Author: kannadanewsnow09

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಎಎಸ್ಐ ಒಬ್ಬರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಎಸ್ ಪಿ ಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಚಿಕ್ಕಮಗಳೂರಿನ ಆಲ್ದೂರು ಪೊಲೀಸ್ ಠಾಣೆಯ ಎಎಸ್ಐ ಶಿವಕುಮಾರ್ ವಿರುದ್ಧ ಖಾಲಿದ್ ಹುಸೇನ್ ಎಂಬಾತ ಕಿರುಕುಳ ಆರೋಪ ಮಾಡಿದ್ದಾರೆ. ಎಸ್ಎಐ ಶಿವಕುಮಾರ್ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಎಸ್ ಪಿ ಕಚೇರಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಲ್ದೂರು ಪಟ್ಟಣದ ಖಾಲಿದ್ ಹುಸೇನ್ ಎಂಬಾತ ಚಿಕ್ಕಮಗಳೂರಿನ ಎಸ್ ಪಿ ಕಚೇರಿ ಎದುರೇ ಡೆತ್ ನೋಟ್ ಹಿಡಿದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ಸ್ಥಳದಲ್ಲಿದ್ದಂತ ಪೊಲೀಸರು ಆತನನ್ನು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. https://kannadanewsnow.com/kannada/mlc-n-ravikumar-granted-bail-for-derogatory-remarks-against-cs-shalini-rajneesh/ https://kannadanewsnow.com/kannada/applications-invited-for-free-coaching-for-upsc-prelims-mains-exams/

Read More

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ಪ್ರಶ್ನಿಸಿ ಎಂ ಎಲ್ ಸಿ ಎನ್ ರವಿಕುಮಾರ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು ಎನ್.ರವಿಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಆದೇಶಿಸಿತ್ತು. ಇನ್ನೂ ಈ ಪ್ರಕರಣದಲ್ಲಿ ಎಂಎಲ್ ಸಿ ಎನ್.ರವಿಕುಮಾರ್ ಅವರಿಗೆ ಹೈಕೋರ್ಟ್ ನ್ಯಾಯಪೀಠವು ಜಾಮೀನು ಮಂಜೂರು ಮಾಡಿದೆ. ಈ ಮೂಲದ ಎನ್.ರವಿಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/state-government-extends-lokayukta-sit-appointed-to-probe-illegal-mining-by-one-year/ https://kannadanewsnow.com/kannada/applications-invited-for-free-coaching-for-upsc-prelims-mains-exams/

Read More

ಬೆಂಗಳೂರು: ನಾಗರಿಕ ಸೇವಾ ಪರೀಕ್ಷೆ ಬರೆದು ಉನ್ನತ ಹುದ್ದೆಗೇರಲು ಬಯಸುವ ಪ್ರತಿಭಾನ್ವಿತ ಯುವತಿಯರಿಗಾಗಿ ಉಚಿತ ವಸತಿ ಸಹಿತ ಅಧ್ಯಯನ ಕೇಂದ್ರ ನಡೆಸುತ್ತಿರುವ ರಾಹ್ ಅಕಾಡೆಮಿ ‘ರಾಹ್ ಸೂಪರ್‌ 30’, 2025-26ನೇ ಶೈಕ್ಷಣಿಕ ಸಾಲಿಗೆ ಅರ್ಹ ಮಹಿಳಾ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಕಳೆದ ವರ್ಷ ಕನಕಪುರ ರಸ್ತೆಯ ಮ್ಯಾಂಗೋ ಗಾರ್ಡನ್ ಲೇಔಟ್‌ನಲ್ಲಿ ಪ್ರಾರಂಭವಾದ ‘ರಾಹ್ ಸೂಪರ್‌ 30’ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ, ಅರ್ಹ ಮಹಿಳಾ ಪದವೀಧರರಿಗೆ ಯುಪಿಎಸ್‌ಸಿ (ಪೂರ್ವಭಾವಿ ಮತ್ತು ಮುಖ್ಯ) ಪರೀಕ್ಷೆಗೆ ತರಬೇತಿ, ಪರಿಣಿತರ ಮಾರ್ಗದರ್ಶನ, ಗ್ರಂಥಾಲಯ ಸೇರಿದಂತೆ ವಸತಿ ಸಹಿತ ಅಧ್ಯಯನಕ್ಕೆ ಅಗತ್ಯ ಸೌಕರ್ಯಗಳನ್ನು ಉಚಿತವಾಗಿ ಒದಗಿಸುತ್ತಿದೆ. ಮೊದಲ ಬ್ಯಾಚ್‌ನ ವಿದ್ಯಾರ್ಥಿನಿ ಡಾ. ಅಲ್ಮಾಸ್ ಫಾತಿಮಾ ಅವರು ನಾಗರಿಕ ಸೇವೆಗಳ ಇತ್ತೀಚಿನ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸದ್ಯ ಮುಖ್ಯ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾರೆ. ಅಲ್ಲದೆ, ತೆಲಂಗಾಣ ರಾಜ್ಯ ಸೇವೆಗಳ ಪರೀಕ್ಷೆಯಲ್ಲಿ 99ನೇ ರ‍್ಯಾಂಕ್ ಗಳಿಸಿದ್ದಾರೆ ಮತ್ತು ತೆಲಂಗಾಣ ಪೊಲೀಸ್ ಸೇವೆಗಳಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್‌ಪಿ) ಹುದ್ದೆಯನ್ನು ಪಡೆದಿದ್ದಾರೆ. ಇದು…

Read More

ಬೆಂಗಳೂರು: ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧೆಡೆ ಅಕ್ರಮ ಗಣಿಗಾರಿಕೆ ಕುರಿತಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಲೋಕಾಯುಕ್ತ ಎಸ್ಐಟಿ ನೇಮಿಸಿತ್ತು. ಈ ಎಸ್ಐಟಿ ಅವಧಿಯನ್ನು ರಾಜ್ಯ ಸರ್ಕಾರವು ಒಂದು ವರ್ಷ ವಿಸ್ತರಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಲೋಕಾಯುಕ್ತ ಎಸ್ ಐ ಟಿ ಅವಧಿ ಒಂದು ವರ್ಷ ವಿಸ್ತರಣೆ ಮಾಡಲಾಗಿದೆ. ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ ಆದೇಶಿಸಿದೆ. ಅಂದಹಾಗೇ ಅಕ್ರಮ ಗಣಿಗಾರಿಕೆ ತನಿಖೆಗಾಗಿ ನೇಮಿಸಿರುವ ಎಸ್ಐಟಿ ಇದಾಗಿದೆ. ಇನ್ನೂ ತನಿಖೆ ನಡೆಸುವುದು ಬಾಕಿ ಇರುವ ಕಾರಣ ರಾಜ್ಯ ಸರ್ಕಾರವು ಒಂದು ವರ್ಷ ಮತ್ತೆ ವಿಸ್ತರಣೆ ಮಾಡಿ ಆದೇಶಿಸಿದೆ. https://kannadanewsnow.com/kannada/bbmp-suspends-revenue-inspector-for-pasting-stickers-without-conducting-scheduled-caste-survey/ https://kannadanewsnow.com/kannada/good-news-for-state-transport-bus-passengers-the-ticket-price-roundup-system-will-soon-be-abolished/

Read More

ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಕಂದಾಯ ಪರಿವೀಕ್ಷಕರಾದ ಕವಿತ ರವರುನ್ನು ಅಮಾನತ್ತುಗೊಳಿಸಲಾಗಿದೆ. ಪೂರ್ವ ವಲಯದ ವಸಂತನಗರ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷಕರಾದ ಕವಿತ ಅವರನ್ನು ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಭಾಗವಾದ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಈ ಹಿಂದೆ ಕರ್ತವ್ಯ ಲೋಪವೆಸಗಿದ ಮೂವರ ಅಮಾನತ್ತು ಈ ಹಿಂದೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಮೂರು ಜನ ಬಿಬಿಎಂಪಿ ನೌಕರರನ್ನು ಅಮಾನತುಗೊಳಿಸಲಾಗಿತ್ತು. ಹೆಚ್.ಬಿ.ಆರ್ ಲೇಔಟ್ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷಕರಾದ ರಮೇಶ್, ಕಂದಾಯ ವಸೂಲಿಗಾರರಾದ ಪೆದ್ದುರಾಜು ಹಾಗೂ ಕೆಂಗೇರಿ ಉಪ ವಿಭಾಗ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ವಸೂಲಿಗಾರರಾದ ಸಿ. ಸಂದಿಲ್ ಕುಮಾರ್ ಅವರನ್ನು ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿತ್ತು https://kannadanewsnow.com/kannada/high-court-gives-big-relief-to-mlc-n-ravikumar-orders-to-refrain-from-taking-coercive-action-until-july-8/ https://kannadanewsnow.com/kannada/good-news-for-state-transport-bus-passengers-the-ticket-price-roundup-system-will-soon-be-abolished/

Read More

ಹಿಮಾಚಲ ಪ್ರದೇಶ: ಕಳೆದ ಕೆಲವು ದಿನಗಳಿಂದ ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯು ಭಾರತದ ಬೆಟ್ಟ ರಾಜ್ಯವಾದ ಹಿಮಾಚಲ ಪ್ರದೇಶದಲ್ಲಿ ಹಾನಿಯನ್ನುಂಟುಮಾಡಿದೆ. ಜೂನ್ 20 ರಿಂದ ಜುಲೈ 3 ರವರೆಗೆ ಕನಿಷ್ಠ 69 ಜನರು ಪ್ರಾಣ ಕಳೆದುಕೊಂಡಿದ್ದಾರೆ. 400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿ ಹಾನಿಯಾಗಿದೆ. ಬಲವಾದ ಪ್ರವಾಹದಲ್ಲಿ ಹಲವಾರು ಕಟ್ಟಡಗಳು ಕುಸಿದು ವಾಹನಗಳು ಕೊಚ್ಚಿ ಹೋಗಿರುವುದರಿಂದ ಮಂಡಿ ಜಿಲ್ಲೆ ಅತ್ಯಂತ ಹಾನಿಗೊಳಗಾಗಿದೆ. ನಮ್ಮ ವ್ಯವಸ್ಥೆಯಲ್ಲಿ ಪ್ರವೇಶಿಸಿದಂತೆ ಇಲ್ಲಿಯವರೆಗೆ 400 ಕೋಟಿ ರೂ.ಗಳಿಗೂ ಹೆಚ್ಚು ನಷ್ಟವನ್ನು ನಾವು ದಾಖಲಿಸಿದ್ದೇವೆ. ಆದರೆ ನಿಜವಾದ ಹಾನಿ ಇನ್ನೂ ಹೆಚ್ಚಾಗಿರಬಹುದು” ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಕಂದಾಯ ಇಲಾಖೆಯ ವಿಶೇಷ ಕಾರ್ಯದರ್ಶಿ ಡಿ.ಸಿ. ರಾಣಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ವಿವರವಾದ ಹಾನಿಯ ಮೌಲ್ಯಮಾಪನಕ್ಕೆ ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ಮತ್ತಷ್ಟು ಹೇಳಿದರು. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ ಮೂರು ದಿನಗಳವರೆಗೆ (ಜುಲೈ 7 ರವರೆಗೆ) ರಾಜ್ಯದಲ್ಲಿ ಹೆಚ್ಚಿನ ಮಳೆಯಾಗುವ…

Read More

ಬೆಂಗಳೂರು: ಕರ್ನಾಟಕದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಎಂಎಲ್ಸಿ ರವಿಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜುಲೈ.8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿದೆ. ಇಂದು ಸಿಎಸ್ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಪ್ರಕರಣ ಸಂಬಂಧ ಹೈಕೋರ್ಟ್ ಗೆ ಪ್ರಕರಣ ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಪೀಠವು ನಡೆಸಿತು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಜುಲೈ.8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ. ಇನ್ನೂ ಸಿಎಸ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ಗೆ ಸೂಚಿಸಿದೆ. ಈ ಮೂಲಕ ಹೈಕೋರ್ಟ್ ರವಿಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/good-news-for-state-transport-bus-passengers-the-ticket-price-roundup-system-will-soon-be-abolished/ https://kannadanewsnow.com/kannada/cuet-ug-result-2025-declared/

Read More

ಬೆಂಗಳೂರು: ಮಹದೇವಪುರ ವಲಯದ ಎ.ಇ.ಸಿ.ಎಸ್ ಲೇಔಟ್ ನಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡ ವ್ಯತ್ತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಮಹದೇವಪುರ ವಲಯ ಆಯುಕ್ತರಾದ ರಮೇಶ್ ಅವರು ತಿಳಿಸಿದರು. ಮಹದೇವಪುರ ವಲಯ ಎ.ಇ.ಸಿ.ಎಸ್ ಲೇಔಟ್, ಸಿ-ಬ್ಲಾಕ್ 1ನೇ ಮುಖ್ಯ ರಸ್ತೆಯಲ್ಲಿ ಬರುವ ಸೈಟ್ ಸಂ. 735 ರ ಸ್ವತ್ತಿನ ಮಾಲೀಕರಾದ ಭಾಸ್ಕರ್ ಎಂಬುವವರು 38 X 59 ಚ.ಅ (11.80 X 18.10ಮೀ) ಸೈಟ್ ನಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನೆಲಮಾಳಿಗೆ + ನೆಲ ಸೇರಿದಂತೆ 6 ಅಂತಸ್ತು ಕಟ್ಟಡ ನಿರ್ಮಾಣ ಮಾಡಿರುತ್ತಾರೆ. ಮುಂದುವರಿದು, ಸ್ವತ್ತಿನ ಮಾಲೀಕರಿಗೆ ಕಟ್ಟಡದ ಮಾಲೀಕರಿಗೆ ಈಗಾಗಲೇ ಬಿಬಿಎಂಪಿ 2020 ಕಾಯ್ದೆಯಡಿ ತಾತ್ಕಾಲಿಕ ಆದೇಶ ಹಾಗೂ ಸ್ಥಿರಿಕರಣ ಆದೇಶದ ನೋಟೀಸ್‌ಗಳನ್ನು ಜಾರಿ ಮಾಡಲಾಗಿರುತ್ತದೆ. ಆದರೂ ಸಹಾ ಕಟ್ಟಡ ನಿರ್ಮಾಣ ಕಾರ್ಯ ನಿಲ್ಲಿಸದ ಪರಿಣಾಮ, ಇಂದು ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಲಾಗಿರುತ್ತದೆ. ಹೆಚ್ಚುವರಿಯಾಗಿ ನಿರ್ಮಿಸಿರುವ 2 ಮಹಡಿಗಳನ್ನು ಮೂರು ಕೊರೆಯುವ ಯಂತ್ರಗಳು ಹಾಗೂ…

Read More

ಬೆಂಗಳೂರು: ರಾಜ್ಯಾದ್ಯಂತ 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಬಿಳಿಮಲೆ, ಸಂವಹನಕ್ಕಾಗಿ ತಾಯ್ನುಡಿಯನ್ನು ಹೊರತಾದ ಯಾವುದೇ ಭಾಷೆಗಳನ್ನು ಕಲಿಯುವುದು ತಪ್ಪಲ್ಲವೆನ್ನುತ್ತಲೇ, ಅಂತಹ ಪ್ರಯತ್ನಗಳು ನಮ್ಮ ಮಾತೃಭಾಷೆಯನ್ನೇ ಮೂಲೆಗುಂಪಾಗಿಸುವ ಕಾರ್ಯಕ್ಕೆ ಪ್ರಾಧಿಕಾರ ಸಾಕ್ಷಿಯಾಗಬಯಸುವುದಿಲ್ಲ ಎಂದು ಹೇಳಿದ್ದಾರೆ. ನಾಡಿನ ಅಭಿವೃದ್ಧಿ ಎನ್ನುವುದು ಸಂಪೂರ್ಣವಾಗಿ ಅಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಅವಲಂಬಿಸಿದೆ. ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ಬದುಕಿಗೆ ಕಲಿಕಾ ವ್ಯವಸ್ಥೆಯೇ ನಿರ್ಣಾಯಕ ಪಾತ್ರವನ್ನು ಹೊಂದಿರುತ್ತದೆ. ವಿಶ್ವದ್ಯಾಂತ ನಡೆಸಿರುವ ಅಧ್ಯಯನಗಳಲ್ಲಿ ಪ್ರಾರಂಭಿಕವಾಗಿ ತಾಯ್ನುಡಿಯನ್ನು ಪ್ರಭುತ್ವದ ಮಟ್ಟಕ್ಕೆ ಕಲಿಸುವುದೇ ಜ್ಞಾನಾರ್ಜನೆಯ ದೃಷ್ಠಿಯಿಂದ ಬುನಾದಿ ಎಂಬುದನ್ನು ನಿರೂಪಿಸಿವೆ ಎಂದಿರುವ ಬಿಳಿಮಲೆ, ತಾಯ್ನುಡಿಯು ಅನನ್ಯತೆ, ಸಾಂಸ್ಕೃತಿಕ ಗುರುತು, ಸ್ವಾಭಿಮಾನ,…

Read More

ಬೆಂಗಳೂರು, ಜು3: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಶಿಫಾರಸು ಮಾಡಿದ್ದಾರೆ. ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ, ಪರಾಮರ್ಶಿಸಿದ ಸಚಿವರು, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಈ ಶಿಫಾರಸು ಮಾಡಿದ್ದಾರೆ. ವೇತನ ಪಾವತಿಸದಿರುವುದೂ ಕರ್ತವ್ಯಲೋಪ: ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಡಿಸಿಎಫ್ ಚಕ್ರಪಾಣಿ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ ಈ ಸಂಬಂಧ ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿ, ಇಲಾಖಾ ವಿಚಾರಣೆ ಮಾಡಲು ಶಿಫಾರಸು ಮಾಡಿದ್ದಾರೆ.…

Read More