Author: kannadanewsnow09

ಬೆಂಗಳೂರು: ಭಾರತದ ಪ್ರಜಾಪ್ರಭುತ್ವವನ್ನು ಕಾಪಿಟ್ಟುಕೊಂಡು ಬಂದಿರುವ ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವುದು ದೇಶದ್ರೋಹದ ಹೇಳಿಕೆಯಾಗಿದೆ. ಪದೇಪದೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎನ್ನುತ್ತಿರುವ ಉತ್ತರ ಕನ್ನಡದ ಸಂಸದ ಅನಂತ ಕುಮಾರ್‌ ಹೆಗಡೆ ವಿರುದ್ಧ ರಾಜ್ಯ ಸರ್ಕಾರ ಸ್ವಯಂ ಪ್ರೇರಿತ ದೂರು (ಸುಮೊಟೊ) ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸೀಟು ಗೆಲ್ಲಬೇಕು. ರಾಜ್ಯಸಭೆಯಲ್ಲೂ ನಮಗೆ ಬಹುಮತ ಸಿಕ್ಕಿದರೆ ಸಂವಿಧಾನ ತಿದ್ದುಪಡಿ ಮಾಡಲಾಗುತ್ತೆ. ಆಗ ಇದೆ ನೋಡಿ ನಿಜವಾದ ಮಾರಿ ಹಬ್ಬ ಎಂದು ಅನಂತ್ ಕುಮಾರ್ ಹೇಳಿಕೆ ನೀಡಿರುವ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಜನತೆ ಬಿಜೆಪಿಯನ್ನು ಅಧಿಕಾರದಿಂದ ಹೊರಗೆ ದಬ್ಬಿದ್ದಾರೆ. ಇದೀಗ ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸುವ ಜವಾಬ್ದಾರಿ ಹೊತ್ತಿರುವ ರಾಜ್ಯ ಸರ್ಕಾರ ಅನಂತ…

Read More

ಹಾವೇರಿ: ಜಿಲ್ಲೆಯಲ್ಲಿ ಬ್ಯಾಡಗಿ ಮೆಣಸಿನ ಕಾಯಿ ಬೆಲೆ ಕುಸಿತಗೊಂಡ ಪರಿಣಾಮ, ರೈತರು ತಮ್ಮ ಕಿಚ್ಚು ಹೊರ ಹಾಕಿದ್ದಾರೆ. ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿರುವಂತ ರೈತರು, ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಒಣಮೆಣಿಸಿನ ಕಾಯಿ ಬೆಲೆ ಕುಸಿತಗೊಂಡ ಪರಿಣಾಮ ರೈತರ ಆಕ್ರೋಶದ ಕಿಚ್ಚಿನ ಕಟ್ಟೆ ಹೊಡೆದಿದೆ. ಬ್ಯಾಡಗಿ ಮೆಣಸಿನ ಕಾಯಿಯ ಬೆಲೆ ಕುಸಿತಗೊಂಡ ಪರಿಣಾಮ, ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಎಪಿಎಂಸಿಯಲ್ಲಿನ ಅಧಿಕಾರಿಗಳ ಕಾರಿಗೂ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ವಾರ ಪ್ರತಿ ಕ್ವಿಂಟಾಲ್ ಗೆ ಬ್ಯಾಡಗಿ ಮೆಣಸಿನ ಕಾಯಿಯ ಬೆಲೆ 20 ಸಾವಿರ ಇತ್ತು. ಈಗ ಕ್ವಿಂಟಾಲ್ ಗೆ 12 ಸಾವಿರಕ್ಕೆ ಇಳಿಕೆ ಕಂಡಿದೆ. ಈ ಹಿನ್ನಲೆಯಲ್ಲಿ ಮಾರುಕಟ್ಟೆಯ ಮೇಲೆ ಕಲ್ಲು ತೂರಾಟವನ್ನು ಮಾಡಿದ್ದಾರೆ. https://kannadanewsnow.com/kannada/applications-invited-for-skill-development-training-2/ https://kannadanewsnow.com/kannada/sringeri-pocso-case-four-accused-including-mother-fined-rs-25000-sentenced-to-20-years-in-jail/

Read More

ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರುಗಳಿಗೆ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು ಆಫ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಇಡಿಪಿ ಆನ್ ಸೆಲ್ಫ್ ಎಂಪ್ಲಾಯ್ಡ್ ಟೈಲರ್ 60 ದಿನ, ಬೌಟಿಕ್, ಅಸಿಸ್ಟೆಂಟ್ ಹೇರ್ ಥೆರಪಿಸ್ಟ್, ಫ್ಯಾಷನ್ ಡಿಸೈನರ್, ಹಾರ್ಡ್‍ವೇರ್ ರಿಪೇರ್ ಟೆಕ್ನೀಷಿಯನ್, ಹೇರ್ ಸ್ಟೈಲಿಸ್ಟ್, ಬ್ಯೂಟಿ ಥೆರಪಿಸ್ಟ್, ಡೊಮೆಸ್ಟಿಕ್ ಡಾಟಾಎಂಟ್ರಿ ಆಪರೇಟರ್, ಸೋಲಾರ್ ಪ್ಯಾನೆಲ್ ಇನ್ಸ್ಟಲೇಷನ್ ಆಂಡ್ ಸರ್ವಿಸ್ ತಲಾ 30 ದಿನಗಳ ತರಬೇತಿ ನೀಡಲಾಗುವುದು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 08182 276776 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. https://kannadanewsnow.com/kannada/job-news-home-guards-invites-applications-to-fill-up-the-vacant-posts/ https://kannadanewsnow.com/kannada/sringeri-pocso-case-four-accused-including-mother-fined-rs-25000-sentenced-to-20-years-in-jail/

Read More

ಶಿವಮೊಗ್ಗ: ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿತ್ತು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾರ್ಚ್ 13 ರ ಬುಧವಾರದಂದು ದಾಖಲೆಗಳ ಸಮೇತ ಹಾಜರಾಗಬೇಕೆಂದು ತಿಳಿಸಲಾಗಿದೆ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸುವವರು ನೇರವಾಗಿ ಅರ್ಜಿ ಮತ್ತು ದಾಖಲೆಗಳ ಸಮೇತ ಅಂದೇ ಬರಲು ಕೋರಿದೆ. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ. ಶಿವಮೊಗ್ಗದಲ್ಲಿ ಸಂಪರ್ಕಿಸಬೇಕಾದ ಘಟಕಾಧಿಕಾರಿ ಶೋಭಾ ಮೊ.ಸಂ: -9880705966. ಕುಂಸಿ ಘಟಕಾಧಿಕಾರಿ ಪಿ.ಆರ್. ರಾಘವೇಂದ್ರ -9916573291, ಹಾರನಹಳ್ಳಿ ಘಟಕಾಧಿಕಾರಿ ಸಿ.ಮಧು -9686631428. ಭದ್ರಾವತಿ ಘಟಕಾಧಿಕಾರಿ ಜಗದೀಶ್ -9900283490. ಬಿ.ಆರ್.ಪಿ. ಘಟಕಾಧಿಕಾರಿ ಪಿ.ಮಹೇಶ -9986760750, ಹೊಳೆಹೊನ್ನೂರು ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ -8105840345. ತೀರ್ಥಹಳ್ಳಿ…

Read More

ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ಮೇಷ ರಾಶಿ ಇಂದಿನ ದಿನ ದೈಹಿಕ ಮತ್ತು ಮಾನಸಿಕ ಸಂತೋಷವು ಇಂದಿಗೂ ಉಳಿಯುತ್ತದೆ. ಉದ್ಯೋಗ-ವ್ಯವಹಾರದಲ್ಲಿ ನಿಮ್ಮ ಶ್ರಮವನ್ನು ಸರಿದೂಗಿಸಲಾಗುತ್ತದೆ. ಸರ್ಕಾರಿ ಕೆಲಸವನ್ನು ಪೂರ್ಣಗೊಳಿಸುವುದು ಸುಲಭವಾಗುತ್ತದೆ. ಯಾವುದೇ ಹೊಸ ಒಪ್ಪಂದವನ್ನು ಸಹ ಅಂತಿಮಗೊಳಿಸಬಹುದು. ಉದ್ಯೋಗದಲ್ಲಿ ಅಧಿಕಾರಿಯ ಪ್ರೋತ್ಸಾಹವು ನಿಮ್ಮ ಉತ್ಸಾಹವನ್ನು ಹೆಚ್ಚಿಸುತ್ತದೆ. ಸಾಮಾಜಿಕ ವಲಯದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ಸಂಜೆ ಸಂಬಂಧಿಕರ ಆಗಮನದೊಂದಿಗೆ ಕುಟುಂಬದ ವಾತಾವರಣ ಆಹ್ಲಾದಕರವಾಗಿರುತ್ತದೆ. ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ನಿಮ್ಮ ಜೀವನದ ಎಂತಹ ಸಮಸ್ಯೆಗೂ…

Read More

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲು ಇನ್ನು ಕೆಲ ದಿನಗಳಷ್ಟೇ ಬಾಕಿ ಉಳಿದಿರುವಂತೆಯೇ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಮುಖಂಡರ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪ್ರಮುಖ ಮುಖಂಡರ ಸಭೆ ಕರೆದಿದ್ದರು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ರಾಮನಗರ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕರಾದ ಎ.ಮಂಜುನಾಥ್ ಸೇರಿ ಕ್ಷೇತ್ರದ ಅನೇಕ ಮುಖಂಡರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಎಲ್ಲಾ ಮುಖಂಡರ ಅಭಿಪ್ರಾಯ ಆಲಿಸಿದ ಮಾಜಿ ಮುಖ್ಯಮಂತ್ರಿಗಳು; ಮುಖಂಡರಿಗೆ ಕೆಲ ಸ್ಪಷ್ಟ ಸೂಚನೆಗಳನ್ನು ಕೊಟ್ಟರಲ್ಲದೆ; ನಮ್ಮ ಕಾರ್ಯಕರ್ತರು, ಮುಖಂಡರು ಪಕ್ಷದ ಹಿತರಕ್ಷಣೆ ಬಗ್ಗೆ ಆತಂಕಪಡಬೇಕಾಗಿಲ್ಲ. ಕಹಿಯನ್ನು ಮರೆತು ಕೆಲಸ ಮಾಡೋಣ, ಹಿಂದೆ ಆಗಿರುವ ತಪ್ಪುಗಳನ್ನು ಸರಿ ಮಾಡಿಕೊಂಡು ಮುಂದೆ ಹೋಗೋಣ ಎಂದರು. ರಾಮನಗರ ಕ್ಷೇತ್ರದ ಜನರು ಯಾವತ್ತೂ ಜಾತಿ ಮೇಲೆ ಚುನಾವಣೆ ಮಾಡಿದವರಲ್ಲ. ನಾನೆಂದೂ ಗುತ್ತಿಗೆದಾರರಿಂದ ಹಣ ಕೇಳಿದವನಲ್ಲ, ಚುನಾವಣೆ ಅದ ಮೇಲೆ ನಾನು ಊರುಗಳಲ್ಲಿ ಜಗಳ ತಂದಿಡಲಿಲ್ಲ. ನಿಮ್ಮಲ್ಲಿ ಒಬ್ಬನಾಗಿ ಪಕ್ಷಕ್ಕೆ…

Read More

ಬೆಂಗಳೂರು: ನಾನು ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದು  ಮಾಡಿದ ಇನ್ನೊಂದು ದೊಡ್ಡ ತಪ್ಪು ಎಂದು ಜೆಡಿಎಸ್ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ಮೈತ್ರಿ ದೇವೇಗೌಡರು, ನರೇಂದ್ರ ಮೋದಿ ಅವರ ಮಟ್ಟದಲ್ಲಿ ಆಗಿದೆ. 2018ರ ಸರ್ಕಾರದ ಅವಧಿಯಲ್ಲಿ ಅದ ಕಹಿ ಅನುಭವ, ತುಮಕೂರಿನಲ್ಲಿ ದೇವೆಗೌಡರ ಸೋಲನ್ನು ನಾವು ಮರೆತಿಲ್ಲ. ಕಳೆದ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದು ನಾವು ಮಾಡಿದ ಇನ್ನೊಂದು ದೊಡ್ಡ ತಪ್ಪು. ಅದನ್ನು ಸರಿ ಮಾಡಿಕೊಳ್ಳುವ ಕಾಲ ಸನ್ನಿಹಿತವಾಗಿದೆ, ಈ ಚುನಾವಣೆ ನಿರ್ಣಾಯಕ ಎಂದು  ಅವರು ಹೇಳಿದರು. ಇನ್ನು 45 ದಿನಗಳ ಕಾಲ ಪಕ್ಷದ ಪರವಾಗಿ ಪ್ರಚಾರ, ಕೆಲಸ ಮಾಡುತ್ತೇನೆ. ಮೈತ್ರಿಕೂಟದ ಪರವಾಗಿ ಕೆಲಸ ಮಾಡುತ್ತೇನೆ. ಒಳ್ಳೆಯ ಫಲಿತಾಂಶ ಬರಲು ಕಾಯಾ ವಾಚಾ ಮನಸಾ ಕೆಲಸ ಮಾಡುತ್ತೇನೆ. ನನಗೆ ಹಾಗೂ ಕುಮಾರಣ್ಣ ಅವರಿಗೆ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಅತೀವ ಒತ್ತಡವಿದೆ. ಇದನ್ನು ಪ್ರಾಮಾಣಿಕವಾಗಿ ನಿಮ್ಮ…

Read More

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ( Union Home Ministry ) ಇಂದು ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act -CAA) ನಿಯಮಗಳನ್ನು ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ಇಂದು ರಾತ್ರಿ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳು ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024 ರಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಮಹತ್ವದ ಘೋಷಣೆ ಮಾಡಿದ್ದರು. ಈ ನಿಟ್ಟಿನಲ್ಲಿ ನಿಯಮಗಳನ್ನು ಹೊರಡಿಸಿದ ನಂತರ 2019 ರಲ್ಲಿ ಜಾರಿಗೆ ಬಂದ ಈ ಕಾನೂನನ್ನು ಲೋಕಸಭಾ ಚುನಾವಣೆಗೆ ಮೊದಲು ಜಾರಿಗೆ ತರಲಾಗುವುದು. ಸಿಎಎ ಅಧಿಸೂಚನೆ ಚುನಾವಣೆಗೆ ಮೊದಲು ಬರಲಿದೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ. ನಾನು ಇದನ್ನು ಸ್ಪಷ್ಟಪಡಿಸುತ್ತೇನೆ, ಸಿಎಎ ಯಾರ ಪೌರತ್ವವನ್ನು ತೆಗೆದುಕೊಳ್ಳುವ ಕಾನೂನು ಅಲ್ಲ ಎಂದು ಅವರು ಹೇಳಿದರು.…

Read More

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಿಬಿಎಂಪಿ ವತಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಆಯೋಜಿಸಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಂತೆ 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ದವಾಗಿದ್ದು, ಉಳಿದ್ದು ಸಿದ್ದಗೊಳ್ಳುತ್ತಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ ಈಗಾಗಲೇ ಒಂದು ಉದ್ಘಾಟಿಸಲಾಗಿದೆ. ಮತ್ತೊಂದು ಇಂದಿರಾ ಕ್ಯಾಂಟೀನ್ ಇಲ್ಲಿ ಬರಲಿದೆ. ವಿಮಾನ ನಿಲ್ದಾಣದಲ್ಲಿ 2 ಇಂದಿರಾ ಕ್ಯಾಂಟೀನ್ ಬರಲಿದೆ. ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10. ರೂ.ಗಳಿಗೆ ದೊರಕಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್…

Read More

ಬೆಂಗಳೂರು: ಸಂಸದರಾದ ಅನಂತಕುಮಾರ್ ಹೆಗಡೆ ಅವರು ಸಂವಿಧಾನದ ಕುರಿತಾಗಿ ಕೊಟ್ಟ ಹೇಳಿಕೆ ಮತ್ತು ಬಿಜೆಪಿಗೆ ಯಾವುದೇ ರೀತಿಯ ಸಂಬಂಧ ಇಲ್ಲ. ರಾಷ್ಟ್ರೀಯ ನಾಯಕರು ಕೂಡ ಅದನ್ನು ಗಮನಿಸಿ ಅವರಿಂದ ಸ್ಪಷ್ಟನೆ ಕೇಳಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಕಾರ್ಯಕರ್ತರೊಬ್ಬರು ಪ್ರಧಾನಮಂತ್ರಿಯವರಿಗೆ ಅವಮಾನಕರವಾಗಿ ಹೇಳಿಕೆ ನೀಡಿದ್ದಾರೆ. ನಮ್ಮ ಪಕ್ಷದಲ್ಲಿ ಇಂಥ ಚಟುವಟಿಕೆ ಆದರೆ ಅದನ್ನು ಗಮನಿಸಿ ತಕ್ಷಣದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರು ಸಂವಿಧಾನಕ್ಕೆ ತಲೆಬಾಗಿ ನಮಿಸಿ ಸಂಸತ್ತನ್ನು ಪ್ರವೇಶ ಮಾಡಿದವರು. ಆದರೆ, ಸಂವಿಧಾನಕ್ಕೆ ಗೌರವಿಸಿ ಸಂಸತ್ ಪ್ರವೇಶಿಸಿದ ಪ್ರಧಾನಿಯವರ ಕುರಿತು ಕಾಂಗ್ರೆಸ್ ಕಾರ್ಯಕರ್ತ ಇಷ್ಟೊಂದು ಅವಹೇಳನಕಾರಿಯಾಗಿ ಮಾತನಾಡಿದಾಗ ಆತನಿಗೆ ತಿಳಿಹೇಳುವ ಮತ್ತು ಆತನ ಹೇಳಿಕೆಯನ್ನು ಖಂಡಿಸುವ ಕನಿಷ್ಠ ವರ್ತನೆಯನ್ನು ಕಾಂಗ್ರೆಸ್ಸಿನ ಯಾವ ನಾಯಕರೂ ಮಾಡಿಲ್ಲ ಎಂದು ಆಕ್ಷೇಪಿಸಿದರು. ಗೌರವಸ್ಥರಾದ ಮಲ್ಲಿಕಾರ್ಜುನ ಖರ್ಗೆಯವರಿಗೂ ಇಂಥ ಮಾತುಗಳು…

Read More