Author: kannadanewsnow09

ಬೆಂಗಳೂರು: ಎಪಿಎಂಸಿ ಮಾರುಕಟ್ಟೆಗಳಿಗೆ ಮತ್ತಷ್ಟು ಬಲ ಸೇರಿದಂತೆ ವಿವಿಧ ಮಾರ್ಪಾಡಿಗಳಿಗೆ ಅವಕಾಶ ನೀಡುವಂತ ಎಪಿಎಂಸಿ ತಿದ್ದುಪಡಿ ವಿಧೇಯಕ ವಿಧಾನಪರಿಷತ್ತಿನಲ್ಲೂ ಅಂಗೀಕಾರಗೊಂಡಿದೆ. ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿದ್ದಂತ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು, ಇಂದು ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಮಂಡಿಸಲಾಗಿತ್ತು. ಇಂತಹ ಎಪಿಎಂಸಿ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ಈ ಹಿನ್ನಲೆಯಲ್ಲಿ ವಿಧಾನಪರಿಷತ್ತಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಂತೆ ಆಗಿದ್ದು, ಶೀಘ್ರವೇ ಕಾಯ್ದೆಯಾಗಿ ಗೆಜೆಟ್ ಅಧಿಸೂಚನೆಯ ಮೂಲಕ ಹೊರ ಬೀಳಲಿದೆ. https://kannadanewsnow.com/kannada/are-you-a-second-puc-pass-apply-for-these-posts-without-fail-from-march-4/ https://kannadanewsnow.com/kannada/bengaluru-brother-kills-brother-by-pouring-petrol-over-car-dispute/

Read More

ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೀವು ದ್ವಿತೀಯ ಪಿಯುಸಿ ಪಾಸ್ ಆಗಿದ್ದರೇ, ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಮಾರ್ಚ್.4ರಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ ಎಂದು ತಿಳಿಸಿದೆ. ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್.3 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್.6ರವರೆಗೆ ಶುಲ್ಕಪಾವತಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದೆ. ಮಾರ್ಚ್.4ರಿಂದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ನೀವು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೇ ಕೆಇಎಯ ಅಧಿಕೃತ ಜಾಲತಾಣ http://kea.kar.nic.in ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿಯೂ ಕೆಇಎ ವೆಬ್ ಸೈಟ್ ಗೆ…

Read More

ನವದೆಹಲಿ: ಮಾರ್ಚ್ 13 ರ ನಂತರ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಚುನಾವಣಾ ಆಯೋಗ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಚುನಾವಣಾ ಸನ್ನದ್ಧತೆಯನ್ನು ಪರಿಶೀಲಿಸಲು ಕೇಂದ್ರ ಚುನಾವಣಾ ಸಮಿತಿಯ ಅಧಿಕಾರಿಗಳು ಪ್ರಸ್ತುತ ವಿವಿಧ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ ಎಂಬುದನ್ನು ಗಮನಿಸಬೇಕು. ಪ್ರಸ್ತುತ, ಅವರು ತಮಿಳುನಾಡಿನಲ್ಲಿದ್ದಾರೆ. ನಂತರ ಅವರು ಉತ್ತರ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಗಳನ್ನು ಮಾರ್ಚ್ 13 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ವರದಿ ತಿಳಿಸಿದೆ. ಆದ್ದರಿಂದ ಲೋಕಸಭಾ ಚುನಾವಣೆಗೆ, ಮತದಾನದ ವೇಳಾಪಟ್ಟಿಯನ್ನು ಈ ದಿನಾಂಕದಂದು ಅಥವಾ ನಂತರ ಘೋಷಿಸುವ ಸಾಧ್ಯತೆಯಿದೆ. https://twitter.com/ANI/status/1760934407693648065 ಹಿಂದಿನ 2019 ರ ಲೋಕಸಭಾ ಚುನಾವಣೆಗೆ, ಚುನಾವಣಾ ಆಯೋಗವು ಅದೇ ವರ್ಷದ ಮಾರ್ಚ್ 10 ರಂದು ದಿನಾಂಕಗಳನ್ನು ಘೋಷಿಸಿತು. 543 ಸ್ಥಾನಗಳ ಲೋಕಸಭೆಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಏಪ್ರಿಲ್ 11 ರಿಂದ ಮೇ 19 ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಿತು. ಮೇ 23 ರಂದು…

Read More

ಬೆಂಗಳೂರು: ಸ್ವಾತಂತ್ರ್ಯ ಬಂದಾಗಿನಿಂದ 55 ವರ್ಷ ದೇಶ ಆಳಿರುವ ಕಾಂಗ್ರೆಸ್ ಅವಧಿಯಲ್ಲಿ ರಾಜ್ಯಗಳಿಗೆ ಕೇವಲ ಶೇ 20 ರಷ್ಟು ಮಾತ್ರ ಅನುದಾನ ಬರುತ್ತಿತ್ತು, ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ರಾಜ್ಯಗಳಿಗೆ ಶೇ 42% ರಷ್ಟು ಅನುದಾನ ಬರುತ್ತಿದೆ. ಕಾಂಗ್ರೆಸ್ ನವರು ಕೇಂದ್ರದ ವಿರುದ್ದ ಅನಗತ್ಯ ಆರೋಪ ಮಾಡಿ ರಾಜ್ಯದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಮಂಡಿಸಿರುವ ನಿರ್ಣಯದ ವಿರುದ್ಧ ಇಂದು ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ದ ನಿರ್ಣಯ ಮಂಡಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ದ ನಿರ್ಣಯ ಮಂಡಿಸಿ ವಿಧಾನಸಭೆಯ ಪಾವಿತ್ರ್ಯತೆಯನ್ನು ಹಾಳು ಮಾಡಿ ಸುಳ್ಳು ಹೇಳುವ ದಾಷ್ಟ್ಯ ತೋರಿದೆ. ಕೇಂದ್ರದಿಂದ ಅನ್ಯಾಯವಾಗಿದೆ ಅಂತ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯದ ತೆರಿಗೆ ಕಾಂಗ್ರೆಸ್ ಆಡಳಿತದಲ್ಲಿ 20% ರಷ್ಟು ಮಾತ್ರ ಇತ್ತು. ಆಗ ರಾಮಕೃಷ್ಣ…

Read More

ಉಡುಪಿ: ಇಂದು ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಅದರಲ್ಲೂ ಆರ್ ಅಶೋಕ್ ವಿಪಕ್ಷ ನಾಯಕರಾಗಲು ಅಯೋಗ್ಯ, ನಾಲಾಯಕ್. ಅವರನ್ನು ಕಿತ್ತಾಕಿ ಎಂಬುದಾಗಿಯೂ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಂಗಳೂರಲ್ಲಿ ನಡೆದ ಪಬ್ ಮೇಲಿನ ದಾಳಿಯನ್ನು ನಡೆಸಿದ್ದು ಬಜರಂಗದಳದವರು ಅಲ್ಲ. ಶ್ರೀರಾಮಸೇನೆಯವರು ಎಂದರು. ಪಬ್ ಮೇಲೆ ದಾಳಿ ಮಾಡಿದಂತ ಶ್ರೀರಾಮಸೇನೆಯ ಕಾರ್ಯಕರ್ತರ ಮೇಲೆ ಯಾವುದೇ ಗೂಂಡಾ ಕೇಸ್ ಹಾಕಿರಲಿಲ್ಲ. ಆದರೇ ಮೊದಲ ಬಾರಿಗೆ ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿದ್ದೇ ಆರ್.ಅಶೋಕ್. ಕಾಂಗ್ರೆಸ್ ಪಕ್ಷದವರು ಈವರೆಗೆ ಬಜರಂಗದಳದವರ ಮೇಲೆ ಗೂಂಡಾ ಆಕ್ಟ್ ಹಾಕಿಲ್ಲ ಎಂದರು. ಆರ್.ಅಶೋಕ್ ಗೃಹ ಸಚಿವರಾಗಿದ್ದಂತ ಸಂದರ್ಭದಲ್ಲಿ ಪಿಎಪ್ಐ ಗಲಾಟೆ ನಡೆದಿತ್ತು. ಆ ಸಂದರ್ಭದಲ್ಲಿ ಅವರು ಕೇಂದ್ರಕ್ಕೆ ಒಂದೇ ಒಂದು ಪತ್ರವನ್ನು ಬರೆಯಲಿಲ್ಲ. ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೇ ಆರ್ ಅಶೋಕ್ ಅವರು ಹಿಂದೂ ಕಾರ್ಯಕರ್ತರಿಗೆ ನೀಡಿದ ಕೊಡುಗೆಯಾಗಿದೆ ಎಂಬುದಾಗಿ ಕಿಡಿಕಾರಿದರು. ಆರ್ ಅಶೋಕ್…

Read More

ಬೆಂಗಳೂರು: ಅಯ್ಯೋ ತಗಡೇ ಎಂಬುದಾಗಿ ಹೇಳಿಕೆ ನೀಡಿ, ಗುಮ್ಮಿಸಿಕೊಳ್ಳೋದಕ್ಕೆ ಎಂಬುದಾಗಿ ಮಹಿಳೆಯರಿಗೆ ಅವಮಾನ ಮಾಡಿದಂತ ನಟ ದರ್ಶನ್ ವಿರುದ್ಧ ಈಗ ಮತ್ತೆರಡು ದೂರು ದಾಖಲಿಸಲಾಗಿದೆ. ಬೆಂಗಳೂರು ರಾಜರಾಜೇಶ್ವರಿ ಠಾಣೆಗೆ ತೆರಳಿದಂತ ಗಣೇಶ್ ಗೌಡ ಹಾಗೂ ಜಗದೀಶ್ ಎಂಬುವವರು ನಟ ದರ್ಶನ್ ಅವರು ನೀಡಿದಂತ ಅಯ್ಯೋ ತಗಡೇ ಗುಮ್ಮಿಸಿಕೊಳ್ಳೋದಕ್ಕೆ ಎಂಬ ಅವಹೇಳನಕಾರಿ ಹೇಳಿಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಈ ಮೂಲಕ ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲಾದಂತೆ ಆಗಿದೆ. ಗಣೇಶ್ ಗೌಡ ಹಾಗೂ ಜಗದೀಶ್ ಸಲ್ಲಿಸಿರುವಂತ ದೂರಿನಲ್ಲಿ ಸಮುದಾಯಗಳ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನಟ ದರ್ಶನ್ ನೀಡಿದ್ದಾರೆ. ಸಮುದಾಯಗಳು ರೊಚ್ಚಿಗೇಳೋ ಮುನ್ನವೇ ದರ್ಶನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಈಗಾಗಲೇ ಪುಟ್ಟೇನಹಳ್ಳಿ ಠಾಣೆಯಲ್ಲಿ ನಟ ದರ್ಶನ್ ವಿರುದ್ಧ ಸ್ತ್ರೀಶಕ್ತಿ ಸಂಘಟನೆಗಳಿಂದ ದೂರು ನೀಡಲಾಗಿತ್ತು. ಈ ಮೂಲಕ ಎರಡು ದೂರು ದಾಖಲಾಗಿದ್ದವು. ಈಗ ಆರ್ ಆರ್ ನಗರ ಠಾಣೆಯಲ್ಲಿ ಮತ್ತೆರಡು ದೂರು ದಾಖಲಾದ ಪರಿಣಾಮ, ಈವರೆಗೆ…

Read More

ಶಿವಮೊಗ್ಗ: ಫೆಬ್ರವರಿ.25ರಂದು ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ನಗರದ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮೆಸ್ಕಾಂ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಎಂಆರ್‍ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.25 ರಂದು ಬೆಳಗ್ಗೆ 9.30 ರಿಂದ ಸಂಜೆ 3.30ರವರೆಗೆ ಪವರ್ ಕಟ್ ಆಗಲಿದೆ ಎಂದಿದೆ. ಫೆ.25ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಮಾಚೇನಹಳ್ಳಿ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಯಲವಟ್ಟಿ, ಹಸೂಡಿ, ಹಸೂಡಿಫಾರಂ, ವೀರಭದ್ರ ಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಹಾರೋಬೆನವಳ್ಳಿ, ತಾಂಡ, ಗೌಡನಾಯಕನಹಳ್ಳಿ,…

Read More

ಬೆಂಗಳೂರು: ನಮ್ಮ ಮೆಟ್ರೋ ( Namma Metro ) ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಈವರೆಗೆ ಐದು ನಿಮಿಷಕ್ಕೆ ಒಂದು ಸಂಚರಿಸುತ್ತಿದ್ದಂತ ನಮ್ಮ ಮೆಟ್ರೋ ರೈಲುಗಳು, ಮೆಜೆಸ್ಟಿಕ್ ಹಾಗೂ ವೈಟ್ ಫೀಲ್ಡ್ ನಡುವೆ ಇನ್ಮುಂದೆ 3 ನಿಮಿಷಕ್ಕೆ ಒಂದರಂತೆ ಸಂಚರಿಸಲಿದ್ದಾವೆ. ಈ ಕುರಿತಂತೆ ಬಿಎಂಆರ್ ಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 25.02.2024 ರಿಂದ ಬೆಳಗಿನ ದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ -ಮೆಜೆಸ್ಟಿಕ್ ಮತ್ತು ಗರುಡಾಚಾರ್ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ರೈಲು ಸೇವೆಗಳನ್ನು ಒದಗಿಸಲಾಗುತ್ತದೆ ಎಂದಿದೆ. ಇದು ಟ್ರಿನಿಟಿ, ಇಂದಿರಾನಗರ, ಬೆನ್ನಿಗಾನಹಳ್ಳಿ ಮತ್ತು ಕೆಆರ್ ಪುರ ಮೆಟ್ರೋ ನಿಲ್ದಾಣಗಳ ಕಡೆಗೆ ಹೋಗುವ ಪಯಾಣಿಕರ ಅವಶ್ಯಕತೆಗಳನ್ನು ಪೂರೈಸಲು ಸಹಾಯವಾಗಲಿದೆ. ಈ ಮಾರ್ಗದಲ್ಲಿ ಬೆಳಿಗೆ 8.45 ರಿಂದ 10.20 ಗಂಟೆಯವರೆಗೆ, ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ರೈಲು ಸೇವೆಗಳು ವಾರದ ಎಲ್ಲಾ ದಿನಗಳಲ್ಲಿ (ಶನಿವಾರ, ಭಾನುವಾರ ಮತ್ತು ಸಾಮಾನ್ಯ ರಜಾದಿನಗಳನ್ನು ಹೊರತುಪಡಿಸಿ) ಲಭ್ಯವಿರುತ್ತವೆ ಎಂದು ತಿಳಿಸಿದೆ. ಇದಲ್ಲದೆ, ಭಾರತೀಯ…

Read More

ಉತ್ತರಪ್ರದೇಶ: ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ವಾರಣಾಸಿಯಲ್ಲಿ ಸಂತ ಗುರು ರವಿದಾಸ್ ( Sant Guru Ravidas ) ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಸಂತ ರವಿದಾಸ್ ಅವರ 647 ನೇ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಇಬ್ಬರೂ ನಾಯಕರು ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ವಾರಣಾಸಿಗೆ ಆಗಮಿಸಿದರು. ಅವರ ಭೇಟಿಯ ಕಾರ್ಯಸೂಚಿಯಲ್ಲಿ ಒಟ್ಟು 13,000 ಕೋಟಿ ರೂ.ಗಳ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯೂ ಸೇರಿದೆ. https://twitter.com/ANI/status/1760920291415298478 ಇದಲ್ಲದೆ ಅವರು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಮತ್ತು ಅಭಿವೃದ್ಧಿ ಉಪಕ್ರಮಗಳ ವಿಷಯದಲ್ಲಿ ತಮ್ಮ ಸಂಸದೀಯ ಕ್ಷೇತ್ರದಲ್ಲಿ ಸಾಧಿಸಿದ ಪ್ರಗತಿಯನ್ನು ಒತ್ತಿಹೇಳಲಿದ್ದಾರೆ. ಈ ಪ್ರದೇಶದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಲು, ಅವರು ಸೇವಾಪುರಿಯಲ್ಲಿ ಎಚ್ಪಿಸಿಎಲ್ ಎಲ್ಪಿಜಿ ಬಾಟ್ಲಿಂಗ್ ಘಟಕ, ಯುಪಿಎಸ್ಐಡಿಎ ಆಗ್ರೋ ಪಾರ್ಕ್ ಕಾರ್ಖಿಯಾನ್ನಲ್ಲಿ…

Read More

ಬೆಂಗಳೂರು: ನಟ ದರ್ಶನ್ ಅವರಿಗೆ ಮತ್ತೆ ಮತ್ತೆ ಸಂಕಷ್ಟ ಎದುರಾಗಿದೆ. ಇದೀಗ ಅವರ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ 2ನೇ ದೂರು ದಾಖಲಾಗಿದೆ. ಸ್ಯಾಂಡಲ್ ವುಡ್ ಸ್ಟಾರ್ ದರ್ಶನ್ ಗೆ ಸಂಕಷ್ಟ ಎನ್ನುವಂತೆ ಈಗಾಗಲೇ ಅವರ ವಿರುದ್ಧ ದೂರು ದಾಖಲಾಗಿವೆ. ಈಗ ಮುಂದುವರೆದು 2ನೇ ದೂರೊಂದು ದಾಖಲಾಗಿದ್ದು, ಅವರಿಗೆ ತಪ್ಪದ ಸಂಕಷ್ಟಗಳು ಎದುರಾದಂತೆ ಆಗಿದೆ. ನಟ ದರ್ಶನ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ 2ನೇ ದೂರು ದಾಖಲಾಗಿದೆ. ಡಿ ಬಾಸ್ ಗೆ ಮತ್ತೊಂದು ಸಂಕಷ್ಟ : ‘ಶ್ರೀ ಶಕ್ತಿ ಸಂಘದಿಂದ’ ನಟ ದರ್ಶನ್ ವಿರುದ್ಧ ದೂರು ದಾಖಲು ಬೆಂಗಳೂರು : ಸ್ಯಾಂಡಲ್ವುಡ್ ಸ್ಟಾರ್ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇದೀಗ ಶ್ರೀಶಕ್ತಿ ಸ್ವ ಸಹಾಯ ಸಂಘದ ಸುಮಾರು 35 ಮಹಿಳೆಯರು ಆಗಮಿಸಿ ದರ್ಶನ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. https://kannadanewsnow.com/kannada/bengaluru-brother-kills-brother-by-pouring-petrol-over-car-dispute/ ಶ್ರೀ…

Read More