂಗಳೂರು: ರಾಜ್ಯ ಸರ್ಕಾರದ ಸರ್ಕಾರಿ ಕಾರ್ಯಕ್ರಮಗಳ ಆರಂಭದಲ್ಲೇ ನಾಡಗೀತೆ ಹಾಡೋದು ಕಡ್ಡಾಯ ಎಂಬುದಾಗಿ ಸರ್ಕಾರ ಆದೇಶ ಮಾಡಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ರಾಷ್ಟ್ರಕವಿ ಕುವೆಂಪು ರಚಿತ ಜಯಭಾರತ ಜನನಿಯ ತನುಜಾತೆ ನಾಡಗೀತೆಯನ್ನು ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರ, ನಿಗಮ, ಮಂಡಳಿ, ಪ್ರಾಧಿಕಾರ ಹಾಗೂ ಅರೆ ಸರ್ಕಾರಿ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಆರಂಭದಲ್ಲಿ ಹಾಡಬೇಕು ಎಂಬುದಾಗಿ ಆದೇಶ ಹೊರಡಿಸಿದೆ. ಜನವರಿ.7ರಂದು ಹೊರಡಿಸಿದ್ದ ಸರ್ಕಾರಿ ಆದೇಶದಲ್ಲಿ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಎಲ್ಲಾ ಸಾಂಸ್ಕೃತಿಕ, ಸಾಹಿತ್ಯಕ, ಇತರೆ ಅಧಿಕೃತ ಕಾರ್ಯಕ್ರಮಗಳಲ್ಲಿ ನಾಡಗೀತೆ ಹಾಡಬೇಕು ಎಂದು ಆದೇಶ ಹೊರಡಿಸಲಾಗಿತ್ತು. ಈ ಆದೇಶಕ್ಕೆ ತಿದ್ದುಪಡಿ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಹೊರಡಿಸಿರುವಂತ ಆದೇಶದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/good-news-for-anganwadi-workers-life-insurance-accident-insurance-of-up-to-rs-2-lakh/ https://kannadanewsnow.com/kannada/important-information-for-sslc-ii-puc-students-examination-board-formulates-20-point-programme/
ಬೆಂಗಳೂರು: ನಗರದಲ್ಲಿ ನಡೆಯುತ್ತಿರುವಂತ ವಿವಿಧ ಕಾರ್ಯಕ್ರಮಗಳ ನಿಮಿತ್ತ, ನಮ್ಮ ಮೆಟ್ರೋ ಸಂಚಾರವನ್ನು ಫೆ.4ರಂದು ಬಹು ಬೇಗನೇ ಪ್ರಾರಂಭಿಸಲಾಗುತ್ತಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ದಿನಾಂಕ 04-02-2024ರ ಭಾನುವಾರದಂದು ನಡೆಯಲಿರುವ ವಿಶ್ವ ಕ್ಯಾನ್ಸರ್ ದಿನ – ಕ್ಯಾನ್ ವಾಕ್ ಮತ್ತು XL Runathon ಇವೆಂಟ್ ಆಯೋಜಿಸಲಾಗಿದೆ ಎಂದಿದೆ. ಈ ಸಲುವಾಗಿ ಸಾರ್ವಜನಿಕರು ಸುಗಮವಾಗಿ ಭಾಗವಹಿಸಲು ನಿಗಮವು ಎಲ್ಲಾ ನಾಲ್ಕು ಟರ್ಮಿನಲ್ ಗಳಿಂದ ಬೆಳಿಗ್ಗೆ 7ರ ಬದಲಾಗಿ 4.30 ಗಂಟೆಗೆ ಮೆಟ್ರೋ ರೈಲು ಸೇವೆಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದೆ. ಫೆ.4ರಂದು ಮಾತ್ರವೇ ಬೆಳಿಗ್ಗೆ 4.30ರಿಂದ ನಮ್ಮ ಮೆಟ್ರೋ ರೈಲು ಸಂಚಾರ ಎಲ್ಲಾ ಟರ್ಮಿನಲ್ ಗಳಿಂದ ಆರಂಭಗೊಳ್ಳಲಿದೆ. ಅದರ ಹೊರತಾಗಿ ಇನ್ನುಳಿದ ದಿನಗಳಂದು ಎಂದಿನಂತೆ ಬೆಳಿಗ್ಗೆ.7 ಗಂಟೆಯಿಂದಲೇ ರೈಲು ಸೇವೆ ಸಂಚಾರ ಮಾಡಲಿದೆ.
ನವದೆಹಲಿ: ಆನ್ ಲೈನ್ ವಂಚಕರು ದಿನಕ್ಕೊಂದು ಹಾದಿಯಲ್ಲಿ ಸಾರ್ವಜನಿಕರನ್ನು ವಂಚಿಸಿ, ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುತ್ತಿದ್ದಾರೆ. ಇದೀಗ ಹೊಸ ಹಾದಿ ಎನ್ನುವಂತೆ ಇ-ಕೆವೈಸಿ ಹೆಸರಿನಲ್ಲಿ ವಂಚನೆ ಮಾಡೋದಕ್ಕೆ ಶುರುಮಾಡಿದ್ದಾರೆ. ಇದರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಎಚ್ಚರಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ RBI, ಕೈವೈಸಿ ನವೀಕರಣ ಹೆಸರಿನಲ್ಲಿ ವಂಚನೆ ನಡೆಯುತ್ತಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದೆ. ಅಪರಿಚಿತ ಸಂಸ್ಥೆಗಳೊಂದಿಗೆ ದಾಖಲೆಗಳನ್ನು ಸಾರ್ವಜನಿಕರು ಹಂಚಿಕೊಳ್ಳದಂತೆಯೂ ಭಾರತೀಯ ರಿಸರ್ವ್ ಬ್ಯಾಂಕ್ ಸಲಹೆ ಮಾಡಿದೆ. ಕೆವೈಸಿ ನವೀಕರಣದ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಎಸಗುತ್ತಿರೋ ಬಗ್ಗೆ ವರದಿ ಬರುತ್ತಿದ್ದು, ಇದನ್ನು ತಡೆಗಟ್ಟಲು ಮತ್ತು ಸಾರ್ವಜನಿಕರು ತಮ್ಮನ್ನು ತಾವು ರಕ್ಷಿಸಿಕೊಳ್ಳೋ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದಿದೆ. ಕೆವೈಸಿ ದಾಖಲೆಗಳನ್ನು ಅಪರಿಚಿತ ವ್ಯಕ್ತಿಗಳು ಅಥವಾ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಬೇಡಿ. ಬ್ಯಾಂಕ್ ಖಾತೆಯ ಲಾಗಿನ್ ಮಾಹಿತಿಯನ್ನು, ಕ್ರೆಡಿಟ್, ಡೆಬಿಟ್ ಕಾರ್ಟ್ ಗಳ ಮಾಹಿತಿ, ಪಿನ್ ಸಂಖ್ಯೆ, ಒಟಿಪಿಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಸೂಚಿಸಿದೆ.…
ಬೆಂಗಳೂರು: ರಾಜ್ಯ ಸರ್ಕಾರದಿಂದ ಅಸಂಘಟಿತ ಕಾರ್ಮಿಕರಿಗೆ ನೀಡಲಾಗುತ್ತಿರುವಂತ ಇ-ಶ್ರಮ್ ವಯೋಮಿತಿಯನ್ನು 70 ವರ್ಷಕ್ಕೆ ಏರಿಕೆಯ ಮಾಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರದಿಂದ ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮಾಹಿತಿ ಹಂಚಿಕೊಂಡಿದ್ದು, ಪತ್ರಿಕಾ ಏಜೆಂಟರು ಮತ್ತು ವಿತರಕರಿಗೆ ಇ-ಶ್ರಮ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಇದರ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ವಿಮಾ ಯೋಜನೆಯಡಿ ಪರಿಹಾರವನ್ನು ನೀಡಲಾಗುತ್ತಿದೆ ಎಂದರು. ಇ-ಶ್ರಮ್ ಯೋಜನೆಗೆ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಳ್ಳೋದಕ್ಕೆ ಈ ಮೊದಲು 59 ವರ್ಷ ಕೊನೆಯಾಗಿತ್ತು. ಇದನ್ನು ಕಾರ್ಮಿಕರ ಹಿತದೃಷ್ಠಿಯಿಂದ 70 ವರ್ಷಕ್ಕೆ ಹೆಚ್ಚಿಸಲಾಗಿದೆ. ಇದರಿಂದ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದರು. ಈಗಾಗಲೇ ಪತ್ರಿಕಾ ವಿತರಕರು ಹಾಗೂ ಏಜೆಂಟರುಗಳನ್ನು ಇ-ಶ್ರಮ್ ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಮುಂದುವರೆದು ಸಾರಿಗೆ ವ್ಯಾಪ್ತಿಗೆ ಬರುವ ಆಟೊ ಚಾಲಕರು, ಟೈರ್ ಅಂಗಡಿಯವರು, ಮೆಕ್ಯಾನಿಕ್, ಗ್ಯಾರೇಜ್ ಮಾಲೀಕರು ಸೇರಿದಂತೆ ಸುಮಾರು 40 ಲಕ್ಷ ಮಂದಿ ಅಸಂಘಟಿತ ಕಾರ್ಮಿಕರನ್ನು ‘ಇ-ಶ್ರಮ್’ ಯೋಜನೆಯಡಿ ತರಲು ಚಿಂತಸಲಾಗಿದೆ ಎಂದು…
ಬೆಂಗಳೂರು: ವಿಲೇಜ್ ಅಕೌಂಟ್ ಆಫೀಸರ್ ನೇಮಕಾತಿಯನ್ನು ಈ ಮೊದಲು ದ್ವಿತೀಯ ಪಿಯುಸಿಯಲ್ಲಿ ಗಳಿಸಿದಂತ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಈಗ ರಾಜ್ಯ ಸರ್ಕಾರದಿಂದ ವಿಎ ನೇಮಕಾತಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿದೆ. ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಅದರಲ್ಲಿ ಗಳಿಸಿದಂತ ಅಂಕಗಳ ಆಧಾರದ ಮೇಲೆ ನೇಮಕ ಮಾಡಿಕೊಳ್ಳೋ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಕರ್ನಾಟಕ ಜನರಲ್ ಸರ್ವಿಸ್ (ಕಂದಾಯ ಅಧೀನ ಶಾಖೆ) (ಕೇಡರ್ ಮತ್ತು ನೇಮಕಾತಿ) (ತಿದ್ದುಪಡಿ) ನಿಯಮಗಳು 2024ಕ್ಕೆ ತಿದ್ದುಪಡಿ ತಂದು ಬದಲಾವಣೆ ತರಲಾಗುತ್ತಿದೆ. ವಿಲೇಜ್ ಅಕೌಂಟ್ಸ್ ನೇಮಕಾತಿ ನಿಯಮದಲ್ಲಿ ಬದಲಾವಣೆ ತರಲಾಗುತ್ತಿದೆ ಎಂದಿದೆ. ವಿಲೇಜ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ನೇಮಕಾತಿಯನ್ನು ನೇರ ನೇಮಕಾತಿಯ ಮೂಲಕ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಪಡಿಸಿ, ಅದರಲ್ಲಿ ಗಳಿಸಿದಂತ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ವಿಲೇಜ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಕರ್ನಾಟಕ ಲೋಕಸೇವಾ ಆಯೋಗದ…
ಹೊಸಪೇಟೆ: ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೇ ದೊಡ್ಡ ರಾಜ್ಯ ಆಗಿದೆ. ವರ್ಷಕ್ಕೆ 4 ಲಕ್ಷ ಕೋಟಿ ತೆರಿಗೆಯನ್ನು ಕನ್ನಡಿಗರು ಕಟ್ಟುತ್ತಾರೆ. ಆದರೆ ಕೇಂದ್ರದಿಂದ ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 50 ಸಾವಿರ ಕೋಟಿ. 15 ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ತೀವ್ರ ಅನ್ಯಾಯ ಆಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಫೆ 7 ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಇದು ಕರ್ನಾಟಕ ಮತ್ತು ಕನ್ನಡಿಗರ ಹಕ್ಕನ್ನು ಕೇಳಲು, ನಮ್ಮ ಪಾಲನ್ನು ನಮಗೆ ಕೊಡಿ ಎಂದು ಕೇಳಲು ನಡೆಸುತ್ತಿರುವ ಪ್ರತಿಭಟನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ ಅನ್ಯಾಯವಾಗಿರುವ ಕಾರಣಕ್ಕೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಲು…
ಬೆಂಗಳೂರು: ರಾಜ್ಯದ ಸಬ್ ರಿಜಿಸ್ಟಾರ್ ಕಚೇರಿ ಒಳಗೆ ಸಾರ್ವಜನಿಕರ ಲ್ಯಾಪ್ ಟಾಪ್, ಟ್ಯಾಬ್ಲೆಟ್ ಗಳ ಬಳಕೆಯನ್ನು ನಿಷೇಧ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಅದರಲ್ಲಿ ಕಾವೇರಿ 2.0 ತಂತ್ರಾಂಶಕ್ಕೆ ಆಪ್ ಡೇಟ್ ಆದಮೇಲೆ ಆನ್ ಲೈನ್ ನಲ್ಲಿಯೇ ನೋಂದಣಿ ಇಲಾಖೆ ಸೇವೆಗಳು ಸಿಗುತ್ತಿವೆ. ಸಾರ್ವಜನಿಕರು ಕುಳಿತಲ್ಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಸಾಕಷ್ಟು ಸೇವೆ ಪಡೆಯಬಹುದು ಎಂದಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಬಾರದೇ ಕಾವೇರಿ 2.0ರಲ್ಲಿ ದಾಸ್ತಾವೇಜು ಅಪ್ ಲೋಡ್ ಮಾಡಿ, ನಂತ್ರ ಕಚೇರಿಗೆ ಬಂದು ನೋಂದಣಿ ಪ್ರಕ್ರಿಯೆ ಮುಗಿಸಬಹುದು ಎಂದು ಹೇಳಿದೆ. ಕೆಲವರು ಸಬ್ ರಿಜಿಸ್ಟ್ರಾರ್ ಕಚೇರಿಗೆ ಬಂದು, ಅಲ್ಲಿಯೇ ಲ್ಯಾಪ್ ಟಾಪ್ ಮತ್ತು ಟ್ಯಾಬ್ ಗಳಲ್ಲಿ ದಾಸ್ತಾವೇಜು ಅಪ್ ಲೋಡ್ ಮಾಡಿ, ಅಂದೇ ನೋಂದಣಿಗೆ ಪ್ರಯತ್ನಿಸುತ್ತಿರೋದು ಕಂಡು ಬಂದಿದೆ ಎಂದು ಹೇಳಿದೆ. ಇದಲ್ಲದೇ ಇಸಿ, ಸಿಸಿ ಪಡೆಯೋದಕ್ಕೆ ಅಲ್ಲಿಯೇ ಲ್ಯಾಪ್ ಟಾಪ್, ಟ್ಯಾಗ್ ಗಳ ಮೂಲಕ…