Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : “30-35 ವರ್ಷಗಳ ಹಿಂದೆ ನಾನು ನೀರಾ ಕುಡಿದಿದ್ದೆ. ಅದು ಜ್ಯೂಸ್ ನಂತಿತ್ತು. ನನಗೆ ಯಾವುದೇ ಮತ್ತು ಬರಲಿಲ್ಲ” ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮೆಲ್ಮನೆಯಲ್ಲಿ ಹೇಳಿದ್ದು ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು. ಪ್ರಶ್ನೋತ್ತರ ಕಲಾಪದ ವೇಳೆ ಬಿ.ಕೆ. ಹರಿಪ್ರಸಾದ್ ಅವರು, ರಾಜ್ಯದಲ್ಲಿ ಸಾರಾಯಿ ನಿಷೇಧದ ನಂತರ ಅನೇಕರು ಬೀದಿಗೆ ಬಂದಿದ್ದು, ಅಬಕಾರಿ ಇಲಾಖೆ ವತಿಯಿಂದ ಇವರಿಗಾಗಿ ಯಾವುದಾದರೂ ಕಾರ್ಯಕ್ರಮ ಹಮ್ಮಿಕೊಂಡಿದೆಯೇ ಎಂದು ಪ್ರಶ್ನೆ ಕೇಳಿದರು. ಈ ಸಂದರ್ಭದಲ್ಲಿ ಸೇಂದಿ, ಸಾರಾಯಿಯನ್ನು ಉಪಕಸುಬಾಗಿಸಿಕೊಂಡಿದ್ದ ಸಮುದಾಯಕ್ಕೆ ನೀರಾಕ್ಕೆ ಅನುಮತಿ ನೀಡುವ ಮೂಲಕ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೀರಾ ಸೇವನೆ ವಿಚಾರವಾಗಿ ಮಾಡಿಕೊಂಡ ಲಘು ಮಾತಿನ ವಿನಿಮಯ ಸದನವನ್ನು ನಗೆಗಡಲಲ್ಲಿ ತೇಲಿಸಿತು. ಕೋಟಾ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, “ಸಾರ್ವಜನಿಕ ಹಿಸಾಸಕ್ತಿಗಾಗಿ ಮಾಜಿ ಸಿಎಂಗಳಾದ ವಿರೇಂದ್ರ ಪಾಟೀಲ್ ಅವರ…
ಬೆಂಗಳೂರು: ಫೆಬ್ರವರಿ.27ರಂದು ಬೆಂಗಳೂರಲ್ಲಿ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆಯ ಕಾರ್ಯಾಗಾರ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸೋದಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ 2 ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ: 27.02.2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಛಿಸುವ ಅಧಿಕಾರಿ/ಸಿಬ್ಬಂದಿಗಳಿಗೆ ಸಮ ಸಂಖ್ಯೆಯ ಸುತ್ತೋಲೆ ದಿನಾಂಕ: 14.02.2024 ರಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದಿದ್ದಾರೆ. ಇನ್ನೂ ಮುಂದುವರೆದು, ನಿಗಮ-ಮಂಡಳಿ, ನಗರ ಪಾಲಿಕೆಗಳು, ಪ್ರಾಧಿಕಾರಗಳು, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸಮ ಸಂಖ್ಯೆಯ ಸುತ್ತೋಲೆ ದಿನಾಂಕ: 14.02.2024…
ಬೆಳಗಾವಿ: ಜಿಲ್ಲೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮತ್ತಿಬ್ಬರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕುರಬಗಟ್ಟಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂಡಲಗಿ ತಾಲೂಕಿನ ಪಡಗುಂದಿ ಗ್ರಾಮ ಮುತ್ತುನಾಯಕ್(8), ಗೋಪಾಲ್ ನಾಯಕ್(45) ಹಾಗೂ ಧಾರವಾಡ ಮೂಲಕ ಅನ್ನಪೂರ್ಣ(53) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದಂತ ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಮುರಗೋಡು ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/bengaluru-rural-lok-sabha-polls-nda-planning-to-field-dr-manjunath-against-congress-dk-suresh/ https://kannadanewsnow.com/kannada/court-summons-congress-leaders-over-derogatory-advertisements-against-bjp/
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಎನ್ಡಿಎ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಗುರುವಾರ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಸಭೆಯಲ್ಲಿ ಮಂಜುನಾಥ್ ಅವರ ಹೆಸರು ಪ್ರಸ್ತಾಪಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಪದ್ಮಶ್ರೀ ಪುರಸ್ಕೃತ ಡಾ.ಮಂಜುನಾಥ್ ಅವರು ಹೃದ್ರೋಗ ತಜ್ಞರಾಗಿದ್ದು, ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ 18 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. 67 ವರ್ಷದ ಮಂಜುನಾಥ್ ಅವರು ಜನವರಿಯಲ್ಲಿ ಈ ಹುದ್ದೆಯಿಂದ ನಿವೃತ್ತಿಯಾದರು. ಜಯದೇವ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಮಂಜುನಾಥ್ ರಾಜಕೀಯಕ್ಕೆ ಧುಮುಕಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹಠಾತ್ ದೆಹಲಿ ಭೇಟಿ ಮತ್ತು ಗುರುವಾರ ಅಮಿತ್ ಶಾ ಅವರೊಂದಿಗಿನ ಸಭೆ ಊಹಾಪೋಹಗಳಿಗೆ ತುಪ್ಪ ಸುರಿದಿದೆ. ವರದಿಗಳ ಪ್ರಕಾರ, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಮಂಜುನಾಥ್…
ಬೆಂಗಳೂರು: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಗೂ ರಾಹುಲ್‌ಗಾಂಧಿಗೆ ಸಮನ್ಸ್ ಜಾರಿಗೊಳಿಸಿದೆ. ಬಿಜೆಪಿ ವಿರುದ್ಧವಾಗಿ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಡಬ್ಬಲ್ ಎಂಜಿನ್ ಸರ್ಕಾರ ಹಾಗೂ 40% ಸರ್ಕಾರ ಎಂದು ಜಾಹೀರಾತು ನೀಡಲಾಗಿತ್ತು. ಈ ಸಂಬಂಧ ಬಿಜೆಪಿ ಕಾನೂನು ಘಟಕದ ವಕೀಲ ವಿನೋದ್ ಕುಮಾರ್ ಸಲ್ಲಿಸಿದ್ದ ಖಾಸಗಿ ದೂರು ನೀಡಿದ್ದರು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಮಾರ್ಚ್ 28ಕ್ಕೆ ಸಿದ್ದರಾಮಯ್ಯ, ಡಿಕೆಶಿ ಹಾಗೂ ರಾಹುಲ್ ಗಾಂಧಿ ಕೋರ್ಟ್ ಗೆ ಖುದ್ದು ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ. https://kannadanewsnow.com/kannada/breaking-big-relief-for-paytm-customers-rbi-takes-a-major-step-upi-account-transfer-easier/ https://kannadanewsnow.com/kannada/inhuman-incident-in-karnataka-woman-thrashed-in-uttara-kannada/
ಬೆಂಗಳೂರು: ಬಿಜೆಪಿ ವಿರುದ್ಧ 40% ಕಮೀಷನ್ ಆರೋಪ ಮಾಡಿ, ವಿಧಾನಸಭಾ ಚುನಾವಣೆಯ ವೇಳೆಯಲ್ಲೇ ರೇಟ್ ಕಾರ್ಡ್ ಜಾಹೀರಾತು ಬಿಡುಗಡೆ ಮಾಡಿದ್ದರ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಮಾರ್ಚ್.28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಲಾಗಿದ್ದಂತ ಕರೆಷ್ಷನ್ ರೇಟ್ ಕಾರ್ಡ್ ಜಾಹೀರಾತಿನಿಂದಾಗಿ ಬಿಜೆಪಿ ಪಕ್ಷಕ್ಕೆ ಹಾನಿಯಾಗಿದೆ ಎಂಬುದಾಗಿ ಆರೋಪಿಸಿ, ಕಾಂಗ್ರೆಸ್ ವಿರುದ್ಧ ಬಿಜೆಪಿ ಪಕ್ಷದಿಂದ ಖಾಸಗಿ ದೂರು ನೀಡಲಾಗಿತ್ತು. ಇಂದು ಈ ದೂರಿನ ವಿಚಾರಣೆಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶ ಜೆ.ಪ್ರೀತ್ ನಡೆಸಿದರು. ನ್ಯಾಯಾಪೀಠದ ಮುಂದೆ ಬಿಜೆಪಿ ಪರ ವಕೀಲ ವಿನೋದ್ ಕುಮಾರ್ ವಾದ ಮಂಡಿಸಿ, ಕಾಂಗ್ರೆಸ್ ಪಕ್ಷ ನೀಡಿದ್ದಂತ ಜಾಹೀರಾತಿನಿಂದಾಗಿ ಬಿಜೆಪಿ ಪಕ್ಷಕ್ಕೆ ಹಾನಿಯಾಗಿದೆ ಎಂಬುದಾಗಿ ಆರೋಪಿಸಿದರು. ಈ ಆರೋಪದ ನಂತ್ರ ನ್ಯಾಯಪೀಠವು ಮಾರ್ಚ್.28ರಂದು ಕೋರ್ಟ್ ಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್…
ನವದೆಹಲಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮುಂಬೈ-ಅಹಮದಾಬಾದ್ ನಡುವಿನ ಭಾರತದ ಮೊದಲ ಬುಲೆಟ್ ರೈಲು ಪ್ರಾರಂಭದ ದಿನಾಂಕದ ಬಗ್ಗೆ ದೊಡ್ಡ ಸುದ್ದಿ ನವೀಕರಣವನ್ನು ನೀಡಿದ್ದಾರೆ. ಅದೇ 2026ರ ವೇಳೆಗೆ ದೇಶದ ಮೊದಲ ಬುಲೆಟ್ ರೈಲು ಸಂಚಾರ ಆರಂಭಗೊಳ್ಳಲಿದೆ ಎಂದು ಹೇಳಿದ್ದಾರೆ. ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಕಾರಿಡಾರ್ನ ಸೂರತ್-ಬಿಲಿಮೋರಾ ವಿಭಾಗವು 2026 ರ ಜುಲೈ-ಆಗಸ್ಟ್ ವೇಳೆಗೆ ಕಾರ್ಯನಿರ್ವಹಿಸಬಹುದು ಎಂದು ಅಶ್ವಿನಿ ವೈಷ್ಣವ್ ಇಂದು ಪ್ರಕಟಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ನಂತರ ಒಂದರ ನಂತರ ಒಂದರಂತೆ ಇತರ ವಿಭಾಗಗಳನ್ನು ತೆರೆಯಲಾಗುವುದು ಎಂದು ಅವರು ಹೇಳಿದರು. ಬುಲೆಟ್ ರೈಲು ಕಾರಿಡಾರ್ ‘ಸೀಮಿತ ನಿಲುಗಡೆ’ ಮತ್ತು ‘ಆಲ್ ಸ್ಟಾಪ್’ ಸೇವೆಗಳನ್ನು ಹೊಂದಿರುತ್ತದೆ. ಸೀಮಿತ ನಿಲುಗಡೆ ರೈಲುಗಳು ಮುಂಬೈ ಮತ್ತು ಅಹಮದಾಬಾದ್ ನಡುವಿನ ದೂರವನ್ನು ಕೇವಲ ಎರಡು ಗಂಟೆಗಳಲ್ಲಿ ಕ್ರಮಿಸಿದರೆ, ಇತರ ಸೇವೆಯು ಸುಮಾರು 2 ಗಂಟೆ 45 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ಎಂದು ಸಚಿವರು ಹೇಳಿದರು. ಮುಂಬೈ-ಅಹಮದಾಬಾದ್…
ಬೆಂಗಳೂರು: ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ, 2023ಕ್ಕೆ ರಾಷ್ಟ್ರಪತಿಗಳಿಂದ ಅಂಕಿತ ದೊರೆತಿದೆ. ಈ ಕುರಿತು ವಿಧಾನಮಂಡಲದ ಉಭಯ ಸದನಗಳಲ್ಲಿ ಕಾನೂನು, ನ್ಯಾಯ ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದಂತ ಹೆಚ್.ಕೆ ಪಾಟೀಲ್ ಅವರು ಮಾಹಿತಿ ಹಂಚಿಕೊಂಡರು. ಸಣ್ಣ ಮತ್ತು ದುರ್ಬಲ ರೈತ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸೇರಿರುವ ವ್ಯಕ್ತಿಗಳು, ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ದೀರ್ಘಕಾಲಿಕ ವ್ಯಾಜ್ಯವನ್ನು ಎದುರಿಸಲು ಸುಸ್ಥಿರ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಅಂಥ ವ್ಯಕ್ತಿಗಳಿಗೆ ಭದ್ರತೆಯನ್ನು ಒದಗಿಸಲು ಸಿವಿಲ್ ಪ್ರಕ್ರಿಯಾ ಸಂಹಿತೆ, 1908 (1908ರ ಕೇಂದ್ರ ಅಧಿನಿಯಮ 5)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ವಿಹಿತವಾಗಿರುವುದರಿಂದ ಅಂಥ ಪ್ರಕರಣಗಳಿಗೆ ಯುಕ್ತವಾದ ಕಾಲಾವಧಿಯನ್ನು ಗೊತ್ತುಪಡಿಸುವ ಮೂಲಕ ಶೀಘ್ರ ನಿಗಧಿತ ಕಾಲದಲ್ಲಿ ನ್ಯಾಯದೊಂದಿಗೆ ಕಾರ್ಯಕ್ಷಮತೆಯ ಮೇಲೆ ವಿಲೇವಾರಿ ಮಾಡತಕ್ಕದ್ದು, ಅಂಥ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ಸೂಕ್ತ ಕಾರ್ಯವಿಧಾನವನ್ನು ರೂಪಿಸುವುದು ಮತ್ತು ಮೇಲಿನ ಉದ್ದೇಶಗಳನ್ನು ಈಡೇರಿಸುವುದು ಅವಶ್ಯಕತೆಯನ್ನು ಮನಗೊಂಡು ಎಂದರು. ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ…
ಶಿವಮೊಗ್ಗ: ಜಿಲ್ಲೆಯಲ್ಲಿ ಮಕ್ಕಳಿಂದಲೇ ಅಪಾಯಕಾರಿ ಕೆಲಸ ಮಾಡಿಸಿ, ಶಾಲಾ ಶಿಕ್ಷಕರು ಎಡವಟ್ಟು ಮಾಡಿರುವಂತ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಗ್ರಾಮದ ಉರ್ದು ಸರ್ಕಾರಿ ಶಾಲೆಯ ಮಕ್ಕಳಿಂದ ಶಾಲಾ ಶಿಕ್ಷಕರು ಹುಂಚಗಳ ಮೇಲೆ ನಡೆದು ಕಸಗುಡಿಸೋ ಕೆಲಸಕ್ಕೆ ಇಟ್ಟಿರೋ ವೀಡಿಯೋ ಈಗ ವೈರಲ್ ಆಗಿದೆ. ಮಂಡಗದ್ದೆಯ ಉರ್ದು ಶಾಲೆಯ ಶಾಲಾ ಮಕ್ಕಳು ಶಾಲೆಯ ಮೇಲ್ಛಾವಣಿಯ ಕಸವನ್ನು ಗುಡಿಸುತ್ತಿರುವಂತ ವೀಡಿಯೋ ದೃಶ್ಯಾವಳಿಯಲ್ಲಿದ್ದು, ಶಾಲಾ ಮಕ್ಕಳು ಮೇಲ್ಛಾವಣಿಯಿಂದ ಕೆಳಗೆ ಬಿದ್ದರೇ ಗತಿ ಏನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ಉರ್ದು ಶಾಲೆಯಲ್ಲಿ ಶಾಲಾ ಶಿಕ್ಷಕರು ಮಕ್ಕಳಿಂದ ಮಾಡಿಸಿದಂತ ಹೆಂಚುಗಳ ಮೇಲಿನ ಕಸಗುಡಿಸುವ ವೀಡಿಯೋ ವೈರಲ್ ಆಗಿದ್ದು, ಶಾಲಾ ಶಿಕ್ಷಕರ ವಿರುದ್ಧ ಆಕ್ರೋಶ ಹೊರ ಬಿದ್ದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೀಸಲಾಗಿದೆ. https://kannadanewsnow.com/kannada/in-bangalore-saras-mela-to-be-held-from-may-29-womens-products-to-be-showcased-sold/ https://kannadanewsnow.com/kannada/bengaluru-brother-kills-brother-by-pouring-petrol-over-car-dispute/
ಬೆಂಗಳೂರು: ಮಹಿಳೆಯರ ಸಬಲೀಕರಣ ಮತ್ತು ಸ್ವಾವಲಂಬನೆಗೊಳಿಸುವ ಏಕೈಕ ಉದ್ದೇಶದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇದೇ ತಿಂಗಳ 29ರಿಂದ ಮಾ.9ರವರೆಗೆ ರಾಷ್ಟ್ರೀಯ ಸಾರಸ್ ಮೇಳ ಮತ್ತು ಬೃಹತ್ ರಾಷ್ಟೀಯ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜನೆ ಮಾಡಲಾಗಿದೆ. ಈ ಸಂಬಂಧ ಶುಕ್ರವಾರ ವಿಕಾಸಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಶಾಸಕರಾದ ಎಸ್.ಟಿ.ಸೋಮಶೇಖರ್, ಶ್ರೀನಿವಾಸ್ ಸೇರಿದಂತೆ ಮತ್ತಿತರ ಅಧಿಕಾರಿಗಳು,ನಮ್ಮ ಸರಸ್ ಮೇಳ 2024 ಮತ್ತು ಅಕ್ಕ ಕೆಫೆ ಲೋಗೋ ಅನಾವರಣಗೊಳಿಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಬೃಹತ್ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಇದೇ ತಿಂಗಳ 29ರಿಂದ ಮಾ.9ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ರಾಷ್ಟ್ರೀಯ ಸರಸ್ ಮೇಳವು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದ್ದು, ಇದರಲ್ಲಿ ದೇಶಾದ್ಯಂತದ 250 ಸ್ವ-ಸಹಾಯ ಗುಂಪುಗಳು…