Author: kannadanewsnow09

ಬೆಂಗಳೂರು: ಕುಮಾರಸ್ವಾಮಿಯವರೇ, ನೀವು ತೋರಿಸಿ, ತೋರಿಸಿ ಜೇಬೋಳಗೆ ಇಳಿಸಿಕೊಳ್ಳುತ್ತಿದ್ದ ಪೆನ್ ಡ್ರೈವ್‌ನಲ್ಲಿನ ರಹಸ್ಯ ಈಗ ಹೊರಬಂದಿದೆಯೇ? ಹಾಸನದ ಬೀದಿ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ ಡ್ರೈವ್ ನಿಮ್ಮದೇನಾ? ಕುಮಾರಸ್ವಾಮಿಯವರೇ, ರಾಜ್ಯದ ಮಹಿಳೆಯರ ಬಗ್ಗೆ ನಾಲಿಗೆ ಹರಿಬಿಟ್ಟು ದಾರಿ ತಪ್ಪಿದ್ದಾರೆ ಎಂದಿದ್ದ ನೀವು ಯಾಕೆ ಈಗ ಗಾಢ ಮೌನ ವಹಿಸಿದ್ದೀರಿ? ದಾರಿ ತಪ್ಪಿ ನಡೆದವರು ಯಾರು ಎನ್ನುವ ಸಂಗತಿ ಬಟಾಬಯಲಾಗಿರುವಾಗ ರಾಜ್ಯದ ಜನರಿಗೆ ಮುಖ ತೋರಿಸಲಾಗುತ್ತಿಲ್ಲವೇ?? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ. https://twitter.com/INCKarnataka/status/1783453799824400809 ಇಂದು ಎಕ್ಸ್ ಮಾಡಿರುವಂತ ಕಾಂಗ್ರೆಸ್, ಗೌರವದಿಂದ ಮಂಗಳಸೂತ್ರ ತೊಟ್ಟಿರುವ ಹೆಣ್ಣು ಮಕ್ಕಳ ಮಾನ ಮರ್ಯಾದೆ ಹರಾಜು ಮಾಡಿದ್ದು ಯಾರು ಎಂದು ಕಣ್ಬಿಟ್ಟು ನೋಡಿ ಮೋದಿಯವರೇ… ಹಾಸನ ಮೂಲದ ಬಿಜೆಪಿ ಬೆಂಬಲಿತ ಸಂಸದನಲ್ಲವೇ..? ಇದು ಮಹಿಳೆಯರ ಮಂಗಳ ಸೂತ್ರದ ಪಾವಿತ್ರ್ಯತೆಗೆ ಕುತ್ತು ತಂದಿದ್ದು ಎಂದು ನಿಮಗೆ ಅನಿಸುವುದಿಲ್ಲವೇ? ನಿಮಗೆ ಮಹಿಳೆಯರ ಘನತೆ, ಮಂಗಳಸೂತ್ರದ ಪಾವಿತ್ರ್ಯತೆಯ ಬಗ್ಗೆ ನೈಜ ಕಾಳಜಿ ಇದ್ದಿದ್ದೇ ಆದರೆ ನಿಮ್ಮ ಮೈತ್ರಿಕೂಟದ ಕರ್ಮಕಾಂಡದ ಬಗ್ಗೆ ಕ್ಷಮೆ ಕೇಳಿ ಎಂದು…

Read More

ಹಾವೇರಿ: ದೇಶಕ್ಕೆ ಸಾಮಾಜಿಕ ನ್ಯಾಯ ಕೊಟ್ಟವರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು, ಅವರ ಯೋಜನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭೆ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಹಿರೆಕೆರೂರು ವಿಧಾನಸಭಾ ಕ್ಷೇತ್ರದ ಮಕರಿ, ನಾಗವಂದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ಕಾಂಗ್ರೆಸ್ ನವರು ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಅವರು ಸಂಸತ್ತಿಗೆ ಬರದಂತೆ ನೋಡಿಕೊಂಡಿದ್ದರು. ಅವರು ನಿಧನರಾದಾಗ ದೆಹಲಿಯಲ್ಲಿ ಅವರ ಅಂತ್ಯ ಸಂಸ್ಕಾರಕ್ಕೆ ಆರು ಅಡಿ ಜಾಗವನ್ನೂ ಕಾಂಗ್ರೆಸ್ ಕೊಡಲಿಲ್ಲ. ಈಗ ಅಂಬೇಡ್ಕರ ಬಗ್ಗೆ ಮಾತನಾಡುತ್ತಾರೆ. ಅವರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ನವರಿಗೆ ಇಲ್ಲ ಎಂದು ಹೇಳಿದರು. ಎಸ್ಸಿ ಎಸ್ಟಿ ಸುಮದಾಯಕ್ಕೆ ಕಾಂಗ್ರೆಸ್ ಯಾವುದೇ ಸಾಮಾಜಿಕ ನ್ಯಾಯ ನೀಡಿಲ್ಲ. ರಾಜ್ಯದಲ್ಲಿ ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಮೂವತ್ತು ವರ್ಷದಿಂದ ಬೇಡಿಕೆ ಇದ್ದರೂ ಯಾರೂ ಮಾಡಿರಲಿಲ್ಲ. ನನಗೂ ಜೇನುಗೂಡಿಗೆ ಕೈ…

Read More

ಬೆಂಗಳೂರು: ಅಪಾರ್ಮೆಂಟ್ ನಿವಾಸಿಗಳಾಗಿ, ಮತದಾರರಾಗಿರುವಂತವರಿಗೆ ಆಮಿಷ ವೊಡ್ಡಿದಂತ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಹೌದು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಆಮಿಷ ಪ್ರಕರಣದಲ್ಲಿ ಡಿಕೆ ಶಿಗೆ ರಿಲೀಫ್ ನೀಡಲಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿದೆ. ಚುನಾವಣೆ ಭಾಷಣವನ್ನು ಆಮಿಷವೆಂದು ಆರೋಪಿಸಲಾಗಿದೆ ಎಂಬುದಾಗಿ ಡಿಕೆ ಶಿವಕುಮಾರ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದಿಸಿದ್ದರು. ಡಿಕೆಶಿ ಪರ ವಾದಕ್ಕೆ ಚುನಾವಣಾ ಆಯೋಗದ ವಕೀಲರ ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಮತದಾರರಿಗೆ ಡಿ. ಕೆ ಶಿವಕುಮಾರ್ ಆಮಿಷ ಒಡ್ಡಿದ್ದಾರೆ. ನಾನು ಇಲ್ಲಿ ಬಿಸಿನೆಸ್ ಡೀಲ್ ಗೆ ಬಂದಿದ್ದೇನೆ. ‘ನಿಮಗೆ ಹೆಚ್ಚು ಕಾವೇರಿ ನೀರು ಬೇಕೆಂದು ಕೇಳಿದ್ದೀರಿ. ನಿಮಗೆ ಅಪಾರ್ಟ್ ಮೆಂಟ್ ಪಕ್ಕದ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ. ‘ನೀವು ನಮಗೆ ಮತ ಹಾಕಿದ 2-3 ತಿಂಗಳಲ್ಲಿ ನಿಮಗೆ ಹಸ್ತಾಂತರಿಸುತ್ತೇನೆ. ಡಿಕೆ ಶಿ ಹೇಳಿಕೆ ಉಲ್ಲೇಖಿಸಿ ವಕೀಲ ಶರತ್ ದೊಡ್ಡವಾಡ್ ವಾದಿಸಿದರು. ಈ ವೇಳೆ ಚುನಾವಣೆ ಪ್ರಚಾರದ ಗುಣಮಟ್ಟ ಕುಸಿತಕ್ಕೆ ಹೈಕೋರ್ಟ್ ಕಳವಳ ವ್ಯಕ್ತ ಪಡಿಸಿತು. ಭಾಷಣದ ವೇಳೆ ಇದು ಪುನರಾವರ್ತನೆಯಾಗದಂತೆ…

Read More

ಬೆಂಗಳೂರು: ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನೀವು ನಾಳೆ ಮತದಾನ ಕೇಂದ್ರಕ್ಕೆ ಮತ ಚಲಾಯಿಸೋದಕ್ಕೆ ತೆರಳುತ್ತಾ ಇದ್ರೇ, ನೀವು ಗಮನಿಸಲೇ ಬೇಕಾದ ವಿಷಯ ಅಂದ್ರೆ, ಮೊಬೈಲ್ ಬಳಕೆಗೆ ಅವಕಾಶವಿಲ್ಲ ಅನ್ನೋದು. ಒಂದು ವೇಳೆ ಕೊಂಡೊಯ್ದು, ಬಳಕೆ ಮಾಡಿ, ಮತದಾನದ ಪೋಟೋ ತೆಗೆದು, ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿದ್ದೇ ಆದ್ರೆ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಇದು ಮತಗಟ್ಟೆ ಅಧಿಕಾರಿಗಳಿಗೂ ಅನ್ವಯವಾಗಲಿದೆ. ಇಂದು ಚುನಾವಣಾ ಆಯೋಗದಿಂದ ಮಾಹಿತಿ ಹಂಚಿಕೊಂಡಿದ್ದು, ಮೇಲೆ ಉಲ್ಲೇಖಿಸಿದ ವಿಷಯಕ್ಕೆ ಸಂಬಂಧಿಸಿದಂತೆ, ಚುನಾವಣಾ ಅಧಿಕಾರಿಯ ಕೈಪಿಡಿ, 2023 (ಆವೃತ್ತಿ -2) ನ ಅಧ್ಯಾಯ 13.26.3 ರಲ್ಲಿ ಇಸಿಐ ನಿರ್ದೇಶನಗಳನ್ನು ಉಲ್ಲೇಖಿಸಬಹುದು. ಈ ದಿಕ್ಕಿನಲ್ಲಿ ಪ್ರಿಸೈಡಿಂಗ್ ಅಧಿಕಾರಿಗಳು ತಮ್ಮ ಮೊಬೈಲ್ ಫೋನ್ ಅನ್ನು ಸೈಲೆಂಟ್ ಮೋಡ್ನಲ್ಲಿ ಕೊಂಡೊಯ್ಯಲು ಅನುಮತಿಸಲಾಗಿದೆ. ಮತಗಟ್ಟೆಯಲ್ಲಿ ನಿಯೋಜಿಸಲಾದ ಮೈಕ್ರೋ ವೀಕ್ಷಕರು ತಮ್ಮ ಮೊಬೈಲ್ ಫೋನ್ಗಳನ್ನು ಸೈಲೆಂಟ್ ಮೋಡ್ನಲ್ಲಿ ಕೊಂಡೊಯ್ಯಬಹುದು ಎಂದು ತಿಳಿಸಲಾಗಿದೆ. ಮತದಾನದ ಒಳಗೆ ಮೊಬೈಲ್ ಫೋನ್ ಗಳು, ಸ್ಮಾರ್ಟ್ ಫೋನ್ ಗಳು,…

Read More

ಬೆಂಗಳೂರು: ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದೆ. ನಾಳೆ ಬೆಳಗ್ಗೆಯಿಂದ ಮತದಾನ ಆರಂಭಗೊಳ್ಳಲಿದ್ದು, ಮತದಾನ ಮಾಡೋದಕ್ಕೆ ವೋಟರ್ ಐಡಿ ಮುಖ್ಯವಾಗಿದೆ. ಒಂದು ವೇಳೆ ನೀವು ಮತಗಟ್ಟೆಗೆ ವೋಟರ್ ಐಡಿ ತೆಗೆದುಕೊಂಡು ಹೋಗದೇ ಇದ್ದರೇ ಯಾವುದೇ ಚಿಂತೆ ಬೇಡೆ. ಅದಕ್ಕೆ ಪರ್ಯಾಯವಾಗಿ ದಾಖಲೆಗಳು ಯಾವುವು ಅಂತ ಮುಂದೆ ಓದಿ. ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗದಿಂದ ಎಕ್ಸ್ ನಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ಮತಗಟ್ಟೆಗೆ ನಿಮ್ಮ ವೋಟರ್ ಐಡಿ ತರಲು ನೀವು ಮರೆತಿದ್ದೀರಾ? ಚಿಂತೆ ಬೇಡ, ಈ ಸಂದರ್ಭದಲ್ಲಿ ಮತ ಚಲಾಯಿಸಲು ಬಳಸಬಹುದಾದ 12 ಪರ್ಯಾಯ ದಾಖಲೆಗಳು ಇಲ್ಲಿವೆ. ಮತಗಟ್ಟೆಯಲ್ಲಿ ಯಾವುದಾದರು ಒಂದು ದಾಖಲೆಯನ್ನು ತೋರಿಸಿ ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಎಂದಿದೆ. https://twitter.com/ceo_karnataka/status/1783396693741830417 ಹೀಗಿವೆ ಪರ್ಯಾಯ ದಾಖಲೆಗಳು ಇನ್ನೂ ನೀವು ವೋಟರ್ ಐಡಿ ಇಲ್ಲದೇಯೂ ಪರ್ಯಾದ ದಾಖಲೆಗಳನ್ನು ತೋರಿಸಿ, ನಾಳೆ ಲೋಕಸಭಾ ಚುನಾವಣೆಗಾಗಿ ನಡೆಯುತ್ತಿರುವಂತ ಮೊದಲ ಹಂತದ ಚುನಾವಣೆಯಲ್ಲಿ ಮತದಾನ ಮಾಡಬಹುದಾಗಿದೆ. ಆ ದಾಖಲೆಗಳು ಯಾವುವು ಅಂತ…

Read More

ಬೆಂಗಳೂರು: ಅಪಾರ್ಮೆಂಟ್ ನಿವಾಸಿಗಳಿಗೆ ಆಮಿಷ ಒಡ್ಡಿದ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬಲವಂತವಾಗಿ ಕ್ರಮ ಕೈಗೊಳ್ಳದಂತೆ ಸೂಚಿಸಿದೆ. ಈ ಮೂಲಕ ತಾತ್ಕಾಲಿಕ ರಿಲೀಫ್ ಅನ್ನು ಹೈಕೋರ್ಟ್ ನೀಡಿದೆ. ಅಪಾರ್ಮೆಂಟ್ ನಿವಾಸಿಗಳಿಗೆ ಆಮಿಷವೊಡ್ಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನ್ಯಾಯಪೀಠದ ಮುಂದೆ ಚುನಾವಣಾ ಭಾಷಣವನ್ನು ಆಮಿಷ ಎಂಬುದಾಗಿ ಆರೋಪಿಸಲಾಗಿದೆ ಎಂಬುದಾಗಿ ಡಿಕೆಶಿ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದಿಸಿದರು. ಆದ್ರೇ ಚುನಾವಣಾ ಆಯೋಗದ ಪರ ವಕೀಲರು ಇದಕ್ಕೆ ಆಕ್ಷೇಪಿಸಿ, ಡಿ.ಕೆ ಶಿವಕುಮಾರ್ ಅಪಾರ್ಮೆಂಟ್ ನಿವಾಸಿಗಳಿಗೆ ಆಮಿಷ ಒಡ್ಡಿದ್ದಾರೆ ಎಂಬುದಾಗಿ ವಾದಿಸಿದರು. ಮತದಾರರಿಗೆ ಡಿಸಿಎಂ ಡಿಕೆ ಶಿವಕುಮಾರ್ ಆಮಿಷ ಒಟ್ಟಿದ್ದಾರೆ ಎಂದರು. ಈ ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಅಪಾರ್ಮಂಟ್ ನಿವಾಸಿಗಳಿಗೆ ಆಮಿಷ ಪ್ರಕರಣದಲ್ಲಿ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್…

Read More

ಬೆಂಗಳೂರು: “ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್ ಹಾಕಲ್ಲ. ಸ್ಯಾಮ್ ಪಿತ್ರೊಡಾ ಅವರ ಹೇಳಿಕೆ ವೈಯಕ್ತಿಕ, ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗಳ ಜತೆ ಶಿವಕುಮಾರ್ ಅವರು ಮಾತುಕತೆ ನಡೆಸಿದರು. ಈ ವೇಳೆ ಪಿತ್ರಾರ್ಜಿತ ಆಸ್ತಿಯಲ್ಲಿ 50% ಸರ್ಕಾರ ಪಡೆಯಬೇಕು ಎಂಬ ಪಿತ್ರೊಡಾ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇದು ಭಾರತ. ಈ ಬಗ್ಗೆ ಜೈರಾಮ್ ರಮೇಶ್ ಅವರು ನಮ್ಮ ಪಕ್ಷದ ಪರವಾಗಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಡೆತ್ ಟ್ಯಾಕ್ಸ್, ಬರ್ತ್ ಟ್ಯಾಕ್ಸ್ ಇಲ್ಲ. ಈ ದೇಶದ ಪರಂಪರೆ, ಪದ್ಧತಿ ಮುಂದುವರಿಯಲಿದೆ. ಯಾವುದೂ ಕೂಡ ನಮ್ಮ ಪಕ್ಷದಲ್ಲಿ ತೀರ್ಮಾನ ಆಗಿಲ್ಲ. ಅದು ಸುಳ್ಳು, ಅದಕ್ಕೆ ನಾವು ಅವಕಾಶ ನೀಡುವುದಿಲ್ಲ. ನಮ್ಮ ದೇಶದಲ್ಲಿ ರಾಜಕಾರಣದಲ್ಲಿ ತಂದೆ ಹಾಗು ಪೂರ್ವಜರ ಹೆಸರಿನಲ್ಲಿ ಚುನಾವಣೆ ಮಾಡುತ್ತಿರುವಾಗ ಅವರ ಆಸ್ತಿ ವರ್ಗಾವಣೆಗೆ ಅವಕಾಶ ನೀಡುತ್ತಾರಾ? ದೇಶದ ಸಂಪತ್ತನ್ನು ನಗದೀಕರಣ ಮಾಡಲು…

Read More

ಪಾಟ್ನಾ: ಪಾಟ್ನಾ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಪಾಟ್ನಾದ ಕೊಟ್ವಾಲಿ ಪೊಲೀಸ್ ಠಾಣೆ ಪ್ರದೇಶದ ಗೋಲಾಂಬರ್ ಬಳಿಯ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಅಧಿಕಾರಿಗಳು ಬೆಂಕಿಯನ್ನು ನಂದಿಸಿದ್ದಾರೆ ಮತ್ತು ಗಾಯಗೊಂಡ ಎಲ್ಲರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಗ್ನಿಶಾಮಕ ಪಾಟ್ನಾದ ಡಿಐಜಿ ಮೃತ್ಯುಂಜಯ್ ಕುಮಾರ್ ತಿಳಿಸಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಹೋಟೆಲ್ ನಿಂದ ಹಲವಾರು ಜನರನ್ನು ರಕ್ಷಿಸಿದ್ದಾರೆ. ಈವರೆಗೆ ಹಲವಾರು ಜನರನ್ನು ರಕ್ಷಿಸಿ ಪಿಎಂಸಿಎಚ್ ಗೆ ಕಳುಹಿಸಲಾಗಿದೆ. https://twitter.com/ANI/status/1783384344549294357 ಹೋಟೆಲ್ ಕಟ್ಟಡದಿಂದ 45 ಜನರನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಮಹಾನಿರ್ದೇಶಕ ಶೋಭಾ ಅಹೋಕರ್ ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಸಂಭವಿಸಿದೆ ಮತ್ತು ಹೋಟೆಲ್ನಲ್ಲಿ ಸುರಕ್ಷತಾ ಮಾನದಂಡಗಳನ್ನು ಅನುಸರಿಸಲಾಗಿಲ್ಲ. ಹೋಟೆಲ್ ಬಳಿಯ ಎಲ್ಲಾ ಕಟ್ಟಡಗಳ ಅಗ್ನಿಶಾಮಕ ಲೆಕ್ಕಪರಿಶೋಧನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…

Read More

ಬೆಂಗಳೂರು: 2024ರ ಲೋಕಸಭಾ ಚುನಾವಣೆಯ ಕರ್ತವ್ಯಗಳಿಗೆ ನಿಯೋಜಿಸಲಾಗಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಚುನಾವಣಾ ಭತ್ಯೆಯನ್ನು ಪಾವತಿಸುವಂತೆ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಈ ಕುರಿತಂತೆ ಸಹಾಯಕ ಆರಕ್ಷಕ ಮಹಾ ನಿರೀಕ್ಷಕರು ಅವರು ಆದೇಶ ಮಾಡಿದ್ದು, 2024ರ ಲೋಕಸಭಾ ಚುನಾವಣೆಗೆ ನೇಮಿಸಲ್ಪಟ್ಟ ವಿವಿಧ ಹುದ್ದೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಚುನಾವಣಾ ಭತ್ಯೆಯನ್ನು ಪಾವತಿಸಲು ಉಲ್ಲೇಖ(3)ರ ಸರ್ಕಾರದ ಸುತ್ತೋಲೆಯಂತೆ ಎ.ಸಿ ಬಿಲ್ಲಿನ ಮೇಲೆ ಚುನಾವಣ ಸಂಬಂಧಿತ ವೆಚ್ಚಗಳಿಗೆ ಸೆಳೆದು ಪಾವತಿಸಲು ಯಾವುದೇ ಮಿತಿಯಿಲ್ಲದಿರುವುದರಿಂದ ಸದರಿ ಸುತ್ತೋಲೆಯನ್ವಯ ಕೂಡಲೇ ಕ್ರಮವನ್ನು ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ನೇಮಿಸಲ್ಪಟ್ಟ ವಿವಿಧ ಹುದ್ದೆಯ ಅಧಿಕಾರಿ/ಸಿಬ್ಬಂದಿಯವರುಗಳಿಗೆ ಈ ಕೆಳಕಂಡಂತೆ ಸಂಭಾವನೆ/ಚುನಾವಣಾ ಭತ್ಯೆಯನ್ನು ನೀಡಲು ಕ್ರಮವನ್ನು ಕೈಗೊಳ್ಳಲು ತಿಳಿಸಲಾಗಿದೆ ಎಂದು ಹೇಳಿದ್ದಾರೆ. 1 Deputy Superintendent of Police and above (All Units/wings of police Department) (lump sum) – ರೂ.7000 2 Police Inspectors (All Units/wings of police Department)…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ತೀವ್ರ ಟೀಕೆಯಲ್ಲಿ ನಿರತರಾಗಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪಕ್ಷದಿಂದ ದೂರು ನೀಡಲಾಗಿದೆ. ಇಂದು ರಾಜ್ಯ ಚುನಾವಣಾ ಆಯೋಗದ ಮುಖ್ಯ ಕಚೇರಿಗೆ ತೆರಳಿದಂತ ಕಾಂಗ್ರೆಸ್ ಪಕ್ಷದ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು, ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ವಿಪಕ್ಷದ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಿಂದ ನೀಡಿರುವಂತ ದೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನೀಡಿರುವಂತ ದೂರಿನಲ್ಲಿ ಕೋರಲಾಗಿದೆ. https://kannadanewsnow.com/kannada/big-update-from-school-education-department-on-sslc-exam-result/ https://kannadanewsnow.com/kannada/three-youths-killed-after-being-hit-by-train-in-bengaluru/

Read More