Subscribe to Updates
Get the latest creative news from FooBar about art, design and business.
Author: kannadanewsnow09
ಕಲಬುರ್ಗಿ: ಜಿಲ್ಲೆಯಲ್ಲಿ ಇಂದು ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಕಲಬುರ್ಗಿ ಜಿಲ್ಲೆಯ ಅಳಂದ ಬಳಿಯ ಮಿನಿ ವಿಧಾನಸೌಧದ ಬಳಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಕೆಳಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳನ್ನು ಸಿದ್ದಲಿಂಗಯ್ಯ ಹಾಗೂ ಅವರ ಸಹೋದರನ ಮಗ 8 ವರ್ಷದ ಸಂಕೇತ್ ಎಂಬುದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಸನದಲ್ಲಿ ಜಾಲಿ ರೈಡ್ ವೇಳೆ ಜಮೀನಿಗೆ ಉರುಳಿದ ಕಾರು : ಇಬ್ಬರು ಯುವಕರ ದಾರುಣ ಸಾವು ಹಾಸನ : ಹುಟ್ಟುಹಬ್ಬ ಆಚರಿಸಿಕೊಳ್ಳಲು ಜಾಲಿ ರೈಡ್ ಮಾಡುತ್ತಿದ್ದ ಯುವಕರ ಕಾರು ಒಂದು ಅಪಘಾತಕ್ಕೆ ಈಡಾಗಿ ಜಮೀನಿನಲ್ಲಿ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ…
ಬೆಂಗಳೂರು: ಲೋಕಸಭಾ ಸದನದಲ್ಲಿ ಭದ್ರತಾ ವೈಫಲ್ಯದ ಬಳಿಕ ಮಾಧ್ಯಮಗಳಿಂದ ದೂರವೇ ಉಳಿದಿದ್ದಂತ ಸಂಸದ ಪ್ರತಾಪ್ ಸಿಂಹ ಅವರು, ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ. ಇಂದು ಜೆಪಿ ನಗರದಲ್ಲಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿದಂತ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಹೆಚ್ ಡಿಕೆ ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಹಲವು ವಿಷಯಗಳನ್ನು ಅವರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಅವರ ಸಹೋದರನ ವಿರುದ್ಧದ ಅರಣ್ಯಾಧಿಕಾರಿಗಳ ಕ್ರಮದ ಬಗ್ಗೆಯೂ ಚರ್ಚಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯಬೇಕಿದೆ. https://kannadanewsnow.com/kannada/two-killed-in-accident-during-jolly-ride-in-hassan/ https://kannadanewsnow.com/kannada/pm-modi-releases-11-day-special-message-on-ram-temple-consecration/
ಹಾಸನ: ಜಿಲ್ಲೆಯಲ್ಲಿ ಹುಟ್ಟು ಹಬ್ಬ ಆಚರಣೆಯ ಬಳಿಕ ಜಾಲಿ ರೈಡ್ ಗೆ ತೆರಳಿದ್ದಂತ ವೇಳೆಯಲ್ಲಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರೋ ಘಟನೆ ಹಾಸನ ಮಡೆನೂರು ಫ್ಲೈಓವರ್ ಬಳಿ ನಡೆದಿದೆ. ಹಾಸನ ತಾಲೂಕಿನ ಮಡೆನೂರು ಫ್ಲೈ ಓವರ್ ಬಳಿಯಲ್ಲಿ ನಿನ್ನೆ ರಾತ್ರಿ ಹುಟ್ಟು ಹಬ್ಬ ಆಚರಣೆಯ ಬಳಿಕ ಕಾರಿನಲ್ಲಿ ಸ್ನೇಹಿತರೆಲ್ಲ ಸೇರಿಕೊಂಡು ಜಾಲಿ ರೈಡ್ ಹೋಗಿದ್ದಾರೆ. ಈ ವೇಳೆಯಲ್ಲಿ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ರಕ್ಷಿತ್(22) ಹಾಗೂ ಕುಶಾಲ್(24) ಸಾವನ್ನಪ್ಪಿದ್ದಾರೆ. ಇನ್ನೂ ಈ ಅಪಘಾತದಲ್ಲಿ ಅಭಿಷೇಕ್, ವಿನಿಶಾ ಹಾಗೂ ಮಂಜುನಾಥ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಂದಹಾಗಿ ನಿನ್ನೆ ರಾತ್ರಿ ಹುಟ್ಟು ಹಬ್ಬ ಆಚರಿಸಿಕೊಳ್ಳೋ ಸಲುವಾಗಿ ಚನ್ನರಾಯಪಟ್ಟಣಕ್ಕೆ ಯುವಕ ಗುಂಪು ಆಗಮಿಸಿತ್ತು. ಗಿರೀಶ್ ಎಂಬುವರಿಂದ ಕಾರು ಪಡೆದುಕೊಂಡು ಬಂದಿದ್ದ ಕುಶಾಲ್, ಆ…
ಮಂಡ್ಯ: ಜಿಲ್ಲೆಯಲ್ಲಿ ನಿಷೇಧಾಜ್ಞೆಯ ನಡುವೆಯೂ ಬೈಕ್ Rally ನಡೆಸಿದಂತ 17 ಬಿಜೆಪಿ ಕಾರ್ಯಕರ್ತರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಈ ಮೂಲಕ ಬಿಜೆಪಿ ಕಾರ್ಯಕರ್ತರಿಗೆ ಕೋರ್ಟ್ ಬಿಗ್ ಶಾಕ್ ನೀಡಿದೆ. 2017ರಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಬಿಜೆಪಿಯಿಂದ ಬೈಕ್ Rally ನಡೆಸಲಾಗಿತ್ತು. ಈ ಸಂಬಂಧ ಪಾಂಡವಪುರ ಜೆಎಂಎಫ್ ಸಿ ಕೋರ್ಟ್ 17 ಮಂದಿ ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್ ಜಾರಿಗೊಳಿಸಿದೆ. ಅಂದಹಾಗೇ ನಿಷೇಧಾಜ್ಞೆ ಉಲ್ಲಂಘಿಸಿ ಬೈಕ್ Rally ನಡೆಸಿದ್ದಂತ ಬಿಜೆಪಿ ಕಾರ್ಯಕರ್ತರು ಎಸ್ ಡಿ ಪಿಐ, ಪಿಎಫ್ಐ ಸಂಘಟನೆಗಳ ವಿರುದ್ಧ ಪ್ರತಿಭಟನೆಗೆ ಮಂಗಳೂರಿಗೆ ತೆರಳಿದ್ದರು. ಪಾಂಡವಪುರದಿಂದ ಮಂಗಳೂರಿಗೆ ಬೈಕ್ ನಲ್ಲಿ Rally ಮೂಲಕ ತೆರಳುತ್ತಿದ್ದರು. ಈ ವೇಳೆ ಪಾಂಡವಪುರದಲ್ಲಿ ಪ್ರತಿಭಟನಾಕಾರರನ್ನು ತಡೆದಿದ್ದಂತ ಪೊಲೀಸರು, ಅವರ ವಿರುದ್ಧ ಎಫ್ಐಆರ್ ದಾಖಲಿಸಿ, ನಂತರ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ 17 ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. https://kannadanewsnow.com/kannada/pm-modi-releases-11-day-special-message-on-ram-temple-consecration/ https://kannadanewsnow.com/kannada/big-news-lasjkar-e-taiba/
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ( Karnataka Government Employees ) ಬಹು ದಿನಗಳ ಬೇಡಿಕೆಯಲ್ಲಿ ಹೊಸ ಪಿಂಚಣಿ ಯೋಜನೆ ( NPS ) ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ(OPS) ಜಾರಿಗೊಳಿಸುವುದು ಬಹುಮುಖ್ಯ ಬೇಡಿಕೆಯಾಗಿದೆ. ಈ ಬೇಡಿಕೆ ಈಡೇರಿಕೆಗೆ ಸಿಎಂ ಸಿದ್ಧರಾಮಯ್ಯ ( CM Siddaramaiah ) ಅನುಮೋದಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದಾರೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 01-04-2006ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿರುವ ನೌಕರರು ಹಳೇ ಪಿಂಚಣಿ ಯೋಜನೆಗೆ ( Old Pension Scheme -OPS ) ಪರಿಗಣಿಸಲು ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗೆ ಒಳಪಟ್ಟ ಹೊಸ ಪಿಂಚಣಿ ಯೋಜನೆ ( New Pension Scheme – NPS ) ನೌಕರರನ್ನು ಹಳೇ ಪಿಂಚಣಿ ವ್ಯಾಪ್ತಿಗೆ…
ಇಂಗ್ಲಿಷ್ ಹೊಸ ವರ್ಷ ಬಂದಿದೆ. ಹೊಸ ಕ್ಯಾಲೆಂಡರ್ ಕೂಡ ಬಹಳಷ್ಟು ಮನೆಗೆ ತಂದಿದೆ. ನಾವು ಅದನ್ನು ಮನೆಯಲ್ಲಿ ಅಂಟಿಸಿದ್ದೇವೆ. ಆದರೆ ಇಂದು ನಾವು ಜೀವನದಲ್ಲಿ ಪ್ರಗತಿಗೆ ಹೊಸ ಅವಕಾಶಗಳಿಲ್ಲದ ಕಾರಣದಿಂದ ಬಳಲುತ್ತಿರುವವರಿಗೆ ಹೊಚ್ಚ ಹೊಸ ಮಾಹಿತಿಯನ್ನು ತಿಳಿಯಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ…
ಶಿವಮೊಗ್ಗ : ಇಂದು ಕರ್ನಾಟಕ ಸರ್ಕಾರ ಆಯೋಜಿಸಿರುವ ಯುವನಿಧಿ ಯೋಜನೆ ಕಾರ್ಯಕ್ರಮವನ್ನು ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ನಿಲುಗಡೆ ಹಾಗೂ ತಾತ್ಕಾಲಿಕವಾಗಿ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ. ಜ.12ರ ಇಂದು ಬೆಳಿಗ್ಗೆ 6 ರಿಂದ ಸಂಜೆ 6.30 ರವರೆಗೆ ಕೆಳಕಂಡಂತೆ ವಾಹನಗಳ ಮಾರ್ಗ ಬದಲಾವಣೆ ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೊಳ ಸರ್ಕಲ್ ಗೋಪಾಳ ಸರ್ಕಲ್ ನ್ಯೂಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು. ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂಮಂಡ್ಲಿ ಸರ್ಕಲ್ ಗೋಪಾಳ ಸರ್ಕಲ್ ಆಲ್ಕೊಳ ಮಾರ್ಗವಾಗಿ ಸಾಗರ ರಸ್ತೆ ಬಂದು ಸೇರುವುದು. ಶಿವಮೊಗ್ಗದಿಂದ ಶಿಕಾರಿಪುರ, ನ್ಯಾಮತಿ ಸೊರಬ ಕಡೆ ಹೋಗುವ ಎಲ್ಲಾ ವಾಹನಗಳು ಆಯನೂರು ಹಾರ್ನಳ್ಳಿ ಸವಳಂಗ ಮಾರ್ಗವಾಗಿ ಚಲಿಸುವುದು. ಶಿಕಾರಿಪುರ ನ್ಯಾಮತಿ ಸೊರಬ ಕಡೆಯಿಂದ ಶಿವಮೊಗ್ಗಕ್ಕೆ ಬರುವ…
ಶಿವಮೊಗ್ಗ: ಇಂದು ರಾಜ್ಯ ಸರ್ಕಾರದ ಮಹತ್ಷಕಾಂಕ್ಷೆಯ 5ನೇ ಗ್ಯಾರಂಟಿ ಯೋಜನೆ ʼಯುವ ನಿಧಿʼ ಅಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮವನ್ನು ರಾಷ್ಟ್ರೀಯ ಯುವದಿನ, ಸ್ವಾಮಿ ವಿವೇಕಾನಂದ ಜಯಂತಿಯಂದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಯುವದಿನದಂದು ಯುವನಿಧಿಗೆ ಚಾಲನೆಯನ್ನು ಸಿಎಂ ಸಿದ್ಧರಾಮಯ್ಯ ( CM Siddaramaiah ) ಅಧಿಕೃತವಾಗಿ ನೀಡುತ್ತಿದ್ದು, ಮೊದಲ ಕಂತಿನ ಹಣ ನೇರ ಡಿಪ್ಲೋಮಾ, ಪದವೀಧರರ ಖಾತೆಗೆ ಜಮಾ ಆಗಲಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯ ( Yuvanidhi Scheme ) ನೊಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಜನವರಿ.12ರ ಇಂದು ಯೋಜನೆಗೆ ಶಿವಮೊಗ್ಗ ನಗರದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಯೋಜನೆಗೆ ನೊಂದಣಿಯಾಗಿರುವ ಎಲ್ಲ ಅಭ್ಯರ್ಥಿಗಳ ಖಾತೆಗೆ ಇಂದು ಮೊದಲ ತಿಂಗಳ ಹಣ ಜಮೆ ಆಗಲಿದೆ. ಈ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರವು ( Karnataka Government )…
ಶಿವಮೊಗ್ಗ : 2023-24 ನೇ ಸಾಲಿನ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭತ್ತ, ಕಬ್ಬು, ಅರೆ ನೀರಾವರಿ ಬೆಳೆ ಮುಂತಾದ ಯಾವುದೇ ರೀತಿಯ ಬೆಳೆಗಳಿಗೆ ನೀರನ್ನು ಹರಿಸದಿರಲು ಹಾಗೂ ಬೆಳೆದು ನಿಂತಿರುವ ಬೆಳೆ, ಜನ-ಜಾನುವಾರು, ಕುಡಿಯುವ ನೀರು ಮತ್ತು ಪರಿಸರ ಸಮತೋಲನ ಕಾಪಾಡಿಕೊಳ್ಳಲು ಆನ್ ಅಂಡ್ ಆಫ್ ಪದ್ದತಿಯಲ್ಲಿ ಬಲದಂಡೆ ನಾಲೆಗೆ ದಿ:15-01-2024 ರಿಂದ ಒಟ್ಟು 53 ದಿನಗಳಿಗೆ ಹಾಗೂ ಎಡದಂಡೆ ನಾಲೆಗೆ ದಿ: 10.01.2024 ರಿಂದ ಒಟ್ಟು 70 ದಿನಗಳಿಗೆ ನೀರು ಹರಿಸಲು ತೀರ್ಮಾನಿಸಲಾಯಿತು. ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಭದ್ರಾ ಎಡದಂಡೆ ನಾಲೆಯಲ್ಲಿ ಜ.10 ರಿಮದ 25 ರವರೆಗೆ 16 ದಿನ ನೀರು ಹರಿಸುವುದು, ಜ.26 ರಿಂದ ಫೆ.9 ರವರೆಗೆ 15 ದಿನ ನೀರು ನಿಲ್ಲಿಸುವುದು. ಫೆ.10 ರಿಂದ 26 ರವರೆಗೆ 17 ದಿನ ನೀರು ಹರಿಸುವುದು, ಫೆ.27 ರಿಂದ ಮಾ.12 ರವರೆಗೆ 15 ದಿನ ನೀರು…
ಬೆಂಗಳೂರು: ಗಣರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡದೇ ಇರೋದರ ಬಗ್ಗೆ ಕನ್ನಡಿಗರ ಆಕ್ರೋಶ ಮುಗಿಲೆದ್ದಿದೆ. ಈ ನಡುವೆ ಸಿಎಂ ಸಿದ್ಧರಾಮಯ್ಯ ಕೇಂದ್ರ ರಕ್ಷಣಾ ಸಚಿವರಿಗೆ ಪತ್ರ ಬರೆದಿದ್ದು, ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡುವಂತೆ ಕೋರಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಬರೆದಿರುವಂತ ಪತ್ರದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಪರೇಡ್ ನಲ್ಲಿ ಕರ್ನಾಟಕ ರಾಜ್ಯದ ಸ್ತಬ್ಧ ಚಿತ್ರವನ್ನು ಅಳವಡಿಸದೇ ಇರೋ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ. ಇನ್ನೂ ರಾಜ್ಯದ ಏಳು ಕೋಟಿ ಕನ್ನಡಿಗರ ಭಾವನಾತ್ಮಕ ವಿಷಯವು ಸ್ತಬ್ಧ ಚಿತ್ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸೋದಾಗಿದೆ. ಕರ್ನಾಟಕದ ಸ್ತಬ್ಧ ಚಿತ್ರವನ್ನು ಪರೇಡ್ ನಲ್ಲಿ ನಿರಾಕರಿಸುವುದು ಕೇವ ಪ್ರಮಾದವಲ್ಲ, ಇದು ನಮ್ಮ ರಾಜ್ಯದ ಹೆಮ್ಮಗೆ ಧಕ್ಕೆಯಾದಂತೆ ಆಗಿದೆ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿ ಎಂಬುದಾಗಿ ಪತ್ರದಲ್ಲಿ ವಿವರಿಸಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಸಿಎಂ ಸಿದ್ಧರಾಮಯ್ಯ, ಗಣರಾಜ್ಯೋತ್ಸವದ…