Author: kannadanewsnow09

ಬೆಂಗಳೂರು: SIT ಅಧಿಕಾರಿಗಳು CDಶಿವುನ ಹಿಡಿದು ಡ್ರಿಲ್ ಮಾಡಿದರೆ ಸತ್ಯ ತಾನಾಗಿಯೇ ಆಚೆ ಬರುತ್ತದೆ. ರಾಜ್ಯದ ಜನ ಶೀಘ್ರದಲ್ಲಿಯೇ ‘CD ಶಿವು ಎಲ್ಲಿದ್ದಿಯಪ್ಪ?’ ಎಂದು ಕೇಳುವ ದಿನವೂ ದೂರವಿಲ್ಲ ಎಂಬುದಾಗಿ ಜೆಡಿಎಸ್ ವಾಗ್ಧಾಳಿ ನಡೆಸಿದೆ. ಇಂದು ಎಕ್ಸ್ ಮಾಡಿರುವಂತ ಜೆಡಿಎಸ್ ಪಕ್ಷವು, ಪ್ರಜ್ವಲ್ ಎಲ್ಲಿರಬಹುದು ಎನ್ನುವ ವಿಷಯ ನಿಮ್ಮ CDಶಿವುಗೆ ಬಹಳ ಚೆನ್ನಾಗಿಯೇ ಗೊತ್ತಿದೆ. ಅವರನ್ನೇ ಕೇಳಿದರೆ ಉತ್ತಮವಲ್ಲವೇ? ಸಖ್ಯ ಮತ್ತು ಸೌಖ್ಯದ ಬಗ್ಗೆ ಅವರಿಗಿಂತ ಬಲ್ಲವರು ಉಂಟೇ ಕಪಟ ಕಾಂಗಿಗಳೇ? ಎಂದು ಪ್ರಶ್ನಿಸಿದೆ. SIT ಅಧಿಕಾರಿಗಳು CDಶಿವುನ ಹಿಡಿದು ಡ್ರಿಲ್ ಮಾಡಿದರೆ ಸತ್ಯ ತಾನಾಗಿಯೇ ಆಚೆ ಬರುತ್ತದೆ. #Shivakumar_Investigation_Team ಗೇ ಗೊತ್ತಿಲ್ಲವೆಂದರೆ ಅದು ಶತಮಾನದ ಜೋಕಷ್ಟೇ ಅಲ್ಲ, CDಶಿವು ಪೂರ್ವಾಶ್ರಮಕ್ಕೆ ಮಾಡಿದ ಘೋರ ಅಪಚಾರ! ಈ ಶತಮಾನ ಕಂಡು ಕೇಳರಿಯದ ಸೋಜಿಗ ಅಂತ ತಿಳಿಸಿದೆ. ಪೆನ್ ಡ್ರೈವ್ ಫ್ಯಾಕ್ಟರಿ ಒರಿಜಿನಲ್ ಓನರ್, CD ಸಂಚುಕೋರ CDಶಿವು ಕಣ್ಸನ್ನೆಯಂತೆ ಅವರ ಚೇಲಾಗಳು ನಡೆಸಿದ ಪೆನ್ ಡ್ರೈವ್ ಸಮಾರಾಧನೆ ಯಾರಿಗೆ ಗೊತ್ತಿಲ್ಲ ಹೇಳಿ?…

Read More

ಹುಬ್ಬಳ್ಳಿ: ರಾಜ್ಯದಲ್ಲಿ ಅಮಾಯಕ ಹೆಣ್ಣು ಮಕ್ಕಳ ಹತ್ಯೆಯಾದರೂ ಈ ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಬೀದರ್ ನಲ್ಲಿ ಇಂದು ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2024, ಈಶಾನ್ಯ ಪದವೀಧರ ಕ್ಷೇತ್ರ ಬಿಜೆಪಿ– ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದರು. ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಅಮಾಯಕ ಹೆಣ್ಣುಮಕ್ಕಳ ಜೀವ ಬಲಿಯಾಗುತ್ತಿದ್ದರು ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ಯಾರೆ ಎನ್ನುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದೆಲ್ಲೆಡೆ ಮಹಿಳೆಯರಿಗೆ ಸುರಕ್ಷತಾ ಭಾವ ಇಲ್ಲದಾಗಿದೆ. ಜೀವಕ್ಕೆ ಗ್ಯಾರೆಂಟಿ ಇರದಂತಹ ಘಟನೆಗಳು ಘಟಿಸುತ್ತಿದ್ದರು ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಪೊಲೀಸರು ಬಹುಶಃ ಸರ್ಕಾರದ ಕೈಗೊಂಬೆ ಎಂಬಂತೆ ಕೆಲಸ ಮಾಡುತ್ತಿದ್ದರೇನೋ ಅನಿಸುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ಘಟನೆಗಳನ್ನು ನೋಡಿ ಸಾರ್ವಜನಿಕರೇ ಈ ರೀತಿ ಶಂಕೆ ವ್ಯಕ್ತಪಡಿಸುತ್ತಿದ್ದಾರೆ ಎಂದರು. ಮಾದಕ ವಸ್ತು ಮಾರಾಟ: ಕಾಲೇಜುಗಳ ಹತ್ತಿರ ರಾಜಾರೋಷವಾಗಿ ಮಾದಕ…

Read More

ಮಹಾರಾಷ್ಟ್ರ: ಮಹಾರಾಷ್ಟ್ರ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ (ಎಂಐಡಿಸಿ) ಪ್ರದೇಶದಲ್ಲಿರುವ ಡೊಂಬಿವಿಲಿಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡು ನಾಲ್ವರು ಸಾವನ್ನಪ್ಪಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದಂತೆ ನಾಲ್ಕಕ್ಕೂ ಹೆಚ್ಚು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿವೆ. ”ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಸಚಿವ ಉದಯ್ ಸಮಂತ್ ಹೇಳಿದ್ದಾರೆ” ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. https://twitter.com/PTI_News/status/1793567983694201121 ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವೀಸ್ ಡೊಂಬಿವಿಲಿ ಅಗ್ನಿ ದುರಂತದ ಬಗ್ಗೆ ಟ್ವೀಟ್ ಮಾಡಿದ್ದಾರೆ. “ಡೊಂಬಿವಿಲಿ ಎಂಐಡಿಸಿಯ ಅಮುದನ್ ಕೆಮಿಕಲ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಘಟನೆ ದುರಂತ. 8 ಜನರನ್ನು ಅಮಾನತುಗೊಳಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ ಮತ್ತು ಹೆಚ್ಚಿನ ಆಂಬ್ಯುಲೆನ್ಸ್‌ಗಳನ್ನು ಸಿದ್ಧಪಡಿಸಲಾಗಿದೆ. ನಾನು ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿದ್ದೇನೆ ಮತ್ತು ಅವರು ಸಹ ತಲುಪುತ್ತಿದ್ದಾರೆ. 10 ನಿಮಿಷಗಳಲ್ಲಿ ಸ್ಥಳಕ್ಕೆ ಎನ್‌ಡಿಆರ್‌ಎಫ್, ಟಿಡಿಆರ್‌ಎಫ್, ಅಗ್ನಿಶಾಮಕ ದಳಗಳು ಧಾವಿಸಿ, ಬೆಂಕಿ ನಂದಿಸೋ ಕಾರ್ಯದಲ್ಲಿ, ಪರಿಹಾರ ಕಾರ್ಯದಲ್ಲಿ ತೊಡಗಿದ್ದಾವೆ…

Read More

ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಹಿರಿಯೂರು ಬಳಿಯಲ್ಲಿ ಲಾರಿ, ಬಾಸ್, ಟಾಟಾ ಏಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಸ್ ನಿಲ್ದಾಣದ ಬಳಿಯಲ್ಲಿ ಟಾಟಾ ಏಸ್, ಬಸ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೂ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಳಿಯಲ್ಲಿ ನಡೆದಂತ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಹಿರಿಯೂರು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/hd-deve-gowda-gave-the-last-warning-to-prajwal-admonishment-to-appear-before-sit/ https://kannadanewsnow.com/kannada/big-shock-for-prajwal-revanna-passport-cancellation-process-started-arrest-soon/

Read More

ಬೆಂಗಳೂರು: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದು ವಿಶೇಷ ತನಿಖಾ ತಂಡದ ಎದುರು ಹಾಜರಾಗುವಂತೆ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ತಾಕೀತು ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು; ನನ್ನ ಮೇಲೆ ಗೌರವ ಇದ್ದರೆ ತಕ್ಷಣವೇ ವಾಪಸ್ ಮರಳಿ ಬಾ ಎಂದು ಪ್ರಜ್ವಲ್ ಗೆ ತಾಕೀತು ಮಾಡಿದ್ದಾರಲ್ಲದೆ, ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ ಎಂದು ತಿಳಿಸಿದ್ದಾರೆ. ಅವರ ಹೇಳಿಕೆಯ ಪೂರ್ಣ ಪಾಠ ಈ ಕೆಳಕಂಡಂತಿದೆ; ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು.…

Read More

ಶಿವಮೊಗ್ಗ: ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ತೆಜೋವಧೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ತೇಜೋವಧೆ ಮಾಡಿದ ಆರೋಪಿಯ ವಿರುದ್ಧ ಕಾನೂನು ಕ್ರಮಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ C M. ಚಿನ್ಮಯ್  ಸಾಗರ ಪೇಟೆ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಇಂದು ಸಾಗರ ಪೇಟೆ ಪೊಲೀಸ್ ಠಾಣೆಗೆ ತೆರಳಿದಂತ ಸಿಎಂ ಚಿನ್ಮಯ್ ಅವರು, ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರೂ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ವೀಡಿಯೋವೊಂದು ಸಾಮಾಜಿಕ ಜಾಲ ತಾಣಗಳಲ್ಲಿ ಸಕ್ಕತ್ತಾಗಿ ವೈರಲ್…

Read More

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದ ನಂತ್ರ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕಾಗಿ ಎಸ್ಐಟಿ ಅಧಿಕಾರಿಗಳು ಕಾದು ಕುಳಿತಿದ್ದಾರೆ. ಇದರ ನಡುವೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣಗೆ ಎಚ್ಚರಿಕೆ ನೀಡಿ, ಪತ್ರ ಬರೆದಿದ್ದಾರೆ. ಅದರಲ್ಲಿ ಏನಿದೆ ಅಂತ ಮುಂದೆ ಓದಿ. ಈ ಸಂಬಂಧ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ ಅಂತ ಪತ್ರ ಬರೆದಿದ್ದಾರೆ. ಅದರಲ್ಲಿ ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ…

Read More

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯದ ಭಾವುಟ ಹಾರಿಸಿ, ಕಣಕ್ಕೆ ಇಳಿದಿದ್ದಂತ ನೈರುತ್ಯ ಪದವೀಧರರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಶಿವಮೊಗ್ಗದ ಎಸ್.ಪಿ ದಿನೇಶ್ ಸೇರಿದಂತೆ ಐವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಅವರು ಆದೇಶಿಸಿದ್ದು, ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಎಸ್.ಪಿ ದಿನೇಶ್ ಕುಮಾರ್, ಬೆಂಗಳೂರು ಪದವೀಧರರ ಕ್ಷೇತ್ರದ ಫರ್ನಾಂಡಿಸ್ ಲಾರೆನ್ಸ್, ನೈರುತ್ಯ ಶಿಕ್ಷಕರ ಕ್ಷೇತ್ರದ ಚಿಕ್ಕಮಗಳೂರಿನ ಬಿಆರ್ ನಂಜೇಶ್, ಆಗ್ನೇಯ ಶಿಕ್ಷಕರ ಕ್ಷೇತ್ರದ ಚಿತ್ರದುರ್ಗದ ಲೋಕೇಶ್ ತಾಳಿಕಟ್ಟೆ, ಬೆಂಗಳೂರಿನ ವಿನೋದ್ ಶಿವರಾಜ್ ಅವರನ್ನು ಉಚ್ಛಾಟಿಸಿ ಆದೇಶಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದರಿಂದ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಿರೋದಾಗಿ ತಿಳಿಸಿದ್ದಾರೆ. https://kannadanewsnow.com/kannada/shimoga-power-outage-in-these-areas-of-the-district-on-may-25/ https://kannadanewsnow.com/kannada/good-news-for-the-farmers-of-the-state-cm-instructs-not-to-discharge-drought-relief-amount-for-loan/

Read More

ಬೆಂಗಳೂರು: ರಾಜ್ಯಾಧ್ಯಂತ ಕುಡಿಯುವ ನೀರು ಟೆಸ್ಟ್ ಮಾಡಿ ಪೂರೈಕೆ ಮಾಡಿ. ಯಾವುದೇ ಕಾರಣಕ್ಕೂ ಕಾಲರಾ ಹೆಚ್ಚಾಗದಂತೆ, ಅಸ್ವಸ್ಥತೆಯ ಪ್ರಕರಣಗಳು ವರದಿಯಾಗದಂತೆ ಎಚ್ಚರಿಕೆ ವಹಿಸುವಂತೆ ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ವಾಡಿಕೆಗಿಂತ ಹೆಚ್ಚು ಮಳೆ ಮೇ ತಿಂಗಳಲ್ಲಿ ಆಗಿದೆ. ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ ಎಂದರು. ಮೇ ತಿಂಗಳಲ್ಲಿ ಗುರಿ 2.95 ಲಕ್ಷ ಹೆಕ್ಟೇರ್‌ ಪ್ರದೇಶ. ಸಾಧನೆಯಾಗಿರುವುದು 68,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದೆ ಎಂದು ಹೇಳಿದರು. ಜೂನ್‌ 6…

Read More

ಶಿವಮೊಗ್ಗ : ಸಂತೇಕಡೂರು ಗ್ರಾಮದ 66/11 ಕೆವಿ ವಿ.ವಿ.ಕೇಂದ್ರದ ಎಫ್-2 ಮತ್ತು ಎಫ್-4ರ ಮಾರ್ಗಗಳ ವ್ಯಾಪ್ತಿಯಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ -25 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರ ವರಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಮಳಲಿಕೊಪ್ಪ, ಭಂಡಾರಿಕ್ಯಾಂಪ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಮಾಜಿ ಸೈನಿಕರ ವಿವರಗಳ ತಿದ್ದುಪಡಿಗೆ ಅವಕಾಶ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪನರ್ವಸತಿ ಇಲಾಖೆಯು ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರು ಕುಟುಂಬ ಪಿಂಚಣಿ ಪಡೆಯುವಲ್ಲಿ, ಇತರೆ ದೃಢೀಕರಣ ಪತ್ರಗಳು, ಇನ್ನಿತರೆ ಸೌಲಭ್ಯಗಳನ್ನು ಪಡೆಯುವಲ್ಲಿ ಅಡಚಣೆ ಹಾಗೂ ವಿಳಂಬತೆಯಾಗುತ್ತಿರುವುದರಿಂದ ಸೇನಾ ಸೇವಾ ಪುಸ್ತಕದಲ್ಲಿ ತಮ್ಮ ವೈಯಕ್ತಿಕ ವಿವರಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಿದೆ. ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರು ಸೇನಾ ಸೇವಾ ಪುಸ್ತಕದಲ್ಲಿ ಪತಿ, ಪತ್ನಿ ಹಾಗೂ ಮಕ್ಕಳ ಹೆಸರುಗಳನ್ನು ಆಧಾರ್ ಎಸ್.ಎಸ್.ಎಲ್.ಸಿ ಪಟ್ಟಿಯೊಂದಿಗೆ ಹೊಂದಾಣಿಕೆಯಾಗುವಂತೆ…

Read More