Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ತಕ್ಷಣ ಬಗೆಹರಿಸಬೇಕು. ಒಂದು ಮಾರ್ಗದ ಬಸ್ ಸಂಚಾರ ನಿಲ್ಲಿಸಿದರೆ ಅದನ್ನು ಅವಲಂಬಿಸಿಕೊoಡವರಿಗೆ ಆಗುವ ಸಮಸ್ಯೆಯನ್ನು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ, ಮಾಜಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕೆ.ಎಸ್.ಆರ್.ಟಿ.ಸಿ. ಡಿಪೋ ಎದುರು ಯಡಜಿಗಳೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಿಂದ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಯಡಜಿಗಳೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿದ್ಯಾರ್ಥಿಗಳು, ಗ್ರಾಮಸ್ಥರು, ರೋಗಿಗಳು ಸಾಗರಕ್ಕೆ ಬರುವ ಬಸ್‌ಗಳನ್ನು ಅವಲಂಭಿಸಿಕೊoಡಿದ್ದಾರೆ ಎಂದರು. ನಾನು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷನಾಗಿದ್ದಾಗ ತಾಲ್ಲೂಕಿನ ಬೇರೆಬೇರೆ ಮಾರ್ಗಗಳಿಗೆ ತುರ್ತು ಬಸ್ ಸೌಲಭ್ಯ ಕಲ್ಪಿಸಲು ಸಂಬoಧಪಟ್ಟ ಅಧಿಕಾರಿಗಳ ಮೇಲೆ ಒತ್ತಡ ತರಲಾಗಿತ್ತು. ಈ ಭಾಗದ 11 ರೂಟ್‌ಗಳಿಗೆ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ಬಸ್ ಸೌಲಭ್ಯ ನಿಲ್ಲಿಸಲಾಗಿದ್ದು ಜನರು ತೀವೃ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಧಿಕಾರಿಗಳಿಗೆ ಮೌಖಿಕವಾಗಿ ಸಾಕಷ್ಟು ಬಾರಿ…
ಮಂಡ್ಯ : ಮಾರ್ಚ್ 23 ರಿಂದ ಏಪ್ರಿಲ್ 5 ರ ವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ ಮತ್ತು ಉತ್ಸವ ಆಚರಣೆ ಮಾಡಲಾಗುತ್ತದೆ. ಮಾರ್ಚ್ ಮಾಹೆಯ ಬೇಸಿಗೆ ಇರುವುದರಿಂದ ಬ್ರಹ್ಮೋತ್ಸವಕ್ಕೆ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ. ಹಾಲಿ ಇರುವ ನೀರಿನ ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಶ್ರೀ ವೈರಮುಡಿ ಬ್ರಹ್ಮೋತ್ಸವ -2026 ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವೈರಮುಡಿ ಬ್ರಹ್ಮೋತ್ಸವ ನಡೆಯುವ ಸ್ಥಳದಲ್ಲಿ ಸೂಕ್ತ ಬ್ಯಾರಿಕೇಡ್ ವ್ಯವಸ್ಥೆ ಮಾಡಿ. ಈಗಾಗಲೇ ಜನಸಂದಣಿ ಹೊಂದುವ ಕಡೆ ಸಿ.ಸಿ.ಟಿ.ವಿ ವ್ಯವಸ್ಥೆ ಇದೆ. ಅಗತ್ಯ ಇರುವ ಕಡೆ ಹೆಚ್ಚುವರಿ ಸಿ.ಸಿ ಟಿ ವಿ ಅಳವಡಿಸಿ. ವಾಹನಗಳ ನಿಲುಗಡೆಗೆ ಅಗತ್ಯ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ. ಕೊಳದ ಬಳಿ ನೂರಿತ ಈಜು ಪಡೆ, ಅಗ್ನಿಶಾಮಕ ಸಿಬ್ಬಂದಿಗಳನ್ನು ನಿಯೋಜಿಸಿ ಎಂದು…
ಮಂಡ್ಯ: ಬೂದನೂರು ಉತ್ಸವ ಪ್ರಯುಕ್ತ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯದಲ್ಲಿ ನಾಳೆ ಫೆ. 20 ರಂದು ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್ ರೈಡ್ಸ್) ಆರಂಭವಾಗುವ ಸಂಬಂಧ ಇಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿ ಹೆಲಿಪ್ಯಾಡ್ ನಿಲ್ದಾಣದ ಸ್ಧಳದಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಸುರಕ್ಷತೆ, ವಾಹನ ನಿಲುಗಡೆ, ಮತ್ತು ತುರ್ತು ಸೇವೆಗಳ ಲಭ್ಯತೆ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು. https://kannadanewsnow.com/kannada/district-level-conference-of-havyaka-teachers-to-be-held-in-sagar-on-feb-22-mahasabha-director-h-b-a-ashok/ https://kannadanewsnow.com/kannada/breaking-6-years-243-petitions-hearing-of-citizenship-amendment-act-petitions-begins-in-supreme-court-from-may-5/
ಒಂದೊಂದು ದೇವತೆಗಳೂ ಒಂದೊಂದು ರೀತಿಯಲ್ಲಿ ಪೂಜೆ ಮಾಡುತ್ತಾರೆ. ನಾವು ಯಾವುದನ್ನು ಬಯಸುತ್ತೇವೆಯೋ ಅದನ್ನು ಯಾವುದೇ ದೇವರನ್ನು ಪ್ರಾರ್ಥಿಸಿದರೆ, ನಮಗೆ ತಕ್ಷಣದ ಫಲಿತಾಂಶಗಳು ಸಿಗುತ್ತವೆ. ಆದರೆ ಒಬ್ಬ ದೇವರಿಗೆ ಐದು ಗುಣಗಳಿದ್ದರೆ ಆ ದೇವರನ್ನು ಪೂಜಿಸಿದಾಗ ಐದು ದೇವತೆಗಳನ್ನು ಪೂಜಿಸಿದ ಲಾಭವನ್ನು ಪಡೆಯಬಹುದು. ಈ ರೀತಿಯಾಗಿ, ಈ ಮಂತ್ರದ ಬಗ್ಗೆ ನಾವು ಪೋಸ್ಟ್‌ನಲ್ಲಿ ನೋಡಲಿದ್ದೇವೆ , ಇಂದು ಪಂಚಮುಖ ಆಂಜನೇಯರನ್ನು ಯಾವ ಮಂತ್ರವನ್ನು ಪೂಜಿಸಿದರೆ ಪ್ರಯೋಜನಗಳು ಸಿಗುತ್ತವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಸಾಮಾನ್ಯವಾಗಿ ದೇವರ ಪೂಜೆಗೂ ಮಂತ್ರ ಪಠಣಕ್ಕೂ ವ್ಯತ್ಯಾಸವಿದೆ. ಮಂತ್ರವನ್ನು ಸರಿಯಾಗಿ ಪಠಿಸಿ ಪೂಜಿಸಿದರೆ ಆ ಮಂತ್ರದ ಲಾಭವನ್ನು ಬಹುಬೇಗ ಪಡೆಯಬಹುದು. ಅದರ ಆಧಾರದಲ್ಲಿ ಈ ಪೋಸ್ಟ್ ನಲ್ಲಿ ಪಂಚಮುಖ ಆಂಜನೇಯನ ಮಂತ್ರದ ಬಗ್ಗೆ…
ಶಿವಮೊಗ್ಗ: ಫೆಬ್ರವರಿ.22ರಂದು ಅಖಿಲ ಹವ್ಯಕ ಮಹಾಸಭಾ ವತಿಯಿಂದ ಬೆಳಿಗ್ಗೆ 6.30 ರಿಂದ ರಾತ್ರಿ 9.30ರವರೆಗೆ ರಾಘವೇಶ್ವರ ಸಭಾಭವನದಲ್ಲಿ ಶಿವಮೊಗ್ಗ ಜಿಲ್ಲಾ ಹವ್ಯಕ ಶಿಕ್ಷಕ ಸಮಾವೇಶ ಜ್ಞಾನಮ್ ನಡೆಯಲಿದೆ ಎಂಬುದಾಗಿ ಮಹಾಸಭಾದ ನಿರ್ದೇಶಕರ ಹು.ಭಾ ಅಶೋಕ್ ಮಾಹಿತಿ ನೀಡಿದ್ದಾರೆ. ಇಂದು ಶಿವಮೊಗ್ಗದ ಸಾಗರ ನಗರದಲ್ಲಿರುವಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರ, ಸಮಾವೇಶದಲ್ಲಿ ಅಂಗನವಾಡಿಯಿoದ ವಿಶ್ವವಿದ್ಯಾಲಯ ಹಂತದವರೆಗೆ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು. ಕಳೆದ 81 ವರ್ಷಗಳಿಂದ ಹವ್ಯಕ ಮಹಾಸಭಾ ಕೆಲಸ ಮಾಡಿಕೊಂಡು ಬರುತ್ತಿದೆ. ಪ್ರಸ್ತುತ ಡಾ. ಗಿರಿಧರ ಕಜೆ ಅವರ ಅಧ್ಯಕ್ಷತೆಯಲ್ಲಿ ವಿವಿಧ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದೆ. ಮಹಿಳಾ ಸಮಾವೇಶ, ವಕೀಲರು, ಇಂಜಿನಿಯರ್, ವೈದ್ಯರು, ಶಿಕ್ಷಕರ ಸಮಾವೇಶ ಅಯೋಜಿಸುವ ಮೂಲಕ ಸಂಘಟನೆಯನ್ನು ಇನ್ನಷ್ಟು ಸಮಾಜದ ಕಡೆ ತೆಗೆದುಕೊಂಡು ಹೋಗುವ ಪ್ರಯತ್ನ ನಡೆಸಲಾಗುತ್ತಿದೆ. ಹವ್ಯಕ ಸಮಾಜದವರು ಶಿಕ್ಷಣಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಜ್ಞಾನಮ್ ಘೋಷವಾಕ್ಯದದ ಮೂಲಕ ಶಿಕ್ಷಕರಿಂದ ವಿದ್ಯಾರ್ಥಿಗಳಿಗಾಗಿ ಭವಿಷ್ಯಕ್ಕೋಸರ…
ಬೆಂಗಳೂರು: ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದ 2026-27ನೇ ಸಾಲಿನ ಆಯವ್ಯಯದಲ್ಲಿ ಪ್ರಮುಖ ಯೋಜನೆಗಳನ್ನು ಘೋಷಿಸುವಂತೆ ಕೋರಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು, ಆರೋಗ್ಯ, ಕೃಷಿ, ತಂತ್ರಜ್ಞಾನ ಮತ್ತು ಆಡಳಿತ ಸುಧಾರಣೆಗೆ ಪೂರಕವಾದ 13 ಅಂಶಗಳನ್ನೊಳಗೊಂಡ ಸಮಗ್ರ ಪ್ರಸ್ತಾವನೆಯನ್ನು ಮಂಡಿಸಿದರು. ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಘಟಕ ಸ್ಥಾಪನೆ, ಹಾಲು ಉತ್ಪಾದಕರ ಪ್ರೋತ್ಸಾಹ ಧನ ಹೆಚ್ಚಳ, ಎಐ (AI) ತಂತ್ರಜ್ಞಾನದ ಅಳವಡಿಕೆ ಹಾಗೂ ರೈತರ ಸಾಲದ ಮಿತಿ ಹೆಚ್ಚಳದಂತಹ ಜನಪರ ಬೇಡಿಕೆಗಳನ್ನು ಬಜೆಟ್‌ನಲ್ಲಿ ಸೇರಿಸುವಂತೆ ಅವರು ಒತ್ತಾಯಿಸಿದ್ದಾರೆ. ಶಾಸಕ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಮನವಿಯಲ್ಲೇನಿದೆ 2026-27ನೇ ಸಾಲಿನ ಆಯವ್ಯಯದಲ್ಲಿ ಈ ಕೆಳಕಂಡ ಪ್ರಮುಖ ಅಂಶಗಳನ್ನು ಅಳವಡಿಸಿ ಘೋಷಣೆ ಮಾಡುವಂತೆ ತಮ್ಮಲ್ಲಿ…
ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ವಂಚನೆಯ ಮಹಾ ಮೋಸದ ಜಾಲ ಬೆಳಕಿಗೆ ಬಂದಿದೆ. ಶಾಕಿಂಗ್ ಎನ್ನುವಂತೆ ಬ್ಯಾಂಕ್ ನಲ್ಲಿ ಇರಿಸಿದ್ದಂತ ಗ್ರಾಹಕರ ಅಸಲಿ ಚಿನ್ನವೇ ನಾಪತ್ತೆಯಾಗಿರೋದಾಗಿ ಹೇಳಲಾಗುತ್ತಿದೆ. ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ಮಹಾ ಮೋಸ ಎನ್ನುವಂತೆ ಚಿಕ್ಕಮಗಳೂರಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯಲ್ಲಿ ನಡೆದಿರೋದು ಬೆಳಕಿಗೆ ಬಂದಿದೆ. ಇದರಲ್ಲಿ ಗ್ರಾಹಕರು ಇರಿಸಿದ್ದಂತ ಕೋಟ್ಯಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣವನ್ನೇ ಬ್ಯಾಂಕ್ ಸಿಬ್ಬಂದಿ ಲೂಟಿ ಮಾಡಿರೋದಾಗಿ ಆರೋಪಿಸಲಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಚಿಕ್ಕಮಗಳೂರು ಶಾಖೆಯ ಮ್ಯಾನೇಜರ್ ಸಂದೀಪ್ ಮತ್ತು ಸಿಬ್ಬಂದಿ ನಾರಾಯಣಸ್ವಾಮಿ ಸೇರಿದಂತೆ ಐವರ ವಿರುದ್ಧ ವಂಚನೆಯ ಆರೋಪ ಕೇಳಿ ಬಂದಿದೆ. ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂದಹಾಗೇ 2020ರಿಂದ 2025ರ ಅವಧಿಯಲ್ಲಿ ಚಿಕ್ಕಮಗಳೂರು ನಗರದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಬೃಹತ್ ಹಗರಣ ನಡೆದಿದೆ ಎಂದು ಹೇಳಲಾಗುತ್ತಿದೆ. ಗ್ರಾಹಕರೊಬ್ಬರ ಮಾಹಿತಿಯಂತೆ ಅವರ ಹೆಸರಿನಲ್ಲಿ ಹೆಚ್ಚುವರಿ ಗೋಲ್ಡ್ ಲೋನ್ ಮಾಡಿ ಹಣವನ್ನೇ…
ಬೆಂಗಳೂರು: ಇದೊಂದು ಸಂಘಟನಾತ್ಮಕ ಸಭೆಯಲ್ಲ; ಆತ್ಮಮಂಥನದ ಸಭೆ ಇದಾಗಿದೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ವಿವರಿಸಿದ್ದಾರೆ. ನಗರದ ಅರಮನೆ ಮೈದಾನದ ಗೇಟ್ ನಂ.4, ಗಾಯತ್ರಿ ಗ್ರ್ಯಾಂಡ್ ನಲ್ಲಿ ಇಂದು ನಡೆದ ರಾಜ್ಯ ಕಾರ್ಯಕಾರಿಣಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಜೀ ಅವರ ವಿಕಸಿತ ಭಾರತದ ವಿಚಾರಧಾರೆಯ ಮನನ ಮಾಡುವ ಸಭೆ ಇದು. ಸಂಘಟನೆ, ಭ್ರಷ್ಟ ಸರಕಾರವನ್ನು ಅಧಿಕಾರದಿಂದ ತೊಲಗಿಸಿ ಅಧಿಕಾರ ಮರಳಿ ಪಡೆಯುವ ಸಂಕಲ್ಪದ ಸಭೆ ಎಂದು ವಿಶ್ಲೇಷಿಸಿದರು. ಶಿವಾಜಿ ಮಹಾರಾಜರ ಸಂಘರ್ಷ ಇಂದಿಗೂ ನಮಗೆ ಪ್ರೇರಣಾದಾಯಿ ಎಂದು ತಿಳಿಸಿದ್ದಾರೆ. ಬಿಜೆಪಿ, ಸಾಂಸ್ಕೃತಿಕ ರಾಷ್ಟ್ರವಾದದ ಆಂದೋಲನ ಇದು ಎಂದು ತಿಳಿಸಿದರು. ಬಿಜೆಪಿ ಪಕ್ಷ ಉದಯಿಸಿದಾಗ, ಕತ್ತಲು ದೂರ ಸರಿದು, ಕಮಲ ಅರಳಲಿದೆ ಎಂದು ಅಟಲ್ ಜೀ ಅವರು ಹೇಳಿದ್ದನ್ನು ನೆನಪಿಸಿದರು. ಅದು ವೈಚಾರಿಕ ಪುನರ್ ಜಾಗರಣದ ಶಂಖನಾದ ಎಂದು ನುಡಿದರು. ಜನಸಂಘವು ಮೂಲಕ ನಮ್ಮ ಪಕ್ಷದ ಬೀಜ ರೂಪ. ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ…
ಮೈಸೂರು: ಪ್ರಯಾಣಿಕರ ಅನುಕೂಲಕ್ಕಾಗಿ, ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲಿನ ಅರಸಾಳು ನಿಲ್ದಾಣದ ನಿಲುಗಡೆ ಹಾಗೂ ರೈಲು ಸಂಖ್ಯೆ 16205/16206 ತಾಳಗುಪ್ಪ-ಮೈಸೂರು-ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಅರಸಾಳು ಮತ್ತು ಕುಂಸಿ ನಿಲ್ದಾಣಗಳ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. ಈ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯು 2026ರ ಫೆಬ್ರವರಿ 24ರಿಂದ ಆಗಸ್ಟ್ 23ರವರೆಗೆ ಮುಂದುವರಿಯಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ರೈಲುಗಳು ಈ ನಿಲ್ದಾಣಗಳಲ್ಲಿ ನಿಲ್ಲಲಿವೆ. https://kannadanewsnow.com/kannada/breaking-6-years-243-petitions-hearing-of-citizenship-amendment-act-petitions-begins-in-supreme-court-from-may-5/ https://kannadanewsnow.com/kannada/71-39-tax-collection-in-the-states-gram-panchayat-areas-minister-priyank-kharge/
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ 2025-26ನೆ ಸಾಲಿನಲ್ಲಿ ಫೆಬ್ರವರಿ 18ರವರೆಗೆ ಶೇ. 71.39ರಷ್ಟು ತೆರಿಗೆ ಸಂಗ್ರಹವಾಗಿದ್ದು, ಈ ವರ್ಷಾಂತ್ಯಕ್ಕೆ ಗುರಿ ತಲುಪುವ ಸಾಧ್ಯತೆಗಳು ನಿಚ್ಛಳವಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಟಣೆ ತಿಳಿಸಿದ್ದು, ಕಳೆದ ವರ್ಷಗಳಲ್ಲಿ ಉಳಿದಿರುವ ಬಾಕಿ ಕರ ಸಂಗ್ರಹಣೆಗೂ ತೀವ್ರ ಕ್ರಮ ಕೈಗೊಳ್ಳಲಾಗಿದೆ ಎಂಬ ವಿವರಗಳನ್ನು ನೀಡಿದೆ. “ಪ್ರಸಕ್ತ ಸಾಲಿನ ಬಾಕಿಯನ್ನು ಮಾರ್ಚ್ 2026ರ ಅಂತ್ಯದೊಳಗೆ ವಸೂಲಾತಿ ಮಾಡಿ ಪ್ರಗತಿ ಸಾಧಿಸಲಾಗುವುದು. ಹಿಂದಿನ ಸಾಲುಗಳ ತೆರಿಗೆ ಬಾಕಿ 3352.4 ಕೋಟಿಗಳಿದ್ದು ಆಸ್ತಿ ವರ್ಗೀಕರಣವಾರು ತೆರಿಗೆ ಬಾಕಿ ಪ್ರತ್ಯೇಕಿಸಿ ಸಂಗ್ರಹಿಸಲಾಗುತ್ತಿದೆ. ಕಳೆದ 5 ವರ್ಷಗಳಲ್ಲಿ ತೆರಿಗೆ ಬೇಡಿಕೆ ದ್ವಿಗುಣವಾಗಿದ್ದು, ತೆರಿಗೆ ವಸೂಲಾತಿಯ ಮೊತ್ತ ಕೂಡ ಹೆಚ್ಚಳವಾಗಿದೆ. ಆದ್ದರಿಂದ 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ” ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ಹಾಗೂ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ…














