Author: kannadanewsnow09

ಬೆಂಗಳೂರು : ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೇ ಉಳಿದಿರುವ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಈ ಹಿಂದೆ ಕೋವಿಡ್-19 ಲಸಿಕೆ ಪಡೆಯದೇ ಇರುವ ಆರೋಗ್ಯ ಕಾರ್ಯಕರ್ತೆಯರು ಮತ್ತು ಈ ಗುಂಪಿಗೆ ಸೇರಿದ ಫಲಾನುಭವಿಗಳು ಜಿಲ್ಲಾಸ್ಪತ್ರೆ ಅಥವಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆ ಪಡೆದುಕೊಳ್ಳಬಹುದು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಆರೋಗ್ಯ ಇಲಾಖೆಯು, ಸರ್ಕಾರದ ಮಾರ್ಗಸೂಚಿಯಂತೆ ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕಾರಣ ಯಶಸ್ವಿಯಾಗಿ ಅನುಷ್ಟಾನಗೊಂಡಿದೆ. ಆದರೆ ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಡೋಸ್ ಪಡೆದೇ ಇರುವ ಫಲಾನುಭವಿಗಳು ಜಿಲ್ಲಾಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಪಡೆದುಕೊಳ್ಳಬೇಕು. ಜಿಲ್ಲೆಗೆ 820 ಡೋಸ್ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆ ಸರಬರಾಜಾಗಿದ್ದು ಮುನ್ನೆಚ್ಚರಿಕೆ ಡೋಸ್ ಆಗಿ ಬಳಸಲು ಸೂಚಿಸಿದೆ. ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ವಿಜಾತಿ(ಹೆಟೆರೊಲಾಗಸ್)ಮುನ್ನೆಚ್ಚರಿಕೆ ಡೋಸ್ ಆಗಿ ನೀಡಬಹುದಾಗಿರುತ್ತದೆ. ಆದ್ದರಿಂದ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2 ಡೋಸ್ ಲಸಿಕೆ…

Read More

ಶಿವಮೊಗ್ಗ : ಜನ ಆರೋಗ್ಯ ಕೇಂದ್ರ, ಎಪಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್-ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅನುಷ್ಠಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರು ಹಾಗೂ ಯುವ ಸಮಾಲೋಚಕರನ್ನು ಅಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಜಿಲ್ಲೆಗೆ 3 ಪುರುಷ ಹಾಗೂ 2 ಮಹಿಳೆಯರು ಸೇರಿ 5 ಜನ ಯುವ ಪರಿವರ್ತಕರನ್ನು ಅಯ್ಕೆ ಮಾಡಲಾಗುವುದು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹಾಗೂ 21 ರಿಂದ 35 ವರ್ಷದೊಳಗಿನ ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು ಗೌರವಧನವಾಗಿ ರೂ. 7,000/-ಗಳನ್ನು ನೀಡಲಾಗುವುದು. ಪ್ರತಿ ಜಿಲ್ಲೆಗೆ ಓರ್ವ ಯುವ ಸಮಾಲೋಚಕರನ್ನು ಆಯ್ಕೆ ಮಾಡಲಾಗುವುದು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ…

Read More