Subscribe to Updates
Get the latest creative news from FooBar about art, design and business.
Author: kannadanewsnow09
ಚಾಮರಾಜನಗರ: ಜನರ ಬಳಿಗೆ ಆರೋಗ್ಯ ಸೇವೆಗಳನ್ನ ಕೊಂಡೊಯ್ಯುವ ನಿಟ್ಟಿನಲ್ಲಿ ರಾಜ್ಯದ ಹಳ್ಳಿಗಾಡಿನ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರದಿಂದ ಆರೋಗ್ಯ ಮೇಳಗಳನ್ನ ಹಮ್ಮಿಕೊಳ್ಳಲು ವಿಶೇಷ ಕಾರ್ಯಕ್ರಮ ರೂಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ಬೃಹತ್ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಹಳ್ಳಿಗಾಡಿನ ಜನರು ಕೊಳ್ಳೆಗಾಲದ ಆರೋಗ್ಯ ಮೇಳಕ್ಕೆ ಆಗಮಿಸಿ, ಆರೋಗ್ಯ ತಪಾಸಣೆಗೆ ಆಸಕ್ತಿ ತೋರಿದ್ದನ್ನ ನೋಡಿದರೆ ಆರೋಗ್ಯ ಮೇಳಗಳ ಅಗತ್ಯೆತೆಯನ್ನ ನಾವು ಮನಗಾಣಬೇಕಿದೆ. ಇಷ್ಟೊಂದು ಸಂಖ್ಯೆಯಲ್ಲಿ ಜನರ ಸ್ಪಂದನೆ ಸಿಗಲಿದೆ ಎಂದು ನಿರೀಕ್ಷಿಸಿರಲಿಲ್ಲ. ಕೊಳ್ಳೆಗಾಲದ ಈ ಆರೋಗ್ಯ ಮೇಳ ರಾಜ್ಯ ಮಟ್ಟದ ಒಂದು ಆರೋಗ್ಯ ಮೇಳ ಕಾರ್ಯಕ್ರಮ ರೂಪಿಸಲು ಮುನ್ನುಡಿ ಬರೆಯಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಆರೋಗ್ಯ ಇಲಾಖೆಯನ್ನ ಜನರ ಬಳಿಗೆ ಕೊಂಡೊಯ್ಯುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನ ಹಾಕಿಕೊಳ್ಳಲಾಗಿದೆ. ಅದರಲ್ಲಿ ಆರೋಗ್ಯ ಮೇಳವೂ ಒಂದು. ಈ ಮೊದಲು ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ ಮೊದಲ ಆರೋಗ್ಯ ಮೇಳವನ್ನ ಆಯೋಜಿಸಲಾಗಿತ್ತು. ಅಲ್ಲಿ ಜನರಿಂದ…
ಬೆಂಗಳೂರು: ನಾಳೆ ಬೆಂಗಳೂರಲ್ಲಿ “ಸರ್ವೋದಯ ದಿನ”ದ ಪ್ರಯುಕ್ತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ. ದಿನಾಂಕ: 30.01.2024ರ ಮಂಗಳವಾರ “ಸರ್ವೋದಯ ದಿನ”ದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ. ಇನ್ನೂ ನಾಳೆ ಬೆಳಿಗ್ಗೆ 9 ಗಂಟೆಗೆ ಸರ್ವೋದಯ ದಿನಾಚರಣೆ ಅಂಗವಾಗಿ ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಆಡಳಿತಗಾರರು, ಮುಖ್ಯ ಆಯುಕ್ತರು ಹಾಗೂ ಇನ್ನಿತರೆ ಗಣ್ಯರುಗಳು ಮಾಲಾರ್ಪಣೆ ಹಾಗೂ ಪುಷ್ಪ ನಮನ ಸಲ್ಲಿಸಲಿದ್ದಾರೆ. https://kannadanewsnow.com/kannada/diploma-graduates-attention-applications-invited-for-yuvanidhi-scheme/ https://kannadanewsnow.com/kannada/shivamogga-power-outages-in-these-areas-of-the-district-on-january-31/
ಮಡಿಕೇರಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. 2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 / 9113935220 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಉದ್ಯೋಗಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು…
ಮಡಿಕೇರಿ :-ಪ್ರಸಕ್ತ (2023-24) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು (ಪವರ್ ವೀಡರ್), ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್‍ಸೆಟ್, ಪ್ಲೋರ್ ಮಿಲ್, ಮೊಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಆಸಕ್ತ ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ರೈತರು ಪಹಣಿ (ಆರ್‍ಟಿಸಿ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಒಂದು ಭಾವಚಿತ್ರ, ರೂ.20 ರ ಛಾಪಾ ಕಾಗದದೊಂದಿಗೆ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ಮಡಿಕೇರಿ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/kumaraswamy-is-now-a-bjp-spokesperson-siddaramaiah/ https://kannadanewsnow.com/kannada/shivamogga-power-outages-in-these-areas-of-the-district-on-january-31/
ತುಮಕೂರು : ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾಧ್ವಜ ಹಾರಿಸಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ ರಾಜಕೀಯ ಕುತಂತ್ರ. ಇದರಲ್ಲಿ ಸರ್ಕಾರದ ವೈಫಲ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸುತ್ತೇವೆ, ಯಾವುದೇ ಧರ್ಮದ ಧ್ವಜವನ್ನು ಹಾಕುವುದಿಲ್ಲ ಎಂದು ಹೇಳಿ ಅದನ್ನು ಉಲ್ಲಂಘಿಸಿ ಭಗವಾಧ್ವಜವನ್ನು ಹಾರಿಸಿದ್ದಾರೆ. ಅವರೇ ಬರೆದುಕೊಟ್ಟ ಮುಚ್ಚಳಿಕೆಗೆ ಬರೆದುಕೊಟ್ಟಿದ್ದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದರು. ಇಬ್ಬರಿಗೆ ಲಾಠಿ ಚಾರ್ಜ್ ವೇಳೆ ಗಾಯವಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪೋಲಿಸರಿಗೆ ಹೊಡೆದಿದ್ದಾರೆ ಎಂಬ ಮಾಹಿತಿ ಇದೆ ಪೋಲಿಸಿನವರಿಗೆ ಹೊಡೆದರೆ ಏನು ಮಾಡುತ್ತಾರೆ ಎಂದರು. ಧ್ವಜದ ವಿಚಾರದಲ್ಲಿ ನಕಲಿ ದಾಖಲೆ ಸೃಷಿಯಾಗಿದ್ದು, ಘಟನೆಗೆ ಜಿಲ್ಲಾಧಿಕಾರಿ ಕಾರಣ, ಅವರು ಅಮಾನತು ಆಗುವವರೆಗೆ ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಮಾತನಾಡಿ…
ಬೆಂಗಳೂರು: ಮಂಡ್ಯದಲ್ಲಿ ಇಂದು ಹನುಮಧ್ವಜ ವಿವಾಧ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ಇಂತಹ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಅಂತಹ ಬ್ರಿಟಿಷರನ್ನೇ ಹೆದರಿಸಿದ ಕಾಂಗ್ರೆಸ್ ಈ ಬಿಜೆಪಿ RSS ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಅಂತ ಹೇಳಿದೆ. ಈ ಬಗ್ಗೆ ಎಕ್ಸ್ ಮಾಡಿದ್ದು, ಅಂತಹ ಬ್ರಿಟಿಷರನ್ನೇ ಹೆದರಿಸಿದ ಕಾಂಗ್ರೆಸ್ ಈ ಬಿಜೆಪಿ RSS ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ. ಬ್ರಿಟಿಷರ ಗುಂಡಿಗೆ ಎದೆಗೊಟ್ಟು ತಿರಂಗಾ ಹಾರಿಸಿದ ವೀರ ಪರಂಪರೆ ನಮ್ಮದು, ಈ ಸಂಘಿ ಕ್ರಿಮಿ ಕೀಟಗಳು ನಮ್ಮನ್ನು ತಡೆಯಲು ಸಾಧ್ಯವೇ. ದೇಶದ ಘನತೆ, ಗೌರವವನ್ನು ಎತ್ತಿ ಹಿಡಿದಿದ್ದೇವೆ, ದೇಶದ್ರೋಹಿ ಬಿಜೆಪಿಗೆ ದಮ್ಮು ತಾಕತ್ತಿದ್ದರೆ ಈ ರಾಷ್ಟ್ರ ಧ್ವಜವನ್ನು ಕಿತ್ತು ಹಾಕುವ ಧೈರ್ಯ ತೋರಲಿ ಎಂದಿದೆ. https://twitter.com/INCKarnataka/status/1751837217130258575 ಅನುಮತಿ ಪಡೆದಿದ್ದು ರಾಷ್ಟ್ರ ಧ್ವಜ ಹಾರಿಸುವುದಕ್ಕೆ, ಆದರೆ ಹಾರಿಸಿದ್ದು ಧಾರ್ಮಿಕ ಧ್ವಜವನ್ನು. RSS ತ್ರಿವರ್ಣ ಧ್ವಜವನ್ನು “ಅನಿಷ್ಠದ ಸಂಕೇತ” ಎಂದು ಕರೆದಿತ್ತು, RSS ದಶಕಗಳ ಕಾಲ ತಿರಂಗವನ್ನು ಒಪ್ಪಿಕೊಳ್ಳಲಿಲ್ಲ, ಬಿಜೆಪಿಯೂ ಅದೇ ಹಾದಿಯಲ್ಲಿ ಸಾಗಿದೆ, ರಾಷ್ಟ್ರ ಧ್ವಜವನ್ನು ದ್ವೇಷಿಸುತ್ತಿದೆ. ರಾಷ್ಟ್ರ…
ಶಿವಮೊಗ್ಗ : ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.31 ರ ಬೆಳಗ್ಗೆ 09.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಮಿಷನ್ ಕಾಂಪೌಂಡ್, ಜ್ಯುವೆಲ್ ರಾಕ್ ಹೊಟೇಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಜ.30 ರಂದು ಉದ್ಯೋಗ ಮೇಳ ಶಿವಮೊಗ್ಗ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಜ.30 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್‍ಎಸ್‍ಎಲ್‍ಸಿ/ಪಿಯುಸಿ/ ಐಟಿಐ/ ಡಿಪ್ಲೊಮಾ/ಬಿಇ ಮತ್ತು ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ದೂ.ಸಂ.: 08182-255293/ 9380663606 /8151093947/…
ತುಮಕೂರು : “ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡ ತಗ್ಗಿಸಲು ತುಮಕೂರು ಜಿಲ್ಲೆಯನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು; “ತುಮಕೂರು ಜಿಲ್ಲೆ ಎರಡನೇ ಬೆಂಗಳೂರು ಆಗಿ ಪರಿವರ್ತನೆಯಾಗುವ ನಂಬಿಕೆ ಇದೆ. ಇಲ್ಲಿಯ ಸಂಸ್ಕೃತಿ, ಇಲ್ಲಿಯ ಜನ, ಇಲ್ಲಿಯ ನೆಲಕ್ಕೆ ತನ್ನದೇ ಆದ ಶಕ್ತಿ ಇದೆ. ತುಮಕೂರು ಜಿಲ್ಲೆಯನ್ನು ಹೊಸ ಬೆಂಗಳೂರಾಗಿ ಪರಿವರ್ತಿಸಲು ಮುಂದಿನ 50 ವರ್ಷಗಳ ಯೋಜನೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಬೆಂಗಳೂರಿನ ಸಚಿವನಾಗಿ ನಾನು ಬೆಂಗಳೂರಿನ ಒತ್ತಡ ಕಡಿಮೆ ಮಾಡಬೇಕು ಎಂದು ಆಲೋಚನೆ ಮಾಡಿದಾಗ, ರಾಮನಗರ, ಚನ್ನಪಟ್ಟಣ, ನೆಲಮಂಗಲ, ದೊಡ್ಡಬಳ್ಳಾಪುರ ನಂತರ ತುಮಕೂರು ಪರ್ಯಾಯವಾಗಿದೆ. ಇಂದು ತುಮಕೂರು ಜಿಲ್ಲೆಯ ಸಾವಿರಾರು ಕೋಟಿಯ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಯುವಕರು, ಮಹಿಳೆಯರು, ರೈತರು ಭಾಗವಹಿಸಿದ್ದಾರೆ. ತುಮಕೂರು ಕಲ್ಪತರುನಾಡು.…
ಶಿವಮೊಗ್ಗ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಜ.30ರ ನಾಳೆ ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್‍ಎಸ್‍ಎಲ್‍ಸಿ/ಪಿಯುಸಿ/ ಐಟಿಐ/ ಡಿಪ್ಲೊಮಾ/ಬಿಇ ಮತ್ತು ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ದೂ.ಸಂ.: 08182-255293/ 9380663606 /8151093947/ 9482023412 ಇವರನ್ನು ಖುದ್ದಾಗಿ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/maldives-president-muizu-to-be-removed-opposition-ready-to-move-impeachment-motion-report/ https://kannadanewsnow.com/kannada/breaking-govt-extends-ban-on-simi-by-5-years/
ಮಂಡ್ಯ: ನಗರದಲ್ಲಿ ಕೋಮುವಾದದ ವಿಷ ಬೀಜ ಬಿತ್ತಿ, ರಾಜಕೀಯ ಪ್ರಯೋಜನ ಪಡೆಯಲು ಹೊರಟ ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಪ್ರಯತ್ನ ವಿಫಲವಾಗಲಿದೆ. ಇದು ಖಂಡಿತವಾಗಿಯೂ ಯಶ ಕಾಣದು. ಕಾಂಗ್ರೆಸ್‌ನ ಜನಪರ ಯೋಜನೆ, ಕಾಳಜಿ ಬಗ್ಗೆ ಜನರು ಈಗಾಗಲೇ ಅರ್ಥ ಮಾಡಿಕೊಂಡಿದ್ದಾರೆ. ಕೋಮುವಾದಕ್ಕೆ ನಮ್ಮ ಜನ ಸೊಪ್ಪು ಹಾಕುವುದಿಲ್ಲ ಎಂದು ಕೆಪಿಸಿಸಿ ಮಾಧ್ಯಮ ಘಟಕದ ಉಪಾಧ್ಯಕ್ಷರು, ಶಾಸಕರಾದ ದಿನೇಶ್ ಗೂಳಿಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದಿನೇಶ್ ಗೂಳಿಗೌಡ, ಮಂಡ್ಯದ ಕೆರಗೋಡು ಗ್ರಾಮದಲ್ಲಿ ರಾಷ್ಟ್ರ ಧ್ವಜ, ಕನ್ನಡ ಧ್ವಜ ಹಾರಿಸಲು ಗ್ರಾಪಂನಿಂದ ಅನುಮತಿ ಪಡೆದು, ಆ ಧ್ವಜದ ಕಟ್ಟೆಯ ಮೇಲೆ ಕೇಸರಿ ಬಾವುಟ ಹಾಗೂ ಹನುಮ ಧ್ವಜ ಹಾರಿಸಲಾಗಿತ್ತು. ಜಿಲ್ಲಾಡಳಿತ ಆ ಧ್ವಜ ಇಳಿಸಿ ರಾಷ್ಟ್ರ ಧ್ವಜ ಹಾರಿಸಿದೆ. ಜಿಲ್ಲಾಡಳಿತ ಸಂವಿಧಾನದ ಆಶಯದಂತೆ ಕಾನೂನಾತ್ಮಕವಾಗಿ ನಡೆದುಕೊಂಡಿದೆ. ಆದರೆ, ಬಿಜೆಪಿ ಹಾಗೂ ಅದರ ಮಿತ್ರ ಪಕ್ಷ ಜೆಡಿಎಸ್ ಅದನ್ನು ಕೋಮುವಾದೀಕರಣಗೊಳಿಸಿ ರಾಜಕೀಯ ಪ್ರಯೋಜನ ಪಡೆಯಲು ಹೊರಟಿವೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದರು. ಬಿಜೆಪಿ ಖಂಡಿತಾ ಯಶಸ್ವಿಯಾಗದು…