Author: kannadanewsnow09

ಬೆಂಗಳೂರು : “ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಇಷ್ಟೋಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದ ಅವರು, “ನಾನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿ ಈ ಬಾರಿಯ ಬಜೆಟ್ ನಲ್ಲಿ ರಾಜ್ಯದ ಯೋಜನೆಗಳಿಗೆ ಆದ್ಯತೆ ನೀಡಬೇಕು, ನೀರಾವರಿ ಯೋಜನೆಗಳಿಗೆ ಈಗಾಗಲೇ ಘೋಷಣೆ ಮಾಡಿರುವ ಹಣ ಇನ್ನು ಬಿಡುಗಡೆಯಾಗಿಲ್ಲ. ಕರ್ನಾಟಕ ರಾಜ್ಯದಿಂದ ನೀವು ಆಯ್ಕೆಯಾಗಿದ್ದು, ರಾಜ್ಯದ ಯೋಜನೆಗಳು ಹಾಗೂ ಬೆಂಗಳೂರಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದ್ದೆ ಎಂದರು. ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಮಂತ್ರಿಗಳ ಭೇಟಿಗೆ ಕಾಲಾವಕಾಶ ಕೋರಿದ್ದೆ. ಕಳೆದ ಬಜೆಟ್ ಗಳಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5 ಸಾವಿರ ಕೋಟಿಯನ್ನು ಇನ್ನು ನೀಡಿಲ್ಲ. ಈ ಬಾರಿಯ ಬಜೆಟ್ ನಲ್ಲೂ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಅನ್ಯಾಯದ ವಿರುದ್ಧ ಯಾವ ರೀತಿಯ ಹೋರಾಟ ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ.…

Read More

ಬೆಂಗಳೂರು: ರಾಜ್ಯದಲ್ಲಿ ಮದುವೆಯಾದಂತ ನವ ದಂಪತಿಗಳು ವಿವಾಹ ನೋಂದಣಿಗಾಗಿ ಸಬ್ ರಿಜಿಸ್ಟಾರ್ ಕಚೇರಿಗೆ ತೆರಳಬೇಕಾಗಿತ್ತು. ಆದ್ರೇ ಈ ಪ್ರಕ್ರಿಯೆಗೆ ಇನ್ಮುಂದೆ ಬ್ರೇಕ್ ಹಾಕಲಾಗುತ್ತಿದೆ. ಇನ್ನೂ ಏನಿದ್ದರೂ ಆನ್ ಲೈನ್ ಮೂಲಕವೇ ವಿವಾಹ ನೋಂದಣಿ ಮಾಡಬಹುದಾಗಿದೆ. ಈ ಸಂಬಂಧದ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂದೂ ಮ್ಯಾರೇಜ್ ಆ್ಯಕ್ಟ್ ಕಾಯ್ದೆಗೆ ತಿದ್ದುಪಡಿ ತರೋದಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ವಿವಾಹ ಸರಳೀಕರಣಕ್ಕೆ ಸರ್ಕಾರದ ಸಮ್ಮತಿ ನೀಡಲಾಗಿದೆ. ಹಿಂದೂ ವಿವಾಹ ನೊಂದಣಿ ಕಾಯ್ದೆ 2024 ಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ನೋಂದಣಿ ಹೇಗೆ.? ಈವರೆಗೆ ವಿವಾಹ ನೋಂದಣಿಯನ್ನು ಸಬ್ ರಿಜಿಸ್ಟರ್ ಕಚೇರಿಗೆ ತೆರಳಿ ಮಾಡಬಹುದಾಗಿತ್ತು. ಅದಕ್ಕೆ ಪರ್ಯಾಯವಾಗಿ ಯಾವುದೇ ಬೇರೆ ವ್ಯವಸ್ಥೆ ಇರಲಿಲ್ಲ. ಈಗ ಇದನ್ನು ಬದಲಾವಣೆ ಮಾಡಲಾಗುತ್ತಿದೆ. ಸಬ್ ರಿಜಿಸ್ಟರ್ ಕಚೇರಿಗೆ ತೆರಳಿ ವಿವಾಹ ನೋಂದಣಿ ಪ್ರಕ್ರಿಯೆಗೆ ತಿಲಾಂಜಲಿ ನೀಡಲಾಗಿದೆ. ಇದರ ಬದಲಾಗಿ ಆನ್ಲೈನ್ ಮೂಲಕ ನೊಂದಣಿಗೆ ಅವಕಾಶ ನೀಡಲಾಗುತ್ತಿದೆ. ಗ್ರಾಮ ಒನ್, ಕಾವೇರಿ 2ನಲ್ಲಿ ನೊಂದಣಿ ಮಾಡಬಹುದು. ಈ ಮೂಲಕ ಸಬ್ ರಿಜಿಸ್ಟರ್ ಕಚೇರಿಗೆ…

Read More

ರಾಂಚಿ: ನಿನ್ನೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿದ್ದಂತ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಇಂದು ರಾಂಚಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರನ್ನು ರಾಂಚಿಯ ಪಿಎಂಎಲ್ಎ ನ್ಯಾಯಾಲಯವು 1 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ನಿನ್ನೆ ಬಂಧಿಸಲಾಗಿತ್ತು. ಇಂದು ಅವರನ್ನು ರಾಂಚಿಯ ಪಿಎಂಎಲ್ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯದ ಮುಂದೆ ಇಡಿ ಪರ ವಕೀಲರು ಹೇಮಂತ್ ಸೊರೆನ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರಿದರು. ಅವರ ಮನವಿ ಪುರಸ್ಕರಿಸಿದಂತ ರಾಂಚಿಯ ಪಿಎಂಎಲ್ಎ ನ್ಯಾಯಾಲಯವು 1 ದಿನಗಳ ಕಾಲ ಹೇಮಂತ್ ಸೊರೆನ್ ಅವರನ್ನು 1 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಈ ಮೂಲಕ ಹೇಮಂತ್ ಸೊರೆನ್ ಜೈಲು ಪಾಲಾಗುವಂತೆ ಆಗಿದೆ.

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಈಗಾಗಲೇ ರಾಜ್ಯದ ರೈತರು ಸಹಕಾರ ಸಂಘಗಳಲ್ಲಿ ಮಾಡಿರುವಂತ ಸಾಲದ ಅಸಲು ಪಾವತಿಸಿದ್ರೆ ಬಡ್ಡಿ ಮನ್ನಾ ಮಾಡೋದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದು ಇಂತಹ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಡತ ಮಂಡಿಸಿ ಅನುಮೋದನೆಯನ್ನು ಪಡೆಯಲಾಗಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಸಚಿವ ಹೆಚ್.ಕೆ ಪಾಟೀಲ್ ಮಾಧ್ಯಮಗಳಿಗೆ ತಿಳಿಸಿದರು. ಸಹಕಾರಿ ಸಮೃದ್ಧ ಸೌಧ ನಿರ್ಮಾಣಕ್ಕೆ ಒಪ್ಪಿಗೆ. ಸಹಕಾರ ಸಂಘಗಳ ಮೂಲಕ ಸಾಲ ಸೌಲಭ್ಯ. ಸಾಲ ಪಡೆದ ರೈತರ ಸುಸ್ತಿ‌ಬಡ್ಡಿ ಮನ್ನಾ. ಮಧ್ಯಮಾವಧಿ, ಧೀರ್ಘಾವದಿ ಸುಸ್ತಿ ಬಡ್ಡಿ ಮನ್ನಾ ಮಾಡಲಾಗುತ್ತದೆ. ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಅನುಮೋದನೆ ನೀಡಲಾಗುತ್ತದೆ. 440 ಕೋಟಿ 20 ಲಕ್ಷ ಸುಸ್ತಿ ಬಡ್ಡಿ ಮನ್ನಾ. ಸಹಕಾರಿ ಸಂಘಗಳಿಂದ ಪಡೆದಿದ್ದ ಸಾಲದ ಮೇಲಿನ ಬಡ್ಡಿ, ಸುಸ್ತಿ ಬಡ್ಡಿ ಮನ್ನಾ ಮಾಡಲಾಗುತ್ತಿದೆ. ಸರ್ಕಾರ ನಿರ್ಧಾರಕ್ಕೆ ಸಂಪುಟದ ಅನುಮೋದನೆ ನೀಡಿದೆ…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ಸೇರಿದಂತೆ ಮಹತ್ವದ ನಿರ್ಧಾರಗಳಿಗೆ ಅಸ್ತು ಎನ್ನಲಾಗಿದೆ. ಆ ಸಚಿವ ಸಂಪುಟ ಸಭೆಯ ಹೈಲೈಟ್ಸ್ ಮುಂದೆ ಓದಿ. ಇಂದು ವಿಧಾನಸೌಧದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹಂಚಿಕೊಂಡರು. ಇಂದು 36 ವಿಷಯಗಳ ಬಗ್ಗೆ ಚರ್ಚೆಯಾಗಿದೆ. 3 ವಿಷಯಗಳನ್ನ ಡೆಫರ್ ಮಾಡಲಾಗಿದೆ. ಕೆಜಿಎಫ್ ಚಿನ್ನದ ಗಣಿಗಾರಿಕೆಗೆ ಅನುಮತಿ ಇಲ್ಲ. ಕೇಂದ್ರದಿಂದ ಗಣಿ ಚಟುವಟಿಕೆ ಕೈಗೊಳ್ಳಲು ಬಗ್ಗೆ ಅನುಮತಿ. 1೦೦೦ ಎಕರೆ ಪ್ರದೇಶದಲ್ಲಿ ಚಟುವಟಿಕೆ. ಕೇಂದ್ರದ ಪ್ರಾಸ್ತಾವನೆಗೆ ನಿರ್ಣಯ ತೆಗೆದುಕೊಂಡಿಲ್ಲ. ಇಂದು ಅದನ್ನ ಕೈಬಿಡಲಾಗಿದೆ ಎಂದರು. ಸಿವಿಲ್ ಸೇವೆ ನೇಮಕಾತಿ ತಿದ್ದುಪಡಿಗೆ ಸಮ್ಮತಿ ನೀಡಲಾಗಿದೆ. ಕ್ರೀಡಾಪಟುಗಳಿಗೆ ನೇರನೇಮಕಾತಿಯಲ್ಲಿ ಅವಕಾಶ ನೀಡಲಾಗುತ್ತಿದೆ. ಶೇ.2% ಅವಕಾಶ ನೀಡಲು ಸಂಪುಟ ಸಮ್ಮತಿ ಸೂಚಿಸಲಾಗಿದೆ ಎಂದು ತಿಳಿಸಿದರು. ಹಾಸನ ವೈದ್ಯಕೀಯ ಸಂಸ್ಥೆ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕಾಗಿ…

Read More

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಮತ್ತು ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಮಧ್ಯಂತರ ಬಜೆಟ್ ಅಧಿವೇಶನ ಪ್ರಾರಂಭವಾಗುವ ಮೊದಲು ಬುಧವಾರ ರಾಜ್ಯಸಭೆಯಲ್ಲಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೂಲಗಳ ಪ್ರಕಾರ, ನಾಮನಿರ್ದೇಶಿತ ರಾಜ್ಯಸಭಾ ಸದಸ್ಯರಿಗೆ ಉದ್ದೇಶಿಸಲಾದ ಪ್ರಮಾಣ ವಚನವನ್ನು ಆಕಸ್ಮಿಕವಾಗಿ ಓದಿದ ನಂತರ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರು ಮಲಿವಾಲ್ ಅವರನ್ನು ಪ್ರಮಾಣವಚನವನ್ನು ಮತ್ತೆ ತೆಗೆದುಕೊಳ್ಳುವಂತೆ ಕೇಳಿಕೊಂಡರು. ಸದನದಲ್ಲಿ ‘ಅನಗತ್ಯ ಘೋಷಣೆಗಳಿಂದ’ ಮಲಿವಾಲ್ ಅವರ ಪ್ರಮಾಣವಚನಕ್ಕೆ ಅಡ್ಡಿಯಾಯಿತು. ಇದು ಅವರನ್ನು ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸೋದಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ. ಘಟನಾತ್ಮಕ ದಿನಕ್ಕೆ ಪ್ರತಿಕ್ರಿಯೆಯಾಗಿ, ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ರಾಷ್ಟ್ರದ ಸೇವೆಗೆ ತಮ್ಮ ಅಚಲ ಸಮರ್ಪಣೆಯನ್ನು ಪುನರುಚ್ಚರಿಸಿದರು. ತಳಮಟ್ಟದ ಕಾಳಜಿಗಳನ್ನು ಹೆಚ್ಚಿಸುವಲ್ಲಿ ದೃಢವಾಗಿ ಉಳಿಯುವುದಾಗಿ ಮಲಿವಾಲ್ ಪ್ರತಿಜ್ಞೆ ಮಾಡಿದರು. “ಇಂದು ನನಗೆ ದೊಡ್ಡ ದಿನ. ಇಂದು ನಾನು ನನ್ನ ಜೀವನವನ್ನು ದೇಶಕ್ಕೆ ಮುಡಿಪಾಗಿಡುತ್ತೇನೆ ಎಂದು ಪ್ರತಿಜ್ಞೆ…

Read More

ಹಾವೇರಿ: ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಇದಕ್ಕೆ ನಾನೇ ಗ್ಯಾರಂಟಿ ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಹಾವೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಆ ಬಳಿಕ ಮತ್ತೆ ಬಿಜೆಪಿ ಸರ್ಕಾರವೇ ಬರಲಿದೆ. ಇದಕ್ಕೆ ನಾನು ಗ್ಯಾರಂಟಿ ಎಂದರು. ಸಿದ್ಧರಾಮಯ್ಯ ಅವರು ರೈತರನ್ನು ಕಡೆಗಣನೆ ಮಾಡ್ತಿದ್ದಾರೆ. ರಾಜ್ಯದ ರೈತರ ಪಾಲಿಗೆ ಈ ಸರ್ಕಾರ ಸತ್ತು ಹೋಗಿದೆ. ಗ್ಯಾರಂಟಿ ಯೋಜನೆಯ ಜಾರಿಯ ನಂತ್ರ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನ ಬೇಸತ್ತು ಹೋಗಿದ್ದಾರೆ ಎಂದರು. ಲೋಕಸಭಾ ಚುನಾವಣೆಯ ಬಳಿಕ ಕಾದು ನೋಡಿ ರಾಜ್ಯದಲ್ಲಿ ಮಹತ್ವದ ರಾಜಕೀಯ ಬದಲಾವಣೆ ಆಗಲಿದೆ. ರಾಜ್ಯದಲ್ಲಿ ಮುಂದೆ ಬಿಜೆಪಿ ಸರ್ಕಾರವೇ ಬರಲಿದೆ ಎಂದು ತಿಳಿಸಿದರು.

Read More

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ನಂತರ ರಾಜ್ಯ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನು ವಾಪಸ್ ಪಡೆಯಲಿದೆ. ಅದೇ ಮಾತನ್ನು ತನ್ನ ಶಾಸಕರೊಬ್ಬರಿಂದ ಹೇಳಿಸಿದೆ ಎಂದು ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮಾಗಡಿ ಶಾಸಕ ಬಾಲಕೃಷ್ಣ ಅವರು “ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ” ಎಂದು ನೀಡಿರುವ ಹೇಳಿಕೆಯನ್ನು ಖಂಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ ಎಂದು ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣ ಅವರು ಹೇಳಿರುವುದು ಕಾಂಗ್ರೆಸ್ ಸರಕಾರದ ಅಸಲಿ ಆಲೋಚನೆಯನ್ನು ಬಯಲು ಮಾಡಿದೆ. ಕೊಟ್ಟ ಕೈಯ್ಯಲ್ಲೆ ಕಸಿದುಕೊಳ್ಳುವ ಹುನ್ನಾರ ಇಲ್ಲಿ ಸ್ಫುಟವಾಗಿ ಗೋಚರಿಸುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಪಕ್ಷ, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಅಪ್ಪಣೆ ಇಲ್ಲದೆ ಶಾಸಕರು ಇಂಥ ಮಹತ್ವದ ಹೇಳಿಕೆಯನ್ನು ಅದೂ ಚುನಾವಣೆ ಹೊತ್ತಿನಲ್ಲಿ ಕೊಡಲು ಸಾಧ್ಯವೇ? ಅಲ್ಲಿಗೆ ಯುದ್ಧಕ್ಕೆ ಮೊದಲೇ ಕಾಂಗ್ರೆಸ್…

Read More

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಮಧ್ಯಂತರ ಕೇಂದ್ರ ಬಜೆಟ್ ಅನ್ನು ಇಂದು ಸಂಸತ್ತಿನಲ್ಲಿ ಮಂಡಿಸಿದರು. ಇದು ಪ್ರಸ್ತುತ ಹಣಕಾಸು ಸಚಿವರು ಮಂಡಿಸಿದ ಸತತ ಆರನೇ ಬಜೆಟ್ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಆಗಿದೆ. ಆದಾಯ ತೆರಿಗೆಯಿಂದ ಹಿಡಿದು ಹಸಿರು ಇಂಧನ, ಪ್ರವಾಸೋದ್ಯಮದವರೆಗೆ 2024 ರ ಬಜೆಟ್ ನ 14 ಪ್ರಮುಖ ಮುಖ್ಯಾಂಶಗಳನ್ನು ಮುಂದೆ ಓದಿ. ಲೋಕಸಭಾ ಚುನಾವಣೆಯ ನಂತರ ಹೊಸ ಸರ್ಕಾರ ರಚನೆಯಾದ ನಂತರ ಈ ವರ್ಷದ ಜುಲೈನಲ್ಲಿ ಪೂರ್ಣ ಬಜೆಟ್ ಮಂಡಿಸಲಾಗುವುದು. ವಿತ್ತೀಯ ಬಲವರ್ಧನೆ, ಮೂಲಸೌಕರ್ಯ, ಕೃಷಿ, ಹಸಿರು ಬೆಳವಣಿಗೆ ಮತ್ತು ರೈಲ್ವೆಗೆ ಬಜೆಟ್ ಗಮನ ಹರಿಸಿದೆ. ಆದಾಗ್ಯೂ, ತೆರಿಗೆ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದು ಸಂಬಳ ಪಡೆಯುವ ವ್ಯಕ್ತಿಗಳಿಗೆ ನಿರಾಶೆಯಾಗಿದೆ. 2025ರ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆಯ ಗುರಿಯನ್ನು ಜಿಡಿಪಿಯ ಶೇ.5.1ಕ್ಕೆ ನಿಗದಿಪಡಿಸಲಾಗಿದ್ದು, ನಿರೀಕ್ಷೆಗಿಂತ ಉತ್ತಮವಾಗಿದೆ. ಏತನ್ಮಧ್ಯೆ, ಹಣಕಾಸು ವರ್ಷ 25 ರ ಕ್ಯಾಪೆಕ್ಸ್…

Read More

ಬೆಂಗಳೂರು: ಕರ್ನಾಟಕದಲ್ಲಿ ಪ್ರತ್ಯೇಕ ರಾಜ್ಯದ ಕೂಗಿನ ಬೆನ್ನಲ್ಲೇ, ಸಂಸದ ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ್ದಾರೆ. ಈ ಮೂಲಕ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡ್ತಿದ್ದಾರೆ. ಇದರಿಂದ ನಮಗೆ ಆರ್ಥಿಕವಾಗಿ ತೊಂದರೆಯಾಗ್ತಿದೆ ಎಂದರು. ನಮ್ಮ ರಾಜ್ಯದ ಹಣ ನಮಗೇ ಹಂಚಿಕೆಯಾಗಬೇಕಾದ್ರೇ ಪ್ರತ್ಯೇಕ ರಾಷ್ಟ್ರದ ಕೂಗು ಅನಿವಾರ್ಯವಾಗಿದೆ. ಹೀಗಾಗಿ ದಕ್ಷಿಣ ಭಾರತದ ಕೂಗು ಎತ್ತಬೇಕಾಗುತ್ತದೆ. ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರದ ಕೂಗು ಏಳಲಿದೆ ಎಂದರು. ಕೇಂದ್ರ ಸರ್ಕಾರದ ಇದಕ್ಕೂ ಮುನ್ನ ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬೇಕು. ದಕ್ಷಿಣ ಭಾರತದ ಹಣವನ್ನು ದಕ್ಷಿಣ ಭಾರತಕ್ಕೆ ಖರ್ಚು ಮಾಡಬೇಕು. ಉತ್ತರ ಭಾರತಕ್ಕೆ ಹಂಚಿಕೆ ಮಾಡಬಾರದು ಎಂಬುದಾಗಿ ತಿಳಿಸಿದರು.

Read More