Author: kannadanewsnow09

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿರುವಂತ ವಿದ್ಯಾರ್ಥಿಗಳು ಫಲಿತಾಂಶ ಯಾವಾಗ ಅನ್ನೋ ತೀವ್ರ ಕುತೂಹಲದಲ್ಲಿ ಇದ್ದೀರಿ. ಪರೀಕ್ಷೆ ಮುಗಿದ ಬೆನ್ನಲ್ಲೇ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ಕೂಡ ನಡೆಸಲಾಗುತ್ತಿದೆ. ಇನ್ನೇನು ಫಲಿತಾಂಶ ಪ್ರಕಟಿಸೋದು ಮಾತ್ರವೇ ಬಾಕಿ ಉಳಿದಿದೆ. ಹಾಗಾದ್ರೆ ಯಾವಾಗ ಫಲಿತಾಂಶ ಪ್ರಕಟವಾಗಲಿದೆ ಅನ್ನೋ ಬಗ್ಗೆ ಬಿಗ್ ಅಪ್ ಡೇಟ್ ಮುಂದೆ ಓದಿ. ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ ಹಂಚಿಕೊಳ್ಳಲಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯ ಬಳಿಕ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಇನ್ನೂ ಕೆಲವೇ ಕೆಲವು ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಬಾಕಿ ಉಳಿದಿದೆ ಎಂದು ತಿಳಿಸಿದೆ. ಬಾಕಿ ಇರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕೆಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಇವುಗಳ ಮೌಲ್ಯ ಮಾಪನ ಕಾರ್ಯವು ಮುಗಿದ ಬಳಿಕ ಶೀಘ್ರದಲ್ಲೇ…

Read More

ಬೆಂಗಳೂರು: ನಗರದಲ್ಲಿ ಚಲಿಸುತ್ತಿದ್ದಂತ ರೈಲಿಗೆ ಸಿಲುಕಿದಂತ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ಬಳಿಯಲ್ಲಿ ರೈಲುಗೆ ಸಿಲುಕಿ ಮೂವರು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ಸಾವನ್ನಪ್ಪಿದಂತ ಮೂವರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದವರೆಂದು ಶಂಕಿಸಲಾಗಿದೆ. ಮೃತರೆಲ್ಲರೂ 25 ವರ್ಷ ವಯಸ್ಸಿನ ಯುವಕರು ಎಂಬುದಾಗಿ ಹೇಳಲಾಗುತ್ತಿದೆ.  ರೈಲುಗೆ ಸಿಲುಕಿ ಮೂವರು ದುರ್ಮರಣ ಹೊಂದಿರುವಂತ ವಿಷಯ ತಿಳಿದಂತ ಬೈಯ್ಯಪ್ಪನಹಳ್ಳಿ ಠಾಮೆಯ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/good-news-for-students-appearing-for-ii-puc-exam-2-ksrtc-bmtc-allow-free-travel/ https://kannadanewsnow.com/kannada/ii-puc-exam-2-to-begin-from-april-29-students-to-follow-this-rule/

Read More

ಬೆಂಗಳೂರು: ಏಪ್ರಿಲ್.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ಹಾಜರಾಗೋ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ತನ್ನ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿವೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 29.04.2024 ರಿಂದ ಕರ್ನಾಟಕದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದು ಹೇಳಿದೆ. ಅದರನ್ವಯ ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 29.04.2024 ರಿಂದ 16.05.2024 ರವರೆಗೆ, ಪರೀಕ್ಷೆಗೆ…

Read More

ಬೆಂಗಳೂರು: ಶ್ರೀ ಗುರುರಾಘವೇಂದ್ರ ಸಹಕಾರಿ ಬ್ಯಾಂಕ್, ಗುರು ಸಾರ್ವಭೌಮ ಬ್ಯಾಂಕ್, ವಸಿಷ್ಠ ಸಹಕಾರಿ ಬ್ಯಾಂಕುಗಳ ಠೇವಣಿದಾರರು, ಕಾಂಗ್ರೆಸ್ ಮುಖಂಡರಾದ ಡಾ.ಶಂಕರ್‌ ಗುಹಾ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ರವರ ನೇತೃತ್ವದಲ್ಲಿ ಬುಧವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಭೇಟಿಯಾಗಿ ತಮಗಾಗಿರುವ ಅನ್ಯಾಯದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಧ್ವನಿ ಎತ್ತುವಂತೆ ಮನವಿ‌ ಮಾಡಿದರು. ಈ‌ ಪ್ರಕರಣವನ್ನು 6 ತಿಂಗಳುಗಳ ಹಿಂದೆಯೇ ಸಿಬಿಐ ತನಿಖೆಗೆ ವಹಿಸಲಾಗಿದ್ದರೂ ಸಹ, ಬಿಜೆಪಿಯ ಸಂಸದ ಹಾಗೂ ಶಾಸಕರು ತನಿಖಾಧಿಕಾರಿಯನ್ನೇ ನೇಮಿಸದಂತೆ ತಮ್ಮ‌ಪ್ರಭಾವ ಬಳಸಿ ತಡೆ‌ಹಿಡಿದ್ದಿದ್ದಾರೆ‌. ಈ ಪ್ರಕರಣಕ್ಕೆ ವಿಶೇಷ ತನಿಖಾ ದಳ ನೇಮಿಸಿ ನಮಗೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು. ಈ ಬ್ಯಾಂಕ್ ಗಳ ಹಗರಣದಿಂದ ಠೇವಣಿದಾರರು ಲಕ್ಷಾಂತರ ರೂ.ಕಳೆದುಕೊಂಡಿದ್ದಾರೆ. ಬಿಜೆಪಿಯವರೇ ಕೆಲ ಜನಪ್ರತಿನಿಧಿಗಳೇ ಈ ಹಗರಣದಲ್ಲಿ ಶಾಮೀಲಾಗಿದ್ದು, ಅವರ ವಿರುದ್ಧ ಕ್ರಮಕೈಗೊಂಡು ಠೇವಣಿದಾರರ ಹಣ ಮರಳಿಸುವಂತಾಗಬೇಕು ಎಂದು ಕೋರಿದರು‌. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಪ್ರಿಯಾಂಕ ಗಾಂಧಿಯವರು , ಚುನಾವಣೆ ಸಮಯದಲ್ಲಿ ಸಂತ್ರಸ್ತರು…

Read More

ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಒಂದು ದಿನ ಬಾಕಿ ಇದೆ. ಏಪ್ರಿಲ್.26ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಇದೇ ವೇಳೆಯಲ್ಲಿ ರಾಜ್ಯ ಒಕ್ಕಲಿಗರ ಸಮುದಾಯದಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಲಾಗಿದೆ. ರಾಜ್ಯ ಒಕ್ಕಲಿಗರ ಸಮುದಾಯಗಳ ಒಕ್ಕೂಟದಿಂದ ನೆನ್ನೆ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ ಅವರು ಒಕ್ಕಲಿಗ ಸಮುದಾಯದ ಸಂಘಕ್ಕೆ ಜಮೀನು ಕೊಟ್ಟಿದ್ದು, ಆದಿಚುಂಚನಗಿರಿ ವೈದ್ಯಕೀ, ಎಂಜಿನಿಯರಿಂಗ್ ಕಾಲೇಜು ‌ಮಂಜೂರು ಮಾಡಿದ್ದು ಕಾಂಗ್ರೆಸ್ ಸರ್ಕಾರ, ಈಗಲೂ ಉಪಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ 10 ಎಕರೆ ಜಮೀನು ಮಂಜೂರು ಮಾಡಿಸಿಕೊಟ್ಟಿದ್ದಾರೆ. ಸಮುದಾಯ ಮಠ, ಶಿಕ್ಷಣ ಸಂಸ್ಥೆಗಳಿಗೆ ಹಲವು ಕೊಡುಗೆ ನೀಡಿ ಸಮುದಾಯದ ಹಿತಕ್ಕಾಗಿ ಕಾಂಗ್ರೆಸ್‌ ಪಕ್ಷ ಶ್ರಮಿಸಿರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಕರೆ‌ ನೀಡಿದರು. ದೇವೆಗೌಡರಿಂದ‌ಒಕ್ಕಲಿಗ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಅಪ್ಪ ಮಕ್ಕಳು ಮೋಸ ಮಾಡುತ್ತಕೇ ಇದ್ದಾರೆ, ಸಮುದಾಯಕ್ಕೆ‌ ಮತ್ತೊಂದು ಮಠ ಸ್ಥಾಪಿಸಿದರು. ಎಚ್.ಎನ್…

Read More

ನವದೆಹಲಿ: ದೇಶದಲ್ಲಿ ಮುಂದಿನ ಐದು ದಿನಗಳವರೆಗೆ ಪೂರ್ವ ಮತ್ತು ದಕ್ಷಿಣ ಪೆನಿನ್ಸುಲರ್ ಭಾರತದಲ್ಲಿ ದೀರ್ಘಕಾಲದ ಶಾಖದ ಅಲೆಯನ್ನು ನಿರೀಕ್ಷಿಸಲಾಗಿದೆ. ಮುಂದಿನ ಐದು ದಿನಗಳವರೆಗೆ ಒಡಿಶಾದ ಕರಾವಳಿ, ಗಂಗಾ ಪಶ್ಚಿಮ ಬಂಗಾಳ ಮತ್ತು ಉಪ ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಪ್ರತ್ಯೇಕ ಪ್ರದೇಶಗಳು ಮತ್ತು ಕರ್ನಾಟಕದ ಒಳನಾಡಿನಲ್ಲಿ ತೀವ್ರ ಶಾಖದ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಹಾರ, ಜಾರ್ಖಂಡ್, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ ಮತ್ತು ಕರ್ನಾಟಕದ ಕರಾವಳಿಯ ಪ್ರತ್ಯೇಕ ಪ್ರದೇಶಗಳು ಈ ಅವಧಿಯಲ್ಲಿ ಬಿಸಿಗಾಳಿ ಪರಿಸ್ಥಿತಿಗಳಿಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ. ಮುಂದಿನ 5 ದಿನಗಳಲ್ಲಿ ಬಿಹಾರ, ಜಾರ್ಖಂಡ್, ಕರಾವಳಿ ಆಂಧ್ರಪ್ರದೇಶ ಮತ್ತು ಯಾಣಂ, ತೆಲಂಗಾಣ, ರಾಯಲಸೀಮಾದ ಪ್ರತ್ಯೇಕ ಪ್ರದೇಶಗಳಲ್ಲಿ ಶಾಖ ತರಂಗ ಪರಿಸ್ಥಿತಿಗಳು; 24 ಮತ್ತು 26 ರಂದು ಕರಾವಳಿ ಕರ್ನಾಟಕ, 24 ಮತ್ತು 25 ರಂದು ತಮಿಳುನಾಡು; 25-28 ನೇ ಅವಧಿಯಲ್ಲಿ ಪೂರ್ವ ಉತ್ತರ ಪ್ರದೇಶ ಮತ್ತು 26-28 ನೇ ಅವಧಿಯಲ್ಲಿ ಪಶ್ಚಿಮ ಉತ್ತರ ಪ್ರದೇಶ;…

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಮಂಗಳವಾರ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಇದು ನಗರದ ಇತಿಹಾಸದಲ್ಲಿ ಎರಡನೇ ಅತಿ ಹೆಚ್ಚು ಬೇಸಿಗೆಯ ದಿನವಾಗಿದೆ. ಈಗಾಗಲೇ ತಿಂಗಳುಗಳಿಂದ ಎಡೆಬಿಡದೆ ಬಿಸಿಗಾಳಿಯನ್ನು ಅನುಭವಿಸುತ್ತಿರುವ ಕರ್ನಾಟಕದ ರಾಜಧಾನಿ ಮಂಗಳವಾರ ಸಿಜ್ಲಿಂಗ್ ತಾಪಮಾನ ಮತ್ತು ಸುಡುವ ಶಾಖದ ಅನುಭವ ಅನುಭವಿಸಿದೆ. ಇದು ಏಪ್ರಿಲ್ ಸರಾಸರಿಯನ್ನು 3.4 ಡಿಗ್ರಿಗಳಷ್ಟು ಮೀರಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಹದಿನೈದು ದಿನಗಳ ಹಿಂದೆ ಬೆಂಗಳೂರಿನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. 2016ರಲ್ಲಿ ಬೆಂಗಳೂರಿನಲ್ಲಿ 39.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಶುಕ್ರವಾರ ನಡೆಯಲಿರುವ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮುಂದಿನ ಎರಡು ದಿನಗಳಲ್ಲಿ ಪಾದರಸವು ಇನ್ನೂ ಎತ್ತರಕ್ಕೆ ಏರಬಹುದು. ಬಹುಶಃ 39 ಡಿಗ್ರಿಗಳನ್ನು ದಾಟಬಹುದು ಎಂದು ಭಾರತ ಹವಾಮಾನ ಇಲಾಖೆಯ (ಐಎಂಡಿ) ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮಾರ್ಚ್ 29 ರಂದು 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನವನ್ನು ದಾಖಲಿಸಿದ ನಂತರ ಕಳೆದ ಐದು ವರ್ಷಗಳಲ್ಲಿ ಮಾರ್ಚ್ನಲ್ಲಿ…

Read More

ನವದೆಹಲಿ: ರೈಲು ಪ್ರಯಾಣಿಕರಿಗೆ ಗುಣಮಟ್ಟದ, ಕೈಗೆಟುಕುವ ಮತ್ತು ಆರೋಗ್ಯಕರ ಊಟವನ್ನು ಒದಗಿಸಲು, ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (Indian Railway Catering and Tourism Corporation -IRCTC)  ಸಹಯೋಗದೊಂದಿಗೆ ಭಾರತೀಯ ರೈಲ್ವೆ ‘ಎಕಾನಮಿ ಮೀಲ್’ ( Economy Meals) ಪರಿಕಲ್ಪನೆಯನ್ನು ಪರಿಚಯಿಸಿದೆ. ಬೇಸಿಗೆಯಲ್ಲಿ ಪ್ರಯಾಣಿಕರ ದಟ್ಟಣೆಯ ಹೆಚ್ಚಳವನ್ನು ನಿರೀಕ್ಷಿಸಿ, ರೈಲು ಪ್ರಯಾಣಿಕರಿಗೆ, ವಿಶೇಷವಾಗಿ ಸಾಮಾನ್ಯ ಬೋಗಿಗಳಲ್ಲಿ ಪ್ರಯಾಣಿಸುವವರಿಗೆ, ಕೈಗೆಟುಕುವ ವೆಚ್ಚದಲ್ಲಿ ಎರಡು ರೀತಿಯ ಊಟವನ್ನು ಒದಗಿಸಲಾಗುತ್ತದೆ. ಈ ಊಟದ ಕೌಂಟರ್ಗಳು ಈಗ ಭಾರತೀಯ ರೈಲ್ವೆಯಾದ್ಯಂತ 100 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ದಕ್ಷಿಣ ಮಧ್ಯ ರೈಲ್ವೆಯ 12 ರೈಲ್ವೆ ನಿಲ್ದಾಣಗಳಲ್ಲಿ 23 ಕೌಂಟರ್ಗಳಲ್ಲಿ ಎಕಾನಮಿ ಊಟವನ್ನು ನೀಡಲಾಗುತ್ತಿದೆ. ಈ ನಿಲ್ದಾಣಗಳಲ್ಲಿ ಹೈದರಾಬಾದ್, ವಿಜಯವಾಡ, ರೇಣಿಗುಂಟ, ಗುಂತಕಲ್, ತಿರುಪತಿ, ರಾಜಮಂಡ್ರಿ, ವಿಕಾರಾಬಾದ್, ಪಕಾಲ, ಧೋನ್, ನಂದ್ಯಲ್, ಪೂರ್ಣಾ ಮತ್ತು ಔರಂಗಾಬಾದ್ ರೈಲ್ವೆ ನಿಲ್ದಾಣಗಳು ಸೇರಿವೆ. ವಿಜಯವಾಡ ವಿಭಾಗದಲ್ಲಿ, ವಿಜಯವಾಡ ಮತ್ತು ರಾಜಮಂಡ್ರಿ ಸ್ಟೇಷನ್ ರಿಫ್ರೆಶ್ಮೆಂಟ್ ರೂಮ್ಗಳು ಮತ್ತು ಜನ್ ಅಹಾರ್…

Read More

ಬೆಂಗಳೂರು: ಏಪ್ರಿಲ್.26ರಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದೆ. ಇಂದು ಮೊದಲ ಹಂತದ ಲೋಕಸಭಾ ಚುನಾವಣೆಯ ಮೊದಲ ಹಂತದ ಕ್ಷೇತ್ರಗಳಿಗೆ ಬಹಿರಂಗ ಪ್ರಚಾರಕ್ಕೂ ತೆರೆ ಬಿದ್ದಿದೆ. ಇನ್ನೂ ಮನೆ ಮನೆಗೆ ತೆರಳಿ ಮತಯಾಚನೆಗೆ ಮಾತ್ರವೇ ಅವಕಾಶವಿದೆ. ಹಾಗಾದ್ರೇ ರಾಜ್ಯದ ಮೊದಲ ಹಂತದ 14 ಲೋಕಸಭಾ ಚುನಾವಣಾ ಕ್ಷೇತ್ರಗಳಲ್ಲಿ ಯಾವೆಲ್ಲ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ ಅಂತ ಮುಂದೆ ಓದಿ. ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮೊದಲ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್.26ರಂದು ಮತದಾನ ನಡೆಯಲಿದೆ. ದಿನಾಂಕ 26-04-2024ರಂದು ಮತದಾನ ನಡೆಯುವ ದಿನದಂದು ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳು ಯಾವುವು? ಬೆಂಗಳೂರು ಗ್ರಾಮಾಂತರ ಬೆಂಗಳೂರು ಉತ್ತರ ಬೆಂಗಳೂರು ಕೇಂದ್ರ ಬೆಂಗಳೂರು ದಕ್ಷಿಣ ಹಾಸನ ಚಿಕ್ಕಬಳ್ಳಾಪುರ ಉಡುಪಿ-ಚಿಕ್ಕಮಗಳೂರು ದಕ್ಷಿಣ ಕನ್ನಡ ತುಮಕೂರು ಚಿತ್ರದುರ್ಗ ಮಂಡ್ಯ ಮೈಸೂರು-ಕೊಡಗು ಚಾಮರಾಜನಗರ ಕೋಲಾರ…

Read More

ಬೆಂಗಳೂರು: ಆಮೀಷಕ್ಕೆ ಒಳಗಾಗದೆ ಸ್ವಯಿಚ್ಛೆಯಿಂದ ಎಲ್ಲರೂ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ವಿದ್ಯಾರ್ಥಿಗಳಲ್ಲಿ ಹಾಗೂ ಎಲ್ಲಾ ಮತದಾರರಿಗೆ ಅರಿವು ಮೂಡಿಸುವಂತೆ ಕರೆ ನೀಡಿದರು. ಮಹದೇವಪುರದ ಗುಂಜೂರು ಬಳಿಯಿರುವ ಕೃಪಾನಿಧಿ ಗ್ರೂಫ್ ಆಫ್ ಇನ್ಸ್ಟಿಟ್ಯೂಷನ್ಸ್ ನಲ್ಲಿ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವೆಲ್ಲರೂ ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸ್ವಯಿಚ್ಛೆಯಿಂದ ಮುಂದೆ ಬಂದು ಮತದಾನ ಮಾಡಬೇಕೆಂದು ತಿಳಿಸಿದರು. ನಿಮಗೆ ಮತದಾನ ಮಾಡುವ ಮನಸ್ಸಿದ್ದು, ಅದರ ಬಗ್ಗೆ ಅರಿವಿಲ್ಲ ಎಂದಾದರೆ ಎಲ್ಲರೂ ಮೊದಲು ಮಾಡಬೇಕಾಗಿರುವ ಕೆಲಸ ವೋಟರ್ ಹೆಲ್ಪ್ ಲೈನ್ ತಂತ್ರಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ನಂತರ ತಂತ್ರಾಂಶದಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿಯ ಸಂಖ್ಯೆ ನಮೂಸಿದರೆ ಸಾಕು ಎಲ್ಲಾ ಮಾಹಿತಿ ನಿಮಗೆ ಸಿಗಲಿದೆ ಎಂದು ಮಾಹಿತಿ ನೀಡಿದರು. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದ್ದು, ನೀವು ಮತದಾನ ಮಾಡದಿರುವುದು ತಪ್ಪಾಗುತ್ತದೆ. ಇನ್ನು ನೀವು ಆಮೀಷಕ್ಕೊಳಗಾಗಿ…

Read More