Author: kannadanewsnow09

ನವದೆಹಲಿ: ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೇ, ಅಧಿಕಾರಕ್ಕೆ ಬಂದ ಮರುಕ್ಷಣವೇ ಯುವಜನತೆಯ ಪಾಲಿಗೆ ಕಂಟಕವಾಗಿರುವಂತ ಅಗ್ನಿವೀರ ಸೇನಾ ನೇಮಕಾತಿ ಯೋಜನೆಯನ್ನು ರದ್ದುಗೊಳಿಸಿ, ಹಳೆಯ ನೇಮಕಾತಿ ಪದ್ದತಿಯನ್ನು ಮರು ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕರು ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೂರು ಸೇನಾಪಡೆಗಳ ದಂಡನಾಯಕರಾಗಿರುವಂತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಯುವಜನರನ್ನು ತೊಂದರೆಗೆ ಸಿಲುಕಿಸುವ ಅಗ್ನಿಪಥ ಯೋಜನೆಯನ್ನು ಕೂಡಲೇ ರದ್ದುಗೊಳಿಸಬೇಕು. ಇದರಿಂದ ನಾಲ್ಕು ವರ್ಷಗಳ ಹೊರಬರುವ ಅಗ್ನಿವೀರರಿಗೆ ಮತ್ತೆ ಉದ್ಯೋಗ ಹುಡುಕುವುದು ಕಷ್ಟವಾಗುತ್ತದೆ ಎಂದಿದ್ದಾರೆ. ಇದಷ್ಟೇ ಅಲ್ಲದೇ ಅಗ್ನಿಪಥ ಯೋಜನೆ ಘೋಷಣೆಗೂ ಮೊದಲು ಸೇನೆಗೆ ಆಯ್ಕೆಯಾಗಿದ್ದ 2 ಲಕ್ಷ ಮಂದಿಗೆ ಪ್ರಕ್ರಿಯೆಯನ್ನೇ ರದ್ದುಗೊಳಿಸಿರುವುದಾಗಿ ತಿಳಿಸಿ ಅತಂತ್ರಕ್ಕೆ ಸಿಲುಕಿಸಲಾಗಿದೆ. ಅವರಿಗೂ ಕೂಡಲೇ ನೇಮಕಾತಿ ಆದೇಶವನ್ನು ನೀಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಈ ಯೋಜನೆಗೆ ತಮ್ಮ ಸಹಮತವಿರಲಿಲ್ಲ ಎಂಬುದಾಗಿ ಮಾಜಿ ಸಶಸ್ತ್ರ ಪಡೆಗಳ ಮುಖ್ಯಸ್ಥರಾದ ಜ.ಮನೋಜ್ ನವಣೆ ಅವರೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ. ಮಾರ್ಚ್.4ರಿಂದ ಈ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು, ಖಜಾನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರು, ತಹಶೀಲ್ದಾರ್, ಡಿವೈಎಸ್ಪಿ ಸೇರಿದಂತೆ 159 ಗ್ರೂಪ್-ಎ ಹುದ್ದೆಗಳು ಹಾಗೂ 225 ಗ್ರೂಪ್-ಬಿ ಹುದ್ದೆಗಳ ನೇಮಕಾತಿ ನಡೆಯಲಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ವೃಂದದ 77 ಹುದ್ದೆಗಳು ಸೇರಿದ್ದಾವೆ. ಮಾರ್ಚ್.4ರಿಂದ ಏಪ್ರಿಲ್.4ರವರೆಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಮೇ.5ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿ ಪಡಿಸಲಾಗಿದೆ. ಭಾರತದಲ್ಲಿ ಕಾನೂನು ರೀತಿಯಲ್ಲಿ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದವರು ಈ ಕೆಎಎಸ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 3 ವರ್ಷ ವಯೋಮಿತಿ ಸಡಿಲಿಕೆ. ಕೋವಿಡ್…

Read More

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸ್ ಪೇದೆಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಪೊಲೀಸ್ ಪೇದೆಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗುವ ಮುನ್ನ ಅರ್ಹ ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಂತರ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳ ಬಗ್ಗೆ ಕ್ರಮ ಕೈಗೊಂಡು, ಆ ಬಗ್ಗೆ ತಮಗೆ ವರದಿ ನೀಡುವಂತೆಯೂ ಗೃಹ ಸಚಿವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರದಲ್ಲಿ ನಿರ್ದೇಶಿಸಿಸಿದ್ದಾರೆ. ಅಂದಹಾಗೇ ಕಳೆದ ಮೂರು ವರ್ಷಗಳಿಂದ ಪೊಲೀಸ್ ಪೇದೆಗಳ ವರ್ಗಾವಣೆ ನಡೆದಿಲ್ಲ. ಈ ಸಂಬಂಧ ಗೃಹ ಸಚಿವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ…

Read More

ಬೆಂಗಳೂರು: ನಗರದಲ್ಲಿ ಬೇಸಿಗೆ ಆರಂಭದ ಬೆನ್ನಲ್ಲೇ, ನೀರಿನ ಸಮಸ್ಯೆ ಎದುರಾಗಿದ್ದು, ಜನರು ನೀರಿಗಾಗಿ ಪರದಾಡುವಂತಾಗಿದೆ. ಇದರ ನಡುವೆ ಜಲಮಂಡಳಿಯಿಂದ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಇಂದು ಮತ್ತು ನಾಳೆ ಸುಮಾರು ಅರ್ಧ ಬೆಂಗಳೂರಿಗೆ ಕಾವೇರಿ ನೀರು ಪೂರೈಕೆ ಸ್ಥಗಿತಗೊಳಿಸುತ್ತಿದೆ. ಕೊಳವೆಬಾವಿಗಳಲ್ಲಿ ನೀರಿನ ಕೊರತೆ ಸೇರಿದಂತೆ ಇನ್ನಿತರ ಕಾರಣಗಳಇಂದಾಗಿ ನಗರದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಅದರಲ್ಲೂ ಯಲಹಂಕ, ಮಹದೇವಪುರ, ಕೆಆರ್ ಪುರ ಸೇರಿದಂತೆ ಹಲವು ಭಾಗಗಳಲ್ಲಿ ನೀರಿನ ವ್ಯತ್ಯಯ ಉಂಟಾಗಲಿದೆ. ಜನರು ಟ್ಯಾಂಕರ್ ನೀರಿನ ಮೊರೆ ಹೋಗುತ್ತಿದ್ದಾರೆ. ಅದರ ನಡುವೆಯೇ ಮಂಗಳವಾರದ ಇಂದು ಹಾಗೂ ನಾಳೆಯ ಬುಧವಾರದಂದು ಜಲಮಂಡಳಿ ಕಾವೇರಿ 2 ಮತ್ತು 4ನೇ ಹಂತದ ವ್ಯಾಪ್ತಿಯ ಬಡವಾಣೆಗಳಿಗೆ ನೀರಿನ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ. ಈ ದಿನಗಳಲ್ಲಿ ಕಾವೇರಿ 2 ಮತ್ತು 4ನೇ ಹಂತದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಾಗೂ ಲೆಕ್ಕಕ್ಕೆ ಸಿಗದ ನೀರಿನ ಪ್ರಮಾಣದ ಮಾಹಿತಿ ಪಡೆಯಲು ಬಲ್ಕ್ ಮೀಟರ್ ಅಳವಡಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಅರ್ಧಕ್ಕೂ ಹೆಚ್ಚಿನ ಬಡವಾಣೆಯಲ್ಲಿ ಇಂದು ಬೆಳಿಗ್ಗೆ…

Read More

ಬೆಂಗಳೂರು: ಇಂದು ಕರ್ನಾಟಕ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ನಡೆಯಲಿದೆ. ತೀವ್ರ ಕುತೂಹಲದ ನಡುವೆಯೂ ಕಾಂಗ್ರೆಸ್ ಮೂರು, ಬಿಜೆಪಿ ಒಂದು ಸ್ಥಾನ ಗೆಲುವು ಖಚಿತವಾಗಿದೆ. ಆದರೇ ಜೆಡಿಎಸ್ ನ ಕುಪೇಂದ್ರ ರೆಡ್ಡಿ ಭವಿಷ್ಯ ಮಾತ್ರ ನಿಗೂಢವಾಗಿದೆ. ಅಡ್ಡ ಮತದಾನದ ಭೀತಿಯಲ್ಲೇ ಇಂದು ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿದೆ. ಈ ಅಡ್ಡ ಮತದಾದನದಿಂದ ತಮ್ಮ ಶಾಸಕರನ್ನು ಕಾಪಾಡಿಕೊಳ್ಳುವ ಮುಂಜಾಗ್ರತೆ ಕ್ರಮವಾಗಿ ಆಡಳಿತಾರೂಡ ಕಾಂಗ್ರೆಸ್ ಪಕ್ಷ ಪಂಚತಾರಾ ಹೋಟೆಲ್ ವೊಂದರಲ್ಲಿ ಸದಸ್ಯರನ್ನು ಸ್ಥಳಾಂತರಿಸಿದೆ. ರಾಜ್ಯಸಭೆಯಲ್ಲಿ ಕರ್ನಾಟಕದಿಂದ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ತುಂಬಲು ದ್ವೈವಾರ್ಷಿಕ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಸೋಮವಾರ ತನ್ನ ಎಲ್ಲಾ ಶಾಸಕರನ್ನು ಹೋಟೆಲ್ ಗೆ ಸ್ಥಳಾಂತರಿಸಿದೆ. ಕಾಂಗ್ರೆಸ್ ನಿಂದ ಅಜಯ್ ಮಾಕೆನ್, ಸೈಯದ್ ನಾಸೀರ್ ಹುಸೇನ್, ಜಿ.ಸಿ.ಚಂದ್ರಶೇಖರ್, ಬಿಜೆಪಿಯಿಂದ ನಾರಾಯಣಸಾ ಬಾಂಡಗೆ, ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ. ಅಡ್ಡ ಮತದಾನದ ಭೀತಿಯ ನಡುವೆ ಮಂಗಳವಾರದ ಚುನಾವಣೆಯಲ್ಲಿ ಮತದಾರರಾಗಿರುವ ಶಾಸಕರಿಗೆ ಎಲ್ಲಾ ಪಕ್ಷಗಳು ವಿಪ್ ಜಾರಿ…

Read More

ನವದೆಹಲಿ: ಭಾರತದಲ್ಲಿ ಉತ್ಪಾದಿಸಲಾದ ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ 68 ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಜ್ಬೇಕಿಸ್ತಾನ್ ಸೋಮವಾರ 23 ಜನರಿಗೆ ಜೈಲು ಶಿಕ್ಷೆ ವಿಧಿಸಿದೆ. ಉಜ್ಬೇಕಿಸ್ತಾನಕ್ಕೆ ಡಾಕ್-1 ಮ್ಯಾಕ್ಸ್ ಸಿರಪ್ ಆಮದು ಮಾಡಿಕೊಂಡ ಕಂಪನಿಯ ನಿರ್ದೇಶಕ ಸಿಂಗ್ ರಾಘವೇಂದ್ರ ಪ್ರತಾಪ್ ಅವರಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ತೆರಿಗೆ ವಂಚನೆ, ಕಳಪೆ ಗುಣಮಟ್ಟದ ಅಥವಾ ನಕಲಿ ಔಷಧಿಗಳ ಮಾರಾಟ, ಕಚೇರಿ ದುರುಪಯೋಗ, ನಿರ್ಲಕ್ಷ್ಯ, ಫೋರ್ಜರಿ ಮತ್ತು ಲಂಚದ ಆರೋಪಗಳಲ್ಲಿ ಅವರು ತಪ್ಪಿತಸ್ಥರು ಎಂದು ಕಂಡುಬಂದಿದೆ. ಆಮದು ಮಾಡಿದ ಔಷಧಿಗಳಿಗೆ ಪರವಾನಗಿ ನೀಡುವ ಉಸ್ತುವಾರಿ ವಹಿಸಿದ್ದ ಮಾಜಿ ಹಿರಿಯ ಅಧಿಕಾರಿಗಳಿಗೆ ದೀರ್ಘ ಶಿಕ್ಷೆ ವಿಧಿಸಲಾಯಿತು. ಸಿರಪ್ ಸೇವಿಸಿದ ನಂತರ ಸಾವನ್ನಪ್ಪಿದ 68 ಮಕ್ಕಳ ಕುಟುಂಬಗಳಿಗೆ ಮತ್ತು ಅಂಗವೈಕಲ್ಯ ಹೊಂದಿರುವ ನಾಲ್ಕು ಹೆಚ್ಚುವರಿ ಮಕ್ಕಳ ಕುಟುಂಬಗಳಿಗೆ ಒಟ್ಟು 80,000 ಡಾಲರ್ (1 ಬಿಲಿಯನ್ ಉಜ್ಬೆಕ್ ಮೊತ್ತ) ಪರಿಹಾರವನ್ನು ನೀಡಲಾಗುವುದು ಎಂದು ನ್ಯಾಯಾಲಯ ನಿರ್ಧರಿಸಿದೆ. ಇನ್ನೂ ಎಂಟು ಮಾದಕ ದ್ರವ್ಯ ಪೀಡಿತ ಮಕ್ಕಳ…

Read More

ಬೆಂಗಳೂರು: ಫೆಬ್ರವರಿ.28ರಂದು ರಾಷ್ಟ್ರೀಯ ವಿಜ್ಞಾನ ದಿನದಂದು ಪ್ರತಿಜ್ಞಾ ವಿಧಿಯನ್ನು ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸ್ವೀಕರಿಸುವುದು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವತ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಅವರು, ಫೆಬ್ರವರಿ.28, 2024ರಂದು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಬೆಳಿಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಏಕಕಾಲಕ್ಕೆ ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಪ್ರತಿಜ್ಞಾ ವಿಧಿಯನ್ನು ಎಲ್ಲಾ ವಿದ್ಯಾರ್ಥಿಗಳು ಸ್ವೀಕರಿಸುವಂತೆ ಕ್ರಮ ಕೈಗೊಳ್ಳಲು ಆದೇಶಿಸಿದೆ. ಒಟ್ಟಾರೆಯಾಗಿ ಸಂವಿಧಾನ ಪೀಠಿಕೆ ಓದಿನ ಬಳಿಕ, ಈಗ ಫೆಬ್ರವರಿ.28ರಂದು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಏಕಕಾಲಕ್ಕೆ ಪ್ರತಿಜ್ಞಾ ವಿಧಿಯನ್ನು ಎಲ್ಲಾ ವಿದ್ಯಾರ್ಥಿಗಳು ತೆಗೆದುಕೊಳ್ಳುವಂತೆ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಮಾಡಿದೆ.

Read More

ಬೆಂಗಳೂರು : ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಮೇಳದಲ್ಲಿ ಒಂದು ಲಕ್ಷ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಸೋಮವಾರದಿಂದ ಆರಂಭವಾಗಿರುವ ಯುವ ಸಮೃದ್ಧಿ ಬೃಹತ್ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಕರಿಗೆ ಸ್ಥಳದಲ್ಲೇ ಉದ್ಯೋಗ ಕೊಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಲ್ಲೊಂದಾಗಿತ್ತು. ಹೀಗಾಗಿಯೇ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಕರು ಮತ್ತು ಯುವತಿಯರಿಗೆ ಸ್ಥಳದಲ್ಲಿಯೇ ಉದ್ಯೋಗ ನೀಡುವ ಯುವ ಜನ ಸಮೃದ್ಧಿ ಸಮ್ಮೇಳನ ಕರ್ನಾಟಕದ ಮಟ್ಟಿಗೆ ಒಂಚು ಚಾರಿತ್ರಿಕ ದಾಖಲೆಯಾಗಲಿದೆ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದರು. 75 ಸಾವಿರ ಮಂದಿ ನೋಂದಾಣಿಯಾಗಿರುವುದು ದೇಶದಲ್ಲೇ ಐತಿಹಾಸಿಕ ದಾಖಲೆ. ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರದವರೆಗೂ ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರುವವರು ಮೇಳದಲ್ಲಿ ಭಾಗವಹಿಸಿದ್ದಾರೆ. ಒಂದು ಲಕ್ಷ ಉದ್ಯೋಗಗಳ ನೇಮಕಾತಿಗೆ ಖಾಸಗಿ ಕಂಪನಿಗಳು ಮುಂದೆ ಬಂದಿವೆ. ಇದು ದಾಖಲೆಯೇ ಸರಿ ಎಂದು…

Read More

ಬೆಂಗಳೂರು: ಇಂದು ಕರ್ನಾಟಕ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ವಿಧಾನಸೌಧದಲ್ಲಿ ಮತಚಲಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಫೆಬ್ರವರಿ.26ರಿಂದ ಫೆಬ್ರವರಿ.28ರವರೆಗೆ ವಿಧಾನಸೌಧದ ಸುತ್ತಮುತ್ತಲೂ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಆದೇಶ ಹೊರಡಿಸಿದ್ದು, ದಿನಾಂಕ 12-02-2024ರಿಂದ ವಿಧಾನಸೌಧದಲ್ಲಿ ಅಧಿವೇಶನ ಪ್ರಾರಂಭವಾಗಿದ್ದು, ದಿನಾಂಕ 26-02-2024 ಮತ್ತು 28-02-2024 ರಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನವು ನಡೆಯಲಿರುವುದರಿಂದ ಮತ್ತು ದಿನಾಂಕ 27-02-2024 ರಂದು ವಿಧಾನಸೌಧದಲ್ಲಿ ರಾಜ್ಯಸಭೆಯ ದೈವಾರ್ಷಿಕ ಚುನಾವಣೆಯ ಮತದಾನ ನಡೆಯಲಿದೆ ಎಂದಿದ್ದಾರೆ. ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ, ಇತ್ಯಾದಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದಿದ್ದಾರೆ. ಹೀಗೆ ಮಾಡುವುದರಿಂದ ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೇ ಸಾರ್ವಜನಿಕರ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ಗುಪ್ತವಾರ್ತೆ ಮಾಹಿತಿಯಿಂದ ತಿಳಿದು ಬಂದಿದೆ ಎಂದು…

Read More

ಬೆಂಗಳೂರು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ-2024 ಮಂಡಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕಕ್ಕೆ ಉಭಯ ಸದನಗಳಲ್ಲೂ ಅಂಗೀಕಾರಗೊಂಡಿತ್ತು. ಇದೀಗ ರಾಜ್ಯಪಾಲರು ಕೂಡ ಅಂಕಿತದ ಮುದ್ರೆಯನ್ನು ಒತ್ತಿದ್ದಾರೆ. ಹೀಗಾಗಿ ಇನ್ಮುಂದೆ ಕರ್ನಾಟಕದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯ ಬಳಕೆ ಕಡ್ಡಾಯವಾಗಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ಅಧಿನಿಯಮ-2024 ಅನ್ನು ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ವಿಧಾನಸಭೆ, ಪರಿಷತ್ತಿನಲ್ಲಿ ತಿದ್ದುಪಡಿ ವಿಧೇಯಕಕ್ಕೆ ಅಂಕಿತ ದೊರೆತಿತ್ತು. ಈ ಮಸೂಧೆಯನ್ನು ಕಾಯ್ದೆಯಾಗಿಸುವ ನಿಟ್ಟಿನಲ್ಲಿ ರಾಜ್ಯಪಾಲರ ಅಂಕಿತಕ್ಕೆ ಕಳುಹಸಲಾಗಿತ್ತು. ಇಂದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ವಿಧೇಯಕತ 2024 ದಿನಾಂಕ 25-02-2024ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದೆ. ಹೀಗಾಗಿ ವಿಶೇಷ ರಾಜ್ಯಪತ್ರಿಕೆಯಲ್ಲಿ ಅಧಿಕೃತವಾಗಿ ಆದೇಶ ಮಾಡಲಾಗಿದೆ. ವಿಶೇಷ ರಾಜ್ಯ ಪತ್ರದಲ್ಲಿ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಗಳು…

Read More