Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಪ್ರಸ್ತುತ ಸಾಲಿನಲ್ಲಿ 1 ಲಕ್ಷ ಜನಸಂಖ್ಯೆ ಮೇಲ್ಪಟ್ಟ ನಗರಗಳಲ್ಲಿ ವರ್ಗೀಕರಿಸಲಾಗಿದ್ದು, ಸಮೀಕ್ಷೆಯಲ್ಲಿ ಭಾಗವಹಿಸಿದ 446 ನಗರಗಳ ಪೈಕಿ 125ನೇ ಸ್ಥಾನವನ್ನು ಪಡೆದಿದೆ. ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ ವತಿಯಿಂದ ವಾರ್ಷಿಕ ಸ್ಚಚ್ಛತಾ ಸಮೀಕ್ಷೆ ನಡೆಸುತ್ತಿದ್ದು ಪ್ರಸ್ತುತ ಸಾಲಿನ ಸ್ವಚ್ಛ ಸರ್ವೇಕ್ಷಣ್-2023ರ ಸಮೀಕ್ಷೆಯಲ್ಲಿ ನಗರಗಳನ್ನು 1 ಲಕ್ಷ ಜನಸಂಖ್ಯೆಯ ಒಳಗೆ ಹಾಗೂ 1 ಲಕ್ಷ ಜನಸಂಖ್ಯೆ ಮೇಲ್ಪಟ್ಟ ನಗರಗಳು ಎಂಬುದಾಗಿ ವರ್ಗೀಕರಿಸಿ ಅದರಂತೆ ಶ್ರೇಯಾಂಕಗಳನ್ನು ನೀಡಲಾಗಿರುತ್ತದೆ. ಕಳೆದ ಸಾಲಿನ ಸಮೀಕ್ಷೆಯಲ್ಲಿ ನಗರಗಳನ್ನು 10 ಲಕ್ಷ ಮೇಲ್ಪಟ್ಟ ನಗರ ಅಡಿಯಲ್ಲಿ ವರ್ಗೀಕರಿಸಲಾಗಿದ್ದು, ಸದರಿ ಸಮೀಕ್ಷೆಯಲ್ಲಿ ನಗರವು 45 ನಗರಗಳ ಪೈಕಿ 43ನೇ ನಗರವಾಗಿರುತ್ತದೆ. 1 ಲಕ್ಷ ಜನಸಂಖ್ಯೆ ಮೇಲ್ಪಟ್ಟ ನಗರಗಳ ಮಾನದಂಡವನ್ನು 2017ನೇ ಸಾಲಿನಿಂದ 2020ನೇ ಸಾಲಿನ ವರೆಗೆ ಅನ್ವಯಿಸಲಾಗಿರುತ್ತದೆ. 2017ನೇ ಸಾಲಿನಲ್ಲಿ 210ನೇ ಸ್ಥಾನ, 2018ನೇ ಸಾಲಿನಲ್ಲಿ 216ನೇ ಸ್ಥಾನ, 2019ನೇ ಸಾಲಿನಲ್ಲಿ 194ನೇ ಸ್ಥಾನ ಮತ್ತು 2020ನೇ ಸಾಲಿನಲ್ಲಿ 214ನೇ ಸ್ಥಾನ…
ಬೆಂಗಳೂರು: ಇಂದು ಕೂಡ ಕೋವಿಡ್ ಸೋಂಕಿನ ( Covid19 Case ) ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 240 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ. ಅಲ್ಲದೇ ಸೋಂಕಿಗೆ ಓರ್ವ ಬಲಿಯಾಗಿದ್ದಾರೆ. ಈ ಕುರಿತಂತೆ ಇಂದು ರಾಜ್ಯ ಆರೋಗ್ಯ ಇಲಾಖೆಯಿಂದ ( Karnataka Health Department ) ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ RTPCR ಮೂಲಕ 6223 ಹಾಗೂ RAT ಮೂಲಕ 792 ಸೇರಿದಂತೆ 7015 ಜನರನ್ನು ಕೊರೋನಾ ಸೋಂಕು ( Coronavirus ) ಪತ್ತೆ ಪರೀಕ್ಷೆಗೆ ಒಳಪಡಿಸಿರೋದಾಗಿ ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟಂತ 7015 ಜನರಲ್ಲಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ, ಬಳ್ಳಾರಿ 03, ಬೆಂಗಳೂರು ಗ್ರಾಮಾಂತರ 06, ಬೆಂಗಳೂರು ನಗರ 124, ಚಾಮರಾಜನಗರ 04, ಚಿಕ್ಕ ಬಳ್ಳಾಪುರ 05, ಚಿಕ್ಕಮಗಳೂರು…
ಶಿವಮೊಗ್ಗ: ಸಾಗರ ತಾಲೂಕಿನ ವಕೀಲರೊಬ್ಬರ ಮೇಲೆ ಊಟಕ್ಕೆ ಹೋಗಿದ್ದಂತ ಸಂದರ್ಭದಲ್ಲಿ ವಿನಾ ಕಾರಣ ಹಲ್ಲೆ ನಡೆಸಿದಂತ ಈ ಹಿಂದಿನ ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಕೀಲ ರಾಜೇಶ್.ಎಸ್.ಬಿ ಎಂಬುವರು ಮೂರು ವರ್ಷಗಳ ಹಿಂದೆ ಅಂದ್ರೆ ದಿನಾಂಕ 28-02-20219ರಂದು ಹೋಟೆಲ್ ಒಂದಕ್ಕೆ ಊಟಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಪೊಲೀಸರು ಹಾಗೂ ಅವರ ನಡುವೆ ಜಗಳ ಉಂಟಾಗಿತ್ತು. ಈ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಿಂದ ಪೊಲೀಸರು ನಿಂದಿಸಿದ್ದರು. ಇದಷ್ಟೇ ಅಲ್ಲದೇ ಅಂದಿನ ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಆಗಿದ್ದಂತ ಮಂಜುನಾಥ, ಹೋಂ ಗಾರ್ಡ್ ಕೃಷ್ಣಪ್ಪ ಹಾಗೂ ಪೊಲೀಸ್ ಪೇದೆ ಸೈನು ನಡಾಫ್ ಎಂಬುವರು ವಕೀಲ ರಾಜೇಶ್ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಈ ಸಂಬಂಧ ಆನಂತ್ರ ವಿನಾಕಾರಣ ಹಲ್ಲೆ ನಡೆಸಿದಂತ ಪೊಲೀಸರ ವಿರುದ್ಧ ದೂರು ದಾಖಲಿಸೋದಕ್ಕೆ ಹೋದಾಗ ಪೊಲೀಸರು ತೆಗೆದುಕೊಂಡಿರಲಿಲ್ಲ ಅಂತ ನ್ಯಾಯಾಲಯದ ಮೆಟ್ಟಿಲೋರಿದ್ದರು. ಇದೀಗ ಮೂರು ವರ್ಷಗಳ ನಂತ್ರ ಕೋರ್ಟ್ ಸೂಚನೆಯ…
ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಜನರಿಗೆ ಪೂರಕವಾದ ಉದ್ಯೋಗಗಳ ಒದಗಿಸಲು ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಂದ ಸ್ವಾವಲಂಬನೆಗಾಗಿ ತರಬೇತಿಯನ್ನು ಆಯೋಜಿಸಲಾಗಿದ್ದು, 15 ರಿಂದ 29 ವರ್ಷ ವಯೋಮಿತಿಯುಳ್ಳ ಅಸಕ್ತರಿಂದ ಅರ್ಜಿ ಆಹ್ವಾನಿಸಿದೆ. ದ್ವಿತೀಯ ಪಿ.ಯು.ಸಿ ಉತ್ತೀರ್ಣರಾದವರಿಗೆ ಜ.24 ರಿಂದ ಫೆ.07 ರವರೆಗೆ 15 ದಿನಗಳ ಜಿಮ್/ಫಿಟ್ನೆಸ್ ತರಬೇತಿಯನ್ನು ವಿದ್ಯಾನಗರದ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ, ಬೆಂಗಳೂರು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದೆ. ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆದವರಿಗೆ ಜ.26 ರಿಂದ ಫೆ. 07 ರವರೆಗೆ 13 ದಿನಗಳ ಬ್ಯೂಟಿಷಿಯನ್ ತರಬೇತಿ ಹಾಗೂ ದ್ವಿತೀಯ ಪಿ.ಯು.ಸಿ. ಪಾಸಾದವರಿಗೆ ಜ. 27 ರಿಂದ ಫೆ.07ರವರೆಗೆ 12 ದಿನಗಳ ವಿಡಿಯೋಗ್ರಾಫಿ ತರಬೇತಿಯನ್ನು ಬೆಂಗಳೂರು ಕುಂಬಳಗೋಡು ತರಬೇತಿ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ಪದವಿ ಹಾಗೂ ಜರ್ನಲಿಸಂ ಅಭ್ಯರ್ಥಿಗಳಿಗೆ ಜ. 31 ರಿಂದ ಫೆ.07 ರವರೆಗೆ 08 ದಿನಗಳ ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿಯನ್ನು ಬೆಂಗಳೂರು ಯುವನಿಕಾ ಸಭಾಂಗಣದಲ್ಲಿ…
ಸೂರ್ಯನ ಸಂಕ್ರಾಂತಿಗಳಲ್ಲಿ ಮಕರ ಸಂಕ್ರಾಂತಿ ಅತ್ಯಂತ ಶ್ರೇಷ್ಠ ಪುಣ್ಯ ಕಾಲವಾಗಿರುತ್ತದೆ ಹಾಗೂ ಸೂರ್ಯನು ದಕ್ಷಿಣ ದಿಕ್ಕಿನಿಂದ ಉತ್ತರ ದಿಕ್ಕಿಗೆ ತನ್ನ ಪಥ ಬದಲಾಯಿಸುವ ದಿವಸವಾಗಿರುವುದರಿಂದ ಮಕರ ಸಂಕ್ರಾಂತಿಯ ಪುಣ್ಯ ಕಾಲದ ಜತೆಗೆ ಉತ್ತರಾಯಣ ಪುಣ್ಯ ಕಾಲವು ಸೇರುವುದರಿಂದ ಅತ್ಯಂತ ಶುಭ ಪುಣ್ಯ ಕಾಲವಾಗಿರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ…
ಬೆಂಗಳೂರು: ರಾಜ್ಯದಲ್ಲಿ ಮೂವರು ಡಿಸಿಎಂ ಆಯ್ಕೆ ವಿಚಾರದ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಇದೇ ಹೊತ್ತಿನಲ್ಲೇ ಡಿಸಿಎಂ ವಿಚಾರವಾಗಿ ಬಹಿರಂಗ ಹೇಳಿಕೆ ನೀಡದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಚಿವರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ನಡೆದಂತ ಕಾಂಗ್ರೆಸ್ ಸಭೆಯಲ್ಲಿ ಡಿಸಿಎಂ ವಿಚಾರವಾಗಿ ಸಚಿವರು ಯಾಕೆ ಬಹಿರಂಗವಾಗಿ ಚರ್ಚೆ ಮಾಡುತ್ತಿದ್ದೀರಿ.? ಬಹಿರಂಗವಾಗಿ ಚರ್ಚೆ ಮಾಡಿದ್ರೇ ಆಗುವ ಲಾಭಗಳೇನು ಅಂತ ಪ್ರಶ್ನಿಸಿದರು. ಇನ್ಮುಂದೆ ಡಿಸಿಎಂ ವಿಚಾರದಲ್ಲಿ ಬಹಿರಂಗವಾಗಿ ಚರ್ಚೆ ಮಾಡಬೇಡಿ. ಇದು ಒಳ್ಳೆಯ ಬೆಳವಣಿಗೆಯೂ ಅಲ್ಲ. ತಪ್ಪು ಸಂದೇಶ ಹೋಗಲಿದೆ ಎಂಬುದಾಗಿ ಸಭೆಯಲ್ಲಿ ಖಡಕ್ ಎಚ್ಚರಿಕೆಯನ್ನು ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ನೀಡಿದ್ದಾರೆ. ಅಂದಹಾಗೇ ಕರ್ನಾಟಕದಲ್ಲಿ ಮೂವರು ಡಿಸಿಎಂ ನೇಮಕದ ಬಗ್ಗೆ ಬಹಿರಂಗವಾಗಿ ಚರ್ಚೆ ಆರಂಭಗೊಂಡಿತ್ತು. ಅನೇಕ ಕಡೆಯಲ್ಲಿ ಸಚಿವರು ಪರ ವಿರೋಧವಾಗಿಯೂ ಹೇಳಿಕೆ ನೀಡಿದ್ದರು. ಅಲ್ಲದೇ ದಲಿತ ಡಿಸಿಎಂ ಸೇರಿದಂತೆ ವಿವಿಧ ವಿಚಾರಗಳ ಚರ್ಚೆಗೂ ಕಾರಣವಾಗಿದ್ದರು. ಈ ಬೆನ್ನಲ್ಲೇ ಈಗ ಕಾಂಗ್ರೆಸ್ ಹೈಕಮಾಂಡ್ ಡಿಸಿಎಂ ವಿಚಾರವಾಗಿ ಬಹಿರಂಗ ಹೇಳಿಕೆ…
ಶಿವಮೊಗ್ಗ : ತಾಂತ್ರಿಕ ಕಾರಣಗಳಿಂದ ತಡವಾಗಿದ್ದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷಾ ಫಲಿತಾಂಶವನ್ನು ಗುರುವಾರ ಪ್ರಕಟಿಸಲಾಗಿದೆ. ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ( UUCMS) ಪೋರ್ಟಲ್ ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ತಂತಮ್ಮ ಅಕೌಂಟ್ ಗಳಲ್ಲಿ ಲಾಗಿನ್ ಆಗಿ ಫಲಿತಾಂಶ ಪಡೆದುಕೊಳ್ಳಬಹುದು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಳೆದ ತಿಂಗಳೇ ಮುಗಿದಿತ್ತು. ಆದರೆ ವಿವಿಯ ಸಿಬಿಸಿಎಸ್ ಪರಿನಿಯಮವನ್ನು ಯುಯುಸಿಎಮ್ ಎಸ್ ಸಾಫ್ಟ್‌ವೇರ್ ಗೆ ಅಳವಡಿಸುವಲ್ಲಿ ತಾಂತ್ರಿಕ ತೊಡಕು ಎದುರಾಗಿತ್ತು. ಈಗ ರಾಜ್ಯ ಮಟ್ಟದ ನೋಡಲ್ ಅಧಿಕಾರಿಗಳ ಸಹಕಾರದೊಂದಿಗೆ ಸಮಸ್ಯೆ ಪರಿಹಾರವಾಗಿದ್ದು, ಫಲಿತಾಂಶ ನೀಡಲಾಗಿದೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಎಂ. ಗೋಫಿನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bengaluru-ayodhya-airfares-rise-by-nearly-400-to-rs-30000/ https://kannadanewsnow.com/kannada/those-who-criticized-the-guarantee-schemes-are-campaigning-in-the-name-of-guarantee-dk-shivakumar-suresh/
ಬೆಂಗಳೂರು : ಜನರ ಸಮಸ್ಯೆಗಳಿಗೆ ಪರಿಹಾರ ಕೊಟ್ಟು ಅವರಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದವರೇ ಇಂದು ಗ್ಯಾರಂಟಿ ಹೆಸರಲ್ಲಿ ಪ್ರಚಾರ ಪಡೆಯುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರು ತಿಳಿಸಿದರು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಜರಗನಹಳ್ಳಿ ಸರ್ಕಾರಿ ಶಾಲಾ ಮೈದಾನದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿರೋಧ ಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಪ್ರವಾಸ ಮಾಡಿ ಜನರ ಸಮಸ್ಯೆಗಳನ್ನು ಅರಿತು ಅವರಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ಈ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದರು. ಸರ್ಕಾರ ಬಂದ ನಂತರ ಕೊಟ್ಟ ಮಾತಿನಂತೆ ಈ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದರು. ಈ ಯೋಜನೆಗಳು ಯಾವುದೇ ಜಾತಿ, ಧರ್ಮಕ್ಕೆ ಸೇರಿಲ್ಲ. ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲಾ ವರ್ಗದ ಜನರಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ…
ಬೆಂಗಳೂರು : ವಿಧವಾ ವೇತನ ನೀಡಲು ವೃದ್ಧೆ ಬಳಿ 4 ಸಾವಿರ ಲಂಚ ಕೇಳಿದ ಅಧಿಕಾರಿ ವಿರುದ್ಧ ಕ್ರಮ, ಸರ್ಕಾರಿ ಪ್ರೌಢಶಾಲಾ ಶಾಲೆ ಕಟ್ಟಿಸಿಕೊಡಿ, ನಮ್ಮ ಏರಿಯಾ ಜನರಿಗೆ ಕುಡಿಯುವ ನೀರು, ಸ್ಮಶಾನಕ್ಕೆ ಜಾಗ ಬೇಕು, ಅಂಗನವಾಡಿ, ಸಂಚಾರ ದಟ್ಟಣೆ, ಪಾರ್ಕ್ ಸಮಸ್ಯೆ ಬಗೆಹರಿಸಿ ಎಂದು ಸಲ್ಲಿಸಿದ ಸಾವಿರಾರು ಅರ್ಜಿಗಳನ್ನು ಸ್ವೀಕರಿಸಿ ಕಾನೂನಾತ್ಮಕ ಪರಿಹಾರದ ಭರವಸೆ ನೀಡಿದ ಡಿಸಿಎಂ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ, ಜರಗನಹಳ್ಳಿ ಸರ್ಕಾರಿ ಶಾಲಾ ಆಟದ ಮೈದಾನದಲ್ಲಿ ನಡೆದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು. ಒಂದಷ್ಟು ಹೊತ್ತು ವೇದಿಕೆಯ ಮೇಲೆ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಡಿಸಿಎಂ ಅವರು, ಅಪಾರ ಸಂಖ್ಯೆಯಲ್ಲಿ ಜನರು ಅಹವಾಲು ಸಲ್ಲಿಸಲು ಬಂದಿದ್ದನ್ನು ಕಂಡು ವೇದಿಕೆಯಿಂದ ಇಳಿದು ಜನರು ಇದ್ದಲಿಯೇ ತೆರಳಿ ಅವರ ಮನವಿಗಳನ್ನು ಆಲಿಸಿ ಪರಿಹಾರ ಸೂಚಿಸಿದರು. ಸುಮಾರು 5 ಗಂಟೆಯ ಹೊತ್ತಿಗೆ ಊಟಕ್ಕೆ ತೆರಳಿದ ಡಿಸಿಎಂ ಅವರು ಆನಂತರ ಮತ್ತೆ ಅಹವಾಲು ಸ್ವೀಕರಿಸಲು ಪ್ರಾರಂಭಿಸಿದರು. ಬನಶಂಕರಿ…
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ , ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ನಾಳೆ ಜನವರಿ 12 ರಂದು ಯೋಜನೆಗೆ ಶಿವಮೊಗ್ಗ ನಗರದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಯೋಜನೆಗೆ ನೊಂದಣಿಯಾಗಿರುವ ಎಲ್ಲ ಅಭ್ಯರ್ಥಿಗಳ ಖಾತೆಗೆ ನಾಳೆ ದಿನ ಮೊದಲ ತಿಂಗಳ ಹಣ ಜಮೆ ಆಗಲಿದೆ. ಈ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರವು ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾದ ಕರ್ನಾಟಕ ರಹವಾಸಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೀಡುವ ಖಾತರಿ ಯೋಜನೆಯಾಗಿದೆ. ಪದವೀದಧರರಿಗೆ ರೂ. 3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1500/- ನಿರುದ್ಯೋಗ ಭತ್ಯೆಯನ್ನು 2 ವರ್ಷದವರೆಗೆ ನೀಡಲಾಗುವುದು. ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣ https://sevasindhugs.karnataka.gov.in/ ನಲ್ಲಿ ಅರ್ಜಿ ಸಲ್ಲಿಸಬೇಕು. ಯುವನಿಧಿ ಯೋಜನೆಯ ಫಲಾನುಭವಿಗಳಾಗಲು ಪದವಿ, ಡಿಪ್ಲೋಮಾಗಳನ್ನು 2022-23ನೇ ಸಾಲಿನಲ್ಲಿ…