Author: kannadanewsnow09

ಬೆಂಗಳೂರು: ದಿನಾಂಕ 21-01-2024ರ ಭಾನುವಾರ ದಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸೂಚನೆಯ ಮೇರೆಗೆ ದಿನಾಂಕ 21-01-2024ರ ಭಾನುವಾರದಂದು ಬೆಳಿಗ್ಗೆ 10-00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಎಐಸಿಸಿ ಕಾರ್ಯದರ್ಶಿಗಳು, ಸಚಿವರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಹಿರಿಯ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಸಮಾವೇಶವನ್ನು ಯಶಸ್ವಿಗೊಳಿಸಲು ರಾಜ್ಯದ ಎಲ್ಲ ಸಚಿವರು, ಸಂಸದರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, 2023ರ ವಿಧಾನಸಭೆ ಅಭ್ಯರ್ಥಿಗಳು/ಆಕಾಂಕ್ಷಿಗಳು, ಎಐಸಿಸಿ/ಕೆಪಿಸಿಸಿ ಸದಸ್ಯರು, ಡಿಸಿಸಿ/ಬಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ/ಸೆಲ್/ವಿಭಾಗಗಳ ಎಲ್ಲಾ ಹಂತದ ಅಧ್ಯಕ್ಷರು, ಜಿಲ್ಲಾ/ತಾಲೂಕು ಪಂಚಾಯಿತಿ ಮಾಜಿ ಸದಸ್ಯರು/ಪರಾಜಿತ ಅಭ್ಯರ್ಥಿಗಳು, ಮಹಾನಗರ ಪಾಲಿಕೆ, ನಗರ…

Read More

ಬೆಂಗಳೂರು: “ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವವನೊಬ್ಬ” ಎಂಬ ಗಾದೆ ಮಾತಿನಂತೆ ಈಗಾಗಲೇ ಅವೈಜ್ಞಾನಿಕ ಗ್ಯಾರೆಂಟಿಗಳ ಭಾರವನ್ನ ಹೊರಲಾಗದೆ ಬೆನ್ನು ಮೂಳೆ ಮುರಿದಂತಾಗಿರುವ ಸರ್ಕಾರಕ್ಕೆ, ಗ್ಯಾರೆಂಟಿ ಜಾರಿ ಸಮತಿ ಎಂಬ ಮತ್ತೊಂದು ಹೊರೆ ಹೊರಿಸಲು ಹೊರಟಿದ್ದಾರೆ ಸಿಎಂ ಸಿದ್ಧರಾಮಯ್ಯ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ಗ್ಯಾರೆಂಟಿ ಜಾರಿಗೆ ಮುಖ್ಯಮಂತ್ರಿ ಆದಿಯಾಗಿ, 34 ಕ್ಯಾಬಿನೆಟ್ ಸಚಿವರು, ಆರ್ಥಿಕ,ರಾಜಕೀಯ, ಮಾಧ್ಯಮ ಸಲಹೆಗಾರರು, ಜಿಲ್ಲಾಡಳಿತಗಳು ಸೇರಿದಂತೆ ಇಡೀ ಆಡಳಿತ ಯಂತ್ರವೇ ಇರುವಾಗ ಪ್ರತ್ಯೇಕ ಸಮಿತಿಯ ಅಗತ್ಯ ಏನಿದೆ? ಎಂದು ಪ್ರಶ್ನಿಸಿದ್ದಾರೆ. ಸಂಪುಟ ದರ್ಜೆ ಸ್ಥಾನಮಾನದ ಅಧ್ಯಕ್ಷರು, ರಾಜ್ಯ ಸಚಿವ ಸ್ಥಾನಮಾನದ ಐವರು ಉಪಾಧ್ಯಕ್ಷರು ಸೇರಿದಂತೆ 31 ಸದಸ್ಯರ ಸಮಿತಿಯ ಸಂಬಳ ಸಾರಿಗೆ ಖರ್ಚಿನಿಂದ ರಾಜ್ಯ ಸರ್ಕಾರಕ್ಕೆ 16 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಹೇಳಿದ್ದಾರೆ. ತಮ್ಮ ಪಕ್ಷದ ಅತೃಪ್ತ ಶಾಸಕರನ್ನ, ಪ್ರಮುಖ ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಯ ಕೆಲಸಕ್ಕೆ ಬಳಸಿಕೊಳ್ಳಲು ರಾಜ್ಯದ ಸಾರ್ವಜನಿಕ ಹಣ ಏಕೆ ದುರ್ಬಳಕೆ ಮಾಡುತ್ತೀರಿ ಸಿಎಂ…

Read More

ಬೆಂಗಳೂರು: ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್‌ ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್‌ನ ಚೇಲಾಗಳಿಗೆ ಬಿರಿಯಾನಿ ಊಟ ಕೊಡಿಸಲು, ಮಜಾ ಮಾಡಲು ಮಾತ್ರ 150 ಕೋಟಿ ರೂ. ಇದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರವಾಗಿ ಕಾಂಗ್ರೆಸ್‌ ಸರ್ಕಾರ 100 ಕೋಟಿ ರೂ.ಬಿಡುಗಡೆಗೊಳಿಸುತ್ತಿದೆ. ನ್ಯಾಯವಾಗಿ 3-4 ಸಾವಿರ ಕೋಟಿ ರೂ. ನೀಡಬೇಕಿತ್ತು. ಈಗ ಗ್ಯಾರಂಟಿ ಜಾರಿ ಸಮಿತಿಯ 3 ಸಾವಿರ ಕಾಂಗ್ರೆಸ್‌ ಕಾರ್ಯಕರ್ತರಿಗೆ 25 ಕೋಟಿ ರೂ. ಖರ್ಚು ಮಾಡಲಾಗುತ್ತದೆ. ಅಂದರೆ ಐದು ವರ್ಷಕ್ಕೆ 150 ಕೋಟಿ ರೂ. ಆಗಲಿದೆ. ಕಾಂಗ್ರೆಸ್‌ ಚೇಲಾಗಳಿಗೆ ಮಜಾ ಮಾಡಲು ಇಷ್ಟು ಹಣ ಖರ್ಚು ಮಾಡಲಾಗುತ್ತಿದೆ. ಅವರಿಗೆ ಕ್ಯಾಬಿನೆಟ್‌ ದರ್ಜೆ ನೀಡಲಾಗುತ್ತದೆ. ಸರ್ಕಾರ ರೈತರಿಗೆ ಯಾವಾಗ ಕ್ಯಾಬಿನೆಟ್‌ ದರ್ಜೆಯ ಗೌರವ ಕೊಟ್ಟು ಪರಿಹಾರ ನೀಡಲಿದೆ ಎಂದು ಪ್ರಶ್ನಿಸಿದರು. ಶಾಲೆಯ ಶೌಚಾಲಯ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾರ್ಯಕರ್ತರಿಗೆ ಬಿರಿಯಾನಿ, ಮಟನ್‌ ಊಟ ಹಾಕಲು…

Read More

ಬೆಂಗಳೂರು : ರಾಜ್ಯದ ಸಣ್ಣ ನೀರಾವರಿ ಇಲಾಖೆಯ ಕೆರೆಗಳಲ್ಲಿ ಹೂಳನ್ನ ಅವೈಜ್ಞಾನಿಕವಾಗಿ ಎತ್ತಲಾಗುತ್ತಿದ್ದು, ಇದರಿಂದ ಕೆರೆಗಳಲ್ಲಿನ ನೀರು ಇಂಗಿಹೋಗಿ ನೀರಿನ ಅಭಾವ ಸೃಷ್ಟಿಗೆ ಕಾರಣವಾಗುತ್ತಿದೆ. ಇದನ್ನ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಬೋಸರಾಜು ಅವರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಜ್ಯದ ಸಣ್ಣ ನೀರಾವರಿ ಇಲಾಖೆಯ ಕೆರೆಗಳಲ್ಲಿ ಹೂಳನ್ನ ಎತ್ತುತ್ತಿದ್ದಾರೆ. ಕೆಲವು ಪ್ರಕರಣಗಳಲ್ಲಿ ನಿರ್ದಿಷ್ಟ ಮಿತಿಗಿಂತ ಜಾಸ್ತಿ ಮತ್ತು ಅವೈಜ್ಞಾನಿಕವಾಗಿ ಹೂಳನ್ನ ಎತ್ತುತ್ತಿರುವುದರಿಂದ ಸರಕಾರದ ಬೊಕ್ಕಸಕ್ಕೂ ನಷ್ಟ ಉಂಟಾಗುತ್ತಿದೆ. ಅಲ್ಲದೇ, ಈ ರೀತಿ ಅಸಮರ್ಪಕ ಮತ್ತು ಅವೈಜ್ಞಾನಿಕವಾಗಿ ಹೂಳು ಎತ್ತುತ್ತಿರುವುದರಿಂದ ಕೆರೆಗಳಲ್ಲಿನ ನೀರು ಇಂಗಿಹೋಗಿ ನೀರಿನ ಅಭಾವ ಸೃಷ್ಟಿಯಾಗುತ್ತಿದೆ ಎಂದಿದ್ದಾರೆ. ಅಲ್ಲದೇ, ಅಂತರ್ಜಲ ಮಟ್ಟವೂ ಗಣನೀಯವಾಗಿ ಕ್ಷೀಣಿಸುತ್ತಿದೆ. ಈ ಹಿನ್ನಲೆಯಲ್ಲಿ ಇಂತಹ ಚಟುವಟಿಕೆಗಳ ವಿರುದ್ದ ಕಾನೂನಾತ್ಮಕವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಎಲ್ಲಾ ವೃತ್ತಗಳ ಅಧೀಕ್ಷಕ ಅಭಿಯಂತರರುಗಳಿಗೆ ಹಾಗೂ ಎಲ್ಲಾ ವಿಭಾಗಗಳ…

Read More

ಯಾದಗಿರಿ: ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಮುಖ್ಯ ಶಿಕ್ಷ ನೋರ್ವ ಅನುಚಿತವಾಗಿ ವರ್ತಿಸಿದಂತ ಆರೋಪದ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿರುವಂತ ಸರ್ಕಾರಿ ಪ್ರೌಢ ಶಾಲೆಯ ಹೆಡ್ ಮಾಸ್ಟರ್ ಹನುಮೇಗೌಡ ಎಂಬುವರೇ ಅಮಾನತುಗೊಂಡ ಶಿಕ್ಷಕರಾಗಿದ್ದಾರೆ. ಹೆಡ್ ಮಾಸ್ಟರ್ ಹನುಮೇಗೌಡ ಅವರು ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂಬುದಾಗಿ ಮಕ್ಕಳ ಪೋಷಕರು ಮೇಲಧಿಕಾರಿಗಳಿಗೆ ದೂರು ನೀಡಿದ್ದರು. ಪೋಷಕರ ದೂರಿನ ಹಿನ್ನಲೆಯಲ್ಲಿ ತನಿಖೆ ನಡೆಸಿ, ಯಾದಗಿರಿ ಜಿಲ್ಲಾ ಪಂಚಾಯ್ತಿ ಸಿಇಓಗೆ ವರದಿ ನೀಡಲಾಗಿತ್ತು. ವರದಿಯಲ್ಲಿ ಮುಖ್ಯ ಶಿಕ್ಷಕರ ಅನುಚಿತ ವರ್ತನೆಯ ಬಗ್ಗೆ ಮಹತ್ವದ ಮಾಹಿತಿ ನೀಡಲಾಗಿತ್ತು. ಈ ವರದಿಯನ್ನು ಆಧರಿಸಿ ಯಾದಗಿರಿ ಜಿಲ್ಲಾ ಪಂಚಾಯ್ತಿ ಸಿಇಓ ಅವರು ಅನಪುರ ಸರ್ಕಾರಿ ಪ್ರೌಢ ಶಾಲೆಯ ಹೆಡ್ ಮಾಸ್ತರ್ ಹನುಮೇಗೌಡ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. https://kannadanewsnow.com/kannada/belagavi-the-accused-who-was-brought-to-the-police-in-belagavi-to-produce-them-before-the-court-escaped/ https://kannadanewsnow.com/kannada/bengaluru-ayodhya-airfares-rise-by-nearly-400-to-rs-30000/

Read More

ಬೆಳಗಾವಿ: ವಿವಿಧ ಪ್ರಕರಣದಲ್ಲಿ ಜೈಲು ಸೇರಿದ್ದಂತ ಆತನನ್ನು ಇಂದು ಪ್ರಕರಣವೊಂದರ ವಿಚಾರಣೆಗಾಗಿ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸೋದಕ್ಕೆ ಕರೆತಂದಿದ್ದರು. ಹೀಗೆ ಕರೆತಂದಿದ್ದಂತ ಆರೋಪಿಯೋರ್ವ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿರೋ ಘಟನೆ ಬೆಳಗಾವಿಯ ಕೋರ್ಟ್ ಆವರಣದಲ್ಲಿ ನಡೆದಿದೆ. ಬೆಳಗಾವಿಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಿಂಡಲಗಾ ಜೈಲಿನಲ್ಲಿದ್ದಂತ ಕಳ್ಳತನ, ದರೋಡೆ ಪ್ರಕರಣದ ಆರೋಪಿ ಅಬ್ದುಲ್ ಶಬ್ಬೀರ್ ಶೇಖ್ ಎಂಬಾತನನ್ನು ಟಿಳಕವಾಡಿ ಪೊಲೀಸರು ಕೇಸ್ ಒಂದರ ವಿಚಾರಣೆಗಾಗಿ ಕರೆತಂದಿದ್ದರು. ಹೀಗೆ ಬೆಳಗಾವಿಯ ಜಿಲ್ಲಾ ನ್ಯಾಯಾಲಯಕ್ಕೆ ಕರೆತಂದಿದ್ದಂತ ಆರೋಪಿ ಅಬ್ದುಲ್ ಟಿಳಕವಾಡಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿರೋದಾಗಿ ತಿಳಿದು ಬಂದಿದೆ. ಹಿಂಡಲಗಾ ಜೈಲಿನಿಂದ ಕರೆತಂದಿದ್ದಂತ ಕಳ್ಳತನ, ದರೋಡೆ ಪ್ರಕರಣದ ಆರೋಪಿ ಅಬ್ದುಲ್ ಶಬ್ಬೀರ್ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. https://kannadanewsnow.com/kannada/yuva-nidhi-programme-to-be-held-in-shivamogga-on-jan-12-school-timings-to-be-changed-in-the-city/ https://kannadanewsnow.com/kannada/shimoga-gears-up-for-yuvanidhi-scheme-cash-transfer-programme/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಜನವರಿ.12ರಂದು ಯುವನಿಧಿ ಯೋಜನೆಯ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ನಗರದಲ್ಲಿನ ಶಾಲೆಗಳ ಸಮಯವನ್ನು ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿವಮೊಗ್ಗ ನಗರದ ಎಲ್ಲಾ ಶಾಲೆಗಳಿಗೆ ಅಧಿಕೃತ ಜ್ಞಾಪನೆ ಹೊರಡಿಸಿದ್ದು, ದಿನಾಂಕ 12-01-2024ರಂದು ಶಿವಮೊಗ್ಗ ನಗರದಲ್ಲಿ ಕರ್ನಾಟಕ ಸರ್ಕಾರದ ಯುವನಿಧಿ ಕಾರ್ಯ್ಕಮದ ಉದ್ಘಾಟನಾ ಸಮಾರಂಭವಿರುತ್ತದೆ. ಸಿಎಂ ಸಿದ್ಧರಾಮಯ್ಯ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಲಿದ್ದಾರೆ. ಆ ದಿನದಂದು ನಗರದಲ್ಲಿ ಜನ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ ಎಂದಿದ್ದಾರೆ. ಇದಲ್ಲದೇ ಶಿವಮೊಗ್ಗ ನಗರದ ಹಲವು ರಸ್ತೆಗಳು ಬಂದ್ ಮಾಡಲಾಗುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗಲು ತೊಂದರೆಯಾಗದಂತೆ ಶಿವಮೊಗ್ಗ ನಗರದ ಶಾಲೆಗಳಿಗೆ ಮಾತ್ರ ಅನ್ವಯಿಸುವಂತೆ ದಿನಾಂಕ 12-01-2024ರಂದು ಶಾಲಾ ವೇಳೆಯನ್ನು ಬದಲಾವಣೆ ಮಾಡಲಾಗಿದೆ ಅಂತ ಹೇಳಿದ್ದಾರೆ. ಜನವರಿ.12, 2024ರಂದು ಶಿವಮೊಗ್ಗ ನಗರದ ಶಾಲೆಗಳು ಬೆಳಿಗ್ಗೆ 9 ಗಂಟೆಗೆ ಪ್ರಾರಂಭಿಸಿ, ಸಂಜೆ 4 ಗಂಟೆಗೆ ಬಿಡುವಂತೆ ತಿಳಿಸಿದ್ದಾರೆ. ಶಾಲಾ ವಾಹನಗಳು ಬೆಳಿಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ರಸ್ತೆಗಿಳಿಯದಂತೆ ಕ್ರಮ ವಹಿಸಲು ಖಾಸಗಿ…

Read More

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ಷಕಾಂಕ್ಷೆಯ 5ನೇ ಗ್ಯಾರಂಟಿ ಘೋಷಣೆ ʼಯುವ ನಿಧಿʼ ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರ ಸಜ್ಜಾಗಿದೆ. ಯುವಜನರ ಆಶಾಕಿರಣವಾದ ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಶುಕ್ರವಾರ( ಜ. 12 ) ನಡೆಯುವ ಈ ಐತಿಹಾಸಿಕ ಸಮಾರಂಭಕ್ಕೆ ಶಿವಮೊಗ್ಗ ನಗರದ ಹೃದಯ ಭಾಗವೇ ಆದ ಫ್ರೀಡಂ ಪಾರ್ಕ್‌( ಹಳೆ ಜೈಲ್‌ ಆವರಣ) ನ ವಿಶಾಲವಾದ ಜಾಗದಲ್ಲಿ ಬೃಹತ್‌ ವೇದಿಕೆ ನಿರ್ಮಾಣವಾಗಿದೆ. ೮೫ ಸಾವಿರಕ್ಕೂ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರುಗಳಾದ ಮಧುಬಂಗಾರಪ್ಪ, ಡಾ.ಶರಣ ಪ್ರಕಾಶ್ ಪಾಟೀಲ್, ಡಾ.ಎಂ.ಸಿ. ಸುಧಾಕರ್ ಸೇರಿದಂತೆ ಹಲವು ಸಚಿವರು, ಗಣ್ಯರು, ಶಾಸಕರು ಅಧಿಕಾರಿಗಳು ಚಾಲನೆ ಕೊಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ ,ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ…

Read More

ಶಿವಮೊಗ್ಗ : ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‍ನಲ್ಲಿ ಜ.12 ರಂದು ಮುಖ್ಯಮಂತ್ರಿಗಳು ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆ ಪಾವತಿಯ ಚಾಲನಾ ಕಾರ್ಯಕ್ರಮವನ್ನು ನೆರವೇರಿಸಲಿದ್ದು, ಈ ಕಾರ್ಯಕ್ರಮಕ್ಕೆ ಫಲಾನುಭವಿಗಳು ಆಗಮಿಸುವ ಸಲುವಾಗಿ ನಿಗಮದ ಶಿವಮೊಗ್ಗ ವಿಭಾಗವು 150 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ. ಜ.11 ಮತ್ತು 12 ರಂದು ನಿಗಮದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂರ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/now-you-will-also-receive-money-from-singapore-through-upi-heres-the-details/ https://kannadanewsnow.com/kannada/bengaluru-ayodhya-airfares-rise-by-nearly-400-to-rs-30000/

Read More

ಬೆಳಗಾವಿ: ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡಿಯಲ್ಲಿ ಬೆಳಿಗ್ಗೆ ಹಾಲನ್ನು ಶಾಲಾ ಮಕ್ಕಳಿಗೆ ನೀಡಲಾಗುತ್ತದೆ. ಹೀಗೆ ನೀಡಿದಂತ ಕ್ಷೀರಭಾಗ್ಯದ ಹಾಲಿಗೆ ಹಲ್ಲಿ ಬಿದ್ದಿರೋದು ಕಾಣದೇ ವಿದ್ಯಾರ್ಥಿಗಳಿಗೆ ಕೊಟ್ಟ ಪರಿಣಾಮ 23 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಸರ್ಕಾರಿ ಶಾಲೆಯೊಂದರಲ್ಲಿ ಹಲ್ಲಿ ಬಿದ್ದಿದ್ದ ಕ್ಷೀರಭಾಗ್ಯದ ಹಾಲು ಸೇವಿಸಿದಂತ 23 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ವಾಂತಿ, ಬೇಧಿ ಕಾಣಿಸಿಕೊಂಡ ಶಾಲಾ ಮಕ್ಕಳನ್ನು ಕೂಡಲೇ ಸಂಕೇಶ್ವರದ ಸರ್ಕಾರಿ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಬಿಇಒ ಭೇಟಿ ನೀಡಿ, ಆರೋಗ್ಯ ವಿಚಾರಿಸಿ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/bengaluru-ayodhya-airfares-rise-by-nearly-400-to-rs-30000/ https://kannadanewsnow.com/kannada/now-you-will-also-receive-money-from-singapore-through-upi-heres-the-details/

Read More