Subscribe to Updates
Get the latest creative news from FooBar about art, design and business.
Author: kannadanewsnow09
ಹೇಗ್: ಗಾಝಾದಲ್ಲಿ ಫೆಲೆಸ್ತೀನೀಯರ ನರಮೇಧವನ್ನು ತಡೆಗಟ್ಟಲು ಇಸ್ರೇಲ್ ವಿರುದ್ಧ ತಾತ್ಕಾಲಿಕ ಕ್ರಮಗಳನ್ನು ಹೊರಡಿಸುವ ಅಗತ್ಯವಿದೆ ಎಂದು ಅಂತರರಾಷ್ಟ್ರೀಯ ನ್ಯಾಯಾಲಯವು ಬಹು ನಿರೀಕ್ಷಿತ ತೀರ್ಪಿನಲ್ಲಿ ತೀರ್ಪು ನೀಡಿದೆ. “ಇಸ್ರಾಯೇಲ್ ರಾಜ್ಯವು … ನರಮೇಧ ಸಮಾವೇಶದ ಅನುಚ್ಛೇದ 2 ರ ವ್ಯಾಪ್ತಿಯಲ್ಲಿ ಎಲ್ಲಾ ಕೃತ್ಯಗಳನ್ನು ತಡೆಗಟ್ಟಲು ತನ್ನ ಅಧಿಕಾರದೊಳಗೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಿ” ಎಂದು ನ್ಯಾಯಾಲಯ ಖಡಕ್ ಸೂಚನೆಯನ್ನು ನೀಡಿದೆ. ಇಸ್ರೇಲ್ ವಿರುದ್ಧ ಹೊರಿಸಲಾದ ನರಮೇಧ ಆರೋಪವನ್ನು ವಜಾಗೊಳಿಸಬೇಕೆಂಬ ಕರೆಗಳನ್ನು ಅಂತರರಾಷ್ಟ್ರೀಯ ನ್ಯಾಯಾಲಯ ತಿರಸ್ಕರಿಸಿದೆ. ಗಾಝಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ದಕ್ಷಿಣ ಆಫ್ರಿಕಾ ಸಲ್ಲಿಸಿದ ಪ್ರಕರಣದಲ್ಲಿ ಹೇಗ್ ನ ನ್ಯಾಯಾಧೀಶರು ತಮ್ಮ ಮಧ್ಯಂತರ ತೀರ್ಪನ್ನು ನೀಡಿದರು. ಗಾಝಾದಲ್ಲಿನ ‘ಮಾನವ ಪ್ರಾಣಿಗಳ’ ಬಗ್ಗೆ ಇಸ್ರೇಲ್ ರಕ್ಷಣಾ ಸಚಿವರು ನೀಡಿದ ಹೇಳಿಕೆಗಳನ್ನು ಗಣನೆಗೆ ತೆಗೆದುಕೊಂಡಿರುವುದಾಗಿ ಐಸಿಜೆ ಹೇಳಿದೆ. “ಈ ಪ್ರದೇಶದಲ್ಲಿ ನಡೆಯುತ್ತಿರುವ ಮಾನವ ದುರಂತದ ವ್ಯಾಪ್ತಿಯ ಬಗ್ಗೆ ನ್ಯಾಯಾಲಯಕ್ಕೆ ಚೆನ್ನಾಗಿ ತಿಳಿದಿದೆ ಮತ್ತು ನಿರಂತರ ಪ್ರಾಣಹಾನಿ ಮತ್ತು ಮಾನವ ಸಂಕಟದ ಬಗ್ಗೆ ತೀವ್ರ ಕಳವಳ ಹೊಂದಿದೆ” ಎಂದು…
ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ‘ಬೆಂಗಳೂರು ನಗದಾಭಿವೃದಿ ಇಲಾಖೆ ಎಂದು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಕೈಗಾರಿಕೆ ಇಲಾಖೆಯಲ್ಲಿ ಬಿಡಿಎಗೆ ಏನು ಕೆಲಸ ಎಂದು ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸರ್ಕಾರಕ್ಕೆ ಟಾಂಗ್ ಕೊಟ್ಟಿರುವ ಅವರು; ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿದ್ದಾರೆ. ‘ಬೆಂಗಳೂರು ನಗದಾಭಿವೃದ್ಧಿ’ ಇಲಾಖೆಯು ನಗದು ಅಭಿವೃದ್ಧಿಗೆ ಸಿಕ್ಕಸಿಕ್ಕ ಕಡೆ ಸುಲಿಗೆಗೆ ಇಳಿದಿದೆ. ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ. ಕೈಗಾರಿಕೆ, ಉದ್ಯಮ ಚಟುವಟಿಕೆಗೆ ಒಪ್ಪಿಗೆ ಕೊಡಲು KIADB ಇದೆ. ಏಕಗವಾಕ್ಷಿ ವ್ಯವಸ್ಥೆ ಅಡಿಯಲ್ಲಿ ಪ್ರಕ್ರಿಯೆ ನಿರಾತಂಕವಾಗಿ ನಡೆಯುತ್ತಿದೆ. ಅದಕ್ಕೂ ಮುನ್ನ ಉನ್ನತಮಟ್ಟದ ಹೂಡಿಕೆ ಅನುಮೋದನೆ ಸಮಿತಿ ಒಪ್ಪಿಗೆಯನ್ನೂ ಕೊಡುತ್ತದೆ. ಇಷ್ಟೆಲ್ಲ ಇದ್ದ ಮೇಲೆ ಇಲ್ಲಿ BDA ಕೆಲಸ ಏನು? ಯಾರ…
ಬೆಂಗಳೂರು: ಈವರೆಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯನ್ನು ಮಾತ್ರವೇ ನೇಮಕ ಮಾಡಲಾಗುತ್ತಿತ್ತು. ಹೊಸ ಸಂಪ್ರದಾಯ ಎನ್ನುವಂತೆ ಆರ್ಥಿಕ ಸಲಹೆಗಾರರನ್ನು ನೇಮಕ ಮಾಡಿ ಕಾಂಗ್ರೆಸ್ ಸರ್ಕಾರ ಮುನ್ನುಡಿ ಬರೆದಿತ್ತು. ಈಗ ಡಿಸಿಎಂ ಡಿಕೆ ಶಿವಕುಮಾರ್ ಗೂ ರಾಜಕೀಯ ಸಲಹೆಗಾರರನ್ನು ನೇಮಕ ಮಾಡಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದಾರೆ. 34 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರೋದಲ್ಲದೇ, ಇದೇ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಗಳಿಗೂ ರಾಜಕೀಯ ಸಲಹೆಗಾರರನ್ನ ನೇಮಕ ಮಾಡಿ ಆದೇಶಿಸಿದ್ದಾರೆ. ಸಿಎಂ ಹೊರಡಿಸಿರುವಂತ ನಡವಳಿಯಲ್ಲಿ ಹಾನಗಲ್ ಶಾಸಕರಾಗಿರುವಂತ ಶ್ರೀನಿವಾಸ ಮಾನೆ ಅವರನ್ನು ಉಪ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಡಿಸಿಎಂಗೂ ರಾಜಕೀಯ ಸಲಹೆಗಾರರನ್ನ ನೇಮಕ ಮಾಡಲಾಗಿದೆ. https://kannadanewsnow.com/kannada/34-mlas-to-be-appointed-as-chairpersons-of-corporation-board-state-govt/ https://kannadanewsnow.com/kannada/youtube-celebreties-deep-fake/
ಬೆಂಗಳೂರು: ರಾಜ್ಯದ 34 ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಿ, ಸರ್ಕಾರದ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಮೂಲಕ 34 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪಿಎನ್ ನಾಗ ಪ್ರಶಾಂತ್ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಮುಖ್ಯಮಂತ್ರಿಯವರ ನಡವಳಿಯಂತೆ ದಿನಾಂಕ 26-01-2024ರನವ್ಯ ಈ ಕೆಳಕಂಡ ವಿಧಾನಸಭಾ ಸದಸ್ಯರುಗಳನ್ನು ಅವರ ಹೆಸರಿನ ಮುಂದೆ ನಮೂದಿಸಿರುವ ನಿಗಮ-ಮಂಡಳಿಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಮುಂದಿನ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಲಾಗಿದೆ ಎಂದಿದ್ದಾರೆ. ಹೀಗಿದೆ 34 ಶಾಸಕರಿಗೆ ನೀಡಲಾದ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನದ ಪಟ್ಟಿ ಹಂಪನಗೌಡ ಬಾದರ್ಲಿ – ಅಧ್ಯಕ್ಷರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಪ್ಪಾಜಿ ಸಿಎಸ್ ನಾಡಗೌಡ – ಅಧ್ಯಕ್ಷರು, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್ ಭರಮಗೌಡ ಅಲಗೌಡ…
ಬೆಂಗಳೂರು: ರಾಜ್ಯದ 35 ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದಂತ ನಿಗಮ ಮಂಡಳಿ ನೇಮಕಾತಿ ಪಟ್ಟಿ ಹೊರ ಬಿದ್ದಂತೆ ಆಗಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದು, ಈ ಕೆಳಕಂಡವರಿಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಲಾಗಿದೆ ಅಂತ ಹೇಳಿದ್ದಾರೆ. ಹೀಗಿದೆ 35 ಶಾಸಕರಿಗೆ ನೀಡಿರುವಂತ ನಿಗಮ ಮಂಡಳಿಯ ನೇಮಕಾತಿ ಪಟ್ಟಿ ಹಂಪನಗೌಡ ಬಾದರ್ಲಿ – ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಪ್ಪಾಜಿ ಸಿಎಸ್ ನಾಡಗೌಡ – ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್ ಭರಮಗೌಡ ಅಲಗೌಡ ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ ಯಮುನಪ್ಪ ವೈ ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಎಸ್ ಆರ್ ಶ್ರೀನಿವಾಸ್ – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸವರಾಜ್ ನೀಲಪ್ಪ ಶಿವಣ್ಣನವರ್ – ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ…
ಬೆಂಗಳೂರು: ರಾಜ್ಯದ 32 ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದಂತ ನಿಗಮ ಮಂಡಳಿ ನೇಮಕಾತಿ ಪಟ್ಟಿ ಹೊರ ಬಿದ್ದಂತೆ ಆಗಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದು, ಈ ಕೆಳಕಂಡವರಿಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಲಾಗಿದೆ ಅಂತ ಹೇಳಿದ್ದಾರೆ. ಹೀಗಿದೆ 32 ಶಾಸಕರಿಗೆ ನೀಡಿರುವಂತ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಲೀಸ್ಟ್ ಹಂಪನಗೌಡ ಬಾದರ್ಲಿ – ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಪ್ಪಾಜಿ ಸಿಎಸ್ ನಾಡಗೌಡ – ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್ ಭರಮಗೌಡ ಅಲಗೌಡ ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ ಯಮುನಪ್ಪ ವೈ ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಎಸ್ ಆರ್ ಶ್ರೀನಿವಾಸ್ – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸವರಾಜ್ ನೀಲಪ್ಪ ಶಿವಣ್ಣನವರ್ – ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ…
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ನಿಗಮ ಮಂಡಳಿ ಸ್ಥಾನದ ಪಟ್ಟಿ ಕೊನೆಗೂ ಹೊರ ಬಿದ್ದಿದೆ. 32 ಶಾಸಕರಿಗೆ ನಿಗಮ ಮಂಡಳಿ ನೇಮಕಾತಿ ಆದೇಶವನ್ನು ನೀಡಿ, ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ 32 ಶಾಸಕರಿಗೆ ವಿವಿಧ ನಿಗಮ ಮಂಡಳಿಯ ಸ್ಥಾನ ಹಂಚಿಕೆ ಮಾಡಿದಂತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ಮೊದಲ ಬಾರಿಗೆ ನೀಡಿದ್ದಾರೆ. ಹೀಗಿದೆ 32 ಶಾಸಕರಿಗೆ ನೀಡಲಾಗಿರುವಂತ ನಿಗಮ ಮಂಡಳಿ ಸ್ಥಾನದ ಪಟ್ಟಿ ಅಪ್ಪಾಜಿ ಸಿಎಸ್ ನಾಡಗೌಡ- ಕೆ ಎಸ್ ಡಿ ಎಲ್ ರಾಜು ಕಾಗೆ – ಹುಬ್ಬಳ್ಳಿ ಸಾರಿಗೆ ( ವಾಯುವ್ಯ ಸಾರಿಗೆ ನಿಗಮ) ಹೆಚ್ ವೈ ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಹಂಪನಗೌಡ ಬಾದರ್ಲಿ – ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಎಸ್ ಆರ್ ಶ್ರೀನಿವಾಸ್ – ಕೆ ಎಸ್ ಆರ್ ಟಿಸಿ ಬಸವರಾಜ ನೀಲಪ್ಪ ಶಿವಣ್ಣನವರ್ – ಅರಣ್ಯ ಅಭಿವೃದ್ಧಿ ನಿಗಮ ಬಿಜಿ ಗೋವಿಂದಪ್ಪ…
ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು 75ನೇ ಗಣರಾಜ್ಯೋತ್ಸವದಂದ ತಮ್ಮ ಶಾಸಕರ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಂದ ಧ್ವಜಾರೋಹಣ ನೆರವೇರಿಸಲು ಅವಕಾಶ ಕಲ್ಪಿಸಿಕೊಡುವ ಮೂಲಕ ಪೌರ ಕಾರ್ಮಿಕರನ್ನ ಗೌರವಿಸಿದ್ದಾರೆ. ಪೌರ ಕಾರ್ಮಿಕರು ಸದಾ ನಗರದ ಸ್ವಚ್ಛತೆಗಾಗಿ ಶ್ರಮಿಸುವ ಶ್ರಮಿಕ ವರ್ಗದವರು. ಅಂಥವರನ್ನು ಗುರುತಿಸಿ ತಮ್ಮ ಕಚೇರಿಯಲ್ಲಿ ಗಣರಾಜ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಲು ಸಚಿವರು ಸೂಚನೆ ನೀಡಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ಚೀಕರಿಸಿದ ಸಚಿವರು, ತಮ್ಮ ಸ್ವ ಕ್ಷೇತ್ರದಲ್ಲಿ ತಮ್ಮ ಅನುಪಸ್ಥಿತಿಯಲ್ಲಿ ಪೌರ ಕಾರ್ಮಿಕರಿಂದ ಧ್ವಜರೋಹಣ ಕಾರ್ಯ ನೆರವೇರಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದರು. ಸಮಾರಂಭದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರ ಪುತ್ರಿ ಅನನ್ಯ ರಾವ್ ಅವರು ಪಾಲ್ಗೊಂಡು ಧ್ವಜವಂದನೆ ಸಲ್ಲಿಸಿದರು. ಧ್ವಜಾರೋಹಣದ ಬಳಿಕ ಪೌರ ಕಾರ್ಮಿಕರನ್ನ ಸನ್ಮಾನಿಸಿ, ಗೌರವಿಸಲಾಯಿತು. https://kannadanewsnow.com/kannada/constitution-is-the-holy-book-of-indians-it-should-not-be-allowed-to-be-tampered-with-deputy-cm-dk-shivakumar-shivakumar/ https://kannadanewsnow.com/kannada/big-news-30-people-will-come-from-bjp-jds-says-minister-cheluvarayaswamy/
ಬೆಂಗಳೂರು : “ಹಿಂದೂಗಳಿಗೆ ಭಗವದ್ಗೀತೆ, ಮುಸಲ್ಮಾನರಿಗೆ ಖುರಾನ್, ಕ್ರೈಸ್ತರಿಗೆ ಬೈಬಲ್ ಹೇಗೆ ಪವಿತ್ರ ಗ್ರಂಥವೋ ಅದೇರೀತಿ ಪ್ರತಿಯೊಬ್ಬ ಭಾರತೀಯನಿಗೆ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಪವಿತ್ರ ಗ್ರಂಥ. ಇದನ್ನು ತಿರುಚಲು ಅವಕಾಶ ನೀಡಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಆನೇಕಲ್ ನಲ್ಲಿ ನಡೆದ ‘ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ಅವರು, “ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಪ್ರತಿಯೊಬ್ಬ ಭಾರತೀಯನಿಗೆ ಪವಿತ್ರ ಗ್ರಂಥ. ಪ್ರಜಾಪ್ರಭುತ್ವ ಎಂದರೆ ಪಂಚಾಯಿತಿಯಿಂದ ಪಾರ್ಲಿಮೆಂಟ್ ವರೆಗೂ ಜನ ಪ್ರತಿನಿಧಿಗಳನ್ನು ಜನರೇ ಆಯ್ಕೆ ಮಾಡುವ ವ್ಯವಸ್ಥೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಸಂವಿಧಾನ ನೀಡಿ, ಪ್ರಜಾಪ್ರಭುತ್ವ ವ್ಯವಸ್ಥೆಗೆ ರಕ್ಷಣೆ ನೀಡಲಾಗಿದೆ. ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರು ಅಧಿಕಾರಕ್ಕೆ ಬಂದಂತೆ. ಕಾಂಗ್ರೆಸ್ ಯಾವುದೇ ಒಂದು ಜಾತಿ, ಧರ್ಮ ಹಾಗೂ ವರ್ಗಕ್ಕೆ ಸೇರಿಲ್ಲ. ಎಲ್ಲರನ್ನೂ ಸಮಾನವಾಗಿ ಕಂಡು ಸಹಾಯ ಮಾಡುವುದು ಕಾಂಗ್ರೆಸ್ ಪಕ್ಷದ ತತ್ವ.…
ವಿಜಯಪುರ: ಜಿಲ್ಲೆಯಲ್ಲಿ ಇಂದು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣದ ವೇಳೆಯಲ್ಲೇ ಬೆಚ್ಚಿಬೀಳಿಸೋ ಘಟನೆ ನಡೆದಿದೆ. ವ್ಯಕ್ತಿಯೋರ್ವ ದಿಢೀರ್ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರು ಗ್ರಾಮದಲ್ಲಿ ಇಂದು 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಮುಖಂಡ ಮಲ್ಲು ಗಿನ್ನಿ ಎಂಬಾತ ಗಾಳಿಯಲ್ಲಿ ಗುಂಡು ಹೊಡೆಯೋದಕ್ಕೆ ಹೋಗಿ, ನೆರೆದಿದ್ದಂತ ಜನರ ಮೇಲೆ ಗುಂಡು ಹಾರಿಸಿದ್ದಾನೆ. ಮಲ್ಲು ಗಿನ್ನಿ ಎಂಬಾತ ಅಚಾನಕ್ಕಾಗಿ ಹಾರಿಸಿದಂತ ಈ ಗುಂಡು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸೋಮವ್ವ ಎಂಬುವರ ತೊಡೆ ಭಾಗಕ್ಕೆ ಹೊಕ್ಕಿದೆ. ತೀವ್ರ ರಕ್ತ ಸ್ತ್ರಾವದೊಂದಿಗೆ ಕುಸಿದು ಬಿದ್ದಂತ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿಯಿಂದಾಗಿ ಗಾಯಗೊಂಡಿರುವಂತ ಸೋಮವ್ವ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ಈ ಘಟನೆಯ ಬಳಿಕ ಕನ್ನಡ ಪರ ಸಂಘಟನೆಯ ಮುಖಂಡ ಮಲ್ಲು ಗಿನ್ನಿ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು,…