Subscribe to Updates
Get the latest creative news from FooBar about art, design and business.
Author: kannadanewsnow09
ಧಾರವಾಡ : ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಗೊಳಿಸಿರುವ ಜನಪರ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ. ಗ್ಯಾರಂಟಿ ಪ್ರಯೋಜನವನ್ನು ಪ್ರತಿ ಅರ್ಹ ಪಲಾನುಭವಿಗೆ ತಲುಪಿಸಲು ಜನರಲ್ಲಿ ಗ್ಯಾರಂಟಿಗಳ ಅರಿವು ಮೂಡಿಸುವ ಅಗತ್ಯವಿದ್ದು, ಅದಕ್ಕಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಹೇಳಿದರು. ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ, ಮಾತನಾಡಿದರು. ಸರಕಾರದ ಅಭಿವೃದ್ದಿ ಯೋಜನೆಗಳನ್ನು ಸಮುದಾಯ, ವ್ಯಕ್ತಿಗಳಿಗೆ ಮುಟ್ಟಿಸಬೇಕು. ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಇಲಾಖೆಗಳಿಗೆ ವಿವಿಧ ಯೋಜನೆಗಳಡಿ ಫಲಾನುಭವಿಗಳ ಸಂಖ್ಯೆ ನಿಗದಿಪಡಿಸಿ, ಗುರಿ ನೀಡಲಾಗಿದೆ. ಸರಕಾರದಿಂದ ಹಂತಹಂತವಾಗಿ ಅನುದಾನವೂ ಬಿಡುಗಡೆ ಆಗುತ್ತಿದೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಇಲಾಖಾ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಫೆಬ್ರವರಿ ತಿಂಗಳಲ್ಲಿ…
ಬೆಂಗಳೂರು; ರಾಜ್ಯದಲ್ಲಿ ಇಂದು 103 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 134 ಮಂದಿ ಗುಣಮುಖರಾಗಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 2,224 ಜನರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಹೇಳಿದೆ. ಇಂದು ಹೊಸದಾಗಿ ಬಳ್ಳಾರಿ 03, ಬೆಳಗಾವಿ 04, ಬೆಂಗಳೂರು ಗ್ರಾಮಾಂತರ 01, ಬೆಂಗಳೂರು ನಗರ 65, ಬೀದರ್, ಚಿತ್ರದುರ್ಗ ಹಾಗೂ ಧಾರವಾಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದಿದೆ. ಇನ್ನೂ ಹಾಸನ 02, ಕಲಬುರ್ಗಿ 03, ಕೊಪ್ಪಳ 02, ಮೈಸೂರು 05, ಶಿವಮೊಗ್ಗ 02, ತುಮಕೂರು 10 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂವರು ಸೇರಿದಂತೆ ಇಂದು 103 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಲ್ಲಿ ದೃಢಪಟ್ಟಿದೆ. ಸೋಂಕಿತರಾದಂತ 134 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 310 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ. https://kannadanewsnow.com/kannada/lok-sabha-elections-2019-bjp-appoints-in-charges-for-28-constituencies-in-karnataka/ https://kannadanewsnow.com/kannada/land-scam-court-summons-former-bihar-cm-lalu-prasads-wife-rabri-devi-daughters/
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಳ್ಳಾರಿಯ ಹಂಪಿಯ ವಿರೂಪಾಕ್ಷ ದೇವಾಲಯಕ್ಕೆ ಭೇಟಿ ನೀಡುವಂತ ಪ್ರವಾಸಿಗರಿಗೆ ವಸ್ತ್ರಸಂಹಿತೆಯನ್ನು ಜಾರಿಗೊಳಿಸಿದೆ. ಕೆಲ ಡ್ರೆಸ್ ಗಳನ್ನು ಧರಿಸಿ ತೆರಳಿದ್ರೇ, ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ ವಿಜಯನಗರ ಜಿಲ್ಲಾಧಿಕಾರಿ ಎಂ. ಎಸ್ ದಿವಾಕರ್ ಮಾಹಿತಿ ಹಂಚಿಕೊಂಡಿದ್ದು, ಮುಜುರಾಯಿ ಇಲಾಖೆಗೆ ಒಳಪಟ್ಟ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ಬಂದಿದೆ. ಬರ್ಮುಡ ಚಡ್ಡಿ, ಜೀನ್ಸ್ ಧರಿಸಿ ಬಂದವರು ಇನ್ನು ಮುಂದೆ ಪಂಚೆ ತೊಡುವುದು ಕಡ್ಡಾಯ ಎಂಬುದಾಗಿ ತಿಳಿಸಿದ್ದಾರೆ. ಮಹಿಳೆಯರು ತುಂಡುಡುಗೆಯಲ್ಲಿ ಬಂದರೆ ಅದರ ಮೇಲೆ ಶಲ್ಯ ತೊಡಬೇಕಾಗಿದೆ. ಪ್ರವಾಸಕ್ಕೆ ಬರುವವರು ದೇವಸ್ಥಾನಕ್ಕೆ ಭೇಟಿ ನೀಡುವಾಗ ಭಕ್ತಿ ಭಾವನೆ ಉದ್ದೀಪನೆಯ ಉಡುಪು ಧರಿಸಿ ದೇವರ ದರ್ಶನ ಪಡೆಯಬೇಕು. ಈ ಸದುದ್ದೇಶದಿಂದ ಈ ವಿಶೇಷ ಕ್ರಮ ವಹಿಸಿದ್ದೇವೆ ಎಂದು ಹೇಳಿದ್ದಾರೆ. ಸೋ ಹಂಪಿ ವಿರೂಪಾಕ್ಷ ದೇವಾಲಯಕ್ಕೆ ಭೇಟಿ ನೀಡುವಂತ ಪ್ರವಾಸಿಗರು ಇನ್ಮುಂದೆ ಬರ್ಮುಡ ಚಡ್ಡಿ, ಜೀನ್ಸ್ ಧರಿಸಿ ಹೋದ್ರೆ, ಮಹಿಳೆಯರು ತುಂಡುಡುಗೆಯಲ್ಲಿ ತೆರಳಿದ್ರೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸುವಂತೆ…
ಬೆಂಗಳೂರು: ಇದೇ ಮೊದಲ ಬಾರಿಗೆ ಐತಿಹಾಸಿಕ ದಾಖಲೆ ಎನ್ನುವಂತೆ ಭಾರತದ ರೋಹನ್ ಬೋಪಣ್ಣ ಅವರು ಆಸ್ಟ್ರೇಲಿಯನ್ ಓಪನ್-2024ರ ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಹೊಸ ದಾಖಲೆಯನ್ನು ಬರೆದಿದ್ದರು. ಇಂತಹ ಅವರು ಕನ್ನಡಿಗರಾಗಿದ್ದು, ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಭಾರತದ ರೋಹನ್ ಬೋಪಣ್ಣ ಮತ್ತು ಮ್ಯಾಥ್ಯೂ ಎಬ್ಡೆನ್ ಜೋಡಿ ಫೈನಲ್ನಲ್ಲಿ ಅರ್ಜೆಂಟೀನಾದ ಮ್ಯಾಕ್ಸಿಮೊ ಗೊನ್ಜಾಲೆಜ್ ಮತ್ತು ಆಂಡ್ರೆಸ್ ಮೊಲ್ಟೆನಿ ಅವರನ್ನು ಸೋಲಿಸಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಜೋಡಿ 6-4ರಲ್ಲಿ ಸಮಬಲ ಸಾಧಿಸಿತು. 7-6 ಗೆಲುವು. ಬೋಪಣ್ಣ ಇತ್ತೀಚೆಗೆ ಡಬಲ್ಸ್ನಲ್ಲಿ ನಂ.1 ಶ್ರೇಯಾಂಕವನ್ನು ಪಡೆದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಕುರಿತಂತೆ ಎಕ್ಸ್ ಮಾಡಿರುವಂತ ಸಿಎಂ ಸಿದ್ಧರಾಮಯ್ಯ, ವಿಶ್ವ ಟೆನ್ನಿಸ್ನ ನಂ.1 ಡಬಲ್ಸ್ ಆಟಗಾರ, ಕನ್ನಡಿಗ ರೋಹನ್ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ ನಾಡಿಗೆ ಹೆಮ್ಮೆ ಮೂಡಿಸಿದ್ದಾರೆ. ಈ ಪ್ರಶಸ್ತಿ ಗೆಲುವಿನೊಂದಿಗೆ ಅವರು ಗ್ರ್ಯಾಂಡ್…
ಪಾಟ್ನಾ: ‘ಮಹಾಘಟಬಂಧನ್’ ( Mahagathbandhan ) ಸರ್ಕಾರದ ನೇತೃತ್ವ ವಹಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ( Bihar Chief Minister Nitish Kumar ) ಅವರು ಭಾನುವಾರ ಬೆಳಿಗ್ಗೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಸಿಎಂ ಆಪ್ತ ಮೂಲಗಳು ಶನಿವಾರ ತಿಳಿಸಿವೆ. ಪಿಟಿಐ ಜೊತೆ ಮಾತನಾಡಿದ ಮೂಲಗಳು, ಶನಿವಾರ ಸಂಜೆಯ ವೇಳೆಗೆ ರಾಜೀನಾಮೆ ನೀಡುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲವಾದರೂ, “ಅದು ಖಂಡಿತವಾಗಿಯೂ ಭಾನುವಾರ ಬೆಳಿಗ್ಗೆ ವೇಳೆಗೆ ನಡೆಯಲಿದೆ” ಎಂದು ಹೇಳಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಶಾಸಕಾಂಗ ಪಕ್ಷದ ಸಾಂಪ್ರದಾಯಿಕ ಸಭೆ ನಡೆಸಲಿದ್ದಾರೆ ಎಂದು ಅವರು ಹೇಳಿದರು. “ಹಗಲಿನಲ್ಲಿ ನಿರೀಕ್ಷಿಸಲಾದ ತೀವ್ರ ಚಟುವಟಿಕೆಯನ್ನು ಗಮನದಲ್ಲಿಟ್ಟುಕೊಂಡು” ಸಚಿವಾಲಯದಂತಹ ಸರ್ಕಾರಿ ಕಚೇರಿಗಳನ್ನು ಭಾನುವಾರ ತೆರೆಯಲು ಕೇಳಲಾಗಿದೆ, ಇದು ಬಿಜೆಪಿಯ ಬೆಂಬಲದೊಂದಿಗೆ ಹೊಸ ಸರ್ಕಾರವನ್ನು ನೋಡಬಹುದು ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಪಕ್ಷದ ಸಭೆಯಲ್ಲಿ, ರಾಜ್ಯ ಬಿಜೆಪಿ ನಾಯಕರು ಜೆಡಿಯು ಮುಖ್ಯಸ್ಥರು ‘ಮಹಾಘಟಬಂಧನ್’ ನಿಂದ ಹೊರಬಂದ ಸಂದರ್ಭದಲ್ಲಿ ಅವರಿಗೆ ಬೆಂಬಲದ…
ಬೆಂಗಳೂರು: ರಾಜ್ಯದ ಮಧುಮೇಹಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟನೆ ಮಾಡಿದರು. ಈ ಮೂಲಕ ಮಧುಮೇಹಿಗಳ ಸೇವೆಗೆ ಡಯಾಲಿಸಿಸ್ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದರು. ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವಂತ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉಚಿತ ಡಯಾಲಿಸಿಸ್ ಸೇವೆಗಳಿಗೆ ಉದ್ಘಾಟನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರೇ, ಅಧ್ಯಕ್ಷತೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಚಿವ ರಾಮಲಿಂಗಾರೆಡ್ಡಿ, ಕೆ.ಜೆ ಜಾರ್ಜ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬಿಎಸ್ ಸುರೇಶ್ ಕೂಡ ಹಾಜರಿರಲಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಆರ್ ಅಶೋಕ್ ಭಾಗಿಯಾಗಿದ್ದರು. ಅಂದಹಾಗೇ 219 ಡಯಾಲಿಸಿಸ್ ಕೇಂದ್ರಗಳು, 800 ಡಯಾಲಿಸಿಸ್ ಯಂತ್ರಗಳನ್ನು ಒಳಗೊಂಡಿದೆ. ಇವುಗಳಿಗೆ ವಾರ್ಷಿಕ ಯೋಜನಾ ವೆಚ್ಚ 108 ಕೋಟಿಯಾಗಿದೆ. ಇವುಗಳಿಂದ 7.20 ಲಕ್ಷ ವಾರ್ಷಿಕ ಡಯಾಲಿಸಿಸ್ ಸೈಕಲ್…
ಬೆಂಗಳೂರು: ಇಂದು ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ 2 ನಿರ್ಣಯಗಳನ್ನು ಅಂಗೀಕರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ಅವರು ತಿಳಿಸಿದರು. “ಕಾರ್ಯಕಾರಿಣಿ ಸಭೆಯ ಮಾಧ್ಯಮ ಕೇಂದ್ರ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಪ್ರಾಣ ಪ್ರತಿಷ್ಠಾಪನೆ ಯಶಸ್ವಿಯಾಗಿ ಪೂರ್ಣಗೊಳಿಸಿದ ನರೇಂದ್ರ ಮೋದಿಯವರನ್ನು ಅಭಿನಂದಿಸಲಾಗಿದೆ. 550 ವರ್ಷಗಳ ಭಾರತೀಯರ, ಹಿಂದೂ ಸಮಾಜದ ಬಹುನಿರೀಕ್ಷಿತ ಬೇಡಿಕೆ ಈಡೇರಿಸಿ ಮಂದಿರ ಲೋಕಾರ್ಪಣೆ ಮಾಡಿದ ಪ್ರಧಾನಿಯವರನ್ನು ಅಭಿನಂದಿಸಲಾಗಿದೆ. ಸರ್ವಾನುಮತದಿಂದ ಇದನ್ನು ಅಂಗೀಕರಿಸಲಾಗಿದೆ ಎಂದು ವಿವರಿಸಿದರು. ಕಾಂಗ್ರೆಸ್ ಸರಕಾರದ ರೈತವಿರೋಧಿ, ದಲಿತ ವಿರೋಧಿ ನೀತಿ ಖಂಡಿಸಿ ನಿರ್ಣಯ ಅಂಗೀಕರಿಸಿದ್ದೇವೆ. ದಲಿತ ಮತ್ತು ಶೋಷಿತ ವರ್ಗಕ್ಕೆ ಮೀಸಲಿಟ್ಟ 11 ಸಾವಿರ ಕೋಟಿಗೂ ಹೆಚ್ಚು ಹಣವನ್ನು ಗ್ಯಾರಂಟಿಗಾಗಿ ಉಪಯೋಗ ಮಾಡಿ ದಲಿತ ಮತ್ತು ಶೋಷಿತರಿಗೆ ವಂಚಿಸಿದ್ದನ್ನು ಖಂಡಿಸಲಾಗಿದೆ. ಈ ನಿರ್ಧಾರದ ವಿರುದ್ಧ ಖಂಡನಾ ನಿರ್ಣಯ ಅನುಮೋದಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದರು. ಬಿ.ವೈ.ವಿಜಯೇಂದ್ರ ಅವರು…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಇದೇ ಮೊದಲ ಬಾರಿಗೆ ಐತಿಹಾಸಿಕ ದಾಖಲೆ ಎನ್ನುವಂತೆ ಭಾರತದ ರೋಹನ್ ಬೋಪಣ್ಣ ಅವರು ಆಸ್ಟ್ರೇಲಿಯನ್ ಓಪನ್-2024ರ ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಹೊಸ ದಾಖಲೆಯನ್ನು ಬರೆದಿದ್ದಾರೆ. ಭಾರತದ ರೋಹನ್ ಬೋಪಣ್ಣ ಮತ್ತು ಮ್ಯಾಥ್ಯೂ ಎಬ್ಡೆನ್ ಜೋಡಿ ಫೈನಲ್ನಲ್ಲಿ ಅರ್ಜೆಂಟೀನಾದ ಮ್ಯಾಕ್ಸಿಮೊ ಗೊನ್ಜಾಲೆಜ್ ಮತ್ತು ಆಂಡ್ರೆಸ್ ಮೊಲ್ಟೆನಿ ಅವರನ್ನು ಸೋಲಿಸಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಜೋಡಿ 6-4ರಲ್ಲಿ ಸಮಬಲ ಸಾಧಿಸಿತು. 7-6 ಗೆಲುವು. ಬೋಪಣ್ಣ ಇತ್ತೀಚೆಗೆ ಡಬಲ್ಸ್ನಲ್ಲಿ ನಂ.1 ಶ್ರೇಯಾಂಕವನ್ನು ಪಡೆದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. https://kannadanewsnow.com/kannada/lok-sabha-elections-2019-bjp-appoints-in-charges-for-28-constituencies-in-karnataka/ https://kannadanewsnow.com/kannada/land-scam-court-summons-former-bihar-cm-lalu-prasads-wife-rabri-devi-daughters/
ನಾವು ಯಾವುದೇ ಕೆಲಸ ಮಾಡಿದಾಗ ಅದರಿಂದ ಒಂದಷ್ಟು ಒಳ್ಲೆಯ ಫಲ ಅಥವಾ ಕೆಟ್ಟ ಫಲ ಸಿಗುತ್ತದೆ .ಅದನ್ನೇ ಪುಣ್ಯ ಹಾಗೂ ಪಾಪಗಳ ಕರ್ಮ ಎನ್ನುತ್ತಾರೆ . ಮನುಷ್ಯನು ತಾನು ಮಾಡುವ ಮಾಡಬೇಕಾದ ಕೆಲಸಗಳಲ್ಲಿ ಲೋಪ ಮಾಡಿ ಕರ್ಮ ಮಾಡದೇ ಇದ್ದರೆ ಅದು ಉಳಿಕೆಯಾಗುತ್ತದೆ ಆ ಉಳಿಕೆಯೇ ಋಣವಾಗುತ್ತದೆ ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅಂದರೆ ಖರ್ಚು ಮಾಡಿ…
ಬೆಂಗಳೂರು: ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಈ ಸಲುವಾಗಿ ಪುಟ್ಟ ಬಾಲಕನೊಬ್ಬ ತೊದಲು ನುಡಿಯಲ್ಲಿ ಸಂವಿಧಾನ ಪೀಠಿಕೆ ಓದಿದ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆ ವೀಡಿಯೋ ಹಂಚಿಕೊಂಡಿರುವಂತ ಸಿೆಂ ಸಿದ್ಧರಾಮಯ್ಯ ನೀವು ನೋಡಿ ಅಂತ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಪುಟ್ಟ ಬಾಲಕನ ತೊದಲು ನುಡಿಯಲ್ಲಿ ಸಂವಿಧಾನದ ಪೀಠಿಕೆ ಕೇಳುವುದೇ ಒಂದು ಖುಷಿ. ಈ ಹುಡುಗನಂತೆ ಪ್ರತಿಯೊಬ್ಬರ ಮನದಲ್ಲೂ ಸಂವಿಧಾನದ ಪೀಠಿಕೆಯ ಪ್ರತಿ ಪದ ಅಚ್ಚಾಗಬೇಕು ಆಗ ಮಾತ್ರ ಸಮಾನತೆ, ಬಹುತ್ವದ ತಳಹದಿಯ ಮೇಲೆ ಬಲಿಷ್ಠ ಭಾರತ ರೂಪುಗೊಳ್ಳಲು ಸಾಧ್ಯ ಎಂದು ಹೇಳಿದ್ದಾರೆ. ಸಿಎಂ ಸಿದ್ಧರಾಮಯ್ಯ ಹಂಚಿಕೊಂಡಿರುವಂತ ವೀಡಿಯೋದಲ್ಲಿ ಶಾಲೆಯೊಂದರಲ್ಲಿ ಪುಟ್ಟ ಬಾಲಕನೊಬ್ಬ ಸಂವಿಧಾನ ಪೀಠಿಕೆಯನ್ನು ತನ್ನ ತೊದಲು ನುಡಿಯಲ್ಲಿ ಓದೋದು ಕಂಡು ಬಂದಿದೆ. ಆ ವೀಡಿಯೋ ಈ ಕೆಳಗಿನ ಎಕ್ಸ್ ಲಿಂಕ್ ನಲ್ಲಿ ಇದ್ದು, ನೀವು ಒಮ್ಮೆ ನೋಡಿ. https://twitter.com/siddaramaiah/status/1751221903157788766 https://kannadanewsnow.com/kannada/lok-sabha-elections-2019-bjp-appoints-in-charges-for-28-constituencies-in-karnataka/ https://kannadanewsnow.com/kannada/land-scam-court-summons-former-bihar-cm-lalu-prasads-wife-rabri-devi-daughters/