Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನಾಲ್ವರನ್ನು ನಾಮನಿರ್ದೇಶನ ಮಾಡಿ ಆದೇಶಿಸಿದೆ. ಕಾಂಗ್ರೆಸ್ ನಿಷ್ಟಾವಂತ ಕಾರ್ಯಕರ್ತೆ ಮಂಜುಳಾ ನಾಯ್ಡು ಸೇರಿದಂತೆ ನಾಲ್ವರನ್ನು ರಾಜ್ಯ ಸರ್ಕಾರ ಬಿಡಿಎ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಕಾಯ್ದೆ 1976ರ ಕಲಂ 3(3)(ಇ), 3(3)(ಹೆಚ್) ಮತ್ತು 3(3)(ಜಿಜಿ)ರಡಿಯಲ್ಲಿ ಪ್ರದತ್ತವಾದಂತ ಅಧಿಕಾರವನ್ನು ಚಲಾಯಿಸಿ, ಈ ಕೆಳಕಂಡವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿರುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಬೆಂಗಳೂರು ದಕ್ಷಿಣದ ಕನಕಪುರ ತಾಲ್ಲೂಕಿನ ವಾಸ್ತು ಶಿಲ್ಪಿ ವಿ ಆರ್ ಸುಜಯ್, ಸಾಮಾನ್ಯ ಕೆಟಗರಿ ಅಡಿಯಲ್ಲಿ ಬಿಎನ್ ಅಮರನಾಥ್, ಪರಿಶಿಷ್ಟ ಜಾತಿ ಅಡಿಯಲ್ಲಿ ಪಿ ಗಾಂಧಿ ಹಾಗೂ ಮಹಿಳೆ ಕೋಟಾದಡಿ ಸಂಪಿಗೆ ರಾಮನಗರದ ಮಂಜುಳ ನಾಯ್ಡು ಅವರನ್ನು ನೇಮಕ ಮಾಡಲಾಗಿದೆ. https://kannadanewsnow.com/kannada/ramesh-jarakiholis-son-shot-bullets-in-the-air-at-the-festival/ https://kannadanewsnow.com/kannada/the-state-government-is-wasting-time-talking-idly-about-the-mekedatu-project-h-d-kumaraswamy/

Read More

ಬೆಳಗಾವಿ: ಜಿಲ್ಲೆಯ ಜಾತ್ರೆಯೊಂದರಲ್ಲಿ ರಮೇಶ್ ಜಾರಕಿಹೊಳಿ ಅವರ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿ ವಿಕೃತಿ ಮೆರೆದಿರುವಂತ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿಕೃತಿ ಮೆರೆದಿದ್ದಾನೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/hdk-criticizes-minister-priyank-kharge-for-criticizing-rss/ https://kannadanewsnow.com/kannada/the-state-government-is-wasting-time-talking-idly-about-the-mekedatu-project-h-d-kumaraswamy/

Read More

ಮೈಸೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ ಕುರಿತು ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಸಂಘದ ಬಗ್ಗೆ ಮಾತನಾಡಿ ಬಾಯಿ ಚಪಲ ತೀರಿಸಿಕೊಳ್ಳುವ ಬದಲು 40 ವರ್ಷದಿಂದ ಕಲ್ಯಾಣ ಕರ್ನಾಟಕಕ್ಕೆ ಮಾಡಿದ್ದೇವೆ ಎಂಬುದನ್ನು ಮೊದಲು ಹೇಳಲಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಚಾಟಿ ಬೀಸಿದರು. ಮೈಸೂರಿನಲ್ಲಿ ಶನಿವಾರ ದಿಶಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಸಚಿವರು ಮಾತನಾಡಿದರು. ಆರ್ ಎಸ್ ಎಸ್ ಅನ್ನು ಬಂದ್ ಮಾಡುವುದಿರಲಿ, ಈಗ ಕಾಂಗ್ರೆಸ್ ಪಕ್ಷವೇ ಎಲ್ಲಾ ಕಡೆ ಬಂದ್ ಆಗುತ್ತಿದೆ. ಜನರೇ ಬಹುತೇಕ ಕಡೆ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡುತ್ತಿದ್ದಾರೆ. ಮೊದಲು ನಿಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಿ. ಪ್ರಿಯಾಂಕ್ ಖರ್ಗೆ ಅವರು ಬಾಯಿ ಚಪಲಕ್ಕೆ ಮೂಲ ವಿಚಾರಗಳನ್ನ ಮರೆ ಮಾಚಲು ಈ ರೀತಿ ಹೇಳಿಕೆ ಕೊಡ್ತಿದ್ದಾರೆ ಅಷ್ಟೇ ಎಂದು ಕೇಂದ್ರ ಸಚಿವರುಕ್ ವಾಗ್ದಾಳಿ ನಡೆಸಿದರು. https://kannadanewsnow.com/kannada/not-just-kunigal-necessary-measures-to-provide-water-to-all-taluks-of-tumkur-dkshi/ https://kannadanewsnow.com/kannada/the-state-government-is-wasting-time-talking-idly-about-the-mekedatu-project-h-d-kumaraswamy/

Read More

ಮೈಸೂರು: ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ, ತಮಿಳುನಾಡಿನ ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಮೈಸೂರಿನಲ್ಲಿ ಶನಿವಾರ ದಿಶಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಸಚಿವರು ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತನ್ನ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ನಾನು ಐದೇ ನಿಮಿಷದಲ್ಲಿ ಈ ಯೋಜನೆಗೆ ಪ್ರಧಾನಮಂತ್ರಿಗಳ ಒಪ್ಪಿಗೆ ಕೊಡಿಸುತ್ತೇನೆ. ಚುನಾವಣೆ ಸಂದರ್ಭದಲ್ಲಿ ಹೇಳಿದ್ದ ನನ್ನ ಈ ಮಾತಿಗೆ ನಾನು ಈಗಲೂ ಬದ್ಧವಾಗಿದೇನೆ ಎಂದು ಕೇಂದ್ರ ಸಚಿವರು ಪುನರುಚ್ಚರಿಸಿದರು. ಡಿಎಂಕೆ ಮುಲಾಜಿನಲ್ಲಿ ಕಾಂಗ್ರೆಸ್!!: ಕಾಂಗ್ರೆಸ್ ನವರಿಗೆ ಮಿತ್ರಪಕ್ಷದ ಮುಲಾಜು ಇದೆ. ಅವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಡಿಎಂಕೆ ಪಕ್ಷವನ್ನು ಎದುರು ಹಾಕಿಕೊಳ್ಳುವ ಅಥವಾ ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ. ತಮಿಳುನಾಡು ಸರ್ಕಾರವನ್ನು ದೈರ್ಯವಾಗಿ ಧಿಕ್ಕರಿಸಿ ಮೇಕೆದಾಟು ಯೋಜನೆ ಕೈಗೆತ್ತಿಗೊಂಡದರೆ ಅದು ಸಾಧ್ಯ ಆಗುತ್ತದೆ…

Read More

ಬೆಂಗಳೂರು: “ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. “ಹೇಮಾವತಿ ಲಿಂಕ್ ಕೆನಾಲ್ ವಿಚಾರವಾಗಿ ಜನಪ್ರತಿನಿಧಿಗಳ ಸಭೆ ಕರೆದು, ಅವರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಹಿಂದೆ ಶಾಸಕರು ತಾಂತ್ರಿಕ ಸಮಿತಿ ರಚಿಸಿ ಎಂದಿದ್ದರು. ತಾಂತ್ರಿಕ ಸಮಿತಿ ವರದಿ ನಂತರ ಕಾಮಗಾರಿಗೆ ಮುಂದಾದರೂ ಮತ್ತೆ ಪ್ರತಿಭಟನೆ ಮಾಡಿದ್ದರು. ಅವರು ಪೈಪ್ ಲೈನ್ ಹಾಕಬೇಡಿ ತೆರೆದ ಕಾಲುವೆಯಲ್ಲಿ ನೀರು ತೆಗೆದುಕೊಂಡು ಹೋಗಿ ಎಂದು ಹೇಳುತ್ತಿದ್ದಾರೆ. ಪೈಪ್ ಲೈನ್ ಮಾಡುವುದು ಸರ್ಕಾರದ ತೀರ್ಮಾನ” ಎಂದು ತಿಳಿಸಿದರು. “ಕೇಂದ್ರ ಸಚಿವ ಸೋಮಣ್ಣ ಅವರು ಭಾರತೀಯ ವಿಜ್ಞಾನ ಸಂಸ್ಥೆ ತಜ್ಞರಿಂದ ಪರಿಶೀಲನೆಗೆ ಶಿಫಾರಸ್ಸು ಮಾಡಿದ್ದು, ಇದಕ್ಕೆ ಒಪ್ಪಿಗೆ ನೀಡಲಾಗಿದೆ. ನಮಗೆ ಕೇವಲ ಕುಣಿಗಲ್ ತಾಲೂಕು ಮಾತ್ರವಲ್ಲ. ಇಡೀ ತುಮಕೂರು ಜಿಲ್ಲೆಗೆ ನೀರು ಒದಗಿಸಬೇಕಿದ್ದು, ಅದಕ್ಕೆ ಪೂರಕವಾಗಿ ನಾನು ಯೋಜನೆ ಸಿದ್ಧಪಡಿಸಿದ್ದೇನೆ.…

Read More

ಮೈಸೂರು: ಪ್ರೀತಿಯ ವಿಚಾರಕ್ಕೆ ಶಿಕ್ಷಕಿಯ ಮೇಲೆ ಹಲ್ಲೆ ಮಾಡಿದ್ದಲ್ಲದೇ ಆಕೆಯನ್ನು ಚಾಕುವಿನಿಂದ ಇರಿದು ಯುವಕನೊಬ್ಬ ಹತ್ಯೆ ಮಾಡಿರುವಂತ ಘಟನೆ ಮೈಸೂರಲ್ಲಿ ನಡೆದಿದೆ. ಮೈಸೂರಿನ ಅಶೋಕಪುರಂನಲ್ಲಿ ಪಾಂಡವಪುರ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದ ಪೂರ್ಣಿಮಾ(36) ಎಂಬಾಕೆಯನ್ನುಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಎಂಬಾತ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಅಂದಹಾಗೇ ಪೂರ್ಣಿಮಾ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು. ಆಕೆಯನ್ನು ಅಭಿಷೇಕ್ ಪ್ರೀತಿಸುತ್ತಿದ್ದನು. ಪ್ರೀತಿಯ ವಿಚಾರಕ್ಕಾಗಿ ಕೋಪಗೊಂಡ ಅಭಿಷೇಕ್ ಶಿಕ್ಷಕಿ ಪೂರ್ಣಿಮಾ ಮೇಲೆ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಆ ಬಳಿಕ ಪರಾರಿಯಾಗಿದ್ದಾನೆ. ಚಾಕು ಇರಿತಕ್ಕೆ ಒಳಗಾದಂತ ಪೂರ್ಣಿಮಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಅಭಿಷೇಕ್ ನನ್ನು ಬಂಧಿಸಿದ್ದಾರೆ.

Read More

ಕ್ರೊಯೇಷಿಯಾದ ಜಾಗ್ರೆಬ್‌ನಲ್ಲಿ ಶುಕ್ರವಾರ ನಡೆದ 2025 ರ ಗ್ರ್ಯಾಂಡ್ ಚೆಸ್ ಟೂರ್‌ನ ಭಾಗವಾದ ಸೂಪರ್‌ಯುನೈಟೆಡ್ ರಾಪಿಡ್ & ಬ್ಲಿಟ್ಜ್ ಪಂದ್ಯಾವಳಿಯಲ್ಲಿ ಕ್ಷಿಪ್ರ ಪ್ರಶಸ್ತಿಯನ್ನು ಗೆದ್ದುಕೊಂಡರು, ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಜಾಗತಿಕ ವೇದಿಕೆಯಲ್ಲಿ ತಮ್ಮ ಬೆಳೆಯುತ್ತಿರುವ ನಿಲುವನ್ನು ಒತ್ತಿ ಹೇಳಿದರು. 19 ವರ್ಷದ ಆಟಗಾರ ಸಂಯಮ, ಯುದ್ಧತಂತ್ರದ ನಿಖರತೆ ಮತ್ತು ಅದ್ಭುತ ಫಾರ್ಮ್ ಪ್ರದರ್ಶಿಸಿ 18 ಅಂಕಗಳಿಂದ 14 ಅಂಕಗಳನ್ನು ಗಳಿಸಿ, ಅತ್ಯುನ್ನತ ಗೌರವವನ್ನು ಗಳಿಸಿದರು. ಅವರ ಅಭಿಯಾನವು ಆರಂಭಿಕ ಎಡವಿ ಬೀಳುವಿಕೆಯೊಂದಿಗೆ ಪ್ರಾರಂಭವಾಯಿತು – ಜಾನ್-ಕ್ರಿಜ್ಟೋಫ್ ಡುಡಾ ವಿರುದ್ಧ ಮೊದಲ ಸುತ್ತಿನ ಸೋಲು. ಆದರೆ ಅದು ಗಮನಾರ್ಹ ತಿರುವು ನೀಡಿತು. ಗುಕೇಶ್ ಸತತ ಐದು ಜಯಗಳೊಂದಿಗೆ ಪ್ರತಿಕ್ರಿಯಿಸಿದರು, ಇದರಲ್ಲಿ 4 ನೇ ಸುತ್ತಿನಲ್ಲಿ ವಿಶ್ವದ ನಂ. 1 ಮ್ಯಾಗ್ನಸ್ ಕಾರ್ಲ್ಸೆನ್ ಅವರ ಕ್ಲಿನಿಕಲ್ ಡಿಸ್ಮ್ಯಾಂಡಿಂಗ್ ಸೇರಿದೆ, ಇದರ ಫಲಿತಾಂಶವು ಅವರನ್ನು ಲೀಡರ್‌ಬೋರ್ಡ್‌ನ ನಿಯಂತ್ರಣದಲ್ಲಿ ದೃಢವಾಗಿ ಇರಿಸಿತು. ಅವರು ಅಂತಿಮ ಸುತ್ತಿನಲ್ಲಿ ಯುನೈಟೆಡ್ ಸ್ಟೇಟ್ಸ್‌ನ ವೆಸ್ಲಿ ಸೋ ವಿರುದ್ಧ ಸಿಗ್ನೇಚರ್…

Read More

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಎಸಿಎಫ್ ಗಜಾನನ ಹೆಗಡೆ ಮತ್ತು ಆರ್.ಎಫ್.ಓ. ಮಾದೇಶ ಅಮಾನತು ಮಾಡಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಡಿಸಿಎಫ್ ಚಕ್ರಪಾಣಿ ಅಮಾನತಿಗೂ ಶಿಫಾರಸು ಮಾಡಿದ್ದಾರೆ. ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ, ಪರಾಮರ್ಶಿಸಿದ ಸಚಿವರು, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ವಲಯ ಅರಣ್ಯಾಧಿಕಾರಿ ಅಮಾನತು ಮಾಡಿ, ಐ.ಎಫ್.ಎಸ್. ಅಧಿಕಾರಿ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿದ್ದಾರೆ. ವೇತನ ಪಾವತಿಸದಿರುವುದೂ ಕರ್ತವ್ಯಲೋಪ: ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಡಿಸಿಎಫ್ ಚಕ್ರಪಾಣಿ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ ಈ ಸಂಬಂಧ…

Read More

ಬೆಂಗಳೂರು : “ಮೊದಲ ಹಂತದ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಂದಿನ‌ 4-5 ದಿನಗಳಲ್ಲಿ ಅಂತಿಮಗೊಳ್ಳಲಿದೆ. ಮೊದಲ ಹಂತಕ್ಕೆ 17 ಸಾವಿರ ಕೋಟಿ,‌ ಎರಡನೇ ಹಂತಕ್ಕೆ 23 ಸಾವಿರ ಕೋಟಿ ವ್ಯಯಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿ ಸಂಸ್ಥೆಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಹೆಬ್ಬಾಳ ಜಂಕ್ಷನ್ ನಿಂದ ಸಿಲ್ಕ್ ಬೋರ್ಡ್ ವರೆಗೆ ಸುಮಾರು 40 ಕಿ.ಮೀ ಮತ್ತು 23 ಕಿ.ಮೀ ಉದ್ದದ ಮೈಸೂರು ರಸ್ತೆಯಿಂದ ಕೆ.ಆರ್.ಪುರದ ವರೆಗೆ ಟ್ವಿನ್ ಟನಲ್ ರಸ್ತೆ ನಿರ್ಮಾಣಕ್ಕೆ ನಾವು ಮುಂದಡಿ ಇಟ್ಟಿದ್ದೇವೆ” ಎಂದರು. “130 ಕಿ.ಮೀ ಮೇಲ್ಸೆತುವೆಗಳು, ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್ ಡೆಕ್ಕರ್ ಗಳ ನಿರ್ಮಾಣ ಮಾಡಲಾಗುವುದು. ಈಗಾಗಲೇ 7 ಕಿ.ಮೀ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗಿದ್ದು, 37 ಕಿ.ಮೀ ಡಬಲ್ ಡೆಕ್ಕರ್ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.‌ ಶೀಘ್ರದಲ್ಲೇ ಇದಕ್ಕೂ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಲಾಗುವುದು. ರಾಜಕಾಲುವೆಗಳ ಪಕ್ಕದಲ್ಲಿ 300 ಕಿ.ಮೀ ಉದ್ದದ ರಸ್ತೆ ನಿರ್ಮಾಣವೂ…

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದ್ದು, ನಾಳೆಯೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಕಾರಣ ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ ಆರ್ ಪುರ ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಇದಕ್ಕೂ ಮೊದಲು ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ನಕಲಿ ಆದೇಶ ಪ್ರತಿ ಹೊರ ಬಿದ್ದು ಗೊಂದಲ ಮೂಡಿತ್ತು. ಆ ನಂತ್ರ ಮಕ್ಕಳು, ಪೋಷಕರಲ್ಲಿ ರಜೆ ಬಗ್ಗೆ ಗೊಂದಲ ನಿರ್ಮಾಣವಾಗಿತ್ತು. ಹೀಗಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್, ನಾಳೆ ಅಂಗನವಾಡಿಗಳಿಗೆ ಮಾತ್ರವೇ ರಜೆ ನೀಡಿರುವುದಾಗಿ ಅಧಿಕೃತ ಆದೇಶ ಹೊರಡಿಸಿ, ತಿಳಿಸಿದ್ದಾರೆ. https://kannadanewsnow.com/kannada/actress-ranya-rao-gold-smuggling-case-ed-seizes-property-worth-rs-34-12-crore/ https://kannadanewsnow.com/kannada/applications-invited-for-free-coaching-for-upsc-prelims-mains-exams/

Read More