Subscribe to Updates
Get the latest creative news from FooBar about art, design and business.
Author: kannadanewsnow09
೧] ಸುಮಂಗಲಿಯರು ಬೈತಲೆಯಲ್ಲಿ ಯಾವಾಗಲೂ ಕುಂಕುಮ ಇರದೇ ಇರಬಾರದು. ೨] ಎರಡು ಕೈಗಳಿಂದಲೂ ತಲೆಯನ್ನು ಕೆರೆದುಕೊಳ್ಳಬಾರದು, ೩] ಯಾವುದೇ ಕಾರಣಕ್ಕೂ ಸಂಧ್ಯಾ ಕಾಲದಲ್ಲಿ ಕಣ್ಣಲ್ಲಿ ನೀರು ಹಾಕಬಾರದು. ೪] ಮನೆಗೆ ಬಂದ ಹೆಂಗಸರಿಗೆ ಹರಿಶಿನ, ಕುಂಕುಮ, ಹೂಗಳನ್ನು ಕೊಟ್ಟೆ ಕಳಿಸಬೇಕು. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ೫] ಗರ್ಭಿಣಿ ಸ್ತ್ರೀಯರು ತೆಂಗಿನ ಕಾಯಿ ಮತ್ತು ಕುಂಬಳ ಕಾಯಿ ಹೊಡೆಯಕೂಡದು ಮತ್ತು ಹೊಡೆವ ಜಾಗದಲ್ಲೂ ಇರಕೂಡದು. ೬] ಗರ್ಭಿಣಿ ಸ್ತ್ರೀಯರು ನಿಂಬೆಹಣ್ಣನ್ನು ಕೊಯ್ದು ಬಾರದು…
ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಬಿಜೆಪಿ ಮತ್ತು ಜೆಡಿಎಸ್ ಆಹ್ವಾನಿತ ಪ್ರಮುಖರ ಉಪಸ್ಥಿತಿಯಲ್ಲಿ ನಗರದ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಇಂದು ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಸರಕಾರದ ಖಜಾನೆ ಖಾಲಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದ 6 ಸಾವಿರ ಜೊತೆಗೆ ನಾನು ಮುಖ್ಯಮಂತ್ರಿ ಆಗಿದ್ದಾಗ 4 ಸಾವಿರ ಹೆಚ್ಚುವರಿಯಾಗಿ ಕೊಡುತ್ತಿದ್ದೆ. ಆ 4 ಸಾವಿರ ನಿಂತು ಹೋಗಿದೆ ಎಂದು ಟೀಕಿಸಿದರು. ಸರಕಾರ ದಿವಾಳಿ ಆಗಿರುವುದಕ್ಕೆ ಬೇರೆ ಉದಾಹರಣೆ ಬೇಕೇ ಎಂದು ಪ್ರಶ್ನಿಸಿದರು. ಬಿಜೆಪಿ- ಜೆಡಿಎಸ್ ಬೇರೆ ಅಲ್ಲ. ನಾವೆಲ್ಲ ಒಂದೇ ತಾಯಿ ಮಕ್ಕಳಂತೆ. ಬಿಜೆಪಿ- ಜೆಡಿಎಸ್ ಅಭ್ಯರ್ಥಿ ಯಾರೇ ಇರಲಿ; ಅವರನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಪಣ ತೊಡಿ. ಆಗ ರಾಜ್ಯದ ಎಲ್ಲ ಲೋಕಸಭಾ…
ನವದೆಹಲಿ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಪೋಟದ ಶಂಕಿತರ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡುವ ವ್ಯಕ್ತಿಗಳಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಲಾ 10 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದೆ. ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ನಡೆದ ದುರಂತ ಘಟನೆಯಲ್ಲಿ ಅಬ್ದುಲ್ ಮತೀನ್ ಅಹ್ಮದ್ ತಾಹಾ ಮತ್ತು ಮುಸ್ಸವ್ವೀರ್ ಹುಸೇನ್ ಶಾಜಿಬ್ ಎಂದು ಗುರುತಿಸಲಾಗಿದೆ. ಬಹುಮಾನ ಘೋಷಣೆಯೊಂದಿಗೆ, ಎನ್ಐಎ ಇಬ್ಬರು ಶಂಕಿತರ ಛಾಯಾಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಯಾವುದೇ ಸಂಬಂಧಿತ ಮಾಹಿತಿಯೊಂದಿಗೆ ಮುಂದೆ ಬರುವಂತೆ ಸಾರ್ವಜನಿಕರನ್ನು ಒತ್ತಾಯಿಸಿದೆ. ಚಿತ್ರಗಳ ಜೊತೆಗೆ, ಏಜೆನ್ಸಿಯು ಶಂಕಿತರ ನೋಟದ ಬಗ್ಗೆ ವಿವರಗಳನ್ನು ಒದಗಿಸಿತು, ಗುರುತಿಸುವ ಉದ್ದೇಶಗಳಿಗಾಗಿ ಮೂರು ಸಂಭಾವ್ಯ ಮಾದರಿಗಳನ್ನು ಪ್ರಸ್ತುತಪಡಿಸಿತು. ಎನ್ಐಎ ಮೂಲಗಳ ಪ್ರಕಾರ, ಶಂಕಿತರು ಎಲ್ಲಿದ್ದಾರೆ ಎಂಬುದರ ಬಗ್ಗೆ ನಿರ್ಣಾಯಕ ಸುಳಿವುಗಳು ಹೊರಬಂದಿದ್ದು, ಅವರನ್ನು ಪತ್ತೆಹಚ್ಚುವ ಮತ್ತು ಬಂಧಿಸುವ ತುರ್ತು ಅಗತ್ಯವನ್ನು ಹೆಚ್ಚಿಸಿದೆ. ಇದಲ್ಲದೆ, ಏಜೆನ್ಸಿ ಬಿಡುಗಡೆ ಮಾಡಿದ ವಾಂಟೆಡ್ ಪಟ್ಟಿಯಿಂದ ಅನಿರೀಕ್ಷಿತ ಬಹಿರಂಗಪಡಿಸುವಿಕೆ ಹೊರಬಂದಿದೆ, ಶಂಕಿತರಲ್ಲಿ ಒಬ್ಬನಾದ ಅಬ್ದುಲ್ ಮತೀನ್…
ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಈಗಾಗಲೇ ಎನ್ಐಎ ಅಧಿಕಾರಿಗಳು ಓರ್ವ ಸಂಚುಕೋರನನ್ನು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಇಬ್ಬರು ಆರೋಪಿಗಳ ಪೋಟೋ ಬಿಡುಗಡೆ ಮಾಡಿದ್ದು, ಅವರ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ಐಎ ಘೋಷಣೆ ಮಾಡಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ರಾಷ್ಟ್ರೀಯ ತನಿಖಾ ದಳವು, ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿಗಳಾದಂತ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜಿಬ್ ಎಂಬುವರ ಪೋಟೋ ಬಿಡುಗಡೆ ಮಾಡಿದೆ. ಈ ಇಬ್ಬರು ಆರೋಪಿಗಳು ಬೆಂಗಳೂರಿನ ಕೆಫೆ ಸ್ಪೋಟದ ಪ್ರಮುಖ ಆರೋಪಿಗಳಾಗಿದ್ದಾರೆ. ಇವರ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. https://twitter.com/NIA_India/status/1773674283576807770 https://kannadanewsnow.com/kannada/siddaramaiah-should-be-proud-of-himself-former-pm-hd-deve-gowda/ https://kannadanewsnow.com/kannada/big-news-complaint-filed-against-ct-ravi-for-allegedly-abusing-minister-shivaraj-thangadagi-with-obscene-words/
ಬೆಂಗಳೂರು: ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಗುಡುಗಿದರು. ಬೆಂಗಳೂರಿನಲ್ಲಿ ನಡೆದ ಜೆಡಿಎಸ್ – ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು; ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೇಗೌಡರಿಗೆ ನಿರ್ದೇಶನ ನೀಡಿದರು. ಮೈಸೂರು ಚಾಮರಾಜನಗರ ಕ್ಷೇತ್ರ ಗೆಲ್ಲುವ ಶಕ್ತಿ ಜಿ.ಟಿ.ದೇವೇಗೌಡರಿಗೆ ಇದೆ. ಸಿದ್ದರಾಮಯ್ಯ ಅವರ ಗರ್ವಭಂಗ ಆಗಲೇಬೇಕು. ಅವರ ಗರ್ವಭಂಗ ಆಗಬೇಕಾದರೆ ನಾವೆಲ್ಲರೂ ಛಲದಿಂದ ಒಟ್ಟಾಗಿ ಹೋಗಬೇಕು ಎಂದು ವೇದಿಕೆಯಲ್ಲೇ ಜಿ.ಟಿ.ದೇವೇಗೌಡರಿಗೆ ಹೇಳಿದರು ಮಾಜಿ ಪ್ರಧಾನಿಗಳು. ಮೈತ್ರಿಯಲ್ಲಿ ಎಲ್ಲಿಯೂ ಒಂದು ಸಣ್ಣ ಸಮಸ್ಯೆಯೂ ಕಾಣಿಸಿಕೊಳ್ಳಬಾರದು. ಒಬ್ಬ ಸಾಮಾನ್ಯ…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದಂತ ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಇಂದು ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ನೀಡಿರುವಂತ ದೂರಿನಲ್ಲಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ಅವರು ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಇದೇ ವಿಚಾರವಾಗಿ ಮಾತನಾಡಿದ್ದಂತ ವಿಪಕ್ಷ ನಾಯಕ ಆರ್.ಅಶೋಕ್, ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದಿದ್ದರು. ಸಿಎಂ ಸಿದ್ದರಾಮಯ್ಯ ಅವರ ಮಗ ಎನ್ನುವ ಕಾರಣಕ್ಕೆ ಹಾಗೂ ರಾಷ್ಟ್ರ ನಾಯಕರ ಬಗ್ಗೆ ಮಾತನಾಡಿದರೆ ದೊಡ್ಡ ವ್ಯಕ್ತಿಯಾಗುತ್ತೇನೆ. ಇದರಿಂದ ಬೆಲೆ ಬರುತ್ತದೆ ಎನ್ನುವ ಕಾರಣಕ್ಕೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಟೀಕೆ ಮಾಡಿದ್ದಾರೆ. ಹತಾಶ ಮನೋಭಾವ,…
ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ ಬಂದಿದೆ. ನಾವೂ ಎಲ್ಲಿಯೂ ಮೈ ಮರೆಯೋದು ಬೇಡ. ಸೂರ್ಯಚಂದ್ರರು ಹುಟ್ಟೋದು ಎಷ್ಟು ಸತ್ಯವೋ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸರಕಾರ ಮತ್ತೆ ಬರುವುದು ಅಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ನಡೆದ ಜೆಡಿಎಸ್ -ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ನಮ್ಮ ಎರಡು ಪಕ್ಷಗಳ ಸಮನ್ವಯತೆಯನ್ನು ಬೂತ್ ಮಟ್ಟದಿಂದ ಬಲಪಡಿಸಿಕೊಳ್ಳಬೇಕು. ಇವತ್ತಿನ ಮೈತ್ರಿಗೆ ಈ ಚುನಾವಣೆ ಮೂಲಕ ಭದ್ರ ಬುನಾದಿ ಹಾಕಿದರೆ ಭವಿಷ್ಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಇಲ್ಲದಂತೆ ಮಾಡಬಹುದು ಎಂದರು. ಪ್ರತಿಷ್ಠೆಗೆ ಬೀಳುವುದು ಬೇಡ ಕಾಂಗ್ರೆಸ್ ನವರಿಗೆ ಮೈತ್ರಿಯ ಬಗ್ಗೆ ನಡುಕ ಉಂಟಾಗಿದೆ. ಇಡೀ ರಾಜ್ಯದ ಜನ ನಮ್ಮ ಮೈತ್ರಿಕೂಟದ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು ಎಂದು ಎಲ್ಲರೂ ಭಾವಿಸಿದ್ದಾರೆ. ಹೀಗಾಗಿ ನಮ್ಮಲ್ಲಿನ ವಿಶ್ವಾಸಕ್ಕೆ ಕಿಂಚಿತ್ತೂ ವ್ಯತ್ಯಾಸ ಬರಬಾರದು. ಏನೇ ಸಮಸ್ಯೆ…
ಮಂಡ್ಯ: ಚುನಾವಣೆ ಬಂತು ಅಂದ್ರೆ ಸಾಕು ಕುಮಾರಸ್ವಾಮಿ ಆಸ್ಪತ್ರೆ ಸೇರ್ತಾರೆ. ಅದು ಹೇಗೆ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಶಾಸಕ ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಚುನಾವಣೆ ಬಂದಾಗ ಹೃದಯದ ಸಮಸ್ಯೆ ಅಂತಾರೆ. ಚುನಾವಣೆ ಹತ್ತಿರ ಇದ್ದಾಗ ಆಸ್ಪತ್ರೆ ಸೇರ್ತಾರೆ. ಮೂರೇ ದಿನಕ್ಕೆ ಆಸ್ಪತ್ರೆಯಿಂದ ಹೊರಗೆ ಬಂದು ರಾಜ್ಯ ಸುತ್ತಾಡ್ತಿರ್ತಾರೆ. ಅದೆಂಗೆ ಸಾಧ್ಯ ಅಂತ ಅರ್ಥ ಆಗ್ತಾ ಇಲ್ಲ ಎಂಬುದಾಗಿ ಹೇಳಿದರು. ಯಾರಾದ್ರು ಹಾರ್ಟ್ ಪೇಸೆಂಟ್ ಹೀಗೆ ಓಡಾಡುತ್ತಾರಾ? ನಮ್ಮ ಚಲುವಣ್ಣನಿಗೂ ಅದೇ ರೀತಿ ಹೃದಯದ ಸಮಸ್ಯೆ ಇದೆ. ಆದ್ರೆ ಇವರು ಆಸ್ಪತ್ರೆ ಸೇರಿದ್ರೆ ತಿಂಗಳು ಗಟ್ಟಳೆ ಬರಲ್ಲ. ಆಪರೇಷನ್ ಆದ ಎರಡೇ ದಿನಕ್ಕೆ ಹೊರಗೆ ಬರೋದು ಗೊತ್ತಿಲ್ಲ. ಇದು ಹೆಂಗೆ ಹೊಸ ಟೆಕ್ನಿಕ್ ಹೆಂಗೆ ಅಂತ ಗೊತ್ತಾಗ್ತಿಲ್ಲ ಎಂದರು. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆಯುತ್ತಿರೊ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಟೀಕೆ ಮಾಡಿದರು. https://kannadanewsnow.com/kannada/big-news-complaint-filed-against-ct-ravi-for-allegedly-abusing-minister-shivaraj-thangadagi-with-obscene-words/ https://kannadanewsnow.com/kannada/big-news-psi-recruitment-re-exam-final-mark-sheet-released/
ಸೋನ್ಮಾರ್ಗ್: ಜಮ್ಮು ಮತ್ತು ಕಾಶ್ಮೀರದ ಸೋನ್ಮಾರ್ಗ್ನಲ್ಲಿ ಭಾರಿ ಹಿಮಪಾತ ಸಂಭವಿಸಿದೆ. ಭಾರೀ ಹಿಮಪಾತವು ಶ್ರೀನಗರ-ಸೋನ್ಮಾರ್ಗ್ ರಸ್ತೆಯಲ್ಲಿ ಗಗಂಗೀರ್ ಬಳಿ ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಹಿಮಪಾತದ ಘಟನೆಯ ನಂತರ, ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ. ನಂತರ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹಿಮಪಾತವು ಶ್ರೀನಗರ-ಸೋನ್ಮಾರ್ಗ್ ರಸ್ತೆಯನ್ನು ನಿರ್ಬಂಧಿಸಿದೆ. ವಾಹನಗಳು ಮತ್ತು ಹಿಮವನ್ನು ತೆಗೆದುಹಾಕುವ ಕಾರ್ಯಾಚರಣೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಕಳೆದ ತಿಂಗಳು, ಜಮ್ಮು ಮತ್ತು ಕಾಶ್ಮೀರದ ಸ್ಕೀ ರೆಸಾರ್ಟ್ ಗುಲ್ಮಾರ್ಗ್ನಲ್ಲಿ ಸಂಭವಿಸಿದ ಹಿಮಪಾತದಲ್ಲಿ ನಾಲ್ವರು ವಿದೇಶಿಯರು ಸಿಕ್ಕಿಬಿದ್ದಿದ್ದರು. ಇಬ್ಬರು ವಿದೇಶಿಯರನ್ನು ರಕ್ಷಿಸಲಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇನ್ನೊಬ್ಬರು ಇನ್ನೂ ಕಾಣೆಯಾಗಿದ್ದಾರೆ. ಈ ಪ್ರದೇಶದಲ್ಲಿ ಪೊಲೀಸರು ಸ್ಕೀ ಪೆಟ್ರೋಲ್ ಘಟಕಗಳನ್ನು ಸಹ ನಿಯೋಜಿಸಿದ್ದಾರೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಗುಲ್ಮಾರ್ಗ್ ಅಲ್ತಾಫ್ ಮಸುವಿ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಕೂಡ ಸೇರಿಕೊಂಡಿತ್ತು ಮತ್ತು ಹೆಲಿಕಾಪ್ಟರ್ ಅನ್ನು ನಿಯೋಜಿಸಲಾಗಿತ್ತು. ಗುಲ್ಮಾರ್ಗ್ನ ಕಂಗ್ದೂರಿ ಪ್ರದೇಶದಲ್ಲಿ ಆ ಸಮಯದಲ್ಲಿ ನಡೆಯುತ್ತಿದ್ದ ಖೇಲೋ ಇಂಡಿಯಾ…
ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅಕಾಲಿಕ ನಿಧನಹೊಂದಿದ್ದರು. ಅವರ ನಿಧನದ ಬಳಿಕ, ಈಗ ನಟ ವಿಜಯ್ ರಾಘವೇಂದ್ರ ಪತ್ನಿಯ ಮಾವ ಅಪಘಾತದಲ್ಲಿ ನಿಧನರಾಗಿ, ಮತ್ತೊಂದು ಆಘಾತ ಎದುರಾಗಿದೆ. ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಮಾವ ಹೇರಾಜೆ ಶೇಖರ ಬಂಗೇರ ಅವರು ಅಪಘಾತದಲ್ಲಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರ ತಾಯಿಯ ಅಣ್ಣ ಶೇಖರ ಬಂಗೇರ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ರಾತ್ರಿ ನಡೆದಂತ ಅಪಘಾತದಲ್ಲಿ ನಿಧನರಾಗಿರೋದಾಗಿ ತಿಳಿದು ಬಂದಿದೆ. ಅಂದಹಾಗೆ ಶೇಖರ್ ಅವರ ಬೈಕ್ ಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸೋ ವೇಳೆಯಲ್ಲಿ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಇನ್ನೂ ಬೈಕ್ ಅಪಘಾತದಲ್ಲಿ ಗಾಯಗೊಂಡಿರುವಂತ ಯುವತಿ ಸ್ಥಿತಿ ಕೂಡ ಗಂಭೀರಗೊಂಡಿರೋದಾಗಿ ಹೇಳಲಾಗುತ್ತಿದೆ. https://kannadanewsnow.com/kannada/modi-will-become-pm-again-sl-bhyrappa/ https://kannadanewsnow.com/kannada/big-news-complaint-filed-against-ct-ravi-for-allegedly-abusing-minister-shivaraj-thangadagi-with-obscene-words/