Subscribe to Updates
Get the latest creative news from FooBar about art, design and business.
Author: kannadanewsnow09
ದುಬೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಮಂಗಳವಾರ ಅಬುಧಾಬಿಯಲ್ಲಿ ಯುಪಿಐ ರುಪೇ ಕಾರ್ಡ್ ಸೇವೆಯನ್ನು ಪರಿಚಯಿಸಿದರು. ಅಬುಧಾಬಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಅವರು ಆಗಮಿಸಿದಾಗ, ಯುಎಇ ಅಧ್ಯಕ್ಷರು ಅವರನ್ನು ಸ್ವಾಗತಿಸಿದರು ಮತ್ತು ಗಾರ್ಡ್ ಆಫ್ ಹಾನರ್ ನೀಡಲಾಯಿತು. https://twitter.com/ANI/status/1757368963405647882 ಈಗಾಗಲೇ ಶ್ರೀಲಂಕಾ, ಮಾರೀಷ್ ನಲ್ಲಿಯೂ ಯುಪಿಐ ಪಾವತಿ ಸೇವೆಯನ್ನು ಭಾರತ ಆರಂಭಿಸಿದೆ. ಈಗ ಮುಂದುವರೆದು ಅಬುದಾಬಿಯಲ್ಲಿಯೂ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡುವ ಮೂಲಕ ಪ್ರಾರಂಭಿಸಲಾಗಿದೆ. https://kannadanewsnow.com/kannada/launch-of-upi-a-milestone-in-existing-strong-bilateral-ties-mauritius-envoy/ https://kannadanewsnow.com/kannada/major-surgery-from-state-government-to-administrative-machinery-11-dysp-51-pi-transferred/
ಬೆಂಗಳೂರು: ಸರ್ಕಾರ ಗ್ರಾಮ ಪಂಚಾಯತಿಗಳನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಬಲಿಷ್ಠಗೊಳಿಸುವ ಸಂಕಲ್ಪ ಮಾಡಿದ್ದು, ಗ್ರಾಮ ಪಂಚಾಯತಿ ಸದಸ್ಯರು ಸರ್ಕಾರದ ಜೊತೆ ಕೈ ಜೋಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬೇಡಿಕೆಗಳನ್ನು ಆಲಿಸಿ ವಿಸೃತವಾಗಿ ಚರ್ಚಿಸಿದ ನಂತರ ಒಕ್ಕೂಟ ನೀಡಿರುವ ಬೇಡಿಕೆಗಳನ್ನು ಪರಿಶೀಲಿಸಿ ಸಾಧ್ಯವಾಗಬಲ್ಲ ಬೇಡಿಕೆಗಳನ್ನು ಕಾರ್ಯಗತಗೊಳಿಸಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯತಿಗಳು ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸುವಂತೆ ಜವಾಬ್ದಾರಿ ನಕ್ಷೆಯಲ್ಲಿರುವ ರೀತಿಯಲ್ಲಿ ಅಧಿಕಾರ, ಹಣಕಾಸು, ಮಾನವ ಸಂಪನ್ಮೂಲ ಹಾಗೂ ಜವಾಬ್ದಾರಿ ನಿರ್ವಹಿಸುವ ಸ್ವಾತಂತ್ರ್ಯವನ್ನು ಪಂಚಾಯತಿಗಳಿಗೆ ವರ್ಗಾಯಿಸುವ ಬಗ್ಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಎಂ.ಚಲಪತಿ ಮತ್ತು ಪದಾಧಿಕಾರಿಗಳಿಗೆ ತಿಳಿಸಿದರು ಗ್ರಾಮಸಭೆಗಳು ಸದೃಢವಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡುವುದು, ಬಾಪೂಜಿ ಸೇವಾ ಕೇಂದ್ರಗಳನ್ನು ಸಶಕ್ತಗೊಳಿಸುವುದು, ಗ್ರಾಮ…
ನವದೆಹಲಿ: ಪ್ರಧಾನಿ ಮೋದಿಯವರ “ಮೋದಿ ಕಿ ಗ್ಯಾರಂಟಿಗಳಿಗೆ” ಪ್ರತಿಕ್ರಿಯೆಯಾಗಿ, ಕಾಂಗ್ರೆಸ್ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಗೆದ್ದರೆ ರೈತರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಕಾನೂನು ಭರವಸೆ ಸೇರಿದಂತೆ ಹಲವಾರು “ಕಾಂಗ್ರೆಸ್ ಕಿ ಗ್ಯಾರಂಟಿಗಳನ್ನು” ಘೋಷಿಸಿತು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ದೆಹಲಿಯತ್ತ ನಡೆಯುತ್ತಿರುವ ರೈತರ ಮೆರವಣಿಗೆಯನ್ನುದ್ದೇಶಿಸಿ ಮಾತನಾಡುತ್ತಾ, ಅವರು ರೈತರ ಪ್ರತಿಭಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಎಂಎಸ್ಪಿಗೆ ಕಾನೂನು ಹಕ್ಕುಗಳನ್ನು ಶಿಫಾರಸು ಮಾಡುವ ಎಂಎಸ್ ಸ್ವಾಮಿನಾಥನ್ ವರದಿಯ ಅನುಷ್ಠಾನದ ಬೇಡಿಕೆಯನ್ನು ಒತ್ತಿ ಹೇಳಿದರು. “ಐಎನ್ಡಿಐಎ ಸರ್ಕಾರ ಅಧಿಕಾರಕ್ಕೆ ಬಂದಾಗ, ಸ್ವಾಮಿನಾಥನ್ ವರದಿಯಲ್ಲಿ ಉಲ್ಲೇಖಿಸಿದ್ದನ್ನು ಪೂರೈಸುವ ಮೂಲಕ ನಾವು ಭಾರತದ ರೈತರಿಗೆ ಎಂಎಸ್ಪಿಯ ಖಾತರಿಯನ್ನು ನೀಡುತ್ತೇವೆ” ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದರು. https://twitter.com/ANI/status/1757357239436800104 ಛತ್ತೀಸ್ಗಢದ ಅಂಬಿಕಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಖರ್ಗೆ, “ನಾವು ಅದನ್ನು ಕಾಂಗ್ರೆಸ್ ಗ್ಯಾರಂಟಿ ಎಂದು ಕರೆಯುತ್ತೇವೆ, ಆದರೆ ಅವರು ಮೋದಿ ಗ್ಯಾರಂಟಿ ಎಂದು ಹೇಳುತ್ತಾರೆ. ಇಷ್ಟೊಂದು ಅಹಂಕಾರದಿಂದ ಅವರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿದ್ದಾರೆಯೇ…
ಚನ್ನರಾಯಪಟ್ಟಣ: ನಗರದ ಬೈರಾಪಟ್ಟಣ ಗ್ರಾಮದಲ್ಲಿ ಸರ್ಕಾರದಿಂದ ನೀಡಲಾಗುತ್ತಿದ್ದಂತ ಚುಚ್ಚುಮದ್ದು ಪಡೆದಂತ ಒಂದೇ ಗಂಟೆಯಲ್ಲಿ ಗಂಡು ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಗ್ರಾಮದಲ್ಲಿ ಸ್ಪೂರ್ತಿ ಹಾಗೂ ಮೋಹನ್ ಎಂಬುವರ ದಂಪತಿಯ ಒಂದೂವರೆ ತಿಂಗಳ ಮಗುವನ್ನು ಜಸ್ಟಿಂಕ್ ಪೆಂಟಾ ಎಂಬಂತ ವ್ಯಾಕ್ಸಿನ್ ಕೊಡಿಸೋದಕ್ಕೆ ಕರೆದೊಯ್ಯಲಾಗಿತ್ತು. ಸರ್ಕಾರಿ ಆಸ್ಪತ್ರೆಗೆ ತೆರಳಿ ಜಸ್ಟಿಂಕ್ ಪೆಂಟಾ ವ್ಯಾಕ್ಸಿನ್ ಪಡೆದು ಮನೆಗೆ ಮರಳಿದಾಗ, ಮನೆಗೆ ಮಗು ಮರಳಿದಂತ ಒಂದೇ ಗಂಟೆಯಲ್ಲಿ ಮಗು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಒಂದು ತಿಂಗಳ ಗಂಡು ಮಗು ವ್ಯಾಕ್ಸಿನ್ ಪಡೆದ ನಂತ್ರ ಸಾವನ್ಪಪ್ಪಿದ್ದರಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/congress-has-decided-to-give-legal-guarantee-of-msp-on-crops-to-farmers-rahul-gandhi/ https://kannadanewsnow.com/kannada/major-surgery-from-state-government-to-administrative-machinery-11-dysp-51-pi-transferred/
ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಪಕ್ಷದಿಂದ ಜನತೆಗೆ ಗ್ಯಾರಂಟಿ ಯೋಜನೆಯೊಂದನ್ನು ಘೋಷಣೆ ಮಾಡಲಾಗಿದೆ. ಅದೇ ರೈತರಿಗೆ ಬೆಳೆಗಳ ಮೇಲೆ ಎಂಎಸ್ಪಿಯ ಕಾನೂನು ಖಾತರಿ ನೀಡಲು ಕಾಂಗ್ರೆಸ್ ನಿರ್ಧರಿಸಿರೋದು ಆಗಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು, ರೈತ ಸಹೋದರರೇ, ಇಂದು ಐತಿಹಾಸಿಕ ದಿನ! ಸ್ವಾಮಿನಾಥನ್ ಆಯೋಗದ ಪ್ರಕಾರ ಪ್ರತಿಯೊಬ್ಬ ರೈತರಿಗೆ ಬೆಳೆಗಳ ಮೇಲೆ ಎಂಎಸ್ಪಿಯ ಕಾನೂನು ಖಾತರಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕ್ರಮವು 15 ಕೋಟಿ ರೈತ ಕುಟುಂಬಗಳ ಸಮೃದ್ಧಿಯನ್ನು ಖಚಿತಪಡಿಸುವ ಮೂಲಕ ಅವರ ಜೀವನವನ್ನು ಬದಲಾಯಿಸುತ್ತದೆ. ಇದು ನ್ಯಾಯದ ಹಾದಿಯಲ್ಲಿ ಕಾಂಗ್ರೆಸ್ ನ ಮೊದಲ ಖಾತರಿಯಾಗಿದೆ ಎಂದು ಹೇಳಿದ್ದಾರೆ. https://twitter.com/RahulGandhi/status/1757352569310163423 https://kannadanewsnow.com/kannada/vishwaguru-basavanna-cultural-leader-slogan-in-all-government-offices-cm-siddaramaiah/ https://kannadanewsnow.com/kannada/launch-of-upi-a-milestone-in-existing-strong-bilateral-ties-mauritius-envoy/
ಬೆಂಗಳೂರು : ವಿಶ್ವ ಗುರು ಬಸವಣ್ಣ ಸಾಂಸ್ಕøತಿಕ ನಾಯಕ ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕರಾದ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಮಾಡಿ ಮಾತನಾಡಿದರು. ಫೆ. 17 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲ್ಲೂಕು ಮಟ್ಟದಲ್ಲಿ ಶಾಸಕರು ಹಾಗೂ ಎಲ್ಲಾ ನಗರ ಹಾಗೂ ಗ್ರಾಮೀಣ ಸಂಸ್ಥೆಗಳಲ್ಲಿ ಆಯಾ ಅಧ್ಯಕ್ಷರಿಂದ ನೆರವೇರಿಸಲು ಸೂಚಿಸಲಾಗಿದೆ. ಎಲ್ಲ ಕಚೇರಿಗಳಲ್ಲಿಯೂ ಬಸವಣ್ಣನವರ ಭಾವಚಿತ್ರವಿರಬೇಕು, ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಸ್ವಲ್ಪವಾದರೂ ಅಳವಡಿಸಿಕೊಳ್ಳಬೇಕು ಎಂದರು. ಬಸವ ಜಯಂತಿ ಆಚರಿಸಿ, ಹಣೆಬರಹ, ನನ್ನ ಕರ್ಮ ಎನ್ನುವುದು ಪುನ: ದಾರಿ ತಪ್ಪಿಸಿದಂತಾಗುತ್ತದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ದ್ವೇಷಿಸುವುದು ದುರ್ಗುಣ. ಬಸವಣ್ಣ ಸಾಂಸ್ಕøತಿಕ ನಾಯಕ ಎನ್ನುವುದು ಅತ್ಯಂತ ಯೋಗ್ಯವಾಗಿದೆ ಎಂದರು. ಸಮಾಜದಲ್ಲಿ ಬದಲಾವಣೆ ತರುವ ಪ್ರಯತ್ನ ಶಿವಮೊಗ್ಗದಲ್ಲಿ…
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಂದ ಶೇ.40ರಷ್ಟು ಕಮೀಷನ್ ಆರೋಪ ಮಾಡಿದ್ದಂತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧವೂ ಮಾಡಿದ್ದರು. ಆದ್ರೇ ಇದೀಗ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಹಕಾರ ನೀಡುತ್ತಿದ್ದಾರೆ ಎಂಬುದಾಗಿ ಉಲ್ಟಾ ಹೊಡೆದಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಎಲ್ಲಾ ರೀತಿಯ ಸಹಕಾರವನ್ನು ಗುತ್ತಿಗೆದಾರರಿಗೆ ನೀಡುತ್ತಿದ್ದಾರೆ. ಶೀಘ್ರವೇ ಬಿಬಿಎಂಪಿಯ ಬಾಕಿ ಬಿಲ್ ಕೂಡ ಬಿಡುಗಡೆ ಮಾಡೋದಾಗಿ ಭರವಸೆ ನೀಡಿದ್ದಾರೆ ಎಂದರು. ರಾಜ್ಯ ಸರ್ಕಾರದಿಂದ 1054 ಸಣ್ಣ ಗುತ್ತಿಗೆದಾರರ 1 ಕೋಟಿಗಿಂತ ಕಡಿಮೆ ಇರುವಂತ ಬಿಲ್ ಅನ್ನು 600 ಕೋಟಿ ರೂಪಾಯಿ ಹಣವನ್ನು ಲೋಕೋಪಯೋಗಿ ಇಲಾಖೆಯಿಂದ ಯಾವುದೇ ಲಂಚವನ್ನು ಪಡೆದೇ ಬಿಡುಗಡೆ ಮಾಡಿರೋದಾಗಿ ಹೇಳಿದ್ದಾರೆ. ಒಟ್ಟಾರೆಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಗುತ್ತಿಗೆದಾರರಿಂದ ಕಮೀಷನ್ ಸ್ವೀಕರಿಸುತ್ತಿಲ್ಲ. ಗುತ್ತಿಗೆ ಬಾಕಿ ಬಿಲ್ ಅನ್ನು ಗುತ್ತಿಗೆದಾರರಿಗೆ ನೀಡುತ್ತಿರೋದಾಗಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ. https://kannadanewsnow.com/kannada/launch-of-upi-a-milestone-in-existing-strong-bilateral-ties-mauritius-envoy/ https://kannadanewsnow.com/kannada/major-surgery-from-state-government-to-administrative-machinery-11-dysp-51-pi-transferred/
ಬೆಂಗಳೂರು: ಸರ್ಕಾರಿ ಸ್ವಾಮ್ಯದ ಮೈಸೂರು ಲ್ಯಾಂಪ್ಸ್ ಕಂಪನಿಯಲ್ಲಿ ಶೇ5.6ರಷ್ಟು ಷೇರುಗಳು ಖಾಸಗಿಯವರ ಒಡೆತನದಲ್ಲಿದ್ದು ಅಷ್ಟೂ ಷೇರುಗಳನ್ನು ಸರ್ಕಾರವೇ ಖರೀದಿ ಮಾಡಿ ಸಂಸ್ಥೆಯನ್ನು ಶೇ 100ರಷ್ಟು ಸರ್ಕಾರಿ ಸಂಸ್ಥೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ವಿಧಾನ ಪರಿಷತ್ ಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ನ ಎಸ್.ಎಲ್.ಬೋಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮೈಸೂರು ಲ್ಯಾಂಪ್ಸ್ಗೆ ಸಂಬಂಧಿಸಿದಂತೆ ಸರ್ಕಾರ ಹೆಚ್ಚು ಜಾಗರೂಕತೆಯ ಹೆಜ್ಜೆಗಳನ್ನು ಇಡುತ್ತಿದ್ದು, ಅದರ ಆಸ್ತಿ ಯಾವುದೇ ಖಾಸಗಿ ವ್ಯಕ್ತಿ/ಸಂಸ್ಥೆಗಳ ಪಾಲಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸದ್ಯ ಈ ಕಂಪನಿಯಲ್ಲಿ ಸರ್ಕಾರದ ಷೇರು ಪ್ರಮಾಣ ಶೇ 91.07ರಷ್ಟು ಇದೆ. ಸರ್ಕಾರಿ ಸ್ವಾಮ್ಯದ ಎನ್ಜಿಇಎಫ್ ಸಂಸ್ಥೆ ಶೇ 3.33ರಷ್ಟು ಷೇರು ಬಂಡವಾಳ ಹೊಂದಿದೆ. ಉಳಿದ ಶೇ 5.6ರಷ್ಟು ಷೇರು ಬಂಡವಾಳ ಸಾರ್ವಜನಿಕರದ್ದಾಗಿದೆ ಎಂದು ಅವರು ವಿವರಿಸಿದರು. ಮೈಸೂರು ಲ್ಯಾಂಪ್ಸ್ ಮತ್ತು ಎನ್ಜಿಇಎಫ್ ಸಂಸ್ಥೆಗೆ ಸೇರಿದ ಜಾಗಗಳಲ್ಲಿ ಸಾರ್ವಜನಿಕ ಉದ್ದೇಶದ ವಿನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಲು 2021ರಲ್ಲಿ ಪಬ್ಲಿಕ್ ಚಾರಿಟಬಲ್…
ಬೆಂಗಳೂರು: ಇಂದು ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಮೋದಿಯವರೇ ಮಾತುಕೊಟ್ಟ 20 ಕೋಟಿ ಉದ್ಯೋಗ ಎಲ್ಲಿ ಎಂಬುದಾಗಿ ಸರಣಿ ಎಕ್ಸ್ ಮಾಡಿ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, 2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ? ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು? ನಿಜ ಹೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ನೀವು ಸೃಷ್ಟಿಸಿರುವ ಉದ್ಯೋಗಗಳ ಸಂಖ್ಯೆ ಎಷ್ಟು? ಎಂದು ಪ್ರಶ್ನಿಸಿದ್ದಾರೆ. ನರೇಂದ್ರ ಮೋದಿಯವರೇ, ನಿಮ್ಮದೇ ಸಚಿವ ಸಂಪುಟದ ಜಿತೇಂದರ್ ಸಿಂಗ್ ಅವರು 2022ರ ಜುಲೈ ನಲ್ಲಿ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “ 2014-15 ಮತ್ತು 2021 -22ರ ಅವಧಿಯ ನಡುವೆ ಕೇವಲ 7 ಲಕ್ಷ ಹೊಸ ಉದ್ಯೋಗಗಳು ಮಾತ್ರ ಸೃಷ್ಟಿಯಾಗಿತ್ತು ಎಂದು ಹೇಳಿದ್ದರು. ಅಂತಿಮ ಸತ್ಯ…
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿದೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ. ಇದೀಗ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ಎಫ್ಐಆರ್ ದಾಖಲಿಸಿಕೊಂಡು ತನಿಖೆಗೆ ಚುರುಕುಗೊಳಿಸಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದೀಗ ಸಿಬಿಐಯಲ್ಲಿ ಇದ್ದಂತ ಪ್ರಕರಣವನ್ನು ಲೋಕಾಯುಕ್ತದಿಂದ ಮರು ತನಿಖೆ ಶುರು ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಈ ಮೂಲಕ ಮರು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರು ಶುರು ಮಾಡಿದ್ದಾರೆ. ಇನ್ನೂ ಸಿಬಿಐಯಿಂದ ಲೋಕಾಯುಕ್ತ ಪೊಲೀಸರಿಗೆ ಈವರೆಗೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಯಾವುದೇ ದಾಖಲೆಗಳನ್ನು ಸಲ್ಲಿಸಲಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಮರು ತನಿಖೆ ನಡೆಸೋದಕ್ಕೆ ಈಗ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. https://kannadanewsnow.com/kannada/major-surgery-from-state-government-to-administrative-machinery-11-dysp-51-pi-transferred/ https://kannadanewsnow.com/kannada/kolar-congress-workers-clash-with-party-workers-over-allegations-of-discrimination-by-not-putting-up-pictures-of-leaders/