Author: kannadanewsnow09

ರಾಯಚೂರು: ಜಿಲ್ಲೆಯಲ್ಲಿ ಇಂದು ಕಾರಿ ಟೈಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ ಹೊಂದಿರುಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ಹೊರವಲಯದಲ್ಲಿ ಕಾರೊಂದರ ಮುಂಭಾಗದ ಟೈಯರ್ ಸ್ಪೋಟಗೊಂಡಿದೆ. ಈ ಬಳಿಕ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದಂತ ಬೈಕ್ ಗೆ ಡಿಕ್ಕಿ ಹೊಡೆದಿದೆ. ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಜಾಲಹಳ್ಳಿಯ ನಿವಾಸಿಗಳಾದಂತ ಗುತ್ತೆಪ್ಪ(45), ಜಗದೀಶ್ (50) ಎಂಬುವಂತವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/if-congress-comes-to-power-farmers-loans-will-be-waived-off-completely-siddaramaiah/ https://kannadanewsnow.com/kannada/section-144-imposed-in-bengaluru-from-today-till-april-26-midnight-sale-of-liquor-banned/

Read More

ಬೀದರ್ : ಏಪ್ರಿಲ್ 24: ಬಿಜೆಪಿ ಆಡಳಿತದ ಅವಧಿಯಲ್ಲಿ ಸಂವಿಧಾನ ಅಪಾಯದಲ್ಲಿದ್ದು ಅದನ್ನು ರಕ್ಷಣೆ ಮಾಡಬೇಕಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಚಿಂತನೆ ನಡೆಸಬೇಕು. ದೇಶದ ಭವಿಷ್ಯ ರೂಪಿಸಲು ಇದು ಬಹಳ ಮುಖ್ಯ. ಜನತೆ ವಿಚಾರ ಮಾಡಿ ಯಾವ ಪಕ್ಷಕ್ಕೆ ಅಧಿಕಾರ ಕೊಟ್ಟರೆ ದೇಶದ ಹಿತ ಕಾಪಾಡುತ್ತಾರೆ ಎಂದು ತೀರ್ಮಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರೀ ರಾಮ ಮಾರ್ಕೆಟ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಪರವಾಗಿ ಪ್ರಜಾಧ್ವನಿ -02 ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನರೇಂದ್ರ ಮೋದಿಯವರು 10 ವರ್ಷಗಳಿಂದ ಪ್ರಧಾನ ಮಂತ್ರಿಯಾಗಿದ್ದಾರೆ. ಈ ಸುದೀರ್ಘ ಅವಧಿಯಲ್ಲಿ ಈ ದೇಶದ ಬಡವರಿಗೆ , ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಕಾರ್ಯಕ್ರಮಗಳನ್ನು ಕೊಟ್ಟಿಲ್ಲ. ಈ ವರ್ಗದ ಪರವಾಗಿ ಯಾವತ್ತೂ ಕೆಲಸ ಮಾಡಿಲ್ಲ. ಬಿಜೆಪಿ ಸಾಮಾಜಿಕ ನ್ಯಾಯದ ವಿರುದ್ಧ, ಬಡವರ ಹಿತಕ್ಕೆ ವಿರುದ್ಧವಾಗಿರುವ ಪಕ್ಷ. ಸಂವಿಧಾನ, ಪ್ರಜಾಪ್ರಭುತ್ವಕ್ಕೆ ವಿರೋಧಿಯಾಗಿರುವ ಪಕ್ಷ.…

Read More

ಬೆಂಗಳೂರು: ಏಪ್ರಿಲ್.26ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಮಾಡಿರುವ ಮತಗಟ್ಟೆಗಳಿಗೆ ಪ್ರಶಸ್ತಿ ನೀಡಲಾಗುತ್ತದೆ ಎಂಬುದಾಗಿ ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಈ ಕುರಿತಂತೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಎಸ್ ವಿಇಇಪಿ ನೋಡಲ್ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅದರಲ್ಲಿ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ, ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಮತದಾನವು ದಿನಾಂಕ: 26.04.2024 ರಂದು (ಎರಡನೇ ಹಂತ) ಹಾಗೂ ದಿನಾಂಕ: 07.05.2024 ರಂದು (ಮೂರನೇ ಹಂತ) ನಡೆಯಲಿದೆ, ಈ ಸಂಬಂಧ ಮತದಾರರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಪ್ರಚಾರ/SVEEP ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ/ಆಯೋಜಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಲು ಭಾರತ ಚುನಾವಣಾ ಆಯೋಗವು ನಿರ್ದೇಶನಗಳನ್ನು ನೀಡಿರುತ್ತದೆ ಎಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ (AC no 110 booth no 15 yelnir guthyadka, AC no 200 booth no 86Banjarumale) 2…

Read More

ಬೆಂಗಳೂರು: ಸಿಎಂ ಸಿದ್ಧಾರಮಯ್ಯ ಅವರು ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಸುಧೀರ್ಘವಾದಂತ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅವರು ಎತ್ತಿರುವಂತ ಪ್ರಶ್ನೆಗಳಿಗೆ ಉತ್ತರಿಸ್ತಾರಾ ಅಂತ ನೋಡಬೇಕಿದೆ. ಆ ಬಗ್ಗೆ ಮುಂದೆ ಓದಿ. ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ. ದೇಶದಲ್ಲಿ ಇಲ್ಲಿಯ ವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ. ಜವಾಬ್ದಾರಿ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಂದೋ ಈ ಬೇಜವಾಬ್ದಾರಿತನದ ಆರೋಪವನ್ನು ಆಧಾರಗಳನ್ನು ನೀಡಿ ಸಾಬೀತುಪಡಿಸಬೇಕು ಇಲ್ಲದೆ ಇದ್ದರೆ ದೇಶದ ಜನರ ಕ್ಷಮೆ ಕೇಳಬೇಕು. ಹಿಂದುಳಿದ ಜಾತಿ ಮತ್ತು ಎಸ್ ಸಿ / ಎಸ್ ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ? ಯಾವ ರಾಜ್ಯದ ಕಾಂಗ್ರೆಸ್ ಸರ್ಕಾರ…

Read More

ಗದಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ದೇಶದ ಆಸ್ತಿಯನ್ನು ಮರು ಹಂಚಿಕೆ ಮಾಡುವುದಾಗಿ ಹೇಳುತ್ತಾರೆ. ಮೊದಲು ನಿಮ್ಮ ಬೇನಾಮಿ‌ ಆಸ್ತಿಯನ್ನು ಜನರಿಗೆ ಹಂಚಿಕೆ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದರು.  ಗಜೇಂದ್ರಗಡದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ಇಂಡಿ ಒಕ್ಕೂಟದಲ್ಲಿ ಯಾರು ಪ್ರಧಾನಿ ಅಭ್ಯರ್ಥಿ ಅಂತ ಗೊತ್ತಿಲ್ಲ. ಮಮತಾ ಬ್ಯಾನರ್ಜಿ ತಾನೇ ಪ್ರಧಾನಿ ಅಂತಾರೆ, ಕೇಜ್ರಿವಾಲ್ ಜೈಲಿನಲ್ಲಿದ್ದುಕೊಂಡು ತಾನೇ ಪಿಎಂ ಆಗುತ್ತೇನೆ ಎನ್ನುತ್ತಾರೆ. ಶರತ್ ಪವಾರ್ ನಾನೂ ಪ್ರಧಾ‌ನಿ ಆಗುತ್ತೇನೆ ಅನ್ನುತ್ತಾರೆ. ಲಾಲೂ ಪ್ರಸಾದ್ ಯಾದವ್ ನಾನೂ ಒಂದು ಕೈ ನೋಡುತ್ತೇನೆ ಎನ್ನುತ್ತಾರೆ. ರಾಹುಲ್ ಗಾಂಧಿಗೆ ಪ್ರಧಾನಿ ಆಗು ಎಂದರೆ ಬೇಡ ಎನ್ನುತ್ತಾರೆ. ವಯಸ್ಸಿಗೆ ಬಂದ‌ ಮಗ ಮದುವೆ ಬೇಡ ಅಂತ ಹೇಳುತ್ತಾನೆ ಎಂದರೆ ಏನು ಎಂದು ತಿಳಿದುಕೊಳ್ಳಬೇಕು ಎಂದು ಪ್ರಶ್ನಿಸಿದರು. ಕಾಂಗ್ರೆಸ್ ನವರು ಎಷ್ಟು ವರ್ಷ ಜನರಿಗೆ ಮೋಸ ಮಾಡಬೇಕೆಂದುಕೊಂಡಿದ್ದೀರಿ, ಸುಳ್ಳಿನಲ್ಲಿ ಕಾಂಗ್ರೆಸ್…

Read More

ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿರುವ ನೇಹಾರವರ ಮನೆಗೆ ಭೇಟಿ ನೀಡಿ ಅವರ ತಂದೆ ನಿರಂಜನ ಹಿರೇಮಠ, ಅವರ ತಾಯಿ, ಸಹೋದರ ಹಾಗೂ ಕುಟುಂಬಸ್ಥರಿಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಸಾಂತ್ವಾನ ಹೇಳಿದರು. ಅಲ್ಲದೇ ನೇಹಾರವರ ಸಾವಿಗೆ ಸಂತಾಪವನ್ನು ಸೂಚಿಸಿದರು. ಈ ಸಂದರ್ಭದಲ್ಲಿ ನನ್ನೊಂದಿಗೆ ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಶಾಸಕರಾದ ಪ್ರಸಾದ್ ಅಬ್ಬಯ್ಯ ಹಾಗೂ ಮತ್ತಿತರ ಮುಖಂಡರು ಜೊತೆಗಿದ್ದರು. ನಿರಂಜನ ಹಿರೇಮಠ ರವರು ನಮ್ಮ ಕುಟುಂಬದ ಭಾಗವಾಗಿದ್ದು ಅವರ ಈ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬದೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ. ನೇಹಾರವರ ಸಾವಿಗೆ ನ್ಯಾಯ ದೊರಕಿಸಿ ಕೊಡುವುದಾಗಿ ಅವರ ಕುಟುಂಬಕ್ಕೆ ಭರವಸೆ ನೀಡಿದ್ದೇವೆ. ಈ ನಿಟ್ಟಿನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಈ ಕೆಳಗಿನ ನಿರ್ಧಾರಗಳನ್ನು ತೆಗೆದುಕೊಂಡಿದೆ. 1. ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. 2. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಮತ್ತು ಕರ್ನಾಟಕ ಸರ್ಕಾರವು ಈ ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ಹಸ್ತಾಂತರಿಸಲು ನಿರ್ಧರಿಸಿದೆ. 90 ರಿಂದ 120 ದಿನಗಳಲ್ಲಿ…

Read More

ಬೆಂಗಳೂರು: ಏಪ್ರಿಲ್.26ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಚುನಾವಣಾ ಮತದಾನಕ್ಕೂ ಮುನ್ನ ಇಂದೀಗ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಐದು ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಏಪ್ರಿಲ್.26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ವೇಳೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಐದು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. 13 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 11 ಸಿಆರ್ ಪಿಎಫ್, 14 ಕೆ ಎಸ್ ಆರ್ ಪಿ ಹಾಗೂ 40…

Read More

ಮನೆಯಲ್ಲಿ ಮನಿ ಪ್ಲಾಂಟ್ ಇಟ್ಟುಕೊಳ್ಳುವುದು ಒಳ್ಳೆಯದು. ಮನಿ ಪ್ಲಾಂಟ್ ಬೆಳೆದಂತೆ, ನಮ್ಮ ಸಂಪತ್ತು ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಇದು ನಮಗೆಲ್ಲ ತಿಳಿದಿರುವ ವಿಷಯ. ಆದರೆ ಮನಿ ಪ್ಲಾನ್ ಪ್ಲಾಂಟ್ ಬೆಳೆದಂತೆ ನಮ್ಮ ಕುಟುಂಬ ಎದುರಿಸಬಹುದಾದ ಸಮಸ್ಯೆಗಳೇನು? ಹಣ ಬರುವುದರ ಹಿಂದಿನ ಸಮಸ್ಯೆಗಳೇನು ಎನ್ನುವುದನ್ನು ಈ ಪೋಸ್ಟ್ ನಲ್ಲಿ ನಿಮಗಾಗಿ ಕೆಲವು ವಾಸ್ತು ಮಾಹಿತಿ ಇಲ್ಲಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ…

Read More

ಬೆಂಗಳೂರು: ಏಪ್ರಿಲ್.26ರಂದು ರಾಜ್ಯದ 14 ಜಿಲ್ಲೆಗಳಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಈ ವೇಳೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಹೀಗಾಗಿ ರಾಜ್ಯದ 14 ಜಿಲ್ಲೆ ವ್ಯಾಪ್ತಿಯಲ್ಲಿ ಇಂದಿನಿಂದ ಎರಡು ದಿನ ಎಣ್ಣೆ ಸಿಗೋದಿಲ್ಲ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿದೆ. ಇನ್ಮುಂದೆ ಮನೆ ಮನೆಗೆ ತೆರಳಿ ಅಭ್ಯರ್ಥಿಗಳು ಮತಯಾಚನೆಯಲ್ಲಿ ತೊಡಗಬೇಕಿದೆ. ಅಲ್ಲದೇ ಮತದಾರರಲ್ಲದ ಕ್ಷೇತ್ರಗಳಲ್ಲಿ ಇರುವಂತ ರಾಜಯಕೀಯ ನಾಯಕರು ಕ್ಷೇತ್ರ ವ್ಯಾಪ್ತಿಯನ್ನು ಬಿಟ್ಟು ತೆರಳಬೇಕಿದೆ. ಬೆಂಗಳೂರು ಗ್ರಾಮಾಂತರ, ಉತ್ತರ, ಕೇಂದ್ರ, ದಕ್ಷಿಣ ಲೋಕಸಭಾ ಕ್ಷೇತ್ರಗಳು, ಹಾಸನ, ಚಿಕ್ಕಬಳ್ಳಾಪುರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಏಪ್ರಿಲ್.26ರಂದು ಮತದಾನ ನಡೆಯಲಿದೆ. ಈ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈಗಾಗಲೇ ಆಯಾ ಚಿಲ್ಲಾಧಿಕಾರಿಗಳು 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಇಂದು…

Read More

ಬೆಂಗಳೂರು: ರಾಜ್ಯ ಸರ್ಕಾರ ನಿಗದಿ ಪಡಿಸಿ, ಹೊರಡಿಸಲಾಗಿದ್ದಂತ ನಾಡಗೀತೆ ಸಂಗೀತ ಸಂಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿಂತೆ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಎಂಬುವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ತಿಂಗಳಾನು ಗಟ್ಟಲೇ ಹೈಕೋರ್ಟ್ ನ್ಯಾಯಪೀಠವು ವಿಚಾರಣೆ ನಡೆಸಿತು. ಅಲ್ಲದೇ ನಾಡಗೀತೆಯ ಸಂಗೀತ ಸಂಯೋಜನೆಗೆ ಸಂಬಂಧಿಸಿದಂತೆ ಗಾಯಕರಿಂದ ಕೋರ್ಟ್ ಹಾಲ್ ನಲ್ಲಿಯೇ ಹಾಡಿಸಿ, ವಿಚಾರಣೆ ನಡೆಸಲಾಗಿತ್ತು. ಇಂದು ಅಂತಿಮವಾಗಿ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು, ನಾಡಗೀತೆ ಸಂಗೀತ ಸಂಯೋಜನೆ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಅಂದಹಾಗೇ ರಾಜ್ಯ ಸರ್ಕಾರ ಮೈಸೂರು ಅನಂತಸ್ವಾಮಿ ಅವರ ದಾಟಿಯನ್ನು ನಾಡಗೀತೆಗೆ ಕಡ್ಡಾಯಗೊಳಿಸಲಾಗಿತ್ತು. ಕುವೆಂಪು ವಿರಚಿತ ನಾಡಗೀತೆಗೆ ಸಂಗೀತ ಸಂಯೋಜನೆ ಕೂಡ ಮಾಡಲಾಗಿತ್ತು. ಆದ್ರೇ ಮೈಸೂರು ಅನಂತಸ್ವಾಮಿ ಅವರ ಸಂಗೀತ ಸಂಯೋಜನೆಗೆ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರು ಆಕ್ಷೇಪಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ನ್ಯಾಯಪೀಠದ ಮುಂದೆ ಸರ್ಕಾರದ ಕ್ರಮವನ್ನು ಎಎಜಿಎಸ್ ಅಹಮದ್ ಪಾಷಾ…

Read More