Author: kannadanewsnow09

ಬೆಂಗಳೂರು: ಕಳೆದ ಎಂಟು ತಿಂಗಳಿಂದ ರೈತರಿಗೆ ಸರ್ಕಾರ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಎಂಟು ತಿಂಗಳಿಂದ ಹಾಲಿನ 5 ರೂ. ಪ್ರೋತ್ಸಾಹಧನ ನೀಡಿಲ್ಲ. ಸುಮಾರು 700 ಕೋಟಿ ರೂಪಾಯಿಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಜನರಿಗೆ ತೆರಿಗೆ ಹಾಕಿ ಅವರಿಂದ ವಸೂಲಿ ಮಾಡಿ ನಂತರ ಮಹಿಳೆಯರಿಗೆ ಹಣ ನೀಡುತ್ತೇವೆ ಎಂದು ನಾಟಕವಾಡಿದ್ದಾರೆ. ಉಚಿತ ಕೊಡುವ ಬದಲು ವಿದ್ಯಾರ್ಥಿಗಳಿಗೆ ಉಚಿತ ಪಾಸ್‌, ಶಾಲೆ, ಆಸ್ಪತ್ರೆ ನಿರ್ಮಾಣ ಮೊದಲಾದ ಯೋಜನೆಗಳನ್ನು ನೀಡಬೇಕಿತ್ತು. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಡ ಎಂದರು. ಖಜಾನೆ ಖಾಲಿ ಮಾಡಿಕೊಂಡ ಬಳಿಕ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಕಳೆದ 50 ವರ್ಷದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ತಿಳಿಸಲು ಸವಾಲು ಹಾಕುತ್ತೇನೆ. ಕಾಂಗ್ರೆಸ್‌ನ ಯೋಗ್ಯತೆಗೆ…

Read More

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಸಿದ್ಧರಾಮಯ್ಯ ಕೆಳಗೆ ಇಳಿದ 24 ಗಂಟೆಯಲ್ಲೇ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಗೆ ತೆಗೆದುಕೊಳ್ತೀವಿ ಅಂತ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ. ಭಯೋತ್ಪಾದನಾ ಚಟುವಟಿಕೆಗೆ ಅವರು ಹೇಳಿದ ಮಾತೆಲ್ಲ ಸುಳ್ಳಾಯಿತು. ಅವರು ಗೃಹಸಚಿವ ಅಮಿತ್‌ ಶಾ ಬಗ್ಗೆ ಹೇಳಿದ ಮಾತಿಗೆ ಬೆಲೆ ಕೊಡಬೇಕಾಗಿಲ್ಲ. 28 ಸ್ಥಾನದಲ್ಲಿ ಕೆಲವು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟಿದ್ದು, ಅಲ್ಲಿ ಯಾರು ಸ್ಪರ್ಧಿಸಬೇಕೆಂದು ಜೆಡಿಎಸ್‌ ತೀರ್ಮಾನಿಸುತ್ತದೆ. ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಅವರ ಜೊತೆಗೆ ಇದ್ದು ಮೊದಲಿಗೆ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್ಸೇ ಉತ್ತರ ನೀಡಬೇಕು. ಪ್ರಜ್ವಲ್‌ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು ಏನು ಮಾಡುತ್ತಿದ್ದರು? ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಕಾಂಗ್ರೆಸ್‌ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ ಎಂದು ಒಪ್ಪಿಕೊಳ್ಳಲಿ ಎಂದರು. ಈ ದೇಶದ ಕಾನೂನಿಗೆ, ಸಂವಿಧಾನಕ್ಕೆ ಬಿಜೆಪಿ ಗೌರವ ನೀಡುತ್ತದೆ. ಯಾವುದೇ ಕಾರಣಕ್ಕೂ…

Read More

ಬೆಂಗಳೂರು: ಇಂದಿನಿಂದ ಮೇ.5ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಯ ಬಿಸಿಗಾಳಿ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಡ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕೇಂದ್ರ ಹವಾಮಾನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, Dated: 01.05.2024 ದಿನ 1 (01.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದಿದೆ. ದಿನ 2 (02.05.2024): ಪ್ರತ್ಯೇಕ ಸ್ಥಳಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ತೀವು ಶಾಖದ ಅಲೆಯ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು…

Read More

ಬೆಂಗಳೂರು: ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಲು ಅವಕಾಶ ಮಾಡಿಕೊಟ್ಟಿದೆ. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಕೇಸ್ ಹೊರ ಬರುತ್ತಿದ್ದಂತೆ ಎಸ್ಐಟಿ ಯಾಕೆ ಅವರ ಮೇಲೆ ಕಣ್ಣಿಡಲಿಲ್ಲ ಎಂಬುದಾಗಿ ಬಿಜೆಪಿ ವಕ್ತಾರ ಪ್ರಕಾಶ್ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಅವಕಾಶ ಮಾಡಿದ್ದು ರಾಜ್ಯ ಸರಕಾರ. ಅವನ ವಿರುದ್ದ SIT ರಚನೆಯಾದ ತರುವಾಯ ಅವನ ಮೇಲೆ ನಿಗಾ ಇಡಬೇಕಾದ್ದು ರಾಜ್ಯ ಸರಕಾರದ ಕೆಲಸ ಎಂದು ತಿಳಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ನಿಯುಕ್ತಿಯಾಗಿರುವ ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಅವನನ್ನು ವಿದೇಶಕ್ಕೆ ಹೋಗದಂತೆ ಯಾವ ಕಾರಣಕ್ಕೆ ತಡೆಯಲಿಲ್ಲ? ಸಿದ್ಧರಾಮಯ್ಯನವರೇ ಉತ್ತರಿಸಿ ಎಂದು ಆಗ್ರಹಿಸಿದ್ದಾರೆ. https://twitter.com/sprakaashbjp/status/1785617499964440793 https://kannadanewsnow.com/kannada/diarrhoea-cholera-cases-health-department-instructs-to-take-precautionary-measures/ https://kannadanewsnow.com/kannada/we-will-commit-suicide-if-we-dont-want-to-victims-reluctant-to-comment-before-sit/

Read More

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿ ಹೆಚ್ಚಾದಂತೆ, ಅತಿಸಾರ ಬೇದಿ, ಕಾಲರಾ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಈ ಹಿನ್ನಲೆಯಲ್ಲಿ ಕೆಲ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದ್ದು, ಬೇಸಿಗೆ ಕಾಲದಲ್ಲಿ ಅತಿಸಾರ ಬೇದಿ / ಕಾಲರ ಸೋಂಕುಗಳ ಪುಕರಣಗಳು ಸಾಮಾನ್ಯವಾಗಿದ್ದು ಯಾವುದೇ Outbreakಗಳು ಸಂಭವಿಸದಂತೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸುವುದು ಆದ್ಯ ಕರ್ತವ್ಯವಾಗಿರುತ್ತದೆ. ಆದರೂ ಸಹ Outbreak ಸಂಭವಿಸಿದಲ್ಲಿ ಅದನ್ನು ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳು ಸಮರ್ಪಕವಾಗಿ ನಿಭಾಯಿಸಲು ಸಿದ್ಧರಾಗಿರುವುದು ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಇಂತಹ ಪ್ರಕರಣಗಳ ಹರಡುವಿಕೆಯನ್ನು ತಗ್ಗಿಸಲು ಮತ್ತು ಔಟ್ ಬ್ರೇಕ್ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು ಈ ಕೆಳಕಂಡಂತಿದೆ. 1. 24/7 ತಾತ್ಕಾಲಿಕ ಚಿಕಿತ್ಸಾಲಯಗಳ ಸ್ಥಾಪನೆ ಸಕ್ರಿಯ ಪ್ರಕರಣಗಳ ನಿರ್ವಹಣೆ ಮತ್ತು ತುರ್ತು ರೋಗ ನಿಯಂತ್ರಣಕ್ಕಾಗಿ 24/7 ತಾತ್ಕಾಲಿಕ ಚಿಕಿತ್ಸಾಲಯಗಳ ಸ್ಥಾಪನೆ, ತುರ್ತು ಔಷಧಿಗಳ (IV fluids, ORS, antibiotics…

Read More

ಬೆಂಗಳೂರು: ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿರುವಂತ ಸಂಸದ ಪ್ರಜ್ವಲ್ ರೇವಣ್ಣ ಅವರು, ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಸಿಐಡಿಯ ಎಸ್ಐಟಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ತಮ್ಮ ವಕೀಲರ ಮೂಲಕ ಪತ್ರವನ್ನು ಕಳುಹಿಸಿರುವಂತ ಅವರು, ಅದರಲ್ಲಿ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರವರ ಮನೆಯ ಮೇಲೆ ತಮ್ಮ ಕಛೇರಿಯಿಂದ ಕಳುಹಿಸಿರುವ ನೋಟಿಸನ್ನು ಅಂಟಿಸಿರುವ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರವರ ಕುಟುಂಬದವರಿಂದ ಬಂದ ಮಾಹಿತಿ ಪ್ರಕಾರ ಕಲಂ 41 (ಎ) ಸಿ.ಆರ್.ಪಿ.ಸಿ ದಿನಾಂಕ:30-04-2024ರ ತಮ್ಮ ನೋಟಿಸ್ ನಲ್ಲಿ ತಾವು ದಿನಾಂಕ:01-05-2024 ರಂದು ತಮ್ಮ ಮುಂದೆ ಹಾಜರಾಗಲು ತಿಳಿಸಿರುತ್ತೀರಿ ಎಂದಿದ್ದಾರೆ. ಆದರೆ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರೇವಣ್ಣ ರವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಿದ್ದು, ನನ್ನ ಕಕ್ಷಿದಾರರು ಬೆಂಗಳೂರಿಗೆ ಬಂದು ತಮ್ಮ ಮುಂದ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ…

Read More

ಬೆಂಗಳೂರು: ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟದಿರುವ ಅವರು; ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲಿನ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ. ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಕೃಷಿ ಅನುದಾನಕ್ಕೆ 32% ಕತ್ತರಿ ಹಾಕಿದ್ದಾಯಿತು. ಈಗ ಹೈನುಗಾರರ ಸಬ್ಸಿಡಿಗೂ ಪಂಗನಾಮ. ಒಂದು ಲೀಟರ್ ಹಾಲಿನ ಸಬ್ಸಿಡಿಯನ್ನು ₹7 ಹೆಚ್ಚಿಸುತ್ತೇವೆ ಎಂದು ಚುನಾವಣೆ ವೇಳೆ ಕಾಂಗ್ರೆಸ್ ಸುಳ್ಳು ಹೇಳಿದ್ದೇ ಹೇಳಿದ್ದು. ಹೆಚ್ಚಿಸುವ ಮಾತಿರಲಿ, ಇದ್ದ ಸಬ್ಸಿಡಿಯನ್ನೂ (ಲೀಟರ್ ಹಾಲಿಗೆ ₹5) ಕೊಡದೇ 7 ತಿಂಗಳಿಂದ ಸತಾಯಿಸುತ್ತಿದೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಗೋವಿನ ಆಹಾರವಾದ ಹಿಂಡಿ, ಬೂಸಾ ಬೆಲೆ…

Read More

ಬೆಂಗಳೂರು: ಹಾಸನ ಪೆನ್ ಡ್ರೈವ್ ಕೇಸ್ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಹೊರ ಹಾಕಿದ್ದಾರೆ. ಅಶ್ಲೀಲ ವೀಡಿಯೋ ಕೇಸ್ ಸಂಬಂಧ ಸತ್ಯ ಆದಷ್ಟು ಬೇಗ ಹೊರ ಬರಲಿದೆ ಎಂಬುದಾಗಿ ಹೇಳಿದ್ದಾರೆ. ಇಂದು ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಈ ಬಗ್ಗೆ ಬರೆದು ಪೋಸ್ಟ್ ಮಾಡಿರುವಂತ ಅವರು, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ತಿಳಿಸಿದ್ದಾರೆ. ಇನ್ನೂ ಸಿಐಡಿ ಎಸ್ಐಟಿ ತಂಡ ನೀಡಿರುವಂತ ನೋಟಿಸ್ ಗೆ ತಮ್ಮ ವಕೀಲರ ಮೂಲಕ ಪ್ರತ್ಯುತ್ತರ ನೀಡಿರುವಂತ ಸಂಸದ ಪ್ರಜ್ವಲ್ ರೇವಣ್ಣ ಅವರು, ನನ್ನ ಕಕ್ಷಿದಾರರು ವಿದೇಶದಲ್ಲಿ ಇದ್ದಾರೆ. ಅವರಿಗೆ ನೋಟಿಸ್ ನೀಡಿರುವ ಬಗ್ಗೆ ತಿಳಿಸಲಾಗಿದೆ. 7 ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗಲಿದ್ದಾರೆ. ಅಲ್ಲಿಯವರೆಗೆ ಕಾಲಾವಕಾಶ ನೀಡುವಂತೆ ಕೋರಿದ್ದಾರೆ. ಒಟ್ಟಾರೆಯಾಗಿ ಮೇ.3ರಂದು ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಿಂದ ಬರಲಿದ್ದಾರೆ ಎನ್ನಲಾಗಿತ್ತು. ಇದೀಗ…

Read More

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಭಾಗಿಯಾಗಿ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವಂತ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಸಿಎಂ ಸಿದ್ಧರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇಂದು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವಂತ ಸಿಎಂ ಸಿದ್ಧರಾಮಯ್ಯ ಅದರಲ್ಲಿ, 2024 ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಮತ್ತು ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಮಾಡಿದ್ದಾರೆ ಎಂಬ ಗಂಭೀರ ಪ್ರಕರಣ ನಿಮಗೆ ತಿಳಿದಿರಬೇಕು. ಹಾಸನ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಎದುರಿಸುತ್ತಿರುವ ಆರೋಪಗಳು ಭಯಾನಕ ಮತ್ತು ನಾಚಿಕೆಗೇಡಿನ ಸಂಗತಿಯಾಗಿದ್ದು, ಇವು ದೇಶದ ಆತ್ಮಸಾಕ್ಷಿಯನ್ನು ಅಲುಗಾಡಿಸಿವೆ ಎಂದಿದ್ದಾರೆ. ನಮ್ಮ ಸರ್ಕಾರವು 28/04/2024 ರಂದು ಅಪರಾಧ ತನಿಖಾ ಇಲಾಖೆ (ಸಿಐಡಿ) ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದೆ ಮತ್ತು ತನಿಖೆ ಸರಿಯಾದ ಶ್ರದ್ಧೆಯಿಂದ ಪ್ರಾರಂಭವಾಗಿದೆ. ಹಲವಾರು ಮಹಿಳೆಯರ ವಿರುದ್ಧದ ಅಪರಾಧಗಳ ನಿಜವಾದ…

Read More

ಯಾದಗಿರಿ : “ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ನಾರಿ ಶಕ್ತಿ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವವಿದ್ದರೆ ಮೊದಲು ಸಂತ್ರಸ್ತರ ಮನೆಗೆ ಹೋಗಿ ಆ ಮಹಿಳೆಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಯಾದಗಿರಿಯ ದೇವತ್ಕಲ್ ನ ಹೆಲಿಪ್ಯಾಡ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಪೆನ್ ಡ್ರೈವ್ ಪ್ರಕರಣದ ಹಿಂದೆ ಮಹಾನಾಯಕರ ಕೈವಾಡವಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ; “ದೇವರಾಜೇ ಗೌಡ ಈ ಪೆನ್ ಡ್ರೈವ್ ವಿಚಾರವಾಗಿ ಯಾರನ್ನೆಲ್ಲಾ ಭೇಟಿ ಮಾಡಿದ್ದರು ಎಂದು ನಮ್ಮ ವಕ್ತಾರರು ವಿವರಿಸಿದ್ದಾರೆ. ಈ ವಿಚಾರವಾಗಿ ದೇವರಾಜೇ ಗೌಡ, ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು, ಅಲ್ಲದೇ ಬಿಜೆಪಿ ನಾಯಕರಿಗೆ ಈ ವಿಚಾರ ತಿಳಿಸಿದ್ದರು. ನಾವು ಈ ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಬೇರೆ ರೀತಿಯೇ ಮಾಡಬಹುದಾಗಿತ್ತು. ನಮಗೆ ಅದರ ಅಗತ್ಯವಿಲ್ಲ. ಈ ವಿಚಾರಗಳ ಬಗ್ಗೆ ನಾನು…

Read More