Subscribe to Updates
Get the latest creative news from FooBar about art, design and business.
Author: kannadanewsnow09
ಧಾರವಾಡ : ಧಾರವಾಡ ತಾಲ್ಲೂಕಿನ ಮರೇವಾಡ ಹಾಗೂ ಕಲಘಟಗಿ ತಾಲ್ಲೂಕಿನ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಯು ರಾಜೀನಾಮೆ ಹಾಗೂ ರದ್ದುಪಡಿಸಿದ ಪ್ರಯುಕ್ತ, ಮರೇವಾಡ ಹಾಗೂ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಖಾಲಿಯಾಗಿರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇ.ಡಿ.ಸಿ.ಎಸ್. ನಿರ್ದೆಶನಾಲಯ, ಇ-ಆಡಳಿತ ಇಲಾಖೆಯಿಂದ ಜಿಲ್ಲೆಯ ತಾಲ್ಲೂಕುಗಳ 02 ಗ್ರಾಮ್-ಒನ್ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ಆಯ್ಕೆ ಮಾಡಲು ಆನ್ ಲೈನ್ ಮೂಲಕ (https://www.karnatakaone.gov.in/…/GramOneFranchiseeTerms) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜನೆವರಿ 15, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹೆಲ್ಪ ಡೆಸ್ಕ್ ಮೊಬೈಲ್ ಸಂಖ್ಯೆ 9019026687, 9019026697, 9019026690, 9019027696 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ; ಜನವರಿ 3 ಮತ್ತು 4, 2026 ರಂದು ನಡೆಯಲಿರುವ ರಜತ ಸಾಗರೋತ್ಸವ -2026 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಳೆದ 25 ವರ್ಷಗಳಿಂದ ಈ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ನಾಳೆ, ನಾಡಿದ್ದು ಆಯೋಜಿಸಿರುವಂತ ಕಾರ್ಯಕ್ರಮಕ್ಕೆ ಸಾಗರದ ಜನತೆ ಆಗಮಿಸಿ ಯಶಸ್ವಿಗೊಳಿಸುವಂತೆ ಸಾಗರಸುತ್ತ ಪತ್ರಿಕೆಯ ಸಂಪಾದಕ ಮತ್ತು ಸಾಗರೋತ್ಸವ ಸಮಿತಿಯ ಅಧ್ಯಕ್ಷ ಜಿ. ನಾಗೇಶ್ ವಿನಂತಿಸಿಕೊಂಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಸಹೃದಯ ಬಳಗ ಮತ್ತು ತಾಲೂಕು ಇತಿಹಾಸ ವೇದಿಕೆ ವತಿಯಿಂದ ದಿನಾಂಕ 03-01-2026ರ ನಾಳೆ ರಜತ ಸಾಗರೋತ್ಸವ-2026 ಕಾರ್ಯಕ್ರಮವನ್ನು ಸಾಗರದ ಗಾಂಧಿ ಮೈದಾನದಲ್ಲಿ ನಡೆಸಲಾಗುತ್ತಿದೆ. ಈ ಕಾರ್ಯಕ್ರಮ ದಿವ್ಯ ಸಾನಿಧ್ಯವನ್ನು ಆನಂದಪುರಂನ ಮುರುಘಾಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ವಹಿಸಲಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದಿದ್ದಾರೆ. ಅಂದು ರಾಷ್ಟ್ರಮಟ್ಟದ ಸಹೃದಯ ಪ್ರಶಸ್ತಿಯನ್ನು ರಾಜಕೀಯ ಕ್ಷೇತ್ರದ ಸಾಧನೆಗಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಡಾ.ವಿದ್ವಾನ್ ಬಿಎಲ್ ನಾಗರಾಜ್, ಗುರುಗಳಾದ ವೇಣುಗೋಪಾಲ ಗುರೂಜಿ, ನಿರ್ದೇಶಕ ಡಾ.ಬ.ಲ ಸುರೇಶ್, ಕೃಷಿಕ…
ಬೆಂಗಳೂರು: UGCET-26: 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UGCET-26) ಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲಾಗುವುದು ಎಂದು ಡಾ.ಎಂ.ಸಿ ಸುಧಾಕರ್ ಘೋಷಿಸಿದರು. ಹೊರನಾಡು ಮತ್ತು ಗಡಿ ನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜನವರಿ 17ರಿಂದ ಆರಂಭವಾಗಲಿದೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಸಚಿವರು ಇತರ ಪರೀಕ್ಷೆಗಳ ವೇಳಾ ಪಟ್ಟಿಯನ್ನೂ ಪ್ರಕಟಿಸಿದರು. ಕ್ರೈಸ್ ಪರೀಕ್ಷೆ ಮಾರ್ಚ್ 1, ಪಿಜಿಸಿಇಟಿ (ಎಂಬಿಎ, ಎಂಸಿಎ) ಪರೀಕ್ಷೆ ಮೇ 14ರಂದು, ಪಿಜಿಸಿಇಟಿ (ಎಂಇ/ಎಂ.ಟೆಕ್) ಹಾಗೂ ಡಿಸಿಇಟಿ ಪರೀಕ್ಷೆಗಳು ಮೇ 23ರಂದು ನಡೆಯಲಿವೆ ಎಂದು ತಿಳಿಸಿದ್ದಾರೆ. ಎಂಎಸ್ಸಿ ನರ್ಸಿಂಗ್, ಎಂಪಿಟಿ, ಎಂ.ಎಸ್ಸಿ-ಎಎಚ್ ಎಸ್ ಪರೀಕ್ಷೆ ಗಳು ಜು.18ರಂದು, ಅಕ್ಟೋಬರ್ 11ರಂದು ಕೆಸೆಟ್ ಹಾಗೂ ನವೆಂಬರ್ 21ರಂದು ಎಂ-ಫಾರ್ಮಾ ಹಾಗೂ ಫಾರ್ಮಾ-ಡಿ ಪರೀಕ್ಷೆ ಗಳನ್ನು ನಡೆಸಲಾಗುವುದು ಎಂದು ಸಚಿವರು ಘೋಷಿಸಿದರು. ಈ ಸಂದರ್ಭದಲ್ಲಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಉನ್ನತ…
ಬಳ್ಳಾರಿ: ಈ ಹಿಂದೆ ಭರತ್ ರೆಡ್ಡಿ ತಂದೆ ಶ್ರೀರಾಮುಲು ಕೊಲೆಗೆ ಯತ್ನಿಸಿದ್ರು. ನಾರಾ ಭರತ್ ರೆಡ್ಡಿ ತಂದೆ ಬಳಿ 3 ಕೋಟಿ ಮೌಲ್ಯದ ವೆಪನ್ಸ್ ಸಿಕ್ಕಿತ್ತು. ವಾರ್ಡ್ ಗಳಲ್ಲಿ ಮಟ್ಕಾ, ಡ್ರಗ್ಸ್, ಗಾಂಜಾ ವ್ಯವಹಾರ ನಡೆಸುತ್ತಿದ್ದಾರೆ ಎಂಬುದಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಸಕ ಭರತ್ ರೆಡ್ಡಿ ಪೊಲೀಸರ ಬಳಿ ಹಫ್ತಾ ವಸೂಲಿ ಮಾಡ್ತಿದ್ದಾನೆ. ಭರತ್ ರೆಡ್ಡಿ ಮಹರ್ಷಿ ವಾಲ್ಮೀಕಿ ಬ್ಯಾನರ್ ನೆಪ ಇಟ್ಟುಕೊಂಡು ಹೀರೋ ಆಗಬಹುದು ಅಂದುಕೊಂಡಿದ್ದಾನೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ದೂರು ನೀಡುವುದಾಗಿ ಹೇಳಿದ್ದಾರೆ.
ಬೆಂಗಳೂರು : ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ, ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಂದು ನಡೆದ ಕರ್ನಾಟಕ ವನ್ಯಜೀವಿ ಮಂಡಳಿಯ 20ನೇ ಸಭೆಯಲ್ಲಿ ನಿರ್ಣಯಿಸಲಾಗಿದೆ. ಸಭೆಯಲ್ಲಿ ಅಧ್ಯಕ್ಷರ ಅನುಮತಿಯ ಮೇರೆಗೆ ಈ ವಿಷಯ ಪ್ರಸ್ತಾಪಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕಳೆದ ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಹುಲಿಗಳ ದಾಳಿಯಿಂದ ಮೂವರು ಮೃತಪಟ್ಟು ಒಬ್ಬರು ಶಾಶ್ವತ ವಿಶೇಷಚೇತನರಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ಸ್ಥಗಿತಗೊಳಿಸಲಾಗಿತ್ತು. ಈ 2 ತಿಂಗಳ ಅವಧಿಯಲ್ಲಿ ಕಾಡಿನ ಹೊರಗೆ ಹುಲಿ ದಾಳಿ ನಡೆದಿಲ್ಲ, ಯಾವುದೇ ಜೀವಹಾನಿ ಆಗಿಲ್ಲ ಎಂದು ಸಭೆಗೆ ವಿವರಿಸಿದರು. ಸಫಾರಿ ವಾಹನದ ಕಿರಿಕಿರಿಯಿಂದ, ವಾಹನಗಳ ಬೆಳಕಿನಿಂದ ವನ್ಯಜೀವಿಗಳು ಹೊರಬರುತ್ತವೆ ಎಂಬುದು ಸ್ಥಳೀಯರು ಮತ್ತು ರೈತರ ಆರೋಪವಾಗಿದೆ. ಈ ಬಗ್ಗೆ ಅಧ್ಯಯನ ನಡೆಸುವ ಅಗತ್ಯವಿದೆ…
ಬಳ್ಳಾರಿ: ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಹತ್ಯೆ ಹಿನ್ನಲೆಯಲ್ಲಿ ನಾಳೆ ಆಯೋಜಿಸಿದ್ದಂತ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತಂತೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮಾಹಿತಿ ನೀಡಿದ್ದು, ರಾಜಶೇಖರ ರೆಡ್ಡಿ ಹತ್ಯೆ ಹಿನ್ನಲೆಯಲ್ಲಿ ನಾಳೆಯ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ನಾಳೆ ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಾಳೆಯ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂದೂಡಿಕೆ ಮಾಡಲಾಗಿದೆ ಎಂದಿದ್ದಾರೆ. https://kannadanewsnow.com/kannada/first-bullet-train-to-run-on-august-15-2027-raiway-minister-ashwini-vaishnaw/ https://kannadanewsnow.com/kannada/power-outage-in-these-areas-of-bengaluru-tomorrow-from-10-am-to-5-pm/
ಮುಂಬೈ: ಭಾರತದ ಮಹತ್ವಾಕಾಂಕ್ಷೆಯ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಕೆಲಸವು ಪೂರ್ಣ ವೇಗದಲ್ಲಿ ಪ್ರಗತಿಯಲ್ಲಿದ್ದು, ಕೇಂದ್ರವು ಈಗ ಬಹುನಿರೀಕ್ಷಿತ ಸಮಯವನ್ನು ಘೋಷಿಸಿದೆ. ದೇಶದ ಮೊದಲ ಬುಲೆಟ್ ರೈಲು ಆಗಸ್ಟ್ 15, 2027 ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹೇಳಿದ್ದಾರೆ, ಇದು ಭಾರತದ ರೈಲ್ವೆ ಆಧುನೀಕರಣ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲು ಎಂದು ಗುರುತಿಸಲಾಗಿದೆ. ಈ ಘೋಷಣೆಯು, ಭಾರತವು ತನ್ನ ಮೊದಲ ಬುಲೆಟ್ ರೈಲು ಯಾವಾಗ ಕಾರ್ಯಾಚರಣೆಯನ್ನು ನೋಡುತ್ತದೆ ಎಂದು ಅನೇಕ ನಾಗರಿಕರು ಕೇಳುತ್ತಿದ್ದ ಪ್ರಶ್ನೆಗೆ ಸ್ಪಷ್ಟತೆಯನ್ನು ತಂದಿದೆ. ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಈ ಹೈಸ್ಪೀಡ್ ರೈಲು ಯೋಜನೆಯು ಮಹಾರಾಷ್ಟ್ರದ ಮುಂಬೈ ಮತ್ತು ಗುಜರಾತ್ನ ಅಹಮದಾಬಾದ್ ನಡುವಿನ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಮತ್ತು ದೇಶದಲ್ಲಿ ಜಾಗತಿಕ ಗುಣಮಟ್ಟದ ರೈಲು ಮೂಲಸೌಕರ್ಯವನ್ನು ಪರಿಚಯಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. https://twitter.com/ians_india/status/2006646954336596253 ರೈಲ್ವೆ ಸಚಿವರು 1 ನೇ ವಂದೇ ಭಾರತ್ ಸ್ಲೀಪರ್ ರೈಲನ್ನು ಪರಿಚಯ ಏತನ್ಮಧ್ಯೆ, ವೈಷ್ಣವ್ ಭಾರತದ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಬರುವ ಹಬ್ಬ, ಜಯಂತಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜೊತೆ ಜೊತೆಗೆ ಈ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2026ನೇ ಸಾಲಿನ ಜಯಂತಿಗಳನ್ನು ಆಚರಣೆ ಮಾಡುವ ಕುರಿತಂತೆ ಪಟ್ಟಿ, ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಜಯಂತಿಗಳ ಆಚರಣೆ ಮಾರ್ಗ ಸೂಚಿಗಳು 1. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜಯಂತಿಗಳನ್ನು ಅರ್ಥ ಪೂರ್ಣವಾಗಿ ಆಚರಿಸುವುದು. 2. ಜಿಲ್ಲಾಧಿಕಾರಿಗಳು ಅಥವಾ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯಾ ಜಯಂತಿಗೆ ಸಂಬಂಧಿಸಿದಂತೆ ಎಲ್ಲಾ ಸಮಾಜಗಳ ಮುಖಂಡರು ಮತ್ತು ಸಂಘ ಸಂಸ್ಥೆಯ ಪದಾಧಿಕಾರಿಗಳನ್ನು ಸಭೆಗೆ ಆಹ್ವಾನಿಸಿ ಪೂರ್ವ ಸಿದ್ಧತ ಮಾಡಿಕೊಳ್ಳವುದು. 3. ಆಹ್ವಾನ ಪತ್ರಿಕ, ಕರಪತ್ರ, ಬ್ಯಾನರ್, ವೇದಿಕೆ ವಿನ್ಯಾಸ, ಭಾವಚಿತ್ರದ ವ್ಯವಸ್ಥೆ, ಹೂವಿನ ಹಾರ, ಪೂಜಾ ವ್ಯವಸ್ಥೆ, ಫೋಟೋ, ವೇದಿಕೆಗೆ ಸಂಬಂಧಿಸಿದ ಇತರ ವ್ಯವಸ್ಥೆಯನ್ನು ಜಯಂತಿಯ ಅನುದಾನದಿಂದ ಭರಿಸುವುದು. ಸ್ವಯಂ ಪ್ರೇರಿತರಾಗಿ ಪ್ರಾಯೋಜಕರು ಮುಂದೆ ಬಂದಲ್ಲಿ ಸದರಿಯವರ ಸೇವೆಯನ್ನು…
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025 ಅನ್ನು ಅಧಿಸೂಚಿಸಲಾಗಿದ್ದು, ಈ ನಿಯಮಗಳನ್ವಯ, ಈ ಹಿಂದೆ ಇದ್ದ ಇ-ಸ್ವತ್ತು ತಂತ್ರಾಂಶವನ್ನು ಮಾರ್ಪಡಿಸಿ ಚಾಲನೆಗೊಳಿಸಲಾಗಿದೆ, ತಂತ್ರಾಂಶದಲ್ಲಿ ಈವರೆಗೂ ಒಟ್ಟು 8886 ಅರ್ಜಿಗಳನ್ನು ಆನ್ಲೈನ್ ಮೂಲಕ ಸ್ವೀಕರಿಸಲಾಗಿದ್ದು, ತಂತ್ರಾಂಶ ಸಿದ್ಧಪಡಿಸಿರುವ ಎನ್.ಐ.ಸಿ ತಂತ್ರಾಂಶದ ದೋಷದಿಂದಾಗಿ ಕೆಲಮೊಂದು ಅರ್ಜಿಗಳನ್ನು ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳನ್ನು ಸರಿಪಡಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶವನ್ನು ನಿಯಮಗಳನ್ವಯ ಮಾರ್ಪಡು ಮಾಡಲಾಗಿದ್ದು, ಸಾರ್ವಜನಿಕರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಲಾಗಿನ್ ಸೃಜಿಸಲಾಗಿರುತ್ತದೆ. ಇ-ಸ್ವತ್ತು 2.0 ತಂತ್ರಾಂಶವನ್ನು ʼಭೂಮಿʼ, ʼಕಾವೇರಿʼ ʼಪಂಚತಂತ್ರʼ ʼಮೋಜಿಣಿʼ ಹಾಗೂ ಎಸ್ಕಾಂಗಳ ತಂತ್ರಾಂಶಗಳೊಂದಿಗೆ ಸಂಯೋಜಿಸಲಾಗಿರುತ್ತದೆ. ಸದರಿ ಸಂಯೋಜನೆಯಿಂದ ತಾಂತ್ರಿಕ ಸಮಸ್ಯೆಗಳು/API ಸಮಸ್ಯೆಗಳು ಉಂಟಾಗಿದೆ ಎಂದೂ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರ”ವ್ಯಾಪ್ತಿಯಲ್ಲಿ ದಿನಾಂಕ 03.01.2026 (ಶನಿವಾರ) ರಿಂದ ದಿನಾಂಕ 10.01.2026 ರವರೆಗೆ ಬೆಳಗ್ಗೆ 09:00 ಗಂಟೆಯಿಂದ ಸಂಜೆ 05:30 ಗಂಟೆವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೆಣ್ಣೂರು ಬಂಡೆ, ಸಾಮುದ್ರಿಕಾ ಎನ್ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜು, ಕೆ ನಾರಾಯಣಪುರ, ಬಿಳೀಶಿವಲೆ, ಆಶಾ ಟೌನ್ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್ಶಿಪ್, ನಗರಗಿರಿ ಟೌನ್ಶಿಪ್, ಕೆ ನಾರಾಯಣಪುರ ಕ್ರಾಸ್, ಬಿಡಿಎಸ್ ಗಾರ್ಡನ್, ಕೊತ್ತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿಎಸ್ಐ ಗೇಟ್, ಬೈರತಿ ಕ್ರಾಸ್, ಬೈರತಿ ಗ್ರಾಮ, ಎವರ್ಗ್ರೀನ್ ಲೇಔಟ್, ಕನಕಶ್ರೀ ಲೇಔಟ್, ಗೆದ್ದಲಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ್ ಲೇಔಟ್, ಟ್ರಿನಿಟಿ ಫಾರ್ಚ್ಯೂನ್, ಮೈಕಲ್ ಸ್ಕೂಲ್, ಬಿಎಚ್ಕೆ ಇಂಡಸ್ಟ್ರೀಸ್, ಜಾನಕಿರಾಮ್ ಲೇಔಟ್, ವಡ್ಡರಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ (ಬೈರತಿ ಗ್ರಾಮ), ಕೆಆರ್ಸಿ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್,…














