Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು ಎಂದಿದ್ದಾರೆ. ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ. https://twitter.com/siddaramaiah/status/1780135392572039600?t=hWCayRITIUK2lt8ECKceSg&s=19 https://kannadanewsnow.com/kannada/breaking-7-killed-as-auto-collides-with-jcb-in-road-accident-in-patna/ https://kannadanewsnow.com/kannada/breaking-fire-breaks-out-at-home-ministry-office-in-delhi-fire-breaks/
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) 2023ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ವ್ಯಕ್ತಿತ್ವ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್ಸೈಟ್ಗಳಾದ upsconline.nic.in ಮತ್ತು upsc.gov.in ನಲ್ಲಿ ಪರಿಶೀಲಿಸಬಹುದು. ಈ ವರ್ಷ, ಆದಿತ್ಯ ಶ್ರೀವಾಸ್ತವ ಮತ್ತು ಅನಿಮೇಶ್ ಪ್ರಧಾನ್ ಕ್ರಮವಾಗಿ ಎಐಆರ್ 1 ಮತ್ತು 2 ನೇ ಸ್ಥಾನವನ್ನು ಪಡೆದಿದ್ದಾರೆ. ನಂತರ ಡೊನೂರು ಅನನ್ಯಾ ರೆಡ್ಡಿ ಮೂರನೇ ಸ್ಥಾನದಲ್ಲಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ, ಇಶಿತಾ ಕಿಶೋರ್ ಎಐಆರ್ 1 ಅನ್ನು ಪಡೆಯುವುದರೊಂದಿಗೆ ಮಹಿಳೆಯರು ಅಗ್ರ ಸ್ಥಾನಗಳಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ. ನಂತರ ಗರಿಮಾ ಲೋಹಿಯಾ, ಉಮಾ ಹರತಿ ಎನ್ ಮತ್ತು ಸ್ಮೃತಿ ಮಿಶ್ರಾ 2022 ರ ಫಲಿತಾಂಶದಲ್ಲಿ ಸ್ಥಾನ ಪಡೆದಿದ್ದಾರೆ. ಅದಕ್ಕೂ ಒಂದು ವರ್ಷ ಮೊದಲು, ಶ್ರುತಿ ಶರ್ಮಾ ಯುಪಿಎಸ್ಸಿ ಸಿಎಸ್ಇ 2021 ಪರೀಕ್ಷೆಯಲ್ಲಿ ಅಖಿಲ ಭಾರತ ರ್ಯಾಂಕ್ 1 ರ್ಯಾಂಕ್ ಪಡೆದಿದ್ದರು. 2021 ರ ಫಲಿತಾಂಶಗಳಲ್ಲಿಯೂ ಎಲ್ಲಾ ಮೊದಲ ಮೂರು ಸ್ಥಾನಗಳನ್ನು ಮಹಿಳೆಯರು ಪಡೆದುಕೊಂಡಿದ್ದಾರೆ -…
ಅಯೋಧ್ಯೆ ರಾಮ ಜನ್ಮಭೂಮಿಯಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾಗಿದೆ. ಈ ವರ್ಷ ರಾಮನವಮಿ ದಿನಾಂಕ ಬೇರೆ ಇದೆ. ಏಪ್ರಿಲ್ 17, 2024ರಂದು ರಾಮನವಮಿ ಆಚರಿಸಲಾಗುತ್ತದೆ. ರಾಮನವಮಿ ಪೂಜಾ ಸಮಯ, ಮಹತ್ವ ಇತ್ಯಾದಿ ವಿವರ ಇಲ್ಲಿದೆ. ಜ್ಯೋತಿಷಶಾಸ್ತ್ರದ ಪ್ರಕಾರ ಬೆಳಿಗ್ಗೆ 11:03 ರಿಂದ ಮಧ್ಯಾಹ್ನ 01:38 ರವರೆಗೆ ರಾಮ ನವಮಿ ತಿಥಿಯಂದು ಪೂಜೆಗೆ ಮಂಗಳಕರ ಸಮಯ. ಇದು ಶ್ರೀರಾಮ ಚಂದ್ರನ ಜನ್ಮದಿನ. ಅಂದು, ರಾಮನ ಪೂಜೆ, ಆರಾಧನೆ ಕೈಗೊಂಡವರಿಗೆ ರಾಮನ ವಿಶೇಷ ಕೃಪೆ ದೊರಕುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ,…
ನವದೆಹಲಿ: ಒಡಿಶಾದ ಜಜ್ಪುರ್ ಜಿಲ್ಲೆಯಲ್ಲಿ ಸೋಮವಾರ ಸಂಜೆ ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದ ಪರಿಣಾಮ ಮಹಿಳೆ ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪುರಿಯಿಂದ ಕೋಲ್ಕತ್ತಾಗೆ 40 ಪ್ರಯಾಣಿಕರನ್ನು ಹೊತ್ತ ಬಸ್ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ -16 ರ ಬಾರಾಬತಿ ಸೇತುವೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಉರುಳಿ ಬಿದ್ದು ಈ ಭೀಕರ ದುರಂತ ಸಂಭವಿಸಿದೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಬೆಂಗಳೂರು: ಮುಂಗಾರುಮಳೆ 2024ರಲ್ಲಿ ದೇಶಾದ್ಯಂತ ದೀರ್ಘವಧಿಯ ಸರಾಸರಿ ಮಳೆ 106ರಷ್ಟು ವಾಡಿಕೆಗಿಂತ ಹೆಚ್ಚು ಬರಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು ಜೂನ್ ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶಾದ್ಯಂತ 2024ರ ಮುಂಗಾರು ದೀರ್ಘಾವಧಿ ಸರಾಸರಿ ಮಳೆ ಪ್ರಮಾಣ ಶೇ.5ರಷ್ಟು ವ್ಯತ್ಯಯದೊಂದಿಗೆ ಶೇ.106ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ. ಮುಂಗಾರೂ ಮಳೆ ಮುನ್ಸೂಚನೆ ಅನ್ವಯ ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಒಟ್ಟಾರೆಯಾಗಿ ದೇಶಾದ್ಯಂತ ಕಾಲೋಚಿತ ಮಳೆಯ ಐದು ವರ್ಗದ ಸಂಭವನೀಯತೆಯ ಮುನ್ಸೂಚನೆಗಳು ನೈರುತ್ಯ ಮಾನ್ಸೂನ್ ಕಾಲೋಚಿತ ಮಳೆಯ ಹೆಚ್ಚಿನ ಸಂಭವನೀಯತೆ ಸಾಮಾನ್ಯಕ್ಕಿಂತ 104ರಷ್ಟು ಹೆಚ್ಚಿದೆ ಎಂದು ಮಾಹಿತಿ ನೀಡಿದೆ. https://kannadanewsnow.com/kannada/demand-for-electric-vehicles-declines-tesla-to-lay-off-more-than-14000-employees/ https://kannadanewsnow.com/kannada/congress-files-complaint-with-election-commission-against-mp-tejasvi-surya/
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ. ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಗೆ ಈ ನಿರ್ಧಾರವನ್ನು ಪ್ರಕಟಿಸಿದರು. ಏತನ್ಮಧ್ಯೆ, ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗೆ ಏಪ್ರಿಲ್ 24 ರೊಳಗೆ ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ (ಇಡಿ) ನಿರ್ದೇಶನ ನೀಡಿದೆ. ಈ ಪ್ರಕರಣದಲ್ಲಿ ತನ್ನ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ನ ಏಪ್ರಿಲ್ 9 ರ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರು ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿದ್ದಾರೆ. ಏಪ್ರಿಲ್ 29ರಂದು ಈ ಪ್ರಕರಣ ಕುರಿತಂತೆ ನ್ಯಾಯಾಲಯವು ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಹೇಳಿದೆ. ಕೇಜ್ರಿವಾಲ್ ಪರವಾಗಿ ಹಾಜರಾದ ಹಿರಿಯ…
ಬೆಂಗಳೂರು: ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬಂದು ರಾಜ್ಯಕ್ಕೆ ಕೇಂದ್ರ ಸರ್ಕಾರ ಮಾಡಿರುವ ಅನ್ಯಾಯಗಳ ಬಗ್ಗೆ ಒಂದಕ್ಕೂ ಉತ್ತರ ಕೊಡಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು,ಅಭಿವೃದ್ಧಿ ವಿಚಾರಗಳ ಬಗ್ಗೆ ಮಾತನಾಡಲು ಮೋದಿಯವರ ಬಳಿ ಏನೂ ಇಲ್ಲ.. ಹೀಗಾಗಿ ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಬಗ್ಗೆ ಮಾತಾಡ್ತಾರೆ. ದೇಶದ ಪ್ರಧಾನಿಯವರಿಂದ ಈ ರೀತಿಯ ಭಾಷಣವನ್ನ ಕರ್ನಾಟಕದ ಜನರು ನಿರೀಕ್ಷಿಸಿರಲಿಲ್ಲ. ಕರ್ನಾಟಕ ದಿವಾಳಿಯಾಗಿದೆ ಎಂದು ಹೇಳಿದ್ದಾರೆ. ಆದರೆ ದೇಶದಲ್ಲಿಯೇ ಕರ್ನಾಟಕ ಹೆಚ್ಚು ಆದಾಯ ತಂದುಕೊಡುವ ಎರಡನೇ ರಾಜ್ಯವಾಗಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಎಷ್ಟು ಟ್ಯಾಕ್ಸ್ ಪಡೆಯುತ್ತಿದೆ ಎಂಬುದನ್ನು ಮೋದಿಯವರು ಹೇಳಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದರು. ಕರ್ನಾಟಕದಿಂದ ಪ್ರತಿ ವರ್ಷ ನಾಲ್ಕು ಲಕ್ಷ ಕೋಟಿ ಆದಾಯ ಪಡೆದು ವಾಪಸ್ ಕರ್ನಾಟಕಕ್ಕೆ ತಾವು ಕೊಟ್ಡಿದ್ದೇನು ಎಂಬುದನ್ನು ಸ್ಪಷ್ಟವಾಗಿ ಜನರ ಮುಂದಿಡಲಿ ಎಂದರು. ಬೆಂಗಳೂರಿನ ನೀರಿನ ಸಮಸ್ಯೆ ಬಗ್ಗೆ ಮಾತಾಡುವ…
ಶಿವಮೊಗ್ಗ: ಏಪ್ರಿಲ್ 17 ರಂದು ಶ್ರೀ ರಾಮ ನವಮಿ ಹಬ್ಬ ಹಾಗೂ ಏಪ್ರಿಲ್ 21 ರಂದು ಮಹಾವೀರ ಜಯಂತಿ ಇರುವ ಪ್ರಯುಕ್ತ ಈ ದಿನಾಂಕಗಳಂದು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಲೋಕಸಭಾ ಚುನಾವಣೆ-24: ಇಂದು 05 ನಾಮಪತ್ರ ಸಲ್ಲಿಕೆ ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.15 ರಂದು ಒಟ್ಟು 05 ನಾಮಪತ್ರ ಸಲ್ಲಿಕೆ ಆಗಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ 02 ನಾಮಪತ್ರಗಳು, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಪಿ.ಶ್ರೀಪತಿ ಮತ್ತು ಎನ್.ವಿ.ನವೀನ್ ಕುಮಾರ್ ಸೇರಿದಂತೆ ಇಂದು ನಾಲ್ಕು ಜನ ಅಭ್ಯರ್ಥಿಗಳಿಂದ ಒಟ್ಟು 05 ನಾಮಪತ್ರಗಳು ಸಲ್ಲಿಕೆಯಾಗಿವೆ. https://kannadanewsnow.com/kannada/demand-for-electric-vehicles-declines-tesla-to-lay-off-more-than-14000-employees/ https://kannadanewsnow.com/kannada/congress-files-complaint-with-election-commission-against-mp-tejasvi-surya/
ಮೊದಲಿಗೇ ಸ್ಪಷ್ಟಪಡಿಸುತ್ತಿದ್ದೇನೆ. ಇದು ಯಾರನ್ನೂ ಹೆದರಿಸುವ ಬೆದರಿಸುವ ಪ್ರಯತ್ನವಲ್ಲ. ಬದಲಿಗೆ ಹಲವು ಜ್ಯೋತಿಷ್ಯಕಾರರ 45 ವರ್ಷಗಳಿಗೂ ಹೆಚ್ಚು ಕಾಲ ಕ್ರಮಬದ್ಧವಾಗಿ , ವೈಜ್ಞಾನಿಕವಾಗಿ ಒಂದು ಲಕ್ಷಕ್ಕೂ ಮೀರಿದ ಜಾತಕಗಳ ಪರಿಶೀಲನೆ, ವಿಶ್ಲೇಷಣೆ, 10000 ಕ್ಕೂ ಹೆಚ್ಚು ದೋಷ ನಿವಾರಣಾ ಹೋಮಗಳನ್ನು ಮಾಡಿಸಿದ ಹಾಗೂ ಜ್ಯೋತಿಷ್ಯಶಾಸ್ತ್ರದ ಅಭ್ಯಾಸ , ಅನುಭವ, ಜ್ಞಾನಾಧಾರಿತ ಬರಹವಿದು. ಕರ್ಮ ಸಿದ್ಧಾಂತ, ಪುನರ್ಜನ್ಮ ಸಿದ್ಧಾಂತಗಳ ಪ್ರತ್ಯಕ್ಷಾನುಭವದ ಹಿನ್ನೆಲೆ ಈ ಬರಹಗಳಿಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ,…
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಣಾಪಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ಎಲ್ಲಾ ವಾಹನಗಳ ತಪಾಸಣೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಹಾಯಕ ಚುನಾವಣಾಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ನೋಟೀಸ್ ಜಾರಿ ಕೆಲವು ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿಗಳು ಕೆಲವು ವಾಹನಗಳನ್ನು ತಪಾಸಣೆ ಮಾಡದೇ ಇರುವುದು ಹಾಗೂ ರಾತ್ರಿ ವೇಳೆ ನಿದ್ದೆ ಮಾಡುತ್ತಿರುವ ಬಗ್ಗೆ ಚುನಾವಣಾ ವೆಚ್ಚ ವೀಕ್ಷಕರು ಗಮನಿಸಿರುವ ಹಿನ್ನಲೆಯಲ್ಲಿ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿದೆ. ಲೋಪ ಕಂಡು ಬಂದಲ್ಲಿ ಆರ್.ಪಿ ಆಕ್ಟ್ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಪ್ರತಿ ದಿನ ಸಹಾಯಕ ಚುನಾವಣಾಧಿಕಾರಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಸಿಬ್ಬಂದಿಗಳ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸ ಬೇಕು. ಜಿಲ್ಲಾಧಿಕಾರಿ ಗಳ ಕಚೇರಿಯ ದೂರು ನಿರ್ವಾಹಣಾ ಕೇಂದ್ರದಲ್ಲಿ ಚೆಕ್ ಪೋಸ್ಟ್ ಗಳ ಕಾರ್ಯನಿರ್ವಾಹಣೆಯ ಬಗ್ಗೆ ಪರಿಶೀಲಿಸಲಾಗುತ್ತಿದೆ. ಕಾರ್ಯನಿರ್ವಹಣೆ ಯಲ್ಲಿ ಲೋಪ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದರು. ಏ.16…