Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲೇ ತಲ್ಲಣ ಸೃಷ್ಠಿಸಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವಂತ ಹಾಸನ ಪೆನ್ ಡ್ರೈವ್ ವಿಚಾರವಾಗಿ, ರಾಜ್ಯ ಮಹಿಳಾ ಆಯೋಗವು ಸರ್ಕಾರಕ್ಕೆ ಕಾಮುಕನ ವಿಚಾರಣೆ ನಡೆಸೋದಕ್ಕೆ ಪೊಲೀಸ್ ತಂಡ ರಚಿಸುವಂತೆ ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದು ಮನವಿ ಮಾಡಿದೆ. ಹಾಸನದಲ್ಲಿ ನಡೆದಿರುವ ಭಯಾನಕ ಸೆಕ್ಸ್ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಹೆಣ್ಣುಮಕ್ಕಳ ಜೊತೆ ಲೈಂಗಿಕ ಚಟುವಟಿಕೆ ನಡೆಸುವುದರ ಜೊತೆಗೆ ಅದನ್ನು ಚಿತ್ರೀಕರಿಸಿಕೊಂಡ ವ್ಯಕ್ತಿ ಮತ್ತು ಈ ವಿಡಿಯೋಗಳನ್ನು ಸಾರ್ವಜನಿಕಗೊಳಿಸಿದ ವ್ಯಕ್ತಿಯನ್ನು ವಿಚಾರಣೆ ನಡೆಸುವ ಸಲುವಾಗಿ ವಿಶೇಷ ತಂಡವನ್ನು ರಚಿಸಬೇಕೆಂದು ಕೋರಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಇಂದು ಪತ್ರ ಬರೆದಿದ್ದು, ಹಾಸನದಲ್ಲಿ ನಡೆಯುತ್ತಿರುವ ಆತಂಕಕಾರಿ ಘಟನೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆಯಲಾಗಿದೆ. ಪ್ರಭಾವಿ ರಾಜಕಾರಣಿ ಅನೇಕ ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಅದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿರುವ ದೃಶ್ಯಗಳು ಇರುವ ಪೆನ್ ಡ್ರೈವ್ ಗಳು ಹಾಸನ…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಇದೇ ಏಪ್ರಿಲ್.29ರಿಂದ ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ನೋಂದಾಯಿಸಿಕೊಂಡಿರುವವರಿಗೆ ಪ್ರವೇಶ ಪತ್ರವನ್ನು ಕೂಡ ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿತ್ತು. ಆದ್ರೇ ಕೆಲ ವಿದ್ಯಾರ್ಥಿಗಳ ಪ್ರವೇಶ ಪತ್ರದಲ್ಲಿ ಗೊಂದಲಗಳಿದ್ದವು. ಇಂತಹ ಗೊಂದಲಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪ್ರವೇಶ ಪತ್ರದಲ್ಲಿ ವಿದ್ಯಾರ್ಥಿಗಳು ತೆಗೆದುಕೊಂಡಿರುವ ವಿಷಯದ ಜೊತೆಗೆ ಹೆಚ್ಚುವರಿ ವಿಷಗಳು ಮುದ್ರಣಗೊಂಡಿರುವುದು ಮಂಡಳಿಯ ಗಮನಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಹೀಗೆ ಹೆಚ್ಚುವರಿ ವಿಷಯಗಳು ತಮ್ಮ ಪ್ರವೇಶ ಪತ್ರದಲ್ಲಿ ಮುದ್ರಣಗೊಂಡಿದ್ದರೂ ಯಾವುದೇ ಗೊಂದಲಕ್ಕೆ ಒಳಗಾಗದೇ, ತಾವು ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿಷಯಗಳಿಗೆ ಮಾತ್ರ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಿದೆ. ಈ ಮೂಲಕ ವಿದ್ಯಾರ್ಥಿಗಳ ಪ್ರವೇಶ ಪತ್ರದಲ್ಲಿನ ಗೊಂದಲಕ್ಕೆ ಪರಿಹಾರ ಸೂಚಿಸಿದೆ. https://kannadanewsnow.com/kannada/cm-siddaramaiah-visits-neha-hiremaths-residence-in-hubballi-offers-condolences-to-her-family/ https://kannadanewsnow.com/kannada/voters-polling-officials-note-mobile-phones-will-not-be-allowed-to-be-used-at-polling-stations-tomorrow/
ಹುಬ್ಬಳ್ಳಿ: ಎಂಸಿಎ ವಿದ್ಯಾರ್ಥಿನಿ ನೇಹಾ ಬರ್ಬರ ಹತ್ಯೆ ಪ್ರಕರಣ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯ ನಿರಂಜನ ಹಿರೇಮಠ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇಂದು ಹುಬ್ಬಳ್ಳಿ ನಗರದ ಬಿಡನಾಳದಲ್ಲಿರುವಂತ ನೇಹಾ ಹಿರೇಮಠ ಅವರ ತಂದೆ ನಿರಂಜನ ಹಿರೇಮಠ ಅವರ ಮನೆಗೆ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿದರು. ನೇಹಾ ಹಿರೇಮಠ ಅವರ ತಂದೆ, ತಾಯಿಗಳಿಗೆ ಸಿಎಂ ಸಿದ್ಧರಾಮಯ್ಯ ಸಾಂತ್ವಾನ ಹೇಳಿದರು. ಇದೇ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ನೇಹಾ ಹಿರೇಮಠ ಅವರ ಹತ್ಯೆ ಸಂಬಂಧ ತಂದೆ ನಿರಂಜನ ಹಿರೇಮಠ ಅವರಿಂದ ಮಾಹಿತಿಯನ್ನು ಪಡೆದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಚಿವರಾದಂತ ಸಂತೋಷ್ ಲಾಡ್, ಹೆಚ್.ಕೆ ಪಾಟೀಲ್ ಹಾಗೂ ಶಾಸಕರಾದಂತ ಪ್ರಸಾದ್ ಅಬ್ಬಯ್ಯ, ಎನ್ ಹೆಚ್ ಕೋನರೆಡ್ಡಿ ಅವರು ಸಾಥ್ ನೀಡಿದರು. https://kannadanewsnow.com/kannada/voters-polling-officials-note-mobile-phones-will-not-be-allowed-to-be-used-at-polling-stations-tomorrow/ https://kannadanewsnow.com/kannada/breaking-delhi-cm-arvind-kejriwal-kingpin-of-excise-policy-scam-ed/
ಸ್ವಂತ ಮನೆ ಹಲವರ ಕನಸಾಗಿರುತ್ತದೆ. ಸ್ವಂತ ಮನೆ ಬೇಡ ಎಂದುಕೊಳ್ಳುವವರನ್ನು ನಾವು ನೋಡಿದ್ದೇವೆಯೇ ಅಥವಾ ನನಗೆ ಸ್ವಂತ ಮನೆ ಬೇಡ ಎಂಬ ಮಾತುಗಳನ್ನು ಕೇಳಿದ್ದೇವೆಯೇ? ಹಾಗಿದ್ದಲ್ಲಿ, ನಾವು ಖಂಡಿತವಾಗಿಯೂ ಅಲ್ಲ ಎಂದು ಹೇಳಬಹುದು. ಯಾಕೆಂದರೆ ಸ್ವಂತ ಮನೆ ಎನ್ನುವುದು ಎಲ್ಲರಿಗೂ ಬೇಕಾಗಿರುವಂಥದ್ದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ…
ಬೆಂಗಳೂರು: ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಈ ಮತದಾನದಲ್ಲಿ ಪಾಲ್ಗೊಳ್ಳೋದಕ್ಕೆ ತೆರಳುವಂತ ಮತದಾರರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ KSRTC ಬಸ್ ಸಂಚರಿಸುವಂತ ಮಾರ್ಗಗಳಲ್ಲಿ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯು, ರಾಜ್ಯದಲ್ಲಿ ದಿನಾಂಕ 26-04-2024 ಹಾಗೂ 07-05-2024ರಂದು ಎರಡು ಸುತ್ತಿನಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ ಎಂದಿದೆ. ಮೊದಲ ಸುತ್ತಿನ ಮತದಾನಕ್ಕಾಗಿ ಬೆಂಗಳೂರಿನಿಂದ ಹೊರ ಊರುಗಳಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಅಧಿಕವಾಗಿರುವ ಹಿನ್ನಲೆಯಲ್ಲಿ, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 25-04-2024, 26-04-2024 ಹಾಗೂ 27-04-2024ರಂದು ಕೆ ಎಸ್ ಆರ್ ಟಿಸಿ ಬಸ್ ಕಾರ್ಯಾಚರಣೆಯ ವ್ಯಾಪ್ತಿಯ ಸ್ಥಳಗಳಿಗೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಗಳನ್ನು ಸಂಚಾರ ಮಾಡೋದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದಿದೆ. ದಿನಾಂಕ 25-04-2024ರಂದು 575 ಹೆಚ್ಚುವರಿ ಬಿಎಂಟಿಸಿ ಬಸ್, ದಿನಾಂಕ 26-04-2024ರಂದು 465 ಬಸ್, ದಿನಾಂಕ 27-04-2024ರಂದು 120 ಹೆಚ್ಚುವರಿ ಬಿಎಂಟಿಸಿ ಬಸ್…
ತುಮಕೂರು: ನಗರದಲ್ಲಿನ ಪ್ರಸಿದ್ಧ ಬಿರಿಯಾನಿ ಹೌಸ್ ನಲ್ಲಿ ಗ್ಯಾಸ್ ಪೈಕ್ ಸೋರಿಕೆಯಾಗಿದ್ದರಿಂದ ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಮೂಲಕ ಅಪಾರ ಪ್ರಮಾಣದ ಬಿರಿಯಾನಿ ಹೌಸ್ ನಲ್ಲಿದ್ದಂತ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದಾವೆ. ತುಮಕೂರು ನಗರದ ಹೊಸ ಬಡಾವಣೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದ ಪ್ರಸಿದ್ಧ ಬಿರಿಯಾನಿ ಹೌಸ್ ನಲ್ಲಿ ಗ್ಯಾಸ್ ಪೈಪ್ ಸೋರಿಕೆಯಿಂದ ಅಗ್ನಿ ಅವಘಡ ಉಂಟಾಗಿದೆ. ಬೆಂಕಿಯ ಕೆನ್ನಾಲಿಗೆಯಿಂದ ಬಿರಿಯಾನಿ ಹೌಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ನೆಲ ಮಹಡಿ ಹಾಗೂ ಮೇಲಿನ ಮಹಡಿಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾಗಿದ್ದಾವೆ. ಗ್ಯಾಸ್ ಸೋರಿಕೆ ವೇಳೆ ಬಂದ್ ಮಾಡಲು ವಾಲ್ ಇಲ್ಲದೇ ಇರೋದೇ ಇಷ್ಟೊಂದು ದೊಡ್ಡ ಅಗ್ನಿ ಅವಘಡಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/voters-polling-officials-note-mobile-phones-will-not-be-allowed-to-be-used-at-polling-stations-tomorrow/ https://kannadanewsnow.com/kannada/breaking-delhi-cm-arvind-kejriwal-kingpin-of-excise-policy-scam-ed/
ಬೆಂಗಳೂರು: ಫ್ರಿ ಬಸ್ ಕೊಟ್ರು ಅಂತ ಹೆಣ್ ಮಕ್ಕಳು ಎಲ್ಲೆಲೋ ಹೋಗ್ತಾವ್ರೆ ಎನ್ನುವುದರ ಮೂಲಕ ಬಿಜೆಪಿ ನಾಯಕಿ, ಚಿತ್ರನಟಿ ಶೃತಿ ಅವರು ವಿವಾದತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ರಾಜ್ಯ ಮಹಿಳಾ ಆಯೋಗದಿಂದ ನಟಿ ಶೃತಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ನಟಿ ಶೃತಿಯವರು ಹೇಳಿದಂತ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ವಿಡಿಯೋವೊಂದರಲ್ಲಿ ಅವರು ಹಲವು ಕಡೆಗಳಲ್ಲಿ ಗಂಡದರು ಮನೆಯಲ್ಲಿ ಅಳುತ್ತಿದ್ದಾರೆ. ಮನೆಯಲ್ಲಿ ಮಕ್ಕಳು ಹಸಿವಿನಿಂದ ಇದ್ದಾರೆ. ಬಿಟ್ಟಿ ಭಾಗ್ಯಗಳನ್ನು ನೀಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಹೆಣ್ಣುಮಕ್ಕಳು ಜುಟ್ಟುಹಿಡಿದುಕೊಂಡು ಹೊಡೆದುಕೊಳ್ಳುತ್ತಿದ್ದಾರೆ ಅಂತ ಆರೋಪಿಸಿದ್ದರು. ನ್ನೂ ಹಲವು ಮಂದಿ ಶೃತಿ ಅವರ ಹೇಳಿಕೆ ನೋಡಿ ಅವರ ವೈಯುಕ್ತಿಕ ಜೀವನದ ಬಗ್ಗೆ ಕೂಡ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇದು ತಪ್ಪು ಅಂತ ಕೂಡ ಹಲವು ಮಂದಿ ಬುದ್ದಿ ಹೇಳುತ್ತಿದ್ದರು. ಈ ವಿವಾದಾತ್ಮಕ ಹೇಳಿಕೆ ಸಂಬಂಧ ನಟಿ ಶೃತಿಗೆ ರಾಜ್ಯ ಮಹಿಳಾ ಆಯೋಗವು ನೋಟಿಸ್ ನೀಡಲಾಗಿದೆ. ಅದರಲ್ಲಿ ರಾಜ್ಯ ಮಹಿಳಾ ಆಯೋಗದ ಅಧಿನಿಯಮ 1995 ಪರಿಚಯ 10(ಎ)ಮೇರೆಗೆ…
ಬೆಂಗಳೂರು: 2015-16ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ರಾಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ 17 ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶಿಸಿದೆ. ಇಡೀ ರಾಜ್ಯದಲ್ಲೇ ಸಖತ್ತು ಸದ್ದು ಮಾಡಿದ್ದಂತ 2015-16ರ ದ್ವಿತೀಯ ಪಿಯುಸಿ ರಾಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಸರ್ಕಾರ ವಹಿಸಿತ್ತು. ತನಿಖೆ ನಡೆಸಿ, ನ್ಯಾಯಾಲಯಕ್ಕೂ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಸೆಷನ್ಸ್ ಕೋರ್ಟ್, ಇಂದು ತನ್ನ ತೀರ್ಪು ಪ್ರಕಟಿಸಿದೆ. 2015-16ರಲ್ಲಿ ನಡೆದಿದ್ದಂತ ದ್ವಿತೀಯ ಪಿಯುಸಿ ರಾಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ 17 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿದೆ. ಅಂದಹಾಗೇ 2016ರ ಮಾರ್ಚ್ 21ರಂದು ದ್ವಿತೀಯ ಪಿಯುಸಿ ರಾಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಪರೀಕ್ಷೆಗೂ ಮುನ್ನವೇ ಬೆಳಿಗ್ಗೆ 7.30ಕ್ಕೆ ವಾಟ್ಸಾಪ್ ನಲ್ಲಿ ವೈರಲ್ ಆಗಿ, ಸೋರಿಕೆಯಾಗಿತ್ತು. ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೂ ವಹಿಸಿತ್ತು. https://kannadanewsnow.com/kannada/annabhagya-scheme-to-be-implemented-despite-centres-non-cooperation-priyank-kharge/ https://kannadanewsnow.com/kannada/tcs-world-10k-race-to-be-held-in-bengaluru-on-april-28-metro-services-to-begin-at-3-35-am/
ಬೆಂಗಳೂರು: ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ಷಾ ಪರೇಡ್ ಮೈದಾನದಿಂದ ದಿನಾಂಕ 28.04.2024 (ಭಾನುವಾರ) ಬೆಂಗಳೂರಿನಲ್ಲಿ ನಡೆಯಲಿರುವ TCS ವರ್ಲ್ಡ್ 10K ರನ್ ಪ್ರಯುಕ್ತ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ ನಮ್ಮ ಮೆಟ್ರೋ ರೈಲು ಸೇವೆಯನ್ನು 07:00 ಗಂಟೆಗೆ ಬದಲಾಗಿ ಮುಂಜಾನೆ 03:35 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಿಂದ ಪ್ರಾರಂಭವಾಗುತ್ತದೆ. ರೈಲುಗಳು ಮುಂಜಾನೆ 03.35 ರಿಂದ 04.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಆವರ್ತನದಲ್ಲಿ ಚಲಿಸುತ್ತವೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಂ.ಜಿ ರಸ್ತೆ ಕಡೆಗೆ ಮೊದಲ ರೈಲು ಸೇವೆಯು ಬೆಳಿಗ್ಗೆ 04.10 ಗಂಟೆಗೆ ಪ್ರಾರಂಭವಾಗಿ ತದನಂತರ 10 ನಿಮಿಷಗಳ ಆವರ್ತನದಲ್ಲಿ ಬೆಳಿಗ್ಗೆ 5.00 ಗಂಟೆಯವರೆಗೆ ಚಲಿಸುತ್ತವೆ. ತರುವಾಯ ರೈಲುಗಳು ಜನರ ದಟ್ಟಣೆಯ ಅನುಗುಣವಾಗಿ ಚಲಿಸುತ್ತವೆ. ವರ್ಲ್ಡ್ಸ್ ಪ್ರೀಮಿಯರ್ 10K ಓಟದಲ್ಲಿ ಭಾಗವಹಿಸಲು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ವಿನಂತಿಸಲಾಗಿದೆ. ಸಾರ್ವಜನಿಕರು ನಗದು ರಹಿತ QR ಟಿಕೆಟ್‌ಗಳನ್ನು ಖರೀದಿಸಿ ಪ್ರಯಾಣಿಸುವಂತೆ ಬಿ.ಎಂ.ಆರ್.ಸಿ.ಎಲ್ ಕೋರುತ್ತದೆ. https://kannadanewsnow.com/kannada/voters-polling-officials-note-mobile-phones-will-not-be-allowed-to-be-used-at-polling-stations-tomorrow/…
ಕಲಬುರಗಿ: ಕೇಂದ್ರ ಸರಕಾರದ ಅಸಹಕಾರ ನಡುವೆಯೂ ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಡವರಿಗೆ ಅಕ್ಕಿ ಕೊಡುವ ಬದಲು ಅಕ್ಕಿ ಖರೀದಿಸಲು ಹಣ ನೇರವಾಗಿ ಅವರ ಖಾತೆಗ ವರ್ಗಾಯಿಸಲಾತ್ತಿದೆ. ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಮುಗುಳುನಾಗಾವಿ ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ರಾಧಾಕೃಷ್ಣ ಅವರ ಪರ ಮತಯಾಚಿಸಿ ಅವರು ಮಾತನಾಡುತ್ತಿದ್ದರು. ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ಕೆಲಸ ಕಾಂಗ್ರೆಸ್ ಮಾಡಿದೆ. ಇದನ್ನು ನೀವು ಮರೆಯಬಾರದು. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕು. ಆ ಮೂಲಕ ಜನಪರ ಆಡಳಿತ ನಡೆಸುವ ಅವಕಾಶ ನೀಡಿ ಎಂದು ಖರ್ಗೆ ಮನವಿ ಮಾಡಿದರು. ಭಾವನಾತ್ಮಕವಾಗಿ ಯೋಚಿಸದೆ ಅಭಿವೃದ್ದಿಯ ಆಧಾರದ ಮೇಲೆ ಮತ ನೀಡಿ ಎಂದು ಮನವಿ ಮಾಡಿ ಖರ್ಗೆ ಸಾಹೇಬರ ಕೈಗೊಂಡ ಅಭಿವೃದ್ದಿ ಕೆಲಸಗಳನ್ನು ನೋಡಿ ನಮಗೆ ಮತ ನೀಡಿ ರಾಧಾಕೃಷ್ಣ ಅವರಿಗೆ ಮತ ನೀಡಿ ಎಂದರು. ಗುಲಾಮಗಿರಿ ಎಂದರೆ ಅದು ಮೋದಿ ಗ್ಯಾರಂಟಿ -ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ…