Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದಂತ ವಿವಿಧ ರಾಜಕೀಯ ನಾಯಕರ ವಿರುದ್ಧ ಸರಣಿ ದೂರುಗಳು ದಾಖಲಾಗುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಲವು ಸಚಿವರ ವಿರುದ್ಧ ಚುನಾವಣಾ ಆಯೋಗದಿಂದ ಬಿಜೆಪಿ ದೂರು ನೀಡಿದೆ. ಇಂದು ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳಿಗೆ ಬಿಜೆಪಿ ದೂರು ಸಲ್ಲಿಸಿದೆ. ದೂರಿನಲ್ಲಿ ಕರ್ನಾಟಕ ಸರ್ಕಾರದ ಕೆಲವು ಸಚಿವರುಗಳು ತಮ್ಮ ಸರ್ಕಾರಿ ಕಚೇರಿಗಳನ್ನು ಲೋಕಸಭಾ ಚುನಾವಣೆಯ ಕಾರ್ಯಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ವರ್ತಮಾನ ಬಂದಿರುತ್ತದೆ ಎಂದಿದೆ. ಈ ವಿಚಾರವನ್ನು ಚುನಾವಣಾ ಆಯೋಗವು ಗಂಭೀರವಾಗಿ ಪರಿಗಣಿಸಿ, ಸದರಿಯವರುಗಳ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಈ ಮೂಲಕ ಸರ್ಕಾರಿ ನಿವಾಸದಲ್ಲಿ ಲೋಕಸಭಾ ಚುನಾವಣೆಯ ದರ್ಬಾರ್ ನಡೆಸುತ್ತಿರುವಂತ ರಾಜ್ಯದ ಕಾಂಗ್ರೆಸ್ ಸರ್ಕಾರದ ಸಚಿವರಿಗೆ ಬಿಜೆಪಿ ಶಾಕ್ ನೀಡಿದೆ. https://kannadanewsnow.com/kannada/sslc-exam-8-27-lakh-students-appear-today-9-debarred/ https://kannadanewsnow.com/kannada/dk-shivakumar-defamation-case-against-yatnal-hc-refuses-to-transfer-plea/
ಬೆಂಗಳೂರು: ಇಂದು ರಾಜ್ಯಾಧ್ಯಂತ ಎರಡನೇ ದಿನದ ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. 8.27 ಲಕ್ಷ ವಿದ್ಯಾರ್ಥಿಗಳು ಇಂದು ನಡೆದಂತ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದಾರೆ. ಅಲ್ಲದೇ ಪರೀಕ್ಷೆಯಲ್ಲಿ ನಕಲಿಗೆ ಯತ್ನಿಸಿದಂತ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 27-03-2024ರಂದು ಸೋಷಿಯಲ್ ಸೈನ್ಸ್ ವಿಷಯದ ಪರೀಕ್ಷೆ ನಡೆಯಿತು. ನೋಂದಾಯಿಸಿಕೊಂಡಿದ್ದಂತ 8,41,120 ವಿದ್ಯಾರ್ಥಿಗಳಲ್ಲಿ, 8,27,773 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು ಎಂದು ತಿಳಿಸಿದೆ. ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ ಕಾರಣ ಬೆಂಗಳೂರು ಉತ್ತರ ವಿಭಾಗದಲ್ಲಿ ಓರ್ವ, ಧಾರವಾಡದಲ್ಲಿ ನಾಲ್ವರು, ಯಾದಗಿರಿಯಲ್ಲಿ ಓರ್ವ ಹಾಗೂ ರಾಯಚೂರು ಜಿಲ್ಲೆಯಲ್ಲಿ ಮೂವರು ಸೇರಿದಂತೆ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದೆ. ಇಂದಿನ ಎಸ್ ಎಸ್ ಎಲ್ ಸಿಯ ಸಮಾಜ ವಿಜ್ಞಾನ ಪರೀಕ್ಷೆಗೆ 13,347 ವಿದ್ಯಾರ್ಥಿಗಳು ಗೈರಾಗಿದ್ದಾರೆ. 98.4ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರೋದಾಗಿ ಅಂಕಿ ಅಂಶವನ್ನು ನೀಡಿದೆ. https://kannadanewsnow.com/kannada/lok-sabha-elections-2024-candidates-to-file-nominations-tomorrow/ https://kannadanewsnow.com/kannada/dk-shivakumar-defamation-case-against-yatnal-hc-refuses-to-transfer-plea/
ಮಂಡ್ಯ: 2024ರ ಲೋಕಸಭಾ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಹೀಗಾಗಿ ನಾಳೆಯಿಂದಲೇ ಲೋಕಸಭಾ ಚುನಾವಣೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸೋದಕ್ಕೆ ಆರಂಭಗೊಳ್ಳಲಿದೆ. ಈ ಕುರಿತಂತೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದು, ಲೋಕಸಭಾ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ ಏಪ್ರಿಲ್ 04 ಆಗಿದೆ. ನಾಮಪತ್ರ ಪರಿಶೀಲನೆ ನಡೆಸುವ ದಿನಾಂಕ ಏ.05 ಆಗಿರುತ್ತದೆ. ನಾಮಪತ್ರ ವಾಪಸ್ ಪಡೆಯುವ ದಿನ ಏ.08 ಆಗಿದೆ ಎಂದು ಹೇಳಿದ್ದಾರೆ. ಮತದಾನದ ದಿನಾಂಕ ಏ.26 ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರಗೆ ಅವಕಾಶ ನೀಡಲಾಗಿದೆ. ಮತದಾನ ಎಣಿಕೆ ಮಾಡುವ ದಿನಾಂಕ ಜೂನ್ 04ರಂದು ನಡೆಯಲಿದೆ. ಬೆಳಿಗ್ಗೆ 11 ಗಂಟೆಯಿಂದ 3 ಗಂಟೆಯ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊಠಡಿ ಸಂಖ್ಯೆ 29ರಲ್ಲಿ ನಾಮಪತ್ರವನ್ನು ಸಲ್ಲಿಸಬಹುದು ಎಂದರು. ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ 100ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿ ಇರಲಿದೆ. ಚುನಾವಣಾಧಿಕಾರಿಗಳ ಕಛೇರಿಗೆ ಕೇವಲ…
ಬೆಂಗಳೂರು: ನಗರದಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ಆಗಿದ್ದಂತ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಟ್ಟಿ ಕೊಲೆ ಮಾಡಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ರೌಡಿಶೀಟರ್, ಸುಫಾರಿ ಕಿಲ್ಲರ್ ದಿನೇಶ್ ಎಂಬಾತ ಮೇಲೆ 7 ದುಷ್ಕರ್ಮಿಗಳು ಮಚ್ಚು, ಲಾಂಗ್ ನಿಂದ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ದಿನೇಶ್ ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರೋ ಘಟನೆ ನಡೆದಿದೆ. ರೌಡಿಶೀಟರ್, ಸುಫಾರಿ ಕಿಲ್ಲರ್ ದಿನೇಶ್ ಕೊಚ್ಚಿ ಕೊಲೆ ಮಾಡಿರುವಂತ 7 ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಬಾಣಸವಾಡಿ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರೌಡಿ ಶೀಟರ್ ದಿನೇಶ್ ಹತ್ಯೆಯ ಹಿಂದಿನ ಕಾರಣ ಏನೆಂಬುದು ತನಿಖೆಯ ಬಳಿಕ ತಿಳಿದು ಬರಬೇಕಿದೆ https://kannadanewsnow.com/kannada/dk-shivakumar-defamation-case-against-yatnal-hc-refuses-to-transfer-plea/ https://kannadanewsnow.com/kannada/lok-sabha-elections-nominations-to-be-accepted-from-these-places-in-bengaluru-from-tomorrow/
ನವದೆಹಲಿ: ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ. ಅನಿವಾಸಿ ಬಾಹ್ಯ ಅಥವಾ ಎನ್ಆರ್ಇ ಖಾತೆಗೆ ಸಂಬಂಧಿಸಿದ ವಹಿವಾಟುಗಳು ಮತ್ತು ವಿದೇಶಿ ಹಣ ರವಾನೆ ಮತ್ತು ಹಣ ವರ್ಗಾವಣೆಯ ಕೆಲವು ನಿದರ್ಶನಗಳ ಬಗ್ಗೆ ಮೊಯಿತ್ರಾ ಅವರನ್ನು ಪ್ರಶ್ನಿಸಲು ಏಜೆನ್ಸಿ ಬಯಸಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಮೊಯಿತ್ರಾ ಅವರನ್ನು ಮಾದ್ಯಮಗಳು ಸಂಪರ್ಕಿಸಿದ್ರೂ, ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ. ಕೃಷ್ಣನಗರ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಿಗೆ ಜಾರಿ ನಿರ್ದೇಶನಾಲಯ ನೀಡಿರುವ ಮೂರನೇ ಸಮನ್ಸ್ ಇದಾಗಿದೆ. ವೇಳಾಪಟ್ಟಿ ಸಂಘರ್ಷಗಳನ್ನು ಉಲ್ಲೇಖಿಸಿ ಅವರು ಮೊದಲ ಎರಡು ಪಂದ್ಯಗಳನ್ನು ತಪ್ಪಿಸಿಕೊಂಡರು ಮತ್ತು ಏಜೆನ್ಸಿಯಿಂದ ಹೊಸ ದಿನಾಂಕವನ್ನು ಕೋರಿದರು. ಡಿಸೆಂಬರ್ ನಲ್ಲಿ ಮೊಯಿತ್ರಾ ಅವರನ್ನು ಸಂಸತ್ತಿನಿಂದ ಹೊರಹಾಕಲು ಕಾರಣವಾದ ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಸಿಬಿಐ ಪ್ರಕರಣ ದಾಖಲಿಸಿದ ನಂತರ ಮತ್ತು ಅವರ ಕೋಲ್ಕತಾ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಈ…
ಬೆಂಗಳೂರು: ಡಿಕೆ ಶಿವಕುಮಾರ್ ಅವರು ತಮ್ಮ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಕರ್ನಾಟಕ ಸರ್ಕಾರದ ಚಿಹ್ನೆ ಮತ್ತು ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಸಿಕೊಂಡು ಡಿ.ಕೆ ಸುರೇಶ್ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿರುವಂತ ಬಿಜೆಪಿಯು, ಅದರಲ್ಲಿ ದಿನಾಂಕ 24-03-2024ರಂದು ಡಿ.ಕೆ ಶಿವಕುಮಾರ್ ತಮ್ಮ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಅವರ ತಮ್ಮ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಡಿ.ಕೆ ಸುರೇಶ್ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ ಎಂದಿದೆ. ಅಭಿವೃದ್ಧಿಯೇ ನಮ್ಮ ಮೂಲ ಮಂತ್ರ, ನಮ್ಮ ಜನಪರ ಕಾರ್ಯಗಳ ಬಗ್ಗೆ ನಾಗರಿಕರೊಬ್ಬರ ಅಭಿಪ್ರಾಯ ಕೇಳಿ ಎಂಬ ಶೀರ್ಷಿಕೆಯಲ್ಲಿ ವೀಡಿಯೋವನ್ನು ಹಂಚಿಕೊಂಡಿದ್ದು, ಆ ವೀಡಿಯೋದಲ್ಲಿ ಕರ್ನಾಟಕ ಸರ್ಕಾರದ ಚಿಹ್ನೆ ಹಾಗೂ…
ಬೆಂಗಳೂರು: ಭಾರತ ಚುನಾವಣಾ ಆಯೋಗದ ಉಲ್ಲೇಖಿತ ಪತ್ರಿಕಾ ಪ್ರಕಟಣೆಯಂತೆ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಸಂಬಂಧ ಚುನಾವಣಾ ವೇಳಾ ಪಟ್ಟಿಯನ್ನು ಘೋಷಿಸಲಾಗಿದ್ದು, ದಿನಾಂಕ: 16.03.2024(ಶನಿವಾರ) ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುತ್ತದೆ. ಮುಂದುವರಿದು, ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ದಿನಾಂಕ: 28.03.2024(ಗುರುವಾರ)ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು ಹಾಗೂ ಅದೇ ದಿನದಿಂದ ದಿನಾಂಕ: 08.04.2024(ಸೋಮವಾರ) ರವರೆಗೆ ನಾಮಪತ್ರಗಳ ಸ್ವೀಕೃತಿ, ಪರಿಶೀಲನೆ ಹಾಗೂ ಹಿಂಪಡೆಯುವ ಪ್ರಕ್ರಿಯೆಯನ್ನು ಆಯಾ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಈ ಕೆಳಕಾಣಿಸಿದ ವಿಳಾಸದಲ್ಲಿ ನಡೆಸಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿರುತ್ತಾರೆ. ನಾಮಪತ್ರಗಳನ್ನು ಸ್ವಲ್ಲಿಸುವ ಚುನಾವಣಾಧಿಕಾರಿಗಳ ಕಛೇರಿಗಳ ವಿವರ: 1. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ: ಚುನಾವಣಾಧಿಕಾರಿಗಳ ಕಛೇರಿ, ನಂ. 24 – ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ, ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಕಂದಾಯ ಭವನ ಹಿಂಭಾಗ, ಬೆಂಗಳೂರು – 560009 2. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ: ಚುನಾವಣಾಧಿಕಾರಿಗಳ…
ಉತ್ತರ ಕನ್ನಡ : “ನಮ್ಮ ವಿರುದ್ಧ ಹೋರಾಟ ಮಾಡಿದ, ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಬುಧವಾರ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್ ಅವರು ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. “ದಳದವರು ಆರಂಭದಲ್ಲೇ ಎಡವಿದ್ದಾರೆ. ಆ ಪಕ್ಷದಲ್ಲಿ ಜಾತ್ಯಾತೀತ ತತ್ವ ಇಲ್ಲವಾಗಿದೆ. ಅಲ್ಲಿ ಪಕ್ಷದ ವಿಚಾರವೇ ಇಲ್ಲ. ಅವರ ಕುಟಂಬದ ಸದಸ್ಯರನ್ನು ಬೇರೆ ಪಕ್ಷದಿಂದ ಕಣಕ್ಕಿಳಿಸಿದ ಮೇಲೆ ಜೆಡಿಎಸ್ ಇದೆ ಎಂದು ಹೇಳಲು ಸಾಧ್ಯವೇ?. ಇನ್ನು ಬಿಜೆಪಿಯಲ್ಲಿ ಏನೆಲ್ಲಾ ನಡೆಯುತ್ತಿದೆ ಎಂದು ನಾನು ಹೇಳುವ ಅಗತ್ಯವಿಲ್ಲ. ಅಲ್ಲಿ ಪಕ್ಷದ ಮಾಜಿ ಅಧ್ಯಕ್ಷರು, ಮಾಜಿ ಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್ ಇಲ್ಲವಾಗಿದೆ. ಪಕ್ಷಕ್ಕೆ ಭದ್ರ ಬುನಾದಿ ಹಾಕಿದವರಿಗೆ, ರಾಜ್ಯ ಪ್ರವಾಸ ಮಾಡಿದವರಿಗೆ, ನಮ್ಮ ವಿರುದ್ಧ ಹೋರಾಟ ಮಾಡಿದವರನ್ನು ಮನೆಗೆ ಕಳಿಸಿ ಹೊಸಬರನ್ನು ಕಣಕ್ಕಿಳಿಸಿದ್ದಾರೆ” ಎಂದು ತಿಳಿಸಿದರು. ದೇವಾಲಯದ ಅರ್ಚಕರು ತಾವು ಸಿಎಂ ಆಗಬೇಕು ಎಂದು ಪೂಜೆ…
ಅಮೇರಿಕಾ: ಯುಎಸ್ ಸಮಯ ಮಾರ್ಚ್ 26 ರ ಮುಂಜಾನೆ ಬಾಲ್ಟಿಮೋರ್ನ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆಗೆ ಅಜಿಯಂಟ್ ಕಂಟೈನರ್ ಹಡಗು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಸೇತುವೆಯ ಹೆಚ್ಚಿನ ಭಾಗವು ಪಟಾಪ್ಸ್ಕೊ ನದಿಗೆ ಕುಸಿದಿದೆ. ಈ ವೇಳೆಯಲ್ಲಿ 22 ಭಾರತೀಯ ಸಿಬ್ಬಂದಿಗಳು ಹಡಗಿನಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಎಸ್ಓಎಸ್ ಉಳಿಸಿದ್ದೇಗೆ ಅಂತ ಮುಂದೆ ಓದಿ. ಅಪಘಾತಕ್ಕೆ ಕೆಲವೇ ಕ್ಷಣಗಳ ಮೊದಲು, ಹಡಗಿನ 22 ಸದಸ್ಯರ ಭಾರತೀಯ ಸಿಬ್ಬಂದಿ ಸ್ಥಳೀಯ ಅಧಿಕಾರಿಗಳಿಗೆ ಎಚ್ಚರಿಕೆಯನ್ನು ಕಳುಹಿಸಿದರು. ಇದು “ಅನೇಕ ಜೀವಗಳನ್ನು ಉಳಿಸಿತು”. ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಮೇರಿಲ್ಯಾಂಡ್ ಗವರ್ನರ್ ಸಿಬ್ಬಂದಿಯ ಜೀವ ಉಳಿಸುವ ಕ್ರಮವನ್ನು ಶ್ಲಾಘಿಸಿದ್ದಾರೆ. ಸೇತುವೆ ಕುಸಿತದ ಬಗ್ಗೆ ನಮಗೆ ಇಲ್ಲಿಯವರೆಗೆ ತಿಳಿದಿರುವ ವಿಷಯಗಳು ಇಲ್ಲಿವೆ… ಹಡಗು ಸೇತುವೆಗೆ ಏಕೆ ಡಿಕ್ಕಿ ಹೊಡೆದಿತು? ಅದು ಇನ್ನೂ ತಿಳಿದುಬಂದಿಲ್ಲ. ಅಪಘಾತದ ಹಿಂದಿನ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಸಿಂಗಾಪುರ ಧ್ವಜ ಹೊಂದಿರುವ 948 ಅಡಿ ಉದ್ದದ ಸರಕು ಹಡಗು ಡಾಲಿ ಬಾಲ್ಟಿಮೋರ್ ಬಂದರಿನಿಂದ ಶ್ರೀಲಂಕಾಕ್ಕೆ…
ಬೆಂಗಳೂರು : ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವ ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಏಪ್ರಿಲ್.1ರಿಂದ ಹೊಸ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಆರಂಭಿಸಲಾಗುತ್ತಿದೆ. ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಈ ಪ್ರಮುಖ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ. ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ www.ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, APL Ration Card ) ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ.. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ…