Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜೆಡಿಎಸ್‍ನವರಿಗೂ ಸಮಾಧಾನ ಆಗುವ ರೀತಿಯಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಸಮರ್ಪಕ ತೀರ್ಮಾನ ಮಾಡುವ ವಿಶ್ವಾಸ ಇದೆ; ಚರ್ಚೆಯಿಂದ ವಿಷಯ ಬಗೆಹರಿಯಲಿದೆ ಎಂದು ತಿಳಿಸಿದರು. ನಮ್ಮ ರಾಷ್ಟ್ರೀಯ ನಾಯಕರ ಜೊತೆ ನಿನ್ನೆ ದೂರವಾಣಿ ಮೂಲಕ ಚರ್ಚೆ ಮಾಡಿದ್ದೇನೆ. ಬಳಿಕ ಮಾಜಿ ಪ್ರಧಾನಿ ದೇವೇಗೌಡಜೀ ಅವರ ಜೊತೆಗೂ ದೂರವಾಣಿ ಮೂಲಕ ಚರ್ಚಿಸಿದ್ದೇನೆ. ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಬೆಳಿಗ್ಗೆ ಮಾಹಿತಿ ನೀಡಿದ್ದೇನೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ವಿಷಯಗಳ ಕುರಿತು ನಮ್ಮ ಪಕ್ಷದ ವರಿಷ್ಠರು ಮತ್ತು ಜೆಡಿಎಸ್ ವರಿಷ್ಠರು ಚರ್ಚೆ ಮಾಡಿದ್ದಾರೆ; ಅಲ್ಲದೆ ಚರ್ಚೆ ಮಾಡುತ್ತಿದ್ದಾರೆ. ಎಲ್ಲವೂ ಕೂಡ ಸುಖಾಂತ್ಯ ಕಾಣಲಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.…
ಶಿವಮೊಗ್ಗ : ಜಿಲ್ಲೆಯಲ್ಲಿ ಮಾ.25 ರಿಂದ ಏಪ್ರಿಲ್ 06 ರವರೆಗೆ ಎಸ್‍ಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಒಟ್ಟು 78 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ನಿಯೋಜನೆಗೊಂಡಿರುವ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಸಿಟ್ಟಿಂಗ್ ಸ್ಕ್ಯಾಡ್, ಮಾರ್ಗಾಧಿಕಾರಿಗಳು ಸೇರಿದಂತೆ ಪ್ರತಿ ಅಧಿಕಾರಿ ತಮ್ಮ ತಮ್ಮ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕೆಂದು ಅವರು ಸೂಚನೆ ನೀಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳಾದ ಆಸನ, ಕುಡಿಯುವ ನೀರು ಸೇರಿದಂತೆ ಇತರೆ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್‍ನ್ನು ಪೊಲೀಸ್ ಇಲಾಖೆಯಿಂದ ಒದಗಿಸಲಾಗುವುದು. ವಾಹನ ವ್ಯವಸ್ಥೆಯನ್ನು ತಮ್ಮ ವತಿಯಿಂದ ಮಾಡಲಾಗುವುದು. ಸುಗಮ ಪರೀಕ್ಷೆಗೆ ಅಗತ್ಯವಾದ ಎಲ್ಲ…
ಶಿವಮೊಗ್ಗ : ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ. 21 ರಂದು ಬೆಳಗ್ಗೆ 10.00 ರಿಂದ ಸಂಜೆ 06-00ರವರೆಗೆ ಆಯನೂರು, ಕೋಹಳ್ಳಿ, ಮಂಟಘಟ್ಟ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಚನ್ನಳ್ಳಿ ವೀರಣ್ಣನಬೆನವಳ್ಳಿ, ಮೈಸವಳ್ಳಿ, ಕೊನಗವಳ್ಳಿ, ಸೇವಲಾಲ್‍ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಲೋಕಾಯುಕ್ತ: ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮಾರ್ಚ್-2024ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು. ಫೆ. 26 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ, ಫೆ. 27 ರಂದು ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಹೊಸನಗರ ತಾಲೂಕು ಕಚೇರಿ ಸಭಾಂಗಣ,…
ಕಾಬೂಲ್: ಅಫ್ಘಾನಿಸ್ತಾನ ಗಡಿಯಲ್ಲಿ ಪಾಕಿಸ್ತಾನ ಸೇನೆಯ ವೈಮಾನಿಕ ದಾಳಿಗೆ ಪ್ರತಿಕ್ರಿಯೆಯಾಗಿ, ತಾಲಿಬಾನ್ “ಭಾರಿ ಶಸ್ತ್ರಾಸ್ತ್ರಗಳೊಂದಿಗೆ ಪಾಕಿಸ್ತಾನದ ಮಿಲಿಟರಿ ಕೇಂದ್ರಗಳ” ಮೇಲೆ ಇದೇ ರೀತಿಯ ದಾಳಿಗಳನ್ನು ನಡೆಸಿದೆ ಎಂದು ಹೇಳಿಕೊಂಡಿದೆ. ಪಕ್ತಿಕಾದ ಬರ್ಮಲ್ ಜಿಲ್ಲೆ ಮತ್ತು ಖೋಸ್ಟ್ನ ಸ್ಪೆರಾ ಜಿಲ್ಲೆಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ ಎಂಟು ಜನರನ್ನು ಕೊಂದ ಪಾಕಿಸ್ತಾನಿ ಪಡೆಗಳ ವಿರುದ್ಧದ “ಪ್ರತೀಕಾರದ” ಕ್ರಮದಲ್ಲಿ ಯಾರಾದರೂ ಕೊಲ್ಲಲ್ಪಟ್ಟಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. “ದಾಳಿಗೆ ಪ್ರತಿಕ್ರಿಯಿಸಿದ್ದೇವೆ ಮತ್ತು ಭಾರಿ ಶಸ್ತ್ರಾಸ್ತ್ರಗಳೊಂದಿಗೆ ಪಾಕಿಸ್ತಾನದ ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡಿದ್ದೇವೆ” ಎಂದು ತಾಲಿಬಾನ್ ನೇತೃತ್ವದ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಅವರನ್ನು ಉಲ್ಲೇಖಿಸಿ ಟೋಲೊ ನ್ಯೂಸ್ ಸೋಮವಾರ ವರದಿ ಮಾಡಿದೆ. ಅಫ್ಘಾನಿಸ್ತಾನದ ನೆಲದ ಮೇಲಿನ ದಾಳಿಯನ್ನು ಖಂಡಿಸಿದ ಉಗ್ರಗಾಮಿ ಸಂಘಟನೆ, ಕೆಟ್ಟ ಪರಿಣಾಮಗಳಿಗೆ ಸಿದ್ಧವಾಗುವಂತೆ ಇಸ್ಲಾಮಾಬಾದ್ ಗೆ ಎಚ್ಚರಿಕೆ ನೀಡಿದೆ. “ಅಫ್ಘಾನಿಸ್ತಾನದ ಸಾರ್ವಭೌಮತ್ವದ ಯಾವುದೇ ಉಲ್ಲಂಘನೆಯು ಕೆಟ್ಟ ಪರಿಣಾಮಗಳನ್ನು ಬೀರುತ್ತದೆ” ಎಂದು ಅವರು ಹೇಳಿದರು. ಇಂತಹ ದಾಳಿಗಳು ಪಾಕಿಸ್ತಾನಕ್ಕೆ ನಿಭಾಯಿಸಲು ಸಾಧ್ಯವಾಗದ ಕೆಟ್ಟ ಪರಿಣಾಮಗಳನ್ನು ಬೀರುತ್ತವೆ ಎಂದು ಮುಜಾಹಿದ್…
ಮಂಡ್ಯ : ಜಿಲ್ಲೆಯ ಗಡಿಭಾಗದ ಮದ್ದೂರು ತಾಲೂಕಿನ ಕೊಂಗಬೋರನದೊಡ್ಡಿ ಬಳಿಯಲ್ಲಿ ಕಾರಿನಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ ಅಂದಾಜು 1 ಕೋಟಿ ಹಣವನ್ನು ಚುನಾವಣಾ ಸಿಬ್ಬಂದಿ ಮತ್ತು ಮದ್ದೂರು ಪೊಲೀಸರು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕಡೆಗೆ ಸಾಗುತ್ತಿದ್ದಂತ ಕ್ರೇಟಾ ಕಾರೊಂದನ್ನು ತಡೆದಂತ ಚುನಾವಣಾ ಚೆಕ್ ಪೋಸ್ಟ್ ಅಧಿಕಾರಿಗಳು, ಕಾರನ್ನು ತಪಾಸಣೆ ನಡೆಸಿದಂತ ವೇಳೆಯಲ್ಲಿ ಅಂದಾಜು ಒಂದು ಕೋಟಿ ರೂಪಾಯಿ ಪತ್ತೆಯಾಗಿದೆ. ಗಿರೀಶ್ ಎಂಬುವವರು ಬೆಂಗಳೂರಿನಿಂದ ಹ್ಯೂಂಡಾಯ್ ಕ್ರೇಟಾ ಕೆಎ – 54 – ಎಂ – 4030 ಕಾರಿನಲ್ಲಿ ಕೆ.ಆರ್.ಪೇಟೆ ಕಡೆಗೆ ಪ್ರಯಾಣ ಮಾಡುತ್ತಿದ್ದಾಗ ಮದ್ದೂರು ತಾಲೂಕಿನ ಗಡಿಭಾಗ ಕೊಂಗಬೋರನದೊಡ್ಡಿ ಗ್ರಾಮದ ಬಳಿ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ, ತಹಶೀಲ್ದಾರ್ ಕೆ.ಎಸ್.ಸೋಮಶೇಖರ್, ಮದ್ದೂರು ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೆ.ಆರ್.ಪ್ರಸಾದ್ ಹಾಗೂ ಚುನಾವಣಾಧಿಕಾರಿ ಲೋಕನಾಥ್ ಹಾಗೂ ಪೋಲೀಸ್ ಸಿಬ್ಬಂದಿ ಕಾರನ್ನು ಪರಿಶೀಲನೆ ನಡೆಸಿದಾಗ ಚೀಲದಲ್ಲಿ ಹಣವನ್ನು ತುಂಬಿರುವುದನ್ನು ನೋಡಿ ಶಾಕ್ ಆಗಿದ್ದಾರೆ. ಈ ಬಗ್ಗೆ…
ಬೆಂಗಳೂರು: ನಗರದ ನಗರತಪೇಟೆಯಲ್ಲಿ ಹನುಮಾನ್ ಜಾಲೀಸ್ ಹಾಕಿದ್ದಕ್ಕೇ ಹಲ್ಲೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಘಟನೆ ನಡೆದಿತ್ತು. ಆದ್ರೇ ಈ ಘಟನೆಯ ಕುರಿತಂತೆ ಸಚಿವ ದಿನೇಶ್ ಗುಂಡೂರಾವ್ ದಾಖಲೆ ಸಹಿತ ಕೆಲ ಸ್ಪಷ್ಟನೆ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ. ಲಭ್ಯವಾದ ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ಕೊಟ್ಟಿರುವ ಕೈ ಬರಹದ ದೂರಿನಲ್ಲಿ ಎಲ್ಲಿಯೂ ನಮಾಝ್ ಅಥವಾ ಆಝಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಎಲ್ಲೂ ಉಲ್ಲೇಖಿಸಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಅಲ್ಲದೆ, ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಆರೋಪಿಸಿದಂತೆ ಪ್ರಕರಣದ ಆರೋಪಿಗಳಲ್ಲಿ ಮುಸ್ಲಿಮರು ಮಾತ್ರವಲ್ಲ, ಆರು ಆರೋಪಿಗಳಲ್ಲಿ ಮೂವರು ಮುಸ್ಲಿಮರು ಮತ್ತು ಇಬ್ಬರು ಹಿಂದೂ ಹೆಸರಿನ ಆರೋಪಿಗಳಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಸ್ಪಷ್ಟೀಕರಣವನ್ನು ತನಿಖೆಯ ಬಳಿಕ ಪೊಲೀಸರು ತಿಳಿಸಬೇಕಾಗಿದೆ ಎಂದು ಹೇಳಿದ್ದಾರೆ.…
ಬೆಂಗಳೂರು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಂದು ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಮೂಲಕ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕೆಎಸ್ಆರ್ ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕು ದಿನಾಂಕ 14-03-2024ರಂದು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 25.03.2024 ರಿಂದ ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ. ಅದರನ್ವಯ ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04.2024 ರವರೆಗೆ, ಪರೀಕ್ಷೆಗೆ ಹಾಜರಾಗುವ…
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಘಟನೆಯಲ್ಲಿ ಗಾಯಗೊಂಡಿದ್ದಂತ ಸ್ವರ್ಣಾಂಭ ಎಂಬುವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹೀಗಾಗಿ ಇಂದು ಅವರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮಾರ್ಚ್.1ರಂದು ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಘಟನೆ ನಡೆದಿತ್ತು. 10 ಮಂದಿ ಗಾಯಗೊಂಡಿದ್ದರು. ಕಳೆದ 17 ದಿನಗಳಿಂದ ಬ್ರೂಕ್ ಫೀಲ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಸ್ವರ್ಣಾಂಭ ಇಂದು ಗುಣಮುಖರಾಗಿದ್ದಾರೆ. ಈ ಹಿನ್ನಲೆಯಲ್ಲಿ ಬ್ರೂಕ್ ಫೀಲ್ಡ್ ಆಸ್ಪತ್ರೆಯಿಂದ ಗಾಯಾಳು ಸ್ವರ್ಣಾಂಭ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಸ್ವರ್ಣಾಭ ಅವರ ಕಣ್ಣು, ಕಿವಿ, ಹೊಟ್ಟೆ ಸೇರಿದಂತೆ ಶೇ.40ರಷ್ಟು ಸುಟ್ಟ ಗಾಯಗಳಾಗಿದ್ದವು. ಹೀಗಾಗಿ ಅವರು ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಪ್ಲಾಸ್ಟಿಕ್ ಸರ್ಜರಿ ಬಳಿಕ ಇಂದು ಸಂಜೆ 6 ಗಂಟೆಗೆ ಸ್ವರ್ಣಾಂಭ ಡಿಸ್ಚಾರ್ಜ್ ಆಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/hc-issues-urgent-notice-to-dk-shivakumar-in-defamation-case-against-yatnal/ https://kannadanewsnow.com/kannada/good-news-for-state-government-employees-special-casual-leave-to-be-granted-tomorrow/
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಡಿ.ಕೆ ಶಿವಕುಮಾರ್ ಗೆ ತುರ್ತು ನೋಟಿಸ್ ಜಾರಿಗೊಳಿಸಿದೆ. ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಂತ ಮಾನನಷ್ಟ ಮೊಕದ್ದಮ್ಮೆಯನ್ನು ಕನಕಪುರ ನ್ಯಾಯಾಲಯದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಿಕೊಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೋರ್ಟ್ ಮೊರೆ ಹೋಗಿದ್ದರು. ಅದರಲ್ಲಿ ಡಿಕೆ ಶಿವಕುಮಾರ್ ಬಲಾಢ್ಯರಾಗಿದ್ದಾರೆ. ನಾನು ಕನಕಪುರಕ್ಕೆ ಹೋಗಲು ತೊಂದರೆ ಮಾಡ್ತಾರೆ. ಹೀಗಾಗಿ ಬೆಂಗಳೂರಿನ ಕೋರ್ಟ್ ಗೆ ವರ್ಗಾವಣೆ ಮಾಡುವಂತೆ ಅರ್ಜಿಯಲ್ಲಿ ಹೈಕೋರ್ಟ್ ನ್ಯಾಯಾಪೀಠವನ್ನು ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಮಾನನಷ್ಟ ಪ್ರಕರಣ ಕುರಿತಂತೆ ಡಿಕೆ ಶಿವಕುಮಾರ್ ಗೆ ತುರ್ತು ನೋಟಿಸ್ ಜಾರಿಗೊಳಿಸಿದೆ. ಅಂದಹಾಗೇ ಬಿಜೆಳಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯಿಂದ ನನ್ನ ಘನತೆ ಮತ್ತು ವರ್ಚಸ್ಸಿಗೆ…
ಬೆಂಗಳೂರು: ಕೋಲಾರ, ಮಂಡ್ಯ ಹಾಗೂ ಹಾಸನ ಕ್ಷೇತ್ರಗಳಿಗೆ ಮಾರ್ಚ್.23ರ ನಂತ್ರ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ. ಯಾರಿಗೂ ಆಂತಕ ಬೇಡ, ಎಲ್ಲಾ ಒಳ್ಳೇಯದೇ ಆಗುತ್ತದೆ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜೆಡಿಎಸ್ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಮಿತ್ರಪಕ್ಷ ಬಿಜೆಪಿ ಬಗ್ಗೆ ಬೇಸರ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು; ಕೋಲಾರ ಲೋಕಸಭೆ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ವಿಳಂಬ ಮಾಡುತ್ತಿರುವ ಬಗ್ಗೆ ಅತೃಪ್ತಿಯನ್ನು ಹೊರ ಹಾಕಿದರು. ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಶಕ್ತಿ ಇದೆ ಅಂತ ಎಲ್ಲರಿಗೂ ಗೊತ್ತು. ರಾಜಕೀಯ ವಿಶ್ಲೇಷಣೆ ಮಾಡುವ ಎಲ್ಲರಿಗೂ ಈ ವಿಷಯ ಗೊತ್ತಿದೆ. ಬಿಜೆಪಿ ಅವರು ಇದನ್ನೆಲ್ಲ ಗಮನಿಸುತ್ತಾರೆ. ಅದನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಿ ಅಂತ ಹೇಳೋಕೆ ನಾವು ಸಭೆ ಮಾಡಿದ್ದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು. ನಮ್ಮ ಪಕ್ಷದ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಗೊಂದಲಕ್ಕೆ ಎಡೆ ಮಾಡಿಕೊಡದೆ ಒಟ್ಟಾಗಿ ಕೆಲಸ ಮಾಡಿ. ಅದು…