Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಿಎಂಟಿಸಿಯಲ್ಲಿ ಕರ್ತವ್ಯ ನಿರತರಾಗಿದ್ದಂತ ವೇಳೆಯಲ್ಲೇ ಮೃತರಾದಂತ ಅವಲಂಬಿತರಿಗೆ ಅನುಕಂಪದ ಆಧಾರದ ಅಡಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕಾತಿ ಪತ್ರವನ್ನು ಇಂದು ವಿತರಣೆ ಮಾಡಿದರು. ಈ ಕುರಿತಂತೆ ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂ.ಮ.ಸಾ.ಸಂಸ್ಥೆಯಲ್ಲಿ ದಿನಾಂಕ:02.03.2024 ರಂದು ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು. ಸಚಿವರು ನೆರೆದಿದ್ದ ಅಭ್ಯರ್ಥಿಗಳು ಮತ್ತು ಕುಟುಂಬದವರಿಗೆ ಶುಭ ಕೋರಿ, ಸಂಸ್ಥೆ ಬಗ್ಗೆ ಹಿತ ನುಡಿಗಳನ್ನು ನುಡಿದರು. ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿಗಾಗಿ ನಿರೀಕ್ಷಣೆಯಲ್ಲಿದ್ದ ಮೃತಾವಲಂಭಿತ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಸುಮಾರು 200 ಮೃತಾವಲಂಭಿತರುಗಳನ್ನು ಕಳೆದ ಅಕ್ಟೋಬರ್ ಮತ್ತು ನವೆಂಬರ್-2023ರಲ್ಲಿ ದರ್ಜೆ-3 (ಮೇಲ್ವಿಚಾರಕೇತರ) ಮತ್ತು ದರ್ಜೆ-4ರ ಖಾಲಿ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಅಲ್ಲದೇ, ಪ್ರಸ್ತುತ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಮೃತಾವಲಂಭಿತರುಗಳನ್ನು ಅನುಕಂಪದ ಆಧಾರದ ಮೇಲೆ ನೇಮಕಾತಿ…
ಲೋಕಸಭಾ ಚುನಾವಣೆ 2024: ಇಂದು ಸಂಜೆ ‘BJP ಅಭ್ಯರ್ಥಿ’ಗಳ ಮೊದಲ ಪಟ್ಟಿ ಬಿಡುಗಡೆ – ವರದಿ | Lok Sabha Elections 2024
ನವದೆಹಲಿ: ಲೋಕಸಭಾ ಚುನಾವಣೆ-2024ಕ್ಕೆ ಇಂದು ಸಂಜೆ ಬಿಜೆಪಿಯಿಂದ ಅಭ್ಯರ್ಥಿಗಳ ( BJP Candidate List ) ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂಬುದಾಗಿ ಉನ್ನತ ಮೂಲಗಳ ವರದಿಯಿಂದ ತಿಳಿದು ಬಂದಿದೆ. 2024 ರ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (Bharatiya Janata Party’s -BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ. 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಇಂದು ಸಂಜೆ.6 ಗಂಟೆಗೆ ಬಿಡುಗಡೆ ಮಾಡಲಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದು ಕೂಡ ರಿವೀಲ್ ಆಗೋ ಸಾಧ್ಯತೆ ಇದೆ. ಇನ್ನೂ ಬಿಜೆಪಿ ಉನ್ನತ ಮೂಲಗಳ ಮಾಹಿತಿಯಂತೆ ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆ-2024ಕ್ಕೆ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಸ್ಪಷ್ಟ ಮಾಹಿತಿ ಹೊರ ಬೀಳಲಿದೆ. https://kannadanewsnow.com/kannada/good-news-for-job-seekers-bmtc-invites-applications-for-2500-vacancies/ https://kannadanewsnow.com/kannada/naukri-99acres-apps-back-on-google-play-store-as-government-intervenes/
ಬೆಂಗಳೂರು: ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಅವರು ಇಂದು ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜನನಿಬಿಡ ಸ್ಥಳಗಳನ್ನು ಗುರುತಿಸಿ ಅಂಥ ಪ್ರದೇಶಗಳಲ್ಲಿ ಪೊಲೀಸ ಗಸ್ತು ಹೆಚ್ಚಿಸಿ. ಜನರಿಗೆ ರಕ್ಷಣೆ ಒದಗಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲು ಸೂಚಿಸಿದ ಮುಖ್ಯಮಂತ್ರಿಗಳು ಇಂಥ ಪ್ರಕರಣ ಗಳು ಮರುಕಳಿಸದಂತೆ ಎಚ್ಚರ ವಹಿಸಬೇಕೆಂದರು. ಪೊಲೀಸರು ಇಂಥ ಘಟನೆ ನಡೆದಾಗ ಎಚ್ಚರಿಕೆ ವಹಿಸಿ ನಂತರ ಮರೆಯುವುದಾಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕುವಂತೆ ಸೂಚನೆ ನೀಡಿದರು. . ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ – ಸಿಎಂ ಖಡಕ್ ಸೂಚನೆ ಇಂಟೆಲಿಜೆನ್ಸ್ ಹೆಚ್ಚು ಜಾಗೃತವಾಗಿರಬೇಕು.…
ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಪೊಲೀಸರು ಇದುವರೆಗೆ ಯಾರನ್ನು ಬಂಧಿಸಿಲ್ಲ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಮಾಧ್ಯಮದವರು ಸಹಕರಿಸಬೇಕಾಗಿ ಕೋರಿದ್ದಾರೆ. https://twitter.com/CPBlr/status/1763773064259707206 ಇನ್ನೂ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿರುವುದುದಿಲ್ಲ ಎಂಬುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸ್ಪಷ್ಟ ಪಡಿಸಿದ್ದಾರೆ. https://twitter.com/CPBlr/status/1763857025740755029 https://kannadanewsnow.com/kannada/good-news-for-job-seekers-bmtc-invites-applications-for-2500-vacancies/ https://kannadanewsnow.com/kannada/cafe-blast-case-one-injured-recovers-discharged-from-hospital/ https://kannadanewsnow.com/kannada/naukri-99acres-apps-back-on-google-play-store-as-government-intervenes/
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಘಟನೆಯಲ್ಲಿ ಗಾಯಗೊಂಡಿದ್ದಂತ ಓರ್ವ ಗಾಯಾಳು ಗುಣಮುಖರಾಗಿದ್ದು, ಅವರನ್ನು ಇಂದು ಬ್ರೂಕ್ ಫೀಲ್ಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ವೈದ್ಯ ಡಾ.ಪ್ರದೀಪ್ ಕುಮಾರ್ ಅವರು, ಈಗ ಸದ್ಯಕ್ಕೆ ಮೂರು ಜರ ಆಸ್ಪತ್ರೆಯಲ್ಲಿ ಅಡ್ಮಿಟ್ ಗಿದ್ದರು. ಒಂದು ಪೇಷೆಂಟ್ ಗುಣಮುಖರಾಗಿ ಮನೆಗೆ ಹೋಗುತ್ತಿದ್ದಾರೆ. 23 ವರ್ಷದ ದೀಪಾಂಶು ಆಗಿದ್ದಾರೆ. ಅವರು 2 ಕಿವಿಗೆ ಪ್ರಾಬ್ಲಂ ಆಗಿ ಬಂದಿದ್ದರು ಎಂದರು. ದೀಪಾಂಶು ಅವರನ್ನು ಕಿವಿಯ ಪರದೆ ಒಡೆದಿರೋ ಬಗ್ಗೆ ಪರಿಶೀಲನೆಯನ್ನು ನಡೆಸಿದರು. ಅವರ ಕಿವಿಗೆ ಹಾನಿಯಾಗಿರೋ ಬಗ್ಗೆ ಚಿಕಿತ್ಸೆ ನೀಡಲಾಗಿದೆ. ಎಲ್ಲಾ ಹಂತದಲ್ಲೂ ಪರೀಕ್ಷೆ ನಡೆಸಿ, ದೀಪಾಂಶು ಆರೋಗ್ಯದಲ್ಲಿ ಚೇತರಿಕೆ ಕಂಡಬಂದ ಕಾರಣ, ಅವರನ್ನು ಡಿಸ್ಚಾರ್ಜ್ ಮಾಡುತ್ತಿರೋದಾಗಿ ತಿಳಿಸಿದರು. ಇನ್ನೂ ದೀಪಾಂಶು ಮಾತನಾಡಿ ನನ್ನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವೈದ್ಯರು ಎಲ್ಲಾ ಪರೀಕ್ಷೆ ನಡೆಸಿದ್ದಾರೆ. ನಾನು ಸೈಕ್ಯಾಟ್ರಿಸ್ಟ್ ಅನ್ನು ಸಂಪರ್ಕಿಸಿ ಸಲಹೆ ಪಡೆದಿದ್ದೇನೆ. ಇದೀಗ ಗುಣಮುಖರಾಗಿರುವ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳುತ್ತಿರೋದಾಗಿ…
ಬೆಂಗಳೂರು: ನಿನ್ನೆ ಮಧ್ಯಾಹ್ನ ಬೆಂಗಳೂರಿನ ಕುಂದಲಹಳ್ಳಿ ಬಳಿಯಿರುವಂತ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡಿತ್ತು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯಲ್ಲಿ ಸಿಲುಕಿ ಗಾಯಗೊಳ್ಳಬೇಕಿದ್ದಂತ ಆ ಯುವಕನ ಜೀವವನ್ನು ಅಮ್ಮನ ಆ ಒಂದು ಪೋನ್ ಕರೆ ಉಳಿಸಿದೆ. ಈ ಕುರಿತಂತೆ ಯುವಕ ಕುಮಾರ್ ಎಂಬಾತ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ನನ್ನನ್ನು ನಿನ್ನೆ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ನಲ್ಲಿ ಸಿಲುಕಿ ಗಾಯಗೊಳ್ಳಬೇಕಾಗಿದ್ದನ್ನು ಅಮ್ಮನ ಕರೆ ಕಾಯಿತು ಎಂದಿದ್ದಾನೆ. ರಾಮೇಶ್ವರಂ ಕೆಫೆಗೆ ನಿನ್ನೆ ತಿನ್ನೋಕೆ ಹೋಗಿದ್ದೆನು. ದೋಸೆ ತೆಗೆದುಕೊಂಡು ತಿನ್ನೋಕೆ ಕುಳಿತೆ. ದೋಸೆ ತಿನ್ನುತ್ತಿದ್ದಾಗ ಅಮ್ಮನ ಪೋನ್ ಬಂತು. ಕೆಫೆಯಲ್ಲಿ ಜನರ ಸದ್ಧಿನಿಂದ ಸರಿಯಾಗಿ ಕೇಳಿಸದ ಕಾರಣ, ಅಮ್ಮನ ಜೊತೆಗೆ ಮಾತನಾಡೋಕೆ ಆಚೆ ಬಂದೆ ಎಂದಿದ್ದಾನೆ. ನಾನು ರಾಮೇಶ್ವರಂ ಕೆಫೆಯಿಂದ 10 ಮೀಟರ್ ದೂರ ಅಮ್ಮನ ಜೊತೆಗೆ ಮಾತನಾಡೋದಕ್ಕೆ ದೋಸೆ ತಿನ್ನೋದು ಬಿಟ್ಟು ಸಾಗುತ್ತಿದ್ದಂತೇ ಬ್ಲಾಸ್ಟ್ ಆಯಿತು. ಅದೃಷ್ಠ ವಶಾತ್ ಅಮ್ಮನ ಪೋನ್ ಕರೆಯ ಕಾರಣದಿಂದ ನಾನು…
ನವದೆಹಲಿ: ತಂತ್ರಜ್ಞಾನ ದೈತ್ಯ ಗೂಗಲ್ ತನ್ನ ಪ್ಲೇ ಸ್ಟೋರ್ನಿಂದ ಪಟ್ಟಿಯಿಂದ ತೆಗೆದುಹಾಕಿದ್ದ ಕೆಲವು ಭಾರತೀಯ ಅಪ್ಲಿಕೇಶನ್ಗಳನ್ನು ಮರುಸ್ಥಾಪಿಸಿದೆ. ಅದರಲ್ಲೂ ನೌಕರಿ, 99 ಎಕರೆ ಆಪ್ ಗಳನ್ನು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಮರು ಸೇರ್ಪಡೆ ಮಾಡಲಾಗಿದೆ. ಕೆಲವು ಅಪ್ಲಿಕೇಶನ್ ಗಳನ್ನು ಪಟ್ಟಿಯಿಂದ ತೆಗೆದುಹಾಕುವ ಗೂಗಲ್ ಕ್ರಮವನ್ನು ಸರ್ಕಾರ ಬಲವಾಗಿ ವಿರೋಧಿಸುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಗೂಗಲ್ ಕೆಲವು ಅಪ್ಲಿಕೇಶನ್ ಗಳನ್ನು ಪ್ಲೇ ಸ್ಟೋರ್ ನಿಂದ ಪಟ್ಟಿಯಿಂದ ತೆಗೆದುಹಾಕಿರುವ ಬಗ್ಗೆ ಸರ್ಕಾರ ಬಲವಾದ ದೃಷ್ಟಿಕೋನವನ್ನು ಹೊಂದಿದೆ. ಅಪ್ಲಿಕೇಶನ್ಗಳನ್ನು ಪಟ್ಟಿಯಿಂದ ತೆಗೆದುಹಾಕಲು ನಾವು ಅನುಮತಿಸುವುದಿಲ್ಲ ಎಂದು ಅವರು ಹೇಳಿದರು. https://twitter.com/sbikh/status/1763845405622796363 ಮಧ್ಯಪ್ರವೇಶದ ನಂತರ, ಗೂಗಲ್ ಇನ್ಫೋ ಎಡ್ಜ್ ಇಂಡಿಯಾದ ಕೆಲವು ಪ್ರಮುಖ ಅಪ್ಲಿಕೇಶನ್ಗಳಾದ ನೌಕ್ರಿ, 99 ಎಕರೆ, ನೌಕ್ರಿ ಗಲ್ಫ್ ಅನ್ನು ಪುನಃಸ್ಥಾಪಿಸಿದೆ. ಸರ್ಕಾರದ ಮಧ್ಯಪ್ರವೇಶದ ನಂತರ ಪೀಪಲ್ ಗ್ರೂಪ್ನ ವೈವಾಹಿಕ ಅಪ್ಲಿಕೇಶನ್ ಶಾದಿ ಕೂಡ ಶನಿವಾರ ಮಧ್ಯಾಹ್ನ ಪ್ಲೇ ಸ್ಟೋರ್ಗೆ ಮರಳಿತು. ಪಟ್ಟಿಯಿಂದ ತೆಗೆದುಹಾಕಲಾದ…
ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ. ನಿನ್ನೆ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿರುವಂತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆಯನ್ನು ಗೃಹ ಇಲಾಖೆಯ ಅಧಿಕಾರಿಗಳ ಜೊತೆಗೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ಪೊಲೀಸ್ ಅಧಿಕಾರಿಗಳು ಭಾಗಿಯಾಗಿರೋದಾಗಿ ತಿಳಿದು ಬಂದಿದೆ. ಕಾವೇರಿ ನಿವಾಸದಲ್ಲಿನ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಸಿಎಂ ಸಿದ್ಧರಾಮಯ್ಯ ಪಡೆಯುತ್ತಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-job-seekers-bmtc-invites-applications-for-2500-vacancies/ https://kannadanewsnow.com/kannada/google-play-stores-gatepass-for-indian-apps-governments-first-reaction/
ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2024-25 ನೇ ಸಾಲಿನಲ್ಲಿ ರೈತರ ಮಕ್ಕಳಿಗಾಗಿ ನಡೆಸುವ 10 ತಿಂಗಳ ತರಬೇತಿಯನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದು, ಶಿವಮೊಗ್ಗ ಜಿಲ್ಲೆಯ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಗಳನ್ನು ತೋಟಗಾರಿಕೆ ಇಲಾಖೆಯ ವೆಬ್ ಸೈಟ್ https://horticulturedir.karnataka.gov.in ನಿಂದ ಡೌನ್ಲೋಡ್ ಮಾಡಿಕೊಂಡು ಅಥವಾ ಶಿವಮೊಗ್ಗ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಶಿವಮೊಗ್ಗ ಕಛೇರಿಯಿಂದ ಅಥವಾ ಆಯಾ ತಾಲೂಕಿನ ತೋಟಗಾರಿಕೆ ಕಛೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಏ.01 ರೊಳಗಾಗಿ ಆಯಾ ಸಂಬಂಧ ಪಟ್ಟ ಕಛೇರಿಗಳಿಗೆ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ತರಬೇತಿಗೆ ಅರ್ಹತೆಗಳು ಎಸ್.ಎಸ್.ಎಲ್.ಸಿಯಲ್ಲಿ ಉತ್ತಿರ್ಣರಾಗಿರಬೇಕು ಹಾಗೂ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು. ಹೆಚ್ಚಿನ ವಿವರಗಳಿಗೆ ದೂ. ಸಂ.: 08182-222794/6986950460 ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ ಶಿವಮೊಗ್ಗ…
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣ ಸಂಬಂಧ ಶಂಕಿತ ಆರೋಪಿಯು ಬಿಎಂಟಿಸಿಯ ವೋಲ್ವೋ ಬಸ್ಸಿನಲ್ಲಿ ಪ್ರಯಾಣಿಸಿದಂತ ಆತಂಕಕಾರಿ ಮಾಹಿತಿ ಬಹಿರಂಗಗೊಂಡಿದೆ. ಆತನ ಎಲ್ಲಿಂದ ಎಲ್ಲಿಗೆ ಪ್ರಯಾಣಿಸಿದ ಅನ್ನೋ ಮಾಹಿತಿ ಮುಂದೆ ಓದಿ. ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಕಕ್ಕೂ ಮುನ್ನಾ, ಶಂಕಿತ ಆರೋಪಿ ಬಿಎಂಟಿಸಿಯ ವೋಲ್ವೋ ಬಸ್ಸಿನಲ್ಲಿ ಪ್ರಯಾಣ ಮಾಡಿರೋ ಮಾಹಿತಿ ಬಹಿರಂಗವಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಬೆಂಗಳೂರಿನ ಡಿಪೋ-3ರಕ್ಕೆ ಸೇರಿದಂತ ಕೆಎ-57, ಎಫ್-186 ಬಸ್ಸಿನಲ್ಲಿ ಶಂಕಿತ ಆರೋಪಿ ರೂಟ್ ನಂ.500ಸಿ ನಲ್ಲಿ ಪ್ರಯಾಣಿಸಿದ್ದಾನೆ. ಬನಶಂಕರಿಯಿಂದ ಐಟಿಪಿಎಲ್ ಮಾರ್ಗದ ನಡುವೆ ಸಂಚರಿಸುವಂತ ಈ ಬಸ್ ಸಿಲ್ಕ್ ಬೋರ್ಡ್ ಮೂಲಕ ಕೂಡ ಸಂಚರಿಸುತ್ತೆ. ಇಂತಹ ಬಿಎಂಟಿಸಿ ವೋಲ್ವೋ ಬಸ್ಸನ್ನು ಶಂಕಿತ ಬಾಂಬ್ ಬ್ಲಾಸ್ಟ್ ಆರೋಪಿ ಕುಂದಲಹಳ್ಳಿ ಬಸ್ ನಿಲ್ದಾಣದಲ್ಲಿ ಹತ್ತಿರೋ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಕುಂದಲಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ, ಸಿಎಂಆರ್ ಐಟಿ ಕಾಲೇಜಿನ ಬಳಿ ಇಳಿದಿರೋ ಮಾಹಿತಿಯನ್ನು ಬಸ್ ಚಾಲಕ, ಕಂಡಕ್ಟರ್ ಮೂಲಕ ಮಾಹಿತಿ…