Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ವಿವಾಹ ನೋಂದಣಿ ಮತ್ತಷ್ಟು ಸರಳೀಕರಣಗೊಳಿಸಲಾಗಿದೆ. ಸಬ್ ರಿಜಿಸ್ಟಾರ್ ಕಚೇರಿಗೆ ಅಲೆಯೋದಕ್ಕೆ ಬ್ರೇಕ್ ಹಾಕಿರೋ ರಾಜ್ಯ ಸರ್ಕಾರ, ಕಾವೇರಿ-2 ಆಪ್ ಮೂಲಕ ನೋಂದಣಿಗೆ ಅವಕಾಶ ನೀಡಲಾಗಿದೆ. ಫೆಬ್ರವರಿ.1ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಿವಾಹ ನೋಂದಣಿ ಮಸೂದೆಗೆ ತಿದ್ದುಪಡಿ ತರೋ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಹಿಂದೂ ವಿವಾಹಗಳ ನೋಂದಣಿ(ತಿದ್ದುಪಡಿ) ನಿಯಮಗಳು-2024ಅನ್ನು ಸಚಿವ ಸಂಪುಟ ಸಭೆ ಅನುಮೋದಿಸಲಾಗಿದೆ. ಈ ತಿದ್ದುಪಡಿ ನಿಯಮಗಳಂತೆ ವಿವಾಹ ನೋದಂಣಿ ಇನ್ನೂ ಸುಲಭವಾಗಿದ್ದು, ಕಾವೇರಿ-2 ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದ ವಿವಾಹ ನೋಂದಣಿಗೆ ಗ್ರಾಮ ಪಂಚಾಯ್ತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿಯೂ ಅವಕಾಶ ಕಲ್ಪಿಸಲಾಗುತ್ತಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ವಿವಾಹ ನೋಂದಣಿಗಾಗಿ ಸಬ್ ರಿಜಿಸ್ಟರ್ ಕಚೇರಿಗೆ ಅಲೆಯೋದು ಇನ್ಮುಂದೆ ತಪ್ಪಲಿದೆ. ಇನ್ನೂ ಏನಿದ್ದರೂ ಡಿಜಿಟಲ್ ಯುಗದಲ್ಲಿ ವಿವಾಹ ಆಗೋ ಎಲ್ಲರೂ ಮನೆಯಲ್ಲೇ ಕುಳಿತು ಆನ್ ಲೈನ್ ಮೂಲಕ ವಿವಾಹ ನೋಂದಣಿಯನ್ನು ಮಾಡಬಹುದಾಗಿದೆ.
ಚಿಕ್ಕಮಗಳೂರು: ನಾನು ಅಣ್ಣಾಮಲೈ ಕೊಪ್ಪಗೆ ಬಂದಾಗಲೇ ಅವರಿಗೆ ಖಾಕಿ ತೊರೆದು ಕಾವಿ ತೊಡ್ತಾರೆ ಅಂತ ಹೇಳಿದ್ದೆ. ಈಗ ಅವರು ತಮಿಳುನಾಡಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದಾಗಿ ವಿನಯ್ ಗುರೂಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ನಡೆದಂತ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ತಮಿಳುನಾಡಿನಲ್ಲಿ ಒಂದು ದಿನ ಅಣ್ಣಾಮಲೈ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದನ್ನು ನಾನು ನೋಡುತ್ತೇನೆ. ನೀವು ನೋಡುತ್ತೀರಿ. ಇದು ಭವಿಷ್ಯ ಎನ್ನುವುದಕ್ಕಿಂತ ಸಾಮಾನ್ಯ ಜ್ಞಾನ ಎಂದರು. ಕೊಪ್ಪದ ಬೊಮ್ಲಾಪುರಕ್ಕೆ ಈ ಹಿಂದೆ ಅಣ್ಣಾಮಲೈ ಬಂದಾಗ ನಾನು ಸೇಬು ಹಣ್ಣು ನೀಡಿ ನೀವು ಖಾಕಿ ತೊರೆದು ಖಾದಿ ಹಾಕ್ತೀರಿ ಅಂತ ಹೇಳಿದ್ದೆ. ಜ್ಞಾನ ಚಕ್ಷುವಿನಲ್ಲಿ ಯಾರೇ ಆದರೂ ಧ್ಯಾನ ಮಾಡಿದಾಗ ಅಂತವರಿಗೆ ಕಾಲದ ಒಂದಷ್ಟು ಘಟನೆಗಳನ್ನು ತಿಳಿದುಕೊಳ್ಳೋಕೆ ಆಗುತ್ತದೆ. ಅದು ನನಗಷ್ಟೇ ಅಲ್ಲ. ಸಣ್ಣ ಮಗುವಿಗೂ ಸಾಧ್ಯ ಎಂದರು.
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ತೆರವಿನ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡುವಂತೆ ಮನವಿ ಮಾಡಲಾಗಿದೆ. ಅಲ್ಲದೇ ಬಿಬಿಎಂಪಿ ನೀಡಿರುವಂತ ವಲಯವಾರು ವಾಟ್ಸ್ ಆಪ್ ಸಂಖ್ಯೆಗಳಿಗೆ ಜಸ್ಟ್ ಪೋಟೋ ಸಹಿತ ಸಂದೇಶ ಕಳುಹಿಸಿದ್ರೇ ಸಾಕು, ಅಧಿಕಾರಿಗಳು ಅಂತಹ ಮರದ ಕೊಂಬೆಗಳನ್ನು ತೆರವು ಮಾಡಲಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರೋ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ತನ್ನ ವ್ಯಾಪ್ತಿಯ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ಈಗಾಗಲೆ ತೆರವುಗೊಳಿಸಲಾಗುತ್ತಿದೆ ಎಂದಿದೆ. ಮುಂದುವರಿದು, ಸಾರ್ವಜನಿಕರುಗಳು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಈ ಕೆಳಕಂಡ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ(ವಾಟ್ಸ್ ಅಪ್ ಮುಖಾಂತರ ಜಿ.ಪಿ.ಎಸ್ ಸಹಿತ ಫೋಟೋ ಲಗತ್ತಿಸಿ) ವಿಳಾಸದೊಂದಿಗೆ ಮಾಹಿತಿ ನೀಡಲು ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಶ್ರೀ ಬಿ.ಜಿ.ಎಲ್ ಸ್ವಾಮಿ ರವರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿದೆ. ಉಪ ವಿಭಾಗ ಹಾಗೂ…
ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ಶ್ರೀರಾಮನ ಪಟ್ಟಾಭಿಷೇಕವಾದಂತೆ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಟ್ಟಾಭಿಷೇಕ ಸದ್ಯದಲ್ಲೇ ಆಗಲಿದೆ ಎಂಬುದಾಗಿ ವಿನಯ್ ಗುರೂಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಚಿಕ್ಕಮಗಳೂರು ನಗರ ಜಿಲ್ಲಾ ಕಾರಾಗೃಹದಲ್ಲಿ ನಡೆದಂತ ಪಾರ್ಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ನಂತ್ರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮನ ಪಟ್ಟಾಭಿಷೇಕ ನೋಡಿ ಆಗಿದೆ. ಸದ್ಯದಲ್ಲೇ ನರೇಂದ್ರ ಮೋದಿಯವರ ಪಟ್ಟಾಭಿಷೇಕವನ್ನು ನಾವು, ನೀವೆಲ್ಲರೂ ನೋಡುತ್ತೇವೆ ಎಂದರು. ಕಳೆದ ಬಾರಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ವಿನಯ್ ಗುರೂಜಿ ಮೋದಿಯವರಿಗೆ ರಾಮನ ಧನಸ್ಸನ್ನು ಉಡುಗೋರೆಯಾಗಿ ನೀಡಿದ್ದನ್ನು ನಾವು ನೆನಪು ಮಾಡಿಕೊಳ್ಳಬಹುದು.
ಚಿತ್ರದುರ್ಗ: ಮಾಜಿ ಸಚಿವ ದಿವಂಗತ ಕೆ.ಹೆಚ್ ರಂಗನಾಥ್ ಅವರ ಮೊಮ್ಮಗ ಹರ್ಷವರ್ಧನ್(33) ಶುಕ್ರವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅಕಾಲಿಕವಾಗಿ ನಿಧನರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದಿಂದ ಆಯ್ಕೆಯಾಗಿ, ಸಚಿವರಾಗಿದ್ದಂತ ದಿ.ಕೆ.ಹೆಚ್ ರಂಗನಾಥ್ ಅವರ ಮೊಮ್ಮಗ ಹರ್ಷವರ್ಧನ್ ಶುಕ್ರವಾರ ನಿಧನರಾಗಿದ್ದಾರೆ. ಅವರ ತಂದೆ ಕೆಪಿಸಿಸಿ ಸದಸ್ಯ ವಿಜಯ್ ಕುಮಾರ್ ಆಗಿದ್ದಾರೆ. ಇಂದು ಹರ್ಷವರ್ಧನ್ ಅವರ ಅಂತ್ಯಕ್ರಿಯೆಯನ್ನು ಹಿರಿಯೂರು ತಾಲೂಕಿನ ಹೊಸಯಳನಾಡು ಸಮೀಪದ ಕಸವನಹಳ್ಳಿ ಗ್ರಾಮದಲ್ಲಿರುವ ಕೆ.ಹೆಚ್ ರಂಗನಾಥ್ ಅವರ ಸಮಾಧಿಯ ಬಳಿಯಲ್ಲಿ ನೆರವೇರಿಸಲಾಗುತ್ತದೆ ಎಂಬುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಇನ್ನೂ ಮಾಜಿ ಸಚಿವ ಕೆ.ಹೆಚ್ ರಂಗನಾಥ್ ಅವರ ಮೊಮ್ಮಗ ಹರ್ಷವರ್ಧನ್ ನಿಧಕ್ಕೆ ಮಾಜಿ ಸಚಿವ ಹೆಚ್.ಆಂಜನೇಯ ತೀವ್ರ ಸಂತಾಪ ಸೂಚಿಸಿದ್ದಾರೆ.
ಹೊಸಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐತಿಹಾಸಿಕ ಹಂಪಿ ಉತ್ಸವವನ್ನು ವೈಭವದ ಕಲಾತ್ಮಕ ವೇದಿಕೆಯಲ್ಲಿ ನಗಾರಿ ಬಾರಿಸುವುದರ ಮೂಲಕ ಉದ್ಘಾಟಿಸಿದರು. ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್, ಕ್ರೀಡಾ ಮತ್ತು ಯುವಜನ ಸಭಲೀಕರಣ ಸಚಿವ ನಾಗೇಂದ್ರ, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಕೆಎಂಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ, ಶಾಸಕರುಗಳಾದ ಈ.ತುಕಾರಾಮ್, ಕಂಪ್ಲಿ ಗಣೇಶ್, ಲತಾ ಎಂಪಿ ಪ್ರಕಾಶ್, ರಾಘವೇಂದ್ರ ಹಿಟ್ನಾಳ್ , ನಾರಾ ಭರತ್ ರೆಡ್ಡಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ ಹೊಸಪೇಟೆ : ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಶುಕ್ರವಾರ ಹೊಸಪೇಟೆ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ ಮಾಡಿದರು. ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮುಖ್ಯಮಂತ್ರಿ…
ಬೆಂಗಳೂರು: ಫೆಬ್ರವರಿ.7ರಂದು ಕೇಂದ್ರ ಮದ್ಯಂತರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಆಗಿರೋ ಅನ್ಯಾಯ ಪ್ರತಿಭಟಿಸಿ, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ನವದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಇದೇ ದಿನ ಬೆಂಗಳೂರಿನ ವಿಧಾನಸೌಧದಲ್ಲಿ ಬಿಜೆಪಿ ಶಾಸಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಇಂದಿನ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಫೆಬ್ರವರಿ.7ರಂದು ನವದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸೋ ದಿನವೇ, ಬೆಂಗಳೂರಿನ ವಿಧಾನಸೌಧದಲ್ಲಿ ಬಿಜೆಪಿ ಶಾಸಕರಿಗೆ ಪ್ರತಿಭಟನೆ ನಡೆಸೋ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿ: ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ ಅನ್ಯಾಯವಾಗಿರುವ ಕಾರಣಕ್ಕೆ ನವದೆಹಲಿಯಲ್ಲಿ ಕೇಂದ್ರ…
ಬೆಂಗಳೂರು: ಇಂದು ಅರಣ್ಯ ಕೈಗಾರಿಕಾ ನಿಗಮದ ನೂತನ ಅಧ್ಯಕ್ಷರಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿಗಮದ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಶಂಕಿನಮಠ, ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಸೂಡಾ ಮಾಜಿ ಅಧ್ಯಕ್ಷ ರಮೇಶ್, ಜಿಲ್ಲಾ ಈಡಿಗರ ಸಂಘದ ಅಧ್ಯಕ್ಷ ಶ್ರೀದರ್, ಈಡಿಗ ಸಂಘದ ರಾಜ್ಯಾಧ್ಯಕ್ಷ ತಿಮ್ಮೇಗೌಡ, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ, ಕಾಂಗ್ರೆಸ್ ಹಿರಿಯ ಮುಖಂಡ ಶ್ರೀಕಾಂತ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಆಗಮಿಸಿ ಶುಭ ಕೋರಿದರು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಅರಣ್ಯ ಕೈಗಾರಿಕಾ ನಿಗಮದವತಿಯಿಂದ ಇನ್ನು ಮುಂದೆ ನೂತನವಾಗಿ ಲಿಡ್ಕರ್ ಮಾದರಿಯಲ್ಲಿ ಆಸನ ಪೀಠಪೋಕರಣಗಳ ಮಳಿಗೆಗಳನ್ನು ಆರಂಭಿಸಲಾಗುವುದು ಇದರಿಂದ ನಿಗಮಕ್ಕೆ ಹಾಗೂ ಸರ್ಕಾರಕ್ಕೆ ಹೆಚ್ಚಿನ ಲಾಭ ಮಾಡಿಕೊಡುವ ಉದ್ದೇಶ ಹೊಂದಲಾಗಿದೆ ಎಂದರು. ಸರ್ಕಾರಿ ಶಾಲೆ ಹಾಗೂ ಸರ್ಕಾರಿ ಕಚೇರಿಗಳಿಗೆ ಅರಣ್ಯ ಕೈಗಾರಿಕಾ ನಿಗಮದಿಂದಲೇ ತಯಾರಿಸಿದ ಕುರ್ಚಿ, ಟೇಬಲ್, ಬೆಂಚುಗಳನ್ನು ಇನ್ನು ಮುಂದೆ ಸರಬರಾಜು ಮಾಡಲು ಕ್ರಮ…
ಬೆಂಗಳೂರು: ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಅರಣ್ಯ ಕೈಗಾರಿಕಾ ನಿಗಮದಿಂದಲೇ ಪೀಠೋಪಕರಣಗಳನ್ನು ಪೂರೈಕೆ ಮಾಡಲಾಗುತ್ತದೆ ಎಂಬುದಾಗಿ ಅರಣ್ಯ ಕೈಗಾರಿಕಾ ನಿಗಮದ ನೂತನ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಇಂದು ಅರಣ್ಯ ಕೈಗಾರಿಕಾ ನಿಗಮದ ನೂತನ ಅಧ್ಯಕ್ಷರಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿಗಮದ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಶಂಕಿನಮಠ, ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಸೂಡಾ ಮಾಜಿ ಅಧ್ಯಕ್ಷ ರಮೇಶ್, ಜಿಲ್ಲಾ ಈಡಿಗರ ಸಂಘದ ಅಧ್ಯಕ್ಷ ಶ್ರೀದರ್, ಈಡಿಗ ಸಂಘದ ರಾಜ್ಯಾಧ್ಯಕ್ಷ ತಿಮ್ಮೇಗೌಡ, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ, ಕಾಂಗ್ರೆಸ್ ಹಿರಿಯ ಮುಖಂಡ ಶ್ರೀಕಾಂತ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಆಗಮಿಸಿ ಶುಭ ಕೋರಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಅರಣ್ಯ ಕೈಗಾರಿಕಾ ನಿಗಮದವತಿಯಿಂದ ಇನ್ನು ಮುಂದೆ ನೂತನವಾಗಿ ಲಿಡ್ಕರ್ ಮಾದರಿಯಲ್ಲಿ ಆಸನ ಪೀಠಪೋಕರಣಗಳ ಮಳಿಗೆಗಳನ್ನು ಆರಂಭಿಸಲಾಗುವುದು ಇದರಿಂದ ನಿಗಮಕ್ಕೆ ಹಾಗೂ ಸರ್ಕಾರಕ್ಕೆ ಹೆಚ್ಚಿನ ಲಾಭ ಮಾಡಿಕೊಡುವ ಉದ್ದೇಶ ಹೊಂದಲಾಗಿದೆ ಎಂದು…
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.40% ಕಮೀಷನ್ ದಂಧೆ ನಡೆಯುತ್ತಿದೆ ಎಂಬುದಾಗಿ ಕಿಡಿಕಾರಿದ್ವಿ. ಈಗ ನಮ್ಮದೇ ಸರ್ಕಾರದಲ್ಲಿ ಅದಕ್ಕಿಂತ ಹೆಚ್ಚು ಕಮೀಷನ್ ದಂಧೆ ನಡೆಯುತ್ತಿದೆ. ಇದನ್ನ ನಾನು ಮುಖ್ಯಮಂತ್ರಿ ಸಿದ್ಧರಾಮಯ್ಯ ಎದುರೇ ಹೇಳಿದ್ದೇನೆ ಎಂಬುದಾಗಿ ಸ್ವ ಪಕ್ಷದ ವಿರುದ್ಧವೇ ಕಾಂಗ್ರೆಸ್ ಶಾಸಕ ಶಿವರಾಂ ಗುಡುಗಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಇದನ್ನು ಅವತ್ತು ನಾನು ಮುಖ್ಯಮಂತ್ರಿ ಎದುರಿಗೆ ನೇರವಾಗಿ ಹೇಳಿದೆ. ನಮ್ಮ ಜಿಲ್ಲೆಗೆ ಕೆಟ್ಟ ಹೆಸರು ಬರ್ತಾ ಇದೆ. ಸರಿಯಾಗಿ ಬುದ್ಧಿ ಹೇಳಿ ಅಂತ ನೇರವಾಗೇ ಹೇಳಿದೆ. ನಾನೊಬ್ಬನೇ ಅಲ್ಲ ಎಲ್ಲರೂ ಹೇಳಿದ್ವಿ ಎಂದರು. ಪಕ್ಷ ಉಳಿಯಬೇಕಾದ್ರೇ ಇವುಗಳನ್ನೆಲ್ಲ ಕಾಪಾಡಿಕೊಳ್ಳಬೇಕು. ನಾನು ನೇರವಾಗಿ ಹೇಳಿದ್ದಕ್ಕೆ ನಿಷ್ಟೂರವಾದಿ. ಇಷ್ಟು ಆಕ್ರೋಶ ಆಗೋದಕ್ಕೆ ಇದೇ ಕಾರಣ. ನಾನು ಶೇ.40ರಷ್ಟು ಬಿಜೆಪಿ ಅವಧಿಯಲ್ಲಿ ಕಮೀಷನ್, ಭ್ರಷ್ಟಾಚಾರ ದಂಧೆ ನಡೆಯುತ್ತಿತ್ತು. ಈಗ ಅದಕ್ಕಿಂತ ಹೆಚ್ಚು ಎಂದು ಹೇಳುತ್ತಿದ್ದೇನೆ ಎಂಬುದಾಗಿ ಆಕ್ರೋಶವನ್ನು ಹೊರ ಹಾಕಿದರು. ಎಕ್ಸ್ ಮಾಡಿ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಿಡಿ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಮಾಡಿದ್ದ…