Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಬುಕ್ ಮಾಡಿದ ಕಲ್ಯಾಣ ಮಂಟಪದಲ್ಲಿ ಆರೋಪಿಗಳು ಮದುವೆಯನ್ನು ನಡೆಸದಿರುವುದು ಐಪಿಸಿ ಸೆಕ್ಷನ್ 417 ರ ಅಡಿಯಲ್ಲಿ ಶಿಕ್ಷಾರ್ಹ ವಂಚನೆಯ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಹೇಳಿದೆ. ಪ್ರಸ್ತುತ ಮೇಲ್ಮನವಿದಾರರ ವಿರುದ್ಧ ಐಪಿಸಿಯ ಸೆಕ್ಷನ್ 417 ರ ಅಡಿಯಲ್ಲಿ ಅಪರಾಧವನ್ನು ಹೇಗೆ ಮಾಡಲಾಗುತ್ತದೆ ಎಂದು ನಮಗೆ ಕಾಣುತ್ತಿಲ್ಲ. ಮದುವೆ ಪ್ರಸ್ತಾಪವನ್ನು ಪ್ರಾರಂಭಿಸಲು ಮತ್ತು ನಂತರ ಪ್ರಸ್ತಾಪವು ಅಪೇಕ್ಷಿತ ಅಂತ್ಯವನ್ನು ತಲುಪದಿರಲು ಅನೇಕ ಕಾರಣಗಳಿರಬಹುದು. ಪ್ರಾಸಿಕ್ಯೂಷನ್ ಮುಂದೆ ಅಂತಹ ಯಾವುದೇ ಪುರಾವೆಗಳಿಲ್ಲ. ಆದ್ದರಿಂದ ಸೆಕ್ಷನ್ 417 ರ ಅಡಿಯಲ್ಲಿ ಯಾವುದೇ ಅಪರಾಧವನ್ನು ಸಹ ಮಾಡಲಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಒಟ್ಟಾರೆಯಾಗಿ ಮದುವೆಯಿಂದ ಹಿಂದೆ ಸರಿಯುವುದು ಐಪಿಸಿ ಸೆಕ್ಷನ್ 417ರ ಅಡಿಯಲ್ಲಿ ವಂಚನೆ ಅಪರಾಧವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ಪಟ್ಟಿದೆ.
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಮತ್ತೆ ವಿಧಾನ ಪರಿಷತ್ತಿನಲ್ಲಿ ಇಂದು ಮುಜುಗರ ಉಂಟಾಗಿದೆ. ಇಂದು ಮಂಡಿಸಲಾಗಿದ್ದಂತ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವು ತಿರಸ್ಕೃತಗೊಂಡಿದೆ. ಇಂದು ವಿಧಾನ ಪರಿಷತ್ತಿನಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವನ್ನು ಮಂಡಿಸಿದರು. ಆ ಬಳಿಕ ಉಪ ಸಭಾಪತಿ ಪ್ರಾಣೇಶ್ ಅವರು ಧ್ವನಿ ಮತಕ್ಕೆ ಹಾಕಿದರು. ವಿಧಾನ ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ವಿಧೇಯಕದ ಪರವಾಗಿ 7 ಮತಗಳು, ವಿರೋಧವಾಗಿ 18 ಮತಗಳು ಚಲಾಯಿಸಲಾಯಿತು. ಹೀಗಾಗಿ ವಿಧೇಯಕದ ವಿರೋಧವಾಗಿ ಹೆಚ್ಚು ಮತ ಚಲಾವಣೆಯಾದ ಕಾರಣ, ವಿಧಾನ ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕ ತಿರಸ್ಕೃತಗೊಂಡಿದೆ. ಹಿಂದೂ ಧಾರ್ಮಿಕ ದತ್ತಿ ವಿಧೇಯಕ ಪರಿಷತ್ ನಲ್ಲಿ ತಿರಸ್ಕೃತಗೊಳ್ಳುತ್ತಿದ್ದಂತೇ ಬಿಜೆಪಿ ಸದಸ್ಯರಿಂದ ಜೈ ಶ್ರೀರಾಮ ಎಂಬುದಾಗಿ ಘೋಷಣೆ ಕೂಗಲಾಯಿತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷದಿಂದ ಭಾರತ್ ಮಾತಾಕಿ ಜೈ, ಜೈ ಭೀಮ್ ಎಂಬುದಾಗಿ ಘೋಷಣೆ ಕೂಗಲಾಯಿತು. ಒಟ್ಟಾರೆಯಾಗಿ ರಾಜ್ಯ ಸರ್ಕಾರಕ್ಕೆ…
ನವದೆಹಲಿ: ಪುರುಷರ ರಾಷ್ಟ್ರೀಯ ತಂಡಗಳಿಗೆ ಆದ್ಯತೆ ನೀಡುತ್ತಿರುವ ಹಾಕಿ ಇಂಡಿಯಾವನ್ನು ತರಾಟೆಗೆ ತೆಗೆದುಕೊಂಡ ಕೆಲವೇ ದಿನಗಳಲ್ಲಿ ಭಾರತದ ಮಹಿಳಾ ಹಾಕಿ ತಂಡದ ತರಬೇತುದಾರ ಜನ್ನೆಕ್ ಸ್ಕೋಪ್ಮನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ವರ್ಷದ ಆಗಸ್ಟ್ನಲ್ಲಿ ಅಧಿಕಾರಾವಧಿ ಕೊನೆಗೊಳ್ಳಬೇಕಿದ್ದ ಸ್ಕೋಪ್ಮನ್ ತಮ್ಮ ಕೋಚ್ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿ ಹಾಕಿ ಇಂಡಿಯಾಕ್ಕೆ (ಎಚ್ಐ) ಕಳುಹಿಸಿದ್ದಾರೆ ಎಂದು ಈ ಬೆಳವಣಿಗೆಯ ಬಗ್ಗೆ ತಿಳಿದಿರುವ ಜನರು ದೃಢಪಡಿಸಿದ್ದಾರೆ. ಅವರು ಇನ್ನು ಮುಂದೆ ಮುಂದುವರಿಯಲು ಬಯಸುವುದಿಲ್ಲ ಎಂದು ಅವರು ತಮ್ಮ ಉದ್ದೇಶಗಳನ್ನು ಎಚ್ಐಗೆ ಸ್ಪಷ್ಟಪಡಿಸಿದ್ದಾರೆ. ಅವರು ರಾಜೀನಾಮೆಯನ್ನು ಕಳುಹಿಸಿದ್ದಾರೆ. ಎಲ್ಲಾ ಸಂಭವನೀಯತೆಗಳಲ್ಲಿ, ಇದನ್ನು ಸ್ವೀಕರಿಸಲಾಗುವುದು ಎಂದು ಬಲ್ಲ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 2024ರ ಪ್ಯಾರಿಸ್ ಒಲಿಂಪಿಕ್ಸ್ಗೆ ಮಹಿಳಾ ತಂಡ ಅರ್ಹತೆ ಪಡೆಯದ ಕಾರಣ ಆರಂಭವಾದ ಕಹಿ ಕಥೆಗೆ ತೆರೆ ಎಳೆದಿದೆ. ಒಲಿಂಪಿಕ್ಸ್ಗೆ ಅರ್ಹತೆ ಪಡೆಯಲು ಭಾರತ ತಂಡವು ಎರಡು ಅವಕಾಶಗಳನ್ನು ಕಳೆದುಕೊಂಡಿತು. ಮೊದಲು ಏಷ್ಯನ್ ಕ್ರೀಡಾಕೂಟದಲ್ಲಿ ಮತ್ತು ನಂತರ ರಾಂಚಿಯಲ್ಲಿ ನಡೆದ ಎಫ್ಐಎಚ್ ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿ ತಂಡವು…
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕೂಡ 4 ತಂಡಗಳನ್ನು ಮಾಡಿ ಮುಂದಿನ ವಾರದಿಂದ ಆ ಎಲ್ಲ ತಂಡಗಳು ಪ್ರವಾಸ ಪ್ರಾರಂಭಿಸಲಿವೆ. ಕೇಂದ್ರದ ನಾಯಕರು ಜೊತೆಗೂಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದ ಉಸ್ತುವಾರಿ ರಾಧಾಮೋಹನ್‍ದಾಸ್ ಅಗರ್‍ವಾಲ್ ಅವರು ಇವತ್ತಿನ ಸಭೆಯಲ್ಲಿ ಉಪಸ್ಥಿತರಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಪ್ರಮುಖರ ವಿಶೇಷ ಸಭೆ ನಡೆಸಲಾಗಿದೆ ಎಂದು ವಿವರಿಸಿದರು. ಪ್ರತಿಯೊಂದು ಲೋಕಸಭಾ ಕ್ಷೇತ್ರಗಳ ಅತ್ಯಂತ ತಳಮಟ್ಟದ ವರದಿಯ ಕುರಿತು ವಿಸ್ತøತ ಚರ್ಚೆ ಆಗಿದೆ. ಆಂತರಿಕ ವರದಿ ಪ್ರಕಾರ 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವಂಥ ಸ್ಥಿತಿ ಇದೆ. ತಳಮಟ್ಟದಲ್ಲಿ ಪಕ್ಷದ ಚಟುವಟಿಕೆಗಳು, ರಾಜ್ಯ ನಾಯಕರ ಲೋಕಸಭಾ ಕ್ಷೇತ್ರವಾರು ಪ್ರವಾಸ ಮತ್ತು ಕೇಂದ್ರದ ನಾಯಕರು ರಾಜ್ಯ ಪ್ರವಾಸ ಮಾಡಿದಾಗ ಕಾರ್ಯಕ್ರಮ ಮತ್ತು ಚಟುವಟಿಕೆಗಳ ಕುರಿತು…
ಬೆಂಗಳೂರು: ಶಾಸಕರನ್ನು ನಿಂದಿಸಿದ ಆರೋಪದಲ್ಲಿ ರಾಜ್ಯ ಸರ್ಕಾರದಿಂದ ಐಎಎಫ್ ಅಧಿಕಾರಿ ಶಿವಾನಂದ ನಾಯಕವಾಡ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಇಲಾಖೆಯ ಸರ್ಕಾರದ ಅಧೀನಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಎಚ್ಒಎಫ್) ದಿನಾಂಕ: 18.01.2024 ರಂದು (1) ಓದಿದ ಪತ್ರದಲ್ಲಿ, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ (ವಿಚಕ್ಷಣ) ತನಿಖಾ ವರದಿಯ ಆಧಾರದ ಮೇಲೆ ಬೆಳಗಾವಿ ಜಿಲ್ಲೆಯ ರಾಯಬಾಗ ವಿಧಾನಸಭಾ ಕ್ಷೇತ್ರದ ಶಾಸಕ ದುರ್ಯೋಧನ ಎಂ.ಐಹೊಳೆ ಅವರೊಂದಿಗೆ ಐಎಫ್ಎಸ್ ಶಿವಾನಂದ ನಾಯ್ಕವಾಡಿ ಅವರ ದೂರವಾಣಿ ಸಂಭಾಷಣೆಯಲ್ಲಿ ಅನುಚಿತ ಭಾಷೆಯನ್ನು ಬಳಸಿದ್ದಾರೆ ಎಂದು ವರದಿ ಮಾಡಿದ್ದಾರೆ. ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವಿಚಕ್ಷಣ) ಅವರು, ಶಿವಾನಂದ ನಾಯ್ಕವಾಡಿ, ಐಎಫ್ಎಸ್ ಶೋಕಾಸ್ ನೋಟಿಸ್ ನೀಡಿದ್ದಾರೆ. ಈ ವಿಷಯದ ಬಗ್ಗೆ ಧಿಕಾರಿ ತನ್ನ ಹೇಳಿಕೆಯನ್ನು ಈ ಕೆಳಗಿನಂತೆ ನೀಡಿದ್ದಾರೆ: ದಿನಾಂಕ 08-01-2024 ರಂದು ಬೆಳಿಗ್ಗೆ 9.00 ಗಂಟೆಗೆ ಐಎಫ್ಎಸ್ ಶಿವಾನಂದ ನಾಯ್ಕವಾಡಿ ಅವರಿಗೆ ಹೊಸ ಸಂಖ್ಯೆಯಿಂದ…
ಬೆಳಗಾವಿ: ಜಿಲ್ಲೆಯಲ್ಲಿ ಇಂದು ನಡೆದಂತ ಎರಡು ಭೀಕರ ಪ್ರತ್ಯೇಕ ಅಪಘಾತದಲ್ಲಿ 8 ಮಂದಿ ದುರ್ಮರಣ ಅಪ್ಪಿರುವಂತ ಘಟನೆ ನಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಇಂದು ಭೀಕರ ಅಪಘಾತಕ್ಕೆ ಜನರು ಬೆಚ್ಚಿ ಬೀಳುವಂತೆ ಮಾಡಿದೆ. ಬೆಳಗಾವಿ ಜಿಲ್ಲೆಯ ಮುಗಳಖೋಡ ಕಾಲುವೆಯ ಬಳಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಿಂದ ಕಾರು ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಐವರು ದುರ್ಮರಣ ಹೊಂದಿದ್ದಾರೆ. ಬೆಳಗಾವಿಯ ರಾಯಬಾಗ ತಾಲೂಕಿನ ಮುಗಳಖೋಡ ಕಾಲುವೆಯ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿಯಲ್ಲಿ ‘ಎರಡು ಕಾರು’ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: 3 ಸ್ಥಳದಲ್ಲೇ ಸಾವು ಬೆಳಗಾವಿ: ಜಿಲ್ಲೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮತ್ತಿಬ್ಬರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕುರಬಗಟ್ಟಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ…
ಶಿವಮೊಗ್ಗ: ನಾಳೆ ಸುದ್ದಿ ಸಹ್ಯಾದ್ರಿ ಪತ್ರಿಕಾ ಬಳಗದ ವತಿಯಿಂದ ಸಹ್ಯಾದ್ರಿ ಗಾನ ಸಿರಿ 2024ರ ಕಾರ್ಯಕ್ರಮವನ್ನು ಆಯೋಗಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಡಾ.ರಾಜ್ ಕುಮಾರ್ ನಟಿಸಿದ ಹಾಗೂ ಹಾಡಿದ ಹಾಡುಗಳ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸುದ್ದಿ ಸಹ್ಯಾದ್ರಿ ಪತ್ರಿಕಾ ಬಳಗದ ಪ್ರಧಾನ ಸಂಪಾದಕ ರಾಘವೇಂದ್ರ ತಾಳಗುಪ್ಪ ಅವರು, ಕಳೆದ ಹಲವಾರು ವರ್ಷಗಳಿದಂ ಸುದ್ದಿ ಸಹ್ಯಾದ್ರಿ ಬಳಗವು ಸುದ್ದಿಯ ಜೊತೆಗ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ ಎಂದಿದ್ದಾರೆ. ಫೆಬ್ರವರಿ.24ರ ನಾಳೆ ಈ ಜಗತ್ತು ಕಂಡ ಅಪರೂಪದ ನಟ, ಗಾಯ, ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸವಿನೆನಪಿನ ಅಂಗವಾಗಿ ಡಾ.ರಾಜ್ ನಟಿಸಿದ ಹಾಗೂ ಹಾಡಿದ ಹಾಡುಗಳ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ. 4 ವಿಭಾಗಗಳಲ್ಲಿ ಸ್ಪರ್ಧೆ ಸಹ್ಯಾದ್ರಿ ಗಾನ ಸಿರಿ 2024ರ ಡಾ.ರಾಜ್ ಕುಮಾರ್ ಹಾಡುಗಳ ಸ್ಪರ್ಧೆಯು ನಾಲ್ಕು ವಯೋಮಾನದವರಿಗೆ ನಡೆಸಲಾಗುತ್ತಿದೆ. 10 ರಿಂದ 18, 19 ರಿಂದ 30 ಹಾಗೂ 30 ವರ್ಷ ಮೇಲ್ಪಟ್ಟವರು ಈ ಹಾಡುಗಳ ಸ್ಪರ್ಧೆಯಲ್ಲಿ…
ಶಿವಮೊಗ್ಗ : ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ಫೆ.24 ರಂದು ಸರ್ಕಾರದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳು ಆಗಮಿಸುವ ಸಲುವಾಗಿ ನಿಗಮದ ಶಿವಮೊಗ್ಗ ವಿಭಾಗವು 100 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ. ಆದ್ದರಿಂದ ಫೆ.23ರ ಮಧ್ಯಾಹ್ನದಿಂದ 24 ರವರೆಗೆ ನಿಗಮದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂರ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/breaking-rbi-asks-npci-to-help-paytm-continue-upi-operations/ https://kannadanewsnow.com/kannada/interesting-debate-on-dy-cm-dk-shivakumars-proposal-on-neera-in-upper-house/
ರೂಪ ಹಲವಾರು ಆದ್ರೆ ಶಕ್ತಿ ಮಾತ್ರ ಒಂದೇ ಎಂದು ಹೇಳಬಹುದು. ಈ ಶಕ್ತಿಯ ಮೂಲಕ ನಮ್ಮಂಥ ಅದೆಷ್ಟೋ ಮಂದಿಯ ಕಷ್ಟಗಳನ್ನು ಪರಿಹಾರ ನೀಡುವ ಒಂದೇ ಜೀವ ಎಂದ್ರೆ ಅದು ದೇವರು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ…
ಬೆಂಗಳೂರು : “ನಮ್ಮ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ದ ನಿರ್ಣಯ ಮಂಡಿಸಿದ್ದೇವೆ. ಬಿಜೆಪಿಯವರು ರಾಜ್ಯದ ಬೆಂಬಲಕ್ಕೆ ನಿಲ್ಲಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ನಿರ್ಣಯ ಮಂಡನೆ ಬಗ್ಗೆ ಕೇಳಿದಾಗ ಅವರು, ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ಪಾಲಿಗಾಗಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಿರ್ಣಯ ಮಂಡಿಸಿ ಸದನದಲ್ಲಿ ಅಂಗೀಕಾರ ಮಾಡಲಾಗಿದೆ. ಇದನ್ನು ಕೇಂದ್ರಕ್ಕೆ ಕಳುಹಿಸಲು ತೀರ್ಮಾನ ಮಾಡಿದ್ದೇವೆ. ಆದರೆ ಬಿಜೆಪಿಯವರು ರಾಜ್ಯದ ಬೆಂಬಲಕ್ಕೆ ಬಂದಿಲ್ಲ ಎಂದರು. “ನಾವು ಕಾನೂನು ಚೌಕಟ್ಟಿನಲ್ಲೇ ನಿರ್ಣಯ ಮಂಡಿಸಿದ್ದೇವೆ. ಇದೇ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ, ಸಿದ್ದರಾಮಯ್ಯ ಅವರು ಮತ್ತು ಕೃಷ್ಣಬೈರೇಗೌಡರು ಮಾಡಿದ ಪ್ರಸ್ತಾವನೆಗೆ ಉತ್ತರ ಕೊಡುತ್ತಾ ನಾವೆಲ್ಲಾ ಸೇರಿ ಒಟ್ಟಿಗೆ ಹೋರಾಟ ಮಾಡಬೇಕು ಎಂದು ಕರೆ ನೀಡಿದ್ದರು. ಅವರ ಮಾತಿನಂತೆ ನಾವು ಹೋರಾಟ ಮಾಡುತ್ತಿದ್ದೇವೆ.…