Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹತ್ಯೆ ಮತ್ತು ಆತ್ಮಹತ್ಯೆ ಕಾಂಗ್ರೆಸ್ ಸರಕಾರದ ಸಾಧನೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸಿ ಸಂಭ್ರಮಾಚರಣೆಯನ್ನೂ ಮಾಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಿಗೆ ಹತ್ತಾರು ಪ್ರಶ್ನೆಗಳನ್ನು ಕೇಳಲು ಬಯಸುತ್ತೇನೆ ಎಂದು ನುಡಿದರು. ಈ ಸರಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಜೈನ ಮುನಿಗಳ ಹತ್ಯೆಯಿಂದ ಆರಂಭಗೊಂಡು ತಿಂಗಳಿಗೆ ಶತಕಗಳ ಗಡಿಯನ್ನು ಹತ್ಯೆ- ಆತ್ಮಹತ್ಯೆಯಲ್ಲಿ ದಾಟಿದೆ ಎಂದು ಆಕ್ಷೇಪಿಸಿದರು. ಸಾವಿರಕ್ಕೂ ಹೆಚ್ಚು ಹತ್ಯೆ, ಸಾವಿರಕ್ಕೂ ಹೆಚ್ಚು ಆತ್ಮಹತ್ಯೆ ಸರಕಾರದ ಸಾಧನೆಯೇ ಎಂದು ಅವರು ಕೇಳಿದರು. ನ್ಯಾಷನಲ್ ಕ್ರೈಂ ಬ್ಯೂರೋ ರೆಕಾಡ್ರ್ಸ್ ಪ್ರಕಾರ ಕಳೆದ 4 ತಿಂಗಳಲ್ಲಿ ಕರ್ನಾಟಕದಲ್ಲಿ 430ಕ್ಕೂ ಹೆಚ್ಚು ಕೊಲೆಗಳು ನಡೆದಿವೆ ಎಂದು ವರದಿ ಹೇಳುತ್ತದೆ. ಕಳೆದ 10 ತಿಂಗಳಲ್ಲಿ 700ಕ್ಕೂ ಹೆಚ್ಚು ರೈತರ ಆತ್ಮಹತ್ಯೆ ಆಗಿದೆ ಎಂದು ಸರಕಾರದ…
ಬೆಂಗಳೂರು: ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಿದ್ದೇ ಆದಲ್ಲಿ ಮುಂದಾಗೋ ಅನಾಹುತಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗುಡುಗಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ದಕ್ಷಿಣ ಕನ್ನಡದಲ್ಲಿ ಕಾನೂನು- ಸುವ್ಯವಸ್ಥೆ ಸುಗಮವಾಗಿ ಹೋಗುತ್ತಿರುವ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುವುದನ್ನು ಸಹಿಸಲು ಅಸಾಧ್ಯ ಎಂದು ಅವರು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು. ಪೊಲೀಸರು ಕಾನೂನು- ಸುವ್ಯವಸ್ಥೆ ಹದಗೆಡಲು ಕುಮ್ಮಕ್ಕು ನೀಡುತ್ತಿದ್ದಾರೆ. ಶಾಸಕರ ಮೇಲೆ ಕ್ರಮ ಸಲ್ಲದು; ವಿನಾಕಾರಣ ನಮ್ಮ ಕಾರ್ಯಕರ್ತರ ಮೇಲೆ ಎಫ್‍ಐಆರ್ ದಾಖಲಿಸಿದ್ದು, ಅವರನ್ನು ಬಿಡುಗಡೆ ಮಾಡಿ ಎಂದು ಆಗ್ರಹಿಸಿದರು. ಇತ್ತೀಚೆಗೆ ಅಕ್ರಮ ಕ್ವಾರಿ ವಿಚಾರವಾಗಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಈ ವಿಚಾರವಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧನ ಮಾಡಲು ಪೊಲೀಸರು ಪ್ರಯತ್ನ ಮಾಡುತ್ತಿರುವುದು ಖಂಡನೀಯ ಎಂದು ತಿಳಿಸಿದರು. ಶಾಸಕರ ಬಂಧನ ಪ್ರಯತ್ನದಿಂದ ಉತ್ತಮ ಸಂದೇಶ ರಾಜ್ಯಕ್ಕೆ ಹೋಗುವುದಿಲ್ಲ ಎಂದು ಅವರು ನುಡಿದರು. ದಕ್ಷಿಣ…
ನವದೆಹಲಿ: ದೆಹಲಿಯ ನಾರ್ತ್ ಬ್ಲಾಕ್ನಲ್ಲಿರುವ ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬಗ್ಗೆ ಇಮೇಲ್ ಬೆದರಿಕೆ ಬಂದಿದೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ದೆಹಲಿಯ ನಾರ್ತ್ ಬ್ಲಾಕ್ನಲ್ಲಿರುವ ಗೃಹ ಸಚಿವಾಲಯದ (ಎಂಎಚ್ಎ) ಕಚೇರಿಗೆ ಬಾಂಬ್ ಬಗ್ಗೆ ಇಮೇಲ್ ಬೆದರಿಕೆ ಬಂದಿದೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಅಗ್ನಿಶಾಮಕ ಟೆಂಡರ್ ಗಳೊಂದಿಗೆ ಬಾಂಬ್ ನಿಷ್ಕ್ರಿಯ ದಳದ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. https://twitter.com/ANI/status/1793244757931806980 https://kannadanewsnow.com/kannada/phone-tapping-not-done-siddaramaiah-on-hdks-allegation/ https://kannadanewsnow.com/kannada/give-top-priority-to-bengalurus-beauty-cm-siddaramaiah-during-city-rounds/
ಬೆಂಗಳೂರು: ನಾವು ಯಾವುದೇ ಪೋನ್ ಟ್ಯಾಪಿಂಗ್ ಮಾಡಿಲ್ಲ. ಮಾಡೋದು ಇಲ್ಲ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪ ಎಲ್ಲ ಸುಳ್ಳು. ನಿರಾಧಾರವಾಗಿದೆ ಅಂತ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದ ಬಳಿಕ, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೃಷ್ಣಾದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಲೋಕಸಭೆಯ ನಂತರ ಬಿಬಿಎಂಪಿ ಚುನಾವಣೆ ಬಗ್ಗೆ ಚಿಂತನೆ ಬಿಬಿಎಂಪಿ ಚುನಾವಣೆ ಬಗ್ಗೆ ಲೋಕಸಭೆ ಫಲಿತಾಂಶದ ನಂತರ ಚಿಂತಿಸಲಾಗುವುದು ಎಂದರು. ಸುಳ್ಳು ಹೇಳುತ್ತಾರೆ ಸಿಎಂ , ಡಿಸಿಎಂ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ ಎಂದು ಬಿಜೆಪಿಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆರ್. ಅಶೋಕ್ ಕೇವಲ ಸುಳ್ಳು ಹೇಳುತ್ತಾರೆ ಎಂದರು. ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ ನಮ್ಮ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು.…
ಬೆಂಗಳೂರು: ನಗರದಲ್ಲಿ BBMP, BWSSB, BDA, BESCOM ಪರಸ್ಪರ ಸಹಯೋಗದಿಂದ ಕೆಲಸ ಮಾಡುವಂತೆ ಸಿಎಂ ಸಿದ್ದದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಇಂದು ಬೆಂಗಳೂರು ಸಿಟಿ ರೌಂಡ್ಸ್ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರಾಮಲಿಂಗಾರೆಡ್ಡಿ ಬಿಡಿಎ ಅಧ್ಯಕ್ಷರು, ಆಯುಕ್ತರು ಸೇರಿ ಅಧಿಕಾರಿಗಳ ತಂಡದ ಜೊತೆ ಅನೇಕ ಪ್ರದೇಶಗಳಿಗೆ ಭೇಟಿ ನೀಡಿದೆವು. ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿ ಗೆ ನೀರು ಹೋಗಲು ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಗಾಳಿ ಆಂಜನೇಯ ದೇವಾಲಯದ ಬಳಿ ಮಳೆ ಜಾಸ್ತಿಯಾದಾಗ ನೀರು ಹರಿಯಲು ಎತ್ತರ ಸಾಲಲ್ಲ, ಹೂಳು…
ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಕೋರ್‍ಕಮಿಟಿ ಸಭೆ ಆರಂಭವಾಗಿದೆ. ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಎಂಎಲ್ಸಿ ಚುನಾವಣೆಯಲ್ಲಿ ಗೆಲುವಿನ ಕಾರ್ಯತಂತ್ರ ರೂಪಿಸೋ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ. ಅಲ್ಲದೇ 11 ಪರಿಷತ್ ಸ್ಥಾನಗಳಿಗೂ ಅಭ್ಯರ್ಥಿಗಳ ಹೆಸರು ಫೈನಲ್ ಮಾಡೋ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ|| ಸಿ.ಎನ್. ಅಶ್ವತ್ಥನಾರಾಯಣ, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಪುದುಚೇರಿ ರಾಜ್ಯ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾಣ ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಅವರು ಉಪಸ್ಥಿತರಿದ್ದರು. https://kannadanewsnow.com/kannada/grihalakshmi-became-the-light-of-the-lives-of-the-poor-congress/ https://kannadanewsnow.com/kannada/give-top-priority-to-bengalurus-beauty-cm-siddaramaiah-during-city-rounds/
ಬೆಂಗಳೂರು: ಗೃಹ ಲಕ್ಷ್ಮೀ ಯೋಜನೆ ರಾಜ್ಯದ ಯಜಮಾನಿ ಮಹಿಳೆಯರ ಬಡವರ ಬಾಳಿನ ಬೆಳಕಾಯಿತು. ಈ ಮೂಲಕ ಅವರ ಅಗತ್ಯತೆಗಳನ್ನು ಈಡೇರಿಸಿಕೊಳ್ಳೋದಕ್ಕೆ ಅನುಕೂಲವಾಗಿದೆ ಅಂತ ಕರ್ನಾಟಕ ಕಾಂಗ್ರೆಸ್ ಹೇಳಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಬಡವರ ಬಾಳಿನ ಬೆಳಕಾಯಿತು “ಗೃಹಲಕ್ಷ್ಮಿ“. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸಕ್ಕುಬಾಯಿಯವರು 10 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಕೊಂಡು ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ ಎಂದು ಹೇಳಿದೆ. ಗೃಹಲಕ್ಷ್ಮಿ ಹಣದಿಂದ ಬಡವರು ಟಿವಿ, ಫ್ರಿಡ್ಜ್ ನಂತಹ ಸಣ್ಣ ಸಣ್ಣ ಕನಸುಗಳನ್ನು ಈಡೇರಿಸಿಕೊಳ್ಳುವುದು, ಶಿಕ್ಷಣಕ್ಕೆ ನೆರವಾಗುತ್ತಿರುವುದು, ಚಿಕಿತ್ಸೆಗೆ ಸಹಕಾರಿಯಾಗುತ್ತಿರುವುದು ನಮ್ಮಲ್ಲಿ ಸಾರ್ಥಕ ಭಾವ ಮೂಡುತ್ತಿದೆ ಎಂದು ತಿಳಿಸಿದೆ. ಜನ ಕೇಂದ್ರಿತ ಅಭಿವೃದ್ಧಿ ಎಂದರೆ ಇದೇ, ಜನರ ಬದುಕಲ್ಲಿ ಸರ್ಕಾರದ ಯೋಜನೆಯೊಂದು ನಿರಾಳತೆ ನೀಡುವುದೇ ನೈಜ ಯಶಸ್ಸು ಅಂತ ಹೇಳಿದೆ. https://twitter.com/INCKarnataka/status/1793221375433290178 https://kannadanewsnow.com/kannada/rcb-cancels-net-practice-after-virat-kohli-receives-threat-in-gujarat/ https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/
ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಮಳೆಯಿಂದ ಬೆಂಗಳೂರಲ್ಲಿ ಅವಾಂತರದ ಮುನ್ಸೂಚನೆ ದೊರೆಯುತ್ತಿದ್ದಂತೇ, ಸಿಟಿ ರೌಂಡ್ಸ್ ನಡೆಸಿದರು. ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ರೌಂಡ್ ಹೊಡೆದ್ರು. ಹಾಗಾದ್ರೇ ಎಲ್ಲೆಲ್ಲಿಗೆ ಭೇಟಿ ನೀಡಿದ್ರು.? ಬೆಂಗಳೂರು ಸಿಟಿ ರೌಂಡ್ಸ್ ಹೈಲೈಟ್ಸ್ ಏನು ಅಂತ ಮುಂದೆ ಓದಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಂದು ಬೆಂಗಳೂರು ಸಿಟಿ ರೌಂಡ್ಸ್ ಮಾಡಿದ್ರು. ನಾನಾ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾಗುವ ಪ್ರದೇಶಗಳಿಗೆ ಭೇಟಿ ಮಾಹಿತಿ ಪಡೆದರು. ಸ್ಪಾಟ್-1 ಸ್ಥಳ: ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವಿಧಾನಸಭಾ ಕ್ಷೇತ್ರ: ವಿಜಯನಗರ ಯಾವ ವಾರ್ಡ್: ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವಾರ್ಡ್ ಸಮಸ್ಯೆ ಏನು: ಗಾಳಿ ಆಂಜನೇಯ ದೇವಸ್ಥಾನ ಸಮೀಪದ ರಾಜಕಾಲುವೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಉಂಟಾಗುತ್ತಿದೆ. ಮುಖ್ಯಮಂತ್ರಿಗಳ ಸೂಚನೆ ಏನು: ಇದಕ್ಕೆ ಸಮಾನಾಂತರವಾಗಿ ಇನ್ನೊಂದು ಕಾಲುವೆ ನಿರ್ಮಿಸುವುದರಿಂದ ಪ್ರವಾಹ ತಗ್ಗಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಪ್ರವಾಹ ನಿಯಂತ್ರಣ ಕಾಮಗಾರಿಗೆ 11.5…
ಬೆಂಗಳೂರು: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಅವರ ಪುತ್ರಿ ನಿಶಾ ಸಿಡಿದೆದ್ದಿದ್ದಾರೆ. ತಮ್ಮ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯೊಬ್ಬರು ಹಾಕಿದ್ದಂತ ಕಾಮೆಂಟ್ ಗೆ ಕಣ್ಣೀರಿಡುತ್ತಲೇ, ತಂದೆಯ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅದೇನು ಅಂತ ಮುಂದೆ ಓದಿ. ಸೋಷಿಯಲ್ ಮೀಡಿಯಾದಲ್ಲಿ ನಿಶಾಗೆ ನೀವು ಯಾಕೆ ನಿಮ್ಮ ತಂದೆಯ ಹೆಸರು ತೆಗೆದು ಕೆಲಸ ಮಾಡಬಾರದು ಅಂತ ಕಾಮೆಂಟ್ ಹಾಕಿದ್ದರು. ಇದಕ್ಕೆ ಲೈವ್ ವೀಡಿಯೋ ಮಾಡಿದಂತ ಅವರು, ನಾನು 10 ವರ್ಷ ಇದ್ದಾಗಲೇ ನನ್ನ ತಂದೆ ನನ್ನಿಂದ ದೂರು ಹೋಗಿದ್ರು, ಚುನಾವಣೆ ವೇಳೆಯಲ್ಲಿ ನನ್ನನ್ನು ಕರೆಯುತ್ತಾ ಇದ್ರು. ಆಗ ನಮ್ಮ ತಂದೆ ಪರ ಪ್ರಚಾರಕ್ಕೆ ಹೋಗ್ತಿದ್ದೆ ಎಂದು ಹೇಳಿಕೊಂಡಿದ್ದಾರೆ. ನಾನು ನನ್ನ ತಂದೆ ದೂರವಾದ 24 ವರ್ಷಗಳ ಬಳಿಕ ಅವರನ್ನ ನೋಡುತ್ತಿದ್ದೇನೆ. ಚುನಾವಣೆ ಟೈಮ್ ನಲ್ಲಿ ಮನೆ ಮನೆಗೆ ತೆರಳಿ ತಂದೆ ಗೆಲುವಿಗೆ ಮತಯಾಚನೆ ಮಾಡಿದ್ದೆ. ಆಗ ನಾನು ಸಿಪಿ ಯೋಗೇಶ್ವರ್ ಅವರಿಗೆ ಆದರ್ಶ ಮಗಳಾಗಿದ್ದೆ ಅಂತ ಹೇಳಿದ್ದಾರೆ. ನನ್ನ ಹೆಸರಿನ ಜೊತೆಗೆ…
ಯುಕೆ: ವಿಸ್ಮಯ ಮತ್ತು ವಿವಾದ ಎರಡನ್ನೂ ಹುಟ್ಟುಹಾಕಿದ ಅದ್ಭುತ ಬಹಿರಂಗಪಡಿಸುವಿಕೆಯಲ್ಲಿ, ಯುನೈಟೆಡ್ ಸ್ಟೇಟ್ಸ್ ಮೂಲದ ಪ್ರವರ್ತಕ ನರವಿಜ್ಞಾನ ಮತ್ತು ಬಯೋಮೆಡಿಕಲ್ ಎಂಜಿನಿಯರಿಂಗ್ ಸ್ಟಾರ್ಟ್ಅಪ್ ಬ್ರೈನ್ಬ್ರಿಡ್ಜ್ ವಿಶ್ವದ ಮೊದಲ ತಲೆ ಕಸಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ತನ್ನ ಧೈರ್ಯಶಾಲಿ ಧ್ಯೇಯವನ್ನು ಅನಾವರಣಗೊಳಿಸಿದೆ. ಈ ಆಘಾತಕಾರಿ ಪ್ರಕಟಣೆಯು ಸಿಮ್ಯುಲೇಟೆಡ್ ಕಾರ್ಯವಿಧಾನವನ್ನು ಚಿತ್ರಿಸುವ ಬೆನ್ನುಮೂಳೆಯನ್ನು ನಡುಗಿಸುವ ವೀಡಿಯೊದೊಂದಿಗೆ ಬರುತ್ತದೆ. ಇದರಲ್ಲಿ ಎರಡು ಸ್ವಾಯತ್ತ ಶಸ್ತ್ರಚಿಕಿತ್ಸಾ ರೋಬೋಟ್ಗಳು ಮಾನವ ತಲೆಯನ್ನು ಒಂದು ರೊಬೊಟಿಕ್ ದೇಹದಿಂದ ಇನ್ನೊಂದಕ್ಕೆ ತಡೆರಹಿತವಾಗಿ ವರ್ಗಾಯಿಸುತ್ತವೆ. ಸೈ-ಫಿಕ್ಷನ್ ಥ್ರಿಲ್ಲರ್ನ ದೃಶ್ಯಗಳನ್ನು ನೆನಪಿಸುವಾಗ, ಬ್ರೈನ್ಬ್ರಿಡ್ಜ್ ತನ್ನ ಪ್ರಯತ್ನವು ವೈಜ್ಞಾನಿಕ ಅನ್ವೇಷಣೆಯಲ್ಲಿ ದೃಢವಾಗಿ ನೆಲೆಗೊಂಡಿದೆ ಎಂದು ಪ್ರತಿಪಾದಿಸುತ್ತದೆ. ಇದು ಹಂತ -4 ಕ್ಯಾನ್ಸರ್, ಪಾರ್ಶ್ವವಾಯು ಮತ್ತು ಅಲ್ಝೈಮರ್ ಮತ್ತು ಪಾರ್ಕಿನ್ಸನ್ನಂತಹ ದುರ್ಬಲಗೊಳಿಸುವ ನ್ಯೂರೋಡಿಜೆನರೇಟಿವ್ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಭರವಸೆಯ ಕಿರಣವನ್ನು ನೀಡುವ ಗುರಿಯನ್ನು ಹೊಂದಿದೆ. https://twitter.com/TansuYegen/status/1793045981954523464 ಪ್ರಜ್ಞೆ, ನೆನಪುಗಳು ಮತ್ತು ಅರಿವಿನ ಸಾಮರ್ಥ್ಯಗಳನ್ನು ಸಂರಕ್ಷಿಸುವ ಮಹತ್ವಾಕಾಂಕ್ಷೆಯ ಗುರಿಯೊಂದಿಗೆ, ರೋಗಿಯ ತಲೆಯನ್ನು ಆರೋಗ್ಯಕರ, ಮೆದುಳು-ಸತ್ತ ದಾನಿ ದೇಹಕ್ಕೆ ಕಸಿ ಮಾಡುವ…












