Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ನಾವು ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರ ಸಭೆಯಲ್ಲಿ ಅವರು ಮಾತನಾಡಿ, ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರುಮಾಡಿದ್ದಾರೆ. ನಾವು ಜನರಿಗೆ ಸತ್ಯವನ್ನು ಹೇಳಬೇಕು. ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿಗಳನ್ನು ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಇದರಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು , ಹಿಂದುಳಿದವರು , ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದರು. ನಮ್ಮವರೇ ಅಪಪ್ರಚಾರ ಮಾಡುವುದನ್ನು ಬಿಡಬೇಕು ಸರ್ಕಾರದಲ್ಲಿ ಹಣವಿಲ್ಲ ಎನ್ನುವ ಅಪಪ್ರಚಾರವನ್ನು ಸೋಲಿಸಿ. ಇಷ್ಟು ದೊಡ್ಡ ದೊಡ್ಡ ಕಾರ್ಯಕ್ರಮಗಳು ಹಣವಿಲ್ಲದೆ ನಡೆಯುತ್ತಿದೆಯೇ ಎಂದು ಪ್ರಶ್ನಿಸಿದ ಸಿಎಂ, ನಮ್ಮವರೇ ಬಿಜೆಪಿಯವರ ಅಪಪ್ರಚಾರವನ್ನು ಸೋಲಿಸಲು ಮುಂದಾಗಬೇಕು.…
ಬೆಂಗಳೂರು : ಬಜಾಜ್ ಫಿನ್ಸರ್ವ್ನ ಅಂಗ ಸಂಸ್ಥೆಯಾದ ಬಜಾಜ್ ಮಾರ್ಕೆಟ್ಸ್, ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನೊಂದಿಗಿನ ಪಾಲುದಾರಿಕೆಯಲ್ಲಿ ಬ್ಯಾಂಕ್ನ ಶೇ.8.25 ಬಡ್ಡಿದರವುಳ್ಳ ಸ್ಥಿರ ಠೇವಣಿಗಳನ್ನು ನೀಡುತ್ತದೆ ಮತ್ತು ಹಿರಿಯ ನಾಗರಿಕರಿಗೆ ಹೆಚ್ಚುವರಿ ಶೇ.0.50 ಬಡ್ಡಿ ದರದ ಲಾಭವಿರುತ್ತದೆ. ಬಜಾಜ್ ಮಾರ್ಕೆಟ್ಸ್ ಮೂಲಕ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಫಿಕ್ಸೆಡ್ ಡಿಪಾಸಿಟ್ಗಳಲ್ಲಿ ಹೂಡಿಕೆ ಮಾಡುವುದರಿಂದ ಹಲವಾರು ಆಕರ್ಷಕ ವೈಶಿಷ್ಟ್ಯಗಳು ಲಭಿಸುತ್ತವೆ: ವ್ಯಕ್ತಿಯೊಬ್ಬರು 1,000₹ ಗಳಷ್ಟು ಕಡಿಮೆ ಮೊತ್ತವನ್ನು ಹೂಡಬಹುದು. ಇದರಿಂದ, ಬಹಳಷ್ಟು ಜನರು ಹೂಡಿಕೆದಾರರಾಗಲು ಅನುವಾಗುತ್ತದೆ. ಇದಲ್ಲದೆ, ಇದರಲ್ಲಿ ಅನೇಕ ಗಮನಾರ್ಹ ಪ್ರಯೋಜನಗಳಿವೆ. ಉದಾ: ಮೆಚ್ಯೂರಿಟಿ ಅಥವಾ ತ್ರೈಮಾಸಿಕ ಆಧಾರದ ಮೇಲೆ ಪಾವತಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು; ಉಳಿತಾಯ ಖಾತೆಯನ್ನು ತೆರೆಯುವ ಅಗತ್ಯವಿಲ್ಲದೇ ಎಫ್ಡಿ ಗಳಲ್ಲಿ ಹೂಡಿಕೆ ಸಾಧ್ಯ; ವಿವಿಧ ಅವಧಿಗಳಿಗೆ ಹೂಡಿಕೆಗಳನ್ನು ಮಾಡಬಹುದು. ಹೀಗೆ, ಗ್ರಾಹಕರು ತಮ್ಮ ಹಣಕಾಸಿನ ಅಗತ್ಯಗಳಿಗೆ ಸೂಕ್ತವಾದಂತೆ ಹೂಡಿಕೆ ಮಾಡಬಹುದು. ಹಿರಿಯ ನಾಗರಿಕರಿಗೆ ಹೆಚ್ಚಿನ ಬಡ್ಡಿದರದ ಲಾಭ. ತೆರಿಗೆ-ಉಳಿಸಲು ಬಯಸುವ ಹೂಡಿಕೆದಾರರು ತೆರಿಗೆ ಉಳಿಸುವ ಫಿಕ್ಸೆಡ್ ಡೆಪಾಸಿಟ್ಗಳ…
ಇದು ದೇವತೆಗಳಿಗೆ ಸೇರಿದ ಧನುರ್ಮಾಸ. ಆ ದೇವರುಗಳು ಈ ಭೂಮಿಯನ್ನು ಸಂದರ್ಶಿಸುವ ಮಾಸವೇ ಈ ಮಾರ್ಗಜಿ ಮಾಸ. ಧನುರ್ಮಾಸ ಮಾಸವು ಭಗವಾನ್ ವಿಷ್ಣು ಮತ್ತು ಮಹಾಲಕ್ಷ್ಮಿ ನಮ್ಮನ್ನು ಆಶೀರ್ವದಿಸಬೇಕಾದ ತಿಂಗಳು. ಆ ಈಸನ ಅನುಗ್ರಹವನ್ನು ಪಡೆಯುವ ಮಾಸವೇ ಈ ಧನುರ್ಮಾಸ. ಇದೇ ತಿಂಗಳಲ್ಲಿ ಹನುಮ ಜಯಂತಿ ಬರಲಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ…
ಬೆಂಗಳೂರು : ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ ಇವರಿಗೆ ಗೌರವ…
ಆಂಧ್ರಪ್ರದೇಶ: ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ. ಈ ಮೂಲಕ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಬಿಗ್ ರಿಲೀಫ್ ನೀಡಿದೆ. ಇನ್ನರ್ ರಿಂಗ್ ರೋಡ್ (ಐಆರ್ಆರ್) ಪ್ರಕರಣ, ಅಬಕಾರಿ ನೀತಿ ಪ್ರಕರಣ ಮತ್ತು ಮರಳು ಗಣಿಗಾರಿಕೆ ಪ್ರಕರಣದಲ್ಲಿ ಈಗ ವಿರೋಧ ಪಕ್ಷದ ನಾಯಕರಾಗಿರುವ ನಾಯ್ಡು ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಕೌಶಲ್ಯ ಅಭಿವೃದ್ಧಿ ಹಗರಣ ಪ್ರಕರಣದಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥರಿಗೆ ಕಳೆದ ವರ್ಷ ನವೆಂಬರ್ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಕೌಶಲ್ಯ ಅಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯ್ಡು ಅವರನ್ನು ಕಳೆದ ವರ್ಷ ಸೆಪ್ಟೆಂಬರ್ 9 ರಂದು ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸಿತ್ತು. ಸೆಪ್ಟೆಂಬರ್ 10 ರಿಂದ ಅಕ್ಟೋಬರ್ 31 ರವರೆಗೆ ಅವರನ್ನು ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಒಟ್ಟಾರೆಯಾಗಿ ಇನ್ನರ್ ರಿಂಗ್ ರೋಡ್ ಪ್ರಕರಣ, ಮದ್ಯ ಪ್ರಕರಣ ಮತ್ತು ಮರಳು ನೀತಿ…
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನಲ್ಲಿ ( Karnataka Congress ) ಮಹತ್ವದ ಬದಲಾವಣೆಯನ್ನು ಮಾಡಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗಾಗಿ ( Lok Sabha Election ) ಸಚಿವರನ್ನು ಜಿಲ್ಲಾ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ( DCM DK Shivakumar ) ಆದೇಶ ಹೊರಡಿಸಿದ್ದು, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ಸಮಾಲೋಚನೆ ನಡೆಸಿ, ಎಐಸಿಸಿ ಅನುಮೋದಿಸಿರುವ ಕರ್ನಾಟಕದ ಲೋಕಸಭಾ ಕ್ಷೇತ್ರವಾರು ಸಂಯೋಜಕರ ಪರಿಷ್ಕೃತ ಪಟ್ಟಿಯನ್ನು ಮಂಗಳವಾರ ಪ್ರಕಟಿಸಿದ್ದಾರೆ. ಹೀಗಿದೆ ಜಿಲ್ಲಾ ಸಂಯೋಜಕರಾಗಿ ನೇಮಕಗೊಂಡ ಸಚಿವರ ಪಟ್ಟಿ ಬಾಗಲಕೋಟೆ-ಆರ್.ಬಿ ತಿಮ್ಮಾಪುರ್ ಬೆಂಗಳೂರು ಕೇಂದ್ರ – ಜಮೀನ್ ಅಹ್ಮದ್ ಖಾನ್ ಬೆಂಗಳೂರು ಉತ್ತರ – ಕೃಷ್ಣಬೈರೇಗೌಡ ಬೆಂಗಳೂರು ಗ್ರಾಮಾಂತರ – ಡಾ.ಎಂ.ಸಿ ಸುಧಾಕರ್ ಬೆಂಗಳೂರು ದಕ್ಷಿಣ – ರಾಮಲಿಂಗಾರೆಡ್ಡಿ ಬೆಳಗಾವಿ- ಸತೀಶ್ ಜಾರಕಿಹೊಳಿ ಬಳ್ಳಾರಿ-ಬಿ.ನಾಗೇಂದ್ರ ಬೀದರ್-ಈಶ್ವರ್ ಖಂಡ್ರೆ ಬಿಜಾಪುರ – ಎಂ.ಬಿ ಪಾಟೀಲ್ ಚಾಮರಾಜನಗರ – ಕೆ.ವೆಂಕಟೇಶ್…
ಬೆಂಗಳೂರು: ಕನ್ನಡ ನಾಮಫಲಕ ಹಾಕೋ ಸಂಬಂಧ ವಾಣಿಜ್ಯ ಮಳಿಗೆಗಳ ಮುಂದಿದ್ದಂತ ಬೋರ್ಡ್ ಹೊಡೆದು ಹಾಕಿದ ಪ್ರಕರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡಿದ ಬಳಿಕ ಬಿಡುಗಡೆಯಾಗಿದ್ರು. ಬಿಡುಗಡೆಯಾದ ಕೆಲವೇ ಕ್ಷಣದಲ್ಲಿ ಮತ್ತೆ ಬಂಧಿಸಲಾಗಿತ್ತು. ಹೀಗಾಗಿ ಮತ್ತೆ ಜೈಲುಪಾಲಾಗಿದ್ದರು. ಇದೀಗ ಮತ್ತೊಂದು ಪ್ರಕರಣದಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರಾಗಿದೆ. ಕನ್ನಡ ನಾಮಫಲಕ ಅಳವಡಿಕೆ ಹೋರಾಟದಲ್ಲಿ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಗೊಂಡರು. ನಾರಾಯಣಗೌಡ ಬಿಡುಗಡೆಯಾಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ನ ಪೊಲೀಸರೂ ವಶಕ್ಕೆ ಪಡೆದುಕೊಂಡಿದ್ದರು. 2017ರಲ್ಲಿ ನಡೆದಂತ ಪ್ರಕರಣ ಸಂಬಂಧ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಸಂಬಂಧ ಸಲ್ಲಿಸಲಾಗಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿದೆ. ಈ ಹಿನ್ನಲೆಯಲ್ಲಿ ಆದೇಶ ಇಂದು ಕಾಯ್ದಿರಿಸಿದ ಕಾರಣ ಮತ್ತೆ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದರು. ಇದೀಗ ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್…
ಬೆಂಗಳೂರು: “ಇಂದು ಲೋಕಸಭೆ ಚುನಾವಣೆಯ ಪೂರ್ವಭಾವಿ ಸಭೆ ಕರೆಯಲಾಗಿದ್ದು, ಬೆಳಗ್ಗೆ ಪಕ್ಷದ ಎಲ್ಲಾ ಶಾಸಕರು, ಪದಾಧಿಕಾರಿಗಳು, ಚುನಾವಣೆ ಸ್ಪರ್ಧಿಸಿದ್ದ ನಾಯಕರ ಸಭೆ ನಡೆಸಲಾಗುವುದು. ಮಧ್ಯಾಹ್ನ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಜತೆ ಸಭೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಸಭೆ ಆರಂಭಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಈ ಸಭೆಯಲ್ಲಿ ಪಕ್ಷದ ಸಂಘಟನೆ, ಬೂತ್ ಮಟ್ಟದಲ್ಲಿ ಬಿಎಲ್ಎಗಳು, ಮತದಾರರ ಹೆಸರು ಸೇರ್ಪಡೆ, ಪರಿಷ್ಕರಣೆ, ಗ್ಯಾರಂಟಿ ಅನುಷ್ಠಾನ, ಜಿಲ್ಲಾ ಮಟ್ಟದ ಸಭೆ, ವಿಧಾನಸಭೆ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆ, ಕಾರ್ಯಕರ್ತರ ಸಮಾವೇಶ, ರಾಜ್ಯ ಮಟ್ಟದ ಸಮಾವೇಶದ ಬಗ್ಗೆ ಚರ್ಚೆ ಮಾಡಲಿದ್ದೇವೆ” ಎಂದು ತಿಳಿಸಿದರು. ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ‘ಸಂಪುಟ ದರ್ಜೆ’ ಸ್ಥಾನಮಾನ: ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಘೋಷಣೆ ಬೆಂಗಳೂರು: ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡೋದಾಗಿ ಸಿಎಂ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಜನವರಿ 11 ರಂದು ಭಾರತದಲ್ಲಿ ನಡೆಯಲಿರುವ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ 20 ಐ ಸರಣಿಯಿಂದ ಹೊರಗುಳಿದಿದ್ದಾರೆ. ಮೊಹಾಲಿಯಲ್ಲಿ ನಡೆದ ಮೊದಲ ಟಿ 20 ಪಂದ್ಯದ ಮುನ್ನಾದಿನದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಫ್ಘಾನಿಸ್ತಾನದ ನಾಯಕ ಇಬ್ರಾಹಿಂ ಝದ್ರನ್, ರಶೀದ್ ಅನುಪಸ್ಥಿತಿಯ ಸುದ್ದಿಯನ್ನು ದೃಢಪಡಿಸಿದರು. ಅವರು (ರಶೀದ್) ಸಂಪೂರ್ಣವಾಗಿ ಫಿಟ್ ಆಗಿಲ್ಲ ಆದರೆ ತಂಡದೊಂದಿಗೆ ಪ್ರಯಾಣಿಸುತ್ತಿದ್ದಾರೆ” ಎಂದು ಜದ್ರಾನ್ ಹೇಳಿದರು. “ನಾವು ನಿರೀಕ್ಷಿಸಿದಷ್ಟು ಬೇಗ ಅವರು ಫಿಟ್ ಆಗುತ್ತಾರೆ ಎಂದು ನಾವು ಭಾವಿಸುತ್ತೇವೆ. ಅವರು ವೈದ್ಯರೊಂದಿಗೆ ತಮ್ಮ ಪುನಶ್ಚೇತನವನ್ನು ಮಾಡುತ್ತಿದ್ದಾರೆ, ಮತ್ತು ನಾವು ಅವರನ್ನು ಸರಣಿಯಲ್ಲಿ ಮಿಸ್ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ. ಟಿ 20 ಪಂದ್ಯಗಳಲ್ಲಿ ಅಫ್ಘಾನಿಸ್ತಾನದ ಅತಿ ಹೆಚ್ಚು ವಿಕೆಟ್ ಪಡೆದ 25 ವರ್ಷದ ಕ್ರಿಕೆಟಿಗ, ಕೆಲವು ತಿಂಗಳ ಹಿಂದೆ ಬೆನ್ನುನೋವಿನಿಂದ ಬಳಲುತ್ತಿದ್ದರು. ಅಂದಿನಿಂದ ಆಟದಿಂದ ಹೊರಗುಳಿದಿದ್ದಾರೆ. ಅವರು ತಂಡದೊಂದಿಗೆ ಭಾರತಕ್ಕೆ ಪ್ರಯಾಣಿಸಿದರು ಮತ್ತು ತರಬೇತಿ ಅವಧಿಗಳಲ್ಲಿ ಭಾಗವಹಿಸಿದರು.…
ಬೆಂಗಳೂರು: ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡೋದಾಗಿ ಸಿಎಂ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಮಾಡಲಾಗುತ್ತದೆ ಎಂದರು. KPCC ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಮಹತ್ವದ ಘೋಷಣೆ ಘೋಷಣೆ ಮಾಡಿದರು. ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುತ್ತದೆ. ಐದು ಮಂದಿ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತದೆ. ಉಳಿದ ಸಮಿತಿ ಅಧ್ಯಕ್ಷ ಉಪಾಧ್ಯಕ್ಷರು, ಸದಸ್ಯರಿಗೆ ಗೌರವ ಧನ ನೀಡಲಾಗುತ್ತದೆ. ವಾರ್ಷಿಕ 16 ಕೋಟಿ ರೂ. ವೆಚ್ಚ ಮಾಡಲಾಗುವುದು. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಈ ನಿರ್ಧಾರ ಎಂದು ತಿಳಿಸಿದ್ದಾರೆ. https://kannadanewsnow.com/kannada/muzrai-departments-temple-hundi-money-will-be-used-for-the-temple-minister-ramalinga-reddy/ https://kannadanewsnow.com/kannada/makar-sankranti-2024-when-is-makar-sankranti-this-year-the-date-auspicious-time-method-of-worship-are-as-follows/