Author: kannadanewsnow09

ಬೆಂಗಳೂರು: ಕಾಂಗ್ರೆಸ್ಸಿಗೆ ನಾಯಕ ಯಾರು? ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಪ್ರಶ್ನಿಸಿದರು. ಬೆಳಗಾವಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಇಂಡಿ ಒಕ್ಕೂಟದ ನಾಯಕ ಯಾರು ಎಂದು ಕೇಳಿದರು. ನಿಮಗೆ ನೀತಿಯೂ ಇಲ್ಲ; ನೇತೃತ್ವವೂ ಇಲ್ಲ ಎಂದು ಟೀಕಿಸಿದರು. ನಿಮ್ಮ ನೀತಿ ಏನೆಂಬುದನ್ನು ನಿಮ್ಮ ಮಾತುಗಳೇ ಸಾಬೀತುಪಡಿಸುತ್ತವೆ ಎಂದು ಆಕ್ಷೇಪಿಸಿದರು. ರಾಹುಲ್ ಗಾಂಧಿಯವರು ಮೊಹಬ್ಬತ್ ಕೆ ದೂಕಾನ್‍ನ ಮಾತನಾಡುತ್ತಿದ್ದರು. ಅವರ ಈ ದೂಕಾನ್‍ನಲ್ಲಿ ನಫರತ್‍ನ ಬಿಕರಿ ಆಗುತ್ತಿದೆ. ‘ಬಿಜೆಪಿಯವರ ಮನೆ ಹಾಳಾಗಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ದೇಶದ ಅತಿ ಹೆಚ್ಚು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ, ಅತಿ ಹೆಚ್ಚು ಜನರು ಮತ ಹಾಕಿದ, ಅತಿ ಹೆಚ್ಚು ಸಂಸದರು, ಶಾಸಕರು ನಾಶವಾಗಲಿ ಎಂದರೆ ಭಾರತವೇ ನಾಶವಾಗಲಿ ಅವರು ಬಯಸಿದಂತೆ ಕಾಣುತ್ತದೆ ಎಂದು ವಿಶ್ಲೇಷಿಸಿದರು. ನಿನ್ನೆ ಕಾಂಗ್ರೆಸ್ ಪಕ್ಷದ ಕಾಗವಾಡ ಕ್ಷೇತ್ರದ ಶಾಸಕರು ‘ಮೋದಿ ಸತ್ತರೆ ಬೇರ್ಯಾರೂ ಪ್ರಧಾನಿ ಆಗಲ್ವೇನೋ’ ಎಂದಿದ್ದಾರೆ. ಅಲ್ಲದೆ, ‘ಕಾಂಗ್ರೆಸ್…

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಸೆಟ್-2023ರ ಪರೀಕ್ಷೆಯ ( KSET-2023 Exam ) ತಾತ್ಕಾಲಿಕ ಅಂಕವನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಇಂದು ಕೆಇಎಯಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, KSET ಪರೀಕ್ಷೆಯ ತಾತ್ಕಾಲಿಕ ಅಂಕ ಪ್ರಕಟಿಸಲಾಗಿದೆ. ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ KSET-23ನಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದಿದೆ. 41 ವಿಷಯಗಳ ಅಂಕಪಟ್ಟಿ ಇದೆ. ಆಕ್ಷೇಪಣೆಗಳಿದ್ದಲ್ಲಿ ಮೇ 10ರೊಳಗೆ ಇ-ಮೇಲ್ keakset2023@gmail.com ಮಾಡಬೇಕು ಎಂಬುದಾಗಿ ತಿಳಿಸಿದೆ. https://twitter.com/KEA_karnataka/status/1786007359531454851 https://kannadanewsnow.com/kannada/centre-issued-visa-to-prajwal-revanna-to-fly-abroad-v-s-ugrappa/ https://kannadanewsnow.com/kannada/elections-to-six-legislative-council-seats-in-karnataka-to-be-held-on-june-3-results-to-be-declared-on-june-6/

Read More

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ಹೋಗಲು ವೀಸಾ ನೀಡಿದ್ದು ಯಾರು? ವೀಸಾ ನೀಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ. ಕೇಂದ್ರ ಸರ್ಕಾರವೇ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಕ್ಕೆ ಹಾರಿ ಹೋಗಲು ವೀಸಾ ನೀಡಿದೆ ಎಂಬುದಾಗಿ ಮಾಜಿ ಸಂಸದ ವಿಎಸ್ ಉಗ್ರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಇತಿಹಾಸದಲ್ಲಿಯೇ ಕಂಡು ಕೇಳರಿಯದಂತಹ ಲೈಂಗಿಕ ಹಗರಣ ಕರ್ನಾಟಕದ ಹಾಸನದಲ್ಲಿ ನಡೆದಿರುವುದು ಇಡೀ ಮನುಕುಲವೇ ತಲೆ ತಗ್ಗಿಸುವ ಘಟನೆ. ಹೊಳೆನರಸಿಪುರದ ಬಿಜೆಪಿ ಅಭ್ಯರ್ಥಿಯಾಗಿದ್ದ ದೇವರಾಜೇಗೌಡ ಅವರು ಸುಮಾರು ನಾಲ್ಕು ತಿಂಗಳ ಹಿಂದೆ ಮಾಧ್ಯಮ ಗೋಷ್ಠಿ ನಡೆಸಿ ಪ್ರಜ್ವಲ್ ರೇವಣ್ಣ ಅವರ ಸಿಡಿಗಳು ಇವೆ ಎಂದು ಮಾಹಿತಿ ನೀಡಿದ್ದರು. ಈ ವಿಚಾರವಾಗಿ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ಗೆ ಪತ್ರ ಬರೆದು ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡುವುದು ಎಂದು ಹೇಳಿದ್ದರು ಎಂದರು. ಐಪಿಸಿ ಸೆಕ್ಷನ್ 202 ಪ್ರಕಾರ ಕಾನೂನು ವಿರುದ್ದ ನಡೆದುಕೊಂಡಿದ್ದರೆ ಹಾಗೂ ಅದನ್ನು ಸಂಬಂಧಪಟ್ಟ ಪೊಲೀಸರಿಗೆ ಮಾಹಿತಿ ನೀಡದೆ ಇದ್ದರೆ…

Read More

ಯಾದಗಿರಿ: ಜಿಲ್ಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ನಾಲ್ಕು ಗುಡಿಸಲು ಸುಟ್ಟು ಭಸ್ಮವಾಗಿರುವಂತ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರದ ಮಲ್ಲಾ ಬಿ ಗ್ರಾಮದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಒಂದು ಸ್ಪೋಟಗೊಂಡಿದೆ. ಇದರ ಪರಿಣಾಮ ಗುಡಿಸಲಿಗೆ ಬೆಂಕಿ ತಗುಲಿ, ಹೊತ್ತಿ ಉರಿದಿದೆ. ಮಲ್ಲಾ ಬಿ ಗ್ರಾಮದ ಮಲ್ಲಾರೆಡ್ಡಿ ಹಾಗೂ ಮಲ್ಕಪ್ಪ ಎಂಬುವರಿಗೆ ಸೇರಿದಂತೆ ಗುಡಿಸಲು ಸಿಲಿಂಡರ್ ಸ್ಪೋಟದಿಂದ ಹೊತ್ತಿ ಉರಿದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಸತತ ಒಂದು ಗಂಟೆಗಳ ಕಾಲ ಹರಸಾಹಸ ನಡೆಸಿ ಬೆಂಕಿ ನಂದಿಸಿವೆ. ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/pm-modi-remembers-karnataka-only-when-elections-are-held-siddaramaiah/ https://kannadanewsnow.com/kannada/elections-to-six-legislative-council-seats-in-karnataka-to-be-held-on-june-3-results-to-be-declared-on-june-6/

Read More

ಶಿವಮೊಗ್ಗ : ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಅವರು ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಗೆಲುವನ್ನು ಖಚಿತಪಡಿಸಿ ಮಾತನಾಡಿದರು. ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ ರಾಜ್ಯದ ಪರವಾಗಿ, ಜಿಲ್ಲೆಯ ಪರವಾಗಿ ಪಾರ್ಲಿಮೆಂಟಿನಲ್ಲಿ ನೆಪಕ್ಕೂ ಬಾಯಿ ಬಿಡದ ಬಿ.ವೈ.ರಾಘವೇಂದ್ರ ಸಂಸದರಾಗಿದ್ದೇ ವೇಸ್ಟ್ . ಬಿಜೆಪಿಯಿಂದ ಗೆದ್ದ 25 ಮಂದಿ ಸಂಸದರು ರಾಜ್ಯದ ಪರವಾಗಿ ಯಾವತ್ತೂ ಧ್ವನಿ ಎತ್ತಲಿಲ್ಲ. ಇಂಥವರನ್ನು ಗೆಲ್ಲಿಸಿ ನಿಮಗಾಗಲೀ, ರಾಜ್ಯಕ್ಕಾಗಲೀ, ಜಿಲ್ಕೆಗಾಗಲಿ ಏನೇನೂ ಪ್ರಯೋಜನವಿಲ್ಲ ಎಂದರು. ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ. ಬರಗಾಲ ಬಂದಾಗ, ಪ್ರವಾಹ ಬಂದಾಗಲೂ ರಾಜ್ಯ ನೆನಪಾಗಲಿಲ್ಲ. ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಲೇ ಇರುವ ಮೋದಿ ದ್ವೇಷದ ರಾಜಕಾರಣ ಮಾಡಿ, ಮಲತಾಯಿ ಧೋರಣೆಯನ್ನು ತೋರಿ ದೊಡ್ಡ ಅನ್ಯಾಯ ಮಾಡುತ್ತಿದೆ. ಪ್ರವಾಹ ಅಥವಾ ಬರಗಾಲ ಬಂದಾಗ ರಾಜ್ಯಕ್ಕೆ…

Read More

ಬೆಂಗಳೂರು: ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರಲ್ಲಿ ಕ್ರಿಕೆಟ್ ಪಂದ್ಯಾವಳಿಯಂದು ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರದ ವ್ಯವಸ್ಥಎಯನ್ನು ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಟಿಸಿ ಮಾಹಿತಿ ನೀಡಿದ್ದು, ದಿನಾಂಕ  04.05.2024, 12.05.2024 ಹಾಗೂ  18.05.2024 ಗಳಂದು  ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ IPL-2024 ಕ್ರಿಕೆಟ್‌ ಪಂದ್ಯ   ವೀಕ್ಷಣೆಗೆ ಬಂದು  ಹೋಗುವ ಸಾರ್ವಜನಿಕ ಪ್ರಯಾಣಿಕರಿಗೆ ಹೆಚ್ಚುವರಿ ಸಾರಿಗೆ ಸೌಲಭ್ಯ ಒದಗಿಸೋದಾಗಿ ತಿಳಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ದಿನಾಂಕ 04.05.2024, 12.05.2024 ಹಾಗೂ 18.05.2024 ಗಳಂದು IPL-2024 ಕ್ರಿಕೆಟ್‌ ಪಂದ್ಯಾವಳಿಗಳು  ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸದರಿ ಕ್ರಿಕೆಟ್‌ ಪಂದ್ಯಾವಳಿಗೆ ಬಂದು-ಹೋಗುವ ವೀಕ್ಷಕರಿಗೆ ಬೇಡಿಕೆಗನುಗುಣವಾಗಿ ಬೆಂ.ಮ.ಸಾ.ಸಂಸ್ಥೆಯಿಂದ ವ್ಯವಸ್ಥಿತ ಸಾರಿಗೆಗಳನ್ನು ಕಾರ್ಯಾಚರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದೆ. ಬೆಂಗಳೂರು ನಗರದ ವಿವಿಧ ಭಾಗಗಳಿಂದ ಎಂ ಚಿನ್ನಸ್ವಾಮಿ ಕ್ರೀಡಾಂಗಣ ನಡುವೆ ಕಾರ್ಯಾಚರಿಸಲಾಗುವ ಸಾರಿಗೆಗಳ ಮಾರ್ಗದ ವಿವರ ಕೆಳಕಂಡಂತಿದೆ…

Read More

ಶಿವಮೊಗ್ಗ: ರಾಜ್ಯಕ್ಕೆ ಭೀಕರ ಬರಗಾಲದ ಪರಿಸ್ಥಿತಿ ಎದುರಾದರೂ ಸಹ ಕೇಂದ್ರ ಬರಪರಿಹಾರವನ್ನು ಬಿಡುಗಡೆ ಮಾಡಲಿಲ್ಲ. ಕರ್ನಾಟಕದಲ್ಲಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿ, 35 ಸಾವಿರ ಕೋಟಿ ನಷ್ಟವಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಸಂಪನ್ಮೂಲಗಳಿಂದ ತಲಾ ಎರಡು ಸಾವಿರದಂತೆ 34 ಲಕ್ಷ ರೈತರಿಗೆ ಪರಿಹಾರ ನೀಡಲಾಯಿತು. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ರಾಜ್ಯಕ್ಕೆ 18172 ಕೋಟಿ ರೂ.ಗಳ ಬರ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ರಾಜ್ಯಕ್ಕಾದ ಅನ್ಯಾಯವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ಕೇವಲ 3454 ಕೋಟಿ ರೂ.ಗಳನ್ನು ನೀಡಿ ಮತ್ತೆ ಮತ್ತೆ ದ್ರೋಹ ಮಾಡುತ್ತಲೇ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.‌ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, AICC ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್,AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್…

Read More

ನವದೆಹಲಿ: ಲೈಂಗಿಕ ಆರೋಪ ಕೇಳಿ ಬಂದ ನಂತ್ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಬ್ರಿಜ್ ಭೂಷಣ್ ಸಿಂಗ್ ಗೆ ಟಿಕೆಟ್ ನಿರಾಕರಿಸಲಾಗಿದೆ. ಆದ್ರೇ ಅವರ ಪುತ್ರನಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸೋದಕ್ಕೆ ಕೈಸರ್ಗಂಜ್ನಿಂದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಕೈಬಿಟ್ಟ ಬಿಜೆಪಿ, ಅವರ ಮಗನಿಗೆ ಟಿಕೆಟ್ ನೀಡಿದೆ. ಬಿಜೆಪಿ ಪಕ್ಷದಿಂದ 2 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆಗಾಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಬಾರಿ ಕೈಸರ್ಗಂಜ್ ನಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದಂತ ಬ್ರಿಜ್ ಭೂಷಣ್ ಗೆ  ಟಿಕೆಟ್ ಕೈ ತಪ್ಪಿದೆ. ಬದಲಾಗಿ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹೌದು. ಸತತ ಮೂರು ಬಾರಿ ಪ್ರತಿನಿಧಿಸಿರುವ ಉತ್ತರ ಪ್ರದೇಶದ ಕೈಸರ್ಗಂಜ್ ನಿಂದ ಮಾಜಿ ರಾಷ್ಟ್ರೀಯ ಕುಸ್ತಿ ಬಾಸ್ಗೆ ಈ ಬಾರಿ ಟಿಕೆಟ್ ಸಿಕ್ಕಿಲ್ಲ.  ಪಕ್ಷದ ನಾಯಕತ್ವವು ಈ ಬಗ್ಗೆ ಬಿಜೆಪಿ ನಾಯಕರೊಂದಿಗೆ ಮಾತನಾಡಿದೆ ಮತ್ತು ಅವರ ಮಗ ಕರಣ್ ಭೂಷಣ್ ಸಿಂಗ್ ಅವರನ್ನು ಕೈಸರ್ಗಂಜ್ನಿಂದ ಕಣಕ್ಕಿಸಲು ಬಿಜೆಪಿಯಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.…

Read More

ಬೆಂಗಳೂರು: ನಾನು ತನಿಖೆಗೆ ಸಹಕರಿಸುತ್ತೇನೆ. ಎಲ್ಲಿಯೂ ಹೋಗಲ್ಲ ಎಂಬುದಾಗಿ ತಮ್ಮ ಪುತ್ರ ಪ್ರಜ್ವಲ್ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣದ ಬಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪ್ರತಿಕ್ರಿಯಿಸಿದ್ದರು. ಈಗ ಅವರು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪುತ್ರನ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದಂತ ಅವರು ತಾವು ಎಸ್ಐಟಿ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿಯೂ ಹೇಳಿದ್ದರು. ಇದಷ್ಟೇ ಅಲ್ಲದೇ ನಾನು ಎಲ್ಲಿಗೂ ಓಡಿ ಹೋಗೋದಿಲ್ಲ. ತನಿಖೆ ನಡೆಯಲಿ ತನಿಖೆಗೆ ಸಂಪೂರ್ಣ ಬೆಂಬಲ ನೀಡೋದಾಗಿ ಮಾಧ್ಯಮಗಳ ಮೂಲಕ ಮಾತನಾಡಿ ತಿಳಿಸಿದ್ದರು. ಇಂದು ಅವರು ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಪ್ರಕರಣ ಸಂಬಂಧ ಕೋರ್ಟ್ ಮೆಟ್ಟಿಲೇರಿದ್ದಾರೆ. https://kannadanewsnow.com/kannada/prajwal-revanna-flies-to-dubai-from-germany-strategy-to-derail-sit-probe/…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್ ಬೆಳಕಿಗೆ ಬರುತ್ತಿದ್ದಂತೆ, ಕರ್ನಾಟಕದಿಂದ ಜರ್ಮನಿಗೆ ಹಾರಿದ್ದರು. ಅಲ್ಲಿಂದ ನಾಳೆ ಬೆಂಗಳೂರಿಗೆ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗೋದಕ್ಕೆ ಬರಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಎಸ್ಐಟಿ ತನಿಖೆ ದಾರಿ ತಪ್ಪಿಸಲು, ದಿನ ದೂಡಲು ಜರ್ಮನಿಯಿಂದ ಈಗ ದುಬೈಗೆ ಹಾರಿದ್ದಾರೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ಬಳಿಕ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ಅವರ ಅಶ್ಲೀಲ ವೀಡಿಯೋ ಕೇಸ್ ಬೆಳಕಿಗೆ ಬರುತ್ತಿದ್ದಂತೇ, ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶಿಸಿತ್ತು. ನಿನ್ನೆಯಷ್ಟೇ ಎಸ್ಐಟಿ ತನಿಖಾಧಿಕಾರಿಗಳಿಗೆ ವಕೀಲರ ಮೂಲಕ 7 ದಿನ ಕಾಲಾವಕಾಶ ನೀಡುವಂತೆ ಪ್ರಜ್ವಲ್ ರೇವಣ್ಣ ಕೋರಿದ್ದರು. ಈ ಬೆನ್ನಲ್ಲೇ ಜರ್ಮನಿಯಿಂದ ಪ್ರಜ್ವಲ್ ರೇವಣ್ಣ ಬುಧವಾರ ರಾತ್ರಿಯೇ ದುಬೈಗೆ ಹಾರಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ದುಬೈನಿಂದ ಬೆಂಗಳೂರಿಗೆ ಶೀಘ್ರವೇ ಪ್ರಜ್ವಲ್ ರೇವಣ್ಣ ಬರೋದು ಡೌಟ್, ಎಸ್ಐಟಿ ತನಿಖೆಯನ್ನು ವಿಳಂಬ ಮಾಡೋ ತಂತ್ರಗಾರಿಕೆ ಅನುಸರಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಮತ್ತೊಂದೆ ಸಿಎಂ ಸಿದ್ಧರಾಮಯ್ಯ ಅವರು ಪ್ರಧಾನಿ…

Read More