Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದಂತ ಸಾರಿಗೆ ನೌಕರರಿಗೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಇದೀಗ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ.ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರು ಅಂತರ ನಿಗಮ ಸಾಮಾನ್ಯ ವರ್ಗಾವಣೆಗೆ ಕೋರಿಕೆ ಮೇರೆಗೆ 1,252 ನೌಕರರು ಅಂತರ ನಿಗಮ ವರ್ಗಾವಣೆಗೊಂಡಿರುತ್ತಾರೆ. ಸದರಿ ಅಂತರ ನಿಗಮ ವರ್ಗಾವಣೆ ಆದೇಶವನ್ನು ksrtc.karnataka.gov.in ವೆಬ್‌ಸೈಟ್‌ನಲ್ಲಿ ದಿನಾಂಕ:30.12.2024 ರಂದು ಪ್ರಕಟಿಸಲಾಗಿದೆ ಎಂದಿದ್ದಾರೆ. ಸದರಿ ವರ್ಗಾವಣೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೈಗೊಳ್ಳಲಾಗಿದ್ದು, ವರ್ಗಾವಣೆಯಾಗಿರುವ ನಿಗಮ/ಸಂಸ್ಥೆಗಳಲ್ಲಿನ ಸೇವಾ ಜೇಷ್ಠತೆ ಹಾಗೂ ಖಾಲಿ ಹುದ್ದೆಗಳಿಗನುಗುಣವಾಗಿ ಕೌನ್ಸಲಿಂಗ್ ಮೂಲಕ ವಿಭಾಗಗಳಿಗೆ ಹಂಚಿಕೆ ಮಾಡಲಾಗುವುದು. ಕೌನ್ಸಲಿಂಗ್ ದಿನಾಂಕ: 15.01.2025 ರಿಂದ 25.01.2025 ರವರೆಗೆ ವೆಬ್‌ಸೈಟ್ www.ksrtc.org/transfer ನಲ್ಲಿ ನಡೆಸಲಾಗುವುದು. ಒಮ್ಮೆ ಆದ್ಯತೆ ಸಲ್ಲಿಸಿದ ನಂತರ ಯಾವುದೇ…
ಬೆಳಗಾವಿ: ಆ ಗ್ರಾಮಸ್ಥರಿಗಿದ್ದಂತ ಕಂದಾಯ ಭೂಮಿಯನ್ನು 11ಎ ನಕ್ಷೆ ಮಂಜೂರಾತಿಯ ನಿಯಮವನ್ನು ಉಲ್ಲಂಘಿಸಿ, ಸರಿಯಾಗಿ ಮಂಜೂರಾತಿ ಪರಿಶೀಲಿಸದೇ ನಿರ್ಲಕ್ಷ್ಯವನ್ನು ಕಂದಾಯ ಇಲಾಖೆಯ ಅಧಿಕಾರಿಗಳು ತೋರಿದ್ದರು. ಈ ಹಿನ್ನಲೆಯಲ್ಲಿ ಕಂದಾಯ ಇಲಾಖೆಯ ಆಯುಕ್ತರು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಸಂಬಂಧ ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ಜೆ.ಮಂಜುನಾಥ್ ಆದೇಶಿಸಿದ್ದಾರೆ. ಬೆಳಗಾವಿಯ ಹುನಗುಂದ ಗ್ರಾಮದ ಸರ್ವೆ ನಂ.3ರಲ್ಲಿ 508 ಎಕರೆ 20 ಗುಂಜೆ ಜಮೀನಿಗೆ 11ಎ ನಕ್ಷೆ ಮಾಡಿಕೊಡಲು ನಿರ್ಲಕ್ಷ್ಯವನ್ನು ವಹಿಸಿದ್ದ ಬಗ್ಗೆ ದೂರು ನೀಡಲಾಗಿತ್ತು. ಹುನಗುಂದ ಗ್ರಾಮಸ್ಥರು ಕಂದಾಯ ಇಲಾಖೆಯ ಆಯುಕ್ತರಿಗೆ ದೂರು ನೀಡಿದ್ದರು. 11ಎ ನಕ್ಷೆ ಮಂಜೂರಾತಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ತೋರಿದಂತ ನಿರ್ಲಕ್ಷ್ಯದಿಂದ ಭೂಮಿಯನ್ನು ಕಳೆದುಕೊಳ್ಳುವ ಹಂತಕ್ಕೆ ಹುನಗುಂದ ಗ್ರಾಮಸ್ಥರು ಬಂದು ನಿಂತಿದ್ದರು. ಹೀಗಾಗಿ ನಕಲಿ ದಾಖಲೆ ಸೃಷ್ಠಿಸಿ ನೀಡಿದ್ದರೂ ಕಂದಾಯ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ. ಸೂಕ್ತ ರೀತಿಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಮನವಿಯನ್ನು ಕಂದಾಯ ಇಲಾಖೆ ಆಯುಕ್ತರಿಗೆ ಮಾಡಿದ್ದರು.…
ಬೆಂಗಳೂರು : 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರುಗಳ ಜೊತೆ ನಡೆದ ಸಭೆಯಲ್ಲಿ ಮೇಲಿನಂತೆ ಪ್ರಶ್ನಿಸಿದರು. ಮೈಸೂರಿನ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ, ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಅಲ್ರೀ ಎಲ್ಲಾ ಪಕ್ಷದ ಶಾಸಕರು ನೀವುಗಳೇ ಸುಮಾರು 20 ವರ್ಷಗಳಿಂದ ಮುಡಾ ಸದಸ್ಯರಿದ್ದೀರಿ. ನೀವುಗಳು ಸದಸ್ಯರಾಗಿದ್ದೂ ಯಾಕಿಂಗಾಯ್ತು? ಯಾಕೆ ಅವ್ಯವಸ್ಥೆ ಆಗಲು ಬಿಟ್ಟಿದ್ದೀರಿ ಎಂದು ಮುಖ್ಯಮಂತ್ರಿಗಳು ಕೇಳಿದರು. ಹೊಸ ಬಡಾವಣೆ ಮಾಡುವಾಗ ವಿದ್ಯುತ್ ಸಂಪರ್ಕ, ರಸ್ತೆ, ಒಳಚರಂಡಿ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿ. ಬಳಿಕ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಇಂತಹ ಸುಮಾರು…
ಬೆಂಗಳೂರು: ನಟ ದರ್ಶನ್ ನ್ಯಾಯಾಂಗ ವ್ಯಾಪ್ತಿಯನ್ನು ಬಿಟ್ಟು ಬೇರೆಡೆಗೆ ತೆರಳದಂತೆ ಷರತ್ತು ವಿಧಿಸಿ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ನೀಡಿತ್ತು. ಇಂದು ನಟ ದರ್ಶನ್ ಗೆ ಕೊಂಚ ರಿಲೀಫ್ ಎನ್ನುವಂತೆ ಐದು ದಿನಗಳ ಕಾಲ ಮೈಸೂರಿಗೆ ತೆರಳೋದಕ್ಕೆ ಕೋರ್ಟ್ ಅನುಮತಿ ನೀಡಿದೆ. ಇಂದು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯದಲ್ಲಿ ಮೈಸೂರಿಗೆ ತೆರಳೋದಕ್ಕೆ ಅವಕಾಶ ನೀಡುವಂತೆ ನಟ ದರ್ಶನ್ ಅವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಮೈಸೂರಿನ ದೇವಸ್ಥಾನಗಳಿಗೆ ತೆರಳು ಕೋರ್ಟ್ ನಟ ದರ್ಶನ್ ಅವರಿಗೆ ಅನುಮತಿ ನೀಡಿದೆ. ಜನವರಿ.12ರಿಂದ 5 ದಿನಗಳ ಕಾಲ ಮೈಸೂರಿಗೆ ತೆರಳಲು ಕೋರ್ಟ್ ಅನುಮತಿ ನೀಡಿದೆ. ಇನ್ನೂ ಆರೋಪಿ ಪವಿತ್ರಾ ಗೌಡ ಅವರ ರಾಜರಾಜೇಶ್ವರಿ ನಗರದಲ್ಲಿರುವಂತ ರೆಡ್ ಕಾರ್ಪೆಂಟ್ ಶೋರೂಂಗೆ ಮುಂಬೈ, ದೆಹಲಿಗೆ ವ್ಯವಹಾರಿಕ ಉದ್ದೇಶಕ್ಕೆ ತೆರಳಿ ವಸ್ತುಗಳನ್ನು ಖರೀದಿಸಿ ತರಲು ಕೋರ್ಟ್ ಅನುಮತಿ ನೀಡಿದೆ. ರೆಡ್ ಕಾರ್ಪೆಟ್ ಶೋರೂಂಗೆ ಐಟಂ ತರಲು ಅವಕಾಶವನ್ನು ನೀಡಿದೆ. https://kannadanewsnow.com/kannada/rate-fixed-for-everything-in-the-state-union-minister-hdk/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ . ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, 60% ಕಮೀಷನ್ ಆರೋಪವನ್ನು ಪುನರುಚ್ಚರಿಸಿದರು. 60% ಕಮೀಷನ್ ಆರೋಪಕ್ಕೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು, ಗುತ್ತಿಗೆದಾರರೇ ಪರ್ಸಂಟೇಜ್ ಆರೋಪ ಮಾಡುತ್ತಿದ್ದಾರೆ. ಅವರನ್ನು ಪರ್ಸಂಟೇಜ್ ಕೇಳದಿದ್ದರೆ ಅವರು ಯಾಕೆ ಆರೋಪ ಮಾಡುತ್ತಿದ್ದರು. ಸರ್ಕಾರ ಅವರನ್ನೇ ಕೇಳಿ ದಾಖಲೆ ಪಡೆದುಕೊಳ್ಳಬೇಕು ಎಂದರು ಕೇಂದ್ರ ಸಚಿವರು. ಸಿದ್ದರಾಮಯ್ಯ ಅವರು ಮಹಾನ್ ನಾಯಕರು. ಪೇ ಸಿಎಂ ಅಂತ ಪೋಸ್ಟರ್ ಅಂಟಿಸಲು ಹೋಗಿದ್ದರು. ಅವರು ಇಲ್ಲಿಯವರೆಗೆ ಯಾವ ದಾಖಲೆ ಇಟ್ಟಿದ್ದಾರೆ ಜನರ ಮುಂದೆ. ಕೆಂಪಣ್ಣ ಹೇಳಿದರು ಕೆಂಪಣ್ಣ ಹೇಳಿದರು ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಕೆಂಪಣ್ಣ ಅವರಿಂದ ಸಿದ್ದರಾಮಯ್ಯ ಅವರು ದಾಖಲೆ ಪಡೆದುಕೊಳ್ಳಬೇಕಿತ್ತಲ್ಲವೇ? ಈಗ ಕಂಟ್ರಾಕ್ಟರ್…
ಬೆಳಗಾವಿ: ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್ ನಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ವಿನಯ್ ಗುರೂಜಿ ಅವರು ಗುರುಗಳ ದಯೆಯಿಂದ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವಂತ ಯೋಗವಿದೆ. ಗುರುಗಳ ದಯೆ, ಬಲದಿಂದ ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ. ಮತ್ತೊಂದೆಡೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮಿಳುನಾಡಿನಲ್ಲಿ ಟೆಂಪಲ್ ರನ್ ನಡೆಸುತ್ತಿದ್ದಾರೆ. ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಕೂಡ ಟೆಂಪಲ್ ರನ್ ಮುಂದುವರೆಸಿದ್ದಾರೆ. https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/ https://kannadanewsnow.com/kannada/i-performed-homa-for-my-protection-peace-of-mind-deputy-cm-dk-shivakumar-shivakumar/
ಬೆಂಗಳೂರು : “ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ” ಎಂದು ಹೇಳಿದರು. ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಗುರುವಾರ ತಮಿಳುನಾಡಿನ ದೇವಸ್ಥಾನಗಳಲ್ಲಿ ಹೋಮ ಮಾಡಿಸಿರುವ ಬಗ್ಗೆ ಕೇಳಿದಾಗ, “ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ. ನಾನು ಯಾವ ಶಕ್ತಿಯನ್ನು ನಂಬುತ್ತೇನೆಯೊ ಅದರ ಮೇಲೆ ಭಕ್ತಿ, ಪ್ರೀತಿ ಇದ್ದೇ ಇರುತ್ತದೆ” ಎಂದು ಹೇಳಿದರು. ಶತ್ರುಗಳ ನಾಶಕ್ಕೆ ಶಿವಕುಮಾರ್ ಹೋಮ ಮಾಡಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಪ್ರತಿ ದಿನವೂ ನನಗೆ ಒಳ್ಳೆಯದಾಗಲಿ ಎಂದು ಪೂಜೆ ಮಾಡುತ್ತಿರುತ್ತೇನೆ. ನನಗೆ ಯಾರ್ಯಾರು ತೊಂದರೆ ಕೊಡುತ್ತಾರೆಯೋ…
ಬೀದರ್: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಂತ ಗುತ್ತಿಗೆದಾರ ಸಚಿನ್ ಕೇಸನ್ನು ಸಿಐಡಿ ಅಧಿಕಾರಿಗಳ ತಂಡದಿಂದ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಇಂದು ನೋಟಿಸ್ ನೀಡಿದ್ದರ ಹಿನ್ನಲೆಯಲ್ಲಿ ಐವರು ಆರೋಪಿಗಳು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಗುತ್ತಿಗೆದಾರ ಸಚಿನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನವೇ ಡೆತ್ ನೋಟ್ ಬರೆದಿಟ್ಟಿದ್ದರು. ಆ ಡೆತ್ ನೋಟ್ ನಲ್ಲಿ ಎಂಟು ಮಂದಿಯ ಹೆಸರನ್ನು ಉಲ್ಲೇಖಿಸಲಾಗಿತ್ತು. ಈ ಹಿನ್ನಲೆಯಲ್ಲಿ ಜನವರಿ 6ರಂದು ತನಿಖಾ ತಂಡವಾದಂತ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಐವರು ಆರೋಪಿಗಳಿಗೆ ನೋಟಿಸ್ ನೀಡಿದ್ದರು. ಸಿಐಡಿ ನೋಟಿಸ್ ಹಿನ್ನಲೆಯಲ್ಲಿ ಇಂದು ಬೀದರ್ ನಲ್ಲಿ ಸಿಐಡಿ ಅಧಿಕಾರಿಗಳ ಕಚೇರಿಗೆ ಹಾಜರಾಗಿ, ವಿಚಾರಣೆಯನ್ನು ಎದುರಿಸಿದರು. ಆ ಮೂಲಕ ಗೋರಕನಾಥ ಸಜ್ಜನ್, ನಂದಕುಮಾರ್ ನಾಗಬುಜಂಗಿ, ರಾಜು ಕಪನೂರು, ರಾಮನಗೌಡ ಪಾಟೀಲ್ ಹಾಗೂ ಸತೀಶ್ ಎಂಬುವರು ವಿಚಾರಣೆ ಎದುರಿಸಿದರು. https://kannadanewsnow.com/kannada/los-angeles-wildfire-at-least-10-dead-1-80-lakh-evacuated/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/
ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನ ಅನೇಕ ಸ್ಥಳಗಳಲ್ಲಿ ಭೀಕರ ಕಾಡ್ಗಿಚ್ಚು ಭುಗಿಲೆದ್ದಿದ್ದು, ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಇನ್ನೂ 180,000 ಜನರನ್ನು ತಮ್ಮ ಮನೆಗಳನ್ನು ಖಾಲಿ ಮಾಡಲು ಆದೇಶಿಸಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಎಪಿ ವರದಿ ತಿಳಿಸಿದೆ. ಹಾಲಿವುಡ್ ಸೆಲೆಬ್ರಿಟಿಗಳು ಮತ್ತು ಕ್ರೀಡಾ ವ್ಯಕ್ತಿಗಳನ್ನು ಹೊಂದಿರುವ ಹೊಗೆ ತುಂಬಿದ ಕಣಿವೆಗಳು ಮತ್ತು ಸುಂದರ ಕಣಿವೆಗಳು ಬೆಂಕಿಯ ಕೆನ್ನಾಲೆಯ ಜ್ವಾಲೆಗಳಲ್ಲಿ ಸುಟ್ಟು ಕರಕಲಾಗಿ ಹೋಗಿದ್ದಾವೆ. ಎಪಿ ವರದಿಯ ಪ್ರಕಾರ, ಜನವರಿ 7 ರಂದು, ಪ್ರಬಲ ಸಾಂಟಾ ಅನಾ ಗಾಳಿಯಿಂದಾಗಿ ಅನೇಕ ಎತ್ತರದ ಬೆಂಕಿಗಳು ವೇಗವಾಗಿ ಹರಡಿದವು. ಕೆಲವು ಸ್ಥಳಗಳಲ್ಲಿ 112 ಕಿ.ಮೀ ವರೆಗೂ ವ್ಯಾಪಿಸಿದವು. ಜನವರಿ 9 ರ ಹೊತ್ತಿಗೆ, ಮಾರುತಗಳು ಇಳಿದಿವೆ. ಆದರೆ ಈ ಮಾರುತಗಳು ಇನ್ನೂ ವೇಗವಾಗಿ ಬೆಂಕಿಯನ್ನು ಹರಡಬಹುದು ಎಂದು ರಾಷ್ಟ್ರೀಯ ಹವಾಮಾನ ಸೇವೆ ಎಚ್ಚರಿಸಿದೆ. ಜನವರಿ 14 ರಂದು (ಮಂಗಳವಾರ) ಮತ್ತೊಂದು ಸುತ್ತಿನ ಬಲವಾದ ಗಾಳಿ ರೂಪುಗೊಳ್ಳಬಹುದು ಎಂದು ಹೇಳಿದರು. ಸದ್ಯಕ್ಕೆ 10 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ.…
ಹುಬ್ಬಳ್ಳಿ: ಮಾರಕಾಸ್ತ್ರಗಳಿಂದಲೇ ತಂದೆ ತಾಯಿಯನ್ನು ಕೊಚ್ಚಿ ಕೊಲೆಗೈದ ಶಾಕಿಂಗ್ ಘಟನೆ ಹುಬ್ಬಳ್ಳಿಯ ಕುಸಗಲ್ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿಯ ಕುಸಗಲ್ ಗ್ರಾಮದಲ್ಲಿ ತಂದೆ ಅಶೋಕ್, ತಾಯಿ ಶಾರದಮ್ಮ ಎಂಬುವರನ್ನು ಅವರ ಪುತ್ರಿ ಗಂಗಾಧರಪ್ಪ ಎಂಬಾತ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/beer-lovers-shocked-by-state-government-will-the-price-hike-be-fixed-from-january-20/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/













