Author: kannadanewsnow09

ಬೆಂಗಳೂರು: ಪಿಎಸ್ಐ ಹಗರಣದ ಕಿಂಗ್ ಪಿನ್ ಗಳ ಮನೆಗೆ ಭೇಟಿ ನೀಡಿ, ಅವರ ನಿವಾಸದಲ್ಲಿ ಊಟ ಮಾಡಿದಂತ ಸಂಸದ ಉಮೇಶ್ ಜಾಧವ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪಕ್ಷದಿಂದ ದೂರು ನೀಡಲಾಗಿದೆ. ಇಂದು ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳೊಂದಿಗೆ ಕಲಬುರಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಗುರುತಿಸಿಕೊಂಡಿರುವ ವಿರುದ್ದ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಹಗರಣದ ಪ್ರ ಮುಖ ಆರೋಪಿಗಳಾದ ಆರ್.ಡಿ.ಪಾಟೀಲ ಮತ್ತು ದಿವ್ಯಾ ಹಾಗರಗಿ ಷರತ್ತು ಬದ್ಧ ಜಾಮೀನಿನ ಮೇಲೆ ಇದ್ದಾರೆ. ಅವರ ಮನೆಗೆ  ಲೋಕಸಭಾ ಸದಸ್ಯ ಉಮೇಶ್ ಜಾಧವ್ ತೆರಳಿ ಭೋಜನ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ಸಾಮಾಜಿಕ ಜಾಲ ತಾಣಗಳ ಮೂಲಕ ಅವರೇ ಹಂಚಿಕೊಂಡಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಮಧ್ಯಪ್ರವೇಶಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಬೇಕು ಎಂದು ಕಾಂಗ್ರಸ್ ಪಕ್ಷ ತನ್ನ ದೂರಿನಲ್ಲಿ ಆಗ್ರಹಿಸಿದೆ. ಕೆಪಿಸಿಸಿ ಕಾನೂನು ವಿಭಾಗದ ಉಪಾಧ್ಯಕ್ಷ ಎನ್ ದಿವಾಕರ್, ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಯೋಗ…

Read More

ಬೆಂಗಳೂರು: ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ನಡೆಸಿದಂತ ಪ್ರಧಾನಿ ನರೇಂದ್ರ ಮೋದಿಯವರು, ಅಲ್ಲಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಕರ್ನಾಟಕದಲ್ಲೂ ಪ್ರಚಾರ ನಡೆಸೋದಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಗೆ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರ ತಾಲೂಕಿನ ಆಗಲಗುರ್ಕಿಯಲ್ಲಿ ನಡೆಯುವಂತ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ. ಕೆಲವೇ ಕ್ಷಣಗಳಲ್ಲಿ ಚಿಕ್ಕಬಳ್ಳಾಪುರಕ್ಕೆ ತಲುಪಲಿರುವಂತ ಪ್ರಧಾನಿ ನರೇಂದ್ರ ಮೋದಿಯವರು, ಅಲ್ಲಿ ಜನರನ್ನು ಉದ್ದೇಶಿಸಿ, ಲೋಕಸಭಾ ಚುನಾವಣಾ ಸಂಬಂಧ ಭಾಷಣ ಮಾಡಲಿದ್ದಾರೆ. https://kannadanewsnow.com/kannada/pm-modi-running-school-of-corruption-teaching-science-of-complete-corruption-rahul-gandhi/ https://kannadanewsnow.com/kannada/fir-filed-against-dk-shivakumar-for-violating-model-code-of-conduct/

Read More

ಮೈಸೂರು: ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ನೇಹಾ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದ ಮುಖ್ಯಮಂತ್ರಿಗಳು, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಮಾತನಾಡಿ ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ. ಖಂಡನೀಯ ಎಂದರು. ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವ ಬಗ್ಗೆ ಮಾತನಾಡಿ ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದರು. ದೇಶದಲ್ಲಿ ಅಥವಾ ಕರ್ನಾಟಕದಲ್ಲಿ…

Read More

ಬೆಂಗಳೂರು: ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ, ರಾಜ್ಯ ಬಿಜೆಪಿಯ ಎಕ್ಸ್ ಖಾತೆಯಲ್ಲಿ ಮಾಡಿದಂತ ಪೋಸ್ಟ್ ವಿರುದ್ಧ ಕೇಳಿ ಬಂತ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ FIR ದಾಖಲಾಗಿದೆ. ಇಂದು ರಾಜ್ಯ ಚುನಾವಣಾ ಆಯೋಗದಿಂದ ಎಕ್ಸ್ ಮಾಡಿ ಈ ಮಾಹಿತಿ ಹಂಚಿಕೊಂಡಿದ್ದು, ಅದರಲ್ಲಿ ದಿನಾಂಕ 19.04.24 ರಂದು ಬಿಜೆಪಿ ಕರ್ನಾಟಕ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬೆಂಗಳೂರಿನ ಎಫ್ಎಸ್ಟಿ ಎಫ್ಐಆರ್ ದಾಖಲಿಸಿದೆ ಎಂದು ತಿಳಿಸಿದೆ. ಸಾರ್ವಜನಿಕ ಶಾಂತಿಗೆ ಭಂಗ ತಂದ ಆರೋಪದ ಮೇಲೆ ಮಲ್ಲೇಶ್ವರಂ ಪಿಎಸ್ನಲ್ಲಿ ಎಫ್ಐಆರ್ ಸಂಖ್ಯೆ 60/2024 ಅನ್ನು ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 125 ಮತ್ತು ಐಪಿಸಿಯ 505, 153 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಹೇಳಿದೆ. https://twitter.com/ceo_karnataka/status/1781597068563218738 https://kannadanewsnow.com/kannada/pm-modi-running-school-of-corruption-teaching-science-of-complete-corruption-rahul-gandhi/ https://kannadanewsnow.com/kannada/fir-filed-against-dk-shivakumar-for-violating-model-code-of-conduct/

Read More

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಎಕ್ಸ್ ಮಾಡಿ ರಾಜ್ಯ ಚುನಾವಣಾ ಆಯೋಗವು ಎಕ್ಸ್ ಮಾಡಿ ಮಾಹಿತಿ ನೀಡಿದ್ದು, ಅದರಲ್ಲಿ ಬೆಂಗಳೂರಿನ ಆರ್.ಆರ್.ನಗರದ ಅಪಾರ್ಟ್ಮೆಂಟ್ ಮಾಲೀಕರನ್ನುದ್ದೇಶಿಸಿ ಮಾತನಾಡುವಾಗ ಎಂಸಿಸಿ ಉಲ್ಲಂಘಿಸಿದ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬೆಂಗಳೂರಿನ ಎಫ್ಎಸ್ಟಿ ಎಫ್ಐಆರ್ ದಾಖಲಿಸಿದೆ. ಆರ್ ಎಂಸಿ ಯಾರ್ಡ್ ಪಿಎಸ್ ನಲ್ಲಿ ಎಫ್ ಐಆರ್ ಸಂಖ್ಯೆ 78/2024 ಅನ್ನು ಐಪಿಸಿಯ ಸೆಕ್ಷನ್ 171 (ಬಿ) (ಸಿ) (ಇ) (ಎಫ್) ಅಡಿಯಲ್ಲಿ ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬೀರಿದ್ದರ ಕಾರಣ, ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದೆ. https://twitter.com/ceo_karnataka/status/1781594737700392998 https://kannadanewsnow.com/kannada/pm-modi-running-school-of-corruption-teaching-science-of-complete-corruption-rahul-gandhi/ https://kannadanewsnow.com/kannada/home-minister-dr-g-parameshwaras-irresponsible-remarks-are-my-defiance-hdk/

Read More

ಬೆಂಗಳೂರು: ಸುಶಿಕ್ಷಿತರು, ವಿದೇಶದಲ್ಲಿ ಓದಿದವರು ಹಾಗೂ ನಾಡಿನ ಗೃಹಮಂತ್ರಿ ಸಾಹೇಬರಾದ ಡಾ.ಜಿ ಪರಮೇಶ್ವರ್ ಅವರು ಹುಬ್ಬಳ್ಳಿಯಲ್ಲಿ ವಿಕೃತಪ್ರೇಮಿಗೆ ಬಲಿಯಾದ ವಿದ್ಯಾರ್ಥಿನಿ ಬಗ್ಗೆ ಬೇಜವಾಬ್ದಾರಿತನದಿಂದ ನಾಲಿಗೆ ಜಾರಿಬಿಟ್ಟು ಕಾಂಗ್ರೆಸ್ ಸಂಸ್ಕೃತಿಯನ್ನು ಜಗಜ್ಜಾಹೀರು ಮಾಡಿದ್ದಾರೆ. ಅವರಿಗೆ ನಮ್ಮ ಧಿಕ್ಕಾರ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಸರಣಿ ಎಕ್ಸ್ ಮಾಡಿರುವಂತ ಅವರು, ಕೊಲೆಯಾದ ನತದೃಷ್ಟ ಯುವತಿ ಹಾಗೂ ಕೊಲೆಗಾರ ಫಯಾಜ್ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಕೊಲೆ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸಲೆತ್ನಿಸಿದ ಮಂತ್ರಿಗಳು, ಅತ್ಯಂತ ಅಸೂಕ್ಷ್ಮವಾಗಿ ಹೇಳಿಕೆ ನೀಡಿದ್ದಾರೆ. ಇದು ಖಂಡನೀಯ ಎಂದಿದ್ದಾರೆ. ಇಂತಹ ಕೊಲೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದು ಹೇಳಿರುವ ಸಚಿವರ ಅಸಲಿ ಉದ್ದೇಶ ಏನು? ಎನ್ನುವುದು ಇಲ್ಲಿ ಪ್ರಶ್ನಾರ್ಹ. ಜನರಿಂದ ಈ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತವಾದ ಮೇಲೆ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಹೊಣೆಗೇಡಿ ಹೇಳಿಕೆ ಕೊಟ್ಟು ಹೆತ್ತ ತಂದೆತಾಯಿಗೆ ಮತ್ತಷ್ಟು ನೋವು ಕೊಟ್ಟ ಸಚಿವರ ಹೇಳಿಕೆ ಖಂಡಿಸಿ ರಾಜ್ಯ ಮಹಿಳಾ ಆಯೋಗ ಈಗಾಗಲೇ ಸ್ವಯಂ ಪ್ರಕರಣ…

Read More

ಶಿವಮೊಗ್ಗ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 14-ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಶ್ರೀಮತಿ ಪೂನಂ ಭಾ.ಆ.ಸೇ., ರವರು ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕರಾಗಿ ನಿಯೋಜನೆಗೊಂಡಿದ್ದು, 2024ರ ಏಪ್ರಿಲ್ 18 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ವರದಿ ಮಾಡಿಕೊಂಡಿರುತ್ತಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿವಮೊಗ್ಗ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ, ಸಾಗರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚುನಾವಣಾ ಸಾಮಾನ್ಯ ವೀಕ್ಷಕರನ್ನು ದೂರವಾಣಿ ಸಂಖ್ಯೆ +91-8147695215ರ ಮೂಲಕ ಸಂಪರ್ಕಿಸಬಹುದಾಗಿರುತ್ತದೆ. ಚುನಾವಣಾ ವೀಕ್ಷಕರ ಈ-ಮೇಲ್ ವಿಳಾಸ generalobservershimoga@gmail.com ಆಗಿದ್ದು, ಸರ್ಕಿಟ್ ಹೌಸ್ ಅತಿಥಿ ಗೃಹದ ಕೊಠಡಿ ಸಂಖ್ಯೆ 02ರಲ್ಲಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. https://kannadanewsnow.com/kannada/earth-doesnt-belong-to-man-forests-must-be-protected-at-all-costs-sc/ https://kannadanewsnow.com/kannada/pm-modi-running-school-of-corruption-teaching-science-of-complete-corruption-rahul-gandhi/

Read More

ನವದೆಹಲಿ: ಪರಿಸರ ಸಂರಕ್ಷಣೆ ಮತ್ತು ಅರಣ್ಯಗಳು ಮತ್ತು ವನ್ಯಜೀವಿಗಳ ರಕ್ಷಣೆಯನ್ನು ರೂಪಿಸುವ ಸಂವಿಧಾನದ 48 ಎ ವಿಧಿಯು ನಾಗರಿಕರ ಜೀವಿಸುವ ಹಕ್ಕಿನೊಂದಿಗೆ ನೇರ ಸಂಬಂಧವನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಮತ್ತು ಹವಾಮಾನ ಬದಲಾವಣೆಯ ದುಷ್ಪರಿಣಾಮಗಳಿಂದ ದೇಶ ಮತ್ತು ಜಗತ್ತನ್ನು ಉಳಿಸಲು ಕಾಡುಗಳನ್ನು ರಕ್ಷಿಸುವಂತೆ ಸರ್ಕಾರಗಳಿಗೆ ಸೂಚಿಸಿದೆ. ಆಂಧ್ರಪ್ರದೇಶದ ವಾರಂಗಲ್ ಜಿಲ್ಲೆಯ ಕೊಂಪಲ್ಲಿ ಗ್ರಾಮದಲ್ಲಿ 1980 ರ ದಶಕದಿಂದ ಅರಣ್ಯ ಭೂಮಿಯನ್ನು ವೈಯಕ್ತಿಕ ಬಳಕೆಗೆ ಪರಿವರ್ತಿಸಲು ಪ್ರಯತ್ನಿಸಿದ ಮೊಹಮ್ಮದ್ ಅಬ್ದುಲ್ ಖಾಸಿಮ್ ಎಂಬಾತನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಕ್ಕಾಗಿ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಮತ್ತು ಎಸ್.ವಿ.ಎನ್.ಭಟ್ಟಿ ಅವರ ನ್ಯಾಯಪೀಠವು ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು. ವ್ಯತಿರಿಕ್ತ ನಿಲುವುಗಳನ್ನು ತೆಗೆದುಕೊಂಡಿದ್ದಕ್ಕಾಗಿ ತೆಲಂಗಾಣ ಸರ್ಕಾರಕ್ಕೆ 5 ಲಕ್ಷ ರೂ.ಗಳ ದಂಡ ವಿಧಿಸಿತು. ರಾಜ್ಯ ವಿಭಜನೆಯ ನಂತರ ಆಂಧ್ರಪ್ರದೇಶ ಹೈಕೋರ್ಟ್ ಅನ್ನು ಆಯ್ಕೆ ಮಾಡಿದ ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಾಧೀಶರ ಉತ್ತಮ ತರ್ಕಬದ್ಧ ಆದೇಶವನ್ನು ತೆಲಂಗಾಣ ಹೈಕೋರ್ಟ್ನ ನ್ಯಾಯಾಧೀಶರು ಹೇಗೆ ಅನುಮತಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಟೀಕಿಸಿದೆ. https://kannadanewsnow.com/kannada/pm-modi-running-school-of-corruption-teaching-science-of-complete-corruption-rahul-gandhi/…

Read More

ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…

Read More

ಹುಬ್ಬಳ್ಳಿ: ನಗರದಲ್ಲಿ ನಡೆದಂತ ಕಾರ್ಪೊರೇಟರ್ ಪುತ್ರಿ ನೇಹಾ ಹೀರೆಮಠ ಕೊಲೆ ಖಂಡಿಸಿ ನಾಳೆ ರಾಜ್ಯಾಧ್ಯಂತ ಎಬಿವಿಪಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಂತ ಕರ್ನಾಟಕ ಉತ್ತರ ಪ್ರಾಂತ್ಯದ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಅವರು, ನಾಳೆ ಬೆಳಿಗ್ಗೆ 10 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದ ಎದುರು ವಿದ್ಯಾರ್ಥಿಗಳ ಜೊತೆಗೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು. ರಾಜ್ಯದಲ್ಲಿ ಈ ರೀತಿಯ ಹತ್ಯೆಗಳು ನಡೆಯಬಾರದು. ಮತ್ತೆ ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು. ಹೀಗೆ ಮಾಡಿದವರನ್ನು ಎನ್ ಕೌಂಟರ್ ಮಾಡುವಂತ ಕಾನೂನು ಜಾರಿಗೊಳ್ಳಬೇಕು. ನೇಹಾ ಕೊಲೆ ಮಾಡಿದಂತ ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂಬುದಾಗಿ ಸರ್ಕಾರಕ್ಕೆ ಆಗ್ರಹಿಸಲಾಗುತ್ತದೆ ಎಂದರು. ಕಾಲೇಜಿನಲ್ಲೇ ನಡೆದಂತ ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿನಿಯರು ಬೆಚ್ಚಿಬಿದ್ದಿದ್ದಾರೆ. ಇದು ಲವ್ ಜಿಹಾದ್ ಎನ್ನುವುದು ಸ್ಪಷ್ಟವಾಗಿದೆ. ಫಯಾಜ್ ಪ್ರೀತಿಯನ್ನು ನೇಹಾ ನಿರಾಕರಿಸಿದ್ದಕ್ಕೆ ಕೊಲೆ ನಡೆದಿದೆ ಎಂಬುದಾಗಿ ಆರೋಪಿಸಿದರು. https://kannadanewsnow.com/kannada/bjp-is-playing-patriotism-as-if-it-was-a-contract-mla-laxman-savadi/ https://kannadanewsnow.com/kannada/exporter-of-aatank-struggling-for-aata-pm-modis-dig-at-pakistan/

Read More