Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದ ವೈಟ್ ಫೀಲ್ಡ್ ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಂತ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು 57 ಲ್ಯಾಪ್ ಟಾಪ್ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲ್ಯಾಪ್ ಟಾಪ್ ಕದ್ದಿದ್ದು ಏಕೆ ಎನ್ನುವ ಪೊಲೀಸರ ತನಿಖೆಯ ಪ್ರಶ್ನೆಗೆ ಆರೋಪಿ ಹೇಳಿದಂತ ಉತ್ತರ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ಆ ಬಗ್ಗೆ ಮುಂದೆ ಓದಿ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೂಸೂರು ತಾಲ್ಲೂಕಿನ ತೋರಪಲ್ಲಿ ಗ್ರಾಮದ ಮುರುಗೇಶ್ ವೈಟ್ ಫೀಲ್ಡ್ ನ ಕಂಪನಿಯೊಂದರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದನು. ಈ ಕಂಪನಿಯಲ್ಲಿ ಬರೋಬ್ಬರಿ 22 ಲಕ್ಷ ಮೌಲ್ಯದ 57 ಲ್ಯಾಪ್ ಟಾಪ್ ಕಳ್ಳತನವಾಗಿತ್ತು. ಈ ಸಂಬಂಧ ಕಂಪನಿ ವ್ಯವಸ್ಥಾಪಕರು ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ತನಿಖೆ ನಡೆಸಿದಂತ ಪೊಲೀಸರು ಕಂಪನಿಯ ಸಿಸ್ಟಂ ಅಡ್ಮಿನ್ ಕೆಲಸ ಮಾಡುತ್ತಿದ್ದಂತ ಆರೋಪಿ ಮುರುಗೇಶ್ ಕೆಲ ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು. ಅವರ ಮೇಲೆ ಅನುಮಾನಬಂದು ವಶಕ್ಕೆ ಪಡೆದು ವಿಚಾರಿಸಿದಾಗ…
ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್, ಕರ್ನಾಟಕ ಸರ್ಕಾರ ಹಾಗೂ ಲೋಕಾಯುಕ್ತರಿಗೆ ಸುಪ್ರೀಂ ಕೋರ್ಟ್ ಮಂಗಳವಾರದಂದು ನೋಟಿಸ್ ಜಾರಿಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ಶಾಕ್ ನೀಡಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನಾಯಾಯಮೂರ್ತಿ ಸೂರ್ಯಕಾಂತ್ ಹಾಗೂ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠವು, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಇನ್ನೂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿದೆ. ಆರಂಭದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಪೀಠವು ಇದು ರಾಜ್ಯ, ಸಿಬಿಐ ನಡುವಿನ ವಿಯಷವಾಗಿರುವುದರಿಂದ ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್…
ಜಮ್ಮು-ಕಾಶ್ಮೀರ: ಇಂದು ಜಮ್ಮು-ಕಾಶ್ಮೀರದ 7 ಜಿಲ್ಲೆಗಳಲ್ಲಿ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭಗೊಂಡಿದೆ. ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳು 10 ವರ್ಷಗಳಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲಿವೆ. ಜಮ್ಮು ಪ್ರದೇಶದ ಮೂರು ಜಿಲ್ಲೆಗಳಲ್ಲಿ ಎಂಟು ಮತ್ತು ಕಾಶ್ಮೀರ ಕಣಿವೆಯ ನಾಲ್ಕು ಜಿಲ್ಲೆಗಳಲ್ಲಿ 16 ಸೇರಿದಂತೆ 24 ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸುತ್ತಿರುವ 90 ಸ್ವತಂತ್ರರು ಸೇರಿದಂತೆ 219 ಅಭ್ಯರ್ಥಿಗಳ ಭವಿಷ್ಯವನ್ನು 23 ಲಕ್ಷಕ್ಕೂ ಹೆಚ್ಚು ಮತದಾರರು ನಿರ್ಧರಿಸಲಿದ್ದಾರೆ. 2019 ರ ಆಗಸ್ಟ್ನಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿದೆ. ಮೊದಲ ಹಂತದಲ್ಲಿ 11,76,462 ಪುರುಷರು, 11,51,058 ಮಹಿಳೆಯರು ಮತ್ತು 60 ತೃತೀಯ ಲಿಂಗಿ ಮತದಾರರು ಸೇರಿದಂತೆ ಒಟ್ಟು 23,27,580 ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮೊದಲ ಹಂತದಲ್ಲಿ 18 ರಿಂದ 19 ವರ್ಷದೊಳಗಿನ…
ಮಲಪ್ಪುರಂ: ಆಫ್ರಿಕಾದ ದೇಶಗಳಲ್ಲಿ ಸಾಕಷ್ಟು ಸಾವು ನೋವುಗಳು ಮಂಕಿಪಾಕ್ಸ್ ಕಾರಣವಾಗಿದೆ. ಇಂತಹ ಸಾವಿಗೆ ಕಾರಣವಾದ ಶಂಕಿತ ಮಂಕಿಪಾಕ್ಸ್ ವೈರಸ್ ಲಕ್ಷಣಗಳು ಇತ್ತೀಚಿಗೆ ವಿದೇಶದಿಂದ ಮರಳಿದ ಕೇರಳದ ಮಲಪ್ಪುರಂ ಜಿಲ್ಲೆಯ ವ್ಯಕ್ತಿಯೊಬ್ಬರಲ್ಲಿ ಕಾಣಿಸಿಕೊಂಡಿದೆ. ಕೆಲ ದಿನಗಳ ಹಿಂದಷ್ಟೇ ವಿದೇಶದಿಂದ ದೆಹಲಿಗೆ ಬಂದಿಳಿದಿದ್ದ ವ್ಯಕ್ತಿಯಲ್ಲಿ ಈ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಕರ್ನಾಟಕದ ಗಡಿಯ ಕೇರಳದಲ್ಲೇ ಪ್ರಕರಣಗಳ ಆಂತಕ ಎದುರಾಗಿದೆ. ವಿದೇಶದಿಂದ ಬಂದಂತ ವ್ಯಕ್ತಿಯು ಹಲವು ದಿನಗಳ ಹಿಂದೆ ಕೇರಳಕ್ಕೆ ಆಗಮಿಸಿದ್ದರು. ಅನಾರೋಗ್ಯಕ್ಕೆ ತುತ್ತಾಗಿದ್ದ ಈತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಕಿಪಾಕ್ಸ್ ಪ್ರಕರಣವಾಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಆತನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. https://kannadanewsnow.com/kannada/over-15-passengers-injured-as-private-bus-overturns-near-haveri/ https://kannadanewsnow.com/kannada/9-killed-more-than-2800-injured-in-pager-blasts-in-lebanon-syria/
ಕುಬೇರನಿಗೆ ಈ 5 ರಾಶಿಯವರಿಗೆ ತುಂಬಾ ಇಷ್ಟ. ನೀವು ಕುಬೇರನ ಆರಾಧನೆಯನ್ನು ನಿಯಮಿತವಾಗಿ ಮಾಡಲು ಪ್ರಾರಂಭಿಸಿದರೆ, ನಿಮಗೆ ಹಣವು ಹರಿದುಬರುತ್ತದೆ. ಜ್ಯೋತಿಷ್ಯದ ಆಧಾರದ ಮೇಲೆ ಕುಬೇರನ ನೆಚ್ಚಿನ ಐದು ರಾಶಿಚಕ್ರ ಚಿಹ್ನೆಗಳ ಕಿರು ಪಟ್ಟಿ ಇಲ್ಲಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ…
ಹಾವೇರಿ: ಜಿಲ್ಲೆಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದಂತ ಖಾಸಗಿ ಬಸ್ ಒಂದು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮುಂಜಾನೆ 4 ಗಂಟೆಗೆ ನಿದ್ದೆ ಮಂಪರಿನಲ್ಲಿ ಇದ್ದಂತ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಖಾಸಗಿ ಬಸ್ ಪಲ್ಟಿಯಾದ ಘಟನೆಯಲ್ಲಿ ಅದರಲ್ಲಿದ್ದಂತ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/uniform-question-paper-for-sslc-half-yearly-exam-slated-to-begin-from-september-24/ https://kannadanewsnow.com/kannada/9-killed-more-than-2800-injured-in-pager-blasts-in-lebanon-syria/
ಬೆಂಗಳೂರು: ಪ್ರಸಕ್ತ ಸಾಲಿನಂದ ರಾಜ್ಯ ಪಠ್ಯಕ್ರಮದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ( SSLC Students ) ಅರ್ಧ ವಾರ್ಷಿಕ ಪರೀಕ್ಷೆಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ನೀಡುವ ಏಕರೂಪದ ಪ್ರಶ್ನೆ ಪತ್ರಿಕೆಗೆ ಉತ್ತರ ಬರೆಯಬೇಕಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಗೂ ( SSLC Exam ) ಏಕರೂಪದ ಪ್ರಶ್ನೆ ಪತ್ರಿಕೆಯನ್ನು ಮಂಡಳಿ ನೀಡುತ್ತಿದೆ. ಕಳೆದ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಶಾಲಾ ಹಂತದಲ್ಲೇ ಪ್ರಶ್ನೆ ಪತ್ರಿಕೆ ತಯಾರಿಸಿ, ಅರ್ಧ ವಾರ್ಷಿಕ ಪರೀಕ್ಷೆ ನಡೆಸಲು ಸೂಚಿಸಲಾಗಿತ್ತು. ಆದರೇ ಈ ವರ್ಷ ಅದಕ್ಕೆ ಬ್ರೇಕ್ ಹಾಕಿದೆ. ಈ ಸಾಲಿನಿಂದ ಸರ್ಕಾರದ ನಿರ್ದೇಶನದಂತೆ ಅರ್ಧ ವಾರ್ಷಿಕ ಪರೀಕ್ಷೆಗೂ ರಾಜ್ಯಾಧ್ಯಂತ ಏಕರೂಪದ ಪ್ರಶ್ನೆಪತ್ರಿಕೆ ನೀಡಲು ಮಂಡಳಿ ತೀರ್ಮಾನಿಸಿದೆ. ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಸೆಪ್ಟೆಂಬರ್.24ರಿಂದ ಅಕ್ಟೋಬರ್ 1ರವರೆಗೆ ಎಸ್ ಎಸ್ ಎಲ್ ಸಿ ಅರ್ಧವಾರ್ಷಿಕ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ…
ಬೆಳಗಾವಿ: ನಿನ್ನೆ ರಾತ್ರಿ ನಗರದಲ್ಲಿ ಗಣೇಶ ವಿಸರ್ಜನೆಯ ವೇಳೆಯಲ್ಲಿ ಕಾಲು ತಾಗಿದಂತ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಕಿರಿಕ್ ಉಂಟಾಗಿ, ಮೂವರು ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇರಿದು, ಗಾಯಗೊಳಿಸಿರುವಂತ ಘಟನೆ ನಡೆದಿದೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳೇ ಚಾಕುವಿನಿಂದ ಹಲ್ಲೆಗೆ ಒಳಗಾದಂತವರು. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗೆ ತೆರಳಿದ್ದಂತ ಮೂವರು ವಿದ್ಯಾರ್ಥಿಗಳು, ಡ್ಯಾನ್ಸ್ ಮಾಡುವಂತ ವೇಳೆಯಲ್ಲಿ ಕಾಲು ತಾಗಿದ್ದಕ್ಕೆ ಬೆಳಗಾವಿಯ ಚರ್ಚ್ ಗಲ್ಲಿಯ ಯುವಕರು ಕಿರಿಕ್ ತೆಗೆದಿದ್ದಾರೆ. ಇದೇ ವಿಚಾರ ತಾರಕಕ್ಕೇರಿದಾಗ ಮೂವರು ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇರಿದಿರುವುದಾಗಿ ತಿಳಿದು ಬಂದಿದೆ. ಚಾಕು ಇರಿತದಿಂದ ಗಾಯಗೊಂಡಿದ್ದಂತ ಪ್ರವೀಣ್ ಗುಂಡ್ಯಾಗೋಳ ಎಂಬ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದ್ದು, ಇನ್ನಿಬ್ಬರು ದರ್ಶನ್ ಪಾಟೀಲ್, ಸತೀಶ್ ಪೂಜಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/bbmp-closes-6000-potholes-in-bengaluru/ https://kannadanewsnow.com/kannada/9-killed-more-than-2800-injured-in-pager-blasts-in-lebanon-syria/
ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಇಂದು ಹಾಗೂ ನಾಳೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 18-09-2024ರಂದು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. ಸೆ.18ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಗಬ್ಬಲಾಳ, ಉತ್ತರಹಳ್ಳಿ, ಇಸ್ಟೋ ಲೇಔಟ್ ಕೈಗಾರಿಕಾ ಪ್ರದೇಶ, ಆದರ್ಶ ಅಪಾರ್ಟಮೆಂಟ್ 1 ಮತ್ತು 2. ಮಂತ್ರಿ ಟ್ರಾನ್ಕ್ವಿಲ್ ಅಪಾರ್ಟ್ ಮೆಂಟ್, ಮಾರುತಿ ಲೇಔಟ್, ಭಾರತ್ ಲೇಔಟ್, ದೊಡ್ಡಕಲ್ಲಸಂದ್ರ ಕೈಗಾರಿಕಾ ಪ್ರದೇಶ, ವಿಟಲಾ ನಗರ, ಯಾವಳಾಂ ನಗರ, ಮಾರುತಿ ನಗರ ಹಾಗೂ ಸುತ್ತಮತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ದಿನಾಂಕ 19.09.2024(ಗುರುವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ “220/66/11ಕೆ.ವಿ ಎನ್.ಆರ್.ಎಸ್” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್…
ಬೆಂಗಳೂರು: ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ, ಎಚ್ಚರಿಕೆಯ ನಂತ್ರ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರೋಬ್ಬರಿ 6000 ರಸ್ತೆ ಗುಂಡಿಗಳನ್ನು ಹಗಲು, ರಾತ್ರಿ ಶ್ರಮವಹಿಸಿ ಮುಚ್ಚಲಾಗಿದೆ. ಬೊಮ್ಮನಹಳ್ಳಿ ವಲಯದಲ್ಲಿ ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚುಲಾಗುತ್ತಿದೆ ಹಾಗೂ ಇನ್ನುಳಿದ ರಸ್ತೆ ಗುಂಡಿಗಳನ್ನು ಹಗಲು ರಾತ್ರಿ ಕೆಲಸ ನಿರ್ವಹಿಸಿ ಮುಚ್ಚಲಾಗುವುದೆಂದು ವಲಯ ಆಯುಕ್ತರಾದ ರಮ್ಯಾ, ಐಎಎಸ್ ಅವರು ತಿಳಿಸಿದರು. ಉಪ ಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ನಗರದ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಜೆಪಿ ನಗರದ ನಂದಿನಿ ಹೋಟೆಲ್ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ರಸ್ತೆ ಗುಂಡಿಗಳನ್ನು ಮುಚ್ಚಲು ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಸಾಕಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮಳೆ ಬಾರದಿರುವ ಹಿನ್ನೆಲೆ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿದೆ ಎಂದು ಹೇಳಿದರು. ಸಂಚಾರದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಇದೀಗ ವಾರ್ಡ್ ರಸ್ತೆಗಳಲ್ಲಿ ಎಲ್ಲೆಲ್ಲಿ…










