Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಡೆಲಾಯ್ಟ್ ಯುಎಸ್: ಇಂಡಿಯಾ ಕಚೇರಿಯು ಬೆಂಗಳೂರಿನಲ್ಲಿ ತನ್ನ ಹೊಸ ಕಚೇರಿಯನ್ನು ತೆರೆದಿದ್ದು, ನಗರದಲ್ಲಿ ಇದು ನಾಲ್ಕನೇ ಕಚೇರಿ ಆಗಿದೆ. ಮಾರತಹಳ್ಳಿಯ ಯೆಮಲೂರು ಗ್ರಾಮದಲ್ಲಿ ನೆಲೆಗೊಂಡಿರುವ ಈ ಹೊಸ ಘಟಕವು ಜಾಗತಿಕ ಗ್ರಾಹಕರಿಗೆ ಬೆಂಬಲ ನೀಡುತ್ತದೆ ಮತ್ತು 6000 ವೃತ್ತಿಪರರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಪ್ರದೇಶದಲ್ಲಿ ವಿಸ್ತರಣೆ ಮತ್ತು ಬೆಳವಣಿಗೆಗೆ ಡೆಲಾಯ್ಟ್‌ನ ಬದ್ಧತೆಯನ್ನು ಬಲಪಡಿಸುತ್ತದೆ. ಈಗಾಗಲೇ ಮೂರು ಕಚೇರಿಗಳು ನಗರದಲ್ಲಿದ್ದು, ಹೊಸ ಕಚೇರಿಯು ಹೆಚ್ಚುವರಿಯಾಗಿರಲಿದೆ ಮತ್ತು ನುರಿತ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಮತ್ತು ನಗರದ ಪೂರಕ ಮೂಲಸೌಕರ್ಯ ಮತ್ತು ಪರಿಸರ ವ್ಯವಸ್ಥೆಯ ಪ್ರಯೋಜನ ಪಡೆದುಕೊಳ್ಳುವ ಗುರಿ ಹೊಂದಿದೆ. ಕೃತಕ ಬುದ್ಧಿಮತ್ತೆ, ಡೇಟಾ ಅನಾಲಿಟಿಕ್ಸ್, ಸೈಬರ್ ಭದ್ರತೆ, ಕ್ಲೌಡ್ ಸೇವೆಗಳು, ಮಾನವ ಬಂಡವಾಳ, ಭರವಸೆ, ತೆರಿಗೆ, ಮೌಲ್ಯಮಾಪನಗಳು ಮತ್ತು ವಿಲೀನಗಳು ಮತ್ತು ಸ್ವಾಧೀನಗಳಂತಹ ವಿವಿಧ ವಲಯಗಳಲ್ಲಿ ಪರಿಣತಿ ಹೊಂದಿರುವ ನುರಿತ ವೃತ್ತಿಪರರು ಈ ಹೊಸ ಕಚೇರಿಯಿಂದ ಕಾರ್ಯನಿರ್ವಹಿಸುತ್ತಾರೆ. ಡೆಲಾಯ್ಟ್ US ಅಧ್ಯಕ್ಷರಾದ ಲಾರಾ ಅಬ್ರಾಶ್ ಅವರು ಉದ್ಘಾಟಿಸಿದ, ಈ ಘಟಕವು…
ಏನು ಹೋಗುತ್ತದೆ ಮತ್ತು ಹಿಂತಿರುಗುವುದಿಲ್ಲ. ಇದು ನಮ್ಮ ಜೀವನ ಎಂದು ಹೇಳೋಣ. ಆದರೆ ಸಮಯ ಮತ್ತು ಸಮಯ ಕೂಡ ಹಿಂತಿರುಗುವುದಿಲ್ಲ. ಇಂದು ನಾವು ಆ ಕಾಲದ ಒಡೆಯ, 27 ನಕ್ಷತ್ರಗಳು ಮತ್ತು 12 ರಾಶಿಚಕ್ರದ ಚಿಹ್ನೆಗಳ ಒಡೆಯ ಮತ್ತು ಈ ಸಮಯದ ಒಡೆಯ ಕಾಳಿಕಾದೇವಿ ಅಮ್ಮನ ದೇವಾಲಯದ ಬಗ್ಗೆ ನೋಡಲಿದ್ದೇವೆ. ದೇವಿ ಕಲಾದೇವಿ ವಿಶೇಷ ಯಾವುದೇ ಸಮಯದಲ್ಲಿ ಮನುಷ್ಯರಿಗೆ ಏನಾಗುತ್ತದೆ ಎಂದು ಯಾರೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ವಿಜ್ಞಾನಿಗಳು ಸಹ ಸಮಯದ ರಹಸ್ಯವನ್ನು ಊಹಿಸಲು ಸಾಧ್ಯವಿಲ್ಲ ಮತ್ತು ಈ ಭೂಮಿಯ ಮೇಲೆ ಮುಂದೆ ಏನಾಗುತ್ತದೆ ಎಂಬ ಅಭಿಪ್ರಾಯವಿದೆ. ಆದರೆ ನಮ್ಮ ಕಾಲ ಮತ್ತು ನಮ್ಮ ಭವಿಷ್ಯದ ಕಾಲದ ಬಗ್ಗೆ ತಿಳಿದಿರುವ ದೇವತೆಯಿದ್ದರೆ ಅದು ಈ ಶ್ರೀ ಕಲಾದೇವಿ ದೇವಿಯೇ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ…
ನವದೆಹಲಿ: ಇನ್ಸ್ಟಾಗ್ರಾಮ್ ಮತ್ತೆ ಸ್ಥಗಿತಗೊಳ್ಳುತ್ತಿದೆಯೇ? ಬಳಕೆದಾರರು ತಮ್ಮ ಮೆಟಾ-ಮಾಲೀಕತ್ವದ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಇನ್ಸ್ಟಾಗ್ರಾಮ್ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆಯೇ ಎಂದು ತಿಳಿಯಲು ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿ ಹೇಳಿದ್ದಾರೆ. ಸ್ಥಗಿತ ಟ್ರ್ಯಾಕರ್ ವೆಬ್ಸೈಟ್ ಡೌನ್ ಡೆಟೆಕ್ಟರ್ ಪ್ರಕಾರ, ಭಾರತದಲ್ಲಿ ಇನ್ಸ್ಟಾಗ್ರಾಮ್ ಸ್ಥಗಿತವು ಭಾರತೀಯ ಕಾಲಮಾನ ರಾತ್ರಿ 9:19 ರ ಸುಮಾರಿಗೆ ಸುಮಾರು ಒಂದು ಸಾವಿರ ಬಳಕೆದಾರರ ವರದಿಗಳೊಂದಿಗೆ ಉತ್ತುಂಗಕ್ಕೇರಿತು.
ಬೆಂಗಳೂರು: ಅಪಾರ್ಮೆಂಟ್ ನಿವಾಸಿಗಳಿಗೆ ಬೆದರಿಗೆ ಹಾಕಿ, ಮತದಾರರಿಗೆ ಆಮಿಷವೊಡ್ಡಿದ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿ ರಾಜ್ಯ ಚುನಾವಣಾ ಆಯೋಗವು ಎಕ್ಸ್ ಮಾಡಿ ಮಾಹಿತಿ ನೀಡಿ, ಅದರಲ್ಲಿ ಬೆಂಗಳೂರಿನ ಆರ್.ಆರ್.ನಗರದ ಅಪಾರ್ಟ್ಮೆಂಟ್ ಮಾಲೀಕರನ್ನುದ್ದೇಶಿಸಿ ಮಾತನಾಡುವಾಗ ಎಂಸಿಸಿ ಉಲ್ಲಂಘಿಸಿದ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬೆಂಗಳೂರಿನ ಎಫ್ಎಸ್ಟಿ ಎಫ್ಐಆರ್ ದಾಖಲಿಸಿದೆ. ಆರ್ ಎಂಸಿ ಯಾರ್ಡ್ ಪಿಎಸ್ ನಲ್ಲಿ ಎಫ್ ಐಆರ್ ಸಂಖ್ಯೆ 78/2024 ಅನ್ನು ಐಪಿಸಿಯ ಸೆಕ್ಷನ್ 171 (ಬಿ) (ಸಿ) (ಇ) (ಎಫ್) ಅಡಿಯಲ್ಲಿ ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬೀರಿದ್ದರ ಕಾರಣ, ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿತ್ತು. https://twitter.com/ceo_karnataka/status/1781594737700392998 ಈಗ ಯಶವಂತಪುರದ ಆರ್ ಎಂಸಿಯಾರ್ಡ್ ಪೊಲೀಸ್ ಠಾಣೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ದಾಖಲಾಗಿರುವಂತ ಎಫ್ಐಆರ್ ರದ್ದುಗೊಳಿಸುವಂತೆ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಯಾವ ತೀರ್ಪು ನೀಡುತ್ತೆ…
ಹುಬ್ಬಳ್ಳಿ: ನಗರದಲ್ಲಿ ನಡೆದಿದ್ದಂತ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಅಲ್ಲದೇ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೂ ಆದೇಶಿಸಿದೆ. ಈ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯ ನೇಹಾ ತಂದೆ ನಿರಂಜನ ಜೊತೆಗೆ ಇಂದು ಮಾತನಾಡಿ, ಕ್ಷಮೆ ಯಾಚಿಸಿದ್ದಾರೆ. ಇಂದು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ನೇಹಾ ಮನೆಗೆ ಭೇಟಿ ನೀಡಿದರು. ನೇಹಾ ಅವರ ತಂದೆ ನಿರಂಜನಗೆ ಸಾಂತ್ವಾನ ಹೇಳಿದರು. ಇದೇ ಸಂದರ್ಭದಲ್ಲಿ ನಿರಂಜನ ಜೊತೆಗೆ ದೂರವಾಣಿ ಕರೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಡಿದರು. ನಿರಂಜನ ಅವರಿಗೆ ನಿಮ್ಮ ಜೊತೆಗೆ ನಾವು ಇದ್ದೇವೆ. ಯಾವುದೇ ಆತಂಕ ಬೇಡ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ವೆರಿ ಸಾರಿ ಎಂಬುದಾಗಿಯೂ ತಿಳಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/congress-made-deve-gowda-pm-but-i-dont-know-why-he-is-shedding-tears-dk-shivakumar/ https://kannadanewsnow.com/kannada/minor-girl-commits-suicide-by-hanging-herself-after-boyfriend-makes-obscene-video-viral/
ಬೆಂಗಳೂರು : “ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿದೆ. ಆದರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೆ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಸಿಕೆ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾದ ತೋಳ್ಕಪ್ಪಿಯನ್ ತಿರುಮವಳವನ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ಈ ವಯಸ್ಸಿನಲ್ಲಿ ನನಗೆ ಈ ರೀತಿ ಮಾಡಿದ್ದಾರೆ ಎಂದು ದೇವೇಗೌಡರು ಹಾಸನದಲ್ಲಿ ಕಣ್ಣೀರು ಹಾಕಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ, “ಅವರನ್ನು ಮುಖ್ಯಮಂತ್ರಿ ಮಾಡಿದ್ದು ಹಾಸನ ಜಿಲ್ಲೆಯಲ್ಲ, ನಮ್ಮ ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಹೀಗಾಗಿ ಅವರು ಕಣ್ಣೀರು ಹಾಕುವ ಪರಿಸ್ಥಿತಿ ಇಲ್ಲ. ಅವರಿಗೆ ತಮ್ಮ ಕೊಡುಗೆ ಬಗ್ಗೆ ಹೇಳಲು ಆಗುವುದಿಲ್ಲ. ಅವರು ಏನೇ ಪ್ರಯತ್ನ ಮಾಡಲಿ, ಅವರು ಹೇಳಿರುವಂತೆ ನಾಲ್ಕು ಸೀಟು ಬರುವುದಿಲ್ಲ. ಮೂರು…
ಬೆಂಗಳೂರು: ರಾಜ್ಯದ ಸಿಎಂ, ಗೃಹ ಸಚಿವರ ಕೃಪಾಕಟಾಕ್ಷದಿಂದ ಇವತ್ತು ಕರ್ನಾಟಕವು ಕರಾಳ ದಿನಗಳನ್ನು ಎದುರಿಸಬೇಕಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಜೀವಂತ ಇದೆಯಾ ಎಂಬ ಸಂಶಯ ಎಲ್ಲರಲ್ಲಿ ಮನೆಮಾಡುತ್ತಿದೆ. ಕರ್ನಾಟಕದಲ್ಲಿ ಹೆಣ್ಮಕ್ಕಳು, ವಿದ್ಯಾರ್ಥಿಗಳ ಜೀವಕ್ಕೆ ಸುರಕ್ಷತೆ ಇಲ್ಲವಾಗಿದೆ. ದಲಿತರ ಮನೆಗೆ ನುಗ್ಗಿ ಪೋಷಕರ ಸಮ್ಮುಖದಲ್ಲೇ ಒಬ್ಬ ದಲಿತ ಯುವಕನನ್ನು ಮರ್ಮಾಂಗಕ್ಕೆ ಒದ್ದು, ಕತ್ತು ಹಿಸುಕಿ ಸಾಯಿಸುವ ಘಟನೆ ಈ ಕರ್ನಾಟಕದಲ್ಲಿ ನಡೆದಿದೆ ಎಂದರು. ಯಾದಗಿರಿಯಲ್ಲಿ ಮೊನ್ನೆ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ರಾಕೇಶ್ ಅವರ ಹತ್ಯೆಯಾಗಿದೆ; ಆದರೆ, ನಿನ್ನೆ ಮಧ್ಯಾಹ್ನ 1 ಗಂಟೆಗೆ ಎಫ್‍ಐಆರ್ ದಾಖಲಾಗಿದೆ. ಕಾನೂನು- ಸುವ್ಯವಸ್ಥೆ ಈ ರಾಜ್ಯದಲ್ಲಿ ಜೀವಂತ ಇದೆಯೇ ಎಂದು ಪ್ರಶ್ನಿಸಿದರು. ಒಬ್ಬ ದಲಿತ ಯುವಕನ ಕೊಲೆಯನ್ನು ಮುಚ್ಚಿ ಹಾಕುವ ಕೆಲಸ ಈ ರಾಜ್ಯದಲ್ಲಿ…
ಬೆಂಗಳೂರು: ಭಾರತ ಹವಾಮಾನ ಇಲಾಖೆ (IMD) ಯು ಈ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ (Heat Wave) ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನವನ್ನು ಸೂಚಿಸುತ್ತದೆ. ಹೀಗಾಗಿ ಕೆಲ ಸಲಹೆಗಳನ್ನು ತಪ್ಪದೇ ಸಾರ್ವಜನಿಕರು ಪಾಲಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಪ್ರಸ್ತುತ, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಭಾರತೀಯ ಹವಾಮಾನ ಇಲಾಖೆಯು ಏಪ್ರಿಲ್ 2024ರ ಸಂಭವನೀಯತೆಯ ಮುನ್ನೋಟವನ್ನು ಆಧರಿಸಿ, ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ ಮಾಹೆಯಿಂದ ಮೇ- 2024 ರ ಅವಧಿಯಲ್ಲಿ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಸೂಚಿಸಿರುತ್ತದೆ. ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಅಲ್ಲದೇ, ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ…
ಶಿವಮೊಗ್ಗ : ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ. 24 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ನಗರದ ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ, ಎಂಕೆಕೆ ರಸ್ತೆ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಏ.29: ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ಶಿವಮೊಗ್ಗ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಏ.29 ರಂದು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಾಯಿ ಎಕ್ಸ್‍ಪೋರ್ಟ್, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಕನ್ನಿಕಾ ಪರಮೇಶ್ವರಿ ಸಹಕಾರಿ ಬ್ಯಾಂಕ್, ದಾವಣಗೆರೆ ಇಲ್ಲಿ ಕಾರ್ಯಕ್ರಮ ನಡೆಯಲಿದೆ. ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ…
ಬೆಂಗಳೂರು: ಇಬ್ಬರು ಮಹಿಳೆಯರಿಗೆ ಎಲ್ ಎಸ್ ಸಿಎಸ್ ಶಸ್ತ್ರ ಚಿಕಿತ್ಸೆಯ ನಂತ್ರ ತೀವ್ರ ರಕ್ತಸ್ತ್ರಾವದಿಂದಾಗಿ ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಬಳ್ಳಾರಿಯ ಮೋಕಾ ಸಮುದಾಯ ಆರೋಗ್ಯ ಕೇಂದ್ರದ ಸ್ತ್ರೀರೋಗ ತಜ್ಞೆ ಡಾ.ಪರಿಮಳಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಆರೋಗ್ಯ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದಂತ ಡಿ.ರಂದೀಪ್ ಅವರು ಆದೇಶ ಹೊರಡಿಸಿದ್ದಾರೆ. ದಿನಾಂಕ 07-03-2024ರಂದು ಭಾಗ್ಯಮ್ಮ(23) ಎಂಬುವರು ಮೋಕಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಎಲ್ ಎಸ್ ಸಿಎಸ್ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರಿಗೆ ಸ್ತ್ರೀರೋಗ ತಜ್ಞೆ ಡಾ.ಪರಿಮಳ ದೇಸಾಯಿ ಶಸ್ತ್ರಚಿಕಿತ್ಸೆ ನಡೆಸಿದ್ದರು ಎಂದಿದ್ದಾರೆ. ಶಸ್ತ್ರಚಿಕಿತ್ಸೆಯ ನಂತ್ರ ಭಾಗ್ಯಮ್ಮ ಅವರಿಗೆ ತೀವ್ರರಕ್ತ ಸ್ತ್ರಾವ ಉಂಟಾಗಿತ್ತು. ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯೋ ಮಾರ್ಗಮಧ್ಯೆದಲ್ಲಿ ಮೃತಪಟ್ಟಿದ್ದರು ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ ಎಂದು ಹೇಳಿದ್ದಾರೆ. ದಿನಾಂಕ 06-03-2024ರಂದು ಸಿಂಧುವಾಳ ನಗರದ ರಾಜಮ್ಮ(23) ಎಂಬುವರಿಗೆ ಎಲ್ ಎಸ್ ಸಿಎಸ್ ಶಸ್ತ್ರ ಚಿಕಿತ್ಸೆಯನ್ನು ಡಾ.ಪರಿಮಳ ದೇಸಾಯಿ ನೆರವೇರಿಸಿದ್ದರು. ಅವರು ಕೂಡ ತೀವ್ರ…