Author: kannadanewsnow09

ಬೆಳಗಾವಿ: ರೈಲಿನಲ್ಲಿ ಟಿಸಿಯೊಬ್ಬರು ಟಿಕೆಟ್ ತೋರಿಸು ಎಂದಿದ್ದಕ್ಕೆ ಮುಸುಕುಧಾರಿ ಸೇರಿದಂತೆ ನಾಲ್ವರಿಂದ ಚಾಕುವಿನಿಂದ ರೈಲ್ವೆ ಅಟೆಂಡರ್ ಒಬ್ಬರ ಮೇಲೆ ಇರಿದ ಪರಿಣಾಮ, ತೀವ್ರ ರಕ್ತಸ್ತ್ರಾವದಿಂದ ಸಾವನ್ನಪ್ಪಿರೋ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾದ ಬಳಿಯಲ್ಲಿ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನಲ್ಲಿ ಟಿಸಿ ಪ್ರಯಾಣಿಕರ ಟಿಕೆಟ್ ಚೆಕ್ ಮಾಡಿದ್ದಾರೆ. ಈ ವೇಳೆಯಲ್ಲಿ ಮುಸುಕುಧಾರಿ ಸೇರಿದಂತೆ ನಾಲ್ವರನ್ನು ಟಿಕೆಟ್ ಎಲ್ಲಿ ಅಂತ ಕೇಳಿದ್ದಾರೆ. ಅದಕ್ಕೆ ಸಿಟ್ಟಿಗೆದ್ದಂತ ನಾಲ್ವರಿಂದ ಟಿಸಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆಯಲ್ಲಿ ರಕ್ಷಣೆಗಾಗಿ ಕೋಚ್ ಅಟೆಂಡರ್ ಧಾವಿಸಿದ್ದಾರೆ. ಈ ಸಂದರ್ಭದಲ್ಲಿ ಮುಸುಕುಧಾರಿಯೊಬ್ಬ ಚಾಕುವಿನಿಂದ ಕೋಚ್ ಅಡೆಂಡರ್ ಮೇಲೆ ದಾಳಿ ನಡೆಸಿದ್ದಾನೆ. ಈ ದಾಳಿಯಲ್ಲಿ ತೀವ್ರವಾಗಿ ರಕ್ತಸ್ತ್ರಾವದೊಂದಿಗೆ ಚಿಕಿತ್ಸೆ ಫಲಿಸದೇ ಕೋಚ್ ಅಟೆಂಡರ್ ದೇವಋಷಿ ವರ್ಮ(23) ಎಂಬಾತ ಸಾವನ್ನಪ್ಪಿದ್ದಾರೆ. ಈ ಚಾಕು ಇರಿತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪಾಂಡಿಚೇರಿ ಯಿಂದ ಮುಂಬಯಿ ಮಾರ್ಗವಾಗಿ ಚಲಿಸುತ್ತಿದ್ದ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲಿನ ಎಸ್ 8…

Read More

ಬೆಳಗಾವಿ: ಹಾಸನ ಜಿಲ್ಲೆ ಆಲೂರು ಬಳಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ರಜಾ ದಿನಗಳಲ್ಲಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ನೀಡುವಂತೆ ಪಾಲಕರಲ್ಲಿ ಮನವಿ ಮಾಡಿದ್ದಾರೆ. ರಜೆಯ ದಿನಗಳಲ್ಲಿ ವಿವಿಧ ರೀತಿಯ ದುರಂತಗಳಲ್ಲಿ ಮಕ್ಕಳ ಸಾವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರತಿಯೊಬ್ಬರ ಜೀವ ಅತ್ಯಂತ ಅಮೂಲ್ಯವಾದದ್ದು. ಹಾಗಾಗಿ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಬಾರದು. ಪಾಲಕರು ಸದಾ ಮಕ್ಕಳ ಚಟುವಟಿಕೆಗಳನ್ನು ಗಮನಿಸುತ್ತಿರಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ. ಮಕ್ಕಳು ರಜಾ ಸಂದರ್ಭದಲ್ಲಿ ನೀರಿನಲ್ಲಿ ಆಟವಾಡಲು ತೆರಳುತ್ತಾರೆ. ಈ ವೇಳೆ ಸುರಕ್ಷಿತ ಜಾಗವನ್ನು ಆಯ್ಕೆ ಮಾಡಿಕೊಳ್ಳಬೇಕು. ಜೊತೆಗೆ ಪಾಲಕರೊಬ್ಬರು ಜೊತೆಯಲ್ಲಿರಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಾಲನೆಯಿಂದ ದೂರವಿರಬೇಕು. ಇತರರು ಕೂಡ ಎಚ್ಚರಿಕೆಯಿಂದ ವಾಹನ ಓಡಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಪಾಲಕರು ತಿಳಿ ಹೇಳಬೇಕು. ಯಾವುದೇ ರೀತಿಯ ಚಟುವಟಿಕೆ ಸಂದರ್ಭದಲ್ಲಿ…

Read More

ಬೆಂಗಳೂರು: ನೈರುತ್ಯ ರೈಲ್ವೆಯಿಂದ ವಿವಿಧ ಕಾರಣಗಳಿಂದಾಗಿ ಕೆಲ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂಬುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ರೈಲುಗಳ ಸಂಚಾರ ಭಾಗಶಃ ರದ್ದು ರತ್ಲಾಮ್ ವಿಭಾಗದ ರಾವು ಮತ್ತು ಡಾ. ಅಂಬೇಡ್ಕರ್ ನಗರ ನಿಲ್ದಾಣಗಳ ನಡುವೆ ಜೋಡಿ ಮಾರ್ಗ ಕಾಮಗಾರಿ ಕೈಗೊಳ್ಳುವುದರಿಂದ ಈ ಕೆಳಗಿನ ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಪಶ್ಚಿಮ ರೈಲ್ವೆ ವಲಯವು ಸೂಚಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ: ಮೇ 21 ಮತ್ತು 28 ರಂದು ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 19302 ಯಶವಂತಪುರ-ಡಾ. ಅಂಬೇಡ್ಕರ್ ನಗರ ವೀಕ್ಲಿ ಎಕ್ಸ್ ಪ್ರೆಸ್ ರೈಲು ಇಂದೋರ್-ಡಾ.ಅಂಬೇಡ್ಕರ್ ನಗರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಡಾ.ಅಂಬೇಡ್ಕರ್ ನಗರದ ಬದಲು ಇಂದೋರ್ ಜಂಕ್ಷನ್ ನಲ್ಲಿ ಕೊನೆಗೊಳ್ಳುತ್ತದೆ. ಮೇ 19 ಮತ್ತು 26 ರಂದು ರೈಲು ಸಂಖ್ಯೆ 19301 ಡಾ.ಅಂಬೇಡ್ಕರ್ ನಗರ-ಯಶವಂತಪುರ ವೀಕ್ಲಿ ಎಕ್ಸ್ ಪ್ರೆಸ್ ರೈಲು ಡಾ. ಅಂಬೇಡ್ಕರ್ ನಗರ ನಿಲ್ದಾಣದ ಬದಲು ಇಂದೋರ್ ನಿಲ್ದಾಣದಿಂದ ಪ್ರಾರಂಭವಾಲಿದೆ.…

Read More

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬಂದಿರುವ ಬರ ಪರಿಹಾರ ಹಣವನ್ನು ಅದೇ ರೈತರ ಸಾಲಕ್ಕೆ ಜಮೆ ಮಾಡಿಕೊಂಡಿರುವ ಬ್ಯಾಂಕ್ ಗಳ ವರ್ತನೆ ಕ್ರೂರಾತಿ ಕ್ರೂರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖತೆಯಲ್ಲಿ ಪೋಸ್ಟ್ ಮಾಡಿರುವ ಅವರು; ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ ಎಂದು ಕಿಡಿಕಾರಿದ್ದಾರೆ. ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆ ನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ರಾಜ್ಯ ಸರಕಾರ ಕೂಡಲೇ ಸಾಲ…

Read More

ಶಿವಮೊಗ್ಗ: ಡೆಂಗೀ ಸೋಂಕು ಹರಡುವ ಸೊಳ್ಳೆಗಳ ನಿಯಂತ್ರಣ ಮತ್ತು ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವ ಮೂಲಕ ಡೆಂಗೀ ರೋಗವನ್ನು ತಡೆಗಟ್ಟೋಣ ಎಂದು ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಜಿಲ್ಲಾ ಒಕ್ಕಲಿಗರ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಶಿವಮೊಗ್ಗ ಇವರ ಸಹಯೋಗದೊಂದಿಗೆ ಇಂದು ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಡೆಂಗೀ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಡೆಂಗೀ ಜ್ವರ ತೀವ್ರ ಸ್ಥಿತಿ ತಲುಪಿದರೆ ಗಂಭೀರವಾಗುವ ಸಂಭವ ಹೆಚ್ಚಿರುತ್ತದೆ. ಉತ್ತರ ಭಾರತದ ದೊಡ್ಡ ದೊಡ್ಡ ನಗರಗಳಲ್ಲಿ ಡೆಂಗೀ ಜ್ವರಕ್ಕೆ ಅನೇಕ ಬಡವರು ತುತ್ತಾಗಿರುವುದನ್ನು ಕಾಣಬಹುದು. ಆದ್ದರಿಂದ ಈ ಸೋಂಕನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನಿಯಂತ್ರಣಾ ಕ್ರಮಗಳನ್ನು ಅಳವಡಿಸಕೊಂಡು ಇದನ್ನು ತಡೆಗಟ್ಟಬೇಕು. ಡೆಂಗೀ ಮತ್ತು ಇತರೆ…

Read More

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರ ಬಂದ ಬಳಿಕ, ಈಗ ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವಂತ ಲೈಂಗಿಕ ದೌರ್ಜನ್ಯ ಆರೋಪದ ಕೇಸ್ ಎದುರಿಸುತ್ತಿದ್ದಾರೆ. ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಅಂತಿಮವಾಗಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.  ಇಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಈ ಪ್ರಕರಣದಲ್ಲಿ ಜಾಮೀನು ನೀಡದಂತೆ ಎಸ್ಐಟಿ ಪರ ಎಸ್ ಪಿಪಿ ಆಕ್ಷೇಪಿಸಿದರು. ಎಸ್ಐಟಿ ಎಸ್ ಪಿಪಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಇಂದು ಬೆಳಿಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೆರೆಂಡರ್ ಆಗಿದ್ದಾರೆ. ಒಮ್ಮೆ ಸೆರೆಂಡರ್ ಆದ ಮೇಲೆ ಕಸ್ಟಡಿಗೆ ಪಡೆಯಬೇಕು. ರಾಜಕಾರಣಿಯಾದ ಮಾತ್ರಕ್ಕೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕರನ್ನಾಗಿ ಐಎಎಸ್ ಅಧಿಕಾರಿ ಪ್ರಸನ್ನ ಹೆಚ್ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, 2017ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಪ್ರಸನ್ನ.ಹೆಚ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೂತನ ಕಾರ್ಯ ನಿರ್ವಾಹಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಇನ್ನೂ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದಂತ ಐಎಎಸ್ ಅಧಿಕಾರಿ ರಮ್ಯಾ ಎಸ್ ಅವರನ್ನು ಈ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ. https://kannadanewsnow.com/kannada/do-you-need-shakti-smart-card-for-free-movement-in-transport-buses-heres-the-real-truth-of-the-viral-news/ https://kannadanewsnow.com/kannada/last-date-to-update-aadhaar-card-today-get-it-updated-in-this-simple-way/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಸಾರಿಗೆ ಬಸ್ಸುಗಳಲ್ಲಿ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತವಾಗಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಸುಗಳಲ್ಲಿ ಸಂಚರಿಸೋದಕ್ಕಾಗಿ ದಾಖಲೆಯಾಗಿ ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ತೋರಿಸಬೇಕು. ಆದ್ರೇ ಇನ್ಮುಂದೆ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಮಹಿಳೆಯರು ಸಂಚರಿಸೋದಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಬೇಕು ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿತ್ತು. ಆ ವೈರಲ್ ಸುದ್ದಿಯ ಅಸಲಿ ಸತ್ಯ ಏನು ಅಂತ ಮುಂದೆ ಓದಿ. ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಕಾಂಗ್ರೆಸ್ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅದರಲ್ಲಿ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸೋದಕ್ಕೆ ಅವಕಾಶ ಮಾಡಿ ಕೊಡುವಂತ ಶಕ್ತಿ ಯೋಜನೆಯೂ ಒಂದಾಗಿದೆ. ಆರಂಭದಲ್ಲಿ ಇದಕ್ಕಾಗಿ ಮಹಿಳೆಯರು ಶಕ್ತಿ ಸ್ಮಾರ್ಟ್ ಕಾರ್ಡ್ ಪರಿಚಯಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದ್ರೇ ಈವರೆಗೆ ಅದನ್ನು ಜಾರಿಗೊಳಿಸಿಲ್ಲ. ಇದರ ನಡುವೆ ಮಹಿಳೆಯರು ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸೋದಕ್ಕೆ ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್ ಸೇರಿದಂತೆ…

Read More

ನವದೆಹಲಿ: ರಾಷ್ಟ್ರ ರಾಜಧಾನಿಯ ಪಂಡಿತ್ ಪಂತ್ ಮಾರ್ಗದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಎಎನ್ಐ ವರದಿಯ ಪ್ರಕಾರ, ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾವೆ. https://twitter.com/ANI/status/1791061128057156016 ಶಾರ್ಟ್ ಸರ್ಕ್ಯೂಟ್ ನಿಂದಾಗಿ ದೆಹಲಿ ಬಿಜೆಪಿ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಸಣ್ಣದು ಎಂದು ಹೇಳಲಾಗಿದೆ. ಘಟನೆಯ ನಂತರ, ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ. ಬೆಂಕಿ ನಂದಿಸೋ ಕಾರ್ಯ ಪ್ರಗತಿಯಲ್ಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/last-date-to-update-aadhaar-card-today-get-it-updated-in-this-simple-way/ https://kannadanewsnow.com/kannada/sex-determination-of-foetus-punishable-3-year-jail-term-fine-up-to-rs-10000-for-violation/

Read More

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಜೂನ್.1ರಿಂದ 4ರವರೆಗೆ ಹಾಗೂ ಜೂನ್.6ರಂದು ಮದ್ಯ ಮಾರಾಟವನ್ನು ನಿಷೇಧ ಮಾಡಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಇಂದು ಆದೇಶ ಹೊರಡಿಸಿರುವಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು, ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ಘೋಷಣೆಯಾಗಿದೆ. ಈ ಚುನಾವಣೆಯು ಮುಕ್ತವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಯಲು ಕ್ರಮವಹಿಸಲಾಗಿದೆ ಎಂದಿದ್ದಾರೆ. ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮತದಾನ ಮುಗಿಯುವ ಅವಧಿಯ ಹಿಂದಿನ 48 ಗಂಟೆಗಳು ಮತ್ತು ಮತ ಏಣಿಕೆಯ ದಿನದಂದು ಶುಷ್ಕ ದಿನ ಎಂದು ಘೋಷಿಸುವಂತೆ ಚುನಾವಣಾಧಿಕಾರಿಗಳು ಕೋರಿರುತ್ತಾರೆ ಎಂದು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ದಿನಾಂಕ 01-06-2024ರ ಸಂಜೆ 4 ಗಂಟೆಯಿಂದ ದಿನಾಂಕ 03-06-2024ರ ಸಂಜೆ 4 ಗಂಟೆಯವರೆಗೆ ಹಾಗೂ ಮತ ಏಣಿಕೆಯ ದಿನಾಂಕ 06-06-2024ರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಯಾವುದೇ…

Read More