Subscribe to Updates
Get the latest creative news from FooBar about art, design and business.
Author: kannadanewsnow09
ತುಮಕೂರು: ಜಿಲ್ಲೆಯ ಬಟವಾಡೆಯ ಬಳಿಯಲ್ಲಿ ಕಾರಿನಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ 8 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಿಂದ ತುಮಕೂರಿನ ಕಡೆಗೆ ಸಾಗುತ್ತಿದ್ದಂತ ಕಾರೊಂದನ್ನು ತಡೆದಂತ ಚುನಾವಣಾ ಚೆಕ್ ಪೋಸ್ಟ್ ಅಧಿಕಾರಿಗಳು, ಕಾರನ್ನು ತಪಾಸಣೆ ನಡೆಸಿದಂತ ವೇಳೆಯಲ್ಲಿ 8 ಲಕ್ಷ ಹಣ ಪತ್ತೆಯಾಗಿದೆ. ಕಾರಿನಲ್ಲಿದ್ದಂತ ತಸೀನಾ, ಬಾನು, ಅನ್ಸರ್ ಎಂಬುವರ ವ್ಯಾನಿಟಿ ಬ್ಯಾಗ್ ಅನ್ನು ಪರಿಶೀಲಿಸಿದಂತ ಪೊಲೀಸರು ಶಾಕ್ ಆಗಿದ್ದಾರೆ. ಅವರ ವ್ಯಾನಿಟಿ ಬ್ಯಾಗ್ ನಲ್ಲಿ ಬರೋಬ್ಬರಿ 8 ಲಕ್ಷ ಹಣ ದೊರೆತಿದೆ. ಈ ಬಗ್ಗೆ ಅವರನ್ನು ಚುನಾವಣಾಧಿಕಾರಿಗಳು ಪ್ರಶ್ನಿಸಿದ್ದಾರೆ. ದೊರೆತ ಹಣಕ್ಕೆ ಸೂಕ್ತ ಉತ್ತರ, ದಾಖಲೆ ನೀಡದ ಪರಿಣಾಮ ಹಣವನ್ನು ಸೀಜ್ ಮಾಡಿದ್ದಾರೆ. ಈ ಸಂಬಂಧ ತುಮಕೂರು ಹೊಸ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-tamilisai-soundararajan-resigns-as-telangana-governor-likely-to-contest-lok-sabha-polls/ https://kannadanewsnow.com/kannada/good-news-for-state-government-employees-special-casual-leave-to-be-granted-tomorrow/
ಬೆಂಗಳೂರು: ದಿನಾಂಕ 19.03.2024, 25.03.2024, 29.03.2024 ಹಾಗೂ 02.04.2024 ಗಳಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ PL-2024 ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬಂದು ಹೋಗುವ ಸಾರ್ವಜನಿಕ ಪ್ರಯಾಣಿಕರಿಗೆ ಹೆಚ್ಚುವರಿ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕುರಿತಂತೆ ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ದಿನಾಂಕ 19.03.2024, 25.03.2024, 29.03.2024 ಹಾಗೂ 02.04.2024 ಗಳಂದು IPL-2024 ಕ್ರಿಕೆಟ್ ಪಂದ್ಯಾವಳಿಗಳು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸದರಿ ಕ್ರಿಕೆಟ್ ಪಂದ್ಯಾವಳಿಗೆ ಬಂದು-ಹೋಗುವ ವೀಕ್ಷಕರಿಗೆ ಬೇಡಿಕೆಗನುಗುಣವಾಗಿ ಬೆಂ.ಮ.ಸಾ.ಸಂಸ್ಥೆಯಿಂದ ವ್ಯವಸ್ಥಿತ ಸಾರಿಗೆಗಳನ್ನು ಕಾರ್ಯಾಚರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ. ಬೆಂಗಳೂರು ನಗರದ ವಿವಿಧ ಭಾಗಗಳಿಂದ ಎಂ ಚಿನ್ನಸ್ವಾಮಿ ಕ್ರೀಡಾಂಗಣ ನಡುವೆ ಕಾರ್ಯಾಚರಿಸಲಾಗುವ ಸಾರಿಗೆಗಳ ಮಾರ್ಗದ ವಿವರ ಕೆಳಕಂಡಂತಿದೆ : ಕ್ರ ಸಂ. ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಕ್ರ ಸಂ.…
ಶಿವಮೊಗ್ಗ : ಭಾರತ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಡೆಸಲು ಭಾರತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆಯು 2024ರ ಮಾಚ್-16 ರಿಂದ ಜೂನ್ 06ರವರೆಗೆ ಜಾರಿಯಲ್ಲಿರುವುದರಿಂದ ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ. ಠೇವಣಿಯಲ್ಲಿ ಇಡಲಾಗುವ ಶಸ್ತ್ರ/ಆಯುಧಗಳನ್ನು ಸಂಬಂಧಿಸಿದ ಪೊಲೀಸ್ ಠಾಣೆಯ ಅಧಿಕಾರಿಗಳು ಸುರಕ್ಷಿತವಾಗಿ ಇಟ್ಟುಕೊಳ್ಳುವುದಲ್ಲದೇ ಠೇವಣಿ ಮಾಡಿದ ಶಸ್ತ್ರ/ಆಯುಧ ಪರವಾನಿಗೆದಾರರಿಗೆ ಸೂಕ್ತ ರಸೀದಿಯನ್ನು ನೀಡುವಂತೆ ಸೂಚಿಸಿರುವ ಅವರು ಚುನಾವಣೆ ಫಲಿತಾಂಶ ಘೋಷಿಸಿದ ನಂತರ ಅಂದರೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಡಿಪಾಜಿಟ್ ಮಾಡಿದ ಪರವಾನಿಗೆಯನ್ನು ಹಿಂದಿರುಗಿಸಲು ಸೂಚಿಸಿದ್ದಾರೆ. ಚುನಾವಣೆಯು ಮುಕ್ತ ಹಾಗೂ ನ್ಯಾಯಯುತವಾಗಿ ನಡೆಯಬೇಕಾಗಿರುವುದರಿಂದ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ. ಧಾರ್ಮಿಕ ಸಂಸ್ಥೆಗಳು, ಸರ್ಕಾರಿ/ಅರೆಸರ್ಕಾರಿ ಮತ್ತು ಸರ್ಕಾರೇತರ ಖಾಸಗಿ ಸಂಸ್ಥೆಗಳಲ್ಲಿ ಭದ್ರತೆಗಾಗಿ ಆಯುಧಗಳನ್ನು ಹೊಂದಿರುವವರು…
ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 19 ರಂದು ಬೆಳಗ್ಗೆ 10- ರಿಂದ ಸಂಜೆ 06-00ರವರೆಗೆ ಜಿಲ್ಲೆಯ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ನಾಳೆ ಆಲ್ಕೊಳ ವೃತ್ತ, ಆಲ್ಕೋಳ ಅರಣ್ಯ ಕಚೇರಿ, ಆಹಾರ ನಿಗಮ ಇಲಾಖೆ, ಇಂದಿರಾಗಾಂಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆ.ಎಸ್.ಆರ್.ಟಿ.ಸಿ. ಲೇಔಟ್, ಸೂಡಾ ಕಚೇರಿ, ಕಾಶೀಪುರ, ದಾಮೋದರ ಕಾಲೋನಿ, ಕೆ.ಹೆಚ್.ಬಿ. ಎ ಯಿಂದ ಜಿ ಬ್ಲಾಕ್, ಕರಿಯಣ್ಣ ಬಲ್ಡಿಂಗ್, ರೇಣುಕಾಂಬ ಬಡಾವಣೆ, ತಿಮ್ಮಕ್ಕ ಲೇಔಟ್, ಲಕ್ಷ್ಮೀಪುರ ಬಡಾವಣೆ, ಕೆಂಚಪ್ಪ ಬಡಾವಣೆ, ಕುವೆಂಪು ಬಡಾವಣೆ, ಸಿದ್ಧರಾಮ ಬಡಾವಣೆ, ತಮಿಳ್ ಕ್ಯಾಂಪ್, ಪೊಲೀಸ್ ಚೌಕಿ, ವಿನೋಬನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ತಿಳಿಸಿದೆ. https://kannadanewsnow.com/kannada/pm-narendra-modi-arrives-at-shivamogga-airport/ https://kannadanewsnow.com/kannada/breaking-tamilisai-soundararajan-resigns-as-telangana-governor-likely-to-contest-lok-sabha-polls/
ಶಿವಮೊಗ್ಗ: ಇಂದು ಲೋಕಸಭಾ ಚುನಾವಣೆ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ನಗರದಲ್ಲಿ ರೋಡ್ ಶೋ ನಡೆಸಿ, ಸಾರ್ವಜನಿಕ ಸಭೆಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್ ನ ಅಲ್ಲಮಪ್ರಭು ಮೈದಾನದಲ್ಲಿ ಇಂದು ಬಿಜೆಪಿಯಿಂದ ಲೋಕಸಭಾ ಚುನಾವಣೆ ಸಲುವಾಗಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗೋದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ವಿಶೇಷ ವಿಮಾನದಲ್ಲಿ ಶಿವಮೊಗ್ಗ ಏರ್ ಪೋರ್ಟ್ ಗೆ ಬಂದು ಇಳಿದಿದ್ದಾರೆ. ಶಿವಮೊಗ್ಗ ಏರ್ ಪೋರ್ಟ್ ಮೂಲಕ ರಸ್ತೆ ಮಾರ್ಗವಾಗಿ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿರುವಂತ ಅಲ್ಲಮಪ್ರಭು ಮೈದಾನಕ್ಕೆ ತೆರಳಲಿದ್ದಾರೆ. ಅಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. https://kannadanewsnow.com/kannada/breaking-sensex-down-152-points-nifty-down-22000-points-in-early-trade/ https://kannadanewsnow.com/kannada/breaking-tamilisai-soundararajan-resigns-as-telangana-governor-likely-to-contest-lok-sabha-polls/
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಾಳೆಯ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸೋದಕ್ಕೆ ಒಂದು ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಸಹಯೋಗದಲ್ಲಿ ದಿನಾಂಕ: 19.03.2024 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಮಹಿಳಾ ಸರ್ಕಾರಿ ನೌಕರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದ್ದಾರೆ. ಈ ಸೌಲಭ್ಯವನ್ನು ಪಡೆಯಲು ರಜೆಯನ್ನು ಮಂಜೂರು ಮಾಡುವ ಸಕ್ಷಮ ಅಧಿಕಾರಿಯಿಂದ ಮುಂಚಿತವಾಗಿ ರಜೆಯನ್ನು ಪಡೆಯತಕ್ಕದ್ದು ಹಾಗೂ ಕಾರ್ಯಕ್ರಮದಲ್ಲಿ ಹಾಜರಾಗಿರುವ ಕುರಿತು ನೌಕರರ ಸಂಘದಿಂದ ಪಡೆದ ಅಧಿಕೃತ ಹಾಜರಾತಿ ಪುಮಾಣ…
ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ‘ಶಕ್ತಿ’ ಹೇಳಿಕೆಯ ನಂತರ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. ‘ಶಕ್ತಿ’ಯ ವ್ಯಕ್ತಿತ್ವದ ರೂಪವಾಗಿರುವ ತಾಯಂದಿರು ಮತ್ತು ಸಹೋದರಿಯರಿಗಾಗಿ ತಮ್ಮ ಜೀವನವನ್ನು ತ್ಯಾಗ ಮಾಡಲು ಸಿದ್ಧ ಎಂದು ಹೇಳಿದರು. ತೆಲಂಗಾಣದ ಜಗ್ತಿಯಾಲ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಅವರು ಭಾರತದಲ್ಲಿ ‘ಶಕ್ತಿ ವಿನಾಶ್’ (ಶಕ್ತಿ ವಿನಾಶ) ಬಗ್ಗೆ ಹೇಗೆ ಮಾತನಾಡುತ್ತಾರೆ?” ಎಂದು ಪ್ರಶ್ನಿಸಿದರು. ಶಕ್ತಿಗೆ ಸವಾಲೊಡ್ಡಲು ಬಯಸುವ ಯಾರನ್ನಾದರೂ ನೀವು ಬೆಂಬಲಿಸುತ್ತೀರಾ ಎಂದು ಅವರು ರಾಜ್ಯದ ಜನರನ್ನು ಕೇಳಿದರು. “ನಿನ್ನೆ, ಇಂಡಿ ಅಲೈಯನ್ಸ್ ಮುಂಬೈನಲ್ಲಿ ರ್ಯಾಲಿಯನ್ನು ಆಯೋಜಿಸಿತ್ತು. ತಮ್ಮ ಹೋರಾಟ ‘ಶಕ್ತಿ’ಯ ವಿರುದ್ಧ ಎಂದು ಅವರು ಘೋಷಿಸಿದರು. “ನನಗೆ, ಪ್ರತಿ ಮಗಳು, ತಾಯಿ ಮತ್ತು ಸಹೋದರಿ ‘ಶಕ್ತಿ’ಯ ಪ್ರತಿರೂಪವಾಗಿದ್ದಾರೆ” ಎಂದು ಪ್ರಧಾನಿ ಹೇಳಿದರು. ಶಕ್ತಿಯ ಸಾಕಾರರೂಪವಾಗಿರುವ ಈ ತಾಯಂದಿರು ಮತ್ತು ಸಹೋದರಿಯರನ್ನು ರಕ್ಷಿಸಲು “ತಮ್ಮ ಪ್ರಾಣವನ್ನು ಪಣಕ್ಕಿಡುತ್ತೇನೆ” ಎಂದು ಅವರು ಹೇಳಿದರು. https://kannadanewsnow.com/kannada/breaking-sensex-down-152-points-nifty-down-22000-points-in-early-trade/ https://kannadanewsnow.com/kannada/congress-partys-contribution-in-womens-empowerment-is-immense-minister-laxmi-hebbalkar/
ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಶ್ರೇಯೋಭಿವೃದ್ಧಿಗಾಗಿ ಸ್ವಾತಂತ್ರ್ಯದ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ತನ್ನದೇ ಕೊಡುಗೆಯನ್ನು ನೀಡುತ್ತಾ ಬಂದಿದೆ. ದೇಶದ ಮಹಿಳೆಯರಿಗೆ ಶಕ್ತಿ ತುಂಬಿರುವ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯ ಯರಗಟ್ಟಿಯ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಸಚಿವರು, ನಂಬಿಕೆಗೆ ಮತ್ತೊಂದು ಹೆಸರೇ ಕಾಂಗ್ರೆಸ್. ಚುನಾವಣಾ ಪೂರ್ವ ಜನರಿಗೆ ನೀಡಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ 100 ದಿನಗಳಲ್ಲಿ ಪೂರೈಸಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಶ್ರಮದ ಫಲವಾಗಿ ಇಂದು ಗ್ಯಾರಂಟಿ ಯೋಜನೆಗಳು ಜಾರಿಗೊಂಡಿವೆ. ರಾಜ್ಯಾದ್ಯಂತ 1.20 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಲಾಭ ಸಿಕ್ಕಿದೆ ಎಂದು ಹೇಳಿದರು. ಈ ಮೊದಲು ಸರ್ಕಾರದ ಅನುದಾನ ಪಡೆಯಲು ಜನರು ಮುಜುಗರ ಪಡುತ್ತಿದ್ದರು.…
ಬೆಂಗಳೂರು : ಚಾರ್ಮಾಡಿ ಘಾಟ್‌ನಲ್ಲಿ ಬೃಹತ್ ಪ್ರಮಾಣದ ಪ್ಲಾಸ್ಟಿಕ್ ಸಂಗ್ರಹ ಅಭಿಯಾನವನ್ನು ನಡೆಸಲು ಬಿಸ್ಲೇರಿ ಇಂಟರ್‌ನ್ಯಾಶನಲ್ ಸಂಸ್ಥೆಯು ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಿದೆ. ಮಾರ್ಚ್ 8, 2024 ರಂದು ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆಯ ನಂತರ ಬಿಸ್ಲೆರಿ ಇಂಟರ್ನ್ಯಾಷನಲ್ ತಂಡವು ಮಾರ್ಚ್ 14, 2024 ರಂದು ತನ್ನ “ಬಾಟಲ್ಸ್ ಫಾರ್ ಚೇಂಜ್” ಉಪಕ್ರಮದ ಅಡಿಯಲ್ಲಿ ಸಂಗ್ರಹವನ್ನು ಪ್ರಾರಂಭಿಸಿದೆ. ಇದರಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದಾರೆ. ಭಕ್ತರು ಸೇವಿಸಿದ 1,958 ಕೆಜಿ ಪ್ಲಾಸ್ಟಿಕ್ ಅನ್ನು ತಂಡವು ಸಂಗ್ರಹಿಸಿ ಮರುಬಳಕೆಗಾಗಿ ತಲುಪಿಸಿದೆ. ಈ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಜನರು ದೇವಾಲಯಕ್ಕೆ ಭೇಟಿ ನೀಡಿದ್ದರು. ಕರ್ನಾಟಕ ಅರಣ್ಯ ಇಲಾಖೆಯ ರೇಂಜ್ ಫಾರೆಸ್ಟ್ ಆಫೀಸರ್ ಶ್ರೀ ಮೋಹನ್ ಕುಮಾರ್ ಹೇಳುವಂತೆ, “ಈ ಪಾಲುದಾರಿಕೆಯು ಪರಿಸರ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಮಹತ್ವದ ಕ್ರಮವಾಗಿದೆ. ‘ಬಾಟಲ್ಸ್ ಫಾರ್ ಚೇಂಜ್’ ಉಪಕ್ರಮದ ಅಡಿಯಲ್ಲಿ ಮರುಬಳಕೆಯ ಪ್ರಯತ್ನಗಳಲ್ಲಿ ಬಿಸ್ಲೆರಿ ಇಂಟರ್‌ನ್ಯಾಶನಲ್‌ನ ಸಹಕಾರ ಮತ್ತು ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ನಾವು ಶ್ಲಾಘಿಸುತ್ತೇವೆ. ಕರ್ನಾಟಕದ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ನಿನ್ನೆ ಆಂಧ್ರಪ್ರದೇಶದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಬಳಸುವ ಮೂಲಕ ಪ್ರಧಾನಿ ಮೋದಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಹೇಳಿದ್ದಾರೆ. “ಚುನಾವಣಾ ಆಯೋಗದ ನಿಯಮಗಳು ಪ್ರಚಾರಕ್ಕಾಗಿ ಸರ್ಕಾರಿ ಯಂತ್ರೋಪಕರಣಗಳನ್ನು ಬಳಸುವುದನ್ನು ನಿಷೇಧಿಸುತ್ತವೆ. ಈ ಕಾರಣಕ್ಕಾಗಿಯೇ 1975ರಲ್ಲಿ ಇಂದಿರಾ ಗಾಂಧಿ ಅವರನ್ನು ಅನರ್ಹಗೊಳಿಸಲಾಯಿತು. ನೀತಿ ಸಂಹಿತೆ ಉಲ್ಲಂಘನೆಯನ್ನು ಕಟ್ಟುನಿಟ್ಟಾಗಿ ಎದುರಿಸಲಾಗುವುದು ಎಂದು ಚುನಾವಣಾ ಆಯೋಗವು ಚುನಾವಣೆಗಳನ್ನು ಘೋಷಿಸುವಾಗ ಹೇಳಿತ್ತು ಎಂದು ಅವರು ಹೇಳಿದರು. “ಐಎಎಫ್ ಹೆಲಿಕಾಪ್ಟರ್ ಅನ್ನು ಬಾಡಿಗೆಗೆ ನೀಡಲು ಬಿಜೆಪಿ ಹಣ ಪಾವತಿಸಿದ್ದರೆ, ಐಎಎಫ್ ಹೆಲಿಕಾಪ್ಟರ್ ಏಕೆ ಅವಶ್ಯಕ ಎಂಬುದಕ್ಕೆ ಕಾರಣಗಳೊಂದಿಗೆ ಚುನಾವಣಾ ಆಯೋಗವು ನಮಗೆಲ್ಲರಿಗೂ ತಿಳಿಸಬೇಕು (ಮುಖ್ಯಮಂತ್ರಿಗಳು ಮತ್ತು ಇತರ ಝಡ್ + ರಕ್ಷಕರು ಎಲ್ಲಾ ಅಗತ್ಯ ಭದ್ರತಾ ವೈಶಿಷ್ಟ್ಯಗಳನ್ನು ಹೊಂದಿರುವ ಸಾಮಾನ್ಯ ವಿವಿಐಪಿ ಹೆಲಿಕಾಪ್ಟರ್ಗಳನ್ನು…