Author: kannadanewsnow09

ಕಲಬುರ್ಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನ ಪ್ರಕರಣ ಸಂಬಂಧ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಕಲಬುರ್ಗಿ ಕೋರ್ಟ್ ತಡೆಯಾಜ್ಞೆ ನೀಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಏಕವಚನದಲ್ಲೇ ಮಾತನಾಡಿದ್ದಂತ ಚಕ್ರವರ್ತಿ ಸೂಲಿಬೆಲೆ, ಅಯೋಗ್ಯ ಎಂಬ ಪದವನ್ನು ಪ್ರಯೋಗ ಮಾಡಿ, ಅವಹೇಳನ ಮಾಡಿದ್ದರು. ಈ ಸಂಬಂಧ ರಾಯಚೂರು ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಅಟ್ರಾಸಿಟಿ ಕಾಯ್ದೆಯ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಚಕ್ರವರ್ತಿ ಸೂಲಿ ಬೆಲೆ ವಿರುದ್ಧ ಕಲಬುರ್ಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು. ಈ ಪ್ರಕರಣಕ್ಕೆ ತಡೆ ಕೋರಿ ಚಕ್ರವರ್ತಿ ಸೂಲಿ ಬೆಲೆ ಅವರು ಕಲಬುರ್ಗಿ ಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕಲಬುರ್ಗಿ ಏಕ ಸದಸ್ಯ ನ್ಯಾಯಪೀಠದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕಲ್ ಅವರು, ಪೊಲೀಸರು ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ಗೆ ತಡೆಯಾಜ್ಞೆ ನೀಡಿದ್ದಾರೆ. https://kannadanewsnow.com/kannada/kumaraswamy-has-almost-merged-jds-with-bjp-dk-shivakumar-shivakumar/ https://kannadanewsnow.com/kannada/its-a-great-post-office-plan-you-get-a-lot-of-interest/

Read More

ಬೆಂಗಳೂರು : “ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಇಂದು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದಂತ ಅವರು, ಇದು ಅವರ ಪಕ್ಷದ ವಿಚಾರ, ಅವರು ಏನಾದರೂ ಮಾಡಿಕೊಳ್ಳಲಿ. ನಮಗೂ ಅದಕ್ಕೂ ಸಂಬಂಧವಿಲ್ಲ. ಅವರು ಯಾವ ಬಣ್ಣದ ಶಾಲನ್ನಾದರೂ ಧರಿಸಲಿ. ಬಿಜೆಪಿಗೆ ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲ. ಅಲ್ಲಿ ನೆಲೆ ಕಂಡುಕೊಳ್ಳಲು ಇವರಿಬ್ಬರಲ್ಲಿ ಯಾರು ಯಾರನ್ನು ನುಂಗುತ್ತಾರೋ ಗೊತ್ತಿಲ್ಲ ಎಂದು ಕಿಡಿಕಾರಿದರು. ಮಂಡ್ಯದಲ್ಲಿ ಕೋಮು ಗಲಭೆ ಪ್ರಯೋಗ ಮಂಡ್ಯದಲ್ಲಿ ಕೇಸರಿ ಧ್ವಜದ ವಿವಾದದ ಬಗ್ಗೆ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ಶಾಂತಿ ಕದಡಬೇಕು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬೇಕು ಎಂದು ಮುಗ್ಧ ಹಳ್ಳಿ ಜನರನ್ನು ಎತ್ತಿಕಟ್ಟುತ್ತಿದ್ದಾರೆ. ನಮ್ಮ ಭಾಗದ ಎಲ್ಲಾ ಜಾತಿ ಹಾಗೂ ಧರ್ಮದ ಜನರು ಬಹಳ ಸೌಹಾರ್ದತೆಯಿಂದ ಅಣ್ಣ-ತಮ್ಮಂದಿರಂತೆ ಬದುಕುತ್ತಿದ್ದರು. ನಮ್ಮ ಕಡೆ ಊರ ಹಬ್ಬ ಮಾಡುವಾಗ ಯಾವರೀತಿ ಮಾಡುತ್ತಾರೆ ಎಂದು ನೀವು ನೋಡಿದ್ದೀರಲ್ಲಾ? ಈಗ ಅವರು…

Read More

ನವದೆಹಲಿ: ಕುತೂಹಲದಿಂದ ಕಾಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ, ಕೇಂದ್ರವು ಮಹತ್ವದ ಹೆಜ್ಜೆ ಇಟ್ಟಿದೆ. ಇದು ರಾಜಕೀಯ ವಾತಾವರಣದಲ್ಲಿ ಸಂಭಾವ್ಯ ಕರಗುವಿಕೆಯನ್ನು ಸೂಚಿಸುತ್ತದೆ. ಸದನದ ಕಲಾಪಗಳಲ್ಲಿ ವಿವಾದಾತ್ಮಕ ವಿಷಯವಾಗಿರುವ ವಿರೋಧ ಪಕ್ಷದ ಸಂಸದರ ಅಮಾನತನ್ನು ಹಿಂತೆಗೆದುಕೊಳ್ಳಲು ಸಜ್ಜಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಘೋಷಿಸಿದ ಈ ಕ್ರಮವು ಅಧಿವೇಶನವನ್ನು ಸುಗಮವಾಗಿ ಮತ್ತು ಹೆಚ್ಚು ಅಂತರ್ಗತವಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಅಮಾನತು ಹಿಂತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ ಸರ್ಕಾರ ನಿರ್ಣಾಯಕ ಕ್ರಮವೊಂದರಲ್ಲಿ, ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯ ಹಕ್ಕುಬಾಧ್ಯತಾ ಸಮಿತಿಗಳೊಂದಿಗೆ ಚರ್ಚೆಗಳನ್ನು ಪ್ರಾರಂಭಿಸಿದೆ. ಎಲ್ಲಾ ವಿರೋಧ ಪಕ್ಷದ ಸದಸ್ಯರ ಅಮಾನತುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ಅಮಾನತುಗೊಂಡ ಸಂಸದರನ್ನು ಮರುಸ್ಥಾಪಿಸಲು ಕೋರುವ ಮೂಲಕ ರಚನಾತ್ಮಕ ಮಾತುಕತೆಗೆ ಅನುಕೂಲಕರ ವಾತಾವರಣವನ್ನು ಬೆಳೆಸುವ ಸರ್ಕಾರದ ಬದ್ಧತೆಯನ್ನು ಸಚಿವ ಪ್ರಹ್ಲಾದ್ ಜೋಶಿ ಪುನರುಚ್ಚರಿಸಿದರು. ಅಧಿವೇಶನದ ಪರಿಣಾಮಕಾರಿ ಕಾರ್ಯನಿರ್ವಹಣೆಗಾಗಿ ಸಂಸದೀಯ ಸದಸ್ಯರ ನಡುವೆ ಸಂವಾದ ಮತ್ತು ಸಹಕಾರದ ಮಹತ್ವವನ್ನು ಸಚಿವ ಜೋಶಿ ಒತ್ತಿ ಹೇಳಿದರು. ತಮ್ಮ ಸಹಕಾರವನ್ನು…

Read More

ಶಿವಮೊಗ್ಗ : 2014 ರಿಂದ 2024 ನೇ ಸಾಲಿಗೆ ಲೈಸೆನ್ಸ್ ಪಡೆದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವರ್ತಕರ ಪರವಾನಿಗೆ ಅವಧಿಯು 2024 ರ ಮಾರ್ಚ್ 31 ರಂದು ಮುಕ್ತಾಯಗೊಳ್ಳಲಿದ್ದು ಲೈಸೆನ್ಸ್ ನವೀಕರಿಸಲು ತಿಳಿಸಲಾಗಿದೆ. ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೇಟೆ ಕಾರ್ಯಕರ್ತರು ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ದಿ) ನಿಯಮಾವಳಿ 1966 ರ ಕಲಂ 76(2) ರನ್ವಯ ನಿಗದಿತ ಲೈಸೆನ್ಸ್ ಫಾರಂನ್ನು ಭರ್ತಿ ಮಾಡಿ, ನಿಗದಿತ ಶುಲ್ಕ ಪಾವತಿಸಿ ಅವಶ್ಯಕ ದಾಖಲೆಗಳೊಂದಿಗೆ ಫೆ.29 ರ ಒಳಗಾಗಿ ಕಾರ್ಯದರ್ಶಿ, ಎಪಿಎಂಸಿ, ಶಿವಮೊಗ್ಗ ಮತ್ತು ಉಪನಿರ್ದೇಶಕರು, ಕೃಷಿ ಮಾರಾಟ ಇಲಾಖೆ, ಶಿವಮೊಗ್ಗ ಇವರಿಗೆ ಸಲ್ಲಿಸಬೇಕು. ಫೆ.29 ರ ನಂತರ ಲೈಸೆನ್ಸ್ ನವೀಕರಿಸಲು ಕಾನೂನಿನಲ್ಲಿ ಅವಕಾಶವಿರುದಿಲ್ಲ. ಹೆಚ್ಚಿನ ಮಾಹಿತಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಎಪಿಎಂಸಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ತಿಳಿಸಿದ್ದಾರೆ. https://kannadanewsnow.com/kannada/its-a-great-post-office-plan-you-get-a-lot-of-interest/ https://kannadanewsnow.com/kannada/breaking-imran-khan/

Read More

ಬೆಂಗಳೂರು: ಕುಮಾರಸ್ವಾಮಿ ಅವರು RSS ಕಾಳಾಲೋ, ಸೇವಕರೋ ಎನ್ನುವುದು ಕಾಲವೇ ನಿರ್ಣಯಿಸುತ್ತದೆ. ಆದರೆ, ನಿಮ್ಮ ಸಿದ್ದಹಸ್ತನಂತೆ ಉಂಡ ಮನೆಗೆ ಎರಡು ಬಗೆಯುವ ಪೈಕಿ ಅವರಲ್ಲ. ಮಾತೃಭೂಮಿಯನ್ನು, ಪರಂಪರಾಗತ ಆಚಾರ-ವಿಚಾರ, ನಂಬಿಕೆಗಳಿಗೆ ಕೊಳ್ಳಿ ಇಟ್ಟು ಜಾತಿ-ಧರ್ಮಗಳ ನಡುವೆ ವಿಷಪ್ರಾಶನ ಮಾಡಿ, ಅದನ್ನೇ ಅಮಲೇರಿಸಿಕೊಳ್ಳುವ ಗತಿಗೆಟ್ಟ ಕಾಂಗ್ರೆಸ್ ಮನಸ್ಥಿತಿಗೆ ಆ ಹನುಮದೇವರೇ ಅಂತ್ಯ ಕಾಣಿಸುತ್ತಾನೆ. ಇದು ಸತ್ಯ.. ಸತ್ಯ. ಎಂಬುದಾಗಿ ಜೆಡಿಎಸ್ ಹೇಳಿದೆ. ಈ ಬಗ್ಗೆ ಎಕ್ಸ್ ಮಾಡಿದ್ದು, ಗೊಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ. ಈ ದೇಶದಲ್ಲಿ ಯಾವುದಾದರೂ ಛದ್ಮವೇಷದಾರಿ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ. ಹೆಚ್ ಡಿ ಕುಮಾರಸ್ವಾಮಿ ಅವರು ಹಾಗಲ್ಲ. ಏನಾದರೂ ಹೇಳಬೇಕೆಂದರೆ; ನೇರ, ದಿಟ್ಟ, ನಿಷ್ಠುರ. ಏನೇ ಬಂದರೂ ಎದುರಿಸುವ ಕೆಚ್ಚು ಅವರದ್ದು, ಪಲಾಯನ ಮಾಡುವ ಪೈಕಿ ಅವರಲ್ಲ ಎಂದಿದೆ. RSS ಬಗ್ಗೆ ಕುಮಾರಸ್ವಾಮಿ ಅವರು ಹಿಂದೆ ಮಾತನಾಡಿದ್ದಾರೆ, ಬರೆದಿದ್ದಾರೆ.. ನಿಜ. ಟೀಕೆ ಮಾಡಿದ್ದಾರೆನ್ನುವುದೂ ಹೌದು. ಹಾಗೆಯೇ, ಶ್ರೀ ಕಲ್ಲಡ್ಕ ಪ್ರಭಾಕರ ಭಟ್ಟರು ನಡೆಸುತ್ತಿರುವ…

Read More

ಬೆಂಗಳೂರು : ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ಮಹಾತ್ಮಾ ಗಾಂಧೀಜಿಯವರು1948ರ ಜನವರಿ 30 ರಂದು ಗೋಡ್ಸೆ ಯವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ದಿನ. ಗಾಂಧೀಜಿಯವರು ವಲ್ಲಭಾ ಬಾಯಿ ಪಟೇಲರೊಂದಿಗೆ ಸಂವಾದಿಸಿದ ನಂತರ ಭಜನೆಗೆ ತೆರಳಲು ಸ್ವಲ್ಪ ವಿಳಂಬವಾಗಿದ್ದ ಸಂದರ್ಭದಲ್ಲಿ ಹಂತಕ ಗೋಡ್ಸೆ, ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದರು. ಈ ದೇಶಕ್ಕೆ ಅವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಲಭಿಸಿತು. ಕಾಂಗ್ರೆಸ್ ನ ಬಹಳಷ್ಟು ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ ಎಂದರು. ಶ್ರೀರಾಮನ ಮೇಲೆ ಗಾಂಧಿಯವರಿಗೆ ಅಪಾರ ಭಕ್ತಿ: ಅವರು ತಮ್ಮ ಕೊನೆಯುಸಿರೆಳೆದಾಗಲೂ ‘ಹೇ ರಾಮ್’ ಎಂದು ಉಚ್ಛರಿಸಿದ್ದರು. ಶ್ರೀ ರಾಮನ ಬಗ್ಗೆ ಅಪಾರ ಭಕ್ತಿ, ನಂಬಿಕೆಯನ್ನು ಹೊಂದಿದ್ದರು. ಆದ್ದರಿಂದಲೇ…

Read More

ಬೆಂಗಳೂರು: ಮಂಡ್ಯ ಕೆರಗೋಡಿನಲ್ಲಿ ನಡೆದಂತ ಹನುಮ ಧ್ವಜ ವಿವಾದದ ಬಗ್ಗೆ ನಿನ್ನೆ ಇಡೀ ದಿನ ಮಂಡ್ಯದಲ್ಲಿ ಬಿಜೆಪಿಯಿಂದ ಹೈಡ್ರಾಮಾವೇ ನಡೆಸಲಾಯಿತು. ಇದಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ಸಾಥ್ ನೀಡಿದ್ರು. ಇಂತಹ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗಂಭೀರ ಆರೋಪವನ್ನು ಮಾಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕುಮಾರಸ್ವಾಮಿನೇ ಪ್ರಚೋದನೆ ಮಾಡಿ ಗಲಾಟೆ ಎಬ್ಬಿಸಿರೋದು. ಜೆಡಿಎಸ್, ಬಿಜೆಪಿಯವರು ಜನಗಳನ್ನ ಪ್ರಚೋದನೆ ಮಾಡಿ ಗಲಾಟೆ ಎಬ್ಬಿಸಿರೋದು. ಶಾಂತಿಯನ್ನ ಕದಡಿರೋದು. ಈ ಘಟನೆಯಲ್ಲಿ ಕುಮಾರಸ್ವಾಮಿಯವರದ್ದು ತಪ್ಪು, ಬಿಜೆಪಿಯವರದ್ದು ತಪ್ಪು ಎಂಬುದು ಸ್ಪಷ್ಟವಾಗಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದರು. ಅಲ್ಲಿ ಪಂಚಾಯ್ತಿನಲ್ಲಿ ಪಂಚಾಯ್ತಿಯವರು ಇವರಿಗೆ ಪರ್ಮೀಷನ್ ಕೊಟ್ಟಿರೋದು ಯಾವ ಥರ? ಏನಂಥ ಕೊಟ್ಟಿರೋದು ಅಂದ್ರೆ ಧ್ವಜ ಸ್ಥಂಬದ ಮೇಲೆ ರಾಷ್ಟ್ರಧ್ವಜ ಹಾರಿಸಿ, ಅಥವಾ ಕನ್ನಡ ಧ್ವಜವನ್ನು ಹಾರಿಸಿ ಅಂತ ಹೇಳಿರೋದು. ಅದಕ್ಕೆ ಮುಚ್ಚಳಿಕೆ ಕೂಡ ಬರೆದುಕೊಟ್ಟಿದ್ದಾರೆ. ಹೀಗಿದ್ದೂ ಅವರು ಹಾರಿಸಿರೋದು ಮಾತ್ರ…

Read More

ಇಸ್ಲಾಮಾಬಾದ್: ಸೈಫರ್ ಪ್ರಕರಣದಲ್ಲಿ ಪಿಟಿಐ ಸಂಸ್ಥಾಪಕ ಇಮ್ರಾನ್ ಖಾನ್ ಮತ್ತು ಶಾ ಮೆಹಮೂದ್ ಖುರೇಷಿ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಸೋರಿಕೆಯಾದ ದಾಖಲೆಗೆ ಸಂಬಂಧಿಸಿದ ವಿವಾದಾತ್ಮಕ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ರಾಜ್ಯ ಮಾಧ್ಯಮ ಮತ್ತು ಪಿಟಿಐ ಪಕ್ಷದ ವಕ್ತಾರರು ತಿಳಿಸಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ರಾಜಕೀಯ ಪಕ್ಷ ಪಿಟಿಐ ಅವರ ಜೈಲು ಶಿಕ್ಷೆಯ ಬಗ್ಗೆ ಪ್ರತಿಕ್ರಿಯಿಸಿದೆ. “ಪಾಕಿಸ್ತಾನವನ್ನು ರಕ್ಷಿಸಿದ ಮತ್ತು ಹಕೀಕಿ ಆಜಾದಿ ಪರವಾಗಿ ನಿಂತ ಇಮ್ರಾನ್ ಖಾನ್ ಮತ್ತು ಶಾ ಮೆಹಮೂದ್ ಖುರೇಷಿ ಅವರೊಂದಿಗೆ ಪಾಕಿಸ್ತಾನ ನಿಲ್ಲುತ್ತದೆ. ಡೊನಾಲ್ಡ್ ಲು ಅವರ ಆದೇಶದ ಮೇರೆಗೆ ಮಾರ್ಚ್-ಏಪ್ರಿಲ್ 2022 ರಲ್ಲಿ ಏನಾಯಿತು ಎಂಬುದನ್ನು ಅಂತಹ ಯಾವುದೇ ಮೋಸದ ವಿಚಾರಣೆಯು ಬದಲಾಯಿಸಲು ಸಾಧ್ಯವಿಲ್ಲ ಎಂದಿದೆ.…

Read More

ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ( SSLC Students ) ಮುಂಬರುವಂತ ವಾರ್ಷಿಕ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ( Education Department ) ಎಲ್ಲಾ ವಿಷಯಗಳಿಗೆ ಸಂಬಂಧಿಸಿದಂತೆ ಮಾದರಿ ಪ್ರಶ್ನೆಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು 2024ರ 10ನೇ ತರಗತಿ ವಾರ್ಷಿಕ ಪರೀಕ್ಷೆಗೆ ( SSLC Main Exam 2024 ) ಸಂಬಂಧಿಸಿದಂತೆ ಎಲ್ಲಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯನ್ನು ( Model Question Paper ) ಬಿಡುಗಡೆ ಮಾಡಲಾಗಿದೆ ಎಂದಿದೆ. ಪ್ರತಿಯೊಂದು ವಿಷಯದ 5 ಸೆಟ್ ಮಾದರಿ ಪ್ರಶ್ನೆ ಪತ್ರಿಕೆಯನ್ನು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗೋ ನಿಟ್ಟಿನಲ್ಲಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಡಿಡಿಪಿಐ ಸಿದ್ಧಪಡಿಸಿದ ಮಾದರಿ ಪ್ರಶ್ನೆಪತ್ರಿಕೆಗಳು ಪರೀಕ್ಷೆಯ ಮಾದರಿಗೆ ಅನುಗುಣವಾಗಿ ಸಿದ್ಧತೆಗಳನ್ನು ವಿಶ್ಲೇಷಿಸಲು ಮತ್ತು ಯೋಜಿಸಲು ಬಹಳ ಸಹಾಯಕವಾಗಿವೆ. ಈ ಪ್ರಶ್ನೆ ಪತ್ರಿಕೆಗಳನ್ನು ಕನ್ನಡ/ ಇಂಗ್ಲಿಷ್/ ಹಿಂದಿ/ ಗಣಿತ/ ವಿಜ್ಞಾನ/…

Read More

ಬೆಂಗಳೂರು: ಕಳೆದ ಕೆಲ ವರ್ಷಗಳಿಂದ ಜಯದೇವ ಹೃದ್ರೋಗ ಸಂಸ್ಥೆಯ ( Jayadeva Institute of Cardiology ) ನಿರ್ದೇಶಕರಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವಂತ ಡಾ.ಸಿಎನ್ ಮಂಜುನಾಥ್ ( Dr.CN Manjunath ) ಅವರು, ಜನವರಿ.31ರಂದು ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಇಂತಹ ಅವರಿಗೆ ರಾಜ್ಯ ಸರ್ಕಾರದಿಂದ ಅದ್ಧೂರಿಯಾಗಿ ಇಂದು ಬೀಳ್ಕೊಡುಗೆ ನೀಡಲಾಯಿತು. ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಡಾ.ಸಿಎನ್ ಮಂಜುನಾಥ್ ಮಾಡಿದ ಕಾರ್ಯ, ಸಾರ್ವಜನಿಕವಾಗಿ ಪ್ರಶಂಸೆಗೆ ಪಾತ್ರವಾಗಿತ್ತು. ಅವರ ಸೇವಾವಧಿ ಕಳೆದ ವರ್ಷವೇ ಮುಕ್ತಾಯಗೊಳ್ಳುತ್ತಿದ್ದರೂ, ರಾಜ್ಯ ಸರ್ಕಾರ ಮತ್ತೊಂದು ಅವಧಿಗೆ ಮುಂದುವರೆಸಿ ಆದೇಶ ಮಾಡಿತ್ತು. ಇಂತಹ ಅವರು ಜನವರಿ.31ರಂದು ನಿವೃತ್ತರಾಗಲಿದ್ದಾರೆ. ಹೀಗಾಗಿ ಇದೇ ತಿಂಗಳ ಜ.31 ರಂದು ಸೇವೆಯಿಂದ ನಿವೃತ್ತಿಯಾಗಲಿರುವ ಜಯದೇವ ಹೃದ್ರೋಗ ಸಂಸ್ಥೆಯ ನಿದೇರ್ಶಕ ಡಾ. ಸಿ.ಎನ್. ಮಂಜುನಾಥ್ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ವೈದ್ಯಕೀಯ ಶಿಕ್ಷಣ) ಜಾವೀದ್ ಅಖ್ತರ್ ಅವರ ಬೀಳ್ಕೊಡೆಗೆ ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್…

Read More