Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಬೆಂಗಳೂರು ವಿಭಾಗದ ಹೆಬ್ಬಾಳ ಮತ್ತು ಲೊಟ್ಟೆಗೊಲ್ಲಹಳ್ಳಿ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 148 ಮತ್ತು 152ರ ಬದಲಿಗೆ ರಸ್ತೆ ಕೆಳ ಸೇತುವೆಯ ಅಗತ್ಯ ನಿರ್ಮಾಣ ಕಾಮಗಾರಿಗಳಿಂದಾಗಿ, ಈ ಕೆಳಗಿನ ರೈಲು ಸೇವೆಗಳನ್ನು ಈ ಕೆಳಗಿನಂತೆ ಮಾರ್ಗ ಬದಲಾವಣೆ ಮತ್ತು ಮರು ವೇಳಾಪಟ್ಟಿನಿಗದಿಪಡಿಸಲಾಗುತ್ತಿದೆ: ಅವುಗಳ ಮಾಹಿತಿ ಈ ಕೆಳಗಿನಂತಿವೆ: ರೈಲು ಮಾರ್ಗ ಬದಲಾವಣೆ: ಜನವರಿ 26 ರಂದು ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16565 ಯಶವಂತಪುರ-ಮಂಗಳೂರು ಸೆಂಟ್ರಲ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಬಾನಸವಾಡಿಯಲ್ಲಿ ನಿಯಮಿತ ನಿಲುಗಡೆಯನ್ನು ಬಿಟ್ಟು ಯಲಹಂಕ, ಚನ್ನಸಂದ್ರ ಮತ್ತು ಕೃಷ್ಣರಾಜಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ರೈಲುಗಳ ಮರು ವೇಳಾಪಟ್ಟಿ: 1. ಫೆಬ್ರವರಿ 22 ಮತ್ತು ಮಾರ್ಚ್ 01, 2025 ರಂದು ರೈಲು ಸಂಖ್ಯೆ 00630 ತುಘಲಕಾಬಾದ್-ಯಶವಂತಪುರ ಪಾರ್ಸೆಲ್ ಕಾರ್ಗೋ ಎಕ್ಸ್ ಪ್ರೆಸ್ ರೈಲು ತುಘಲಕಾಬಾದ್ ನಿಲ್ದಾಣದಿಂದ 300 ನಿಮಿಷ ತಡವಾಗಿ ಹೊರಡಲಿದೆ. 2. ಫೆಬ್ರವರಿ 25 ಮತ್ತು ಮಾರ್ಚ್ 04, 2025 ರಂದು ರೈಲು ಸಂಖ್ಯೆ…

Read More

ತುಮಕೂರು: ಆನ್ ಲೈನ್ ಗೇಮ್ ಆಡಬೇಡ ಎಂಬುದಾಗಿ ಬುದ್ಧಿ ಹೇಳಿದ್ದಕ್ಕೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ನಗರದ ಹೊರಪೇಟೆಯ ಯುವಕ ಟಿ.ಎಸ್ ಭರತ್(24) ಎಂಬಾತನೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಭರತ್ ಕೆಲ ದಿನಗಳಿಂದ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದಿದ್ದನು. ಈ ಗೇಮ್ ನಲ್ಲಿ 20 ಸಾವಿರ ಹಣ ಹಾಕಿ ಕಳೆದುಕೊಂಡಿದ್ದನು. ಈ ವಿಚಾರ ಗೊತ್ತಾದಂತ ತಾಯಿಯು, ಇನ್ಮುಂದೆ ಆನ್ ಲೈನ್ ಗೇಮ್ ಆಡೋದು ಬೇಡ ಎಂಬುದಾಗಿ ಬುದ್ಧಿ ಹೇಳಿದ್ದಾರೆ. ಈ ವಿಚಾರಕ್ಕಾಗಿ ಭರತ್ ಸಿಟ್ಟು ಮಾಡಿಕೊಂಡು ತಮ್ಮ ಹಳೆಯ ಹೆಂಚಿನ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/congress-looted-on-one-side-thieves-on-the-other-narayanasamy/ https://kannadanewsnow.com/kannada/supreme-court-pauses-order-directing-rollout-of-ayushman-bharat-scheme-in-delhi/

Read More

ಶಿವಮೊಗ್ಗ: ಸಾಗರದ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾಗರದ ಡಿವೈಎಸ್ಪಿ ಅವರಿಗೆ ಪ್ರದೀಪ್ ಎಂಬುವರು ದೂರು ನೀಡಿದ್ದಾರೆ. ಇಂದು ಸಾಗರ ನಗರದ ಡಿವೈಎಸ್ಪಿ ಕಚೇರಿಗೆ ತೆರಳಿದಂತ ಅವರು, ಸಾಗರ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ದೂರು ನೀಡಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಪ್ರದೀಪ್ ಎಂಬುವರು, ಜನವರಿ.15, 2025ರಂದು ನನ್ನ ಮೇಲೆ ದರೋಡೆಗೆ ಮಾದಕ ದ್ರವ್ಯದ ಅಮಲಿನಲ್ಲಿದ್ದಂತ ವ್ಯಕ್ತಿಯೊಬ್ಬ ಹಲ್ಲೆ ಮಾಡಿದ್ದಾನೆ. ಕೊಲೆ ಬೆದರಿಕೆ ಕೂಡ ಹಾಕಿದ್ದಾನೆ. ಕಾರಿನ ಗ್ಲಾಸ್ ಹೊಡೆದು ನಷ್ಟ ಉಂಟು ಮಾಡಿದ್ದಾನೆ. ಈ ಆರೋಪಿಯ ವಿರುದ್ಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಆದರೇ ಪೊಲೀಸರು ಮಾದಕ ದ್ರವ್ಯ ಪತ್ತೆ ಪರೀಕ್ಷೆಯನ್ನು ಮಾಡದೇ, ಕೇವಲ ಮೂತ್ರ ಪರೀಕ್ಷೆ ಮಾಡಿಸಿ, ಅದರಲ್ಲಿ ವರದಿ ನೆಗೆಟಿವ್ ಬಂದಿದ್ದಕ್ಕೆ ಆತನನ್ನು ಬಿಟ್ಟು ಕಳಿಸಿದ್ದಾಗಿ ಆರೋಪಿಸಿದರು. ನಾವು ಕೇಸ್ ದಾಖಲಾದ ಬಳಿಕ…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ತನ್ನ ತೀರ್ಪನ್ನು ಕಾಯ್ದಿರಿಸಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆಯಲ್ಲಿ ಪೋಕ್ಸೋ ಕೇಸ್ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿತ್ತು. ಈ ಕೇಸ್ ರದ್ದು ಕೋರಿ ಸಲ್ಲಿಸಲಾಗಿದ್ದಂತ ವಿಚಾರಣೆ ನಡೆಸಿದ್ದಂತ ಹೈಕೋರ್ಟ್, ಅವರಿಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯ್ತಿ ನೀಡಿತ್ತು. ಇದೀಗ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಸಂತ್ರಸ್ತೆಯ ಸಹೋದರ ಪ್ರಶ್ನಿಸಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಂಧಿಸುವಂತೆ, ಹೆಚ್ಚಿನ ತನಿಖೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿರುವಂತ ಹೈಕೋರ್ಟ್, ವಿಚಾರಣೆ ಪೂರ್ಣಗೊಳಿಸಿ ತನ್ನ ಆದೇಶವನ್ನು ಕಾಯ್ದಿರಿಸಿದೆ. https://kannadanewsnow.com/kannada/congress-looted-on-one-side-thieves-on-the-other-narayanasamy/ https://kannadanewsnow.com/kannada/supreme-court-pauses-order-directing-rollout-of-ayushman-bharat-scheme-in-delhi/

Read More

ಬೀದರ್: ನಗರದಲ್ಲಿ ನಿನ್ನೆ ಭಾರತೀಯ ಸ್ಟೇಟ್ ಬ್ಯಾಂಕ್ ಬಳಿ ದರೋಡೆ ನಡೆದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಅವರು ಸಚಿವ ರಹೀಂಖಾನ್ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹರಿಶೇಖರನ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಘಟನೆಯ ಮಾಹಿತಿ ಪಡೆದ ಸಚಿವರು, ತನಿಖೆಯನ್ನು ತ್ವರಿತಗೊಳಿಸುವಂತೆ ಸೂಚನೆ ನೀಡಿದರು. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಬಂಧಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ ಖಂಡ್ರೆ, ಮೃತ ಗಿರಿ ವೆಂಕಟೇಶ್ ಕುಟುಂಬದೊಂದಿಗೆ ಸರ್ಕಾರ ನಿಲ್ಲುತ್ತದೆ. ಅವರ ಕುಟುಂಬದ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ. ಮೃತರ ಕುಟುಂಬಕ್ಕೆ ವಿಶೇಷ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ತಿಳಿಸಿದರು. ನಿನ್ನೆ ರಾತ್ರಿ ತಾವು ಹೈದ್ರಾಬಾದ್ ನ ಕೇರ್ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಧೈರ್ಯ ಹೇಳಿದ್ದು, ವೈದ್ಯರಿಗೆ ಉತ್ತಮ…

Read More

ಬೆಂಗಳೂರು: ರಾಜ್ಯ ಸರಕಾರವು ಗೃಹ ಸಚಿವರಿಗೆ ಮಾಹಿತಿಗಳನ್ನೇ ಕೊಡದೆ ಕತ್ತಲಲ್ಲಿ ಇಟ್ಟಿರುವುದು ಸರಿಯಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಸರಕಾರ ಗೃಹ ಮಂತ್ರಿಗಳನ್ನೇ ಮೂಲೆಗುಂಪು ಮಾಡಿದೆ ಎಂದು ಅವರ ಮಾತಿನಿಂದ ಗೊತ್ತಾಗುವುದಾಗಿ ತಿಳಿಸಿದರು. ಮಾನ್ಯ ಗೃಹ ಸಚಿವರು ಏನೇ ಕೇಳಿದರೂ ಮಾಹಿತಿ ತರಿಸಿಕೊಳ್ಳುವೆ ಎನ್ನುತ್ತಾರೆ. ಸಿ.ಟಿ.ರವಿ ಕೇಸಿನಲ್ಲೂ ಅಲ್ಲಿ ನಡೆದ ಘಟನೆಗಳ ಮಾಹಿತಿ ಇಲ್ಲ; ಏನಾಗಿದೆ ಎಂದು ಗೊತ್ತಿಲ್ಲ ಎಂದಿದ್ದರು ಎಂದು ಟೀಕಿಸಿದರು. ಬಳಿಕ ಪೊಲೀಸರ ಕ್ರಮ ಸರಿ ಇಲ್ಲ; ಸಿ.ಟಿ.ರವಿ ಅವರನ್ನು ಕಬ್ಬಿನಗದ್ದೆಯಲ್ಲಿ ಸುತ್ತಾಡಿಸಿದರು ಮತ್ತು ಇಡೀ ರಾತ್ರಿ ಬೇರೆ ಬೇರೆ ಕಡೆ ಸುತ್ತಾಡಿಸಿದ್ದಾಗಿ ಪತ್ರಕರ್ತರು ಕೇಳಿದಾಗ, ಅದು ನನಗೆ ಗೊತ್ತಾಗಲಿಲ್ಲ; ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೇಸು ಹಾಕಿದ್ದರಿಂದ ಅದನ್ನು ನಿಭಾಯಿಸಲು ಹಾಗೆ ಮಾಡಿದ್ದಾರೆ ಎಂದಿದ್ದರು ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಅವರಿಗೆ ಬೇಕಾದ ವಿಚಾರ ಬಂದರೆ…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನನ್ನ ಅನುಭವ, ಸೇವೆ ಹಾಗೂ ಹಿರಿತನದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಎಲ್ಲಾ ರೀತಿಯ ಅರ್ಹತೆ ನನಗಿದೆ. ಆದರೆ ಆ ಸ್ಥಾನದ ಆಕಾಂಕ್ಷಿ ನಾನಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನಮ್ಮ ಪಕ್ಷದಲ್ಲಿ ಹೈಕಮಾಂಡ್ ಪ್ರಬಲವಾಗಿದೆ. ಯಾವುದೇ ಸಮಸ್ಯೆಗಳನ್ನೂ ಸಮರ್ಥವಾಗಿ ನಿಭಾಯಿಸಲಿದೆ. ಪ್ರತಿಯೊಬ್ಬ ರಾಜಕಾರಣಿಗೂ ರಾಜಕೀಯದಲ್ಲಿ ಮೇಲ್ಮಟ್ಟದ ಹುದ್ದೆಗಳನ್ನು ಅಲಂಕರಿಸಬೇಕೆಂಬ ಆಕಾಂಕ್ಷೆ ಇರುತ್ತದೆ ಅದು ಸಹಜ. ಆದರೆ ಅದಕ್ಕೆ ಸಮಯ ಕೂಡಿಬರಬೇಕಿದೆ ಎಂದಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನವೂ ಖಾಲಿ ಇಲ್ಲ, ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಖಾಲಿ ಇಲ್ಲ. ಹಾಗಾಗಿ ಆ ಸ್ಥಾನಗಳ ಬಗ್ಗೆ ಅಪೇಕ್ಷೆ ವ್ಯಕ್ತಪಡಿಸುವುದು ಸರಿಯಲ್ಲ. ನಮ್ಮ ಹೈಕಮಾಂಡ್ ಈ ವಿಷಯಗಳಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದರು. ನಾನಂತೂ ಯಾವುದೇ ಹುದ್ದೆಯ ಆಕಾಂಕ್ಷಿ ಅಲ್ಲ ಪಕ್ಷದ ವಿಚಾರದಲ್ಲಿ ಏನೇ ಇದ್ದರೂ ನಾಲ್ಕು ಗೋಡೆಗಳ ಮಧ್ಯೆ ಹೇಳಬೇಕು. ಏನಾದರೂ ಇದ್ದರೆ ಸುರ್ಜೆವಾಲಾ ಅವರಿಗೆ ಹೇಳಲಿ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.…

Read More

ಮಂಗಳೂರು : ಕೋಟೆಕಾರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು. ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು…

Read More

ಬೆಂಗಳೂರು: ತಾನು ದಪ್ಪಗಿದ್ದು, ತನ್ನದೇ ದೇಹವನ್ನು ಹೋಲುವಂತ ದಪ್ಪಗಿನ ಹುಡುಗಿ ಮದುವೆಯಾಗಲು ಸಿಗುತ್ತಿಲ್ಲ ಎಂಬುದಾಗಿ ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರಿನ ಉತ್ತರ ತಾಲ್ಲೂಕಿನ ನಾರಯಣಪ್ಪನಪಾಳ್ಯದಲ್ಲಿ ಆಟೋ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ವೆಂಕಟೇಶ್(29) ಎಂಬಾತನೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಯುವಕನಾಗಿದ್ದಾನೆ. ಗೋವಿಂದರಾಜು ಹಾಗೂ ಮಂಗಳಮ್ಮ ಎಂಬುವರ ಪುತ್ರ ವೆಂಕಟೇಶ್ ಆಗಿದ್ದಾರೆ. ಮದುವೆಯಾಗೋದಕ್ಕಾಗಿ ಹುಡುಗಿಯನ್ನು ಹುಡುಕುತ್ತಿದ್ದನು. ಸುಮಾರು 15 ಹುಡುಗಿಯರನ್ನು ನೋಡಿದ್ದರೂ ವೆಂಕಟೇಶ್ ದಪ್ಪ ಇದ್ದಾನೆ ಅಂತ ಹುಡುಗಿ ಹಾಗೂ ಪೋಷಕರು ಮದುವೆ ನಿರಾಕರಿಸಿದ್ದರು. ತನ್ನಷ್ಟೇ ದಪ್ಪಗಿರುವಂತ ಹುಡುಗಿ ಸಿಗುತ್ತಿಲ್ಲ ಎಂಬುದಾಗಿ ಮನನೊಂದಂತ ಆಟೋ ಚಾಲಕ ವೆಂಕಟೇಶ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ವೆಂಕಟೇಶ್ ಚಿಕ್ಕಮ್ಮ ಪೋನ್ ಮಾಡಿದರೂ ಪೋನ್ ಪಿಕ್ ಮಾಡದೇ ಇದ್ದಾಗ ಮನೆಗೆ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/pme-drive-plis-contribution-to-eco-friendly-automobile-sector-crucial-hdk/ https://kannadanewsnow.com/kannada/supreme-court-pauses-order-directing-rollout-of-ayushman-bharat-scheme-in-delhi/

Read More

ಬೆಂಗಳೂರು: ಕಳೆದ ಹತ್ತು ವರ್ಷಗಳಲ್ಲಿ ಭಾರತದ ಅಟೋಮೊಬೈಲ್ ಕ್ಷೇತ್ರದಲ್ಲಿ ಅಭೂತಪೂರ್ವ ಕ್ರಾಂತಿ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಾರಿಗೆ ಬಂದಿರುವ ಪಿಎಂ ಇ-ಡ್ರೈವ್ ಯೋಜನೆಯಿಂದ ಮಾಲಿನ್ಯರಹಿತ ಸಾರಿಗೆ ವ್ಯವಸ್ಥೆಯ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯ ಭಾರತ್ ಮಂಟಪದಲ್ಲಿ ಐದು ದಿನಗಳ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸಚಿವರು ಭಾಷಣ ಮಾಡಿದರು. ವಾಯುಮಾಲಿನ್ಯ ನಿವಾರಣೆ ನಿಟ್ಟಿನಲ್ಲಿ ಅನುಷ್ಠಾನಕ್ಕೆ ತರಲಾಗಿರುವ ಹಸಿರುಪೂರಕ ಉಪ ಕ್ರಮಗಳಿಂದ ದೇಶೀಯ ಎಕೋ ಅಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚು ಅನುಕೂಲ ಆಗಿದೆ. ಎಲೆಕ್ಟ್ರಿಕ್ ವಾಹನಗಳು (ಇವಿಗಳು), ಶುದ್ಧ ಇಂಧನ ಪರಿಹಾರಗಳು ಮತ್ತು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡಿರುವ ಪರಿಸರ ಸ್ನೇಹಿ ಸಾರಿಗೆಯಲ್ಲಿ ಭಾರತವು ನಾಗಾಲೋಟದಲ್ಲಿ ಅಭಿವೃದ್ಧಿ ಹೊಂದುತ್ತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು. ಸ್ವಚ್ಛ ಭಾರತ್ ಅಭಿಯಾನವೂ ಸೇರಿದಂತೆ ಪ್ರಧಾನಮಂತ್ರಿಗಳ ಪರಿಸರ…

Read More