Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಬಿಸಿಸಿಐನ ಪುರುಷರ ಆಯ್ಕೆ ಸಮಿತಿಯು ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಭಾರತವು 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ಸಜ್ಜಾಗಿದೆ, ಅದರಲ್ಲಿ ಮೊದಲನೆಯದು 2024 ರ ಜನವರಿ 25 ರಿಂದ ಹೈದರಾಬಾದ್ನಲ್ಲಿ ನಡೆಯಲಿದೆ. ಇಂಗ್ಲೆಂಡ್ ವಿರುದ್ಧದ ಮೊದಲ 2 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ ಪ್ರಕಟ ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್ ಇಂಗ್ಲೆಂಡ್ ತಂಡದ ಭಾರತ ಪ್ರವಾಸ, 2023-24 – ಟೆಸ್ಟ್ ಸರಣಿ ಜನವರಿ 25 ರಿಂದ 29 – ಮೊದಲ ಟೆಸ್ಟ್ – ಹೈದರಾಬಾದ್ ಫೆಬ್ರವರಿ…
ಮಂಡ್ಯ: ಅಪೂರ್ಣವಾದ ಕಟ್ಟಡವನ್ನ ಯಾರು ಉದ್ಘಾಟನೆ ಮಾಡಲ್ಲ ಎಂಬುದಾಗಿ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿದ್ದಾರೆ. ಈ ಕುರಿತಂತೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನರೇಂದ್ರ ಮೋದಿ ಒಬ್ಬರು ಚಾಣಾಕ್ಷರು. ಪ್ರತಿ ಚುನಾವಣೆ ಸಂದರ್ಭ ಒಂದೊಂದು ವಿಚಾರ ತಂದು ಮುಗ್ದರನ್ನ ಡೈವರ್ಟ್ ಮಾಡ್ತಾರೆ. ಮನೆಯಾದ್ರೂ ಸರಿ, ದೇವಸ್ಥಾನ ಆದ್ರೂ ಸರಿ ಅಪೂರ್ಣವಾದದ್ದನ್ನ ಉದ್ಘಾಟನೆ ಮಾಡಲ್ಲ. ಶಂಕರಾಚಾರ್ಯರ 4 ಪೀಠಗಳಲ್ಲಿ 2 ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ರಾಮಮಂದಿರ ಕಟ್ಟೋದು ತಪ್ಪಲ್ಲಾ ಆದ್ರೆ ಅವರು ಅದನ್ನ ಚುನಾವಣೆಗೆ ಬಳಸಿಕೊಳ್ತಿರೋದು ತಪ್ಪು ಎಂದರು. ಇನ್ನೂ ಕಾಂಗ್ರೆಸ್ ನಲ್ಲಿ ಫೈವ್ ಡಿಸಿಎಂ ಚೆರ್ಚೆ ವಿಚಾರವಾಗಿ ಮಾತನಾಡಿದಂತ ಅವರು, ಕಾಂಗ್ರೆಸ್ ಹೈಕಮಾಂಡ್ ನಿಂದ ಖಡಕ್ ಎಚ್ಚರಿಕೆ ನೀಡಿದೆ. ಚುನಾವಣೆ ವೇಳೆ ಯಾರು ಕೂಡ ಡಿಸಿಎಂ ವಿಚಾರ ಚೆರ್ಚಿಸದಂತೆ ಸೂಚನೆ ನೀಡಲಾಗಿದೆ ಎಂದರು. ನಮ್ಮ ಎಐಸಿಸಿ ಅಧ್ಯಕ್ಷರು ಖಡಕ್ಕಾಗಿ ಹೇಳಿದ್ದಾರೆ ಯಾರು ಕೂಡ ಡಿಸಿಎಂ ವಿಚಾರ ಚೆರ್ಚೆ ಮಾಡದಂತೆ ತಿಳಿಸಿದ್ದಾರೆ. ಡಿಸಿಎಂ ವಿಚಾರ ಕೂಡ ಅನವಶ್ಯಕ…
ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 16-12-2023 ರ ಮಂಗಳವಾರದಂದು ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಸಂತೇಕಡೂರು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮಾರ್ಗಗಳಲ್ಲಿ ಹೆಚ್ಚುವರಿ ಹೊಸ 11 ಕೆವಿ ವಿದ್ಯುತ್ ಮಾರ್ಗ ರಚಿಸುವ ಕಾಮಗಾರಿ ಇರುವುದರಿಂದ ಜ. 16 ರಿಂದ 18 ರವರೆಗೆ ಬೆಳಗ್ಗೆ 10.30 ರಿಂದ ಸಂಜೆ 6.00 ರವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಿಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ. https://kannadanewsnow.com/kannada/73-industrial-projects-with-an-investment-of-rs-3935-crore-approved-in-the-state-14497-jobs-created/ https://kannadanewsnow.com/kannada/163-people-test-positive-for-covid-19-in-the-state-today-162-recovered/
ಶಿವಮೊಗ್ಗ : ಮೂರು ಡಿಸಿಎಂ ವಿಚಾರವಾಗಿ ಎಐಸಿಸಿ ಅಧ್ಯಕ್ಷರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಹೀಗಾಗಿ ನಾನು ಈ ಬಗ್ಗೆ ಏನನ್ನೂ ಮಾತನಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶಿವಮೊಗ್ಗದಲ್ಲಿ ಮಾಧ್ಯಮದವರು “ಹೆಚ್ಚುವರಿ ಡಿಸಿಎಂ ಬೇಡಿಕೆ” ವಿಚಾರವಾಗಿ ಕೇಳಿದಾಗ ಹೀಗೆ ಉತ್ತರಿಸಿದರು. ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆಗೆ ಹೇಗೆ ಸಹಕಾರಿಯಾಗಲಿವೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬುವ ಉದ್ದೇಶದೊಂದಿಗೆ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಆದರೆ ನಾವು ಈ ವಿಚಾರದಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ. ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರ ಅಭಿವೃದ್ಧಿ ಮಾಡಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು ಮತಬ್ಯಾಂಕ್ ಗಾಗಿ ಜಾರಿ ಮಾಡಿಲ್ಲ” ಎಂದರು. https://kannadanewsnow.com/kannada/73-industrial-projects-with-an-investment-of-rs-3935-crore-approved-in-the-state-14497-jobs-created/ https://kannadanewsnow.com/kannada/163-people-test-positive-for-covid-19-in-the-state-today-162-recovered/
ಬೆಂಗಳೂರು: ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಡೆಮು ರೈಲುಗಳು ಮೆಮು ರೈಲುಗಳಾಗಿ ಪರಿವರ್ತನೆ ಮಾಡಲಾಗಿದೆ. ಅಲ್ಲದೇ ಕೆಲ ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರೈಲು ಸಂಖ್ಯೆ 06511/06512 ಬಾಣಸವಾಡಿ-ತುಮಕೂರು-ಬಾಣಸವಾಡಿ ಕಾಯ್ದಿರಿಸದ ಡೆಮು ಎಕ್ಸ್ಪ್ರೆಸ್ ವಿಶೇಷ ಮತ್ತು ರೈಲು ಸಂಖ್ಯೆ 06513/06514 ತುಮಕೂರು-ಶಿವಮೊಗ್ಗ ಟೌನ್ ಕಾಯ್ದಿರಿಸದ ಡೆಮು ಎಕ್ಸ್ ಪ್ರೆಸ್ ವಿಶೇಷ ರೈಲುಗಳನ್ನು ಮೆಮು (ಮೇನ್ ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್) ರೈಲುಗಳಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಈ ಪರಿವರ್ತನೆಯು ಜನವರಿ 15, 2024 ರಿಂದ ಜಾರಿಗೆ ಬರಲಿದೆ ಮತ್ತು ಈ ರೈಲುಗಳು ಮೆಮು ವಿಶೇಷ ಎಕ್ಸ್ ಪ್ರೆಸ್ ಎಂದು ಕಾರ್ಯನಿರ್ವಹಿ ಸಲಿವೆ ಎಂದಿದೆ. ಈ ಮೆಮು ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಪರಿಷ್ಕೃತ ಸಂಯೋಜನೆಯು 6 ಟ್ರೈಲರ್ ಕಾರುಗಳು (ಟಿಸಿ) ಮತ್ತು 2 ಮೋಟಾರು ಕಾರುಗಳು (ಎಂಸಿ) ಅನ್ನು ಒಳಗೊಂಡಿರುತ್ತದೆ, ಒಟ್ಟು 8 ಮೆಮು ಕಾರುಗಳು ಹೊಂದಿರುತ್ತವೆ. ರೈಲುಗಳ ಸೇವೆಯಲ್ಲಿ ಬದಲಾವಣೆ ಯಲವಿಗಿ, ಸವಣೂರು…
ಬೆಂಗಳೂರು: ರಾಜ್ಯ ಸರ್ಕಾರ ಕಾಡುಗೊಲ್ಲರ ಅಭಿವೃದ್ಧಿಗಾಗಿ ಕಾಡುಗೊಲ್ಲ ನಿಗಮ ಸ್ಥಾಪನೆ ಮಾಡಿದ್ದು ಆ ಸಮುದಾಯದ ಜನತೆ ಉಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಹೇಳಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಕಾಡುಗೊಲ್ಲ ನಿಗಮಕ್ಕೆ 20 ಕೋಟಿ ಹಣ ನೀಡಲಾಗಿದ್ದು, ಆ ಹಣವನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲೇ ಉಪಯೋಗಪಡಿಸಿಕೊಳ್ಳುವಂತೆ ಕರೆನೀಡಿದ್ದಾರೆ. ಕಾಡುಗೊಲ್ಲ ನಿಗಮದಡಿ ದೊರೆಯುವ ಸವಲತ್ತುಗಳನ್ನು ಬಳಸಿಕೊಳ್ಳುವ ಸಂಬಂಧ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ತುಳಸಿ ಮುದ್ದಿನೇನಿ ಅವರ ಜೊತೆ ಟಿ.ಬಿ.ಜಯಚಂದ್ರ ಅವರು ವಿಧಾನಸೌಧದಲ್ಲಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ತುಳಸಿ ಮುದ್ದಿನೇನಿ ಅವರು ಸದ್ಯಕ್ಕೆ ಕಾಡುಗೊಲ್ಲ ನಿಗಮದಲ್ಲಿ 20 ಕೋಟಿ ಹಣವಿದ್ದು ಮೇಕೆ ಕುರಿ ಸಾಕಾಣಿಕೆ ಸೇರಿದಂತೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳುವವರಿಗೆ, ಕೊಳವೆ ಬಾವಿ ಹಾಕಿಸಲು ಹಾಗೂ ಶೈಕ್ಷಣಿಕ ಸಾಲ ನೀಡಲು ಹಣವನ್ನ ನೀಡಲಾಗುವುದು. ಮುಂದಿನ ತಿಂಗಳಲ್ಲಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ರಾಜ್ಯದ ಎಲ್ಲಾ ಗ್ರಾಮ…
ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋಗುವಂತ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ಅದೇ ಯಶವಂತಪುರ-ಕೊಚುವೇಲಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ಮಾಡಲಿದೆ. ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈರುತ್ಯ ರೈಲ್ವೆ ಯಶವಂತಪುರ ಮತ್ತು ಕೊಚುವೇಲಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ. ರೈಲು ಸಂಖ್ಯೆ 06235/06236 ಯಶವಂತಪುರ-ಕೊಚುವೇಲಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಒಂದು ಟ್ರಿಪ್ ಸಂಚರಿಸಲಿದೆ. ರೈಲು ಸಂಖ್ಯೆ 06235 ಯಶವಂತಪುರ-ಕೊಚುವೇಲಿ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 13, 2024 ರಂದು ರಾತ್ರಿ 11.55 ಗಂಟೆಗೆ ಯಶವಂತಪುರ ನಿಲ್ದಾಣದಿಂದ ಹೊರಟು ಮರುದಿನ ಸಂಜೆ 07.10 ಕ್ಕೆ ಕೊಚುವೇಲಿ ನಿಲ್ದಾಣವನ್ನು ತಲುಪಲಿದೆ. ರೈಲು ಸಂಖ್ಯೆ 06236 ಕೊಚುವೇಲಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 14,…
ಬೆಂಗಳೂರು: ರಾಜ್ಯದಲ್ಲಿ ₹3,935 ಕೋಟಿಗೂ ಹೆಚ್ಚಿನ ಹೂಡಿಕೆಯಾಗಲಿರುವ ಒಟ್ಟು 73 ಯೋಜನಾ ಪ್ರಸ್ತಾವನೆಗಳಿಗೆ ಶುಕ್ರವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದ 14,497 ಉದ್ಯೋಗಾವಕಾಶ ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ‘ಅನುಮೋದನೆ ನೀಡಿರುವ ಯೋಜನೆಗಳ ಪೈಕಿ 10 ಯೋಜನೆಗಳಲ್ಲಿ ತಲಾ 50 ಕೋಟಿ ರೂ.ಗೂ ಹೆಚ್ಚು ಹೂಡಿಕೆ ಆಗಲಿದೆ. ಈ ಯೋಜನೆಗಳಲ್ಲಿ ಇಟಿಎಲ್ ಸೆಕ್ಯೂರ್ ಸ್ಪೇಸ್, ದಶ್ ಪಿ.ವಿ.ಟೆಕ್ನಾಲಜೀಸ್, ಮೈಲಾರ್ ಇನ್ಫ್ರಾ, ಸ್ಯಾಂಗೋ ಆಟೋಮೋಟೀವ್ ಪಾರ್ಟ್ಸ್, ವೇನಾಸ್ ಲ್ಯಾಬ್ಸ್, ಸಿಂಬಯೋ ಜನರಿಕ್ಸ್ ಇಂಡಿಯಾ, ಎಂಎಎಫ್ ಕ್ಲಾತಿಂಗ್, ಎಸ್ಎಎ ಪ್ರಾಕ್ಟ್ಸ್, ನಿಫ್ಕೋ ಸೌತ್ ಇಂಡಿಯಾ ಮ್ಯಾನಫ್ಯಾಕ್ಚರಿಂಗ್ ಮತ್ತು ರೆನ್ಸ್ ಬಯೋಟೆಕ್ ಕಂಪನಿಗಳು ಸೇರಿವೆ’ ಎಂದರು. ಈ ಕಂಪನಿಗಳು ದೇವನಹಳ್ಳಿ, ಸಿರಾ ಕೈಗಾರಿಕಾ ಪ್ರದೇಶ, ಹೂವಿನಹಡಗಲಿ, ರಾಮನಗರ, ಕಡೇಚೂರು, ಚಾಮರಾಜನಗರ, ಗೌರಿಬಿದನೂರು ಮತ್ತು ತುಮಕೂರಿನ ವಸಂತ ನರಸಾಪುರಗಳಲ್ಲಿ…
ಗದಗ: ಜಿಲ್ಲೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಗೆ ಹುಟ್ಟುಹಬ್ಬದ ಶುಭ ಕೋರಿ ಬ್ಯಾನರ್ ಕಟ್ಟುವಾಗಿ ವಿದ್ಯುತ್ ಸ್ಪರ್ಶಿಸಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ್ದರು. ಅವರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ತಲಾ 2 ಲಕ್ಷ ಪರಿಹಾರದ ಚೆಕ್ ಅನ್ನು ಇಂದು ವಿತರಣೆ ಮಾಡಲಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಟ ಯಶ್ ಗೆ ಹುಟ್ಟುಹಬ್ಬದ ಶುಭ ಕೋರಿ ಬ್ಯಾನರ್ ಕಟ್ಟುವಾಗಿ ವಿದ್ಯುತ್ ಸ್ಪರ್ಶಿಸಿ ಮುರಳಿ, ನವೀನ್, ಹನುಮಂತು ಸಾವನ್ನಪ್ಪಿದ್ದರು. ಇಂತಹ ಮೃತರಿಗೆ ಸಿಎಂ ಸಿದ್ಧರಾಮಯ್ಯ ತಲಾ 2 ಲಕ್ಷ ಪರಿಹಾರವನ್ನು ನೀಡುವುದಾಗಿ ಘೋಷಣೆ ಮಾಡಿದ್ದರು. ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ಇಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಅವರು ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ತೆರಳಿ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರದ ಚೆಕ್ ಅನ್ನು ವಿತರಣೆ ಮಾಡಿದರು. ಘಟನೇ ಹಿನ್ನೆಲೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುಣಧೂರು ಗ್ರಾಮದ ನೀಲಗಿರಿ ತೋಪಿನಲ್ಲಿ ತಡರಾತ್ರಿ ನಟ ಯಶ್ ಅವರ ಹುಟ್ಟು ಹಬ್ಬದ ಅಂಗವಾಗಿ ಸುಮಾರು…
ಬೆಂಗಳೂರು: ರಾಜ್ಯದಲ್ಲಿ ಇಂದು 163 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 162 ಮಂದಿ ಗುಣಮುಖರಾಗಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 6396 ಜನರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಲ್ಲಿ 50, ಬೆಂಗಳೂರು ಗ್ರಾಮಾಂತರ 08, ಹಾಸನ 10, ಮಂಡ್ಯ 8, ಮೈಸೂರು 27 ಸೇರಿದಂತೆ 163 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ ಎಂದು ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 162 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸದ್ಯ 994 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ. https://kannadanewsnow.com/kannada/our-government-has-set-an-example-for-the-entire-country-deputy-cm-dk-shivakumar-shivakumar/ https://kannadanewsnow.com/kannada/pm-modi-inaugurate-mumbai-trans-harbour-link/