Author: kannadanewsnow09

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುವ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಯು ಇದೇ 20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸುಮಾರು 1 ಲಕ್ಷ ಜನರ ನಿರೀಕ್ಷೆ ಇದೆ. ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಏರ್ಪಡಿಸಲಾಗುತ್ತದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಮಧ್ಯ, ಬೆಂಗಳೂರು ಉತ್ತರ ಕ್ಷೇತ್ರಗಳು, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಸಭೆ ಇದಾಗಿರುತ್ತದೆ. 2 ಕಡೆ ವಿಜಯ ಸಂಕಲ್ಪ ಸಮಾವೇಶ ನಡೆಯಲಿದ್ದು, ಸಿದ್ಧತಾ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರವಾಸವೂ ಕೂಡ ನಿಗದಿಯಾಗಿದೆ. 23, 24ರಂದು ಕರ್ನಾಟಕದಲ್ಲಿ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಭಾಗವಹಿಸುತ್ತಾರೆ. 23ರಂದು ಬೆಳಿಗ್ಗೆ ಯಶವಂತಪುರದಲ್ಲಿ ರೋಡ್…

Read More

ಮಂಡ್ಯ: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಮಂಡ್ಯ ಜಿಲ್ಲೆಗೆ ಆಗಮಿಸಿದಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದರು. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಇಂದು ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ತೊಡಗಿದ್ದಾರೆ. ಬೆಂಗಳೂರಿನಿಂದ ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಶೇಷ ಹೆಲಿಕ್ಯಾಪ್ಟರ್ ನಲ್ಲಿ ಮಂಡ್ಯಕ್ಕೆ ತೆರಳಿದರು. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಹೆಲಿಕಾಪ್ಟರ್ ನಿಂದ ಇಳಿದಂತ ಅವರು, ಪಿಇಎಸ್ ಕಾಲೇಜು ಮೈದಾನಕ್ಕೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ತೆರಳಿದರು. ಈ ವೇಳೆಯಲ್ಲಿ ಮಂಡ್ಯಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು, ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದರು. ಹೆಲಿಕಾಪ್ಟರ್ ನಲ್ಲಿ ಇದ್ದಂತ ವಸ್ತುಗಳನ್ನು ಬ್ಯಾಗ್ ಅನ್ನು ಪರಿಶೀಲನೆಯನ್ನು ಚುನಾವಣಾಧಿಕಾರಿಗಳು ನಡೆಸಿದರು. https://kannadanewsnow.com/kannada/pjagadish-shettar-files-nomination-as-bjp-candidate-from-belagavi-lok-sabha-constituency/ https://kannadanewsnow.com/kannada/china-to-build-railway-station-like-sanitary-pad-the-photo-goes-viral/

Read More

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿರುವಂತ ಜಗದೀಶ್ ಶೆಟ್ಟರ್ ಅವರು, ಇಂದು ನಾಮಪತ್ರವನ್ನು ಸಲ್ಲಿಸಿದರು. ಇಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದಂತ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಲೋಕಸಭಾ ಅಭ್ಯರ್ಥಿಯಾಗಿ ಬಿಜೆಪಿ ಪಕ್ಷದಿಂದ ತನ್ನ ಉಮೇದುವಾರಿಕೆಯನ್ನು ಸಲ್ಲಿಸಿದರು. ಜಗದೀಶ್ ಶೆಟ್ಟರ್ ಅವರಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸಂಸದೆ ಮಂಗಳಾ ಅಂಗಡಿ,, ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ವಿವಿಧ ಬಿಜೆಪಿ ಮುಖಂಡರು ಸಾಥ್ ನೀಡಿದರು. ಈ ವೇಳೆ ಮಾತನಾಡಿದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಭರ್ಜರಿ ಗೆಲುವು ಸಾಧಿಸಲಿದ್ದಾರೆ. ಅಭೂತಪೂರ್ವ ಜನ ಬೆಂಬಲ ಬೆಳಗಾವಿಯಲ್ಲಿ ಅವರಿಗೆ ಸಿಕ್ಕಿದೆ. ಶೆಟ್ಟರ್ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದರು. https://kannadanewsnow.com/kannada/china-to-build-railway-station-like-sanitary-pad-the-photo-goes-viral/ https://kannadanewsnow.com/kannada/congress-leader-rahul-gandhi-arrives-in-mandya/

Read More

ಬೆಂಗಳೂರು : “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಸಂಸದ ಕರಡಿ ಸಂಗಣ್ಣ ಮತ್ತಿತರರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು; ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದರೆ ಗ್ಯಾರಂಟಿಗಳನ್ನು ತೆಗೆದುಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಆದರೆ ಯಡಿಯೂರಪ್ಪ, ಕುಮಾರಸ್ವಾಮಿ, ಅಶೋಕ ಅವರಿಗೆ ಗ್ಯಾರಂಟಿಗಳನ್ನು ಮುಟ್ಟಲು ರಾಜ್ಯದ ಜನ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷದ ಮೇಲಿನ ಜನರ ಪ್ರೀತಿ ಕಂಡು ಅವರಿಗೆ ಅಸೂಯೆ ಆಗಿದೆ. ಆದ ಕಾರಣ ನಮ್ಮ ತಾಯಂದಿರ ಬಗ್ಗೆ ಮಾತನಾಡುತ್ತಿದ್ದಾರೆ. ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿರುವ ಅವರಿಗೆ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ” ಎಂದು ಹೇಳಿದರು. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿಗಳು ಸೇರಿ ಕೈ…

Read More

ಪುಣೆ: ಮಹಾರಾಷ್ಟ್ರದ ಜಲ್ಗಾಂವ್ನ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 17 ಜನರು ಗಾಯಗೊಂಡಿದ್ದಾರೆ ಮತ್ತು ಒಬ್ಬರು ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮಹಾರಾಷ್ಟ್ರದ ಜಲ್ಗಾಂವ್ ನ ರಾಸಾಯನಿಕ ಕಾರ್ಖಾನೆಯಲ್ಲಿ ಇಂದು ಭೀಕರ ಸ್ಪೋಟ ಸಂಭವಿಸಿದೆ. ಈ ಸ್ಪೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 17 ಮಂದಿ ಕಾರ್ಮಿಕರು ಗಾಯಗೊಂಡಿದೋರಾಗಿ ಹೇಳಲಾಗುತ್ತಿದೆ. ಸ್ಫೋಟದ ನಂತರ ಇಡೀ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯೊಳಗೆ ಇನ್ನೂ ಕೆಲವರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/china-to-build-railway-station-like-sanitary-pad-the-photo-goes-viral/ https://kannadanewsnow.com/kannada/congress-leader-rahul-gandhi-arrives-in-mandya/

Read More

ಬೆಂಗಳೂರು: 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ (ಆಟೋ, ಟ್ಯಾಕ್ಸಿ, ವ್ಯಾನ್, ಶಾಸಗಿ ಬಸ್ಸುಗಳು, ಶಾಲಾ‌ ಬಸ್ಸುಗಳು ಸರಕು ಸಾಗಣೆ‌ ವಾಹನಗಳು ಹಾಗೂ ಇತರೆ ಸರಕು ಸಾಗಣೆ ವಾಹನಗಳು) ಮತ್ತು ವಾಹನಗಳ ಮಾಲೀಕರು ಮತ್ತು ಚಾಲಕರಿಂದ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಅವರಿಗೆ ಬೆಂಬಲ ಘೋಷಿಸಿದ್ದಾರೆ. ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟವು ಕಳೆದ ವರ್ಷ ಸೆಪ್ಟೆಂಬರ್ 11 ರಂದು ಮುಷ್ಕರ ನಡೆಸಿದ್ದ ಸಂದರ್ಭದಲ್ಲಿ ತಮ್ಮ 30 ಬೇಡಿಕೆಗಳನ್ನು ಪರಿಗಣಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಮಾನ್ಯ ಸಾರಿಗೆ ಸಚಿವರು 9 ತಿಂಗಳು 5 ದಿನದ ಅವಧಿಯಲ್ಲಿಯೇ 20 ಪ್ರಮುಖ ಬೇಡಿಕೆಗಳನ್ನು ಈಡೇರಿಸಿ, ಐತಿಹಾಸಿಕ ನಿರ್ಣಯಗಳನ್ನು‌ ತೆಗೆದುಕೊಂಡು ಖಾಸಗಿ ವಾಹನ ಚಾಲಕರ ಹಿತಕಾಯುವಲ್ಲಿ ಶ್ರಮಿಸಿದ ಶ್ರೀ .ರಾಮಲಿಂಗಾ ರೆಡ್ಡಿ ಅವರಿಗೆ ಹಾಗೂ ಅವರ ಮಗಳಿಗೆ ನಮ್ಮ ಸಂಪೂರ್ಣ ಬೆಂಬಲವೆಂದು ನಟರಾಜ್ ಶರ್ಮಾ, ವಕೀಲರು ಹಾಗೂ ಒಕ್ಕೂಟದ ಅಧ್ಯಕ್ಷರು ಘೋಷಿಸಿದ್ದಾರೆ. ಪ್ರಮುಖ ಕ್ರಮಗಳಾದ ರ್ಯಾಪಿಡೋ ಬೈಕ್ ಟ್ಯಾಕ್ಸಿ ರದ್ಧತಿ,‌ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ‌…

Read More

ಮಂಡ್ಯ: ವಿಶೇಷ ವಿಮಾನದ ಮೂಲಕ ಮಂಡ್ಯಕ್ಕೆ ಲೋಕಸಭಾ ಚುನಾವಣಾ ಪ್ರಚಾರ ಕೈಗೊಳ್ಳೋದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು AICC ವರಿಷ್ಠ ರಾಹುಲ್ ಗಾಂಧಿ ಅವರನ್ನು HAL ಏರ್ ಪೋರ್ಟ್ ನಲ್ಲಿ ಸ್ವಾಗತಿಸಿ, ಬರಮಾಡಿಕೊಂಡರು. ಇಬ್ಬರೂ ಒಟ್ಟಿಗೇ ಚುನಾವಣಾ ಪ್ರಚಾರಕ್ಕಾಗಿ ಮಂಡ್ಯಕ್ಕೆ ಪ್ರಯಾಣ ಬೆಳೆಸಿದರು. ವಿಶೇಷ ಹೆಲಿಕ್ಯಾಪ್ಟರ್ ನಲ್ಲಿ ಒಟ್ಟಿಗೆ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಯಾಣ ಬೆಳೆಸಿದರು. ಮಂಡ್ಯದ ಪಿಇಎಸ್ ಕಾಲೇಜು ಮೈದಾನಕ್ಕೆ ಇಳಿದಂತ ಅವರನ್ನು ಕಾಂಗ್ರೆಸ್ ನಾಯಕರು ಬರಮಾಡಿಕೊಂಡರು. ಇಂದು ಮಂಡ್ಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ. https://kannadanewsnow.com/kannada/china-to-build-railway-station-like-sanitary-pad-the-photo-goes-viral/ https://kannadanewsnow.com/kannada/dwarakish-who-is-immersed-in-the-five-elements-is-still-a-memory-of-the-kannada-dwarf/

Read More

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ…

Read More

ಬೆಂಗಳೂರು: ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನದ ಕಾರಣ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ನಿಷೇಧಾಜ್ಞೆ ಹಿನ್ನಲೆಯಲ್ಲಿ ಮದ್ಯ ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ. ಸೋ ಬೆಂಗಳೂರಲ್ಲಿ ಎರಡು ದಿನ ಎಣ್ಣೆ ಕೂಡ ಸಿಗೋದಿಲ್ಲ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್.24ರ ಸಂಜೆ 6 ಗಂಟೆಯಿಂದ ಏಪ್ರಿಲ್.26ರ ರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ನಿಷೇಧಾಜ್ಞೆಯ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿ, ಬೆಂಬಲಿಗರು ಸೇರಿ 2ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಮತಗಟ್ಟೆ ವ್ಯಾಪ್ತಿಯ 100 ಮೀಟರ್ ಒಳಗೆ ಪ್ರಚಾರ ನಿಷೇಧಿಸಲಾಗಿದೆ. ಪೋಸ್ಟರ್, ಬ್ಯಾನರ್ ಗಳ ಬಳಕೆಗೆ ನಿರ್ಬಂಧವನ್ನು ವಿಧಿಸಲಾಗಿದೆ. ಇನ್ನೂ ಪ್ರಚೋದನಕಾರಿ ಭಾಷಣ, ರಾಜಕೀಯ ಸಂಬಂಧಿಸಿದಂತ ಘೋಷಣೆ, ಉದ್ರೇಕಕಾರಿ ಹಾಡು, ಕೂಗಾಟ, ಧ್ವನಿ ವರ್ಧಕ ಬಳಕೆಗೂ ಲೋಕಸಭಾ ಚುನಾವಣೆಯ ಮತದಾನದ ಹಿನ್ನಲೆಯಲ್ಲಿ…

Read More

ಬೆಂಗಳೂರು: ತುಮಕೂರಿನಲ್ಲಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್‌.ಡಿ.ದೇವೇಗೌಡ ಅವರು ಭಾಗಿಯಾಗಿದ್ದ ಚುನಾವಣಾ ಪ್ರಚಾರ ಸಭೆಗೆ ಕಾಂಗ್ರೆಸ್‌ ಕಾರ್ಯಕರ್ತೆಯರು ನುಗ್ಗಿ ದಾಂಧಲೆ ಮಾಡಿರುವುದು ಗಂಭೀರ ಭದ್ರತಾ ಲೋಪವಾಗಿದೆ ಎಂದು ದೂರಿ ಜೆಡಿಎಸ್‌ ಮತ್ತು ಬಿಜೆಪಿ ನಾಯಕರು ಕೇಂದ್ರ ಚುನಾವಣೆ ಆಯೋಗದ ಮುಖ್ಯ ಆಯುಕ್ತರಿಗೆ ದೂರು ನೀಡಿದ್ದಾರೆ. ಅಲ್ಲದೆ; ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರ ಬೆಂಬಲಿಗರು ಈ ದಾಂಧಲೆ ನಡೆಸಿದ್ದಾರೆ. ತಮ್ಮ ಬೆಂಬಲಿಗರಿಗೆ ಡಿಕೆಶಿ ಅವರೇ ಕುಮ್ಮಕ್ಕು ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದು ಆಯೋಗಕ್ಕೆ ಮನವಿ ಮಾಡಲಾಗಿದೆ. ಮಾಜಿ ಸಚಿವರಾದ ಎಸ್.‌ಸುರೇಶ್‌ ಕುಮಾರ್‌, ಜೆಡಿಎಸ್‌ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್‌, ತುಮಕೂರು ವಕೀಲರ ಸಂಘದ ಅಧ್ಯಕ್ಷ ಕೆಂಪರಾಜು, ಬಿಜೆಪಿ ಕಾನೂನು ಘಟಕದ ಅಧ್ಯಕ್ಷ ವಸಂತ್‌ ಕುಮಾರ್‌, ಮುಖಂಡರಾದ ಹಿಮಾನಂದ, ದೇವರಾಜ್‌ ಅವರಿದ್ದ ನಿಯೋಗವು ಆಯೋಗಕ್ಕೆ ದೂರು ಸಲ್ಲಿಸಿದೆ.  ಇಂಥ ಘಟನೆಗಳಿಂದ…

Read More