Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಕರ್ನಾಟಕ ಖಾಸಗಿ ಹೋಮಿಯೋಪಥಿಕ್ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ವತಿಯಿಂದ ಡಾ.ಬಿಆರ್.ಅಂಬೇಡ್ಕರ್ ಭವನದಲ್ಲಿ ಹಮಿಕೊಂಡಿದ್ದ ವಿಶ್ವ ಹೋಮಿಯೋಪತಿ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ವ್ಯಾಪಕವಾಗಿ ಕೇಳಿಬರುತ್ತಿದೆ. ಯಾವುದೇ ವೈದ್ಯಕೀಯ ಕೋರ್ಸ್ ಮುಗಿಸದೆ ಇರುವವರು ಎಲ್ಲೆಂದರಲ್ಲಿ ಕ್ಲಿನಿಕ್‌ಗಳನ್ನು ತೆರೆದು ಚಿಕಿತ್ಸೆ ನೀಡುತ್ತಾರೆ. ಇದರ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ ಎಂದು ಹೇಳಿದರು. ಗ್ರಾಮೀಣ ಭಾಗದ ಜನರ ಅಮಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೆಲವರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ ಎಂದರು. ಕೇವಲ ಸರ್ಕಾರದಿಂದ…
ಬೆಂಗಳೂರು :ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕೈಗೊಂಡಿರುವ ವಸತಿ ಯೋಜನೆಗಳು ತ್ವರಿತ ಗತಿಯಲ್ಲಿ ಪೂರ್ಣ ಗೊಳಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನಗರ ಅವಾಸ್ ಯೋಜನೆ ಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ಕೊಡುವ ಕಾಮಗಾರಿ ಗೆ ವೇಗ ನೀಡಬೇಕು ಎಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ ಈ ಯೋಜನೆಯಡಿ ಚಾಲ್ತಿಯಲ್ಲಿರುವ 52 ಸಾವಿರ ಮನೆಗಳ ಪೈಕಿ 11400 ಮನೆ ಆದಷ್ಟು ಶೀಘ್ರ ಹಂಚಿಕೆ ಮಾಡಬೇಕಿದ್ದು, ವಸತಿ ಸಮುಚ್ಚಯ ಹಾಗೂ ಮೂಲ ಸೌಕರ್ಯ ಕಾಮಗಾರಿ ಕಾಲ ಮಿತಿಯಲ್ಲಿ ಪೂರ್ಣ ಗೊಳಿಸಿ ಎಂದು ಹೇಳಿದರು. ಬಸವ, ಅಂಬೇಡ್ಕರ್, ದೇವರಾಜ ಅರಸು, ವಾಜಪೇಯಿ ನಗರ ಹಾಗೂ ಪ್ರಧಾನ ಮಂತ್ರಿ ಅವಾಸ್ ಗ್ರಾಮೀಣ ಮನೆಗಳ ವಿಚಾರದಲ್ಲಿ ಫಲಾನುಭ ವಿಗಳ ಆಯ್ಕೆ ವಿಳಂಬದ ಬಗ್ಗೆ ದೂರುಗಳಿದ್ದು, ಶಾಸಕರ ಜತೆ ಪತ್ರ ವ್ಯವಹಾರ ನಡೆಸಿ ಸಮಸ್ಯೆ ಬಗೆಹರಿಸಿ ಕೊಳ್ಳಿ.…
ನವದೆಹಲಿ: ಭಾರತದ ಚಿಲ್ಲರೆ ಹಣದುಬ್ಬರವು ಮೇ ತಿಂಗಳಲ್ಲಿ ವಾರ್ಷಿಕ ಆಧಾರದ ಮೇಲೆ 12 ತಿಂಗಳ ಕನಿಷ್ಠ 4.75% ಕ್ಕೆ ಇಳಿದಿದೆ. ಇದು ಏಪ್ರಿಲ್ನಲ್ಲಿ 4.83% ರಷ್ಟಿತ್ತು ಎಂದು ಬುಧವಾರ ಬಿಡುಗಡೆಯಾದ ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. ಈ ಅಂಕಿಅಂಶವು ಹೆಚ್ಚಿನ ಅರ್ಥಶಾಸ್ತ್ರಜ್ಞರು ಊಹಿಸಿದ್ದಕ್ಕಿಂತ ಕಡಿಮೆಯಾಗಿದೆ. ಇದರೊಂದಿಗೆ, ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್ 2023 ರಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗುರಿ ವ್ಯಾಪ್ತಿಯಲ್ಲಿ 2-6% ರಷ್ಟಿದೆ. ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಸಂಖ್ಯೆಯನ್ನು ಆಧರಿಸಿದ ವಾರ್ಷಿಕ ಹಣದುಬ್ಬರ ದರವು ಮೇ 2024 ರಲ್ಲಿ 4.75% (ತಾತ್ಕಾಲಿಕ) ಆಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಗುಣವಾದ ಹಣದುಬ್ಬರ ದರಗಳು ಕ್ರಮವಾಗಿ 5.28% ಮತ್ತು 4.15% ಆಗಿವೆ ಎಂದು ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ. ಗಮನಾರ್ಹವಾಗಿ, ಏಪ್ರಿಲ್ 2024 ಕ್ಕೆ ಹೋಲಿಸಿದರೆ ಸಾಂಬಾರ ಪದಾರ್ಥಗಳ ವಿಭಾಗವು ವರ್ಷದಿಂದ ವರ್ಷಕ್ಕೆ ಹಣದುಬ್ಬರದಲ್ಲಿ ಗಣನೀಯ ಕುಸಿತವನ್ನು ಕಂಡಿದೆ. ಗುಂಪುಗಳ ಪೈಕಿ, ‘ಬಟ್ಟೆ ಮತ್ತು…
ಪೂರ್ವಜರು ಅಥವಾ ಹಿರಿಯರು ತಾವು ಕಷ್ಟಪಟ್ಟು ದುಡಿದ ಹಣವನ್ನು ಸುರಕ್ಷಿತಗೊಳಿಸಲು ಹಿಂದಿನ ಕಾಲದಲ್ಲಿ ಹೂತಿಡುತ್ತಿದ್ದರು, ಆದರೆ ಆ ನಿಧಿ ಎಲ್ಲಿರುತ್ತದೆ ಎಂಬುದು ಈಗಿನ ಕಾಲದವರಿಗೆ ತಿಳಿದಿರುವುದಿಲ್ಲ. ಹಾಗಾದರೆ ಅಕ್ಕಪಕ್ಕದಲ್ಲಿರುವ ನಿಧಿಯನ್ನು ಯಾವ ಉಪಾಯದಿಂದ ತಿಳಿದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ…
ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪೆಮಾ ಖಂಡು ಅವರು ಮರು ಆಯ್ಕೆಯಾದ ನಂತರ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಖಂಡು ಅವರು ರಾಜ್ಯಪಾಲ ಕೆ.ಟಿ.ಪರ್ನಾಯಕ್ ಅವರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ. ಖಂಡು ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಗುರುವಾರ ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದಲ್ಲಿ ಅವರ ನಾಯಕತ್ವದ ಮುಂದುವರಿಕೆಯನ್ನು ಸೂಚಿಸುತ್ತದೆ. https://twitter.com/arunachaltimes_/status/1800862328034058302 ಅರುಣಾಚಲ ಪ್ರದೇಶದ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಹಿರಿಯ ಬಿಜೆಪಿ ನಾಯಕರಾದ ರವಿಶಂಕರ್ ಪ್ರಸಾದ್ ಮತ್ತು ತರುಣ್ ಚುಗ್ ಅವರನ್ನು ವೀಕ್ಷಕರಾಗಿ ಕಳುಹಿಸಲಾಗಿದೆ. https://kannadanewsnow.com/kannada/rave-party-case-telugu-actress-hema-granted-bail/ https://kannadanewsnow.com/kannada/action-will-be-taken-within-legal-framework-in-actor-darshans-case-minister-laxmi-hebbalkar/
ಬೆಂಗಳೂರು: ನಗರದಲ್ಲಿ ನಡೆದಿದ್ದಂತ ರೇವ್ ಪಾರ್ಟಿ ಪ್ರಕರಣ ಸಂಬಂಧ ತೆಲುಗು ನಟಿ ಹೇಮಾ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜೈಲುಪಾಲಾಗಿದ್ದರು. ಇಂತಹ ಪ್ರಕರಣದಲ್ಲಿ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ರೇವ್ ಪಾರ್ಟಿ ಪ್ರಕರಣ ಸಂಬಂಧ ನಟಿ ಹೇಮಾ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಬೆಂಗಳೂರಿನ ಎನ್ ಡಿ ಪಿಎಸ್ ವಿಶೇಷ ಕೋರ್ಟ್ ನ ನ್ಯಾಯಾಧೀಶರು ವಿಚಾರಣೆ ನಡೆಸಿದರು. ನಟಿ ಹೇಮಾ ಅವರಿಗೆ ಕೋರ್ಟ್ ಅರ್ಜಿಯ ವಿಚಾರಣೆಯ ಬಳಿಕ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ನಟಿ ಹೇಮಾಗೆ ಬೆಂಗಳೂರು ರೇವ್ ಪಾರ್ಟಿ ಪ್ರಕರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎನ್ ಡಿಪಿಎಸ್ ವಿಶೇಷ ಕೋರ್ಟ್ ನಿಂದ ಜಾಮೀನು ಸಿಕ್ಕಂತೆ ಆಗಿದೆ. https://kannadanewsnow.com/kannada/singer-kevin-jons-diagnosed-with-skin-cancer/ https://kannadanewsnow.com/kannada/action-will-be-taken-within-legal-framework-in-actor-darshans-case-minister-laxmi-hebbalkar/
ನವದೆಹಲಿ: ಗಾಯಕ ಕೆವಿನ್ ಜೊನಾಸ್ ಚರ್ಮದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಜೊನಾಸ್ ಸಹೋದರರಲ್ಲಿ ಒಬ್ಬರಾದ ಕೆವಿನ್ ಅವರು ಮಚ್ಚೆಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದಾಗ ಸುದ್ದಿಯಾಗಿದ್ದರು, ಇದು ಚರ್ಮದ ಕ್ಯಾನ್ಸರ್ ಎಂದು ತಿಳಿದುಬಂದಿದೆ. ಅವರು ತಮ್ಮ ಅಧಿಕೃತ ಖಾತೆಯಲ್ಲಿ ಪೋಸ್ಟ್ ಮೂಲಕ ಮತ್ತು ಜೊನಾಸ್ ಸಹೋದರರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಚಿಕಿತ್ಸೆಯ ಬಗ್ಗೆ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಕೆವಿನ್ ಜೊನಾಸ್ ಚರ್ಮದ ಕ್ಯಾನ್ಸರ್ ರೋಗನಿರ್ಣಯ ಇಬ್ಬರು ಮಕ್ಕಳ ತಂದೆ ತಮ್ಮ ಇತ್ತೀಚಿನ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ತಮ್ಮ ಚರ್ಮದ ಕ್ಯಾನ್ಸರ್ ರೋಗನಿರ್ಣಯದ ಬಗ್ಗೆ ಅಭಿಮಾನಿಗಳೊಂದಿಗೆ ಮುಕ್ತವಾಗಿ ಮಾತನಾಡಿದ್ದಾರೆ. ಗಾಯಕನು ತನ್ನ ಹಣೆಯ ಮೇಲಿನ ಕೂದಲಿನ ಬಳಿ ಮಾರಕ ಮಚ್ಚೆಯನ್ನು ಕಂಡುಕೊಂಡನು, ಅದು ರೋಗನಿರ್ಣಯವಾದಾಗ ಚರ್ಮದ ಕ್ಯಾನ್ಸರ್ ಎಂದು ತಿಳಿದುಬಂದಿದೆ. ತಮ್ಮ ಅಭಿಮಾನಿಗಳು ಮತ್ತು ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಅವರು ಒತ್ತಾಯಿಸಿದರು. ಮಂಗಳವಾರ ತನ್ನ ವೀಡಿಯೊವನ್ನು ಹಂಚಿಕೊಂಡ ಕೆವಿನ್, ತನ್ನ ಚರ್ಮದ ಕ್ಯಾನ್ಸರ್ ಆವಿಷ್ಕಾರ ಮತ್ತು ಶಸ್ತ್ರಚಿಕಿತ್ಸೆಯ ಮೂಲಕ ಚಿಕಿತ್ಸೆಯ ಬಗ್ಗೆ ಮಾತನಾಡಿದರು.…
ಮಂಡ್ಯ: ಇಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮದ್ದೂರು ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲ್ಲೂಕು ಕಚೇರಿಯಲ್ಲಿದ್ದ ಸಾರ್ವಜನಿಕರಿಂದ ದೂರು, ಕುಂದು ಕೊರತೆ ಅರ್ಜಿಗಳನ್ನು ಸ್ವೀಕರಿಸಿ ಸಾರ್ವಜನಿಕರೊಂದಿಗೆ ಚರ್ಚಿಸಿದರು. ನಿಗದಿತ ಕಲಾಮಿತಿಯಲ್ಲಿ ಅರ್ಜಿಗಳು ವಿಲೇವಾರಿಯಾಗಬೇಕು. ಸಾರ್ವಜನಿಕರ ಕೆಲಸ ಮಾಡಿಕೊಡಲು ಅನಗತ್ಯ ವಿಳಂಭ ಅಥವಾ ಅವರನ್ನು ಅಲೆದಾಡಿಸುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಲ್ಲಿ ಕ್ರಮ ವಹಿಸುವುದಾಗಿ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದರು. ತಾಲ್ಲೂಕು ಕಚೇರಿಯ ವಿವಿಧ ಶಾಖೆಗಳಿಗೆ ಭೇಟಿ ನೀಡಿ ಕಾರ್ಯನಿರ್ವಹಣೆಯ ಬಗ್ಗೆ, ಕಡತ ವಿಲೇವಾರಿಯ ಬಗ್ಗೆ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು. ತಾಲ್ಲೂಕು ಕಚೇರಿ ದುರಸ್ತಿ ಕೆಲಸ ಪ್ರಾರಂಭಕ್ಕೆ ಸೂಚನೆ ಮದ್ದೂರು ತಾಲ್ಲೂಕು ಕಚೇರಿಯಲ್ಲಿ ಮಳೆಯಿಂದ ನೀರು ಸೋರಿಕೆಯಾಗುತ್ತಿರುವ ಕಟ್ಟಡದ ಭಾಗಗಳ ಸರಿಪಡಿಸುವಿಕೆ, ಸಾರ್ವಜನಿಕರ ಶೌಚಾಲಯ, ಕಚೇರಿ ಸಿಬ್ಬಂದಿಗಳ ಶೌಚಾಲಯಯ ನಿರ್ಮಾಣ ಕಾಮಗಾರಿ, ಕಚೇರಿಯ ಕಾಂಪೌಂಡ್ ಸೇರಿದಂತೆ ಬಣ್ಣದ ಕೆಲಸಗಳನ್ನು ಶೀಘ್ರವಾಗಿ ಪ್ರಾರಂಭಿಸುವಂತೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಜಯಪ್ರಕಾಶ್ ಬಿ ಅವರಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಮದ್ದೂರು ತಾಲ್ಲೂಕು ತಹಶೀಲ್ದಾರ್ ಸೋಮಶೇಖರ್…
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್.18ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ಪರ ವಕೀಲರು ತಮ್ಮ ವಶಕ್ಕೆ ಪ್ರಕರಣ ಸಂಬಂಧ ವಿಚಾರಣೆ ನಡೆಸೋದಕ್ಕೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿದಂತ ನ್ಯಾಯಾಲಯವು ಬಾಡಿ ವಾರೆಂಟ್ ಜಾರಿಗೊಳಿಸಿದೆ. ಈ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಾಡಿ ವಾರೆಂಟ್ ಪಡೆದು, ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆಯೋದಕ್ಕೆ ತೆರಳುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಪ್ರಜ್ವಲ್ ರೇವಣ್ಣ ಅವರನ್ನು ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಎಸ್ಐಟಿ ತಮ್ಮ ವಶಕ್ಕೆ ಪಡೆಯೋ ಕಾರಣದಿಂದ, ಜೈಲಿನ ಬಳಿಯಲ್ಲಿ ಬಿಗಿ ಪೊಲೀಸ್ ಬಂಧೋಬಸ್ತ್ ಕೈಗೊಳ್ಳಲಾಗಿದೆ. https://kannadanewsnow.com/kannada/action-will-be-taken-within-legal-framework-in-actor-darshans-case-minister-laxmi-hebbalkar/ https://kannadanewsnow.com/kannada/bjp-leader-mohan-charan-majhi-takes-oath-as-the-chief-minister-of-odisha/
ಭುವನೇಶ್ವರ್: ಒಡಿಶಾದ ಮುಖ್ಯಮಂತ್ರಿಯಾಗಿ ನವೀನ್ ಪಟ್ನಾಯಕ್ ಅವರ ಉತ್ತರಾಧಿಕಾರಿಯಾಗಿ ಬಿಜೆಪಿ ಮುಖಂಡ ಚರಣ್ ಮೋಹನ್ ಮಾಝಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಹಲವಾರು ಉನ್ನತ ನಾಯಕರ ಸಮ್ಮುಖದಲ್ಲಿ ಒಡಿಶಾ ರಾಜ್ಯಪಾಲ ರಘುಬರ್ ದಾಸ್ ಕಿಯೋಂಜಾರ್ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಿದ್ದರು. https://twitter.com/ANI/status/1800856657536409650 ಬುಧವಾರದ ಪ್ರಮಾಣವಚನದೊಂದಿಗೆ, ಮಾಝಿ ಒಡಿಶಾದ ಮುಖ್ಯಮಂತ್ರಿಯಾದ ಮೊದಲ ಬಿಜೆಪಿ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾದರು, ಕರಾವಳಿ ರಾಜ್ಯದಲ್ಲಿ ಆಡಳಿತ ಪಕ್ಷವಾಗಿ ಬಿಜು ಜನತಾದಳದ 24 ವರ್ಷಗಳ ಸರಣಿಯನ್ನು ಕೊನೆಗೊಳಿಸಿದರು. ನಿಯೋಜಿತ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರಲ್ಲದೆ, ನಿಯೋಜಿತ ಉಪಮುಖ್ಯಮಂತ್ರಿಗಳಾದ ಕನಕ್ ವರ್ಧನ್ ಸಿಂಗ್ ದೇವ್ ಮತ್ತು ಪ್ರಗತಿ ಪರಿದಾ ಕೂಡ ಮಾಝಿ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು. ಸುರೇಶ್ ಪೂಜಾರಿ, ನಿತ್ಯಾನಂದ ಗೊಂಡ್, ರಬಿನಾರಾಯಣ್ ನಾಯಕ್, ಕೃಷ್ಣ ಚಂದ್ರ…













