Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹಾಸನ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ರಾಜ್ಯ ಸರಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (Special Investigation Team-SIT) ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಆದ್ದರಿಂದ ಅದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜೆಡಿಎಸ್ ರಾಜ್ಯಪಾಲರಿಗೆ ಮನವಿ ಮಾಡಿದೆ. ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್ ಗಳನ್ನು ವ್ಯಾಪಕವಾಗಿ ಹಂಚಿಕೆ ಮಾಡಲಾಗಿರುವ ಪ್ರಕರಣದ ಪಿತೂರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ ಆಗಿದ್ದು, ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಬೇಕು ಎಂದು ಜೆಡಿಎಸ್ ರಾಜ್ಯಪಾಲರಲ್ಲಿ ಮನವಿ ಮಾಡಿದೆ. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಕ್ಷದ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಅವರಿಗೆ ದೂರು ಸಲ್ಲಿಸಿತು. ಈ ಸಂದರ್ಭದಲ್ಲಿ ಮನವಿ ಪತ್ರದಲ್ಲಿನ ಎಲ್ಲಾ ಅಂಶಗಳನ್ನು ಕುಮಾರಸ್ವಾಮಿ ಅವರು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟರು. ವಿಶೇಷ ತನಿಖಾ ತಂಡ ಸರಕಾರದ ಹಿತಕ್ಕೆ ತಕ್ಕಂತೆ ಕೆಲಸ ಮಾಡುತ್ತಿದೆ ವಿಶೇಷ ತನಿಖಾ…
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರೆನ್ ಡ್ರೈವ್ ಪ್ರಕರಣಕ್ಕೆ ಈಗ ಮತ್ತೊಂದು ಟ್ವಿಸ್ಟ್ ನೀಡಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗದಿಂದ ಈ ಟ್ವಿಸ್ಟ್ ನೀಡಲಾಗಿದೆ. ಅದೇ ಸಂತ್ರಸ್ತೆಗೆ ಮೂವರಿಂದ ಬೆದರಿಕೆ ಹಾಕಲಾಗಿದೆ ಎಂಬುದಾಗಿದೆ. ಇಂದು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವಂತ ರಾಷ್ಟ್ರೀಯ ಮಹಿಳಾ ಆಯೋಗವು, ಅದರಲ್ಲಿ ಪ್ರಜ್ವಲ್ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವಂತ ಒಬ್ಬರು ದೂರು ನೀಡಿದ್ದಾರೆ. ಅದರಲ್ಲಿ ಮೂವರಿಂದ ಬೆದರಿಕೆ ಬಂದಿರೋದಾಗಿ ತಿಳಿಸಿದ್ದಾರೆ ಎಂಬುದಾಗಿ ತಿಳಿಸಿದೆ. ರಾಷ್ಟ್ರೀಯ ಮಹಿಳಾ ಆಯೋಗ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಏನಿದೆ? ಕರ್ನಾಟಕ ಪೊಲೀಸ್ ಹೆಸರಿನಲ್ಲಿ ಸಾಮಾನ್ಯ ಉಡುಪು ಧರಿಸಿದ್ದ ಮೂವರು ವ್ಯಕ್ತಿಗಳ ಮೇಲೆ ಮಹಿಳೆಯೋಬ್ಬರು ದೂರು ನೀಡಿದ್ದಾರೆ. ತಮ್ಮನ್ನು ಕರ್ನಾಟಕ ಪೊಲೀಸ್ ಅಧಿಕಾರಿಗಳು ಎಂದು ಪರಿಚಯಿಸಿಕೊಂಡು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸುಳ್ಳು ದೂರು ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಿದ್ದಾರೆ. ವಿವಿಧ ದೂರವಾಣಿ ಸಂಖ್ಯೆಗಳ ಮೂಲಕ ಕರೆ ಮಾಡಿ ದೂರು ನೀಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಸಂತ್ರಸ್ತೆ ತನ್ನ ಕುಟುಂಬದ ಹಿತಕ್ಕಾಗಿ ರಕ್ಷಣೆ ಕೋರಿದ್ದು, ಪರಿಸ್ಥಿತಿಯ ಗಂಭೀರತೆಯನ್ನು…
ಬೆಂಗಳೂರು: ನಗರದಲ್ಲಿ ಸಾರ್ವಜನಿಕರು ಬೀದಿನಾಯಿಗಳಿಗೆ ಆಹಾರ ನೀಡುವ ಕುರಿತು ಯಾವುದೇ ನಿರ್ಬಂಧ ವಿಧಿಸಿಲ್ಲ ಎಂಬುದಾಗಿ ಬಿಬಿಎಂಪಿ ಸ್ಪಷ್ಟಪಡಿಸಿದೆ. ಇಂದು ಬಿಬಿಎಂಪಿಯ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದಂತ ಡಾ.ರವಿ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳಿಗೆ ಆಹಾರ ನೀಡುವ ಬಗ್ಗೆ ಪ್ರಾಣಿ ಪ್ರೀಯರು, ಸಾರ್ವಜನಿಕರು, ಸಮುಚ್ಛಯ ನಿವಾಸಿಗಳ ನಡುವೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸಮನ್ವಯ ಸಾದಿಸುವ ದೃಷ್ಟಿಯಿಂದ, ಸಮನ್ವಯ ಕೊರತೆ ಇರುವ ಸ್ಥಳಗಳಲ್ಲಿ ಬೀದಿನಾಯಿಗಳಿಗೆ ಆಹಾರ ನೀಡುವ ಜಾಗಗಳನ್ನು ಗುರುತಿಸಲಾಗುವುದು ಎಂದಿದ್ದಾರೆ. ಗುರುತಿಸಲಾದ ನಿರ್ಧಿಷ್ಟ ಜಾಗಗಳಲ್ಲಿ ಬೀದಿನಾಯಿಗಳಿಗೆ ಆಹಾರ ನೀಡುವ ಕುರಿತು ಹಾಲಿ ಲಭ್ಯವಿರುವ ಮಾರ್ಗಸೂಚಿಗಳನ್ನು ಪಲಕಗಳಲ್ಲಿ ನಮೂದಿಸಿ ಪ್ರದರ್ಶಿಸುವ ಕೆಲಸಕಾರ್ಯಗಳು ಪ್ರಗತಿಯಲ್ಲಿರುತ್ತದೆ ಎಂದು ಹೇಳಿದ್ದಾರೆ. ಈ ಮೇಲಿನ ಅಂಶಗಳನ್ನು ಹೊರತುಪಡಿಸಿ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿನಾಯಿಗಳಿಗೆ ಆಹಾರ ನೀಡುವ ಕುರಿತು ಯಾವುದೇ ನಿರ್ಭಂದವನ್ನು ವಿಧಿಸಿರುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಇತ್ತೀಚೆಗೆ ಮಾದ್ಯಮಗಳಲ್ಲಿ, ಪಶುಪಾಲನಾ ವಿಭಾಗ ಬಿಬಿಎಂಪಿಯು ಬೀದಿನಾಯಿಗಳಿಗೆ ಆಹಾರ ನೀಡುವ ಕುರಿತು ನಿರ್ಬಂಧ ವಿಧಿಸಿರುವುದಾಗಿ ಪ್ರಕಟವಾಗಿರುವ ಅಂಶಗಳು…
ಬೆಂಗಳೂರು: ನಗರದಲ್ಲಿ ಮಳೆ ಬಂದ್ರೆ ಸಾಕು ಭಾರೀ ಅಂವಾತಂರವೇ ಸೃಷ್ಠಿಯಾಗುತ್ತದೆ. ಅಲ್ಲಲ್ಲಿ ಮಳೆಯಿಂದ ರಸ್ತೆಗಳು ಕೆರೆಯಂತಾದ್ರೆ, ಕೆಲವೆಡೆ ಮನೆಗೆ ಮಳೆ ನೀರು ನುಗ್ಗಿ ಜನರ ಬದುಕೇ ಬೀದಿಗೆ ಬೀಳುವಂತಾಗುತ್ತೆ. ಈ ಎಲ್ಲಾ ಮಳೆ ಅವಂತಾರವನ್ನು ನಿರ್ವಹಣೆ ಮಾಡೋದಕ್ಕಾಗಿ ಬಿಬಿಎಂಪಿ ಸನ್ನದ್ಧವಾಗಿದೆ. ಅದಕ್ಕಾಗಿ ವಿಪತ್ತು ನಿರ್ವಹಣೆಯಡಿ ಬಿಬಿಎಂಪಿ ವಲಯವಾರು ಕಂಟ್ರೋಲ್ ರೂಂ ಸ್ಥಾಪನೆ ಸ್ಥಾಪನೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೃಹತ್ ಬೆಂಗಳೂರು ಮಹಾನಗರಪಾಲಿಕೆಯು, ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 24/7 ಕಾರ್ಯನಿರ್ವಹಿಸುವ ಉಚಿತ ಸಹಾಯವಾಣಿ ಸಂಖ್ಯೆ 1533 ಜೊತೆಗೆ ಮಹಾನಗರದ ವಿವಿಧ ಎಂಟು ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಮ್ಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದೆ. ಹೀಗಿದೆ ವಲಯವಾರು ಕಂಟ್ರೋಲ್ ರೂಮ್ಗಳ ಸಂಪರ್ಕ ಸಂಖ್ಯೆ ಬೊಮ್ಮನಹಳ್ಳಿ-080-25732447,25735642,9480685707 ದಾಸರಹಳ್ಳಿ-080-28394909,9480685709 ಪೂರ್ವ ವಲಯ-080-22975803,9480685702 ಮಹದೇವಪುರ-080-28512300,9480685706 ರಾಜರಾಜೇಶ್ವರಿ ನಗರ-080-28601851,9480685708 ದಕ್ಷಿಣ ವಲಯ-9480685704,8026566362,8022975703 ಪಶ್ಚಿಮ ವಲಯ- 080-23463366,23561692,9480685703 ಯಲಹಂಕ-080-23636671,22975936,9480685705 ಈ ಮೇಲ್ಕಂಡ ವಲಯವಾರು ಸಂಖ್ಯೆಗಳಿಗೆ ಬೆಂಗಳೂರಿನ ನಾಗರಿಕರು ತುರ್ತು ಸಂದರ್ಭಗಳಲ್ಲಿ ಸಂಪರ್ಕಿಸಿ. ತಮ್ಮ ವ್ಯಾಪ್ತಿಯಲ್ಲಿನ…
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡು ಹಂತದ ಮತದಾನ ಮುಕ್ತಾಯಗೊಂಡಿದೆ. ಇನ್ನೂ ಜೂನ್.4ರಂದು ಫಲಿತಾಂಶ ಪ್ರಕಟಗೊಳ್ಳುವುದೊಂದೇ ಬಾಕಿ ಇದೆ. ಈಗ ಲೋಕಸಭಾ ಚುನಾವಣಾ ನೀತಿ ಸಂಹಿತೆ ಮುಗಿಯುತ್ತಿದ್ದಂತೆ, ಸಿಎಂ ಸಿದ್ಧರಾಮಯ್ಯ 7ನೇ ವೇತನ ಆಯೋಗ ಜಾರಿಗೆ ಒಲವು ತೋರಿದ್ದಾರೆ ಎನ್ನಲಾಗಿದೆ. ಹೀಗಾಗಿ ರಾಜ್ಯ ಸರ್ಕಾರಿ ನೌಕರರಿಗೆ ಸದ್ಯದಲ್ಲೇ ಸಿಹಿಸುದ್ದಿ ಹೊರಬೀಳಲಿದೆ. ಹೌದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು, ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಸಡಿಲಿಕೆಯಾಗುತ್ತಿದ್ದಂತೆ, ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಕೆಗೆ ಸಿಎಂ ಸಿದ್ಧರಾಮಯ್ಯ ಒಲವು ತೋರಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆ ಸಂಬಂಧದ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ. ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿ ನೀಡಿರುವಂತ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಕ್ತಾಯಗೊಂಡ ನಂತ್ರ ಜಾರಿಗೊಳಿಸೋದಕ್ಕೆ ಸಿಎಂ ಸಿದ್ಧರಾಮಯ್ಯ ಕ್ರಮವಹಿಸಲಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೇ ರಾಜ್ಯ ಸರ್ಕಾರಿ ನೌಕರರು 7ನೇ…
ಮಂಡ್ಯ: ಇಂದು ಪ್ರಕಟವಾದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ, ತಾನು ಫೇಲ್ ಆಗಿದ್ದೇನೆ ಎಂಬುದಾಗಿ ಭಾವಿಸಿದಂತ ವಿದ್ಯಾರ್ಥಿನಿಯೊಬ್ಬಳು, ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಮಂಡ್ಯದ ಹುಲಿಗೆಪುರ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಲಿಗೆಪುರ ಗ್ರಾಮದ ಹೆಚ್.ಎಂ ಅಮೃತ(15) ಇಂದು ಪ್ರಕಟವಾದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 353 ಅಂಕವನ್ನು ಪಡೆದಿದ್ದರು. ಶೇ.57ರಷ್ಟು ಫಲಿತಾಂಶ ಆಕೆಗೆ ಬಂದಿತ್ತು. ಆದ್ರೇ ಪಾಸ್ ಆಗಿದ್ದರೂ, ಫೇಲ್ ಆಗಿದ್ದೇನೆ ಎಂಬುದಾಗಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಂದಹಾಗೆ ನಗರಕೆರೆ ಗ್ರಾಮದ ಪೂರ್ಣಿಮಾ ಪ್ರೌಢಶಾಲೆಯಲ್ಲಿ ಓದುತ್ತಿದ್ದಂತ ಅಮೃತ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿಯೂ ಹೇಳಲಾಗುತ್ತಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿಗಳು ದುಡುಕಿನ ನಿರ್ಧಾರ ಮಾಡ್ಬೇಡಿ. ಇದು ನಮ್ಮ ಕಳಕಳಿ…
ಬೆಂಗಳೂರು: ಇಂದು ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತು. ವಾದ-ಪ್ರತಿವಾದ ಆಲಿಸಿದಂತ ನ್ಯಾಯಪೀಠವು, ಸೋಮವಾರದ ಬೆಳಿಗ್ಗೆ 11.30ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಅವರಿಗೆ 3 ದಿನ ಜೈಲೇ ಗತಿಯಾದಂತೆ ಆಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ. ಮಹಿಳೆ ಕಿಡ್ನ್ಯಾಪ್ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ, ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ನೀಡದಂತೆ ಎಸ್ಐಟಿ ಪರ ಎಸ್ ಪಿಪಿ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ. ಕೋರ್ಟ್ ಮುಂದೆ ಎಸ್ಐಟಿಯ ಎಸ್ ಪಿಪಿ ಜಾಯ್ನಾ ಕೋಥಾರಿ ಅವರು ವಾದ ಮಂಡಿಸಿ, ಜಾಮೀನು ಅರ್ಜಿಗೆ ನಾವು ಆಕ್ಷೇಪಣೆ ಸಲ್ಲಿಸುತ್ತಿರುವುದರ ಹಿಂದೆ ವಿಳಂಪದ ಉದ್ದೇಶವಿಲ್ಲ. ನಮ್ಮ ವಾದ ಮಂಡನೆಗೆ ಕಾಲಾವಕಾಶ ನೀಡಬೇಕು ಎಂಬುದಾಗಿ ಕೋರಿದರು. ಈ ವೇಳೆ ನ್ಯಾಯಪೀಠವು ಜಾಮೀನು ಅರ್ಜಿ ವಿಚಾರಣೆಗೆ ಕಾಲಾವಕಾಶ ನೀಡುವುದಿಲ್ಲ. ಬೇರೆ ಪ್ರಕರಣಗಳಲ್ಲಿ…
ಬೆಂಗಳೂರು: ನಗರದ ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ. 68.73% ಫಲಿತಾಂಶ ಬಂದಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಬಿಎಂಪಿ ಮಾಹಿತಿ ನೀಡಿದ್ದು, 2023-24ನೇ ಶೈಕ್ಷಣಿಕ ಸಾಲಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಿಕ್ಷಣ ಇಲಾಖೆಯಲ್ಲಿ 33 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದು, ಒಟ್ಟು 2501 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1719 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡ 68.73% ರಷ್ಟು ಫಲಿತಾಂಶ ಬಂದಿರುತ್ತದೆ ಎಂದಿದೆ. ಬಿಬಿಎಂಪಿ ಮತ್ತಿಕೆರೆ ಬಾಲಕಿಯರ ಪ್ರೌಢಶಾಲೆಯು ಶೇ. 92.78 ಫಲಿತಾಂಶವನ್ನು ನೀಡಿ ಅಗ್ರಸ್ಥಾನ ಪಡೆದು ಪಾಲಿಕೆಗೆ ಕೀರ್ತಿ ತಂದಿದ್ದಾರೆ. ಬಿಬಿಎಂಪಿ ಭೈರವೇಶ್ವರ ನಗರ ಪ್ರೌಢಶಾಲೆಯು ಶೇ. 91.98 ಫಲಿತಾಂಶವನ್ನು ನೀಡಿ ಎರಡನೇ ಸ್ಥಾನವನ್ನು ಪಡೆದಿದೆ. ಬಿ.ಬಿ.ಎಂ.ಪಿ. ಹೇರೋಹಳ್ಳಿ ಪ್ರೌಢಶಾಲೆಯು ಶೇ. 90.56 ಫಲಿತಾಂಶವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದಿದೆ ಎಂದಿದೆ. 2023-24ನೇ ಸಾಲಿನಲ್ಲಿ ಒಟ್ಟು 66 ವಿದ್ಯಾರ್ಥಿಗಳು ಶೇ. 85 ಕ್ಕಿಂತ ಹೆಚ್ಚು ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶ್ರೀರಾಂಪುರ ಬಾಲಕಿಯರ ಪ್ರೌಢಶಾಲೆಯ ಕು||…
ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆಗೆ ಅವರ ವಿರುದ್ಧ ದೂರು ನೀಡಲು ಒತ್ತಡ ಹಾಕಲಾಗಿದೆ ಎಂಬುದಾಗಿ ರಾಷ್ಟ್ರೀಯ ಮಹಿಳಾ ಆಯೋಗವು ಸ್ಪೋಟಕ ಹೇಳಿಕೆ ನೀಡಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ತನ್ನ ಹೇಳಿಕೆ ಬಿಡುಗಡೆ ಮಾಡಿರುವಂತ ರಾಷ್ಟ್ರೀಯ ಮಹಿಳಾ ಆಯೋಗವು, ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆಯ ಮೇಲೆ ಒತ್ತಡ ಹೇರಲಾಗಿದೆ. ಒತ್ತಡ ಹಾಕಿ ಸಂತ್ರಸ್ತ ಮಹಿಳೆಯಿಂದ ದೂರು ಕೊಡಿಸಲಾಗಿದೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದೆ. ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿರುವುದಾಗಿ ಮಾಹಿತಿ ನೀಡಿದ್ದೂ, ಪ್ರಕರಣ ಸಂಬಂಧ ತನಿಖೆ ನಡೆಸೋದಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂಬುದಾಗಿ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಈ ಹೇಳಿಕೆ ಬಿಡುಗಡೆ ಮಾಡಿದೆ. https://kannadanewsnow.com/kannada/student-commits-suicide-by-hanging-himself-after-failing-sslc-exam-in-mandya/ https://kannadanewsnow.com/kannada/no-one-stopped-kumaraswamy-from-fighting-in-pen-drive-case-dk-shivakumar/
ಮಂಡ್ಯ: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಕೆಲ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಿದ್ರೆ, ಮತ್ತೆ ಕೆಲವರು ಕಡಿಮೆ ಅಂಕ ಗಳಿಸಿದ್ದಾರೆ. ಇನ್ನೂ ಕೆಲವರು ಕಡಿಮೆ ಅಂಕ ಬಂದಿದೆ ಅಂತ ಬೇಜಾರಲ್ಲಿ ಇದ್ದೀರಿ. ಆದ್ರೇ ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ಮಾಡಬೇಡಿ. ಮುಂದೆ ನಿಮ್ಗೆ ಎರಡು ಪರೀಕ್ಷೆಗಳು ಸಿಕ್ತಾವೆ. ಬರೆದು ಉತ್ತಮ ಅಂಕಗಳಿಸಿ. ಹೌದು ವಿದ್ಯಾರ್ಥಿಗಳೇ. ದುಡುಕಿನ ನಿರ್ಧಾರ ಮಾಡಬೇಡಿ. ಹೀಗೆ ದುಡಿಕಿನ ನಿರ್ಧಾರ ಮಾಡಿದಂತ ವಿದ್ಯಾರ್ಥಿಯೊಬ್ಬ, ಮಂಡ್ಯದಲ್ಲಿ ಅನುತ್ತೀರ್ಣ ಆಗಿದ್ದಕ್ಕೆ, ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ತಗ್ಗಹಳ್ಳಿಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಇಂದಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದೆ ಎನ್ನುವ ಕಾರಣಕ್ಕಾಗಿ ಲಿಖಿತ್(15) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಾಲೆಯ ಬಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ನೋಡೋದಕ್ಕೆ ಹೋಗಿದ್ದನು. ಎರಡು ವಿಷಯಗಳಲ್ಲಿ ಅನುತ್ತೀರ್ಣನಾಗಿದ್ದಂತ ವಿಷಯವನ್ನು ಶಿಕ್ಷಕರು ತಿಳಿಸಿದ್ದಾರೆ. ಇದರಿಂದ ಮನನೊಂದು…










