Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಬಂದ ನಂತರ ಜಿಹಾದಿ ಕರ್ನಾಟಕ ಸೃಷ್ಟಿಯಾಗಿದೆ. ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ದುರಾಡಳಿತದ ಆರೋಪ ಪಟ್ಟಿಯನ್ನು ಆರ್.ಅಶೋಕ ಬಿಡುಗಡೆ ಮಾಡಿದರು. ನಂತರ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್ ಜಿಹಾದ್, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್ ಜಿಹಾದ್‌ಗೆ ಕಾಂಗ್ರೆಸ್‌ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್‌ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ. ಕರ್ನಾಟಕವನ್ನು ಡಾನ್‌ಗಳು ನಡೆಸುತ್ತಿರುವಂತಹ ಪರಿಸ್ಥಿತಿ ಇದ್ದು, ಸರ್ಕಾರ ಕಾನೂನನ್ನು ಗೂಂಡಾಗಳಿಗೆ ನೀಡಿದೆ ಎಂದರು. ಇದನ್ನು ಲವ್ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್ ಜಿಹಾದ್ ಎಂದು ಯುವತಿಯ ತಂದೆ, ಕಾಂಗ್ರೆಸ್ ಕಾರ್ಪೊರೇಟರ್ ಹೇಳುತ್ತಿದ್ದಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿಯ ಬಗ್ಗೆ ಹೀನಾಯವಾಗಿ ಮಾತಾಡುತ್ತಿದ್ದಾರೆ. ಚುನಾವಣೆಯಲ್ಲಿ ಇದು ಚರ್ಚೆಯಾದರೆ ಕಾಂಗ್ರೆಸ್ ಮುಖಕ್ಕೆ ಮಂಗಳಾರತಿಯಾಗಲಿದೆ ಎಂಬ…
ರಾಮನಗರ: ಸಂಸದ ಡಿ.ಕೆ ಸುರೇಶ್ ಅವರು ಪ್ರಚಾರದ ವೇಳೆಯಲ್ಲೇ ಕಾಂಗ್ರೆಸ್ ಕಾರ್ಯಕರ್ತರಿಂದ ಪಾಕಿಸ್ತಾನ್ ಕೀ ಜೈ ಘೋಷಣೆ ಕೂಗಿರೋದಾಗಿ ಹೇಳಲಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವೀಡಿಯೋ ವೈರಲ್ ಕೂಡ ಆಗಿದೆ. ರಾಮನಗರ ಜಿಲ್ಲೆಯ ಕುಣಿಗಲ್ ತಾಲೂಕಿನ ಕುದೂರಿನಲ್ಲಿ ಇಂದು ಸಂಸದ ಡಿ.ಕೆ ಸುರೇಶ್ ಅವರು ಮತಯಾಚನೆಯಲ್ಲಿ ತೊಡಗಿದ್ದರು. ತಮಗೆ ಮತ ನೀಡುವಂತೆ ಪ್ರಚಾರ ಕಾರ್ಯದಲ್ಲಿ ತೊಡಗಿದರು. ಸಂಸದ ಡಿ.ಕೆ ಸುರೇಶ್ ಅವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಂತ ಸಂದರ್ಭದಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಬಾಲಕೃಷ್ಣ ಕೀ ಜೈ ಜೊತೆಗೆ ಪಾಕಿಸ್ತಾನ್ ಕೀ ಜೈ ಎಂಬುದಾಗಿಯೂ ಘೋಷಣೆ ಕೂಗಿದ್ದಾರೆ ಎನ್ನಲಾಗುತ್ತಿದೆ. ಈ ಗಂಭೀರ ಆರೋಪವನ್ನು ಮಾಡಿರುವಂತ ಮೈತ್ರಿ ಪಕ್ಷದ ನಾಯಕರು, ವೀಡಿಯೋ ಕೂಡ ವೈರಲ್ ಮಾಡುತ್ತಿದ್ದಾರೆ ಎಂಬುದಾಗಿ ಕಿಡಿಕಾರಿರುವಂತ ಕಾಂಗ್ರೆಸ್ ನಾಯಕರು, ಕೈ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿಲ್ಲ. ಬಾಲಕೃಷ್ಣ ಕೀ ಜೈ ಅಂತ ಕೂಗಿದ್ದಾರೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/breaking-breaking-big-relief-for-former-cm-hd-kumaraswamy-hc-stays-state-womens-commissions-notice/ https://kannadanewsnow.com/kannada/the-law-and-order-situation-in-the-state-is-good-bjp-planning-to-impose-governors-rule-dk-shivakumar/
ರಾಮನಗರ: ರಾಜ್ಯಸಭಾ ಚುನಾವಣೆಯ ವೇಳೆಯಲ್ಲಿ ರಾಜ್ಯದ ಶಕ್ತಿ ಸೌಧ ವಿಧಾನಸೌಧದಲ್ಲೇ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿತ್ತು. ಇದು ಎಫ್ಎಸ್ಎಲ್ ವರದಿಯಲ್ಲೂ ದೃಢಪಟ್ಟಿತ್ತು. ಈ ಬಳಿಕ ರಾಜ್ಯದಲ್ಲಿ ಮತ್ತೆ ಪಾಕಿಸ್ತಾನ್ ಕೀ ಜೈ ಘೋಷಣೆ ಮೊಳಗಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಸದ ಡಿ.ಕೆ ಸುರೇಶ್ ಮತಯಾಚನೆಯ ವೇಳೆಯಲ್ಲೇ ಪಾಕಿಸ್ತಾನ್ ಕೀ ಜೈ ಘೋಷಣೆ ಕೂಗಿಲೋದಾಗಿ ಕೇಳಿ ಬಂದಿದೆ. ಈ ವೀಡಿಯೋವನ್ನು ಇಟ್ಕೊಂಡು ಬಿಜೆಪಿ-ಜೆಡಿಎಸ್ ಪಕ್ಷದ ಮೈತ್ರಿ ನಾಯಕರು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತಿರೋದಾಗಿ ಹೇಳಲಾಗುತ್ತಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರಲ್ಲಿ ಮತಯಾಚನೆ ವೇಳೆಯಲ್ಲಿ ಪಾಕಿಸ್ತಾನ್ ಕೀ ಜೈ ಎಂಬುದಾಗಿ ಘೋಷಣೆ ಕೂಗಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆದ್ರೇ ಕಾಂಗ್ರೆಸ್ ಪಕ್ಷದವರು ಮಾತ್ರ ಅದು ಪಾಕಿಸ್ತಾನ್ ಕೀ ಜೈ ಅಲ್ಲ. ಬಾಲಕೃಷ್ಣ ಕೀ ಜೈ ಎಂದಿದ್ದಾರೆ ಅಂತ ಸ್ಪಷ್ಟ ಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/bjp-announces-rs-10-lakh-ex-gratia-for-family-of-worker-who-died-during-election-campaign/ https://kannadanewsnow.com/kannada/breaking-breaking-big-relief-for-former-cm-hd-kumaraswamy-hc-stays-state-womens-commissions-notice/
ಕೊಡಗು: ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಸಾವನ್ನಪ್ಪಿದಂತ ಕಾರ್ಯಕರ್ತನ ಕುಟುಂಬಕ್ಕೆ ಬಿಜೆಪಿ ಪಕ್ಷದಿಂದ 10 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಈ ಬಗ್ಗೆ ಬಿಜೆಪಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ಧಾಪುರದ ಬಳಿಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಕಾರ್ಯಕರ್ತ ರಾಮಪ್ಪ ಎಂಬುವರು ಸಾವನ್ನಪ್ಪಿದ್ದಾರೆ. ಅಲ್ಲದೇ ಚಂದ್ರರಾಜು, ರತೀಶ್ ಎಂಬುವರು ಗಾಯಗೊಂಡಿದ್ದಾರೆ ಎಂದಿದ್ದಾರೆ. ಮೃತ ಬಿಜೆಪಿ ಕಾರ್ಯಕರ್ತ ರಾಮಪ್ಪ ಅವರ ಕುಟುಂಬಕ್ಕೆ 10 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ. ಗಾಯಾಳುಗಳಾದಂತ ಚಂದ್ರರಾಜು, ರತೀಶ್ ಅವರಿಗೆ ತಲಾ 2 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂದಿದೆ. ನಾಳೆ ಮೃತ ರಾಮಪ್ಪ ಅವರ ಕುಟುಂಬವನ್ನು ಭೇಟಿ ಮಾಡಲಿರುವಂತ ಬಿಜೆಪಿ ನಾಯಕರು, ಪರಿಹಾರದ ಚೆಕ್ ವಿತರಣೆ ಮಾಡಲಿದ್ದಾರೆ. ಅಲ್ಲಗೇ ಗಾಯಾಳುಗಳಿಗೂ ಅಂದೇ ಪರಿಹಾರದ ಚೆಕ್ ವಿತರಣೆ ಮಾಡಲಾಗುತ್ತಿದೆ ಎಂಬುದಾಗಿ ಮಾಹಿತಿ ನೀಡಿದೆ. https://kannadanewsnow.com/kannada/breaking-breaking-big-relief-for-former-cm-hd-kumaraswamy-hc-stays-state-womens-commissions-notice/ https://kannadanewsnow.com/kannada/the-law-and-order-situation-in-the-state-is-good-bjp-planning-to-impose-governors-rule-dk-shivakumar/
ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ 43 ರಷ್ಟು ಹೆಚ್ಚಳವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ರಾಜ್ಯ ಸರ್ಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೂಂಡಾ ರಾಜ್ಯ ವಾಗಿದೆ. ಪೊಲೀಸರು ಆರೋಪಿಗಳನ್ನು ಹಿಡಿದರೂ ಅವರನ್ಮು ರಾಜಕೀಯ ಪ್ರಭಾವ ಬಳಸಿ ಬಿಡುಗಡೆ ಮಾಡಿಸುತ್ತಿದ್ದಾರೆ. ಹಪ್ತಾ ವಸೂಲಿ ಹೆಚ್ಚಾಗಿದೆ. ಪೊಲಿಸ್ ಸ್ಟೇಷನ್ ಗಳು ಸೆಟ್ಲಮೆಂಟ್ ಕೇಂದ್ರಗಳಾಗಿವೆ ಎಂದು ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಕಾಲೇಜು ಆವರಣದಲ್ಲಿಯೇ ಒಬ್ಬ ಯುವಕ ಯುವತಿಗೆ ಒಂಬತ್ತು ಬಾರಿಬಿರಿದು ಓಡಿ ಹೋಗುತ್ತಾನೆ ಎಂದರೆ ಅವನ ಹಿಂದೆ ಯಾವ ಶಕ್ತಿ ಇದೆ. ಗೃಹ ಸಚಿವರು ಅದೊಂದು ಪ್ರೇಮ ಪಕ್ರರಣ ಇಷ್ಟು ಹಗುರ ಹೇಳಿಕೆ ಕೊಟ್ಟರೆ ಅಪರಾಧಿಗಳಿಗೆ ಪುಷ್ಟಿ ಬರದೇ ಇನ್ನೇನಾಗುತ್ತದೆ. ಕಾಲೇಜ್ ಕ್ಯಾಂಪಸ್ ನಲ್ಲಿ ಈ ರೀತಿ ಪ್ರಕರಣ ನಡೆಯದೆ ಇನ್ನೇನಾಗುತ್ತದೆ…
ಬೆಂಗಳೂರು : “ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದ್ದಷ್ಟು ಈ ದೇಶದ ಯಾವ ರಾಜ್ಯದಲ್ಲೂ ಇಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಹುಬ್ಬಳ್ಳಿ ಕೊಲೆ ಪ್ರಕರಣಕ್ಕೆ ಕಾರಣ ಎನ್ನುವ ಬಿಜೆಪಿ ಆರೋಪದ ಬಗ್ಗೆ ಅವರು ಉತ್ತರಿಸಿದ್ದು ಹೀಗೆ: “ರಾಜ್ಯಪಾಲರ ಆಡಳಿತ ಹೇರಲು ಈ ರೀತಿಯ ನಾಟಕ ಹಾಗು ಹುನ್ನಾರವನ್ನು ವಿಪಕ್ಷ ನಾಯಕ ಆರ್. ಅಶೋಕ ಮತ್ತು ಬಿಜೆಪಿಯವರು ಮಾಡುತ್ತಿದ್ದಾರೆ. ಈ ರೀತಿ ಆಗಲು ನಾವು ಬಿಡುವುದಿಲ್ಲ. ನಿಷ್ಪಕ್ಷಪಾತವಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು” ಎಂದರು. ಕರ್ನಾಟಕ ಬಿಹಾರ ಆಗುತ್ತದೆ ಎನ್ನುವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಅವರ ಕಾಲದಲ್ಲಿಯೂ ಅನೇಕ ಕೃತ್ಯಗಳು ನಡೆದಿದ್ದವು. ಎಲ್ಲರ ಕಾಲದಲ್ಲೂ ವೈಯಕ್ತಿಕ ಕಾರಣಗಳಿಗೆ ಇವು ನಡೆಯುತ್ತಿರುತ್ತವೆ. ಆದರೆ ರಾಜ್ಯದ ಕಾನೂನು…
ಬೆಂಗಳೂರು: ಪ್ರೀತಿ ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ರಕ್ಷಣೆ ಮಾಡಲು ಕಾಣದ ಕೈಗಳು ಪ್ರಯತ್ನಿಸುತ್ತಿವೆ ಎಂದು ಜಾತ್ಯತೀತ ಜನತಾದಳ ಆರೋಪಿಸಿದೆ. ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪಕ್ಷವು; ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡುಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ ಎಂದು ದೂರಿದೆ. ಈ ಘಟನೆ ಅತ್ಯಂತ ಆಘಾತಕಾರಿ. ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆ. ರಾಜ್ಯ ಕಾಂಗ್ರೆಸ್ ಸರಕಾರದ ಅತಿಯಾದ ತುಷ್ಟೀಕರಣವು ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮಿನಂತಾಗಿದೆ. ಕೆಲವರಿಗಂತೂ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ. ಈ ಸರಕಾರವೂ ಹಾಗೆಯೇ ವರ್ತಿಸುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ. ಪ್ರೀತಿ ನಿರಾಕರಿಸಿದ ಕಾರಣಕ್ಕೆ ಜೀವ ತೆಗೆದ ಪರಮ…
ನವದೆಹಲಿ: ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಮತ್ತೊಬ್ಬ ಶಾಸಕ ಅಮನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಂಧಿಸಿದೆ. ದೆಹಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಅವರು ಕೇಂದ್ರ ತನಿಖಾ ಸಂಸ್ಥೆಯ ಮುಂದೆ ಹಾಜರಾದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ. ಓಖ್ಲಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ 50 ವರ್ಷದ ಶಾಸಕ ಕಳೆದ ವಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ನಂತರ ಶರಣಾಗಿದ್ದಾರೆ. ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ದೆಹಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಈ ಪ್ರಕರಣ ಸಂಬಂಧಿಸಿದೆ. ಏಪ್ರಿಲ್ 18 ರಂದು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನದೊಂದಿಗೆ ತನಿಖೆಗೆ ಸಹಕರಿಸುವಂತೆ ಸುಪ್ರೀಂ ಕೋರ್ಟ್ ಅವರಿಗೆ ಸೂಚನೆ ನೀಡಿತ್ತು. ಗುರುವಾರ ಇಡಿ ಕಚೇರಿಗೆ ಪ್ರವೇಶಿಸುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಖಾನ್, ತಾನು ವಕ್ಫ್ ಮಂಡಳಿಯ ಅಧ್ಯಕ್ಷನಾಗಿದ್ದಾಗ ನಿಯಮಗಳನ್ನು ಅನುಸರಿಸಿದ್ದೇನೆ ಮತ್ತು ಕಾನೂನು…
ಕೊಡಗು: ಧನ ಮೇಯಿಸೋದಕ್ಕೆ ತೆರಳಿದ್ದಂತ ವ್ಯಕ್ತಿಯೊಬ್ಬರ ಮೇಲೆ ಹುಲಿಯೊಂದು ದಾಳಿ ನಡೆಸಿದ ಘಟನೆ ಕೊಡಗಿನಲ್ಲಿ ನಡೆದಿದೆ. ಹುಲಿ ದಾಳಿಗೆ ಒಳಗಾದಂತ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಿಟ್ಟೂರಿನ ಕೆರೆ ಬಳಿಯಲ್ಲಿ ಅಸ್ಸಾಂ ಮೂಲದ ರೆಹಮಾನ್ ಎಂಬಾತ ಧನ ಮೇಯಿಸೋದಕ್ಕೆ ತೆರಳಿದ್ದನು. ಈ ವೇಳೆ ಆತನ ಮೇಲೆ ಹುಲಿ ದಾಳಿ ಮಾಡಿದೆ ಎಂಬುದಾಗಿ ತಿಳಿದು ಬಂದಿದೆ. ದನಗಳ ಮೇಲೆ ದಾಳಿ ನಡೆಸಿರೋದಲ್ಲದೇ, ಅದನ್ನು ತಡೆಯೋದಕ್ಕೆ ಹೋದಂತ ರೆಹಮಾನ್ ಮೇಲೆಯೂ ಹುಲಿ ದಾಳಿ ನಡೆಸಿದೆ. ಈ ದಾಳಿಗೆ ಒಳಗಾದಂತ ರೆಹಮಾನ್ ತೀವ್ರ ರಕ್ತಸ್ತ್ರಾವದೊಂದಿಗೆ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಲಾಗಿದೆ. https://kannadanewsnow.com/kannada/shimoga-election-observers-appointed-for-lok-sabha-polls/ https://kannadanewsnow.com/kannada/vote-for-congress-darshan-campaigns-for-star-chandru-in-mandya/
ಶಿವಮೊಗ್ಗ: ಲೋಕಸಭಾ ಚುನಾವಣೆ – 2024 ಕ್ಕೆ ಸಂಬಂಧಿಸಿದಂತೆ 14-ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಜೆ ಸಾಮಾನ್ಯ ಮತ್ತು ವೆಚ್ಚ ವೀಕ್ಷಕರಾಗಿ ಕೆಳಕಂಡ ಐಎಎಸ್/ಐಆರ್‍ಎಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. 14-ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಪೂನಂ, ಮೊಬೈಲ್ ಸಂಖ್ಯೆ : 814695215 ಇವರು ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡಿರುತ್ತಾರೆ. 111-ಶಿವಮೊಗ್ಗ ಗ್ರಾಮಾಂತರ, 112-ಭದ್ರಾವತಿ, 113-ಶಿವಮೊಗ್ಗ ಹಾಗೂ 115-ಶಿಕಾರಿಪುರ ಮತಕ್ಷೇತ್ರಕ್ಕೆ ಸರೋಜ್ ಕುಮಾರ್ ಬೆಹೆರ, ಮೊ.ಸಂಖ್ಯೆ : 7760692479 ಇವರು ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುತ್ತಾರೆ. 114-ತೀರ್ಥಹಳ್ಳಿ, 116-ಸೊರಬ, 117-ಸಾಗರ ಮತ್ತು 118-ಬೈಂದೂರು ಮತಕ್ಷೇತ್ರಕ್ಕೆ ಮೀನಾಕ್ಷಿ ಸಿಂಗ್ ಮೊ.ಸಂಖ್ಯೆ 8904703613 ಇವರು ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುತ್ತಾರೆ. https://kannadanewsnow.com/kannada/important-information-for-bmtc-employees-departmental-hearing-scheduled-for-this-date-postponed/ https://kannadanewsnow.com/kannada/vote-for-congress-darshan-campaigns-for-star-chandru-in-mandya/